ಭಾಗಮಂಡಲ ಡಿ.27 NEWS DESK : ಚೇರಂಗಾಲ ಗ್ರಾಮದ ಶ್ರೀ ಈಶ್ವರ ಭಗವತಿ ದೇವಾಲಯದ ವಾರ್ಷಿಕ ಪೂಜೆಯು ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದಲೇ ದೇವರಿಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿತು. ನಂತರ ವಿಶೇಷ ಮಹಾಪೂಜೆ ನೆರವೇರಿತು. ಪೂಜಾ ಕಾರ್ಯವು ರವಿ ಭಟ್ ಅವರ ನೇತೃತ್ವದಲ್ಲಿ ನಡೆಯಿತು. ಬಳಿಕ ತಕ್ಕರಾದ ಶಿರಕಜೆ ಸುಂದರ ಅವರ ನೇತೃತ್ವದಲ್ಲಿ ಗ್ರಾಮಸ್ಥರಿಂದ ಕೋಲಾಟ ನಡೆಯಿತು. ಭಾಗಮಂಡಲದ ಶ್ರೀ ಕಾವೇರಿ ಆಟೋ ಚಾಲಕರ ಸಂಘದ ಸದಸ್ಯರಿಂದ ಅನ್ನ ಸಂತರ್ಪಣೆ ನೆರವೇರಿತು. ಈ ಸಂದರ್ಭ ದೇವಾಲಯದ ಅಧ್ಯಕ್ಷರು ಹೊಸೂರು ಸತೀಶ್ ಕುಮಾರ್, ಕಾರ್ಯದರ್ಶಿ ಮತ್ತಾರಿ ರಾಜ, ಗ್ರಾ.ಪಂ ಸದಸ್ಯ ಶಿರಕಜೆ ನಾಗೇಶ್, ಸಂಘದ ಸದಸ್ಯರಾದ ಶಿರಕಜೆ ಟಿ.ಭವನ್ ಕುಮಾರ್, ಕುಂಬನ ರವಿಂದ್ರ, ಮೂಲೆಮಜಲು ಸುದಿ, ಪರಿವಾರ ಸಂತೋಷ್, ಶಿರಕಜೆ ತನುರಾಜ್, ಶಿರಕಜೆ ಪವನ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಲೇಖಕ: admin
ಮಡಿಕೇರಿ ಡಿ.27 NEWS DESK : ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆ 7 ದಿನಗಳ ಕಾಲ ಶೋಕಾಚರಣೆ ಇರುವುದರಿಂದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಹಕಾರದಲ್ಲಿ ಹಾಗೂ ಕೊಡಗು ಗೌಡ ವಿದ್ಯಾ ಸಂಘ ವತಿಯಿಂದ ಇದೇ ಡಿ.29 ರಂದು ನಡೆಯಬೇಕಿದ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮವು ಜನವರಿ 12 ಕ್ಕೆ ಮುಂದೂಡಲಾಗಿದೆ ಎಂದು ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ತಿಳಿಸಿದ್ದಾರೆ.
ಮಡಿಕೇರಿ ಡಿ.27 NEWS DESK : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ಮಹದೇಶ್ವರ ಕ್ಷೇತ್ರದ ಜಾತ್ರೋತ್ಸವದ ವಿಶೇಷ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ನೆರವೇರಿತು. ಮುಂಜಾನೆಯಿಂದಲೇ ಕವಾಟ ಪೂಜೆ, ತೈಲಾಭ್ಯಂಜನ, ಪಂಚಾಮೃತ ಅಭಿಷೇಕ, ಮಧ್ಯಾಹ್ನ ಧ್ವಜಸ್ತಂಭ ಪೂಜೆ, ಮಹಾಪೂಜೆ ಹಾಗೂ ತೀರ್ಥಪ್ರಸಾದ ವಿತರಣೆ ಜರುಗಿತು. ನಂತರ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಸಂಜೆ ನಂದಿಪಾರೆ ಕಾವೇರಿಯಲ್ಲಿ ದೇವರ ಜಳಕ ನಡೆಯಿತು. ಸಂಜೆ 6 ಗಂಟೆಗೆ ದೇವಾಲಯದ ಹೊರಾಂಗಣದಲ್ಲಿ ದೇವರ ನೃತ್ಯಬಲಿ, ನಡೆಭಂಡಾರ, 7.30 ಗಂಟೆಗೆ ಧ್ವಜಾವರೋಹಣ, ರಾತ್ರಿ 8.30 ಗಂಟೆಗೆ ಮಹಾಪೂಜೆ, ತೀರ್ಥಪ್ರಸಾದ ವಿತರಣೆ, 9 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ. ಡಿ.28 ರಂದು ಬೆಳಿಗ್ಗೆ 10.30 ಗಂಟೆಗೆ ನವಕ ಕಲಶ ಪೂಜೆ, ಅಭಿಷೇಕ, ಪಂಚಾಮೃತ ಅಭಿಷೇಕ, ಮಧ್ಯಾಹ್ನ 12.15 ಗಂಟೆಗೆ ಮಹಾಪೂಜೆ, ತೀರ್ಥಪ್ರಸಾದ ವಿತರಣೆ, ಮಂತ್ರಾಕ್ಷತೆ, 1 ಗಂಟೆಗೆ ಅನ್ನಸಂರ್ಪಣೆ ನೆರವೇರಲಿದೆ ದೇವಾಲಯ ಸಮಿತಿಯ ಅಧ್ಯಕ್ಷ ಶಶಿ ಜನಾರ್ಧನ ಮಾಹಿತಿ ನೀಡಿದ್ದಾರೆ.
ಮಡಿಕೇರಿ NEWS DESK ಡಿ.27 : ಮಹತ್ವಾಕಾಂಕ್ಷೆಯ ಮೈಸೂರು-ಕುಶಾಲನಗರ ಹೆದ್ದಾರಿ ಯೋಜನೆಯ ಸಾಕಾರಕ್ಕಾಗಿ ಕಾಮಗಾರಿ ನಡೆಯುವ ಪ್ರದೇಶದ ಮರಗಳನ್ನು ತೆರವುಗೊಳಿಸಲು ತಕ್ಷಣ ಅನುಮತಿ ನೀಡಬೇಕೆಂದು ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ಅರಣ್ಯ ಸಚಿವ ಈಶ್ವರ್ ಖ0ಡ್ರೆ ಅವರ ಬಳಿ ಮನವಿ ಮಾಡಿದ್ದಾರೆ. ಮರಗಳನ್ನು ತೆರವುಗೊಳಿಸುವುದರಿಂದ ಕಾಮಗಾರಿ ವೇಗವನ್ನು ಪಡೆದುಕೊಳ್ಳುತ್ತದೆ. ಯೋಜನೆ ಪೂರ್ಣಗೊಂಡರೆ ಸಂಪರ್ಕ ವ್ಯವಸ್ಥೆ ಸುಧಾರಿಸುತ್ತದೆ, ಪ್ರಯಾಣದ ಸಮಯ ಕಡಿಮೆಯಾಗುತ್ತದೆ. ಮೈಸೂರು ಮತ್ತು ಕೊಡಗು ಪ್ರದೇಶಗಳಲ್ಲಿ ಆರ್ಥಿಕ ಅವಕಾಶಗಳನ್ನು ಹೆಚ್ಚಿಸುತ್ತದೆ. ಉತ್ತಮ ಸಂಪರ್ಕ ಮತ್ತು ಸಮೃದ್ಧ ಕರ್ನಾಟಕಕ್ಕಾಗಿ ಹೆದ್ದಾರಿ ಯೋಜನೆ ಶೀಘ್ರ ಅನುಷ್ಠಾನಗೊಳ್ಳುವ ಅಗತ್ಯವಿದೆ ಎಂದು ಯದುವೀರ್ ಒಡೆಯರ್ ವಿವರಿಸಿದ್ದಾರೆ.
ಕುಶಾಲನಗರ ಡಿ.27 NEWS DESK : ಕೂಡುಮಂಗಳೂರು ಗ್ರಾ.ಪಂ ನ ಎರಡನೇ ವಾರ್ಡ್ ನ ಬಸವೇಶ್ವರ ಬಡಾವಣೆಯಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಸಲಾಗಿದ್ದು, ಕಾಮಗಾರಿಯನ್ನು ಪಿಡಿಓ ಸಂತೋಷ್ ಹಾಗೂ ಗ್ರಾ.ಪಂ ಕೆ.ಬಿ.ಶಂಶುದ್ಧೀನ್ ಪರಿಶೀಲನೆ ನಡೆಸಿದರು. ಬಸವೇಶ್ವರ ಬಡಾವಣೆಯ ವಿಜಿ ಅವರ ಮನೆಯಿಂದ ಬೇಬಿ ಅವರ ಮನೆವರೆಗೆ 1.8ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಸಲಾಗಿದೆ. ಕಾಮಗಾರಿ ಪರಿಶೀಲಿಸಿ ಮಾತನಾಡಿದ ವಾರ್ಡ್ ಸದಸ್ಯ ಕೆ.ಬಿ.ಶಂಶುದ್ಧೀನ್, ಕೂಡುಮಂಗಳೂರು ಗ್ರಾ.ಪಂ ನ ಎರಡನೇ ವಾರ್ಡ್ ನಲ್ಲಿ ಬಹಳಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಹಂತಹಂತವಾಗಿ ನಡೆಸುತ್ತಾ ಬರಲಾಗಿದೆ. ವಾರ್ಡ್ ಗೆ ಒಳಪಡುವ ಸುಂದರನಗರ, ವಿನಾಯಕ ಬಡಾವಣೆ, ನವಗ್ರಾಮ ಹಾಗೂ ಬಸವೇಶ್ವರ ಬಡಾವಣೆಯಲ್ಲಿ ಸಮಾನವಾಗಿ ಹಾಗೂ ಆದ್ಯತೆಗೆ ಅನುಗುಣವಾಗಿ ಕಾಮಗಾರಿಗಳನ್ನು ಬಳಸಲಾಗಿದೆ ಎಂದರು. ಈ ಸಂದರ್ಭ ಬಸವೇಶ್ವರ ಬಡಾವಣೆಯ ಗ್ರಾಮಸ್ಥ ಅನೀಶ್, ಗೌರಮ್ಮ, ರಫೀಕ್ ಹಾಗೂ ಇನ್ನಿತರರು ಇದ್ದರು.
ವಿರಾಜಪೇಟೆ ಡಿ.27 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅರ್ಹ ಫಲಾನುಭವಿಗಳಿಗೆ ವಾತ್ಸಲ್ಯ ಕಿಟ್ ವಿತರಣೆ ಮಾಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿರಾಜಪೇಟೆ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರದ ಮಾತೃಶ್ರೀ ಡಾ. ವಿ.ಹೇಮಾವತಿ ಅವರ ವಾತ್ಸಲ್ಯಮಯಿ ಚಿಂತನೆಯಂತೆ ಸಮಾಜದಲ್ಲಿನ ಅತ್ಯಂತ ಆಶಕ್ತ ಹಿರಿಯರನ್ನು ಗುರುತಿಸಿ ತನ್ನ ಕಾರ್ಯಕರ್ತರ ಮೂಲಕ ಮಾಸಿಕವಾಗಿ ಒಂದು ಸಾವಿರದಂತೆ ಮಾಸಾಶನವನ್ನು ನೀಡಿ ವಾತ್ಸಲ್ಯ ಪೌಷ್ಠಿಕಾಂಶ ಭರಿತ ಆಹಾರವನ್ನು ಒದಗಿಸಿ ಒದಗಿಸಲಾಗುವುದು. ಅದರಂತೆ ವಿರಾಜಪೇಟೆ ಪೊನ್ನಂಪೇಟೆ ತಾಲೂಕಿನ ಹದಿನೆಂಟು ಕುಟುಂಬಗಳಿಗೆ ಗೃಹೋಪಯೋಗಿ ಅಗತ್ಯ ಸಾಮಾಗ್ರಿಗಳ ಕಿಟ್‍ಗಳನ್ನು ವಿತರಿಸಲಾಯಿತು. ಕೊಡಗು ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ, ತಾಲ್ಲೂಕು ಯೋಜನಾಧಿಕಾರಿ ಬಿ.ದಿನೇಶ್ ಮತ್ತು ತಾಲ್ಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಆರ್.ಶ್ರೇಯಾ ತಾಲೂಕಿನಾದ್ಯಂತ ಏಕಕಾಲದಲ್ಲಿ ವಿತರಿಸಿದರು.
ಮಡಿಕೇರಿ NEWS DESK ಡಿ.27 : ಯೇಸುಕ್ರಿಸ್ತರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸೌತ್ ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಕಿಡಿಗೇಡಿಯೊಬ್ಬ ಕ್ರಿಸ್‌ಮಸ್ ಹಬ್ಬದ ಕುರಿತು ಅಗೌರವದ ಪೋಸ್ಟ್ ಮಾಡಿರುವುದಲ್ಲದೆ ಯೇಸುಕ್ರಿಸ್ತರನ್ನು ಕೀಳಾಗಿ ಕಂಡಿದ್ದಾನೆ. ಈತನ ಹೇಳಿಕೆಗೆ ಬೆಂಬಲವಾಗಿ ಮತ್ತೊಬ್ಬ ಕಿಡಿಗೇಡಿ ಅವಹೇಳನಾಕಾರಿ ಪೋಸ್ಟ್ ಮಾಡಿದ್ದಾನೆ. ಇದು ಸಮಾಜದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನವಾಗಿದ್ದು, ಪೊಲೀಸರು ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕ್ರಿಶ್ಚಿಯನ್ ಅಸೋಸಿಯೇಷನ್ ನ ಪ್ರಮುಖರು ಒತ್ತಾಯಿಸಿದರು. ಯೇಸುಕ್ರಿಸ್ತರನ್ನು ಅವಹೇಳನ ಮಾಡಿ ಕ್ರೆöÊಸ್ತ ಸಮುದಾಯದ ಭಾವನೆಗೆ ದಕ್ಕೆ ತಂದಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು. ದೂರು ನೀಡುವ ಸಂದರ್ಭ ಸೌತ್ ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ನ ಅಧ್ಯಕ್ಷ ಎ.ಜೆ.ಬಾಬು, ಕಾರ್ಯದರ್ಶಿ ಸಿ.ಜೆ.ಆಂಟೋ, ಖಜಾಂಚಿ ಬೇಬಿ ಜಾರ್ಜ್, ನಿರ್ದೇಶಕರುಗಳಾದ ಅಂತೋಣಿ ರಾಬಿನ್, ವರ್ಗೀಸ್ ಪಿ.ಒ, ದಾದು ಜೋಸೆಫ್, ಥಾಮಸ್ ಮನ್ನಾರತ್ ಮತ್ತಿತರರು…
ಮಡಿಕೇರಿ ಡಿ.27 NEWS DESK : ನಗರದ ಹೊಸ ಬಡಾವಣೆಯಲ್ಲಿರುವ ಶ್ರೀ ಪ್ರಸನ್ನ ಗಣಪತಿ ದೇವಾಲಯದ ಇಪ್ಪತ್ತನಾಲ್ಕನೇ ವಾರ್ಷಿಕೋತ್ಸವವು ಡಿ.29 ರಂದು ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಗೆ ಪ್ರಸನ್ನ ಗಣಪತಿಗೆ ಎಳನೀರು ಅಭಿಷೇಕ, ಪಂಚಾಮೃತ ಅಭಿಷೇಕ, ಕ್ಷೇರಾಭಿಷೇಕ ಮತ್ತು ಅಲಂಕಾರ ಪೂಜೆ ನಡೆಯಲಿದ್ದು, 9.30 ಗಂಟೆಗೆ ಸ್ಥಳ ಶುದ್ಧಿ, ಪುಣ್ಯಾಹ, 10 ಗಂಟೆಗೆ ಮಹಾಗಣಪತಿ ಹೋಮ ಹಾಗೂ ನವಕ ಕಳಸ ಪೂಜೆ ಜರುಗಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, 1 ಗಂಟೆಗೆ ಅನ್ನ ಸಂತರ್ಪಣೆ ನೆರವೇರಲಿದ್ದು, ಸಂಜೆ 5 ಗಂಟೆಗೆ ಭಜನಾ ಕಾರ್ಯಕ್ರಮ, 7 ಗಂಟೆಗೆ ರಂಗಪೂಜೆ, 7.30 ಗಂಟೆಗೆ ಮಹಾಪೂಜೆ, 8 ಗಂಟೆಗೆ ಪ್ರಸಾದ ವಿತರಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಅಧ್ಯಕ್ಷರು, ಆಡಳಿತಮಂಡಳಿ ಸದಸ್ಯರು ಮನವಿ ಮಾಡಿದ್ದಾರೆ.
ಮಡಿಕೇರಿ ಡಿ.27 NEWS DESK : ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸಂತಾಪ ಸೂಚಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರುಗಳು, ಸಂಸದರು, ಶಾಸಕರು, ಪಕ್ಷದ ನಾಯಕರುಗಳೊಂದಿಗೆ ಪಾಲ್ಗೊಂಡು ಡಾ.ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅಂತಿಮ ನಮನ ಸಲ್ಲಿಸಿದರು.
ನಾಪೋಕ್ಲು ಡಿ.27 NEWS DESK : ನಾಪೋಕ್ಲು ಕೊಡವ ಸಮಾಜದ ಬೆಳ್ಳಿ ಹಬ್ಬ ಡಿ.28 ಮತ್ತು 29ರಂದು ವಿಜೃಂಭಣೆಯಿಂದ ನಡೆಯಲಿದೆ ಎಂದು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಹೇಳಿದರು. ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಾಪೋಕ್ಲು ಕೊಡವ ಸಮಾಜ 1997 ರಲ್ಲಿ ಸ್ಥಾಪನೆಯಾಗಿದ್ದು, 2022ಕ್ಕೆ 25 ವರ್ಷಗಳನ್ನು ಪೂರೈಸಿದೆ. ಕಾರಣಾಂತರಗಳಿಂದ ಬೆಳ್ಳಿ ಹಬ್ಬವನ್ನು ಆಚರಿಸಲು ಸಾಧ್ಯವಾಗಲಿಲ್ಲ. ಇದೀಗ ಹೊಸ ಆಡಳಿತ ಮಂಡಳಿಯು ಬೆಳ್ಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಕಾರ್ಯ ಪ್ರವೃತ್ತವಾಗಿದೆ ಎಂದರು. ಬೆಳ್ಳಿ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಜಿ ಮಂತ್ರಿ ಮೇರಿಯಂಡ ಸಿ.ನಾಣಯ್ಯ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕೊಡವ ಸಮಾಜ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಕೆ. ಸುಬ್ರಮಣಿ, ಕೊಡವ ಸಮಾಜದ ಮಾಜಿ ಅಧ್ಯಕ್ಷ ಮಣವಟ್ಟಿರ ಬಿ.ಮಾಚಯ್ಯ, ಬ್ಲೂ ಡಾರ್ಟ್ ಈ ಕಾಮರ್ಸ್ ಗುಂಪಿನ ದಕ್ಷಿಣ ಭಾರತದ ಪ್ರಾದೇಶಿಕ ನಿವೃತ್ತ ಮುಖ್ಯಸ್ಥ ಬಾಳೆಯಡ ಕರುಣ್ ಕಾಳಪ್ಪ ಪಾಲ್ಗೊಳ್ಳಲಿದ್ದಾರೆ…






