ಲೇಖಕ: admin

ಮಡಿಕೇರಿ ಆ.6 NEWS DESK : ಯೂನಿಯನ್ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕೂಡಿಗೆ ಕೊಡಗು ಇವರ ವತಿಯಿಂದ ಚೆಂಬು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ 6 ದಿನಗಳ ಉಚಿತ ಇಡಿಪಿ ತರಬೇತಿಯನ್ನು ಮಡಿಕೇರಿ ಲೀಡ್ ಬ್ಯಾಂಕ್ ಚೀಫ್ ಮ್ಯಾನೇಜರ್ ಗಂಗಾಧರ ನಾಯ್ಕ್ ಅವರು ಉದ್ಘಾಟಿಸಿದರು. ಕೂಡಿಗೆ ಯೂನಿಯನ್ ಬ್ಯಾಂಕ್ ತರಬೇತಿ ಸಂಸ್ಥೆಯ ನಿರ್ದೇಶಕರಾದ ಪ್ರಕಾಶ್ ಕುಮಾರ ಅವರು ಪ್ರಾಸ್ತಾವಿಕವಾಗಿ ಮಾತಾನಾಡುತ್ತಾ ಈ ಆರು ದಿನಗಳಲ್ಲಿ ನಡೆಯುವ ತರಬೇತಿಯಲ್ಲಿ ಫಿನಾಯಿಲ್, ಸೋಪ್ ಆಯಿಲ್, ಸೋಪ್ ಪೌಡರ್, ಹಾರ್ಪಿಕ್, ಮೇಣದಬತ್ತಿ, ಸರ್ಕಾರಿ ಸಾಲ ಸೌಲಭ್ಯಗಳು ಹಾಗೂ ಇನ್ನೂ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು. ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಮಾತಾನಾಡಿ, ಮಹಿಳೆಯರು ಇದರ ಸದುಪಯೋಗ ಪಡೆದು ಸ್ವ ಉದ್ಯೋಗ ಮಾಡಿ ಸ್ವಾವಲಂಬಿಗಳಾಗಿ ಎಂದು ಮಾರ್ಗದರ್ಶನ ನೀಡಿದರು. ಜಿಲ್ಲಾ ಪಂಚಾಯತ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಚಾಂದಿನಿ ಅವರು ಮಾತಾನಾಡಿ ಎಲ್ಲರೂ ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘಕ್ಕೆ ಸೇರಿ ಮಹಿಳೆಯರು ಸ್ವ ಉದ್ಯೋಗಿಗಳಾಗಬೇಕು…

Read More

ಮಡಿಕೇರಿ ಆ.6 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆಯ ಮಕ್ಕಳ ಹೊರ ರೋಗಿ ವಿಭಾಗದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಡೀನ್ ಮತ್ತು ಡೈರೆಕ್ಟರ್ ಡಾ.ಲೋಕೇಶ್ ಅವರು ಉದ್ಘಾಟಿಸಿದರು. ಸಮುದಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ.ರಾಮಚಂದ್ರ ಕಾಮತ್ ಅವರು, ತಾಯಿಯ ಹಾಲು ಅತ್ಯುತ್ತಮ ಸಂಪೂರ್ಣ ಪೌಷ್ಟಿಕ ಆಹಾರ ಜೀವನದ ಸುಸ್ಥಿರ ಆರಂಭವೂ ಆಗಿದೆ. ಅತಿಸಾರ ನಿಮೋನಿಯಾ ಕಿವಿಯ ಸೋಂಕು ಮತ್ತು ಅಲರ್ಜಿಗಳನ್ನು ತಡೆಗಟ್ಟುವ ಶಕ್ತಿ ತಾಯಿಯ ಹಾಲಿನಲ್ಲಿದೆ. ಹೆರಿಗೆಯಾದ ತಕ್ಷಣ ತಾಯಿ ಹಾಲು ಕುಡಿಸುವುದರಿಂದ ರಕ್ತಶ್ರಾವ ತಡೆಗಟ್ಟಲು, ಗರ್ಭಕೋಶ ಸಾಮಾನ್ಯ ಗಾತ್ರಕ್ಕೆ ಮರಳಲು, ಖಿನ್ನತೆ ನಿವಾರಿಸಲು ಸಹಕರಿಸುತ್ತದೆ ಎಂದು ಪ್ರಾಸ್ತಾವಿಕ ನುಡಿ ಆಡಿದರು. ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ ಅವರು ಸ್ತನ್ಯಪಾನದಿಂದ ಮಗುವಿನ ಮೆದುಳಿನ ಬೆಳವಣಿಗೆಗೆ ಸಹಕಾರಿ ಆಗಲಿದೆ. ಜೊತೆಗೆ…

Read More

ಮಡಿಕೇರಿ ಆ.6 NEWS DESK : ಭಾಗಮಂಡಲ ಭಗಂಡೇಶ್ವರ ದೇವಾಲಯ ಹಾಗೂ ‘ಕಾವೇರಿ ನದಿ’ ಉಗಮ ಸ್ಥಾನ ತಲಕಾವೇರಿ ಪವಿತ್ರ ಕ್ಷೇತ್ರಕ್ಕೆ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಪ್ರಾರ್ಥಿಸಿದ ಸಚಿವರು, ನಂತರ ಭಗಂಡೇಶ್ವರ ದೇವಾಲಯದಲ್ಲಿ ಹೆಚ್ಚಿನ ಮಳೆ ಬೆಳೆಯಾಗಿ ನಾಡಿನ ಜನತೆಗೆ ಸಮೃದ್ಧಿ ತರುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಮಹಾಗಣಪತಿ, ಶ್ರೀ ಮಹಾವಿಷ್ಣು, ಶ್ರೀ ಸುಬ್ರಹ್ಮಣ್ಯ ದೇವರಿಗೆ ಪೂಜೆ ಸಲ್ಲಿಸಿದರು. ಬಳಿಕ ತಲಕಾವೇರಿಗೆ ತೆರಳಿ ಶ್ರೀ ಮಹಾ ಗಣಪತಿಗೆ ಪೂಜೆ ಸಲ್ಲಿಸಿ ನಂತರ ತಲಕಾವೇರಿಯಲ್ಲಿ ತಾಯಿ ಕಾವೇರಿ ಮಾತೆಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಿ ಕುಂಕುಮಾರ್ಚನೆ ನೆರವೇರಿಸಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ನಾಡಿಗೆ ಜೀವಜಲ ನೀಡುವ ಪುಣ್ಯತಾಯಿ ಕಾವೇರಿ ಮಾತೆ ಸಕಲ ಜೀವಿಗಳಿಗೂ ಕುಡಿಯುವ ನೀರನ್ನು ಒದಗಿಸುತ್ತಿದ್ದು, ಕಾವೇರಿ ಕಣಿವೆ ಪಾತ್ರದಲ್ಲಿ ಹೆಚ್ಚಿನ ಮಳೆಯಾಗಿ ಎಲ್ಲರಿಗೂ ಸಮೃದ್ಧಿ ತರುವಂತಾಗಲಿ…

Read More

ಮಡಿಕೇರಿ ಜು.6 NEWS DESK : ಕೊಡಗು ವಿದ್ಯಾಲಯದಲ್ಲಿ 25ನೇ ವರ್ಷದ ಅಂತರ್-ಶಾಲಾ ಚೆಸ್ ಪಂದ್ಯಾವಳಿಗೆ ಶಾಲೆಯ ಬಿ.ಕೆ. ಸುಬಯ್ಯ ಸಭಾಂಗಣದಲ್ಲಿ  ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕೊಡಗು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ  ನಿರ್ದೇಶಕಿ ಚಿನ್ಮಯಿ ಚಕ್ರವರ್ತಿ ಮಾತನಾಡಿ, ಚೆಸ್ ಕೇವಲ ಆಟವಲ್ಲ; ಅದು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ತಾರ್ಕಿಕ ಚಿಂತನೆ, ನಿರ್ಧಾರ ಕೈಗೊಳ್ಳುವ ಸಾಮರ್ಥ್ಯ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಬೌದ್ಧಿಕ ಕ್ರೀಡೆಯಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಚೆಸ್‌ನಂತಹ ಕೌಶಲ್ಯಾಧಾರಿತ ಕ್ರೀಡೆಗಳಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಅನಂತ ಶಯನ ಮಾತನಾಡಿ, ಇಂದಿನ ವೇಗದ ಜೀವನಶೈಲಿಯಲ್ಲಿ ತಾಳ್ಮೆ ಮತ್ತು ಏಕಾಗ್ರತೆ ಅತ್ಯಗತ್ಯವಾಗಿದೆ. ಚೆಸ್ ಆಟವು ವಿದ್ಯಾರ್ಥಿಗಳಲ್ಲಿ ಚಿಂತನಶಕ್ತಿ, ಯೋಜನಾ ಸಾಮರ್ಥ್ಯ, ಸಹನೆ ಹಾಗೂ ಸಮಸ್ಯೆಗಳನ್ನು ವಿಶ್ಲೇಷಿಸುವ ಕೌಶಲ್ಯವನ್ನು ವೃದ್ಧಿಸುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಹಿರಿಯ ಚೆಸ್ ತರಬೇತುದಾರ ಶಂಕರ್ ನಾರಾಯಣ ಅವರು ರಚಿಸಿರುವ ” ಹೌ ಟು ಇಂಪ್ರೂವ್ ಚೆಸ್…

Read More

ಮಡಿಕೇರಿ ಆ.6 NEWS DESK  : ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಗುಜರಾತ್ ನ ಅಹಮದಾಬಾದ್ ನಲ್ಲಿ ತೆಗೆದುಕೊಂಡ ನಿರ್ಣಯದಂತೆ “ಸಂಘಟನಾ ಸೃಜನ್ ಅಭಿಯಾನ್” ಮೂಲಕ ಕರ್ನಾಟಕ ರಾಜ್ಯದಲ್ಲೂ ಪಕ್ಷ ಸಂಘಟನೆಗೆ ಒತ್ತು ನೀಡಿ ಅಭಿಯಾನವನ್ನು ಚುರುಕುಗೊಳಿಸಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಕೇರಳದ ನಾದಪುರಂ ಕ್ಷೇತ್ರದ ಶಾಸಕ ಅಭಿಜಿತ್ ಕೆ.ಎಂ ಅವರು ತಿಳಿಸಿದ್ದಾರೆ. “ಸಂಘಟನಾ ಸೃಜನ್ ಅಭಿಯಾನ್” ದ ಭಾಗವಾಗಿ ಜಿಲ್ಲಾಧ್ಯಕ್ಷರ ಆಯ್ಕೆಗೆ ಅಭಿಪ್ರಾಯ ಸಂಗ್ರಹಕ್ಕಾಗಿ ಮಡಿಕೇರಿಗೆ ಆಗಮಿಸಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಭರ್ತಿ ಮಾಡಲು ಸಿದ್ಧಪಡಿಸಿರುವ ಅರ್ಜಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ದೇಶದಾದ್ಯಂತ ಕಾಂಗ್ರೆಸ್ ಪಕ್ಷದ ಸಂಘಟನೆ ನಡೆಯುತ್ತಿದ್ದು, ರಾಜ್ಯವ್ಯಾಪಿ ಪ್ರವಾಸ ಕೈಗೊಂಡು ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲೂ ಪಕ್ಷದ ಜಿಲ್ಲಾಧ್ಯಕ್ಷರ ಆಯ್ಕೆ ನಡೆಯಲಿದ್ದು, ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕಾಂಗ್ರೆಸ್ ಪಕ್ಷದ ಮೂಲಕ ಜನಸೇವೆಯಲ್ಲಿ ಸಕ್ರಿಯರಾಗಿರುವ ಯಾರು ಬೇಕಾದರೂ ಅಧ್ಯಕ್ಷ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲಾ, ಬ್ಲಾಕ್ ಸೇರಿದಂತೆ ಎಲ್ಲಾ ಘಟಕಗಳ ಪ್ರಮುಖರು, ಶಾಸಕರು,…

Read More

ಮಡಿಕೇರಿ NEWS DESK ಆ.6 : ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಎಲ್ಲಾ ರಾಜಕೀಯ ಪಕ್ಷಗಳು ಕೊಡಗು ಜಿಲ್ಲೆಯನ್ನು ಕಡೆಗಣಿಸುತ್ತಲೇ ಬಂದಿವೆ. ಪ್ರಸ್ತುತ ಅಧಿಕಾರದಲ್ಲಿರುವ ಸರಕಾರ ಜಿಲ್ಲೆಗೆ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಿದೆ ಎಂದು ಕೊಡಗು ಗೌಡ ಹಿತ ರಕ್ಷಣಾ ವೇದಿಕೆ ವೇದಿಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಗೌರವಾಧ್ಯಕ್ಷ ಪಿ.ಎಲ್.ಸುರೇಶ್ ಅವರು ಚುನಾವಣೆಯ ಸಂದರ್ಭದಲ್ಲಿ ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳನ್ನು ಗೆಲ್ಲಿಸಿಕೊಟ್ಟಲ್ಲಿ ಸಚಿವ ಸ್ಥಾನ ನೀಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದ್ದರು. ಆದರೆ ಇದೀಗ ಭರವಸೆ ಹುಸಿಯಾಗಿದ್ದು, ಸಚಿವ ಸ್ಥಾನ ನೀಡದೆ ನಿರ್ಲಕ್ಷಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯವನ್ನಾಳಿದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕೊಡಗು ಕೇವಲ ಕಾವೇರಿ ನೀರನ್ನು ನೀಡುವ ಜಿಲ್ಲೆಯಷ್ಟೆ ಎಂದು ಪರಿಗಣಿಸಿವೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಸಚಿವ ಸ್ಥಾನದಿಂದ ವಂಚಿಸಲಾಗುತ್ತಿದೆ. ಪುಟ್ಟ ಜಿಲ್ಲೆ ಕೊಡಗು ರಾಜ್ಯದ ಎಲ್ಲಾ ಕ್ಷೇತ್ರಗಳಿಗೆ ತನ್ನದೇ…

Read More

ಮಡಿಕೇರಿ NEWS DESK ಆ.6 : ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ಕರ್ನಾಟಕ ರಾಜ್ಯ ಸರಕಾರ 2023 ರಲ್ಲಿ “ಮೀಸಲಾತಿ”ಗೆ ಸಂಬoಧಿಸಿದoತೆ ಜಾರಿಗೆ ತಂದಿರುವ ಕಾನೂನನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಲಿ ಎಂದು ಕರ್ನಾಟಕ ರಾಜ್ಯ ಸಮಾನ ಮನಸ್ಕರ ವೇದಿಕೆಯ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆಗ್ರಹಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೀಸಲಾತಿ ಎನ್ನುವುದು “ಯಾರಪ್ಪನ ಗಂಟು ಅಲ್ಲ”, ಭಿಕ್ಷೆಯೂ ಅಲ್ಲ. ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ನೀಡಿರುವ ಹಕ್ಕಾಗಿದೆ. ಕೇಂದ್ರದ ಮೋದಿ ನೇತೃತ್ವದ ಕೇಂದ್ರ ಸರಕಾರ ಪರಿಶಿಷ್ಟ ಜಾತಿ-ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಮುಂದಾಗಬೇಕು. ರಾಜ್ಯದ 28 ಸಂಸದರು 224 ಶಾಸಕರು ಹಾಗೂ ರಾಜ್ಯಸಭಾ ಸದಸ್ಯರು ಮೀಸಲಾತಿ ಪರ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿದರು. ರಾಷ್ಟçದ ಒಟ್ಟು ಜನಸಂಖ್ಯೆ ಶೇ.7 ರಷ್ಟಿರುವ ಮೇಲ್ವರ್ಗದ ಮಂದಿಗೆ ಅಗತ್ಯ ಮೀಸಲಾತಿ ಸೌಲಭ್ಯಗಳನ್ನು ಯಾವುದೇ ಸದ್ದುಗದ್ದಲವಿಲ್ಲದೆ ಒದಗಿಸುವ ಪ್ರಧಾನಿ…

Read More

ಮಡಿಕೇರಿ NEWS DESK ಆ.6 : ವಿಶ್ವ ಆದಿಮಸಂಜಾತರ ಹಕ್ಕುಗಳ ದಿನವಾದ ಸೆ.9 ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಸತ್ಯಾಗ್ರಹ ನಡೆಸಿ ಕೊಡವ ಮಣ್ಣಿನ ಆದಿಮಸಂಜಾತ ಏಕ-ಜನಾಂಗೀಯ ಪ್ರಕೃತಿ ಆರಾಧಕ (ಅನಿಮಿಸ್ಟಿಕ್) ಜನಾಂಗ ಕೊಡವರ ಪರವಾದ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ಭಾರತ ಸರಕಾರ, ಕರ್ನಾಟಕ ಸರಕಾರ ಮತ್ತು ವಿಶ್ವಸಂಸ್ಥೆಗೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಕೊಡವರು ಈ ಮಣ್ಣಿಗೆ ಬದ್ಧರಾಗಿರುವ ಅತ್ಯಂತ ಪ್ರಾಚೀನ ಆದಿಮಸಂಜಾತರು. ಕೊಡವ ಪರಂಪರೆಯು ಯೋಧತ್ವವನ್ನು ಮೈಗೂಡಿಸಿಕೊಂಡಿದೆ. ಸಿಎನ್‌ಸಿ ತನ್ನ ದೀರ್ಘಕಾಲದ, ನ್ಯಾಯಸಮ್ಮತ, ಪರಮೋಚ್ಚ ಸಾಂವಿಧಾನಿಕ ಬೇಡಿಕೆಗಳು ಮತ್ತು ಗೌರವಾನ್ವಿತ ಗುರಿಗಳನ್ನು ಒಳಗೊಂಡ ಬೇಡಿಕೆಗಳನ್ನು ಮಂಡಿಸಲಿದೆ. “ಭೂ-ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ, ಆಂತರಿಕ ಸ್ವಯಂ ನಿರ್ಧಾರದ ಹಕ್ಕುಗಳಿಗಾಗಿ ಪ್ರತಿಪಾದಿಸಲಿದೆ. ಆದ್ದರಿಂದ ಸರ್ವ ಕೊಡವ, ಕೊಡವತಿಯರು…

Read More

ಮಡಿಕೇರಿ NEWS DESK ಆ.6 : ದಕ್ಷಿಣ ಕೊಡಗಿನ ವಿವಿಧೆಡೆ ನಡೆದಿರುವ ರಸ್ತೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು, ಈ ಕುರಿತು ಕ್ಷೇತ್ರದ ಶಾಸಕರು ತನಿಖೆಗೆ ಆದೇಶಿಸಬೇಕು ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದಿರುವ ರಸ್ತೆ ಅಭಿವೃದ್ಧಿಯ ಡಾಂಬರು ಕೇವಲ 6 ತಿಂಗಳಿಗೆ ಕಿತ್ತು ಬರುತ್ತಿದೆ. ರಸ್ತೆ ಡಾಂಬರೀಕರಣ ಮಾತ್ರವಲ್ಲದೆ ಗುಂಡಿ ಮುಚ್ಚುವ ಕಾರ್ಯ ಕೂಡ ಕಳಪೆಯಾಗಿದೆ. ಇದು ವ್ಯಾಪಕ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ. ಕುಟ್ಟ – ಶ್ರೀಮಂಗಲ – ಮಡಿಕೇರಿ ರಸ್ತೆ, ಕುಟ್ಟ – ಕಾನೂರು – ಪೊನ್ನಂಪೇಟೆ ರಸ್ತೆ, ಬಿಟ್ಟಂಗಾಲ – ಬಾಳುಗೋಡು – ಮಾಕುಟ್ಟ ರಸ್ತೆ, ಹೀಗೆ ಅನೇಕ ರಸ್ತೆಗಳಿವೆ. ಜಿಲ್ಲೆಯ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಅಗತ್ಯ ಅನುದಾನ ದೊರೆಯುತ್ತಿಲ್ಲ, ಬಂದಿರುವ ಅಲ್ಪ ಅನುದಾನವನ್ನು ಕೂಡ ಸದುಪಯೋಗ ಪಡಿಸದೆ ಕಳಪೆ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಹದಗೆಟ್ಟ ರಸ್ತೆಯಲ್ಲಿ ಸಂಚರಿಸಲಾಗದೆ…

Read More

ಮಡಿಕೇರಿ NEWS DESK ಆ.6 : ದಕ್ಷಿಣ ಕೊಡಗಿನ ವಿವಿಧೆಡೆ ನಡೆದಿರುವ ರಸ್ತೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು, ಈ ಕುರಿತು ಕ್ಷೇತ್ರದ ಶಾಸಕರು ತನಿಖೆಗೆ ಆದೇಶಿಸಬೇಕು ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದಿರುವ ರಸ್ತೆ ಅಭಿವೃದ್ಧಿಯ ಡಾಂಬರು ಕೇವಲ 6 ತಿಂಗಳಿಗೆ ಕಿತ್ತು ಬರುತ್ತಿದೆ. ರಸ್ತೆ ಡಾಂಬರೀಕರಣ ಮಾತ್ರವಲ್ಲದೆ ಗುಂಡಿ ಮುಚ್ಚುವ ಕಾರ್ಯ ಕೂಡ ಕಳಪೆಯಾಗಿದೆ. ಇದು ವ್ಯಾಪಕ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ. ಕುಟ್ಟ – ಶ್ರೀಮಂಗಲ – ಮಡಿಕೇರಿ ರಸ್ತೆ, ಕುಟ್ಟ – ಕಾನೂರು – ಪೊನ್ನಂಪೇಟೆ ರಸ್ತೆ, ಬಿಟ್ಟಂಗಾಲ – ಬಾಳುಗೋಡು – ಮಾಕುಟ್ಟ ರಸ್ತೆ, ಹೀಗೆ ಅನೇಕ ರಸ್ತೆಗಳಿವೆ. ಜಿಲ್ಲೆಯ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಅಗತ್ಯ ಅನುದಾನ ದೊರೆಯುತ್ತಿಲ್ಲ, ಬಂದಿರುವ ಅಲ್ಪ ಅನುದಾನವನ್ನು ಕೂಡ ಸದುಪಯೋಗ ಪಡಿಸದೆ ಕಳಪೆ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಹದಗೆಟ್ಟ ರಸ್ತೆಯಲ್ಲಿ ಸಂಚರಿಸಲಾಗದೆ…

Read More