ಮಡಿಕೇರಿ ಫೆ.11 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಕಾಯಕ ಶರಣರ ಜಯಂತಿ ಕಾರ್ಯಕ್ರಮವು ನಗರದ ಗಾಂಧಿ ಭವನದಲ್ಲಿ ನಡೆಯಿತು. ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕವಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾಯಕ ದಾಸೋಹ ವಚನಗಳಿಂದ ಹೆಸರುವಾಸಿಯಾಗಿರುವ ಕಾಯಕ ಶರಣರು ವಚನಗಳ ಮೂಲಕ ಬಹಳ ಸರಳವಾಗಿ ಕನ್ನಡ ಸಾಹಿತ್ಯದಲ್ಲಿ ಜನರಿಗೆ ಸಂದೇಶಗಳನ್ನು ತಿಳಿಸುತ್ತಿದ್ದವರು ಎಂದು ಹೇಳಿದರು. ಕಾಯಕದಿಂದ ದೇವರನ್ನು ಪೂಜಿಸುವ ಬದಲಾಗಿ ಕಾಯಕವನ್ನು ಮಾಡುತ್ತಾ ದೇವರನ್ನು ಕಂಡವರು ಅಲ್ಲದೇ ಕಾಯಕಗಳಿಂದ ಯಾವುದೇ ಜಾತಿಯನ್ನು ಗುರುತಿಸಬಾರದು ಯಾವ ಕಾಯಕವು ದೊಡ್ಡದಲ್ಲ ಎಂದು ತಿಳಿಸಿಕೊಟ್ಟವರು ಕಾಯಕ ಶರಣರು ಎಂದರು. ಯಾವುದೇ ಕೆಲಸವನ್ನು ಮಾಡಿದರು ಆ ಕೆಲಸದ ಮೇಲೆ ನಮಗೆ ಪ್ರೀತಿ ಇರಬೇಕು. ಪ್ರೀತಿ ಇದ್ದಾಗ ಮಾತ್ರ ನಾವು ಉತ್ತಮ ರೀತಿಯಲ್ಲಿ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಾಗುತ್ತದೆ. ಎಲ್ಲಾ ಪೋಷಕರು ಹಾಗೂ ಶಿಕ್ಷಕರು ತಮ್ಮ ಮಕ್ಕಳಿಗೆ ಶಿಕ್ಷಣದ ಜೊತೆಗೆ ವ್ಯಕ್ತಿತ್ವವನ್ನು ರೂಪಿಸುವ ಹಾಗೂ ವ್ಯಕ್ತಿತ್ವವನ್ನು…
ಲೇಖಕ: admin
ಮಡಿಕೇರಿ ಫೆ.11 NEWS DESK : ಪ್ರತಿನಿತ್ಯವೂ ದೇವರ ಭಜನೆ ಮಾಡುವುದರಿಂದ ವ್ಯಕ್ತಿಯ ಏಕಾಗ್ರತೆಯ ಜೊತೆಗೆ ಹಲವು ರೀತಿಯಲ್ಲಿ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಿಲ್ಲಾ ಕಾರ್ಯಕಾರಿ ಸದಸ್ಯ ಕೆ.ಕೆ. ದಿನೇಶ್ ಕುಮಾರ್ ಅಭಿಪ್ರಾಯಪಟ್ಟರು. ಕತ್ತಲೆಕಾಡು-ಜೇನುಕೊಲ್ಲಿ ಶ್ರೀ ವಿನಾಯಕ ಸೇವಾ ಟ್ರಸ್ಟ್ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು. ಮಕ್ಕಳು ಎಳೆಯ ಪ್ರಾಯದಿಂದಲೇ ಭಜನೆ ಮುಂತಾದ ಧಾರ್ಮಿಕ ಚಟುವಟಿಕೆಯಲ್ಲಿ ಭಾಗಿಯಾಗಬೇಕು. ಇದರಿಂದಾಗಿ ಭವಿಷ್ಯದಲ್ಲಿ ಅವರು ಸಮಾಜಕ್ಕಾಗಿ ತೊಡಗಿಸಿಕೊಳ್ಳಲು ಪ್ರೇರೇಪಣೆಯಾಗುತ್ತದೆ. ಮನುಷ್ಯ ಯಾವತ್ತೂ ಒಂಟಿಯಾಗಿ ಬದುಕಲು ಸಾಧ್ಯವಿಲ್ಲ. ಸಂಘಟನಾತ್ಮಕವಾಗಿ ಇದ್ದಾಗ ಮಾತ್ರ ಸಮಾಜದಲ್ಲಿ ಮುಂದುವರೆಯಲು ಸಹಕಾರಿಯಾಗುತ್ತದೆ ಎಂದರು. ಸಂಘಟನೆಯಲ್ಲಿ ತೊಡಗಿಸಿಕೊಂಡಾಗ ನಮ್ಮ ವಿಚಾರಧಾರೆಗಳನ್ನು ಇತರರೊಡನೆ ಹಂಚಿಕೊಳ್ಳಲು ಸಾಧ್ಯವಾಗುತ್ತದೆ. ಗ್ರಾಮೀಣ ಭಾಗದಲ್ಲಿ ಸಂಘಟನೆ ಕಟ್ಟಿಕೊಂಡು ಸಾಮಾಜಿಕ ಕಾರ್ಯದಲ್ಲಿ ನಿರಂತರವಾಗಿ ಭಾಗಿಯಾಗುವುದು ಸುಲಭದ ಕೆಲಸ ಅಲ್ಲ. ನಮ್ಮ ಸಂಸ್ಕೃತಿಯ ಉಳಿವಿಗೆ ಶ್ರಮಿಸುವ ಜೊತೆಗೆ ಮುಂದಿನ ಪೀಳಿಗೆಗೆ ಪರಿಚಯಿಸುವ ನಿರಂತರ ಪ್ರಕ್ರಿಯೆ ನಮ್ಮಿಂದ ಆಗಬೇಕೆಂದು ಆಶಯ ವ್ಯಕ್ತಪಡಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ…
ಮಡಿಕೇರಿ NEWS DESK ಫೆ.10 : ವಸ್ತ್ರ ಸಂಹಿತೆ ಕುರಿತು ಎರಡು ಸಮುದಾಯಗಳ ನಡುವೆ ಮೂಡಿರುವ ಭಿನ್ನಾಭಿಪ್ರಾಯದಿಂದ ಗೊಂದಲ ಸೃಷ್ಟಿಯಾಗಿರುವ ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಾಲಯದ 200 ಮೀಟರ್ ವ್ಯಾಪ್ತಿಯಲ್ಲಿ ಮತ್ತೆ ಮಾ.13 ರವರೆಗೆ ನಿರ್ಬಂಧ ವಿಧಿಸಿ ಕೊಡಗು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಕಳೆದ ಒಂದು ತಿಂಗಳಿನಿಂದ ಈ ಪ್ರದೇಶದಲ್ಲಿ ನಿರ್ಬಂಧಕಾಜ್ಞೆ ಜಾರಿಯಲ್ಲಿದ್ದು, ಇದೀಗ ಮತ್ತೆ ಫೆ.11 ರಿಂದ ಮಾ.13 ರವರೆಗೆ ವಿಸ್ತರಿಸಲಾಗಿದೆ. ಈ ಅವಧಿಯಲ್ಲಿ 5ಕ್ಕೂ ಅಧಿಕ ಮಂದಿ ಸೇರಬಾರದು, ರ‍್ಯಾಲಿ, ಜಾಥ, ಪ್ರತಿಭಟನೆ ನಡೆಸಬಾರದು, ಪ್ರಚೋದನಾತ್ಮಕ ಘೋಷಣೆ ಕೂಗಬಾರದು ಎಂದು ಆದೇಶಿಸಲಾಗಿದೆ.
https://www.youtube.com/watch?v=iMuSRWRbQeo&authuser=0 ಮಡಿಕೇರಿ ಫೆ.10 NEWS DESK : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘ 2ನೇ ಹಂತದ ಪ್ರತಿಭಟನೆ ನಡೆಸಿತು. ಕೆಲಸ ಸ್ಥಗಿತಗೊಳಿಸಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಕಪ್ಪು ಪಟ್ಟಿಧರಿಸಿ ಶಾಂತಿಯುತ ಪ್ರತಿಭಟನೆ ನಡೆಸಿದ ಜಿಲ್ಲೆಯ ಗ್ರಾಮ ಆಡಳಿತಾಧಿಕಾರಿಗಳು ಮೂಲಭೂತ ಸೌಲಭ್ಯಕ್ಕಾಗಿ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷೆ ಅಕ್ಷತಾ ಬಿ.ಶೆಟ್ಟಿ, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾ ಭವನ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯ ಎಲ್ಲಾ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ತಾಲ್ಲೂಕು ಅಧಿಕಾರಿಗಳು ಹಾಗೂ ಸದಸ್ಯರ ಒಪ್ಪಿಗೆಯಂತೆ ಸರ್ವಾನುಮತದಿಂದ ರಾಜ್ಯಾದ್ಯಂತ ಮುಷ್ಕರ ನಡೆಸಿದ ಕಾರಣ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಡೆದ ಗ್ರಾಮ…
ಮಡಿಕೇರಿ 10 NEWS DESK : ಹಾರಂಗಿ ಅಣೆಕಟ್ಟೆಯ ಸ್ವಾಗತ ಕಮಾನು ಸಂಪೂರ್ಣ ಆಂಗ್ಲಭಾಷೆಯಲ್ಲಿದ್ದು, ಕನ್ನಡ ಭಾಷೆಯಲ್ಲಿ ಅಳವಡಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು. ಕುಶಾಲನಗರದ ತಾಲ್ಲೂಕು ಅಧ್ಯಕ್ಷ ಬಿ.ಜೆ.ಅಣ್ಣಯ್ಯ ನೇತೃತ್ವದಲ್ಲಿ ಜಲಾಶಯದ ಸ್ವಾಗತ ಕಮಾನು ಮುಂಭಾಗ ಜಮಾಯಿಸಿದ ಕರವೇ ಕಾರ್ಯಕರ್ತರು, ಕನ್ನಡ ವಿರೋಧಿಗಳು ಹಾಗೂ ನೀರಾವರಿ ನಿಗಮದ ವಿರುದ್ಧ ಧಿಕ್ಕಾರ ಕೂಗಿದರು. ಕನ್ನಡ ಭಾಷೆ ಬಳಸುವಂತೆ ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ದೀಪಕ್, ರಾಜ್ಯ ಸರಕಾರ ಈಗಾಗಲೆ ಕನ್ನಡ ಭಾಷೆಗೆ ಪ್ರಾತಿನಿಧ್ಯ ನೀಡುವಂತೆ ಆದೇಶ ಹೊರಡಿಸಿದೆ. ಆದರೆ ಸರಕಾರದ ಭಾಗವಾಗಿರುವ ನೀರಾವರಿ ನಿಗಮದ ಅಧಿಕಾರಿಗಳು ಇತರರಿಗೆ ಮಾದರಿಯಾಗುವ ಬದಲು ಕನ್ನಡ ವಿರೋಧಿ ನೀತಿ ಅನುಸರಿಸಿದ್ದಾರೆ ಎಂದು ಆರೋಪಿಸಿದರು. ಈಗಾಗಲೆ ನಮ್ಮ ಪದಾಧಿಕಾರಿಗಳು ಕನ್ನಡ ಬಳಕೆಗೆ ಸೂಚನೆ ನೀಡಿದರೂ ಕೂಡ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಮುಂದಿನ 7 ರಿಂದ 15 ದಿನಗಳ ಒಳಗಾಗಿ ಕನ್ನಡ ನಾಮಫಲಕ ಅಳವಡಿಸದಿದ್ದರೆ ನಿಗಮದ ಕಛೇರಿ ಮುಂದೆ ಉಗ್ರ…
ಮಡಿಕೇರಿ ಫೆ.10 NEWS DESK : ಹುಲುಸೆ ಗ್ರಾಮದ ಬಸವೇಶ್ವರ ದೇವಾಲಯದ ವಿಮಾನ ಗೋಪುರ ಕಳಶ ಪ್ರತಿಷ್ಠಾಪನಾ ಮಹಾ ಪೂಜೋತ್ಸವ ನೆರವೇರಿತು. ಶನಿವಾರಸಂತೆ ಮನೇಹಳ್ಳಿ ತಪೋಕ್ಷೇತ್ರದ ಪೀಠಾಧಿಪತಿ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ಸಾನಿಧ್ಯದಲ್ಲಿ ಜರುಗಿದ ಪೂಜೋತ್ಸವದಲ್ಲಿ ಗ್ರಾಮದ ನೂರಾರು ಮಹಿಳೆಯರು ಗ್ರಾಮದ ಪೂರ್ವ ದಿಕ್ಕಿನಲ್ಲಿ ಹರಿದಿರುವ ಕಾವೇರಿ ನದಿಯಲ್ಲಿ ಗಂಗಾ ಪೂಜೆ ನೆರವೇರಿಸಿ ಮೆರವಣಿಗೆಯಲ್ಲಿ ತಂದ ಪವಿತ್ರ ಗಂಗೆಯನ್ನು ನೂತನ ವಿಮಾನ ಗೋಪುರಕ್ಕೆ ಪ್ರೋಕ್ಷಣೆ ಗೈದರು. ದೇವಾಲಯದಲ್ಲಿ ಮುಂಜಾನೆಯ ಬ್ರಾಹ್ಮೀ ಮುಹೂರ್ತದಲ್ಲಿ ಪಂಚಾಮೃತ ಅಭಿಷೇಕ, ಮಹಾರುದ್ರಾಭಿಷೇಕ ನೆರವೇರಿತು. ನಂತರ ಮಂತ್ರ ಪುಷ್ಪಗಳೊಂದಿಗೆ ಮಹಾಮಂಗಳಾರತಿ ನೆರವೇರಿಸಲಾಯಿತು. ಗುಮ್ಮನಕೊಲ್ಲಿ ಬಸವೇಶ್ವರ ದೇವಾಲಯದ ಅರ್ಚಕ ಚಂದ್ರಶೇಖರ ಹಿರೇಮಠ ತಂಡ ಪೂಜಾ ಕಾರ್ಯ ನೆರವೇರಿಸಿತು. ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದ ಶನಿವಾರಸಂತೆ ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಯೋಗಿ ಸ್ವಾಮೀಜಿ, ಪ್ರತಿಯೊಬ್ಬರು ಸದಾ ಕಾಲ ಸತ್ಕಾರ್ಯಗಳನ್ನು ಮಾಡುವ ಮೂಲಕ ಸತ್ಪಾತ್ರರಾಗಬೇಕಿದೆ. ದೇವಾಲಯಗಳು, ಮಠ, ಮಂದಿರಗಳು ಸತ್ಸಂಗದ ಆಲಯಗಳು, ನಿರಾಕಾರನಾದ ಪರಮಾತ್ಮನನ್ನು ಕಾಣುವ ಪವಿತ್ರ…
ಮಡಿಕೇರಿ ಫೆ.10 NEWS DESK : ಮಡಿಕೇರಿ ನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ಕೆಲವೇ ಕೆಲವು ಮಂದಿಯ ಹಿಡಿತದಲ್ಲಿದ್ದು, ಅದನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮಡಿಕೇರಿ ಶಾಖೆಯ ಅಧೀನಕ್ಕೆ ಒಳಪಡಿಸಬೇಕು ಎಂದು ಒತ್ತಾಯಿಸಿ ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿಯ ನೇತೃತ್ವದಲ್ಲಿ ವಿವಿಧ ದಲಿತಪರ ಸಂಘಟನೆಗಳು ಭವನದ ಎದುರು ಧರಣಿ ನಡೆಸಿದವು. ಅಂಬೇಡ್ಕರ್ ಭವನ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷರು ಹಾಗೂ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಅವರ ನೇತೃತ್ವದಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ದಲಿತ ಸಂಘಟನೆಗಳ ಮುಖಂಡರು ಮತ್ತು ಸದಸ್ಯರು ಧರಣಿ ನಡೆಸಿ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಸಮಿತಿಯ ಅಧ್ಯಕ್ಷ ಹೆಚ್.ಎಲ್.ದಿವಾಕರ್ ದಲಿತ ಸಂಘರ್ಷ ಸಮಿತಿಗಳು 1985ರಿಂದಲೇ ಡಾ.ಅಂಬೇಡ್ಕರ್ ಭವನಕ್ಕಾಗಿ ನಡೆಸಿದ ಹೋರಾಟದ ಹಿನ್ನೆಲೆ 1991ರಲ್ಲಿ ಸರ್ಕಾರ ಸುದರ್ಶನ ವೃತ್ತದ ಬಳಿ ಜಾಗವನ್ನು ಮಂಜೂರು ಮಾಡಿಕೊಟ್ಟಿತು. ಆ ಸಂದರ್ಭ ಭವನ ನಿರ್ಮಾಣಕ್ಕಾಗಿ ಡಾ.ನಾಗರಾಜ್ ಅಧ್ಯಕ್ಷರಾಗಿದ್ದ ಸಮಿತಿಯೊಂದನ್ನು ರಚಿಸಿಕೊಳ್ಳಲಾಯಿತು. ಆ ಸಮಿತಿಯಲ್ಲಿ…
ಮಡಿಕೇರಿ ಫೆ.10 NEWS DESK : ಜಿಲ್ಲೆಯ ಪ್ರಮುಖ ಸಹಕಾರಿ ಸಂಸ್ಥೆಯಾಗಿರುವ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆ ಫೆ.16 ರಂದು ನಡೆಯಲಿದ್ದು, ಸಂಘವನ್ನು ಸಹಕಾರಿ ತತ್ವದಡಿ ಸದೃಢವಾಗಿ ಬೆಳೆಸಲು ಅರ್ಹತೆಯಿರುವವರನ್ನು ಚುನಾಯಿಸುವಂತೆ ಸಂಘದ ಸದಸ್ಯ ಎಂ.ಕೆ.ಅಪ್ಪಚ್ಚು ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯರ ದೂರದೃಷ್ಟಿಯ ಫಲವಾಗಿ ಸಹಕಾರಿ ತತ್ವದಡಿ ಅಸ್ತಿತ್ವಕ್ಕೆ ಬಂದ ಈ ಸಂಸ್ಥೆಯೊಂದಿಗೆ ಜಿಲ್ಲೆಯ ಕಾಫಿ ಬೆಳೆಗಾರರಿಗೆ ಭಾವನಾತ್ಮಕ ಸಂಬಂಧವಿದೆ. ಕೊಡಗಿನ ಕಾಫಿ ಉದ್ಯಮದ ಬೆಳವಣಿಗೆಗೆ ಈ ಸಂಘ ಮಹತ್ತರ ಕೊಡುಗೆ ನೀಡಿದೆ ಎಂದರು. ಕೊಡಗಿನ ಸಣ್ಣ ಬೆಳೆಗಾರರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ನೀಡದಿದ್ದ ಅವಧಿಯಲ್ಲಿ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ಸಾಲ ನೀಡಿ ಕಾಫಿ ಬೆಳೆಗಾರರ ಅಭ್ಯುದಯಕ್ಕೆ ಸಹಕಾರಿಯಾಗಿತ್ತು. ಆದರೆ ಸಮರ್ಥ ಸಹಕಾರಿ ನಾಯಕತ್ವದ ಕೊರತೆ, ರಾಜಕೀಯ ಹಸ್ತಕ್ಷೇಪ ಮತ್ತು ದುರಾಡಳಿತದ ಫಲವಾಗಿ ಈ ಸಂಘ ಅವನತಿಯ ಹಾದಿಯಲ್ಲಿದೆ. 6314 ಸದಸ್ಯರಲ್ಲಿ ಆಡಳಿತ ಮಂಡಳಿ ಚುನಾವಣೆಯಲ್ಲಿ ಮತ ಚಲಾಯಿಸಲು…
https://www.youtube.com/watch?v=U7CXsPSjld0&authuser=0 ಮಡಿಕೇರಿ ಫೆ.10 NEWS DESK : ಕ್ರೀಡಾಪಟುಗಳು ಯಾವುದೇ ದುಶ್ಚಟಗಳಿಗೆ ಆಕರ್ಷಿತರಾಗದೆ ಕ್ರೀಡೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವಂತಾಗಬೇಕು ಎಂದು ಮಡಿಕೇರಿ ನಗರಸಭಾ ಸದಸ್ಯ ಎಂ.ಕೆ.ಮನ್ಸೂರ್ ಆಲಿ ಕರೆ ನೀಡಿದ್ದಾರೆ. ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಮತ್ತು ಚಿಲ್ ಬಾಯ್ಸ್ ಮಡಿಕೇರಿ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಫೆ.16ರ ವರೆಗೆ ನಡೆಯಲಿರುವ 20ನೇ ವರ್ಷದ ಕೊಡಗು “ಮುಸ್ಲಿಂ ಕಪ್” ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಕ್ರೀಡೆಗಳು ಮಾನಸಿಕ ದೃಢತೆ ಮತ್ತು ಆರೋಗ್ಯ ವೃದ್ಧಿಗೆ ಸಹಕಾರಿಯಾಗಿವೆ. ಮುಸ್ಲಿಂ ಸಮಾಜದಲ್ಲಿ ಉತ್ತಮ ಪ್ರತಿಭೆಗಳಿದ್ದರೂ ಸೂಕ್ತ ವೇದಿಕೆಗಳು ಸಿಗುತ್ತಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಿ ಕೊಡಗಿನಲ್ಲಿರುವ ಗ್ರಾಮೀಣ ಪ್ರದೇಶದ ಎಲ್ಲಾ ಕ್ರೀಡಾಪಟುಗಳನ್ನು ಒಂದೇ ವೇದಿಕೆಯಡಿ ತರುವ ಮತ್ತು ಪ್ರೋತ್ಸಾಹಿಸುವ ಕಾರ್ಯ ಆಗಬೇಕು ಎಂದರು. ಕಳೆದ 19 ವರ್ಷಗಳಿಂದ ಕೊಡಗು ಮುಸ್ಲಿಂ ಕಪ್ ಕ್ರೀಡಾಕೂಟವನ್ನು ನಡೆಸಿಕೊಂಡು ಬರಲಾಗುತ್ತಿದೆ. ಎಲ್ಲಾ…
ಸಿದ್ದಾಪುರ ಫೆ.10 NEWS DESK : ಕೊಡಗು ಜಿಲ್ಲಾ, ತಾಲ್ಲೂಕು, ಅಮ್ಮತ್ತಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅಮ್ಮತ್ತಿ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ಸಾಹಿತಿ ವಿ.ಎಸ್.ರಾಮಕೃಷ್ಣ ಮತ್ತು ಕೆ.ಟಿ.ಸುಬ್ಬರಾವ್ ದತ್ತಿ ಉಪನ್ಯಾಸ ಕಾರ್ಯಕ್ರಮ ಫೆ.11 ರಂದು ನಡೆಯಲಿದೆ. ಅಮ್ಮತ್ತಿ ಪ್ರೌಢಶಾಲೆಯ ಸಭಾಂಗಣದಲ್ಲಿ ಬೆಳಿಗ್ಗೆ 11ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಅಮ್ಮತ್ತಿ ಪ್ರೌಢಶಾಲೆ ಸಮಿತಿ ಅಧ್ಯಕ್ಷ ಕರ್ನಲ್ ಕಂಡ್ರತಂಡ ಸಿ. ಸುಬ್ಬಯ್ಯ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಅಮ್ಮತ್ತಿ ಹೋಬಳಿ ಘಟಕದ ಅಧ್ಯಕ್ಷ ಟಿ.ಹೆಚ್.ಮಂಜುನಾಥ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್,ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಡಿ.ರಾಜೇಶ್ ಪದ್ಮನಾಭ, ದೇವಣಗೇರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಹೆಚ್.ಡಿ ಲೋಕೇಶ್,ಮಾಕುಟ್ಟ ನಿವೃತ್ತ ಮುಖ್ಯ ಶಿಕ್ಷಕ ಎ.ವಿ.ಮಂಜುನಾಥ್, ರಾಮಕೃಷ್ಣ, ಶ್ರೀಮತಿ ಕಂಜರ್ಪಣೆ ತಿಮ್ಮಪಯ್ಯ ನಾಗರತ್ನ, ದೊಡ್ಡತಮ್ಮಯ್ಯ, ಕಾವಾಡಿಚಂಡ ಯು. ಗಣಪತಿ, ಐನಂಡ ಪ್ರಕಾಶ್, ಸುಬ್ರಮಣಿ,ಎಂ ಬಿಜೊಯ್,ಟೋಮಿ ಥೋಮಸ್ (ನಾ ಕನ್ನಡಿಗ) ಸಾವಿತ್ರಿ, ಶಭರೀಶ್ ಶೆಟ್ಟಿ, ವಿ.ಎಸ್. ಗುರುಧರ್ಶನ್, ಸಿ.ವಿಜಯಲಕ್ಷ್ಮೀ, ಕೆ.ಆರ್.ಸೂರಜ್, ಮುನೀರ್ ಅಹಮ್ಮದ್, ರೇವತಿ…






