ಮಡಿಕೇರಿ ಡಿ.28 NEWS DESK : ಮರಗೋಡಿನ ಕಟ್ಟೆಮಾಡು ಶ್ರೀಮಹಾ ಮೃತ್ಯುಂಜಯ ದೇವಾಲಯದ ಜಾತ್ರಾ ಮಹೋತ್ಸವದಲ್ಲಿ ಕೊಡವ ಸಾಂಪ್ರದಾಯಿಕ ಕುಪ್ಯಚೇಲೆಯನ್ನು ಧರಿಸಿ ದೇವರ ದರ್ಶನ ಪಡೆಯುತ್ತಿದ್ದ ಕೊಡವರನ್ನು ಅವಮಾನಿಸಲಾಗಿದೆ ಮತ್ತು ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿರುವ ವಿವಿಧ ಸಂಘಟನೆಗಳು, ಸಧ್ಯದಲ್ಲಿಯೇ “ಕೊಡವರ ನಡೆ ಕಟ್ಟೆಮಾಡು ಕಡೆ” ಬೃಹತ್ ಜಾಥಾ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿವೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರಾಜಪೇಟೆ ಕೊಡವ ಸಮಾಜದ ಗೌರವ ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್ ಶ್ರೀಮಹಾ ಮೃತ್ಯುಂಜಯ ದೇವಾಲಯದಲ್ಲಿ ನಡೆದ ಘಟನೆಯನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು. ರಾಜಕೀಯ ಹಿನ್ನೆಲೆಯುಳ್ಳ ಕೆಲವು ಅನಾಗರೀಕ ವ್ಯಕ್ತಿಗಳು ಕೊಡವ ಜನಾಂಗದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ಮಾಡಿದ್ದು, ಕೊಡವ ಮಹಿಳೆಯರನ್ನು ಅವಮಾನಿಸಲಾಗಿದೆ, ಕೆಲವರ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಿದರು. ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಅಪಮಾನ ಮಾಡಿರುವುದನ್ನು ಖಂಡಿಸಿ ನಡೆಸಿದ ಹೋರಾಟಕ್ಕೆ ಒಂದು ಜನಾಂಗ ಬೆಂಬಲ ನೀಡಿರಲಿಲ್ಲ. ಕೊಡವರು ಎಂದಿಗೂ ಅವರ ವಿರೋಧಿಗಳಲ್ಲ, ಮೊದಲು ಆ ಜನಾಂಗ ಒಂದು ಬಾರಿ…
ಲೇಖಕ: admin
ಮಡಿಕೇರಿ NEWS DESK ಡಿ.28 : ಮರಗೋಡಿನ ಕಟ್ಟೆಮಾಡು ಶ್ರೀಮಹಾ ಮೃತ್ಯುಂಜಯ ದೇವಾಲಯದ ಜಾತ್ರಾ ಮಹೋತ್ಸವದಲ್ಲಿ ಕೊಡವ ಸಾಂಪ್ರದಾಯಿಕ ಕುಪ್ಯಚೇಲೆಯನ್ನು ಧರಿಸಿ ದೇವರ ದರ್ಶನ ಪಡೆಯುತ್ತಿದ್ದ ಕೊಡವರನ್ನು ಅವಮಾನಿಸಿರುವ ಮತ್ತು ಕುಪ್ಯಚೇಲೆಯನ್ನು ಅಗೌರವಿಸಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ನ ಅಧ್ಯಕ್ಷ ಹಂಚೆಟ್ಟಿರ ಮನು ಮುದ್ದಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿವಿಧತೆಯಲ್ಲಿ ಏಕತೆಯನ್ನು ಸಾರುವ ಭಾರತೀಯ ಸಂಸ್ಕೃತಿಯಲ್ಲಿ ಸಾಂಪ್ರದಾಯಿಕ ಉಡುಗೆ ತೊಡುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ದೇವಾಲಯಗಳು ಊರಿನ ಜನರನ್ನು ಒಗ್ಗೂಡಿಸುವ ಶ್ರದ್ಧಾಭಕ್ತಿಯ ಕೇಂದ್ರವಾಗಿದೆ. ಆದರೆ ದೇವಾಲಯದಲ್ಲೇ ಜನಾಂಗ ಜನಾಂದ ನಡುವೆ ಒಡಕು ಮೂಡಿಸುವ ಪ್ರಯತ್ನ ಮಾಡಿರುವುದು ವಿಷಾದನೀಯವೆಂದು ತಿಳಿಸಿದ್ದಾರೆ. ಕೊಡವರು ತಮ್ಮ ಸಂಸ್ಕೃತಿ, ಆಚಾರ, ವಿಚಾರಗಳನ್ನು ಉಳಿಸುವುದಕ್ಕಾಗಿ ಸಾಂಪ್ರದಾಯಿಕ ಕುಪ್ಯಚೇಲೆಯನ್ನು ಧರಿಸಿ ದೇವಾಲಯಗಳಿಗೆ ತೆರಳುತ್ತಾರೆಯೇ ಹೊರತು ಯಾರನ್ನೂ ನೋಯಿಸುವುದಕ್ಕಾಗಿ ಅಲ್ಲ. ಈ ಸಂಪ್ರದಾಯ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಕಟ್ಟೆಮಾಡು ಶ್ರೀಮಹಾ ಮೃತ್ಯುಂಜಯ ದೇವಾಲಯದಲ್ಲಿ ಕೆಲವರು ಕುಪ್ಯಚೇಲೆ ಧರಿಸಿದ ಕೊಡವರನ್ನು ನೋಯಿಸಿದ್ದಾರೆ.…
ನಾಪೋಕ್ಲು ಡಿ.28 NEWS DESK : ನಾಪೋಕ್ಲು ಸಹಕಾರಿ ದವಸ ಭಂಡಾರದ ನೂತನ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಹಕಾರಿ ದವಸ ಭಂಡಾರದ ಕಟ್ಟಡದಲ್ಲಿ ನಡೆದ ಚುನಾವಣೆಯಲ್ಲಿ ಕಂಗಂಡ ಎಂ.ಪೂವಪ್ಪ, ಶಿವಚಾಳಿಯಂಡ ಬೋಪಣ್ಣ, ಕುಲ್ಲೇಟಿರ ಅರುಣ್ ಬೇಬ, ಶಿವಚಾಳಿಯಂಡ ಶುಭಾಷ್ ಸೋಮಯ್ಯ, ಕುಲ್ಲೇಟಿರ ತಮ್ಮಯ್ಯ, ಅರೆಯಡ ವಿನೋದ್, ಪಾಡಿಯಮ್ಮಡ ಮಹೇಶ್, ಬೊಪ್ಪಂಡ ಕಾಳಪ್ಪ, ಅಮ್ಮಂಡ ಅಶೋಕ್, ಅಜ್ಜೆಟಿರ ರಾಣಿ ಪಳಂಗಪ್ಪ, ಕುಂಬಂಡ ಚಿತ್ರ ಲೋಕನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ಕಕ್ಕಬ್ಬೆ ಗ್ರಾಮ ಪಂಚಾಯಿತಿಯ ಗ್ರಾಮ ಅಭಿವೃದ್ಧಿ ಅಧಿಕಾರಿ ಅಶೋಕ್ ಕಾರ್ಯ ನಿರ್ವಹಿಸಿದರು. ಸಹಕಾರಿ ದವಸ ಭಂಡಾರದ ಕಾರ್ಯದರ್ಶಿ ಕುಂಬಂಡ ಕೇಶವ ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಡಿ.28 NEWS DESK : ಪಟ್ಟಣದಲ್ಲಿ ಆಟೋ ಚಾಲಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಪರಿಹಾರಕ್ಕಾಗಿ ಪಂಚಾಯಿತಿ ಇತರ ಇಲಾಖೆಗಳಿಗೆ ಮನವಿ ಸಲ್ಲಿಸಿದರು. ಆದರೂ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂದು ಆರೋಪಿಸಿರುವ ಆಟೋ ಚಾಲಕರು ಡಿ.30 ರಂದು ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಆಟೋ ಚಾಲಕರ ಸಂಘದ ಅಧ್ಯಕ್ಷ ಟಿ.ಪಿ.ಸುಕುಮಾರ್ ಹೇಳಿದರು. ಸ್ಥಳಿಯ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಳಿಗ್ಗೆ 10.30ಕ್ಕೆ ಗ್ರಾಮ ಪಂಚಾಯಿತಿ ಎದುರು ಆಟೊಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಲಾಗುವುದೆಂದರು. ಪಟ್ಟಣದಲ್ಲಿ ಆಟೋ ಚಾಲಕರು ಸೂಕ್ತ ನಿಲ್ದಾಣ ಇಲ್ಲದೆ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇಲ್ಲಿನ ಅಪ್ಪಚ ಕವಿ ರಸ್ತೆಯಲ್ಲಿ ಆಟೋ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಅಲ್ಲಿ ಖಾಸಗಿ ವಾಹನಗಳು ನಿಲುಗಡೆ ಮಾಡುತ್ತಿರುವುದರಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ಹೇಳಿದರು. ಆಟೋಗಳ ನಿಲುಗಡೆಗಾಗಿ ನಾಪೋಕ್ಲು-ಮಡಿಕೇರಿ ಮುಖ್ಯರಸ್ತೆಯಲ್ಲಿ 120 ಮೀಟರ್ ಅಂತರದ ಸ್ಥಳ ಅವಕಾಶ ಕಲ್ಪಿಸಿ ಕೊಡುವಂತೆ ಈ ಹಿಂದೆ…
ದೆಹಲಿ ಡಿ.28 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಭಾರತದ ಆರ್ಥಿಕ ಸುಧಾರಣೆಗಳ ಹರಿಕಾರ, ಮುತ್ಸದ್ದಿ ನಾಯಕ, ಮಾಜಿ ಪ್ರಧಾನಿ ದಿವಂಗತ ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಅಗಲಿದ ಚೇತನಕ್ಕೆ ಅಂತಿಮ ನಮನ ಸಲ್ಲಿಸಿದರು.
ವಿರಾಜಪೇಟೆ ಡಿ.28 NEWS DESK : ಆರ್ಜಿ ಗ್ರಾಮದ ಶ್ರೀ ಸ್ವಾಮಿ ಅಯ್ಯಪ್ಪ ಭಜನಾ ಮಂದಿರದಲ್ಲಿ ಶ್ರೀ ಅಯ್ಯಪ್ಪ ಸ್ಪಾಮಿಯ ವಾರ್ಷಿಕ ಮಂಡಲ ಪೂಜಾ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು. ಮುಂಜಾನೆಯಿಂದಲೇ ಗಣಪತಿ ಹೋಮ ಸೇರಿದಂತೆ ವಿವಿಧ ಪೂಜೆ ಹಾಗೂ ಭಜನೆ ಜರುಗಿತು. ಮಧ್ಯಾಹ್ನ ಮಹಾಪೂಜೆ ಬಳಿಕ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಸಂಜೆ ಭಜನಮಂದಿರಲ್ಲಿ ದೀಪಾರಾಧನೆ ನಡೆಯಿತು. ಶ್ರೀ ಸ್ವಾಮಿಯ ಭಾವಚಿತ್ರವಿರಿಸಿದ ಪಲ್ಲಕ್ಕಿಯೊಂದಿಗೆ ಅಯ್ಯಪ್ಪ ಮಾಲದಾರಿಗಳು ಭಜನ ಮಂದಿರದಿಂದ ಮೆರವಣಿಗೆಯಲ್ಲಿ ಸಾಗಿದರು. ಮೆರವಣಿಗೆಯಲ್ಲಿ ಮಹಿಳೆಯರು ಸೇರಿದಂತೆ ಮಕ್ಕಳು ದೀಪ ಹೊತ್ತು ಮೆರವಣಿಗೆಗೆ ಮೆರಗು ನೀಡಿದರು. ಶ್ರೀ ಅಯ್ಯಪ್ಪ ಸ್ವಾಮಿ ಬೇಟೆಗೆ ಹೊರಡುವ ವಿರಾಟ್ ರೂಪದ ಸ್ತಬ್ಧ ಚಿತ್ರ ಶೋಭ ಯಾತ್ರೆಯ ಪ್ರಮುಖ ಆಕರ್ಷಣೆಯಾಗಿತ್ತು. ಈ ಸಂದರ್ಭ ಶ್ರೀ ಸ್ವಾಮಿ ಅಯ್ಯಪ್ಪ ಭಜನಾ ಮಂದಿರದ ಆಡಳಿತ ಮಂಡಳಿಯ ಅಧ್ಯಕ್ಷ ಮಹೇಶ್, ಉಪಾಧ್ಯಕ್ಷ ಉಮೇಶ್, ಕಾರ್ಯದರ್ಶಿ ಶಿವಪ್ಪ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಪೆರುಂಬಾಡಿ, ಆರ್ಜಿ ಗ್ರಾಮ ಬಾಳುಗೋಡು, ಬಿಟ್ಟಂಗಾಲ ಸೇರಿದಂತೆ ನಗರದ…
ಕುಶಾಲನಗರ NEWS DESK ಡಿ.27 : ದ್ವಿಚಕ್ರ ವಾಹನ ಮತ್ತು ಟಿಟಿ ನಡುವೆ ಡಿಕ್ಕಿ ಸಂಭವಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಶಾಲನಗರ- ಹಾರಂಗಿ ರಸ್ತೆಯಲ್ಲಿ ನಡೆದಿದೆ. ಕುಶಾಲನಗರ ಪುರಸಭೆ ವ್ಯಾಪ್ತಿಯ ಶ್ರೀರಾಮ್ ಬಡಾವಣೆಯ ಜೈರಾಮ್ ಹಾಗೂ ಸವಿತ ದಂಪತಿಯ ಕಿರಿಯ ಪುತ್ರ ಕವಿರತ್ನ(20) ಮೃತ ಯುವಕ. ಕುಶಾಲನಗರದ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಮತ್ತು ಎದುರಿನಿಂದ ಬರುತ್ತಿದ್ದ ಟಿಟಿ ನಡುವೆ ಅಪಘಾತ ಸಂಭವಿಸಿದೆ. ಮೃತ ಕವಿರತ್ನ ಸೇರಿದಂತೆ ಸ್ಕೂಟರ್ ನಲ್ಲಿ ಮೂವರು ಯುವಕರಿದ್ದರು ಎಂದು ಹೇಳಲಾಗಿದೆ. ಇಬ್ಬರು ಗಾಯಾಳುಗಳನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮೃತ ಕವಿರತ್ನ ಇಬ್ಬರು ಸಹೋದರಿಯರು ಹಾಗೂ ಪೋಷಕರನ್ನು ಅಗಲಿದ್ದಾನೆ. ಕುಶಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ NEWS DESK ಡಿ.27: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಡಿ.24ರ ಸಂಜೆ ಸೇನಾ ವಾಹನ ಪ್ರಪಾತಕ್ಕೆ ಉರುಳಿದ ದುರಂತದಲ್ಲಿ ಕೊಡಗಿನ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರದ ನಿವಾಸಿ ದಿವಂಗತ ಪ್ರಕಾಶ್-ಜಯ ದಂಪತಿ ಪುತ್ರ ದಿವಿನ್(28) ಗಾಯಗೊಂಡಿರುವ ಯೋಧ. ದಿವಿನ್ ಸ್ಥಿತಿ ಚಿಂತಾಜನಕವಾಗಿದ್ದು, ಶ್ರೀನಗರ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಭಾರತೀಯ ಸೇನೆಯಿಂದ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ದಿವಿನ್ ತಾಯಿ ಜಯ ಅವರು ಗುರುವಾರ ಸಂಜೆ ಶ್ರೀನಗರಕ್ಕೆ ತೆರಳಿದ್ದಾರೆ. ಇನ್ನಷ್ಟೇ ದಿವಿನ್ ಆರೋಗ್ಯದ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ದಿವಿನ್ ತನ್ನ ತಾಯಿಗೆ ಏಕೈಕ ಆಸರೆಯಾಗಿದ್ದು, 10 ವರ್ಷದ ಹಿಂದೆ ಸೇನೆಗೆ ಸೇರಿದ್ದರು. ಇತ್ತೀಚೆಗೆ ನಿಶ್ಚಿತಾರ್ಥ ಕೂಡ ನೆರವೇರಿದ್ದು, 2025ರ ಫೆಬ್ರವರಿಯಲ್ಲಿ ವಿವಾಹ ನಿಶ್ಚಿಯವಾಗಿತ್ತು. ಆಮಂತ್ರಣ ಪತ್ರವೂ ಮುದ್ರಣಗೊಂಡಿದೆ.
ಕಣಿವೆ ಡಿ.27 NEWS DESK : ಆರಕ್ಷಕ ಉಪನಿರೀಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ನಾಕೂರು ಶಿರಂಗಾಲ ಗ್ರಾಮದ ಲಿತೇಶ್ ರಾಜ್ಯ ಮಟ್ಟದಲ್ಲಿ 24 ನೇ ರ‍್ಯಾಂಕ್ ಗಳಿಸಿ ವಿಶೇಷ ಸಾಧನೆ ತೋರಿದ್ದಾರೆ. ಇವರು ಸುಂಟಿಕೊಪ್ಪ ಬಳಿಯ ನಾಕೂರು ಶಿರಂಗಾಲ ಗ್ರಾಮದ ನಿವಾಸಿ ಕೃಷಿಕ ರಾಮಯ್ಯ ಹಾಗೂ ತಿಲಕ ದಂಪತಿಗಳ ಪುತ್ರ .
ಕೊಡ್ಲಿಪೇಟೆ ಡಿ.27 NEWS DESK : ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಸಮೀಪದ ಶಾಲಾ ಆವರಣದಲ್ಲಿರುವ ಕಿರಿಕೊಡ್ಲಿ ಮಠದ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲಿ ಲೋಕಕಲ್ಯಾಣಾರ್ಥವಾಗಿ ಶ್ರೀ ಕ್ಷೇತ್ರ ಕಿರಿಕೊಡ್ಲಿ ಮಠದ ಪೂಜ್ಯರಾದ ಲಿಂಗೈಕ್ಯ ಶ್ರೀ ಗುರುಸಿದ್ದ ಸ್ವಾಮಿಯ ಸಂಸ್ಮರಣ ಧಾರ್ಮಿಕ ಕಾರ್ಯಕ್ರಮವನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು. ಲೋಕಕಲ್ಯಾಣಾರ್ಥವಾಗಿ ರುದ್ರಾಭಿಷೇಕ, ಗಣಪತಿ ಹೋಮ, ರುದ್ರ ಹೋಮ,ಸಹಸ್ರ ಬಿಲ್ವಾರ್ಚನ ಕಾರ್ಯಕ್ರಮ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯ ನಡೆಯಿತು. ಕಿರಿಕೊಡ್ಲಿ ಮಠದ ಮಠಾಧ್ಯಕ್ಷ ಸದಾಶಿವ ಸ್ವಾಮೀಜಿಗಳ ನೇತೃತ್ವದಲ್ಲಿ ಹಲವು ಮಠಾಧೀಶರುಗಳು ಚರ ಮೂರ್ತಿಗಳು ಪಾಲ್ಗೊಂಡು ಧಾರ್ಮಿಕ ಕೈಂಕೈರ್ಯಗಳನ್ನು ನೆರವೇರಿಸಿದರು. ಸ್ವಸ್ತಿ ಶ್ರೀ ವಿಜಯ ಅಭ್ಯುದಯ ಶಾಲಿವಾಹನ ಶಕ1946 ನೇನೇ ಕ್ರೋಧಿನಾಮ ಸಂವತ್ಸರ ದಕ್ಷಿಣ ಯಾಣೆ ಹೇಮಂತ ಋತು ಮಾರ್ಗಶಿರ ಮಾಸ ಕೃಷ್ಣ ಪಕ್ಷ ದ್ವಾದಶಿ ತಿಥಿ ಶುಕ್ರವಾರ ವಿಶಾಖ ನಕ್ಷತ್ರ ದೃಥಿನಾಮ ಯೋಗ ಅಂಗವಾಗಿ ಬೆಳಿಗ್ಗೆ ಗಂಗಾ ಪೂಜೆ ಹಾಗೂ ಗಣಪತಿ ಪೂಜೆಯೊಂದಿಗೆ ಸ್ವಾಮಿಗೆ ರುದ್ರಾಭಿಷೇಕ ನಡೆಯಿತು. ದೇವರಿಗೆ ವಿವಿಧ ಧಾರ್ಮಿಕ ಪೂಜೆಗಳೊಂದಿಗೆ ಧಾನ್ಯಗಳನ್ನು ಇಟ್ಟು…






