ಮಡಿಕೇರಿ ಡಿ.30 NEWS DESK : ಮಡಿಕೇರಿ ಕೊಡವ ಸಮಾಜದ ಪುತ್ತರಿ ನಮ್ಮೆರ ಊರೊರ್ಮೆ ಸಮಾರಂಭವು ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಾಜದ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಾಲಿಬೆಟ್ಟ ಟಾಟಾ ಕಾಫಿ ಸಂಸ್ಥೆಯ ಮೆನೆಜಿಂಗ್ ಡೈರೆಕ್ಟರ್ ಪೆಮ್ಮಂಡ ಎ.ಮಂದಣ್ಣ, ಕೊಡಗಿನ ಪುತ್ತರಿ ಹಾಗೂ ಕೈಲ್ ಪೊಳ್ದ್ ಹಬ್ಬದ ಆಚರಣೆಯ ಹಿಂದೆ ಸಾಂಪ್ರದಾಯಿಕ ಭತ್ತದ ಕೃಷಿ ಮರೆಯಾಗುತ್ತಿರುವುದು ವಿಷಾದನೀಯ. ಭತ್ತದ ಕೃಷಿ ಇಲ್ಲದೆ ಹಬ್ಬ ಆಚರಣೆ ಅರ್ಥಹೀನವಾಗುವುದರಿಂದ ಸಂಘ ಸಂಸ್ಥೆಗಳು, ಸಮಾಜಗಳು ಭತ್ತದ ಕೃಷಿಗೆ ಹೆಚ್ಚಿನ ಒತ್ತು ನೀಡುವಂತಾಗಬೇಕೆಂದರು. ಅಧ್ಯಕ್ಷರಾದ ಮಂಡುವಂಡ ಮುತ್ತಪ್ಪ ಮಾತನಾಡಿ ಒಗ್ಗಟ್ಟಿನಲ್ಲಿ ಬಲವಿದೆ ಎಂಬಂತೆ ಒಗ್ಗಟ್ಟು ಇದ್ದರೆ ಮಾತ್ರ ಕೊಡವ ಜನಾಂಗ ಉಳಿಯಲು ಸಾಧ್ಯ. ಮರಗೋಡುವಿನ ಕಟ್ಟೆಮಾಡುವಿನ ಮಹಾಮೃತ್ಯುಂಜಯ ದೇವಾಲಯದ ವಾರ್ಷಿಕ ಉತ್ಸವದಲ್ಲಿ ಕೊಡವರ ಉಡುಪನ್ನು ಅವಮಾನಿಸಿರುವುದು ಖಂಡನೀಯ. ಎಲ್ಲರ ಸಹಕಾರದಿಂದ ಮಡಿಕೇರಿ ಕೊಡವ ಸಮಾಜ ಅಭಿವೃದ್ಧಿಯ ಜೊತೆ ಹಲವು ಕಾರ್ಯಕ್ರಮಗಳನ್ನು ನಡೆಸುತ್ತ ಬರುತ್ತಿದೆ ಎಂದರು. ಸಭಾ ಕಾರ್ಯಕ್ರಮಕ್ಕೂ ಮುನ್ನ…
ಲೇಖಕ: admin
ಮಡಿಕೇರಿ NEWS DESK ಡಿ.30 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಐದು ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಜಾಥಾ ನಡೆಸುವ ಸಾಧ್ಯತೆಗಳಿರುವುದರಿಂದ ಮುಂಜಾಗೃತಾ ಕ್ರಮವಾಗಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಎರಡು ಜನಾಂಗಗಳ ನಡುವಿನ ಭಿನ್ನಾಭಿಪ್ರಾಯದಿಂದ ಗೊಂದಲ ಸೃಷ್ಟಿಯಾಗಿದ್ದು, ಉಭಯ ಗುಂಪು ಸೋಮವಾರ ಕಟ್ಟೆಮಾಡಿಗೆ ಜಾಥಾ ನಡೆಸುವ ಕುರಿತು ಹೇಳಿಕೆ ನೀಡಿರುವ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡಲು ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಶಾಂತಿಯನ್ನು ಕಾಪಾಡಲು ಜಿಲ್ಲಾಡಳಿತ ಮನವಿ ಮಾಡಿದೆ.
ಮಡಿಕೇರಿ ಡಿ.30 NEWS DESK : ಅಖಿಲ ಕೊಡಗು ಅಮ್ಮ ಕೊಡವ ಸಮಾಜದವರು ಆಯೋಜಿಸಿರುವ ಪುತ್ತರಿ ನಮ್ಮೆ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿ, ಮಾತನಾಡಿ ಅಮ್ಮ ಕೊಡವ ಸಮಾಜದ ಕೊಡುಗೆ ಈ ನಾಡಿಗೆ ಅಪಾರವಾದದ್ದು. ವಿಶಿಷ್ಟವಾದ ಸಂಸ್ಕೃತಿ ಹಾಗೂ ಆಚರಣೆಯನ್ನು ಹೊಂದಿರುವ ಅಮ್ಮ ಕೊಡವ ಸಮುದಾಯದವರು ಮತ್ತಷ್ಟು ಏಳಿಗೆಯನ್ನು ಕಾಣುವಂತಾಗಲಿ ಎಂದು ಶುಭ ಕೋರಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ಅಖಿಲ ಅಮ್ಮ ಕೊಡವ ಸಮಾಜದ ಅಧ್ಯಕ್ಷ ಬಾನಂಡ ಎನ್. ಪ್ರತ್ಯು, ಹಿರಿಯ ನ್ಯಾಯಾಧೀಶರು, ಜಿಲ್ಲಾ ಸತ್ರ ನ್ಯಾಯಾಲಯ ಮೈಸೂರು ಅಮೃತ್ತೀರ ಶಿಲ್ಪಾ ಗಣೇಶ್ ಹಾಗೂ ಆಡಳಿತ ಮಂಡಳಿ ಉಪಸ್ಥಿತರಿದ್ದರು.
ಮಡಿಕೇರಿ NEWS DESK ಡಿ.29 : ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಡಿ.24ರ ಸಂಜೆ ಸೇನಾ ವಾಹನ ಪ್ರಪಾತಕ್ಕೆ ಉರುಳಿದ ದುರಂತದಲ್ಲಿ ಕೊಡಗಿನ ಯೋಧ ದಿವಿನ್(28) ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ನಿಧನ ಹೊಂದಿದರು. ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರದ ನಿವಾಸಿ ದಿವಂಗತ ಪ್ರಕಾಶ್-ಜಯ ದಂಪತಿ ಪುತ್ರ ದಿವಿನ್ ಮೃತ ದುರ್ದೈವಿ. ಸ್ಥಿತಿ ಚಿಂತಾಜನಕ ಸ್ಥಿತಿಯಲ್ಲಿದ್ದ ದಿವಿನ್ ಅವರನ್ನು ಶ್ರೀನಗರ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ದಿವಿನ್ ತಾಯಿ ಜಯ ಅವರು ಗುರುವಾರ ಸಂಜೆ ಶ್ರೀನಗರಕ್ಕೆ ತೆರಳಿದ್ದರು. ದಿವಿನ್ ತನ್ನ ತಾಯಿಗೆ ಏಕೈಕ ಆಸರೆಯಾಗಿದ್ದು, 10 ವರ್ಷದ ಹಿಂದೆ ಸೇನೆಗೆ ಸೇರಿದ್ದರು. ಇತ್ತೀಚೆಗೆ ನಿಶ್ಚಿತಾರ್ಥ ಕೂಡ ನೆರವೇರಿದ್ದು, 2025ರ ಫೆಬ್ರವರಿಯಲ್ಲಿ ವಿವಾಹ ನಿಶ್ಚಿಯವಾಗಿತ್ತು. ಆಮಂತ್ರಣ ಪತ್ರವೂ ಮುದ್ರಣಗೊಂಡಿದೆ. ಆಲೂರು ಸಿದ್ದಾಪುರ ಗ್ರಾಮದಲ್ಲಿ ಶೋಕ ಮಡುಗಟ್ಟಿದ್ದು, ಸೋಮವಾರ ಅಥವಾ ಮಂಗಳವಾರ ಪಾರ್ಥೀವ ಶರೀರ ಕೊಡಗಿಗೆ ಬರುವ ಸಾಧ್ಯತೆಗಳಿದೆ. ಮಡಿಕೇರಿ ಶಾಸಕ ಡಾ.ಮಂತರ್…
ಮಡಿಕೇರಿ NEWS DESK ಡಿ.29 : ಮರಗೋಡಿನ ಕಟ್ಟೆಮಾಡು ಶ್ರೀ ಮೃತ್ಯುಂಜಯ ದೇವಾಲಯದಲ್ಲಿ ನಡೆದ ಘಟನೆಯನ್ನು ಮಡಿಕೇರಿ ಕೊಡವ ಸಮಾಜ ತೀವ್ರವಾಗಿ ಖಂಡಿಸಿದೆ. ಮಡಿಕೇರಿಯ ಮಂದ್ ನಲ್ಲಿ ಕೊಡವ ಸಮಾಜದ ವತಿಯಿಂದ ನಡೆದ ಪುತ್ತರಿ ಕೋಲಾಟ್ ಕಾರ್ಯಕ್ರಮದ ನಂತರ ಸಮಾಜದ ಪ್ರಮುಖರು ಘಟನೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು. ಕೊಡವ ಜನಾಂಗದವರು ಪ್ರಾಚೀನ ಕಾಲದಿಂದಲೂ ಕೊಡವ ಸಾಂಪ್ರದಾಯಿಕ ಉಡುಗೆಯೊಂದಿಗೆ ದೇವಾಲಯಕ್ಕೆ ತೆರಳುವುದು ಮತ್ತು ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಳ್ಳುವ ಸಂಪ್ರದಾಯವಿದೆ. ಆದರೆ ಕಟ್ಟೆಮಾಡು ಗ್ರಾಮದಲ್ಲಿ ಜನಾಂಗವೊAದರ ವ್ಯಕ್ತಿಗಳು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ತೆರಳಿದವರನ್ನು ದೇವಾಲಯ ಪ್ರವೇಶಿಸದಂತೆ ಅಡ್ಡಿ ಪಡಿಸಿದ್ದಾರೆ ಎಂದು ಪ್ರಮುಖರು ಆರೋಪಿಸಿದರು. ಮುಂದಿನ ದಿನಗಳಲ್ಲಿ ಈ ವಿಚಾರವಾಗಿ ನಡೆಯುವ ಹೋರಾಟಗಳಿಗೆ ಮಡಿಕೇರಿ ಕೊಡವ ಸಮಾಜ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಘೋಷಿಸಿದರು. ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಎಂ.ಪಿ.ಮುತ್ತಪ್ಪ, ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕನ್ನಂಡ ಕವಿತ ಬೊಳ್ಳಪ್ಪ, ಮಾಜಿ ಜಂಟಿಕಾರ್ಯದರ್ಶಿ ಶಾಂತೆಯಂಡ ಸನ್ನಿ ಪೂವಯ್ಯ, ಬೊಪ್ಪಂಡ ಶ್ಯಾಂ ಪೂಣಚ್ಚ, ಕಲಿಯಂಡ ಸರಸ್ವತಿ ಮಾತನಾಡಿದರು.
ಮಡಿಕೇರಿ NEWS DESK ಡಿ.29 : ಕೊಡಗಿನ ಗೌಡ ಸಮಾಜಗಳ ಮತ್ತು ಗೌಡ ಸಂಘಟನೆಗಳ ಪ್ರಮುಖರ ಸಭೆ ಮಡಿಕೇರಿಯ ಗೌಡ ಸಮಾಜದಲ್ಲಿ ನಡೆಯಿತು. ಕಟ್ಟೆಮಾಡು ಶ್ರೀ ಮೃತ್ಯುಂಜಯ ದೇವಾಲಯದಲ್ಲಿ ನಡೆದ ಘಟನೆಯ ಕುರಿತು ಸಭೆ ಕೆಲವು ನಿರ್ಣಯಗಳನ್ನು ಕೈಗೊಂಡಿತು. ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದಲ್ಲಿ 1 ವರ್ಷದ ಹಿಂದೆ ನೂತನವಾಗಿ ನಿರ್ಮಾಣಗೊಂಡ ಮಹಾ ಮೃತ್ಯುಂಜಯ ಕ್ಷೇತ್ರದ ಪ್ರಥಮ ವಾರ್ಷಿಕೋತ್ಸವದ ಅಂತಿಮ ಹಂತದಲ್ಲಿ ದೇವಸ್ಥಾನದ ಕಟ್ಟುಪಾಡುಗಳನ್ನು ಹಾಗೂ ಸರ್ವ ಭಕ್ತಾದಿಗಳ ಸಮ್ಮತಿ ಮೇರೆ ಆಚರಣೆಯಲ್ಲಿದ್ದ ಬೈಲಾದ ನಿಯಮಗಳನ್ನು ಉಲ್ಲಂಘಿಸಿದ ಕ್ರಮವನ್ನು ಕೊಡಗಿನ ಸಮಸ್ತ ಗೌಡ ಜನತೆ ಖಂಡಿಸುವುದು. ಸಾಮಾಜಿಕ ಜಾಲತಾಣಗಳಲ್ಲಿ ಗೌಡ ಜನಾಂಗವನ್ನು ಅತ್ಯಂತ ಕೀಳು ಶಬ್ದಗಳಿಂದ ಜರೆದಿರುವ ವ್ಯಕ್ತಿಗಳ ವಿರುದ್ಧ ಹಾಗೂ ದೇವಸ್ಥಾನದ ಆವರಣದಲ್ಲಿ ಮಾರಕಾಸ್ತçವನ್ನು ತೋರಿಸಿದ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸುವುದು. ಗೌಡ ಜನಾಂಗವನ್ನು ಜಾತಿ ನಿಂದನೆ ಮಾಡಿರುವ ಸಂಘಟನೆಯೊAದರ ವ್ಯಕ್ತಿಯ ವಿರುದ್ಧ ಖಂಡನಾ ನಿರ್ಣಯ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದು. ಸಾಮಾಜಿಕ…
ಕುಶಾಲನಗರ NEWS DESK ಡಿ.29 : ನಿರಂತರ ಜಾಗೃತಿಯಿಂದ ಕಾವೇರಿ ನದಿ ಸಂರಕ್ಷಣೆ ಸಾಧ್ಯ ಎಂದು ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯುವ ಬ್ರಿಗೇಡ್ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಕಾವೇರಿ ನಮನ ಕಾರ್ಯಕ್ರಮ ಅಂಗವಾಗಿ ಭಾನುವಾರ ಕುಶಾಲನಗರ ಕಾವೇರಿ ಸೇತುವೆ ಕೆಳಭಾಗದಲ್ಲಿ ಸಾಂಕೇತಿಕವಾಗಿ ನದಿ ಸ್ವಚ್ಛತಾ ಕಾರ್ಯಕ್ರಮ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ನದಿ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹರಿಯುವ ನದಿ ಕೋಟ್ಯಂತರ ಜನ ಜಾನುವಾರುಗಳಿಗೆ ಹಲವು ರೀತಿಯಲ್ಲಿ ನಿತ್ಯ ಹಾಸು ಹೊಕ್ಕಾಗಿದ್ದು, ಕಾವೇರಿಯನ್ನು ಕಲುಷಿತಗೊಳಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದ ಅವರು, ಇದರ ಪ್ರತಿಫಲವನ್ನು ಮುಂದಿನ ದಿನಗಳಲ್ಲಿ ನಾವುಗಳೇ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಕಾವೇರಿ ನೀರನ್ನು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸೆಲೆಯಾಗಿ ಬಳಸುತ್ತಿದ್ದು ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಆದರೆ ಮೂಲ ಕಾವೇರಿಯಿಂದ ಜೀವನದಿಯನ್ನು ಸ್ವಚ್ಛ ಶುದ್ಧ ಮಾಡುವ ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ ಎಂದರು. ವೃಷಭಾವತಿ ನದಿ ರೀತಿಯಲ್ಲಿ ಕಾವೇರಿ ನದಿಯ ಅವನತಿ…
ಮಡಿಕೇರಿ NEWS DESK ಡಿ.29 : ಬ್ರಹ್ಮಾಕುಮಾರೀಸ್ ಲೈಟ್ ಹೌಸ್ ಸಭಾಂಗಣದಲ್ಲಿ ಇಂದು ಈಶ್ವರೀಯ ಸೇವೆಯ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಧ್ಯಾನ ಕಾರ್ಯಕ್ರಮ ನಡೆಯಿತು. ಪದ್ಮಶ್ರೀ ಪ್ರಶಸ್ತಿ ವಿಜೇತ ಕಲಾವಿದೆ ರಾಣಿ ಮಾಚಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವೃದ್ದಾಪ್ಯದಲ್ಲಿ ಮಾತಾಪಿತರನ್ನು ತುಂಬಾ ಪ್ರೀತಿಯಿಂದ ಜೋಪಾನವಾಗಿ ಪಾಲನೆ ಮಾಡುವುದು ಬಹಳ ಅವಶ್ಯಕವಾಗಿದೆ. ಯಾವುದೇ ರೀತಿಯಲ್ಲಿ ಅವರನ್ನು ದೂರ ಮಾಡುವ ಸಂದರ್ಭ ಅಥವಾ ಘಟನೆಗಳು ಎದುರಾದಲ್ಲಿ ಹಿತನುಡಿಗಳನ್ನು ಆಡಿ ಆ ಸಂಬಂಧವನ್ನು ಸರಿಪಡಿಸುವ ಕುರಿತು ಕಿವಿಮಾತು ಹೇಳಿದರು. ಪರಮಾತ್ಮನ ನೆನಪಿನ ಮೂಲಕ ಮನ:ಶಾಂತಿಗಾಗಿ ಹಾಗೂ ಜನರ ಉತ್ತಮ ಆರೋಗ್ಯಕ್ಕಾಗಿ ರಾಜಯೋಗದ ಅಗತ್ಯ ಎಷ್ಟಿದೆ, ಅದರ ಅಭ್ಯಾಸದಿಂದ ಜೀವನದಲ್ಲಿ ಅಪಾರ ಪ್ರಾಪ್ತಿಯನ್ನು ಮಾಡಿಕೊಳ್ಳುವ ಕುರಿತು ಕಳೆದ 44 ವರ್ಷಗಳಿಂದ ನಿರಂತರವಾಗಿ ಕೊಡಗಿನ ಜನರಿಗೆ ಜಾಗೃತಿಯನ್ನು ಮೂಡಿಸುತ್ತಾ ಬರುತ್ತಿರುವ ಈ ಸೇವೆಯ ಸ್ಮರಣಾರ್ಥವಾಗಿ ವಿಶೇಷ ಧ್ಯಾನದ ಕಾರ್ಯಕ್ರಮವನ್ನು ಜಿಲ್ಲಾ ಸಂಚಾಲಕರಾದ ರಾಜಯೋಗಿನಿ ಬಿ.ಕೆ.ಗಾಯತ್ರೀಜಿ ಅವರ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು. ಜಿಲ್ಲೆಯ 5 ಸೇವಾಕೇಂದ್ರಗಳ ಮುಖ್ಯ ಶಿಕ್ಷಕಿ…
ಮಡಿಕೇರಿ NEWS DESK ಡಿ.29 : ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ಗ್ರಾಮೋತ್ಸವಮ್ ಥ್ರೋ ಬಾಲ್ ಫೈನಲ್ ಪಂದ್ಯದಲ್ಲಿ ತಮಿಳುನಾಡಿನ ಪಿಜಿ ಪುದುರ್ ತಂಡವನ್ನು ಮಣಿಸಿದ ಕೊಡಗಿನ ಮರಗೋಡು ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಚಾಂಪಿಯನ್ ತಂಡಕ್ಕೆ ಆಕರ್ಷಕ ಟ್ರೋಫಿ ಹಾಗೂ ರೂ.5 ಲಕ್ಷ ನಗದು ಬಹುಮಾನ ನೀಡಲಾಯಿತು. ಈಶ ಫೌಂಡೇಶನ್ ನ ಆದಿಯೋಗಿ ಮೈದಾನದಲ್ಲಿ ರೋಚಕ ಫೈನಲ್ ಪಂದ್ಯಾವಳಿ ನಡೆಯಿತು. ವಿಜೇತರಿಗೆ ಸದ್ಗುರು ಹಾಗೂ ಅಂತರಾಷ್ಟ್ರೀಯ ಕ್ರಿಕೆಟ್ ತಾರೆಯರಾದ ವೀರೇಂದ್ರ ಸೆಹ್ವಾಗ್, ವೆಂಕಟೇಶ್ ಪ್ರಸಾದ್ ಬಹುಮಾನ ವಿತರಿಸಿದರು. ಪಂದ್ಯಾವಳಿಯಲ್ಲಿ ದೇಶದ ವಿವಿಧ ತಂಡಗಳು ಭಾಗವಹಿಸಿದ್ದವು.
ಕುಶಾಲನಗರ NEWS DESK ಡಿ.29 : ಯುವ ಪೀಳಿಗೆ ಜೀವನದ ಬಹುತೇಕ ಸಮಯವನ್ನು ಸಮಾಜದ ಒಳಿತಿಗಾಗಿ, ದೇಶದ ಅಭಿವೃದ್ಧಿಗಾಗಿ ಮೀಸಲಿಡಬೇಕು ಎಂದು ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕಾವೇರಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಶಾಲನಗರಕ್ಕೆ ಆಗಮಿಸಿದ ಸಂದರ್ಭ ಅವರು ಕುಶಾಲನಗರ ವಿವೇಕಾನಂದ ಪಿ ಯು ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪ್ರತಿಯೊಬ್ಬರು ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಏಕಾಗ್ರತೆ ಶಿಸ್ತು ದೃಢತೆ ಮೂಲಕ ಗುರಿ ಸಾಧಿಸಲು ಸಾಧ್ಯ ಎಂದ ಅವರು, ಸ್ವಾಮಿ ವಿವೇಕಾನಂದರ ಕೆಲವು ದೃಷ್ಟಾಂತಗಳನ್ನು ನೆನಪಿಸಿದರು. ಹಣದ ವ್ಯಾಮೋಹ ಮರೆತು ತಮ್ಮ ಉದ್ದೇಶಗಳ ಈಡೇರಿಕೆಗೆ ಸದಾ ಚಟುವಟಿಕೆಯಲ್ಲಿರಬೇಕು ಎಂದರು. ಇತ್ತೀಚಿನ ದಿನಗಳಲ್ಲಿ ಯುವಜನತೆಯಲ್ಲಿ ಏಕಾಗ್ರತೆಯ ಕೊರತೆ ಎದ್ದು ಕಾಣುತ್ತಿದೆ. ತರಗತಿಗಳಲ್ಲಿ ವಿದ್ಯಾರ್ಥಿಗಳ ಮನೋಬಲವನ್ನು ಕನಿಷ್ಠ ಅವಧಿ ಕೂಡ ಹಿಡಿದಿಟ್ಟುಕೊಳ್ಳುವಲ್ಲಿ ನಾವು ವಿಫಲರಾಗುತ್ತಿದ್ದೇವೆ. ಕನಿಷ್ಠ ಕೆಲವೇ ಸೆಕೆಂಡುಗಳಷ್ಟು ಅವಧಿಯ ಏಕಾಗ್ರತೆ ಹೊಂದುವ ಮನಸ್ಥಿತಿ ಮಕ್ಕಳಲ್ಲಿ ಇಲ್ಲದಂತಾಗಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಯಾವುದೇ ಕೆಲಸದಲ್ಲಿಯೂ ಹಿಂಜರಿಕೆ…






