ಲೇಖಕ: admin

ಮಡಿಕೇರಿ NEWS DESK ಆ.6 : ಸುಮಾರು ಐದು ವರ್ಷಗಳ ಹಿಂದೆ ನಡೆದ ದರೋಡೆ ಪ್ರಕರಣಕ್ಕೆ ಸಂಬ0ಧಿಸಿದ0ತೆ ತಮಗೆ ಇಲ್ಲಿಯವರೆಗೂ ನ್ಯಾಯ ದೊರಕಿಲ್ಲ. ಸೂಕ್ತ ತನಿಖೆೆಯ ಮೂಲಕ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಪೊಲೀಸ್ ಇಲಾಖೆಯೂ ಮೌನವಾಗಿದೆ ಎಂದು ಸುಂಟಿಕೊಪ್ಪ ಸಮೀಪದ ಹಾರಬೈಲು ಗ್ರಾಮದ ನಿವಾಸಿ ಸರೋಜಿನಿ ಅವರು ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾರಬೈಲು ಗ್ರಾಮದಲ್ಲಿ ತಾನು ಏಕಾಂಗಿಯಾಗಿ ವಾಸವಿದ್ದು, 2021ರ ಏ.27 ರಂದು ಸಂಜೆ 7.30ರ ಸುಮಾರಿಗೆ ಮನೆಯ ಹಿಂಭಾಗದಿ0ದ ಒಳನುಗ್ಗಿದ ಮೂವರು ಅಪರಿಚಿತ ವ್ಯಕ್ತಿಗಳು ತಮ್ಮನ್ನು ಗೋಡೆಗೆ ಒತ್ತಿ ಹಿಡಿದು, ಬಾಯಿಗೆ ಬಟ್ಟೆ ತುರುಕಿ ಹಿಂಸೆ ನೀಡಿದ್ದಾರೆ. ನಾನು ಪ್ರಜ್ಞಾಹೀನಳಾಗಿ ಬಿದ್ದಾಗ ಅಪರಿಚಿತರು ನನ್ನ ಮೈಮೇಲೆ ಇದ್ದ ಹಾಗೂ ಬೀರುವಿನಲ್ಲಿದ್ದ 3.90ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಮತ್ತು ನಗದನ್ನು ಕದ್ದೊಯ್ದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ವಿಷಯಕ್ಕೆ ಸಂಬAಧಿಸಿದAತೆ ಸುಂಟಿಕೊಪ್ಪ ಠಾಣೆಗೆ ಅದೇ ದಿನ ದೂರನ್ನು ನೀಡಿದ್ದೆ ಮತ್ತು ಆರೋಪಿಗಳನ್ನು ಪತ್ತೆ ಹಚ್ಚಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ…

Read More

ಮಡಿಕೇರಿ ಆ.5 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಆಗಸ್ಟ್ 12 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿರಾಜಪೇಟೆಯ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂ.ಸಂ.08272-295297 ನ್ನು ಸಂಪರ್ಕಿಸಬಹುದು. ಸಾರ್ವಜನಿಕರು, ಕರ್ತವ್ಯ ಲೋಪ ಮಾಡುವ ಸರ್ಕಾರಿ, ಸಾರ್ವಜನಿಕ ನೌಕರರ ವಿರುದ್ದ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಲು ಈ ಅವಕಾಶವನ್ನು ಉಪಯೋಗ ಪಡಿಸಿಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Read More

ಮಡಿಕೇರಿ ಆ.5 NEWS DESK : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆದೇಶದ ಮೇರೆಗೆ ಬರ ಮತ್ತು ಅತಿವೃಷ್ಟಿ ವೀಕ್ಷಣೆಗೆ ಕೊಡಗು ಜಿಲ್ಲೆಗೆ ಆಗಮಿಸಿದ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮತ್ತು ಜಿಲ್ಲಾಧಿಕಾರಿ ಜೆ.ಸೋಮಶೇಖರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಲಾಶಯದ ನೀರಿನ ಮಟ್ಟ, ಒಳಹರಿವು ಹಾಗೂ ಹೊರಹರಿವು, ಜಲಾನಯನ ಪ್ರದೇಶದಲ್ಲಿನ ಮಳೆಯ ಪ್ರಮಾಣ ಕುರಿತು ನೀರಾವರಿ ಇಲಾಖೆಯ ಎಂಜಿನಿಯರ್ ಗಳಿಂದ ಮಾಹಿತಿ ಪಡೆದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಪಶ್ಚಿಮ ಘಟ್ಟ ಹಾಗೂ ಕೊಡಗು ಜಿಲ್ಲೆಯಲ್ಲಿ ತಡವಾಗಿ ಮುಂಗಾರು ಮಳೆ ಆರಂಭಗೊಂಡಿರುವ ಹಿನ್ನೆಲೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು. ಶಾಸಕರಾದ ಡಾ.ಮಂತರ್ ಗೌಡ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಾಲ್ಲೂಕು ಅಧ್ಯಕ್ಷರಾದ ವಿ.ಪಿ.ಶಶಿಧರ, ಪ್ರಮುಖರಾದ ಕೆ.ಪಿ.ಚಂದ್ರಕಲಾ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್…

Read More

ಮಡಿಕೇರಿ ಆ.5 NEWS DESK : ಕೊಡಗು ಜಿಲ್ಲೆಯಲ್ಲಿ ಕಳೆದ ಬಾರಿಗೆ ಹೊಲಿಸಿದರೆ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಸದ್ಯ ಇದುವರೆಗಿನ ಮಳೆ ಪ್ರಮಾಣ, ಹಾರಂಗಿ ಜಲಾಶಯ ನೀರಿನ ಮಟ್ಟ ಹಾಗೂ ಬೆಳೆ ಪರಿಸ್ಥಿತಿ ಮತ್ತಿತರ ಬಗ್ಗೆ ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ ಅವರು ತಿಳಿಸಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಬರ ಪರಿಸ್ಥಿತಿ ಕುರಿತು ಬುಧವಾರ ನಡೆದ ಪರಿಶೀಲನಾ ಸಭೆಯಲ್ಲಿ ಮಾಹಿತಿ ಪಡೆದು ಸಚಿವರು ಮಾತನಾಡಿದರು. ಹವಾಮಾನ ವೈಪರಿತ್ಯದಿಂದ ಈ ಬಾರಿ ಮುಂಗಾರು ಆರಂಭವಾಗುವುದು ತಡವಾಗಿದೆ. ಜಿಲ್ಲೆಯ ಅಲ್ಲಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿದೆ. ಆದರೂ ಸಹ ಆಗಸ್ಟ್ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಭತ್ತ ನಾಟಿ ಕಾರ್ಯ ಹಾಗೂ ಇತರ ಕೃಷಿ ಚಟುವಟಿಕೆ ನಡೆಯಲಿದೆ ಎಂದು ಸಚಿವರು ಹೇಳಿದರು. ಜಿಲ್ಲೆಯಲ್ಲಿ ಮಳೆಯಿಂದಾಗಿ ಸ್ಥಳೀಯ ಸಂಸ್ಥೆ, ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯ ರಸ್ತೆಗಳು ಗುಂಡಿ ಬಿದ್ದಿದ್ದು, ಇವುಗಳನ್ನು ಮುಚ್ಚಲು…

Read More

ಮೈಸೂರು, ಆ 5 NEWS DESK : ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯದ ವಿವಿಧ ಯೋಜನೆಗಳಲ್ಲಿ ಕೃತಕ ಬುದ್ಧಿಮತ್ತೆ (Artificial Intelligence – AI) ತಂತ್ರಜ್ಞಾನವನ್ನು ಅಳವಡಿಸುವ ಕುರಿತು ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದರು. AI ಬಳಕೆಯ ಉದ್ದೇಶಗಳು, ಜಾರಿಗೆ ತರಲಿರುವ ಯೋಜನೆಗಳು, ವೈಯಕ್ತಿಕ ಮಾಹಿತಿಯ ಸುರಕ್ಷತೆ, ತಾರತಮ್ಯ ತಡೆಗಟ್ಟುವ ಕ್ರಮಗಳು ಹಾಗೂ ಸ್ವತಂತ್ರ ಮೌಲ್ಯಮಾಪನ ಮತ್ತು ಪರಿಶೀಲನೆ ಕುರಿತ ಮಾಹಿತಿಯನ್ನು ಅವರು ಸರ್ಕಾರದಿಂದ ಕೋರಿದ್ದರು. ಇದಕ್ಕೆ ಉತ್ತರಿಸಿದ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯವು, ಭಾರತAI (IndiaAI) ಮಿಷನ್‌ನ ವ್ಯಾಪ್ತಿಯಲ್ಲಿ ದೇಶೀಯ ಕೃತಕ ಬುದ್ಧಿಮತ್ತೆ ಸಂಸ್ಥೆಗಳ ಸಹಯೋಗದೊಂದಿಗೆ ಡಿಜಿಟಲ್ ಆಡಳಿತವನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು AI ಆಧಾರಿತ ತಂತ್ರಜ್ಞಾನಗಳ ಬಳಕೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದೆ. ಬಹುಭಾಷಾ AI ಚಾಟ್‌ಬಾಟ್‌ಗಳು, ವರ್ಚುವಲ್ ಸಹಾಯಕ ವ್ಯವಸ್ಥೆಗಳು ಹಾಗೂ ಹಜ್ ಸುವಿಧಾ ಆಪ್ ಸೇರಿದಂತೆ ನಾಗರಿಕ ಸೇವೆಗಳನ್ನು ಮತ್ತಷ್ಟು ಸುಲಭಗೊಳಿಸುವ ಡಿಜಿಟಲ್ ವೇದಿಕೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಸರ್ಕಾರ…

Read More

ಸುಂಟಿಕೊಪ್ಪ ಆ.5 NEWS DESK  : ಶ್ರೀ ಗೌರಿ ಗಣೇಶ ಹಬ್ಬದಲ್ಲಿ ಆಚರಣೆಯ ಡಿಜೆಗೆ ಅಳವಡಿಸಲು ಮುಂದಾಗಬೇಡಿ. ಬ್ಯಾಂಡ್‍ಸೆಟ್, ಓಲಗ, ನಾಸಿಕ್ ಬ್ಯಾಂಡ್, ನಗರಿ ಅಂತಹವುಗಳನ್ನು ಬಳಕೆ ಮಾಡುವಂತೆ ಶ್ರೀ ಗೌರಿ ಗಣೇಶ ಸಮಿತಿಯ ಪದಾಧಿಕಾರಿಗಳಿಗೆ ಸೋಮವಾರಪೇಟೆ ವಿಭಾಗದ ಡಿವೈಎಸ್‍ಪಿ ಚಂದ್ರಶೇಖರ್ ಹೇಳಿದರು. ಸುಂಟಿಕೊಪ್ಪ ಪೊಲೀಸ್ ಠಾಣಾ ಆವರಣದಲ್ಲಿ ಆಯೋಜಿಸಲಾದ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಶ್ರೀ ಗೌರಿ ಗಣೇಶ ಆಚರಣಾ ಸಮಿತಿಗಳ ಪೂರ್ವನಿಯೋಜಿತ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಹೋಬಳಿ ವ್ಯಾಪ್ತಿಯಲ್ಲಿ ಕಳೆದ ಬಾರೀ 24 ಗೌರಿ-ಗಣೇಶ ಮೂರ್ತಿಗಳನ್ನು ಆಚರಣಾ ಸಮಿತಿಯವರು ಪ್ರತಿಷ್ಠಾಪಿಸಿದ್ದು, ಕಾನೂನು ಪಾಲನೆಯೊಂದಿಗೆ ಶಿಸ್ತುಬದ್ಧವಾಗಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆÀ ಆಚರಣಾ ಸಮಿತಿಯವರು ಮುನ್ನಡೆಸಿರುವುದು ಶ್ಲಾಘನೀಯ ಎಂದು ಹೇಳಿದರು. ಸರಕಾರವು ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಆಯೋಜಕ ಸಮಿತಿಗಳು ಪೊಲೀಸ್‍ಠಾಣೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಂಡಿರಬೇಕು. ಮುಂಜಾಗೃತ ಕ್ರಮವಾಗಿ ಶ್ರೀ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸ್ಥಳದಲ್ಲಿ ಸಿಸಿಕ್ಯಾಮರಗಳನ್ನು ಅಳವಡಿಸುವುದರಿಂದ ಪುಂಡಾಪೋಕರಿಗಳು ಎಸಗುವ ಅಹಿತಕರ ಘಟನೆಗಳು…

Read More

ಮಡಿಕೇರಿ ಆ.5 NEWS DESK  : ಕೊಡಗಿನ ವಿಶಿಷ್ಟ ಸಂಸ್ಕೃತಿ ಪರಂಪರೆಗಳನ್ನು ಪ್ರತಿಬಿಂಬಿಸುವ ಮೂಲಕ ಜನ ಮನವನ್ನು ಗೆದ್ದಿರುವ “ವಾಂಟೆಡ್ ಬಾಲ” ಕಿರುಚಿತ್ರವನ್ನು ಇದೇ ಆ.7 ರಿಂದ 9ರವರೆಗೆ ಗೋಣಿಕೊಪ್ಪಲು ಸಿನಿಪ್ಲೆಕ್ಸ್ ಚಿತ್ರ ಮಂದಿರದಲ್ಲಿ ಪ್ರದರ್ಶಿಸಲಾಗುತ್ತದೆಂದು ಚಿತ್ರ ನಿರ್ದೇಶಕ ಸಂಕೇತ್ ಶಿವಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೊಣಿಕೊಪ್ಪಲಿನ ಸಿನಿಪ್ಲೆಕ್ಸ್‍ನಲ್ಲಿ ಸೂಚಿತ ಮೂರು ದಿನಗಳಂದು ಬೆಳಗ್ಗೆ 11 ಗಂಟೆ, ಮಧ್ಯಾಹ್ನ 1 ಮತ್ತು 3 ಗಂಟೆಗೆ ಚಿತ್ರ ಪ್ರದರ್ಶನ ನಡೆಯಲಿದೆ. ಜಿಲ್ಲೆಯ ಸಿನಿ ಪ್ರಿಯರು ಕಿರು ಚಿತ್ರವನ್ನು ವೀಕ್ಷಿಸುವ ಮೂಲಕ ಚಿತ್ರ ತಂಡವನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಸಾಹಿತಿಗಳಾದ ಮೇಜರ್ ಕುಶ್ವಂತ್ ಕೋಳಿಬೈಲು ಅವರ “ಕೂರ್ಗ್ ರೆಜಿಮೆಂಟ್” ಕೃತಿಯನ್ನು ಆಧರಿಸಿ ಕಿರುಚಿತ್ರವನ್ನು ನಿರ್ಮಿಸಲಾಗಿದೆ. ಕಿರುಚಿತ್ರದಲ್ಲಿ ಈಗಾಗಲೆ ಸಾಮಾಜಿಕ ಜಾಲ ತಾಣಗಳ ಮೂಲಕ ಪ್ರಸಿದ್ಧಿ ಪಡೆದಿರುವ “ಪೂಡೆ ಪೂಡೆ ವಾ” ಹಾಡು ಸೇರಿದಂತೆ ಒಟ್ಟು ನಾಲ್ಕು ಹಾಡುಗಳು ಇರುವುದಾಗಿ ಮಾಹಿತಿ ನೀಡಿದರು. ಚಿತ್ರದಲ್ಲಿ ಸಂಕೇತ್ ಶಿವಪ್ಪ, ಪ್ರಮೀತಾ ಕೇಚಮಾಡ, ಗಗನ್ ಗಣಪತಿ, ರಮೇಶ್…

Read More

ಮಡಿಕೇರಿ NEWS DESK ಆ.5 : “ಬ್ರೈನೋಬ್ರೈನ್” ಇಂಟರ್ ನ್ಯಾಷನಲ್ ದುಬೈ ಸಂಸ್ಥೆಯ ವತಿಯಿಂದ ಇತ್ತೀಚೆಗೆ ಬೆಂಗಳೂರಿನ ಡಾ|| ಬಾಬು ಜಗಜೀವನ್ ರಾಂ ರಿಸರ್ಚ್ ಇನ್ಸ್ಟಿಟ್ಯೂಟ್‍ನಲ್ಲಿ ಆಯೋಜಿಸಲಾಗಿದ್ದ “178ನೇ ರಾಜ್ಯ ಮಟ್ಟದ “ಬ್ರೈನೋಬ್ರೈನ್ ಸ್ಪರ್ಧೆ-2026”ರಲ್ಲಿ ಮಡಿಕೇರಿಯ “ಬ್ರೈನೋಬ್ರೈನ್” ಕೇಂದ್ರದ 50 ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಪದಕ ಪಡೆದಿದ್ದಾರೆ. ಈ ಸ್ಪರ್ಧೆಯಲ್ಲಿ ಕರ್ನಾಟಕದ ಒಟ್ಟು 80 “ಬ್ರೈನೋಬ್ರೈನ್” ಕೇಂದ್ರಗಳಿಂದ ಸುಮಾರು 2000 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮಡಿಕೇರಿ “ಬ್ರೈನೋಬ್ರೈನ್” ಕೇಂದ್ರದ ತರಬೇತುದಾರರಾದ ಮಾಪಂಗಡ  ಕವಿತಾ ಕರುಂಬಯ್ಯ ಅವರ ನೇತೃತ್ವದಲ್ಲಿ ವಿವಿಧ ವಿಭಾಗಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಕೇವಲ 3 ನಿಮಿಷದಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತೀ ಚುರುಕಾಗಿ ಮಾಡುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಹೆಚ್ಚು ಮಕ್ಕಳು ಅಬಾಕಸ್ ತರಗತಿಗೆ ಹೊಸ ದಾಖಲಾತಿ ಪಡೆದುಕೊಂಡು ಅತೀ ಪರಿಶ್ರಮದಿಂದ ಶೇ.100ರಷ್ಟು ಫಲಿತಾಂಶದೊಂದಿಗೆ 24 ಚಾಂಪಿಯನ್ ಟ್ರೋಫಿ, 16 ಚಿನ್ನದ ಪದಕ ಮತ್ತು 10 ಬೆಳ್ಳಿಯ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ ಮಡಿಕೇರಿ “ಬ್ರೈನೋಬ್ರೈನ್” ಕೇಂದ್ರಕ್ಕೆ “ಬೆಸ್ಟ್…

Read More

ಮಡಿಕೇರಿ ಆ.4 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್, 07 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ನೇರ ಸಂದರ್ಶನ’ ನಡೆಯಲಿದೆ. ಈ ನೇರ ಸಂದರ್ಶನದಲ್ಲಿ ಡೊಬರ್ಮನ್ ಸೆಕ್ಯೂರಿಟಿ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್, ಮಂಗಳೂರು, ಸಂಸ್ಥೆಯು, ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ನೇರ ಸಂದರ್ಶನದಲ್ಲಿ ಫೀಲ್ಡ್ ಆಫೀಸರ್, ಫೀಲ್ಡ್ ಇನ್ವೆಸ್ಟಿಗೇಟರ್ ಹಾಗೂ ಆಡಳಿತ ಸಿಬ್ಬಂದಿ, ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಹುದ್ದೆಗೆ ಅರ್ಹತೆಗಳು ಪಿಯುಸಿ ಅಥವಾ ಪದವಿ, ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮತ್ತು ಕಂಪ್ಯೂಟರ್ ಜ್ಞಾನ, ಹೊಂದಿರುವಂತಹ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ವಯೋಮಿತಿ 18 ರಿಂದ 35 ವರ್ಷಗಳು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ.…

Read More

ಮಡಿಕೇರಿ ಆ.4 NEWS DESK : ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯಸೌಧದಲ್ಲಿ ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್ ರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು. ಯುವ ನಿಧಿ-ಯುವ ನಿಧಿ ಯೋಜನೆ ಕುರಿತು ಹೆಚ್ಚಿನ ಪ್ರಚಾರವಾಗಬೇಕು. ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿ ಯೋಜನೆಯ ಉಪಯೋಗವನ್ನು ಮಾಡಿಕೊಳ್ಳಲು ತಿಳಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಯಾರೆಲ್ಲಾ ಯುವ ನಿಧಿ ಯೋಜನೆಯಡಿ ಅರ್ಹರಾಗಿರುತ್ತಾರೆ ಎಂಬುದನ್ನು ಸಭೆಯಲ್ಲಿ ಉದ್ಯೋಗ ವಿನಿಮಯಾಧಿಕಾರಿಗಳು ಮಾಹಿತಿ ನೀಡಿದರು. 2024-25 ರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಾಗಿರಬೇಕು (ಪದವಿ-3000, ಡಿಪ್ಲೊಮ -1500.) ಸ್ನಾತಕೋತ್ತರ ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ರೂ.3 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಎಲ್ಲಾ ಕಾಲೇಜುಗಳಿಗೆ ನಿರಂತರವಾಗಿ ಭೇಟಿ ನೀಡಿ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕಿ ಇದರಿಂದ ಯೋಜನೆಯ ಸದುಪಯೋಗವಾಗುತ್ತದೆ. ರೇಡಿಯೋ ಪತ್ರಿಕೆ ಹಾಗೂ ದೃಶ್ಯಮಾಧ್ಯಮಗಳಲ್ಲಿ ಯೋಜನೆಯ ಕುರಿತು ಜಾಹೀರಾತು ನೀಡಲು ಪೊನ್ನಂಪೇಟೆ ತಾ.ಪಂ.ಗ್ಯಾರಂಟಿ ಅಧ್ಯಕ್ಷರಾದ ಪ್ರಶಾಂತ್ ಅವರು ತಿಳಿಸಿದರು. ::…

Read More