ಲೇಖಕ: admin

ಸುಂಟಿಕೊಪ್ಪ ಡಿ.30 NEWS DESK : ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಪೊವ್ವೆದಿ ಬಸವೇಶ್ವರ ದೇವಾಲಯದ ಪುನರ್ ಪ್ರತಿಷ್ಠಾ 13ನೇ ವಾರ್ಷಿಕ ಮಹೋತ್ಸವವು ಜ.4ರಂದು ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಗೆ ಮಹಾಗಣಪತಿ ಹೋಮ, 8 ಗಂಟೆಗೆ ಶ್ರೀ ಏಕಾದಶ ರುದ್ರಾಭಿಷೇಕ, 9 ಗಂಟೆಗೆ ಶ್ರೀದೇವಿಗೆ ನವಕಲಶಾಭಿಷೇಕ ಪೂಜೆ, 11 ಗಂಟೆಗೆ ನವಗ್ರಹಗಳಿಗೆ ವಿಶೇಷ ಕಲಶಾಭಿಷೇಕ ಪೂಜೆ, 11.30 ಗಂಟೆಗೆ ನಾಗದೇವರಿಗೆ ವಿಶೇಷ ಪೂಜೆ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಕಾರ್ಯದರ್ಶಿ ಬಿ.ಸಿ.ದಿನೇಶ್ ತಿಳಿಸಿದ್ದಾರೆ.

Read More

ಮಡಿಕೇರಿ ಡಿ.30 NEWS DESK : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯಕ್ಕೆ ಕುಪ್ಯಚೇಲೆ ಧರಿಸಿ ಹೋದ ಕೊಡವರನ್ನು ತಡೆದ ಪ್ರಕರಣ ಖಂಡನೀಯವೆಂದು ನಾಪೋಕ್ಲು ಕೊಡವ ಸಮಾಜದ ಮಹಾಸಭೆ ಖಂಡನಾ ನಿರ್ಣಯ ಕೈಗೊಂಡಿದೆ. ಅನಾದಿಕಾಲದಿಂದಲೂ ಕೊಡವರು ಕೊಡವ ಸಾಂಪ್ರದಾಯಿಕ ಉಡುಗೆಯಾದ ಕುಪ್ಯಚೇಲೆ ಧರಿಸಿ ದೇವಾಯಗಳಿಗೆ ತೆರಳಿ ಪೂಜೆ ಸಲ್ಲಿಸುವುದು ವಾಡಿಕೆಯಾಗಿದೆ. ಆದರೆ ಕಟ್ಟೆಮಾಡಿನಲ್ಲಿ ಕುಪ್ಯಚೇಲೆಯನ್ನು ಕಳಚಿ ದೇವಾಯವನ್ನು ಪ್ರವೇಶಿಸುವಂತೆ ಒತ್ತಡ ಹೇರಿರುವುದು ಮತ್ತು ಹಲ್ಲೆಗೆ ಮುಂದಾಗಿರುವುದು ಖಂಡನೀಯ ಎಂದು ಸಭೆ ಅಸಮಾಧಾನ ವ್ಯಕ್ತಪಡಿಸಿತು. ಕುಪ್ಯಚೇಲೆ ಧರಿಸಿ ದೇವಾಲಯಕ್ಕೆ ತೆರಳುವುದು ಕೊಡವರ ಹಕ್ಕಾಗಿದ್ದು, ಇದನ್ನು ತಡೆಯಲು ಸಾಧ್ಯವಿಲ್ಲ. ಕಟ್ಟೆಮಾಡಿನ ಪ್ರಕರಣಕ್ಕೆ ಕಾರಣಕರ್ತರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಎಂ.ಸಿ.ನಾಣಯ್ಯ ಒತ್ತಾಯಿಸಿದರು. ನಾಪೋಕ್ಲು ಕೊಡವ ಸಮಾಜದ ಬೆಳ್ಳಿ ಹಬ್ಬದ ಸಮಾರಂಭದಲ್ಲೂ ಕಟ್ಟೆಮಾಡು ಘಟನೆಯ ಕುರಿತು ಚರ್ಚೆ ನಡೆಯಿತು. ಪ್ರಕರಣವನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಯಿತು.

Read More

ಸುಂಟಿಕೊಪ್ಪ ಡಿ.30 NEWS DESK : ಕಾವೇರಿ ನದಿಯ ಒಡಲಿಗೆ ಕಲುಷಿತ ನೀರನ್ನು ಬಿಡುವುದನ್ನು ತಡೆಗಟ್ಟಬೇಕೆಂದು ಸುಂಟಿಕೊಪ್ಪ ನಾಡು ಪ್ರೌಢ ಶಾಲೆಯ ವಿದ್ಯಾರ್ಥಿನಿ ಬಾಲ ವಿಜ್ಞಾನಿ ವಿದ್ಯಾರ್ಥಿನಿ ಎ.ಎಸ್.ಶ್ರೀಶಾ ಮನವಿ ಮಾಡಿದರು. ಕೊಡಗು ಮೈಸೂರು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರಿಗೆ  ಮನವಿ ಸಲ್ಲಿಸಿದ ವಿದ್ಯಾರ್ಥಿನಿ ಕಾವೇರಿ ನದಿಯು ಇತ್ತೀಚಿನ ಮಾಲಿನತೆಯಿಂದ ಕಲುಷಿತಗೊಳಿಸುತ್ತಿದ್ದು, ನದಿಯ ಶುದ್ಧತೆಯನ್ನು ಕಾಯುವ ದಿಸೆಯಲ್ಲಿ ನದಿಗೆ ಕಲುಷಿತ ನೀರು ಬಿಡುವುದನ್ನು ತಡೆಗಟ್ಟುವಂತೆ ಪತ್ರದ ಮೂಲಕ ಮನವಿ ಮಾಡಿಕೊಂಡರು.

Read More

ಮಡಿಕೇರಿ ಡಿ.30 NEWS DESK : ಬೆಂಗಳೂರಿನ ಬನ್ನೇರುಘಟ್ಟದ ಪ್ರಖ್ಯಾತ ಫೋರ್ಟಿಸ್ ಆಸ್ಪತ್ರೆ ವತಿಯಿಂದ ಜ.5 ರಂದು ಮೊಣಕಾಲು ಮತ್ತು ಹಿಪ್ ಬದಲಿ ಉಚಿತ ಶಿಬಿರ ಮಡಿಕೇರಿಯಲ್ಲಿ ನಡೆಯಲಿದೆ. ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಹರ್ಷ ಹೆಲ್ತ್ ಕೇರ್ ಕ್ಲಿನಿಕ್‍ನಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಫೋರ್ಟಿಸ್ ಆಸ್ಪತ್ರೆಯ ಅರ್ಥೋಪೆಡಿಕ್ಸ್, ರೊಬೊಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ಸರ್ಜನ್  ಡಾ.ಕೆ.ಯೋಗೇಶ್, ಸೊಂಟ, ಮೊಣಕಾಲು ಮತ್ತು ಕೀಲು ನೋವುಗಳು, ನಡೆಯಲು ಕಷ್ಟವಾಗುವಿಕೆ, ವೃದ್ಧರಿಗಾಗಿ ಕೀಲು ಬದಲಿ ವ್ಯವಸ್ಥೆ, ಕೀಹೋಲ್ ಮೂಳೆ ಚಿಕಿತ್ಸೆಯ ಕಾರ್ಯಾಚರಣೆಗಳು, ರೊಬೊಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ಕುರಿತು ಉಚಿತ ಸಮಾಲೋಚನೆ ಹಾಗೂ ಚಿಕಿತ್ಸೆ ನೀಡಲಿದ್ದಾರೆ. ಶಿಬಿರದಲ್ಲಿ ಸಿ.ಜಿ.ಹೆಚ್.ಎಸ್., ಬಿಎಸ್‍ಎನ್‍ಎಲ್, ಕೆಇಬಿ, ರೈಲ್ವೆ ಸಿಬ್ಬಂದಿ ಮತ್ತು ಎಬಿವೈ (ಪೊಲೀಸ್), ಎಸ್‍ಬಿಐ, ಎಲ್ಲಾ ಖಾಸಗಿ ಬ್ಯಾಂಕಿಂಗ್  ಉಚಿತ ಸಮಾಲೋಚನೆ ನಡೆಯಲಿದೆ. ನಿಗಧಿತ ಭೇಟಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಅವಿನಾಶ್-7829128776 ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ ಡಿ.30 NEWS DESK : ಓರೆ-ಕೋರೆಗಳನ್ನು ತಿದ್ದಿ ಸದೃಢ ಹಾಗೂ ಸುಭದ್ರ ಸಮಾಜ ನಿರ್ಮಾಣವಾಗಬೇಕಾದರೆ ಪತ್ರಕರ್ತರ ಪಾತ್ರ ಮಹತ್ತರವಾಗಿರುತ್ತದೆ ಎಂದು ಗಣ್ಯರು ಅಭಿಮತ ವ್ಯಕ್ತಪಡಿಸಿದರು. ನಗರದ ಪತ್ರಿಕಾ ಭವನದಲ್ಲಿ ಕೊಡಗು ಪ್ರೆಸ್ ಕ್ಲಬ್ 26ನೇ ವಾರ್ಷಿಕೋತ್ಸವ ಅಂಗವಾಗಿ ಪ್ರೆಸ್ ಕ್ಲಬ್ ಡೇ ಕಾರ್ಯಕ್ರಮದಲ್ಲಿ  ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ, ಒತ್ತಡದ ಬದುಕಿಗೆ ವಿರಾಮ ನೀಡಿ ಮನೋಲ್ಲಾಸ ಪಡೆಯವ ನಿಟ್ಟಿನಲ್ಲಿ ಈ ಕಾರ್ಯಕ್ರಮ ರೂಪಿಸಲಾಯಿತು. ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರೆಸ್ ಕ್ಲಬ್ ಒಂದಾಗಿ ನಡೆಯುತ್ತಿದೆ. ಇದರಿಂದ ಪತ್ರಕರ್ತರಲ್ಲಿ ಒಗ್ಗಟ್ಟು ಮತ್ತಷ್ಟು ಹೆಚ್ಚಾಗಿದೆ ಎಂದರು. ಯುವ ಕಾಂಗ್ರೆಸ್ ನಾಯಕ ಮೈಸಿ ಕತ್ತಣಿರ ಮಾತನಾಡಿ, ಜಿಲ್ಲೆಯ ಪತ್ರಕರ್ತರು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿದ್ದಾರೆ. ದೇಶದ ಆಧಾರಸ್ತಂಭಗಳ ಪೈಕಿ ಮಾಧ್ಯಮ ಪ್ರಮುಖವಾಗಿದ್ದು, ಸದೃಢ, ಸುಭದ್ರ ಸಮಾಜಕ್ಕೆ ಪತ್ರಕರ್ತರ ಪಾತ್ರ ಮಹತ್ತರವಾಗಿದೆ. ಸಮಾಜದ ಸಕಾರತ್ಮಕ ಬದಲಾವಣೆಯಾಗಬೇಕಾದರೆ ಮಾಧ್ಯಮ ಕ್ಷೇತ್ರದ ಅಗತ್ಯ ಹೆಚ್ಚಿದೆ…

Read More

ಮಡಿಕೇರಿ ಡಿ.30 NEWS DESK : ಕ್ರೈಸ್ತ ಧರ್ಮ ಹಾಗೂ ಏಸು ಕ್ರಿಸ್ತರ ಕುರಿತು ಅವಹೇಳನ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಸಂತ ಮೈಕಲರ ಚರ್ಚ್ ಎದುರು ಜಮಾಯಿಸಿದ ಅಸೋಸಿಯೇಷನ್ ಪ್ರಮುಖರು ಹಾಗೂ ಪದಾಧಿಕಾರಿಗಳು, ದಿವ್ಯ ಬಲಿ ಪೂಜೆ ಮೂಲಕ ಶಾಂತಿಯುತ ಪ್ರತಿಭಟನೆ ನಡೆಸಿದರು. ಈ ಸಂದರ್ಭ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮಡಿಕೇರಿ ತಾಲ್ಲೂಕು ಘಟಕದ ಉಪಾಧ್ಯಕ್ಷ ಮೈಕಲ್ ವೇಗಸ್ ಮಾತನಾಡಿ, ಕ್ರೈಸ್ತರ ಪವಿತ್ರ ಹಬ್ಬವಾದ ಕ್ರಿಸ್‍ಮಸ್ ದಿನದಂದು ಸಾಮಾಜಿಕ ಜಾಲತಾಣದಲ್ಲಿ ಕೆಲ ಕಿಡಿಗೇಡಿಗಳು ಕ್ರೈಸ್ತ ಧರ್ಮ ಹಾಗೂ ಏಸು ಕ್ರಿಸ್ತರ ಕುರಿತು ಅವಹೇಳನ ಪದಗಳನ್ನು ಬಳಸಿ ನಿಂದನೆ ಮಾಡಿ ಸಂದೇಶ ಹರಿಬಿಟ್ಟಿದ್ದಾರೆ. ಸೌಹರ್ದತೆಯಲ್ಲಿರುವ ಕೊಡಗು ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸುವ ಕೆಲಸಕ್ಕೆ ಕೈಹಾಕುತ್ತಿರುವುದು ವಿಷಾದನೀಯ ಎಂದರು. ಈಗಾಗಲೇ ಐದು ತಾಲ್ಲೂಕುಗಳಲ್ಲಿಯೂ ಪೊಲೀಸ್ ದೂರು ನೀಡಿ ಬಂಧನಕ್ಕೆ ಆಗ್ರಹಿಸಲಾಗಿದ್ದು, ಶಾಂತಿಯನ್ನು ಸಾರುವ ಕ್ರೈಸ್ತ ಸಮುದಾಯಕ್ಕೆ ಕಾನೂನು ಮೇಲೆ ವಿಶ್ವಾಸವಿದೆ ಎಂದು…

Read More

ನಾಪೋಕ್ಲು ಡಿ.30 NEWS DESK : ನಾಪೋಕ್ಲು ಕೊಡವ ಸಮಾಜದ ಬೆಳ್ಳಿ ಹಬ್ಬದ ಆಚರಣೆ ಅಂಗವಾಗಿ ಮಾರುಕಟ್ಟೆ ಆವರಣದಿಂದ ಆರಂಭಗೊಂಡ ಮೆರವಣಿಗೆ ವೀಕ್ಷಕರ ಗಮನ ಸೆಳೆಯಿತು. ಸುಮಾರು ಒಂದು ಗಂಟೆಗಳ ಕಾಲ ಸಾಗಿದ ಮೆರವಣಿಗೆಯಲ್ಲಿ ಕೊಡವ ಸಂಸ್ಕೃತಿಯ ವೈವಿಧ್ಯಮಯ ಕಲೆಗಳು ಅನಾವರಣಗೊಂಡವು. ಕೊಡವ ವಾಲಗಕ್ಕೆ ಸಾಂಪ್ರದಾಯಿಕ ಉಡುಗೆತೊಡುಗೆಯೊಂದಿಗೆ ನರ್ತಿಸುತ್ತಾ ಮೆರವಣಿಗೆಯಲ್ಲಿ ಸಾಗಿ ಸಂಭ್ರಮಿಸಿದರು. ಸ್ಥಳೀಯ ಮಾರುಕಟ್ಟೆ ಆವರಣದ ಬಳಿ ಕೊಡವ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮೈಸೂರು ಕೊಡವ ಸಮಾಜದ ಅಧ್ಯಕ್ಷ ಪೊಂಜಾಂಡ ಎ. ಗಣಪತಿ ಗಾಳಿಗೆ ಗುಂಡು ಹೊಡೆಯುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭಾ ಕಾರ್ಯಕ್ರಮ :: ಕೊಡವ ಸಮಾಜದಲ್ಲಿ ಆಯೋಜಿಸಿದ ಸಭಾ ಕಾರ್ಯಕ್ರಮದಲ್ಲಿ ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ. ನಾಣಯ್ಯ ಅಧ್ಯಕ್ಷತೆಯಲ್ಲಿ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಮೈಸೂರು ಕೊಡವ ಸಮಾಜದ ಅಧ್ಯಕ್ಷ ಪೊಂಜಾಂಡ ಎ.ಗಣಪತಿ ಪಾಲ್ಗೊಂಡು ಮಾತನಾಡಿ ಕೊಡವ ಸಂಸ್ಕೃತಿಯ ಆಚಾರ, ವಿಚಾರ, ಸಂಸ್ಕೃತಿ ತುಂಬ ಪುರಾತನವಾಗಿದ್ದು, ಅದನ್ನು ಉಳಿಸಿ…

Read More

ವಿರಾಜಪೇಟೆ ಡಿ.30 NEWS DESK : ಮಲೆತಿರಿಕೆ ಶ್ರೀ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಶ್ರಿ ಅಯ್ಯಪ್ಪ ಸ್ವಾಮಿ ದೇವಾಲಯದ ವಾರ್ಷಿಕ ಪೂಜಾ ಮಹೋತವವು ಡಿ.30, 31 ಹಾಗೂ 1 ರಂದು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಜರುಗಲಿದೆ. ಇಂದು (ಡಿ.30) ರಂದು ಬೆಳಿಗ್ಗೆ ಮತ್ತು ರಾತ್ರಿ ವಿಶೇಷ ಪೂಜೆ, ಡಿ.31 ರಂದು ಬೆಳಿಗ್ಗೆ ಮತ್ತು ರಾತ್ರಿ ವಿಶೇಷ ಪೂಜೆಗಳು ನಡೆಯಲಿದೆ. ಜ.1 ರಂದು ಮುಂಜಾನೆ 5.30ಕ್ಕೆ ಗಣಪತಿ ಹೋಮ, ಲಕ್ಷ್ಮೀ ಪೂಜೆ, ಸರಸ್ವತಿ ಪೂಜೆ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ತುಲಭಾರ ಸೇವೆ ಆರಂಭವಾಗಲಿದೆ. 10 ಗಂಟೆಗೆ ಲಕ್ಷಾರ್ಚನೆ ಸೇವೆ ನಡೆಯಲಿದ್ದು, ಮಧ್ಯಾಹ್ನ 12.30 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಗೆ ಮಹಾಪೂಜೆ ನಡೆಯಲಿದೆ. ನಂತರ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಹಾಗೂ ಭಕ್ತರಿಗೆ ಅನ್ನಸಂತರ್ಪಣೆ ಜರುಗಲಿದೆ. ಸಂಜೆ 6.3ಕ್ಕೆ ಶ್ರೀ ಸ್ವಾಮಿಯ ಚಲನವಲನ, ಕಥಾ ಸಾರಂಶ ಒಳಗೊಂಡ ಶೋಭಾಯಾತ್ರೆಯು ನಗರದ ಮುಖ್ಯ ಬೀದಿಗಳಲ್ಲಿ ಸಂಚರಿಸಲಿದೆ. ಮೆರವಣಿಗೆಯ ಅಂಗವಾಗಿ ದೀಪಾರತಿ, ಶ್ರೀ ಮತ್ಸ್ಯ ಅವತಾರ…

Read More

ಮಡಿಕೇರಿ NEWS DESK ಡಿ.30 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದಲ್ಲಿ ಉಂಟಾಗಿರುವ ಎರಡು ಜನಾಂಗಗಳಲ್ಲಿನ ಭಿನ್ನಾಭಿಪ್ರಾಯ ಶಮನಕ್ಕೆ ಜಿಲ್ಲಾಡಳಿತ ಡಿ.30 ರಂದು ಉಭಯ ಕಡೆಯವರ ಶಾಂತಿ ಸಭೆ ಕರೆದಿದ್ದು, ಎಲ್ಲರೂ ಶಾಂತಿಯುತವಾಗಿ ಸಮಸ್ಯೆಯನ್ನು ಬಗೆಹರಿಸಲು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕೆಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮನವಿ ಮಾಡಿದ್ದಾರೆ. ಈಗಾಗಲೇ ದೇವಾಲಯದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಯಾರಾದರು ಶಾಂತಿಭಂಗ ಮಾಡಲು ಯತ್ನಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಪರಿಸ್ಥಿತಿಯನ್ನು ಶಾಂತಿಯುತವಾಗಿ ನಿಭಾಯಿಸಲು ಅವಕಾಶವಿದ್ದರೂ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಜನಾಂಗಗಳ ವಿರುದ್ಧ ಅವಹೇಳನ ಮಾಡುತ್ತಿರುವುದು ಕಂಡು ಬಂದಿದೆ. ಸಮಾಜದಲ್ಲಿ ಅಶಾಂತಿ ಮೂಡಿಸುವವರ ಪರ ಯಾರೂ ನಿಲ್ಲಬಾರದು. ಸಮಸ್ಯೆಯನ್ನು ಬಗೆಹರಿಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಇದೆ. ಯಾರ ಮೇಲೂ ನಂಬಿಕೆ ಇಲ್ಲದಿದ್ದರೆ ಕಾನೂನಿನ ಮೊರೆ ಹೋಗಬಹುದು. ಪ್ರಕರಣದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅನವಶ್ಯಕ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಎಲ್ಲರೂ ಶಾಂತಿಯನ್ನು ಕಾಪಾಡಬೇಕು, ಶಾಂತಿಭಂಗ ಮಾಡಿದರೆ…

Read More

ಮಡಿಕೇರಿ ಡಿ.30 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಕೊಮ್ಮೆತೋಡು ಹಾತೂರು ರಸ್ತೆಯ ದುರಸ್ತಿ ಕಾಮಗಾರಿಯು ಭರದಿಂದ ಸಾಗಿದೆ.  ಈ ಭಾಗದಲ್ಲಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಯು ತೀವ್ರ ಹಾನಿಗೊಳಗಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ವಿಶೇಷ ಅನುದಾನವನ್ನು ತರಿಸುವಲ್ಲಿ ಯಶಸ್ವಿಯಾಗಿದ್ದು, ಗುಣಮಟ್ಟದ ರಸ್ತೆ ಕಾಮಗಾರಿಯನ್ನು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಕಾಮಗಾರಿ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿ ಜನ ಸಂಚಾರಕ್ಕೆ ಮುಕ್ತವಾಗಲಿದೆ. ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಶಾಸಕ ಎ.ಎಸ್.ಪೊನ್ನಣ್ಣ ಅವರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More