ಮಡಿಕೇರಿ NEWS DESK ಫೆ.9 : ಆದಿಮಸಂಜಾತ ಕೊಡವ ಬುಡಕಟ್ಟು ಜನರ ಸಾಂಪ್ರದಾಯಿಕ ಉಡುಪಿನ ಮಹತ್ವದ ಕುರಿತು ಕಳೆದ 35 ವರ್ಷಗಳಿಂದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜಾಗೃತಿ ಮೂಡಿಸುತ್ತಲೇ ಬಂದಿದ್ದು, ನಮ್ಮ ಪ್ರಯತ್ನ ಫಲ ನೀಡಿರುವುದಕ್ಕೆ ಕೊಡವರ ಬೃಹತ್ ಪಾದಯಾತ್ರೆಯಲ್ಲಿ ಸಾಂಪ್ರದಾಯಿಕ ಉಡುಪಿನಲ್ಲಿ ಕೊಡವರು ರಾರಾಜಿಸಿರುವುದೇ ಸಾಕ್ಷಿಯಾಗಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ. ಫೆ.7 ರಂದು ಮಡಿಕೇರಿಯಲ್ಲಿ ನಡೆದ ಬೃಹತ್ ಪಾದಯಾತ್ರೆಯಲ್ಲಿ ಪಾಲ್ಗೊಂಡ ಸಹಸ್ರ ಸಹಸ್ರ ಕೊಡವರು ಕೆಂಪು ತಲೆವಸ್ತ್ರ, ಕುಪ್ಯಚೇಲೆ ಮತ್ತು ಕೊಡವ ಪೊಡೆಯ ಉಡುಪಿನಲ್ಲಿ ಸಾಗುವ ಮೂಲಕ ಧೀರ ಕೊಡವರ ಗಾಂಭೀರ್ಯವನ್ನು ಪ್ರದರ್ಶಿಸಿದ್ದಾರೆ. ಇದಕ್ಕಾಗಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಎಲ್ಲಾ ಕೊಡವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕಳೆದ 35 ವರ್ಷಗಳಿಂದ ಆದಿಮಸಂಜಾತ ಕೊಡವ ಲೋಕದ ಅದಮನೀಯ ಧ್ವನಿ ಮತ್ತು ಸ್ಥಿತಿ ಸ್ಥಾಪಕತ್ವದ ಚಳುವಳಿಯ ಮೂಲಕ ಸಿಎನ್‌ಸಿ ಸಂಘಟನೆ ಶ್ರಮಿಸುತ್ತಿದೆ. ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ, ಸ್ವ-ಆಡಳಿತ ಮತ್ತು ಸ್ವ-ನಿರ್ಣಯದ ಹಕ್ಕು ಹಾಗೂ ಎಸ್‌ಟಿ ಟ್ಯಾಗ್…
ಲೇಖಕ: admin
ಸುಂಟಿಕೊಪ್ಪ NEWS DESK ಫೆ.8 : ದೆಹಲಿ ಚುನಾವಣೆಯಲ್ಲಿ ಬಹುಮತದೊಂದಿಗೆ ಬಿಜೆಪಿ ಪಕ್ಷ ಜಯಗಳಿಸಿದ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಬಿಜೆಪಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಶನಿವಾರ ಸಂಜೆ ಪಕ್ಷದ ಕಾರ್ಯಕರ್ತರು ಕನ್ನಡ ವೃತ್ತದಲ್ಲಿ ಜಮಾವಣೆಗೊಂಡು ಪ್ರಧಾನಿ ನರೇಂದ್ರಮೋದಿ ಪರ ಜಯಘೋಷ ಕೂಗಿ, ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಿಸಿ ಸಂಭ್ರಮಿಸಿದರು. ಶಕ್ತಿ ಕೇಂದ್ರದ ಅಧ್ಯಕ್ಷ ಧನು ಕಾವೇರಪ್ಪ, ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್, ಪಕ್ಷದ ಹಿರಿಯ ಮುಖಂಡರುಗಳಾದ ಡಿ.ನರಸಿಂಹ, ಲೀಲಾವತಿ, ಶಕ್ತಿ ಕೇಂದ್ರದ ನಿಕಟಪೂರ್ವ ಅಧ್ಯಕ್ಷ ಬಿ.ಕೆ.ಪ್ರಶಾಂತ್, ಗ್ರಾ.ಪಂ.ಸದಸ್ಯೆ ವಸಂತಿ, ಪಟ್ಟೆಮನೆ ಉದಯಕುಮಾರ್, ವಿ.ಎ.ಸಂತೋಷ್, ಪ್ರಶಾಂತ್ (ಪ್ರಶು), ಕೆದಕಲ್ ರಮೇಶ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.
ಗೋಣೀಕೊಪ್ಪ NEWS DESK ಫೆ.8 : ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದ ಹಿನ್ನೆಲೆ ಗೋಣಿಕೊಪ್ಪ ನಗರ ಬಿಜೆಪಿ ಶಕ್ತಿಕೇಂದ್ರದ ಪ್ರಮುಖರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಬಸ್ ನಿಲ್ದಾಣದಲ್ಲಿ ಜಿಲ್ಲಾ ಉಪಾಧ್ಯಕ್ಷ ಗುಮ್ಮಟ್ಟೀರ ಕಿಲನ್ ಗಣಪತಿ, ಶಕ್ತಿ ಕೇಂದ್ರದ ಪ್ರಮುಖ ಸುರೇಶ್ ರೈ ಮುಂದಾಳತ್ವದಲ್ಲಿ ಸಂಭ್ರಮಾಚರಣೆ ನಡೆಯಿತು. ದೆಹಲಿ ಚುನಾವಣಾ ಫಲಿತಾಂಶ ಮುಂದಿನ ಕರ್ನಾಟಕ ಮತ್ತು ತೆಲಂಗಾಣದ ಚುನಾವಣೆಗೆ ದಾರಿದೀಪವಾಗಿದೆ. ದೆಹಲಿಯಲ್ಲಿ ಬಿಜೆಪಿ 70 ಸ್ಥಾನಗಳ ಪೈಕಿ 47 ಸ್ಥಾನಗಳನ್ನು ಗಳಿಸಿದೆ. ಬಿಜೆಪಿ 27 ವರ್ಷಗಳ ಬಳಿಕ ಅಧಿಕಾರಕ್ಕೆ ಬಂದಿದೆ ಎಂದು ಗುಮ್ಮಟ್ಟೀರ ಕಿಲನ್ ಗಣಪತಿ ಹೇಳಿದರು. ರಾಜ್ಯ ಬಿಜೆಪಿ ಕೃಷಿಮೋರ್ಚಾ ಸದಸ್ಯೆ ಮಾಪಂಗಡ ಯಮುನಾ ಚಂಗಪ್ಪ, ಗೋಣಿಕೊಪ್ಪ ಗ್ರಾ.ಪಂ ಸದಸ್ಯರುಗಳಾದ ಕೊಣಿಯಂಡ ಬೋಜಮ್ಮ, ವಿವೇಕ್ ರಾಯ್ಕರ್, ನೂರೇರ ರತಿ ಅಚ್ಚಪ್ಪ, ಮನ್ನಕಮನೆ ಸೌಮ್ಯ ಬಾಲು, ರಾಮಕೃಷ್ಣ, ಪ್ರಮುಖರುಗಳಾದ ಚೇಂದಂಡ ಸುಮಿ ಸುಬ್ಬಯ್ಯ, ಸುಬ್ರಮಣಿ ಎಂ.ಎಸ್, ರಾಣಿ ನಾರಾಯಣ, ಪ್ರಭಾಕರ್ ನೆಲ್ಲಿತ್ತಾಯ, ಜ್ಯೋತಿ, ಮಂಜು ಮಾಯಮುಡಿ, ಸುದರ್ಶನ್ ಭಟ್,…
ಮಡಿಕೇರಿ ಫೆ.8 NEWS DESK : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಸಂಭ್ರಮಾಚರಣೆ ನಡೆಯಿತು. ನಗರದ ಇಂದಿರಾಗಾಂಧಿ ವೃತ್ತದಲ್ಲಿ ಜಮಾಯಿಸಿ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಜೈಕಾರ ಹಾಕಿ ಸಂಭ್ರಮಿಸಿದರು. ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್, ಎಸ್‌ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ಪಕ್ಷದ ಪ್ರಮುಖರಾದ ಮನು ಮಂಜುನಾಥ್, ಬೊಳ್ಳಜಿರ ಬಿ.ಅಯ್ಯಪ್ಪ ಸೇರಿದಂತೆ ನಗರಸಭೆ ಸದಸ್ಯರು, ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮಡಿಕೇರಿ ಫೆ.8 NEWS DESK : ಕೊಡಗು ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಮತ್ತು ಚಿಲ್ ಬಾಯ್ಸ್ ಮಡಿಕೇರಿ ಇವರ ವತಿಯಿಂದ 20ನೇ ವರ್ಷದ “ಮುಸ್ಲಿಂ ಕಪ್” ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಫೆ.10ರಿಂದ 16ರ ವರೆಗೆ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಚಿಲ್ ಬಾಯ್ಸ್ ಸಂಸ್ಥೆಯ ಅಧ್ಯಕ್ಷ ಎಂ.ಎ.ಉನೈಸ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಈಗಾಗಲೇ ತಂಡಗಳು ಹೆಸರು ನೋಂದಾಯಿಸಿಕೊಂಡಿದ್ದು, ಸೋಮವಾರ ಬೆಳಿಗ್ಗೆ 9 ಗಂಟೆಗೆ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಮುಸ್ಲಿಂ ಸ್ಪೋಟ್ರ್ಸ್ ಟ್ರಸ್ಟ್ ಸ್ಥಾಪಕಾಧ್ಯಕ್ಷ ಅಬ್ದುಲ್ ರಶೀದ್ ಎಡಪಾಲ, ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಖಾದರ್ ಹಾಕತ್ತೂರು, ಪ್ರಧಾನ ಕಾರ್ಯದರ್ಶಿ ಆದಂ ಎಸ್, ಉದ್ಯಮಿಗಳಾದ ಟಿ.ಪಿ.ಮಂಜೇಶ್, ಮಕ್ಬೂಲ್, ಸುಂಟಿಕೊಪ್ಪ ಯುವ ಕಾಂಗ್ರೆಸ್ ಮುಖಂಡ ಹರ್ಷದ್ ಲತೀಫ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಸಮಾರೋಪ ಸಮಾರಂಭ ಫೆ.16 ರಂದು ನಡೆಯಲಿದ್ದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು…
ಮೈಸೂರು ಫೆ.8 NEWS DESK : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯಗಳಿಸಿದೆ. ಇದರೊಂದಿಗೆ ಎರಡೂವರೆ ದಶಕಗಳ ಬಳಿಕ ದಿಲ್ಲಿ ಗದ್ದುಗೆ ಮೇಲೆ ಕಮಲ ಅರಳಿದೆ. ಈ ಬಾರಿಯ ನವದೆಹಲಿ ಚುನಾವಣೆಗೂ ಮತ್ತು ಮೈಸೂರಿಗೂ ಅವಿನಾಭಾವ ಸಂಬಂಧ ಕೂಡ ಇದೆ. ಏಕೆಂದರೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನಡೆಸಿದ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಯದುವೀರ್ ಒಡೆಯರ್ ಅವರು ಕಳೆದ ವಾರ ನವದೆಹಲಿಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ತೆರಳಿದ ಸಂದರ್ಭದಲ್ಲಿ ಪಕ್ಷದ ಪರ ಪ್ರಚಾರ ನಡೆಸಿದ್ದರು. ಫೆಬ್ರವರಿ ಎರಡರಂದು ಪ್ರಚಾರ :: ನವದೆಹಲಿಯ ಪ್ರತಿಷ್ಠಿತ ರೊಹ್ತಾಸ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಜಿತೇಂದ್ರ ಮಹಾಜನ್ ಅವರ ಪರ ಪ್ರಚಾರ ನಡೆಸಿದ್ದರು. ಈ ವಿಧಾನಸಭೆ ಮತಕ್ಷೇತ್ರದ ಅಶೋಕ ಮಂಡಲದಲ್ಲಿ ಯದುವೀರ್ ಕಳೆದ ಫೆಬ್ರವರಿ ಎರಡರಂದು ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದ್ದರು. ಈ ಮತ…
ಮಡಿಕೇರಿ ಫೆ.8 NEWS DESK : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಡಗು ಜಿಲ್ಲಾ ಘಟಕ ಮತ್ತು ಕೊಡಗು ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಫೆ.9 ರಂದು ಕುಶಾಲನಗರದಲ್ಲಿ ಶ್ರೀ ಅಲ್ಲಮಪ್ರಭುಗಳ ವಿಚಾರಧಾರೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಜೆ 4.30 ಗಂಟೆಗೆ ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಜಿ, ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಮಠ ಶ್ರೀ ಮಹಾಂತ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿದ್ದು, ಅಧ್ಯಕ್ಷತೆಯನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ವಿ.ಶಿವಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಆಧ್ಯಾತ್ಮ ಚಿಂತಕರಾದ ಡಾ.ವೀಣಾ ಬನ್ನಂಜೆ ಉಪನ್ಯಾಸ ನೀಡಲಿದ್ದಾರೆ.
ಕುಶಾಲನಗರ ಫೆ.8 NEWS DESK : ಕೂಡುಮಂಗಳೂರು ಗ್ರಾ.ಪಂ ನ ಬಸವೇಶ್ವರ ಬಡಾವಣೆಯಲ್ಲಿ ಐದು ಲಕ್ಷ ರೂ.ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದ್ದು, ಕಾಮಗಾರಿಯನ್ನು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್ ಪರಿಶೀಲನೆ ನಡೆಸಿದರು. ಬಸವೇಶ್ವರ ಬಡಾವಣೆಯ ಕುಬೇರ ಮಣಿಮಾಲ ಅವರ ಮನೆಯಿಂದ ಜಗದೀಶ್ ಅವರ ಜಾಗದವರೆಗೆ ಐದು ಲಕ್ಷ ರೂ ವೆಚ್ಚದಲ್ಲಿ 80 ಮೀಟರ್ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಲಾಗಿದೆ. ಈ ಸಂದರ್ಭ ಮಾತನಾಡಿದ ಕೂಡುಮಂಗಳೂರು ಗ್ರಾ.ಪಂ ಸದಸ್ಯ ಕೆ.ಬಿ.ಶಂಶುದ್ಧೀನ್, ವಾರ್ಡ್ ಅಭಿವೃದ್ಧಿ ವಿಚಾರವಾಗಿ ಶಾಸಕರ ಬಳಿ ಮನವಿ ಮಾಡಲಾಗಿತ್ತು. ಈ ಹಿನ್ನಲೆ ಶಾಸಕರು ಅನುದಾನವನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನವನ್ನು ನೀಡುವುದಾಗಿಯೂ ಭರವಸೆ ನೀಡಿದ್ದಾರೆ ಎಂದರು. ಈ ಸಂದರ್ಭ ಬಸವೇಶ್ವರ ಬಡಾವಣೆಯ ನಿವಾಸಿಗಳಾದ ಅಕ್ಕಮ್ಮ, ಚನ್ನಮ್ಮ, ಜೈನಾಬಿ, ಹಸೀನಾ, ಮಂಗಳ, ಶಕೀಲಾ, ಅದ್ನಾನ್ ಹಾಗೂ ಇನ್ನಿತರರು ಇದ್ದರು.
ಸುಂಟಿಕೊಪ್ಪ ಫೆ.8 NEWS DESK : ಹುಚ್ಚು ನಾಯಿಯೊಂದು ಹಸುವಿಗೆ ಕಚ್ಚಿದ ಪರಿಣಾಮ ಹಸು ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದ ವಿಕ್ರಂ ಬಡಾವಣೆಯಲ್ಲಿ ನಡೆದಿದೆ. ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ 7ನೇ ಮೈಲ್ ಗ್ರಾಮದ ವಿಕ್ರಂ ಬಡಾವಣೆಯಲ್ಲಿ ಹುಚ್ಚು ನಾಯಿಯೊಂದು ಸೇರಿಕೊಂಡಿದ್ದು, ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ಸಾಕು ನಾಯಿಗಳು ಸೇರಿದಂತೆ ಇತರೆ ಪ್ರಾಣಿಗಳನ್ನು ಕಚ್ಚಿರುವ ಸಂಶಯ ವ್ಯಕ್ತಪಡಿಸಿರುವ ನಿವಾಸಿಗಳು, ನಾಯಿಗಳ ನಿಯಂತ್ರಣಕ್ಕೆ ಗ್ರಾಮ ಪಂಚಾಯಿತಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಮಡಿಕೇರಿ ಫೆ.8 NEWS DESK : ಮಡಿಕೇರಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನ ಸಮಿತಿ ನಿಯಮಾನುಸಾರ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೆಲವರು ಸಮಿತಿಯ ವಿರುದ್ಧ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಪ್ರೊ.ಬಿ.ಕೃಷ್ಣಪ್ಪ ಅವರು ಸ್ಥಾಪಿಸಿದ ರಾಜ್ಯಾಧ್ಯಕ್ಷ ಎಂ.ಗುರುಮೂರ್ತಿ ಶಿವಮೊಗ್ಗ ನೇತೃತ್ವದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಿ.47/1974-75 52ನೇ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ಅಧಿಕೃತ ಸಂಘಟನೆಯಾಗಿದೆ. ಈ ಸಂಘಟನೆಯ ಕೊಡಗು ಜಿಲ್ಲಾ ಸಂಚಾಲಕಿಯಾಗಿ ನಾನು ಆಯ್ಕೆಯಾದಾಗಿನಿಂದ ಪ್ರತಿ ತಿಂಗಳು ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಉಚಿತವಾಗಿ ಸಭೆ ಹಾಗೂ ಕಾರ್ಯಕ್ರಮಗಳನ್ನು ನಡೆಸಲು ಡಾ.ಬಿ.ಆರ್.ಅಂಬೇಡ್ಕರ್ ಶತಮಾನೋತ್ಸವ ಭವನ ನಿರ್ಮಾಣ ಸಮಿತಿಯ ಆಡಳಿತ ಮಂಡಳಿ ಅವಕಾಶ ಕಲ್ಪಿಸಿದೆ ಎಂದರು. ಮಡಿಕೇರಿಯ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯ ನೇತೃತ್ವ ವಹಿಸಿರುವ ಹೆಚ್.ಎಂ.ನಂದಕುಮಾರ್ ಹಾಗೂ ಸಮಿತಿ ಸದಸ್ಯರು ನಿಯಮಾನುಸಾರ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಹೆಚ್.ಎಲ್.ದಿವಾಕರ್ ಅವರು ವೈಯುಕ್ತಿಕ ವಿಚಾರಗಳನ್ನು ಮುಂದಿಟ್ಟುಕೊಂಡು…






