ಕುಶಾಲನಗರ ಡಿ.25 NEWS DESK : ಕುಶಾಲನಗರ ಪಟ್ಟಣದಲ್ಲಿ ಕ್ರೈಸ್ತ ಬಾಂಧವರು ಕ್ರಿಸ್‍ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಕುಶಾಲನಗರದ ಹೃದಯ ಭಾಗದಲ್ಲಿರುವ ಸಂತ ಸೆಬಾಸ್ಟಿಯನ್ನರ ದೇವಾಲಯದಲ್ಲಿ ಧರ್ಮಗುರು ವಂ.ಫಾ.ಎಂ. ಮಾರ್ಟಿನ್ ಹಾಗೂ ತಪೋವನ ಗುರು ಮಠದ ವಂ.ಫಾ. ವಿಲ್ ಫ್ರೆಡ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು. ವಂ.ಫಾ. ವಿಲ್ ಫ್ರೆಡ್ ಏಸುವಿನ ಸಂದೇಶವನ್ನು ಸಾರಿದರು. ಸಂತ ಸೆಬಾಸ್ಟಿಯನ್ ದೇವಾಲಯದ ಯುವಕ ಸಂಘದಿಂದ ಯೇಸುವಿನ ಗೋದಲಿಯನ್ನು ವಿಭಿನ್ನವಾಗಿ ನಿರ್ಮಿಸಿದ್ದರು, ಈ ಸಂದರ್ಭದಲ್ಲಿ ದೇವಾಲಯದ ಸಲಹಾ ಸಮಿತಿ, ಮರಣ ನಿಧಿ ಸಮಿತಿ, ಯುವಕ ಸಂಘ ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿ, ಮೊಂಬತ್ತಿ ಬೆಳಗಿ, ಸಿಹಿ ಹಂಚಿ ಸಂಭ್ರಮಿಸಿದರು. ಕ್ರಿಸ್ ಮಸ್ ಮರಕ್ಕೆ ಅಲಂಕಾರ, ಮನೆಯನ್ನು ವಿದ್ಯುತ್ ದೀಪಗಳಿಂದ ಶೃಂಗರಿಸಿದ್ದರು. ಕ್ರೈಸ್ತ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿ ಗೋದಲಿ ನಿರ್ಮಿಸಿ, ಅದರಲ್ಲಿ ಬಾಲ ಏಸುವಿನ ಹಾಗೂ ಮಾತೆ ಮೇರಿಯ ಪ್ರತಿಕೃತಿಯನ್ನಿರಿಸಿ ಪೂಜಿಸಲಾಯಿತು.
ಲೇಖಕ: admin
ವಿರಾಜಪೇಟೆ ಡಿ.25 NEWS DESK : ಕೊಡವ ಜಮ್ಮಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸಂಸ್ಥಾಪಕರನ್ನು ಎಮ್ಮೆಮ್ಮಾಡು ಗ್ರಾಮದ ಕಾಳೇರ ಮತ್ತು ನೇರೂಟ್‍ಕಾರಂಡ ಕುಟುಂಬಸ್ಥರು ಸನ್ಮಾನಿಸಿದರು. ಕೊಡವ ಜಮ್ಮಾ ಮುಸ್ಲಿಂ ಕುಟುಂಬಸ್ಥರನ್ನು ಒಂದೇ ವೇದಿಕೆಯಡಿಯಲ್ಲಿ ಒಂದುಗೂಡಿಸುವ ಸಲುವಾಗಿ ಕುವಲೇರ ಅನೀಸ್, ಆಲೀರ ಪವಿಲ್, ಪುದಿಯತ್‍ರ ಮುನೀರ್, ಕುವಲೆರ ಅರ್ಷಾದ್, ಪುದಿಯತ್ ರಿಯಾಜ್, ಕುವಲೆರ ಖಲೀಲ್, ಕುವಲೆರ ಅಷ್ಫಾಕ್, ಆಲಿರ ಸಜೀರ್, ಕುವಲೆರ ನಿಜಾಮುದ್ದೀನ್, ಕುವಲೆರ ಅಜರ್ ಕೊಡವ ಜಮ್ಮ ಮುಸ್ಲಿಂ ಸ್ಪೋರ್ಟ್ಸ್ ಕಲ್ಚರಲ್ ಎಂಬ ಸಂಘಟನೆಯನ್ನು ಸ್ಥಾಪಿಸಿ ಕೊಡವ ಜಮ್ಮಾ ಮುಸ್ಲಿಂ ಕುಟುಂಬಸ್ಥರಿಗೆ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಿದ ಹಿನ್ನೆಲೆ ಕೊಡವ ಜಮ್ಮಾ ಮುಸ್ಲಿಂ ಸ್ಪೋಟ್ರ್ಸ್ ಮತ್ತು ಕಲ್ಚುರಲ್ ಸಂಘಟನೆಯ ಸಂಸ್ಥಾಪಕರ ಪ್ರಯತ್ನ ಹಾಗೂ ಕಾರ್ಯವನ್ನು ಗುರುತಿಸಿ ಎಮ್ಮೆಮ್ಮಾಡು ಗ್ರಾಮದ ಕಾಳೇರ ಮತ್ತು ನೇರೂಟ್‍ಕಾರಂಡ ಕುಟುಂಬಸ್ಥರು ರಜಾಕ್ ಅವರ ಮನೆಯಲ್ಲಿ ಸಂಘಟನೆಯ ಸಂಸ್ಥಾಪಕರಾದ ಕಾಳೇರ ಆಲಿ, ನೆರೂಟ್‍ಕಾರಂಡ ರಜಾಕ್, ಕುಂಜಿಲ ಅಶ್ರಫ್ ಹಾಗು ಎಮ್ಮೆಮ್ಮಾಡು ಗ್ರಾಮದ ಅಪ್ಪಿ, ಶಬೀರ್, ಷರೀಫ್ ಅವರನ್ನು ಸನ್ಮಾನಿಸಿ,…
ಮಡಿಕೇರಿ ಡಿ.25 NEWS DESK : ಏಸು ಕ್ರಿಸ್ತ ಜನನದ ಸಂಕೇತವಾದ ಕ್ರಿಸ್‍ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಿದರು. ವಿವಿಧ ಚರ್ಚ್‍ಗಳಲ್ಲಿ ರಾತ್ರಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ಏಸು ಧರೆಗಿಳಿದನೆಂದು ಗೋದಲಿಯಲ್ಲಿ ಬಾಲಯೇಸುವಿನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಶ್ರದ್ಧಾಭಕ್ತಿಯನ್ನು ಮೆರೆದರು. ಮಡಿಕೇರಿಯ ಸಂತ ಮೈಕಲರ ಚರ್ಚ್‍ನ ಆವರಣದಲ್ಲಿ ನಿರ್ಮಿಸಲಾಗಿದ್ದ ಗೋದಲಿಯಲ್ಲಿ ಬಾಲ ಏಸುವಿನ ಪ್ರತಿಕೃತಿಯನ್ನಿರಿಸಿ ಪೂಜಿಸಲಾಯಿತು. ಧರ್ಮಗುರು ಜಾರ್ಜ್ ದೀಪಕ್ ಪೂಜೆ ಸಲ್ಲಿಸಿ, ಏಸುವಿನ ಸಂದೇಶವನ್ನು ಸಾರಿದರು. ವಿಶೇಷ ಪ್ರಾರ್ಥನೆಯಲ್ಲಿ ಸಾವಿರಾರು ಕ್ರೈಸ್ತ ಬಾಂಧವರು ಪಾಲ್ಗೊಂಡು ಮೊಂಬತ್ತಿ ಬೆಳಗಿ, ಸಿಹಿ ಹಂಚಿ ಸಂಭ್ರಮಿಸಿದರು. ಗೋದಲಿಯಲ್ಲಿ ಪ್ರತಿಷ್ಠಾಪಿಸಿದ ಬಾಲಯೇಸುವಿಗೆ ಪುಷ್ಪನಮನ ಸಲ್ಲಿಸಿದರು. ಪ್ರವಾಸಿಗರು ಹಾಗೂ ಇತರ ಧರ್ಮೀಯರು ಕೂಡ ಚರ್ಚ್‍ಗೆ ಭೇಟಿ ನೀಡಿ ಮೊಂಬತ್ತಿ ಬೆಳಗಿ ಕ್ರಿಸ್‍ಮಸ್ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾದರು.
ಗುಂಡ್ಲುಪೇಟೆ NEWS DESK ಡಿ.25 : ಜಾನುವಾರಗಳ ಮೇಲೆ ದಾಳಿ ಮಾಡಿ ಭಕ್ಷಿಸುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಗುಂಡ್ಲುಪೇಟೆ ವಿಭಾಗದ ಅರಣ್ಯ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರುಕೇರಿ, ಕೋಡಹಳ್ಳಿ ಮತ್ತಿತರ ಸುತ್ತಮುತ್ತಲ ಪ್ರದೇಶಗಳಲ್ಲಿ ಜಾನುವಾರು ಮತ್ತು ಮೇಕೆಗಳನ್ನು ತಿಂದು ಆತಂಕ ಸೃಷ್ಟಿಸಿದ್ದ ಚಿರತೆಯ ಸೆರೆಗಾಗಿ ಅರಣ್ಯ ಇಲಾಖೆ ಅಣ್ಣೂರುಕೇರಿ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಬೋನ್ ಇರಿಸಿದ್ದರು. ನಿರೀಕ್ಷೆಯಂತೆ ಸುಮಾರು 3 ವರ್ಷದ ಗಂಡು ಚಿರತೆ ಬೋನ್ ನಲ್ಲಿ ಸೆರೆಯಾಗಿದೆ. ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಗೋಣಿಕೊಪ್ಪ ಡಿ.25 NEWS DESK : ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ 47 ಚಿನ್ನ 7 ಬಳ್ಳಿ ಪದಕಗಳನ್ನು ಗಳಿಸುವ ಮೂಲಕ ಗೋಣಿಕೊಪ್ಪಲಿನ ಸೈಕ್ಲೋನ್ ನೃತ್ಯ ಸಂಸ್ಥೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಿರಿಯಾಪಟ್ಟಣದ ಅಭಯ ಸಭಾಂಗಣದಲ್ಲಿ, ಕರ್ನಾಟಕ ಕ್ರೀಡಾ ಸಂಘ, ಸ್ಪೋಟ್ರ್ಸ್ ಡಾನ್ಸ್ ಫೆಡರೇಶನ್ ಆಫ್ ಇಂಡಿಯಾ, ಏಷ್ಯನ್ ಸ್ಪೋಟ್ರ್ಸ್ ಕೌನ್ಸಿಲ್, ಇಂಟನ್ರ್ಯಾಷನಲ್ ಸ್ಪೋಟ್ರ್ಸ್ ಫೆಡರೇಶನ್, ಮತ್ತು ಕರ್ನಾಟಕ ರಾಜ್ಯ ಕ್ರೀಡಾ ಚಾಂಪಿಯನ್ ಶಿಪ್ ಆಯೋಜನೆಯಲ್ಲಿ ನಡೆದ ರಾಜ್ಯ ಮಟ್ಟದ 2024-25ನೇ ಸಾಲಿನ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಮತ್ತು ಬೆಳ್ಳಿ ಪದಕಗಳಿಸುವ ಮೂಲಕ ಸೈಕ್ಲೋನ್ ನೃತ್ಯ ಸಂಸ್ಥೆ ಸಂಭ್ರಮಿಸಿದೆ. 9 ವರ್ಷದೊಳಗಿನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, 12 ವರ್ಷದೊಳಗಿನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, 15 ವರ್ಷದೊಳಗಿನ ಸ್ಪರ್ಧೆಯಲ್ಲಿ ಪ್ರಥಮ, 17 ವರ್ಷದೊಳಗಿನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಜೊತೆಗೆ 12 ವರ್ಷದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಬಳ್ಳಿ ಪದಕವನ್ನು ಪಡೆದುಕೊಳ್ಳುವ ಮೂಲಕ ಫೆಬ್ರವರಿ ತಿಂಗಳಿನಲ್ಲಿ…
ಮಡಿಕೇರಿ NEWS DESK ಡಿ.24 : ಸಂಪಾಜೆ ಮತ್ತು ಚೆಂಬು ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 110.66 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಮಂಗಳವಾರ ಚಾಲನೆ ನೀಡಿದ್ದಾರೆ. ಸಂಪಾಜೆ ಬಳಿಯ ದುಗ್ಗಳ ಭಾಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ದುಗ್ಗಳ ಕುಟುಂಬದವರು ಸೇರಿದಂತೆ ಸುಮಾರು 18 ಹೆಚ್ಚು ಕುಟುಂಬಗಳು ವಾಸ ಮಾಡುತ್ತಿದ್ದು, ವಿಕಲಚೇತನರು, ವೃದ್ದರು ಹಾಗೂ ಹಲವರಿಗೆ ಉಪಯುಕ್ತವಾಗುತ್ತದೆ ಎಂದು ಎ.ಎಸ್.ಪೊನ್ನಣ್ಣ ಅವರು ಮಾಹಿತಿ ನೀಡಿದರು. ಬಳಿಕ ಚೆಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂಡಡ್ಕ ಹೈಟೆಕ್ ಶೌಚಾಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಚೆಂಬು ಊರುಬೈಲು ಬಳಿ ಮಳೆಯಿಂದ ಹಾನಿಯಾದ ಸೇತುವೆಯ ಮರು ನಿರ್ಮಾಣ, ಪನೆಡ್ಕ ದೇವಸ್ಥಾನದ ಬಳಿಯಿಂದ ಬೈನೆಗುಂಡಿ ರಸ್ತೆ ಅಭಿವೃದ್ಧಿ. ಬಾಲಂಬಿ ಚೆಟ್ಟೆಕಲ್ಲು ಜೋಡಿಯಿಂದ ಸಾರ್ವಜನಿಕ ರಸ್ತೆ ಅಭಿವೃದ್ಧಿ. ಎಂ.ಚೆoಬು ಬಳಿಯ ರೆಂಕಿಲ್ ಮೊಟ್ಟೆ ಕಾಲೋನಿ…
ಮಡಿಕೇರಿ NEWS DESK ಡಿ.24 : ಕಳೆದ ವರ್ಷ ಬರೆ ಕುಸಿದು ಹಾನಿಯಾಗಿದ್ದ ಕೊಯನಾಡು ಪ್ರಾಥಮಿಕ ಶಾಲೆಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ಅವರು ಮಂಗಳವಾರ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ಆಲಿಸಿದರು. ಸಭೆಯ ಆರಂಭದಲ್ಲಿ ಮಾತನಾಡಿದ ಅವರು ಕಳೆದ ವರ್ಷ ಹೆಚ್ಚಿನ ಮಳೆಯಿಂದಾಗಿ ಶಾಲಾ ಕಟ್ಟಡದ ಗೋಡೆಗೆ ಹೆಚ್ಚಿನ ಹಾನಿಯಾಗಿತ್ತು, ಮಕ್ಕಳ ಹಿತಿದೃಷ್ಟಿಯಿಂದ ಸಂಪಾಜೆ ಶಾಲೆಗೆ ಸ್ಥಳಾಂತರಿಸಲಾಗಿತ್ತು, ಆ ದಿಸೆಯಲ್ಲಿ ಮಕ್ಕಳ ವಿದ್ಯಾಭ್ಯಾಸದ ಜೊತೆಗೆ ಸುಭದ್ರತೆಯ ದೃಷ್ಟಿಯಿಂದ ಎಲ್ಲರೂ ಗಮನಿಸಬೇಕು. ಬೇಸಿಗೆ ಅವಧಿಯಲ್ಲಾದರೂ ತಾತ್ಕಾಲಿಕವಾಗಿ ಕೊಯನಾಡುವಿನಲ್ಲಿ ಪುನರಾರಂಭಿಸುವoತೆ ಸಲಹೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡರವರು ಮಾತನಾಡಿ ಮಕ್ಕಳು ಶಾಲೆಯಿಂದ ವಂಚಿತರಾಗಬಾರದು, ಕೊಯನಾಡು ಶಾಲೆಯಲ್ಲಿ ಸುರಕ್ಷಿತ ಇಲ್ಲದಿರುವುದರಿಂದ ಸಂಪಾಜೆ ಸರ್ಕಾರಿ ಶಾಲೆಗೆ ಸ್ಥಳಾಂತರಿಸಲಾಗಿತ್ತು ಸದ್ಯ ಮಕ್ಕಳಿಗೆ ಪ್ರಯಾಣಭತ್ಯೆ ಭರಿಸಲು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು. ಕೊಯನಾಡು ಶಾಲೆ ಸುರಕ್ಷತೆಯ ಬಗ್ಗೆ ಸಂಬoಧಪಟ್ಟವರು ಜಿಲ್ಲಾಡಳಿತಕ್ಕೆ ವರದಿ ನೀಡಿದ್ದು, ಜಿಲ್ಲಾಡಳಿತದ ಮಾರ್ಗಸೂಚಿಯಂತೆ ಮುಂದಿನ…
ಮಡಿಕೇರಿ NEWS DESK ಡಿ.24 : ಕೊಡಗು ಜಿಲ್ಲಾ ಪೊಲೀಸ್ ನ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟಕ್ಕೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪ್ರಬಾರ ಜಿಲ್ಲಾಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಕ್ರೀಡಾ ಚಟುವಟಿಕೆಗಳ ಮೂಲಕ ಮಾನಸಿಕ ದೃಢತೆ, ದೈಹಿಕ ಸಾಮರ್ಥ್ಯ, ಮಾನಸಿಕ ಸಮತೋಲನ ಮತ್ತು ನಾಯಕತ್ವದ ಗುಣ ಬೆಳೆೆಸಿಕೊಳ್ಳಲು ಸಾಧ್ಯವಿದೆ. ಪೊಲೀಸ್ ಇಲಾಖೆಗೆ ಸೇರ್ಪಡೆಯಾಗುವವರಿಗೆ ಅಗತ್ಯವಾಗಿ ಇರಬೇಕಾದ ಈ ಎಲ್ಲಾ ಅಂಶಗಳನ್ನು ಕ್ರೀಡಾಚಟುವಟಿಕೆಗಳ ಮೂಲಕ ಪಡೆಯಬಹುದಾಗಿದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪ್ರಾಸ್ತಾವಿಕವಾಗಿ ಮಾತನಾಡಿ, ವಾರ್ಷಿಕ ಕ್ರೀಡಾಕೂಟಕ್ಕಾಗಿ ಶ್ರಮಿಸಿದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಕೃತಜ್ಞತೆ ಮತ್ತು ಕೇವಲ ಆರು ಗಂಟೆಗಳ ಅವಧಿಯಲ್ಲಿ ಡಿಎಆರ್ ಮೈದಾನವನ್ನು ಸಜ್ಜುಗೊಳಿಸಿದವರಿಗೆ ಅಭಿನಂದನೆಯನ್ನು ಸಲ್ಲಿಸಿದರು. ಮೂರು ದಿನಗಳ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವ ಎಲ್ಲಾ ಠಾಣೆಯ ಸಿಬ್ಬಂದಿ ಹಾಗೂ ಅವರ ಕುಟುಂಬಸ್ಥರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಪ್ರತಿದಿನ ಕರ್ತವ್ಯದ ಜಂಜಾಟದಲ್ಲಿ ಇರುವವರು ಒಂದಷ್ಟು…
ಕೂಡಿಗೆ ಡಿ.24 NEWS DESK : ಜಿಲ್ಲಾಡಳಿತ, ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ ಹಾಗೂ ಕುಶಾಲನಗರದ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ತಾಲ್ಲೂಕಿನ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಡಿ.26 ರಂದು 11.00 ಗಂಟೆಗೆ ರಾಷ್ಟ್ರೀಯ ಗ್ರಾಹಕರ ದಿನಾಚರಣೆ: 2024 ಯನ್ನು ಏರ್ಪಡಿಸಲಾಗಿದೆ. ಪ್ರಭಾರ ಜಿಲ್ಲಾಧಿಕಾರಿಯೂ ಆದ ಜಿ.ಪಂ ಸಿಇಓ ಆನಂದ್ ಪ್ರಕಾಶ್ ಮೀನಾ ಗ್ರಾಹಕರ ದಿನಾಚರಣೆಯನ್ನು ಉದ್ಘಾಟಿಸಲಿದ್ದು, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಗೌರಮ್ಮಣಿ, ಕುಶಾಲನಗರದ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಅಧ್ಯಕ್ಷ ಎ.ಎ.ಚಂಗಪ್ಪ, ಮೊರಾರ್ಜಿ ಶಾಲೆಯ ಪ್ರಾಂಶುಪಾಲ ಕೆ. ಪ್ರಕಾಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ , ರಾಷ್ಟ್ರೀಯ ಗ್ರಾಹಕರ ದಿನಾಚರಣೆಯ ಮಹತ್ವ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ…
ಮಡಿಕೇರಿ ಡಿ.24 NEWS DESK : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಂಸತ್‍ನಲ್ಲಿ ಅಗೌರವ ತೋರಿದ ಕೇಂದ್ರ್ರ ಗೃಹ ಸಚಿವ ಅಮಿತ್ ಷಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ವಿವಿಧ ದಲಿತ ಸಂಘಟನೆಗಳು ಹಾಗೂ ಪ್ರಗತಿಪರರು ಪ್ರತಿಭಟನೆ ನಡೆಸಿದರು. “ಅಂಬೇಡ್ಕರ್ ಹೆಸರು ನಮಗೆ ಶೋಕಿಯಲ್ಲ, ಸ್ಮರಣೆ, ಅಸ್ಮಿತೆ, ಬದುಕು” ಎನ್ನುವ ಘೋಷವಾಕ್ಯದಡಿ ದಲಿತ ಸಂಘಟನೆಗಳ ಒಕ್ಕೂಟ, ಸಮಾನ ಮನಸ್ಕರ ವೇದಿಕೆ ಮತ್ತು ಪ್ರಗತಿಪರ ಚಿಂತಕರ ಒಕ್ಕೂಟ ಮಾನವ ಸರಪಳಿ ರಚಿಸಿ ರಸ್ತೆತಡೆ ಪ್ರತಿಭಟನೆ ನಡೆಸಿದವು. ಜಿಲ್ಲಾ ಅಹಿಂದ ಒಕ್ಕೂಟದ ಸ್ಥಾಪಕಾಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಇಡೀ ವಿಶ್ವದ ಗೌರವಕ್ಕೆ ಪಾತ್ರರಾಗಿ, ರಾಷ್ಟ್ರಕ್ಕೆ ಅತ್ಯಮೂಲ್ಯವಾದ ಸಂವಿಧಾನವನ್ನು ನೀಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಗೌರವ ತೋರಿರುವುದನ್ನು ಖಂಡಿಸುವುದಲ್ಲದೆ, ಗೃಹ ಸಚಿವ ಅಮಿತ್ ಷಾ ಅವರು ರಾಷ್ಟ್ರದ ಜನತೆಯ ಕ್ಷಮೆಯಾಚನೆ ಮಾಡಬೇಕೆಂದು ಒತ್ತಾಯಿಸುವುದಾಗಿ ತಿಳಿಸಿದರು. ನೊಂದವರ ಧ್ವನಿಯಾಗಿ, ಸಾಮಾಜಿಕ ನ್ಯಾಯದ ಹರಿಕಾರರಾಗಿರುವ ಅಂಬೇಡ್ಕರ್ ಅವರ ಬಗ್ಗೆ ಮಾತನಾಡುವಾಗ ಎಚ್ಚರದಿಂದಿರಬೇಕೆಂದು. ಅಂಬೇಡ್ಕರ್ ಅವರು…






