ಲೇಖಕ: admin

ಮಡಿಕೇರಿ ಡಿ.27 NEWS DESK  : ಪ್ರಸಕ್ತ(2024-25) ಸಾಲಿಗೆ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ (ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ, ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗಾಗಿ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ ಆನ್‍ಲೈನ್” ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2024-25 ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯ ಮಡಿಕೇರಿ ಹಾಗೂ ಕುಶಾಲನಗರದ ವಿದ್ಯಾರ್ಥಿ ನಿಲಯಗಳ (ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ, ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗಾಗಿ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ https://shp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜನವರಿ, 10 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಕಛೇರಿ ದೂರವಾಣಿ ಸಂಖ್ಯೆ: 08272-225528/220214, ನಿಲಯಪಾಲಕರು 9742116601, 9945960004 ನ್ನು ಸಂಪರ್ಕಿಸಬಹುದು. ಅರ್ಹ ವಿದ್ಯಾರ್ಥಿಗಳು ಕೂಡಲೇ…

Read More

ಕುಶಾಲನಗರ  ಡಿ.27 NEWS DESK : ಜಿಲ್ಲಾಡಳಿತ, ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ ಹಾಗೂ ಕುಶಾಲನಗರದ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ತಾಲ್ಲೂಕಿನ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ  ರಾಷ್ಟ್ರೀಯ ಗ್ರಾಹಕರ ದಿನಾಚರಣೆ: 2024  ನಡೆಯಿತು. ಗ್ರಾಹಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಗೌರಮ್ಮಣಿ, ಗ್ರಾಹಕರ ಹಕ್ಕುಗಳು ಮತ್ತು ಹಿತರಕ್ಷಣೆ ಎಲ್ಲರ ಹೊಣೆಯಾಗಿದೆ.ಗ್ರಾಹಕರು ತಮ್ಮ ಹಕ್ಕುಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳುವ ಮೂಲಕ ಗ್ರಾಹಕರ ಹಿತರಕ್ಷಣೆಯನ್ನು ಕಾಪಾಡಬೇಕು ಎಂದರು. ಗ್ರಾಹಕರು ಅಂದರೆ ನಾವೆಲ್ಲರೂನಾವು ಇಂದು ನಮ್ಮ ಗ್ರಾಹಕ ಹಕ್ಕುಗಳ ಬಗ್ಗೆ ತಿಳಿಯುವುದು ಬಹಳ ಮುಖ್ಯವಾಗುತ್ತದೆ. ಖರೀದಿದಾರನ ಯೋಗಕ್ಷೇಮದ ದೃಷ್ಟಿ ಗ್ರಾಹಕ ಹಕ್ಕುಗಳು ಅವಶ್ಯಕತೆ ಇದೆ. ಮಾರುಕಟ್ಟೆ ವ್ಯವಸ್ಥೆಯು ಇಂದು ನೈತಿಕತೆಗಳು ಹಾಗೂ ಮೌಲ್ಯಗಳ ಮೇಲೆ ನಡೆಯಬೇಕು. ಆಗ ಮಾತ್ರ ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದರು.…

Read More

ಮಡಿಕೇರಿ ಡಿ.27 NEWS DESK  : ಓವರ್ ಲ್ಯಾಂಡರ್ ಅಸೋಸಿಯೇಷನ್ ವತಿಯಿಂದ ಡಿ.29 ರಂದು ಬೆಳಗ್ಗೆ 9 ಗಂಟೆಯಿಂದ ಸುಂಟಿಕೊಪ್ಪ ಬಳಿಯ ಕಾನ್‍ಬೈಲು ಗ್ರಾಮದಲ್ಲಿ ಆರೋಗ್ಯ ಉಚಿತ ಚಿಕಿತ್ಸಾ ಶಿಬಿರ ನಡೆಯಲಿದೆ. ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗೆ ಸಂಬಂಧಿಸಿದಂತ ತಜ್ಞ ವೈದ್ಯರು ಈ ಶಿಬಿರದಲ್ಲಿ ಪಾಲ್ಗೊಂಡು ರೋಗಿಗಳ ತಪಾಸಣೆ ನಡೆಸಿ ಅಗತ್ಯವಿದ್ದವರಿಗೆ ಚಿಕಿತ್ಸೆ ನೀಡಲಿದ್ದಾರೆ. ಸಾಮಾಜಿಕ ಹೊಣೆಯುಳ್ಳ ಸಂಸ್ಥೆಯಾಗಿರುವ ಓವರ್ ಲ್ಯಾಂಡರ್ ಅಸೋಸಿಯೇಷನ್‍ನ ಈ ಆರೋಗ್ಯ ಶಿಬಿರದ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ, ಹೆಚ್ಚಿನ ಮಾಹಿತಿಗೆ ಕಾರ್ಸನ್ ಕಾರ್ಯಪ್ಪ 9448380234 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸದೆ.

Read More

ನವದೆಹಲಿ NEWS DESK ಡಿ.26 : ಆರ್ಥಿಕ ಸುಧಾರಣೆ, ಉದಾರೀಕರಣ ನೀತಿಗಳನ್ನು ಜಾರಿಗೆ ತರುವ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ಹೊಸ ದಿಕ್ಕು ತೋರಿಸಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ (92) ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. 2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು. ಸಿಂಗ್ ಅವರು ಮೇ 22, 2004 ರಂದು ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. 2009ರಲ್ಲಿ ಅದೇ ದಿನಾಂಕದಂದು ಮತ್ತೊಮ್ಮೆ ಪ್ರಧಾನಿಯಾಗಿ 2 ನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ್ದರು. ಸಿಂಗ್ ಅವರ ರಾಜಕೀಯ ಜೀವನ 1991ರಲ್ಲಿ ಅವರು ರಾಜ್ಯಸಭೆಗೆ ಪ್ರವೇಶಿಸಿದಾಗ ಪ್ರಾರಂಭವಾಯಿತು. ಕೇವಲ ನಾಲ್ಕು ತಿಂಗಳ ನಂತರ, ಅಂದಿನ ಪ್ರಧಾನಿ ಪಿ.ವಿ.ನರಸಿಂಹ ರಾವ್ ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವರಾಗಿ ನೇಮಕಗೊಂಡು ಭಾರತದ ಆರ್ಥಿಕತೆಯಲ್ಲಿ ಪರಿವರ್ತನೆಗೆ ಕಾರಣರಾಗಿದ್ದರು. 1990 ರಲ್ಲಿ ಆರ್ಥಿಕ ಸುಧಾರಣೆಗಳು, ಉದಾರೀಕರಣ ನೀತಿಗಳನ್ನು ಜಾರಿಗೆ ತರುವ ಮೂಲಕ ಭಾರತದ…

Read More

ಮಡಿಕೇರಿ NEWS DESK ಡಿ.26 : ಮಡಿಕೇರಿ ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಡಿ.28 ರಂದು ಶ್ರೀ ಅಯ್ಯಪ್ಪ ಸ್ವಾಮಿ ಉತ್ಸವ ನಡೆಯಲಿದೆ ಎಂದು ಶ್ರೀ ಅಯ್ಯಪ್ಪ ದೀಪಾರಾಧನಾ ಸಮಿತಿ ತಿಳಿಸಿದೆ. ಬೆಳಿಗ್ಗೆ 6 ಗಂಟೆಗೆ ನಡೆ ತೆಗೆಯುವುದು, 6.5 ಕ್ಕೆ ನಿರ್ಮಲ್ಯ ಪೂಜೆ, 6.30ಕ್ಕೆ ಗಣಪತಿ ಹೋಮ, 8ಕ್ಕೆ ಅಷ್ಟಾಭಿಷೇಕ ಸೇವೆ, 10.30ಕ್ಕೆ ಭಕ್ತರೊಡಗೂಡಿ ತುಳಸಿ ಸಹಸ್ರನಾಮಾರ್ಚನೆ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಮಂಗಳಾರತಿ, ಪ್ರಸಾದ ವಿತರಣೆಯಾಗಲಿದೆ. 1 ಗಂಟೆಗೆ ಪಾಲಕೊಂಬು ಪ್ರತಿಷ್ಠಾಪನೆ, 1.30ಕ್ಕೆ ತಾಯಂಬಕಂ (ಚಂಡೆಸೇವೆ), ಸಂಜೆ 4 ಕ್ಕೆ ಪಾಲಕೊಂಬು ಮೆರವಣಿಗೆ, ಅಶ್ವಿನಿ ಗಣಪತಿ ದೇವಸ್ಥಾನದಿಂದ ಶ್ರೀ ಅಯ್ಯಪ್ಪ ಸ್ವಾಮಿಯ ಉತ್ಸವ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ಚಂಡೆ ಮೇಳದೊಂದಿಗೆ ನಗರದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ, 6.30 ಗಂಟೆಗೆ ದೀಪಾರಾಧನೆ, ಅಲಂಕಾರ ಪೂಜೆ, ರಾತ್ರಿ 7.30ಕ್ಕೆೆ ಪಡಿ ರಂಗಪೂಜೆ, ದುರ್ಗಾಪೂಜೆ, ಸುಬ್ರಹ್ಮಣ್ಯ ಪೂಜೆ, 8.30ಕ್ಕೆ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ…

Read More

ಮಡಿಕೇರಿ ಡಿ.26 NEWS DESK : ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಜ.1 ರಂದು ಆಚರಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಗರದ ಗಾಂಧಿಭವನದಲ್ಲಿ ಅರ್ಥಪೂರ್ಣವಾಗಿ ಆಯೋಜಿಸಲು ತೀರ್ಮಾನಿಸಲಾಯಿತು. ಸರ್ಕಾರಿ ಪ್ರೌಢಶಾಲೆಯಲ್ಲಿನ ಚಿತ್ರಕಲಾ ಶಿಕ್ಷಕರು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಪ್ರತ್ಯೇಕವಾಗಿ ಏರ್ಪಡಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು. ಚಿತ್ರಕಲಾ ಸ್ಪರ್ಧೆಯನ್ನು ಪ್ರತ್ಯೇಕವಾಗಿ ಏರ್ಪಡಿಸಿ ಜ.1 ರಂದು ಚಿತ್ರಕಲಾ ಪ್ರದರ್ಶನಕ್ಕೆ ಅವಕಾಶ ಮಾಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಲಹೆ ನೀಡಿದರು. ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷರಾದ ದೇವದಾಸ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ, ಪಂಚಾಯತ್ ರಾಜ್ ಎಂಜಿನಿಯರ್ ನಾಯಕ್, ನಗರಸಭೆಯ ತಾಹೀರ್, ಮಣಜೂರು ಮಂಜುನಾಥ್ ಇತರರು ಇದ್ದರು.

Read More

ಮಡಿಕೇರಿ ಡಿ.26 NEWS DESK : ಕ್ರೈಸ್ತರು ಶ್ರದ್ಧಾಭಕ್ತಿಯಿಂದ ಆರಾಧಿಸುವ ಯೇಸುಕ್ರಿಸ್ತರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿದ್ದು, ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮತ್ತು ಅಸೋಸಿಯೇಷನ್ ನ ಘಟಕಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿವೆ. ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಮಾತನಾಡಿದ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ನ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ ಅವರು ಯೇಸುಕ್ರಿಸ್ತರನ್ನು ಅವಹೇಳನ ಮಾಡಿ ಕ್ರೈಸ್ತ ಸಮುದಾಯದ ಭಾವನೆಗೆ ದಕ್ಕೆ ತಂದಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದರು. ಕಳೆದ ಸಾವಿರಾರು ವರ್ಷಗಳಿಂದ ಶಾಂತಿಧೂತ ಯೇಸುಕ್ರಿಸ್ತರ ಜನ್ಮ ದಿನದಂದು ಕ್ರಿಸ್‍ಮಸ್ ಹಬ್ಬವನ್ನು ವಿಶ್ವದೆಲ್ಲೆಡೆ ಶ್ರದ್ಧಾಭಕ್ತಿಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಕಿಡಿಗೇಡಿಯೊಬ್ಬ ಕ್ರಿಸ್‍ಮಸ್ ಹಬ್ಬದ ಕುರಿತು ಅಗೌರವದ ಪೋಸ್ಟ್ ಮಾಡಿರುವುದಲ್ಲದೆ ಯೇಸುಕ್ರಿಸ್ತರನ್ನು ಕೀಳಾಗಿ ಕಂಡಿದ್ದಾನೆ. ಈತನ ಹೇಳಿಕೆಗೆ ಬೆಂಬಲವಾಗಿ ಮತ್ತೊಬ್ಬ ಕಿಡಿಗೇಡಿ ಅವಹೇಳನಾಕಾರಿ ಪೋಸ್ಟ್ ಮಾಡಿದ್ದಾನೆ. ಇದು ಸಮಾಜದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನವಾಗಿದ್ದು, ಪೊಲೀಸರು ತಪ್ಪಿತಸ್ಥರನ್ನು…

Read More

ಮಡಿಕೇರಿ ಡಿ.26 NEWS DESK : ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕಿನ ತಟ್ಟಳ್ಳಿ, ದಿಡ್ಡಳ್ಳಿ, ಕೊಲ್ಲಿಹಾಡಿ, ಬೊಮ್ಮಾಡು, ನಾಗರಹೊಳೆ, ಬಾಳೆಕೋವು, ಗೋಣಿಗದ್ದೆ, ಬೊಂಬುಕಾಡು, ಜಂಗಲ್ ಹಾಡಿ, ಚೀನಿಹಡ್ಲಿ, ಐಯಿರಸುಳಿ ಈ ಹಾಡಿಗಳಲ್ಲಿ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಇರುವ ರಸ್ತೆ ಅಭಿವೃದ್ಧಿ ಪಡಿಸುವುದು ಮತ್ತಿತರ ಮೂಲಸೌಲಭ್ಯಕ್ಕೆ ಯಾವುದೇ ಅಡ್ಡಿ ಮಾಡದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪೊನ್ನಂಪೇಟೆಯ ಸಾಮರ್ಥ್ಯ ಸೌಧದಲ್ಲಿ ನಡೆದ ತಾಲ್ಲೂಕು ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಆದಿವಾಸಿಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ತೊಂದರೆ ನೀಡಬಾರದು ಎಂದು ಮುಖ್ಯಮಂತ್ರಿ ಅವರು ನಿರ್ದೇಶನ ನೀಡಿದ್ದಾರೆ. ತೊಂದರೆ ನೀಡುವುದು ಅಥವಾ ಸತಾಯಿಸುವುದು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಎಚ್ಚರಿಸಿದರು. ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ ಅರಣ್ಯ ಹಕ್ಕು ಕಾಯ್ದೆಯಡಿ 20 ಕಡೆಗಳಲ್ಲಿ…

Read More

ಮಡಿಕೇರಿ ಡಿ.27 NEWS DESK : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2024-25 ನೇ ಸಾಲಿನಲ್ಲಿ ಬಿಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು ಪೋರ್ಟಲ್‍ನ ಆನ್‍ಲೈನ್‍ನಲ್ಲಿ (https://sevasindhu.karnataka.gov.in)  ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ, 06 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‍ಎಂಸಿ, ಕಾಲೇಜು ಹತ್ತಿರ, ಮಡಿಕೇರಿ ಹಾಗೂ ಕಚೇರಿ ದೂರವಾಣಿ ಸಂಖ್ಯೆ 08272 225528, ಮಾಹಿತಿ ಕೇಂದ್ರ, ಮಡಿಕೇರಿ 08272 -220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ತಿಳಿಸಿದ್ದಾರೆ.

Read More