ಲೇಖಕ: admin

ಮಡಿಕೇರಿ ಫೆ.11 NEWS DESK : ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ಹಾಗೂ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಹೆಗ್ಗಳ ಶಾಲಾ ಮೈದಾನದಲ್ಲಿ ಪ್ರೋ ಮ್ಯಾಟ್ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯನ್ನು ಏ.12 ಮತ್ತು 13 ರಂದು ಆಯೋಜಿಸಲಾಗಿದೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ. ವಿರಾಜಪೇಟೆ ತಾಲೂಕು ಬೇಟೋಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಾಮನಗರ ಫ್ರೆಂಡ್ಸ್ ಪ್ರಮುಖರಾದ ಧನುಷ್, ಹೆಗ್ಗಳ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪಂದ್ಯಾವಳಿ ಲೀಗ್ ಮಾದರಿಯಲ್ಲಿ ನಡೆಯಲಿದೆ. ಪಂದ್ಯಾವಳಿಯನ್ನು ಆಯೋಜಿಸಲು ಪ್ರಾಯೋಜಕತ್ವವನ್ನು ಆಹ್ವಾನಿಸಲಾಗಿದೆ ಎಂದರು. ರಾಮನಗರದ ಪ್ರೋ ಮ್ಯಾಟ್ ಕಬಡ್ಡಿ ಪ್ರೀಮಿಯರ್ ಲೀಗ್‌ನ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಪ್ರಭಾಕರ್ (ಪ್ರಭು), ಪ್ರಂದ್ಯಾವಳಿಗೆ ತಂಡಗಳನ್ನು ಆಹ್ವಾನಿಸಲಾಗುತ್ತಿದ್ದು. ಕ್ರೀಡಾಪಟುಗಳು ವಿರಾಜಪೇಟೆ ತಾಲೂಕಿಗೆ ಸೀಮಿತವಾಗಿರಬೇಕು. ಕ್ರೀಡಾ ಪಟುಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಂಸ್ಥೆಯು ನಿಗದಿಗೊಳಿಸಿರುವ ಹಣವನ್ನು ಮುಂಗಡವಾಗಿ ನೀಡಬೇಕು. ತಂಡದ ನೋಂದಾಣಿಗಾಗಿ ಮಾ.20 ಅಂತಿಮ ದಿನವಾಗಿದೆ. ಕ್ರೀಡಾ ಪಟುಗಳನ್ನು ಬಿಡ್ ಮೂಲಕ ತಂಡಕ್ಕೆ ಆಯ್ಕೆಗೊಳಿಸಲಾಗುತ್ತದೆ. ಬಿಡ್ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು. ವಿಜೇತ…

Read More

https://youtu.be/YlhGGSLLxys?si=1BzDNXAg79HerszU ಮಡಿಕೇರಿ ಫೆ.11 NEWS DESK : ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಫೆ.7 ರಂದು ಮಡಿಕೇರಿಯಲ್ಲಿ ಬೃಹತ್ ಜಾಥಾವನ್ನು ಶಾಂತಿಯುತವಾಗಿ ನಡೆಸಿರುವುದಕ್ಕೆ ಕೊಡಗು ಗೌಡ ಸಮಾಜಗಳ ಒಕ್ಕೂಟದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇವೆ. ಆದರೆ ಜಾಥಾ ನಡೆದ ನಂತರ ಜಿಲ್ಲಾಡಳಿತಕ್ಕೆ ನೀಡಿದ ಮನವಿ ಪತ್ರದಲ್ಲಿ ಉಲ್ಲೇಖಿಸಿರುವ 9 ಅಂಶಗಳನ್ನು ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜ.20 ರಂದು ಅರೆಭಾಷೆ ಗೌಡ ಸಮುದಾಯದವರು ಶಾಂತಿಯುತ ಜಾಥಾ ನಡೆಸಿ ಸಾಮಾಜಿಕ ಜಾಲತಾಣಗಳಲ್ಲಿ ಜಾತಿ ನಿಂದನೆ ಮಾಡಿರುವ ಸಿಎನ್‍ಸಿ ಅಧ್ಯಕ್ಷರು ಹಾಗೂ ಕೆಲವು ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಆ ಸಂದರ್ಭ ನಾವು ನೀಡಿದ ಮನವಿ ಪತ್ರದಲ್ಲಿದ್ದ ವಿಚಾರಗಳು ಎಲ್ಲೆ ಮೀರಿರಲಿಲ್ಲ. ಆದರೆ ಅಖಿಲ ಕೊಡವ ಸಮಾಜ ನೀಡಿದ ಮನವಿಯಲ್ಲಿ ನೇರವಾಗಿ ಅರೆಭಾಷೆ ಗೌಡರನ್ನು ಉಲ್ಲೇಖಿಸಲಾಗಿದೆ ಮತ್ತು ಇಲ್ಲಸಲ್ಲದ ಆರೋಪ ಮಾಡಲಾಗಿದೆ. ಕೊಡವರ ಸಂಸ್ಕೃತಿ, ಆಚಾರ ವಿಚಾರದ ಉಳಿವಿಗಾಗಿ ಪ್ರಸ್ತಾಪಿಸುವ…

Read More

ಸುಂಟಿಕೊಪ್ಪ ಫೆ.11 NEWS DESK : ಅಪ್ರಾಪ್ತ ಮಕ್ಕಳು ಬೇಡಿಕೆ ಇಡುತ್ತಾರೆಂದು ಪೋಷಕರು ವಾಹನಗಳನ್ನು ತೆಗೆದುಕೊಡುವುದು ಮತ್ತು ಚಾಲನೆಗೆ ನೀಡುವುದು, ದ್ವಿಚಕ್ರ ವಾಹನಗಳಲ್ಲಿ ಇಬ್ಬರಿಗಿಂತ ಅಧಿಕ ಮಂದಿ ಸವಾರಿ ಮಾಡುವುದು, ವಾಹನ ಚಾಲನಾ ಪರವನಾಗಿಯನ್ನು ಹೊಂದದೆ ವಾಹನ ಚಾಲನೆ ಮಾಡುವುದು ಕಾನೂನು ರೀತಿಯಲ್ಲಿ ಅಪರಾಧ ಎಂದು ಸುಂಟಿಕೊಪ್ಪ ಪೊಲೀಸ್ ಠಾಣೆಯ ಮುಖ್ಯ ಪೇದೆ ಆಶಾ ಹೇಳಿದರು. ಸುಂಟಿಕೊಪ್ಪ ಗುಂಡುಗುಟ್ಟಿ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ವಾಹನ ಚಾಲಕರಿಗೆ ಪೊಲೀಸ್ ಇಲಾಖೆ ವತಿಯಿಂದ ನಡೆದ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಾಹನಗಳನ್ನು ಚಲಾಯಿಸುವಾಗ ದ್ವಿಚಕ್ರ ಸವಾರರು ರಸ್ತೆ ಸುರಕ್ಷತೆಯ ಬಗ್ಗೆ ಮಾಹಿತಿ ಹೊಂದಿರಬೇಕು. ಅದೇ ರೀತಿಯಲ್ಲಿ ವಾಹನ ಚಾಲನಾ ಪರವನಾಗಿ ಹಾಗೂ ಜೀವವಮೆಯನ್ನು ಪಾವತಿಸಿರಬೇಕು, ವಾಹನಕ್ಕೆ ಸಂಬಂಧಿಸಿದ ದಾಖಲಾತಿ ಪತ್ರಗಳನ್ನು ವಾಹನದಲ್ಲಿರಿಸಿಕೊಳ್ಳಬೇಕು. ವಾಹನದ ಮಿತಿಗಿಂತ ಅಧಿಕ ಮಂದಿಯನ್ನು ಕುಳ್ಳಿರಿಸಿಕೊಂಡು ಚಾಲನೆ ಮಾಡುವುದು ಅಪರಾಧ. ಅನಾಹುತಗಳು…

Read More

ನಾಪೋಕ್ಲು ಫೆ.11 NEWS DESK : ಇಂದಿನ ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅತೀ ಅಗತ್ಯ. ಫಲಿತಾಂಶ ಉತ್ತಮ ಪಡಿಸಲು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕಾರ್ಯವೈಖರಿಯನ್ನು ಕೊಡಗು ಜಿಲ್ಲೆಗೆ ವಿಸ್ತರಿಸಿರುವುದು ಶ್ಲಾಘನೀಯ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹೇಳಿದರು. ಹೊದವಾಡ ರಫೆಲ್ಸ್ ಶಿಕ್ಷಣ ಸಂಸ್ಥೆ ಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ( ಮೀಫ್ ) ವತಿಯಿಂದ ಆಯೋಜಿಸಲಾಗಿದ್ದ ನೂತನ ಕೊಡಗು ಘಟಕದ ಉದ್ಘಾಟನೆ ಮತ್ತು ಎಸ್ ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ವಿಶೇಷ ಪಾಸಿಂಗ್ ಪ್ಯಾಕೇಜ್ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಾಗಾರವನ್ನು ಉದ್ಘಾಟಿಸಿದ ಕೊಡಗು ಜಿಲ್ಲೆ ಡಿ.ಡಿ.ಪಿ.ಐ ರಂಗಾಧಾಮಪ್ಪ ಮೀಫ್ ನೀಡುವ ತರಬೇತಿಗಳು ಕೊಡಗು ಜಿಲ್ಲೆಯ ಫಲಿತಾಂಶಕ್ಕೆ ಸಹಕಾರಿ ಎಂದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಗಳ ಗೂನಡ್ಕದ ಟಿ.ಎಂ.ಶಾಹಿದ್ ತೆಕ್ಕಿಲ್, ಭಾಗವಹಿಸಿ ಮಾತನಾಡಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ…

Read More

ನಾಪೋಕ್ಲು ಫೆ.11 NEWS DESK : ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ(ಪಕ್ಷ) ಜಯಗಳಿಸಿದ ಹಿನ್ನೆಲೆಯಲ್ಲಿ ನಾಪೋಕ್ಲುವಿನ ಬಿಜೆಪಿ ಶಕ್ತಿ ಕೇಂದ್ರದಿಂದ ವಿಜಯೋತ್ಸವ ಆಚರಿಸಲಾಯಿತು. ಪಟ್ಟಣದ ಬಸ್ ನಿಲ್ದಾಣದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಕಾರ್ಯಕರ್ತರು ಪಕ್ಷದ ಬಾವುಟವನ್ನು ಹಿಡಿದು ಜೈಕಾರ ಕೂಗಿದರು. ನಂತರ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಶಿವಚಳಿಯಂಡ ಅಂಬಿ ಕಾರ್ಯಪ್ಪ ನೇತೃತ್ವದಲ್ಲಿ ಜರುಗಿದ ವಿಜಯೋತ್ಸವದಲ್ಲಿ ಅಂಬಿ ಕಾರ್ಯಪ್ಪ ಹಾಗೂ ಹಿಂದುಳಿದ ವರ್ಗ ಮೋರ್ಚಾದ ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷ ಬಿ.ಎಂ.ಪ್ರತೀಪ ಮಾತನಾಡಿ, ದೆಹಲಿಯಲ್ಲಿ 70 ಸ್ಥಾನಗಳ ಪೈಕಿ 47 ಸ್ಥಾನಗಳನ್ನು ಗಳಿಸಿ 27 ವರ್ಷಗಳ ಬಳಿಕ ಅಧಿಕಾರ ದೊರೆತಿದೆ. ಈ ಗೆಲುವಿಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿ. ಈ ಸಂದರ್ಭ ಬಿಜೆಪಿ ಪಕ್ಷದ ಪ್ರಮುಖರಾದ ಕೇಟೋಳಿರ ಹರೀಶ್ ಪೂವಯ್ಯ, ಶಿವಚಳಿಯಂಡ ಜಗದೀಶ್, ಎಂ.ಎಂ.ನರೇಂದ್ರ, ಅಪ್ಪಚ್ಚಿರ ರಮ್ಮಿ ನಾಣಯ್ಯ, ಅರೆಯಡ ರತ್ನ ಪೆಮ್ಮಯ್ಯ, ಟಿ.ಎ.ಮಿಟ್ಟು, ನಾಯಕಂಡ…

Read More

ಮಡಿಕೇರಿ ಫೆ.11 NEWS DESK : 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 6ನೇ ತರಗತಿಗೆ ಉಚಿತ (ಸಿಬಿಎಸ್‍ಇ) (ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ, ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75 ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ಶೇ.25 ಸೀಟುಗಳು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, https://sevasindhuservices.karnataka.gov.in  ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಅರ್ಜಿ ಸಲ್ಲಿಸಲು ಮಾ.10 ಕೊನೆಯ ದಿನವಾಗಿದೆ. ವಸತಿ ಶಾಲೆಯಲ್ಲಿ ದೊರೆಯುವ ಪ್ರತಿ ವಿದ್ಯಾರ್ಥಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಉಚಿತ ಶಿಕ್ಷಣ, ಪ್ರತಿ ವಿದ್ಯಾರ್ಥಿಗೆ ಉಚಿತವಾಗಿ ವರ್ಷಕ್ಕೆ ಸಮವಸ್ತ್ರ, ಬೂಟು, ಕಾಲು ಚೀಲ ಪೂರೈಕೆ,…

Read More

ಮಡಿಕೇರಿ ಫೆ.11 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಫೆ.12 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, ಪೂಜೆಯನ್ನು ಯಶಸ್ವಿಗೊಳಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ತಿಳಿಸಿದ್ದಾರೆ.

Read More

ಮಡಿಕೇರಿ ಫೆ.11 NEWS DESK : ಕರ್ನಾಟಕ ಲೋಕಾಯುಕ್ತ ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಫೆ.12 ರಂದು ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ದೂರು ಅರ್ಜಿ ಸ್ವೀಕಾರ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಫೆ.13 ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Read More

ವಿರಾಜಪೇಟೆ ಫೆ.11 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವಿರಾಜಪೇಟೆ ವತಿಯಿಂದ ಬಿರುನಾಣಿ ಮರೆನಾಡು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಾಗೂ ಬೆಂಚ್ ಡೆಸ್ಕ್ ವಿತರಣೆ ಕಾರ್ಯಕ್ರಮ ನಡೆಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಶೀಕ್ ಕಾವೇರಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಪ್ತ ಸಮಾಲೋಚಕಿ ರಮ್ಯಾ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ದೇಶ, ಪ್ರೌಢಾವಸ್ಥೆಯ ಮಕ್ಕಳು ಸಾಮಾಜಿಕವಾಗಿ, ಮಾನಸಿಕವಾಗಿ ಹೇಗೆ ಬಲಿಷ್ಟರಾಗಿರಬೇಕು, ದುಶ್ಚಟಗಳ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಮಾಹಿತಿ ನೀಡಿದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು. ಕಾರ್ಯಕ್ರಮದಲ್ಲಿ ಮರೆನಾಡು ಪ್ರಾಢ ಶಾಲೆಯ ಗೌರವ ಕಾರ್ಯದರ್ಶಿ ಬೇಬಿ ನಂಜಮ್ಮ, ಶಾಲಾ ಆಡಳಿತ ಮಂಡಳಿ ನಿರ್ದೇಶಕರುಗಳಾದ ಸುನಂದ, ಬೋಪಣ್ಣ, ಕೊಡಗು ಜಿಲ್ಲಾ ಜನ ಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ಬಾನಂಗಡ ಅರುಣ್, ಗ್ರಾಮ ಪಂಚಾಯ್ತಿ ಸದಸ್ಯರಾದ ಸರಸ್ವತಿ, ಮುಖ್ಯ ಶಿಕ್ಷಕರಾದ, ಕಿಶೋರ್, ಮೇಲ್ವಿಚಾರಕ…

Read More

ಮಡಿಕೇರಿ ಫೆ.11 NEWS DESK : ಕೊಡಗು ಜಿಲ್ಲಾ ಕಂದಾಯ ಇಲಾಖೆ ವತಿಯಿಂದ ನಡೆದ ರೆವಿನ್ಯೂ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪೊನ್ನಂಪೇಟೆ ವಾರಿಯರ್ಸ್ ತಂಡ ಗೆಲುವು ಸಾಧಿಸಿತು. ಸೋಮವಾರಪೇಟೆ ಕಂದಾಯ ಇಲಾಖೆ ತಂಡ ದ್ವಿತೀಯ ಸ್ಥಾನ ಪಡೆಯಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ 2 ದಿನಗಳ ಕಾಲ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ, ಸೋಮವಾರಪೇಟೆ, ಕುಶಾಲನಗರ ತಾಲ್ಲೂಕುಗಳ ಕಂದಾಯ ಇಲಾಖೆ ತಂಡಗಳು ಹಾಗೂ ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಕಚೇರಿ ಸಿಬ್ಬಂದಿ ತಂಡ ಸೇರಿದಂತೆ ಒಟ್ಟು 6 ತಂಡಗಳು ಪಾಲ್ಗೊಂಡಿದ್ದವು. ಲೀಗ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಿತು. ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಸೋಮವಾರಪೇಟೆ ಕಂದಾಯ ಇಲಾಖೆ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಪೊನ್ನಂಪೇಟೆ ವಾರಿಯರ್ಸ್ ನಿಗದಿತ 5 ಓವರ್‍ಗಳಲ್ಲಿ 4 ವಿಕೆಟ್ ಕಳೆದುಕೊಂಡು 74 ರನ್ ಗಳಿಸಿತು. ತಂಡದ ಪರ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ ತರುಣ್ ನಂಜಪ್ಪ ಕೇವಲ 21…

Read More