ಮಡಿಕೇರಿ ಡಿ.12 NEWS DESK : ವ್ಯಕ್ತಿಯನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಕರೆ ನೀಡಿದ್ದ ಆರು ಗಂಟೆಗಳ ಕೊಡಗು ಬಂದ್ ಗೆ ಭಾಗಶಃ ಸ್ಪಂದನ ದೊರಕಿತು. ಜಿಲ್ಲೆಯ ಬಹುತೇಕ ಕಡೆ ಅಂಗಡಿ ಮುಂಗಟ್ಟು, ಖಾಸಗಿ ಸಂಸ್ಥೆಗಳು, ವಾಣಿಜ್ಯ ಸಂಕೀರ್ಣಗಳು, ಹೊಟೇಲ್ ಸೇರಿದಂತೆ ವಿವಿಧ ವ್ಯಾಪಾರೋದ್ಯಮಗಳು ಬಂದ್ ಆಗಿದ್ದವು. ಬೆರಳೆಣಿಕೆಯಷ್ಟು ಅಂಗಡಿ ಮತ್ತು ಹೊಟೇಲ್ ಗಳು ತೆರೆದಿದ್ದು, ಪೆಟ್ರೋಲ್ ಬಂಕ್ ಗಳು ಕಾರ್ಯನಿರ್ವಹಿಸಿದವು. ವಾಹನಗಳು, ಸರಕಾರಿ ಬಸ್ ಗಳು ಎಂದಿನOತೆ ಸಂಚರಿಸಿದವು. ಖಾಸಗಿ ಬಸ್ ಗಳ ಸಂಚಾರ ಸ್ಥಗಿತಗೊಂಡಿತ್ತು. ಶೇ.50 ರಷ್ಟು ಆಟೋರಿಕ್ಷಾಗಳು ಸಂಚರಿಸಿದವು. ಸರಕಾರಿ ಕಚೇರಿಗಳು ಎಂದಿನOತೆ ಕಾರ್ಯನಿರ್ವಹಿಸಿದವು. ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇತ್ತು. ಮಡಿಕೇರಿ, ಕುಶಾಲನಗರ, ಸುಂಟಿಕೊಪ್ಪ, ಸೋಮವಾರಪೇಟೆ, ನಾಪೋಕ್ಲು, ವಿರಾಜಪೇಟೆ, ಪೊನ್ನಂಪೇಟೆ, ಗೋಣಿಕೊಪ್ಪಲು ಮೊದಲಾದೆಡೆ ಬಂದ್ ಗೆ ಸ್ಪಂದನೆ ದೊರೆಯಿತು. ಗುರುವಾರ ಬೆಳಿಗ್ಗೆ 6 ಗಂಟೆಯಿAದ ಮಧ್ಯಾಹ್ನ 12 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿತ್ತು. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ…
ಲೇಖಕ: admin
ಬೆಂಗಳೂರು ಡಿ.12 NEWS DESK : ಮಂಡ್ಯದಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಹೇಶ್ ಜೋಶಿ ಮತ್ತು ಸಚಿವ ಚಲುವರಾಯಸ್ವಾಮಿ ನೇತೃತ್ವದ ಜಿಲ್ಲಾಡಳಿತದ ನಿಯೋಗವು ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿತು.
ವಿರಾಜಪೇಟೆ ಡಿ.12 NEWS DESK : ವಿರಾಜಪೇಟೆಯ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಬ್ಯಾಂಕ್ ನಲ್ಲಿ ಗ್ರಾಹಕರ ದಿನವನ್ನು ಆಚರಿಸಲಾಯಿತು. ದಿನದ ಪ್ರಯುಕ್ತ ಮುಂಜಾನೆ ಗಣಪತಿ ಹೋಮ ಹಾಗೂ ಲಕ್ಷ್ಮಿ ಪೂಜೆಯನ್ನು ನೆರವೇರಿಸಲಾಯಿತು. ನಂತರ ಆಗಮಿಸಿದ ಗ್ರಾಹಕರಿಗೆ ಬ್ಯಾಂಕ್ ನ ಹೊಸ ಹೊಸ ಯೋಜನೆಗಳು ಹಾಗೂ ಠೇವಣಿ ವಿಧಾನಗಳು, ಚಿನ್ನಾಭರಣ ಸಾಲ, ವಿಮಾ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ಸಿಹಿ ಹಂಚಲಾಯಿತು. ಈ ಸಂದರ್ಭ ಸರಸ್ವತಿ ಸಹಕಾರಿ ಸೊಸೈಟಿಯ ನಿರ್ದೇಶಕರಾದ ಶ್ರೀಕಾಂತ್ ರಾವ್, ಶಾಖಾ ವ್ಯವಸ್ಥಾಪಕ ಡಿ.ಕೆ.ಪ್ರವೀಣ್ , ಸಿಬ್ಬಂದಿಗಳು ಹಾಗೂ ಗ್ರಾಹಕರು ಹಾಜರಿದ್ದರು.
ಮಡಿಕೇರಿ ಡಿ.12 NEWS DESK : ಬೆಂಗಳೂರಿನ ಲಲಿತ್ ಅಶೋಕ್ ಪಂಚತಾರಾ ಹೋಟೆಲ್ ಸಭಾಂಗಣದಲ್ಲಿ ನಡೆದ “ಮಿಸ್ & ಮಿಸೆಸ್ ಇಂಡಿಯಾ ರೋಲ್ ಮಾಡೆಲ್-2024″ – 2024” ರಾಷ್ಟ್ರ ಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ ಕಂಡಂಗಾಲ ಮೂಲದ ಅಪ್ಪಂಡೇರಂಡ ಶಾಮ್ಲಿ ಉತ್ತಯ್ಯ ಮಿಸೆಸ್ ಕೂರ್ಗ್ ಸ್ಕಾಟ್ಲೆಂಡ್ ಕ್ವಿನ್ ಆಗಿ ಹೊರಹೊಮ್ಮಿದ್ದು, 2025ರಲ್ಲಿ ಸಿಂಗಾಪುರದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ಮಿಸೆಸ್ ಗ್ಲೋಬಲ್ ಯೂನಿವರ್ಸ್ ಸೌಂದರ್ಯ ಸ್ಪರ್ಧೆಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಲಿದ್ದಾರೆ. ಸೌಂದರ್ಯ ತಜ್ಞೆ ನಂದಿನಿ ನಾಗರಾಜ್ ಅವರ ಮಾರ್ಗದರ್ಶನದಲ್ಲಿ ನಡೆದ ಸ್ಪರ್ಧೆಯಲ್ಲಿ ದೇಶದ ವಿವಿಧ ಭಾಗಗಳಿಂದ ನೂರಾರು ಸ್ಪರ್ಧಿಗಳು ಆಗಮಿಸಿದರು. ಶಾಮ್ಲಿ ಉತ್ತಯ್ಯ ಕಂಡಂಗಾಲ ಮೂಲದ ಅಪ್ಪಂಡೇರಂಡ ನಿತಿನ್ ತಿಮ್ಮಯ್ಯ ಅವರ ಪತ್ನಿ, ಸುಳ್ಳಿಮಾಡ ಪೌತಿ ಉತ್ತಯ್ಯ ಹಾಗೂ ಬೋಜಮ್ಮ ದಂಪತಿಗಳ ಪುತ್ರಿ.
ಮಡಿಕೇರಿ NEWS DESK ಡಿ.12 : ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದಡಿ ಇಬ್ಬರು ಬೆಡ್ಶಿಟ್ ಮಾರಾಟಗಾರರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶ ರಾಜ್ಯದ ಬುಲಂದಶಾಹರ್ ಜಿಲ್ಲೆಯ ಬೆಡ್ಶಿಟ್ ಮಾರಾಟಗಾರರಾದ ಮೊಹಮ್ಮದ್ ಆಲಂ (32) ಹಾಗೂ ಮೋನು (26) ಬಂಧಿತ ಆರೋಪಿಗಳು. ಬಂಧಿತರಿ0ದ 550 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣದಲ್ಲಿ ಗಾಂಜಾವನ್ನು ಸರಬರಾಜು ಮಾಡುತಿದ್ದ ಖಚಿತ ಮಾಹಿತಿ ದೊರೆತ ಹಿನ್ನೆಲೆ ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ನಗರ ಠಾಣೆಯ ಪಿಐ ಪ್ರಕಾಶ್.ಬಿ.ಜಿ, ಪಿಎಸ್‌ಐ ಹೆಚ್.ಟಿ.ಗೀತಾ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮಾದಕ ವಸ್ತುಗಳನ್ನು ಬಳಸುವ, ಸರಬರಾಜು ಮತ್ತು ಮಾರಾಟ ಮಾಡುವ ವ್ಯಕ್ತಿಗಳು ಕಂಡುಬ0ದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು. ಕೆ.ಎಸ್.ಪಿ…
ಮಡಿಕೇರಿ ಡಿ.12 NEWS DESK : ಸಿಂಗಾಪುರದಲ್ಲಿ ನಡೆದ ಅಂತರರಾಷ್ಟ್ರೀಯ ಕರಾಟೆಯಲ್ಲಿ ಕೊಟ್ಟಗೇರಿಯ ಅರಮಣಮಾಡ ಪೊನ್ನಮ್ಮ ಸೋಮಯ್ಯ ಕಂಚಿನ ಪದಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾಳೆ. ಚೆಪ್ಪುಡೀರ ಅರುಣ್ ಮಾಚಯ್ಯ ನೇತೃತ್ವದಲ್ಲಿ ಸಿಂಗಾಪುರದಲ್ಲಿ ನಡೆದ 16ನೇ ಏಷಿಯಾ ಪೆಸಿಫಿಕ್ ಶಿಟೋರಿಯೋ ಕರಾಟೆ ಚಾಂಪಿಯನ್ ಶಿಪ್’ನಲ್ಲಿ ಭಾಗವಹಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾಳೆ. ಗೋಣಿಕೊಪ್ಪಲಿನ ಜಮ್ಮಡ ಜಯ ಜೋಯಪ್ಪ ಹಾಗೂ ಕಾರ್ತಿಕ್ ದೇವಯ್ಯ ಅವರಲ್ಲಿ ತರಬೇತಿ ಪಡೆಯುತ್ತಿರುವ ಪೊನ್ನಮ್ಮ ಬಾಳೆಲೆ ಸಮೀಪದ ಕೊಟ್ಟಗೇರಿಯ ನಿವಾಸಿ ಅರಮಣಮಾಡ ವಿನು ಸೋಮಯ್ಯ ಹಾಗೂ ಶಿಲ್ಪ ಸೋಮಯ್ಯ ಅವರ ಪುತ್ರಿ.
ವಿರಾಜಪೇಟೆ ಡಿ.12 NEWS DESK : ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ನಡೆಸಲಾಗುವ 14 ವರ್ಷದ ಒಳಗಿರುವ ಬಾಲಕರ ಕ್ರಿಕೆಟ್ ಪಂದ್ಯಾವಳಿಗೆ ಕೊಡಗಿನ ಇಬ್ಬರು ಬಾಲಕರು ಆಯ್ಕೆಯಾಗಿದ್ದಾರೆ. ವಿರಾಜಪೇಟೆ ಪ್ರಗತಿ ಆಂಗ್ಲ ಮಾದ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಯಶಸ್ಸ್ ಮತ್ತು 7ನೇ ತರಗತಿಯ ವಿದ್ಯಾರ್ಥಿ ವೃತನ್ ಮಂಗಳೂರು ವಿಭಾಗಕ್ಕೆ ಆಯ್ಕೆಯಾಗಿದ್ದಾರೆ.ಈ ಹಿಂದೆ ಮೈಸೂರು ವಿಭಾಗ ಮಟ್ಟದ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ರಾಯಚೂರು ವಿಭಾಗ, ಮಂಗಳೂರು ವಿಭಾಗ, ಮೈಸೂರು ವಿಭಾಗ, ಶಿವಮೊಗ್ಗ ವಿಭಾಗ, ಧಾರವಾಡ ವಿಭಾಗ ಮತ್ತು ತುಮಕೂರು ವಿಭಾಗಗಳ ಮಧ್ಯೆ 14 ವರ್ಷ ಒಳಗಿರುವ ಬಾಲಕರ ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ.
ನಾಪೋಕ್ಲು ಡಿ.12 NEWS DESK : ಮೈಸೂರು ಕೇರಳ ಸಮಾಜದಲ್ಲಿ ನ್ಯಾಷನಲ್ ಮುಬೀನ ಹಾಗೂ ಶಿಟೋರಿಯೋ ಅಸೋಸಿಯೇಷನ್ ವತಿಯಿಂದ ನಡೆದ ಮೂರನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ನಾಪೋಕ್ಲುವಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪದಕಗೆದ್ದು ಸಾಧನೆ ಮಾಡಿದ್ದಾರೆ. ಬೇತು ಗ್ರಾಮದ ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕುಟ್ಟಂಚೆಟ್ಟಿರ ಕೆ.ಪಿ. ಅಂಜನ್ ಹಾಗೂ ಕೇಲೇಟಿರ ಈತನ್ ಪೊನ್ನಣ್ಣ ಕರಾಟೆ ಕಟಾ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಬಿ.ಎಸ್.ದೈವಿಕ ಕುಮಿತೆ ವಿಭಾಗದಲ್ಲಿ ಬೆಳ್ಳಿ, ಕಟಾ ಕಂಚು ಪದಕ ಪಡೆದಿದ್ದಾರೆ. ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮಣವಟ್ಟಿರ ಲಚನ್ ಪೊನ್ನಣ್ಣ ಕಟಾ ಮತ್ತು ಕುಮಿತೆ ವಿಭಾಗದಲ್ಲಿ ಕಂಚು ಪಡೆದಿದ್ದಾರೆ. ಇವರಿಗೆ ಚೆಟ್ಟಿಯಾರಂಡ ದಿಲನ್ ತಿಮಯ್ಯ ಹಾಗೂ ಧೀರಜ್ ಕಾರ್ಯಪ್ಪ ಅವರು ತರಬೇತಿ ನೀಡಿದ್ದಾರೆ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಡಿ.12 NEWS DESK : ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಷನ್ ಶಾಲೆಯ ದಶಾ ದೇಚಮ್ಮ ಹಾಗೂ ಶಮಂತ್ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಸ್ಥಾಪಕ ಅಧ್ಯಕ್ಷ ಕುಟ್ಟಂಚೆಟ್ಟೀರ ಮಾದಪ್ಪ, ನಿರ್ದೇಶಕಿ ವಿದ್ಯಾ ಹಾಗೂ ಮುಖ್ಯ ಶಿಕ್ಷಕ ಚೋಕಿರ ತಮ್ಮಯ್ಯ ಪ್ರಶಸ್ತಿ ಪತ್ರ ವಿತರಿಸಿದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಡಿ.12 NEWS DESK : ಸದಸ್ಯರ ಒಗ್ಗಟ್ಟು ಮತ್ತು ಆರ್ಥಿಕ ಸಹಕಾರದಿಂದ ಸಮಾಜವನ್ನು ಅಭಿವೃದ್ಧಿಪಡಿಸಲು ಸಾಧ್ಯ ಎಂದು ಮೂರ್ನಾಡು ಗೌಡ ಸಮಾಜದ ಅಧ್ಯಕ್ಷ ಪಾಣತ್ತಲೆ ಟಿ. ಹರೀಶ್ ಹೇಳಿದರು. ಮೂರ್ನಾಡು ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿಸಿದ ಮೂರ್ನಾಡು ಗೌಡ ಸಮಾಜದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳು ಉತ್ತಮ ಗುಣನಡತೆಯನ್ನು ಮೈಗೂಡಿಸಿಕೊಳ್ಳುವುದರ ಜೊತೆಗೆ ಕಠಿಣ ಶ್ರಮವಹಿಸಿ ಕ್ರೀಡೆ, ಕೃಷಿ ಮತ್ತು ವಿದ್ಯಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿ ಕೀರ್ತಿಯನ್ನು ತರುವಂತಾಗಬೇಕು .ಈ ನಿಟ್ಟಿನಲ್ಲಿ ಪೋಷಕರ ಜವಾಬ್ದಾರಿ ಅತಿ ಮುಖ್ಯವಾಗಿದೆ ಎಂದರು. ಸಭೆಯಲ್ಲಿ ಸಮಾಜದ ಸರ್ವತೋಮುಖ ಅಭಿವೃದ್ಧಿಯ ಬಗ್ಗೆ ಚರ್ಚಿಸಿ ಸದಸ್ಯರ ಸಲಹೆ ಸೂಚನೆಗಳನ್ನು ಪರಿಗಣಿಸಿ ಆಡಳಿತ ಮಂಡಳಿ ಅಂತಿಮ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಈ ಸಂದರ್ಭ ದಾನಿ ಉಳುವಾರನ ಎಸ್.ವಸಂತಕುಮಾರ್ (ಬೆಂಗಳೂರು) ಅವರನ್ನು ಸಮಾಜದ ವತಿಯಿಂದ ಫಲಪುಷ್ಪ ತಾಂಬೂಲ ನೀಡಿ ಸನ್ಮಾನಿಸಲಾಯಿತು. ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.85 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಮಕ್ಕಳನ್ನು ಪ್ರತಿಭಾ…






