ನಾಪೋಕ್ಲು ಡಿ.27 NEWS DESK : ನಾಪೋಕ್ಲು ಕೊಡವ ಸಮಾಜದ ಬೆಳ್ಳಿ ಹಬ್ಬ ಡಿ.28 ಮತ್ತು 29ರಂದು ವಿಜೃಂಭಣೆಯಿಂದ ನಡೆಯಲಿದೆ ಎಂದು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ ಹೇಳಿದರು. ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಾಪೋಕ್ಲು ಕೊಡವ ಸಮಾಜ 1997 ರಲ್ಲಿ ಸ್ಥಾಪನೆಯಾಗಿದ್ದು, 2022ಕ್ಕೆ 25 ವರ್ಷಗಳನ್ನು ಪೂರೈಸಿದೆ. ಕಾರಣಾಂತರಗಳಿಂದ ಬೆಳ್ಳಿ ಹಬ್ಬವನ್ನು ಆಚರಿಸಲು ಸಾಧ್ಯವಾಗಲಿಲ್ಲ. ಇದೀಗ ಹೊಸ ಆಡಳಿತ ಮಂಡಳಿಯು ಬೆಳ್ಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಕಾರ್ಯ ಪ್ರವೃತ್ತವಾಗಿದೆ ಎಂದರು. ಬೆಳ್ಳಿ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಜಿ ಮಂತ್ರಿ ಮೇರಿಯಂಡ ಸಿ.ನಾಣಯ್ಯ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಕೊಡವ ಸಮಾಜ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಕೆ. ಸುಬ್ರಮಣಿ, ಕೊಡವ ಸಮಾಜದ ಮಾಜಿ ಅಧ್ಯಕ್ಷ ಮಣವಟ್ಟಿರ ಬಿ.ಮಾಚಯ್ಯ, ಬ್ಲೂ ಡಾರ್ಟ್ ಈ ಕಾಮರ್ಸ್ ಗುಂಪಿನ ದಕ್ಷಿಣ ಭಾರತದ ಪ್ರಾದೇಶಿಕ ನಿವೃತ್ತ ಮುಖ್ಯಸ್ಥ ಬಾಳೆಯಡ ಕರುಣ್ ಕಾಳಪ್ಪ ಪಾಲ್ಗೊಳ್ಳಲಿದ್ದಾರೆ…
ಲೇಖಕ: admin
ಮಡಿಕೇರಿ NEWS DESK ಡಿ.27 : ಅಪರಾಧ ಪ್ರಕರಣಗಳ ಪತ್ತೆಯಲ್ಲಿ ಪೊಲೀಸ್ ಇಲಾಖೆಗೆ ಹೆಚ್ಚು ಪರಿಣಾಮಕಾರಿಯಾಗಿ ಸಹಾಯ ಮಾಡಬಲ್ಲ ವಿಭಾಗಗಳಲ್ಲಿ ಶ್ವಾನದಳವೂ ಒಂದು. ಕ್ಲಿಷ್ಟಕರ ಪ್ರಕರಣಗಳನ್ನು ಸುಲಭವಾಗಿ ಬೇಧಿಸಲು ಕೊಡಗು ಜಿಲ್ಲೆಯ ದಕ್ಷ ಪೊಲೀಸ್ ಅಧಿಕಾರಿಗಳಿಗೆ ಶ್ವಾನದಳದ ಕಾಪರ್ ಹಾಗೂ ಬ್ರೂನೊ ಶ್ವಾನಗಳು ಹೆಚ್ಚು ಸಹಕಾರಿಯಾಗಿವೆ. ಮಾದಕ ವಸ್ತುಗಳ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಕಾಪರ್ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದ್ದು, ಪೊಲೀಸ್ ಇಲಾಖೆಯಿಂದ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದೆ. ಅಪರಾಧ ಪತ್ತೆಯಲ್ಲಿ ಬ್ರೂನೊ ಶ್ವಾನ ರಾಜ್ಯದಲ್ಲಿಯೇ ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿ ಕಂಚಿನ ಪದಕಕ್ಕೆ ಭಾಜನವಾಗಿದೆ.NEWS DESK ಕೊಡಗು ಜಿಲ್ಲಾ ಪೊಲೀಸ್ ನ ಜಿಲ್ಲಾ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಎರಡು ಶ್ವಾನಗಳಿಗೆ ಪದಕ ಹಾಗೂ ಪ್ರಶಂಸನಾ ಪತ್ರ ಪ್ರದಾನ ಮಾಡಿದರು. ಸ್ವತ: ಕಾಪರ್ ಹಾಗೂ ಬ್ರೂನೊ ಪದಕ ಪಡೆದುಕೊಳ್ಳುವ ಮೂಲಕ ನೆರೆದಿದ್ದವರ ಚಪ್ಪಾಳೆ ಗಿಟ್ಟಿಸಿಕೊಂಡವು. ಮುAದಿನ ವರ್ಷ ಫೆಬ್ರವರಿ ತಿಂಗಳಿನಲ್ಲಿ ಜಾರ್ಕಂಡ್ ರಾಜ್ಯದ ರಾಂಚಿಯಲ್ಲಿ…
ನಾಪೋಕ್ಲು ಡಿ.27 NEWS DESK : ಮೈಸೂರು ಕೊಡಗು ಗೌಡ ಸಮಾಜದ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರಿನ ವಕೀಲರು ಹಾಗೂ ಪತ್ರಿಕಾ ಪ್ರತಿನಿಧಿ ಜವರೇ ಗೌಡರು ಕ್ಯಾಲೆಂಡರ್ ಬಿಡುಗಡೆ ಮಾಡಿ ಸಮಾಜ ಕೈಗೊಂಡಿರುವ ಉತ್ತಮ ಕಾರ್ಯಕ್ರಮದ ಜೊತೆಗೆ ಕ್ಯಾಲೆಂಡರ್ ಕೂಡ ಮಾಡಿರುವುದು ಸಂತೋಷದಾಯಕ ಎಂದರು. ಕಾರ್ಯಕ್ರಮದಲ್ಲಿ ಸಮಾಜದ ಉಪಾಧ್ಯಕ್ಷ ಕುದುಪಜೆ ಚಂದ್ರಶೇಖರ್, ಕಾರ್ಯದರ್ಶಿ ಪೊನ್ನೇಟಿ ನಂದ, ಖಜಾಂಚಿ ನಡುಬೆಟ್ಟಿ ಲಕ್ಷ್ಮಣ, ನಿರ್ದೇಶಕರಾದ ಪಟ್ಟಡ ಶಿವಕುಮಾರ್, ಪಾಣತ್ತಲೆ ವಸಂತ, ಹೊಸೂರು ರಾಘವಯ್ಯ, ಕುಂಟುಪುಣಿ ರಮೇಶ್, ಕುಂಟುಪುಣಿ ಶೀಲಾ, ತೋಂಟಬೈಲು ಇಂದಿರಾ, ವ್ಯವಸ್ಥಾಪಕ ದಾಯನ ನಾಮಧೆಯ, ಮಾಜಿ ಸೈನಿಕ ಸಂಘದ ಅಧ್ಯಕ್ಷ ಚಂಡಿರ ಬಸಪ್ಪ, ಗೌಡ ಮಹಿಳಾ ಸಂಘದ ಅಧ್ಯಕ್ಷ ನಡುಬೆಟ್ಟು ಗೀತಾ ಲಕ್ಷ್ಮಣ, ಗೌಡ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪೊನ್ನಚ್ಚನ ಅಪ್ಪಯ್ಯ ಮೊದಲಾದವರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಡಿ.27 NEWS DESK : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಂತಾಪ ಸೂಚಿಸಲಾಯಿತು. ನಗರದ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಮನಮೋಹನ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಂತಾಪ ಸೂಚಿಸಿದರು. ಈ ಸಂದರ್ಭ ಕಾಂಗ್ರೆಸ್ ಮುಖಂಡ ಟಿ.ಪಿ.ರಮೇಶ್, ಮಂದ್ರಿರ ಮೋಹನ್‍ದಾಸ್, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಮೂಡ ಅಧ್ಯಕ್ಷ ಬಿ.ವೈ.ರಾಜೇಶ್, ಮಾಜಿ ಅಧ್ಯಕ್ಷ ಚುಮ್ಮಿ ದೇವಯ್ಯ, ಮಡಿಕೇರಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಸೇವಾದಳದ ಅಧ್ಯಕ್ಷ ಕಾನೆ ಹಿತ್ಲು ಮೊಣ್ಣಪ್ಪ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಮಾಜಿ ನಗರಸಭಾ ಸದಸ್ಯ ಪ್ರಕಾಶ್ ಆಚಾರ್ಯ, ಪ್ರಮುಖರಾದ ವಿ.ಪಿ.ಸುರೇಶ್, ಸದಾಮುದ್ದಪ್ಪ, ಲೀಲಶೇಷಮ್ಮ ಉಪಸ್ಥಿತರಿದ್ದು, ಮನಮೋಹನ್ ಸಿಂಗ್ ಅವರಿಗೆ…
ಬೆಳಗಾವಿ ಡಿ.27 NEWS DESK : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು. ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿಗಳು, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ರವರು ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ. ನರಸಿಂಹರಾವ್ ಅವರ ಸಂಪುಟದಲ್ಲಿ ಆರ್ಥಿಕ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು. ಉದಾರೀಕರಣದ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳು, ಭಾರತವು ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದರು. ದೇಶದ ಆರ್ಥಿಕತೆಯಲ್ಲಿ ಮನಮೋಹನ್ ಸಿಂಗ್ ರ ಹೆಜ್ಜೆಗುರುತು :: 2004 ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ, ಸೋನಿಯಾ ಗಾಂಧಿಯವರು…
ಮಡಿಕೇರಿ ಡಿ.27 NEWS DESK : ಪ್ರಸ್ತುತ ದಿನಗಳಲ್ಲಿ ಯುವಕರಿಗೆ ಕ್ರೀಡಾಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳಿದ್ದು,ಕ್ರೀಡಾಪಟುಗಳು ಕ್ರೀಡೆಯ ಮೂಲಕ ಬದುಕಟ್ಟಿಕೊಳ್ಳಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಕೆ ಲೋಕೇಶ್ ಕರೆ ನೀಡಿದರು. ಕಂಡಕರೆಯ ಗಾಂಧಿ ಯುವಕ ಸಂಘದಿಂದ ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ರಾಷ್ಟ್ರ ಮಟ್ಟದ ಅಂಡರ್ 20 ಕಾಲ್ಚೆಂಡು ಪಂದ್ಯಾವಳಿಯ ಫೈನಲ್ ಪಂದ್ಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಕ್ರೀಡಾಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಕೊಡಗು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಫುಟ್ಬಾಲ್ ಕ್ರೀಡೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ತೊಡಗಿಕೊಂಡಿದ್ದಾರೆ. 20 ವರ್ಷದೊಳಗಿನ ಯುವಕರಿಗಾಗಿ ನಡೆಯುತ್ತಿರುವ ಕಾಲ್ಚೆಂಡು ಪಂದ್ಯಾವಳಿಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಯುವ ಫುಟ್ಬಾಲ್ ಪಟುಗಳಿಗೆ ಸೂಕ್ತ ವೇದಿಕೆಯಾಗಿದೆ. ಗಾಂಧಿ ಯುವಕ ಸಂಘವು ನಿರಂತರವಾಗಿ ಕ್ರೀಡೆ ಮತ್ತು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಚೆಟ್ಟಳ್ಳಿ ಭಾಗದಲ್ಲಿ ಹೆಸರುವಾಸಿಯಾಗಿದೆ ಎಂದು ವಿ.ಕೆ.ಲೋಕೇಶ್ ಹೇಳಿದರು. ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಹಕೀಂ ಸುಂಟ್ಟಿಕೊಪ್ಪ ಮಾತನಾಡಿ, ಗಾಂಧಿ ಯುವಕ ಸಂಘವು…
ಮಡಿಕೇರಿ ಡಿ.27 NEWS DESK : ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಡಿ.29 ರಂದು ನಡೆಯಬೇಕಿದ್ದ ವಿಶ್ವಮಾನವ ದಿನಾಚರಣೆ ಹಾಗೂ ಜ.1 ನಡೆಯಬೇಕಾಗಿದ್ದ ಅಮರಶಿಲ್ಪಿ ಜಕಣಾಚಾರಿ ಸಂಸ್ಮಾರಣಾ ದಿನ ಕಾರ್ಯಕ್ರಮವನ್ನು ಸರ್ಕಾರದ ಆದೇಶದಂತೆ ರದ್ದುಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಡಿ.27 NEWS DESK : ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಒಂದು ವಾರದತನಕ ಶೋಕಾಚರಣೆ ಇರುವುದರಿಂದ ಇದೇ ಡಿ.29 ರಂದು ಮಾಯಮುಡಿಯಲ್ಲಿ ನಡೆಯಬೇಕಿದ್ದ ತೋಕ್ ನಮ್ಮೆ ಕಾರ್ಯಕ್ರಮವನ್ನು ಜ.5 ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ತಿಳಿಸಿದ್ದಾರೆ.
ಮಡಿಕೇರಿ ಡಿ.27 NEWS DESK : ಕಂಡಕರೆಯ ಗಾಂಧಿ ಯುವಕ ಸಂಘದಿಂದ ಚೆಟ್ಟಳ್ಳಿ ಪ್ರೌಢಶಾಲಾ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ರಾಷ್ಟ್ರ ಮಟ್ಟದ ಅಂಡರ್ 20 ಕಾಲ್ಚೆಂಡು ಪಂದ್ಯಾವಳಿಯಲ್ಲಿ ಸುಂಟ್ಟಿಕೊಪ್ಪದ ಸನ್ಸಬೀಲ್ ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸಿದೆ. ರನ್ನರ್ಸ್ ಪ್ರಶಸ್ತಿಗೆ ಚೋಕ್ ಸಿಟಿ ತಂಡವು ತೃಪ್ತಿಪಟ್ಟುಕೊಂಡಿದೆ. ಜಿದ್ದಾಜಿದ್ದಿನಿಂದ ಕೂಡಿದ್ದ ಫೈನಲ್ ಪಂದ್ಯದಲ್ಲಿ ಸನ್ಸಬೀಲ್ ತಂಡವು ಮೊದಲಾರ್ಧದಲ್ಲೇ ಆಟದಲ್ಲಿ ಸಂಪೂರ್ಣ ಹಿಡಿತವನ್ನು ಸಾಧಿಸಿತ್ತು. ಆಕ್ರಮಣಕಾರಿ ಆಟಕ್ಕೆ ಮುಂದಾಗಿತ್ತು. ಸನ್ಸಬೀಲ್ ತಂಡದ ಆಕ್ರಮಣಕಾರಿ ಆಟಕ್ಕೆ ಬ್ರೇಕ್ ನೀಡುವಲ್ಲಿ ವಿಫಲತೆ ಕಂಡ ಚೋಕ್ ಸಿಟಿ ತಂಡವು 3-0 ಗೋಲುಗಳ ಅಂತರದಿಂದ ಸೋಲುಕಂಡಿತ್ತು. ಇದಕ್ಕೂ ಮೊದಲು ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸನ್ಸಬೀಲ್ ತಂಡವು 4-0 ಗೋಲುಗಳ ಅಂತರದಿಂದ ಗಾಂಧಿ ಎಫ್.ಸಿ ತಂಡದ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸಿತು. ಎರಡನೇ ಸೆಮಿಫೈನಲ್ ಪಂದ್ಯವು ಎಸ್.ಆರ್.ವಿ ಮಡಿಕೇರಿ ಹಾಗೂ ಚೋಕ್ ಸಿಟಿ ತಂಡಗಳ ನಡುವೆ ನಡೆಯಿತು. ಎರಡು ತಂಡಗಳ ಸಮಬಲ ಹೋರಾಟದಿಂದ 1-1 ಗೋಲುಗಳನ್ನು ದಾಖಲಿಸಿ ನಿಗದಿತ…
ಮಡಿಕೇರಿ ಡಿ.27 NEWS DESK : ಕ್ರೀಡಾಕೂಟಗಳಿಂದ ನಾಯಕತ್ವ ಗುಣದೊಂದಿಗೆ ಪರಸ್ಪರ ಸಹೋದರತೆ ಬೆಳೆಯುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೊಸಮನಿ ಪುಂಡಲೀಕ ಹೇಳಿದರು. ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕಳೆದ ಮೂರು ದಿನಗಳಿಂದ ನಡೆದ ಪೊಲೀಸ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಸಮಾಜದ ಆರೋಗ್ಯ ಕಾಪಾಡುವುದು ಕಾನೂನಿನ ಉದ್ದೇಶವಾಗಿರುತ್ತದೆ. ಕಾನೂನು ಕಾಪಾಡುತ್ತಲೇ ತಮ್ಮ ಆರೋಗ್ಯ ಕಾಪಾಡಿಕೊಳ್ಳುವ ಕಡೆ ಗಮನ ಹರಿಸುವುದು ಪೊಲೀಸರಿಗೆ ಕಷ್ಟಕರ. ಇಂತಹ ಕಾರ್ಯಕ್ರಮಗಳು ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ ಎಂದರು. ಕ್ರೀಡಾಕೂಟಗಳಿಂದ ನಾಯಕತ್ವದ ಬೆಳವಣಿಗೆಯೊಂದಿಗೆ ಸಹೋದರತೆ ಭಾವನೆ ಬೆಳೆಯುತ್ತದೆ. ಎಲ್ಲರೂ ಒಂದೇ ಕುಟುಂಬದಂತೆ ಕೆಲಸ ಮಾಡಲು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪ್ರತಿವರ್ಷ ಕ್ರೀಡಾಕೂಟ ಹಮ್ಮಿಕೊಂಡು ಬರಲಾಗುತ್ತಿದ್ದು, ಇದರಿಂದಾಗಿ ಒಂದು ತಂಡ ರಚನೆಯೊಂದಿಗೆ ಎಲ್ಲರೂ ಒಂದೇ ಕುಟುಂಬ ಎಂಬಂತೆ ಬೆರೆಯಲು ಸಾಧ್ಯವಾಗುತ್ತದೆ. ದೈಹಿಕ ಶಕ್ತಿ ವೃದ್ಧಿಯೊಂದಿಗೆ ಇತರರಿಗೂ ಮಾದರಿಯಾಗಿ ಎಲ್ಲರೂ…






