ಸೋಮವಾರಪೇಟೆ ಡಿ.24 NEWS DESK : ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲೂಕು ಘಟಕದ ಆಶ್ರಯದಲ್ಲಿ ಬಳಗುಂದ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಜಿಲ್ಲೆಯ ಪತ್ರಕರ್ತರಿಗೆ ಆಯೋಜಿಸಿದ್ದ ಕೆ.ಪಿ.ಎಸ್ ಕ್ರಿಕೆಟ್ ಟ್ರೋಫಿಯನ್ನು ರವಿಕುಮಾರ್ ನಾಯಕತ್ವದ ಕೂರ್ಗ್ ಸ್ಟೈಕರ್ಸ್ ತಂಡ ಮುಡಿಗೇರಿಸಿಕೊಂಡಿತು. ಎಸ್.ಎ.ಮುರುಳೀಧರ್ ನಾಯಕತ್ವದ ಕೂರ್ಗ್ ವಾರಿರ‍್ಸ್ ತಂಡ ದ್ವಿತೀಯ ಸ್ಥಾನ ಪಡೆಯಿತು. ಸರಣಿ ಪುರುಷೋತ್ತಮ ಪ್ರಶಸ್ತಿಯನ್ನು ಖಲೀಲ್, ಉತ್ತಮ ಬೌಲರ್ ಪ್ರಶಸ್ತಿಯನ್ನು ಕೆ.ಜಿ.ನಾಣಯ್ಯ, ಉತ್ತಮ ಕ್ಯಾಚರ್ ಆಗಿ ವಿನೋದ್ ಮೂಡುಗದ್ದೆ, ಉತ್ತಮ ಬೌಲರ್ ಆಗಿ ಕೆ.ಜಿ.ನಾಣಯ್ಯ, ಉತ್ತಮ ಬ್ಯಾಟ್ಸ್ಮನ್ ಆಗಿ ಕೌಸರ್, ಉತ್ತಮ ವಿಕೆಟ್ ಕೀಪರ್ ಪ್ರಶಸ್ತಿಯನ್ನು ಎಸ್.ಎ.ಮುರುಳೀಧರ್ ಪಡೆದರು. ಕೊವರ್‌ಕೊಲ್ಲಿ ಬ್ಲಾಸಂ ಸಭಾಂಗಣದಲ್ಲಿ ಭಾನುವಾರ ಸಂಜೆ ಸಮಾರೋಪ ಸಮಾರಂಭ ನಡೆಯಿತು. ಮಡಿಕೇರಿ ಪತ್ರಿಕಾ ಭವನ ಮ್ಯಾನೇಜಿಂಗ್ ಟ್ರಸ್ಟಿ ಟಿ.ಪಿ.ರಮೇಶ್, ಮಾಜಿ ಸೈನಿಕರಾದ ಮಂಜುನಾಥ್, ಕೆಪಿಸಿಸಿ ಸದಸ್ಯ ಕೆ.ಎ.ಯಾಕೂಬ್, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಸ್.ಎ.ಮುರುಳೀಧರ್, ತಾಲ್ಲೂಕು ಅಧ್ಯಕ್ಷರುಗಳಾದ ಎಚ್.ಆರ್.ಹರೀಶ್, ಮುಧೋಶ್ ಪೂವಯ್ಯ, ವಿಘ್ನೇಶ್ ಭೂತನಕಾಡು, ರಾಜ್ ಕುಶಾಲಪ್ಪ, ಮಾಜಿ ಸೈನಿಕ ಬಿ.ಬಿ.…
ಲೇಖಕ: admin
ಮಡಿಕೇರಿ ಡಿ.24 NEWS DESK : ಗ್ರಾಮೀಣ ಕ್ರೀಡಾ ಸಂಸ್ಕೃತಿಯ ಪುನರುಜ್ಜೀವನಕ್ಕಾಗಿ 69ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಾನವ ಹಕ್ಕುಗಳ ಅಂತರಾಷ್ಟ್ರೀಯ ಒಕ್ಕೂಟದ ವತಿಯಿಂದ ವೀರನಾಡು ರಕ್ಷಣಾವೇದಿಕೆಯ ಸಹಯೋಗದಲ್ಲಿ ಸಂಭ್ರಮದ `ಗ್ರಾಮೀಣ ಕ್ರೀಡೋತ್ಸವ’ ನಡೆಯಿತು. ನಗರದ ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋಲಿ, ಬುಗುರಿ, ಲಗೋರಿ, ಚಕ್ರಗಾಡಿ ತಳ್ಳುವುದು, ಕ್ಯಾಟರ್ ಬಿಲ್ಲಿನಿಂದ ಕಲ್ಲು ಹೊಡೆಯುವುದು, ಕುಂಟೆ ಬಿಲ್ಲೆ, ಚಿಣ್ಣಿದಾಂಡ್, ಮಡಿಕೆ ಒಡೆಯುವು ತೆಂಗಿನ ಕಾಯಿಗೆ ಕಲ್ಲು ಹೊಡೆಯುವುದು, ಕಪ್ಪೆ ಓಟ, ಕಾಳು ಹೆಕ್ಕುವುದು ಮೊದಲಾದ ಗ್ರಾಮೀಣ ಆಟಗಳಲ್ಲಿ ಮಕ್ಕಳು, ವಯೋವೃದ್ಧರು, ಯುವಕ, ಯುವತಿಯರು ಪಾಲ್ಗೊಂಡು ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಅಂತರಾಷ್ಟ್ರೀಯ ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಮಾತನಾಡಿ, ಮರೆತು ಹೋಗುತ್ತಿರುವ ಗ್ರಾಮೀಣ ಕ್ರೀಡೆಗಳಿಗೆ ಮರುಜೀವ ತುಂಬುವ ನಿಟ್ಟಿನಲ್ಲಿ ಕ್ರೀಡೋತ್ಸವವನ್ನು ಆಯೋಜಿಸಲಾಗಿದೆ ಇಂದಿನ ಯುವ ಸಮೂಹ ಮೊಬೈಲ್ ಪ್ರಭಾವಕ್ಕೆ ಸಿಲುಕಿ ಕ್ರೀಡಾ ಚಟುವಟಿಕೆಗಳಿಂದ ದೂರ ಸರಿದಿರುವುದಲ್ಲದೆ, ಅವರಿಗೆ ಗ್ರಾಮೀಣ ಆಟೋಟಗಳ ಬಗ್ಗೆ ಮಾಹಿತಿಗಳಿಲ್ಲ. ಗ್ರಾಮೀಣ ಕ್ರೀಡೋತ್ಸವದ ಮೂಲಕ ನಮ್ಮ ಹಳೆಯ ಕ್ರೀಡೆಗಳನ್ನು…
ಮಡಿಕೇರಿ ಡಿ.24 NEWS DESK : ನಗರದ ಕೊಡಗು ವಿದ್ಯಾಲಯದಲ್ಲಿ ಆಯೋಜಿತ ಅಂತರಶಾಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಜಿಲ್ಲೆಯ 15 ಶಾಲೆಗಳ ಕ್ರೀಡಾಳುಗಳು ಪಾಲ್ಗೊಂಡಿದ್ದರು. 14 ಮತ್ತು 16 ವಯೋಮಾನದ ಬಾಲಕ-ಬಾಲಕಿಯರ ನಡುವೆ ಈ ಪಂದ್ಯಾವಳಿಯು ನಡೆಯಿತು. 14 ವಯೋಮಾನದ ಬಾಲಕರ ವಿಭಾಗದಲ್ಲಿ ಲಿತೇಶ್ ಕೆ (ಸರ್ವದೈವತಾ ಶಾಲೆ) ಮತ್ತು ಅವನೀಶ್ ಕೃಷ್ಣ ಜಿ ಎಚ್ (ಕೊಡಗು ವಿದ್ಯಾಲಯ) ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿದರು. 14 ವಯೋಮಾನದ ಬಾಲಕಿಯರ ವಿಭಾಗದಲ್ಲಿ ಅಹಲ್ಯಾ ಮನೋಹರ್ ( ಸೆಂಟ್ ಮೇರಿಸ್ ಶಾಲೆ) ಮತ್ತು ದಕ್ಷತಾ ಡಿ (ಶಾಂತಿನಿಕೇತನ ಶಾಲೆ) ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿದರು. 16 ವಯೋಮಾನದ ಬಾಲಕರ ವಿಭಾಗದಲ್ಲಿ ಐಜಾನ್ (ಕೆಂದ್ರೀಯ ವಿದ್ಯಾಲಯ) ಮತ್ತು ಜಿ ಎಸ್ ಸುಧಾನ್ವ (ಜೂನಿಯರ್ ಕಾಲೇಜು ಮಡಿಕೇರಿ) ಪ್ರಥಮ ಹಾಗೂ ದ್ವಿತೀಯ ಸ್ಥಾನಗಳಿಸಿದರು. 16 ವಯೋಮಾನದ ಬಾಲಕಿಯರ ವಿಭಾಗದಲ್ಲಿ ಎಂ ಲೋಚನ್ ಸೂರಜ್ ( ಕಾಪ್ಸ್) ಮತ್ತು ಖ್ಯಾತಿ ಕಾವೇರಮ್ಮ (ಕೊಡಗು ವಿದ್ಯಾಲಯ)…
ಮಡಿಕೇರಿ ಡಿ.24 NEWS DESK : ಕರ್ನಾಟಕ ರಾಜ್ಯ ಔಖಾಫ್ ಮಂಡಳಿ ಬೆಂಗಳೂರು ವತಿಯಿಂದ ಕೊಡಗು ಜಿಲ್ಲಾ ವಕ್ಫ್ ಮಂಡಳಿ ಮಡಿಕೇರಿ ಮೂಲಕ ಮೃತದೇಹವನ್ನು ತಾತ್ಕಾಲಿಕವಾಗಿ ಸಂರಕ್ಷಿಸಿಡಲು ಸಹಕಾರಿಯಾಗುವ 5 ಫ್ರೀಜರ್‌ಗಳನ್ನು ಕೊಡಗು ಜಿಲ್ಲೆಯ ಐದು ತಾಲ್ಲೂಕುಗಳ ವಕ್ಫ್ ಸಂಸ್ಥೆಗಳಿಗೆ ಇಂದು ವಿತರಿಸಲಾಯಿತು. ವಕ್ಫ್ ಸಂಸ್ಥೆಗಳಾದ ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಗ್ರಾಮದ ತಾಜುಲ್ ಇಸ್ಲಾಮ್ ಜುಮ ಮಸೀದಿ, ಸೋಮವಾರಪೇಟೆ ತಾಲ್ಲೂಕಿನ ದೊಡ್ಡಕುಂದ ಗ್ರಾಮದ ಜುಮ ಮಸೀದಿ, ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪಲಿನ ಹನಫಿ ಜಾಮಿಯಾ ಮಸೀದಿ, ವಿರಾಜಪೇಟೆ ತಾಲ್ಲೂಕಿನ ಬಿಸ್ಮಿಲ್ಲಾ ಶಾವಲಿ ಮಕಾನ್‍ನ ಆಡಳಿತ ಮಂಡಳಿಯವರಿಗೆ ಕೊಡಗು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಜನಾಬ್ ಪಿ.ಎಂ.ಹಕೀಂ ಹಾಗೂ ಉಪಾಧ್ಯಕ್ಷ ಜೈನುಲ್ ಆಬಿದ್ ಮಡಿಕೇರಿ ಫ್ರೀಜರ್‌ಗಳನ್ನು ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಅಧ್ಯಕ್ಷ ಜನಾಬ್ ಪಿ.ಎಂ.ಹಕೀಂ ಪ್ರತಿ ತಾಲ್ಲೂಕಿಗೆ ಒಂದೊಂದು ಫ್ರೀಜರ್ ನ್ನು ನೀಡಲಾಗಿದ್ದು, ಆಯಾ ತಾಲ್ಲೂಕಿನ ಎಲ್ಲಾ ಮಸೀದಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದರು. ಸದಸ್ಯರಾದ ಇಮ್ರಾನ್ ಯು. ಮಡಿಕೇರಿ, ಆಲಿರ…
ಮಡಿಕೇರಿ ಡಿ.24 NEWS DESK : ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ನಿರ್ಧರಿಸಿ ಜಾಗೃತರಾಗಬೇಕು, ಗುರಿ ಮುಟ್ಟಲು ಸತತ ಶ್ರಮ ವಹಿಸಬೇಕು ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್ ರೋಟರಿಯನ್ ಸುರೇಶ್ ಚಂಗಪ್ಪ ಎಂದು ಕರೆ ನೀಡಿದ್ದಾರೆ. ರೋಟರಿ ಮಡಿಕೇರಿ ವತಿಯಿಂದ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 10ನೇ ತರಗತಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗಾಗಿ ನಡೆದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 10ನೇ ತರಗತಿ ಹಾಗೂ ಪಿಯುಸಿ ಹಂತ ವಿದ್ಯಾರ್ಥಿಗಳಿಗೆ ಭವಿಷ್ಯದ ನಿರ್ಧಾರವನ್ನು ಆಯ್ಕೆ ಮಾಡಿಕೊಳ್ಳಲು ಉತ್ತಮ ಕಾಲಘಟ್ಟವಾಗಿದ್ದು, ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು ಗುರಿ ಸಾಧನೆಗಾಗಿ ಶ್ರಮ ವಹಿಸಿದರೆ ದೇಶಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ ಎಂದರು. ಉದ್ಯೋಗವನ್ನು ಪಡೆಯಲು ವೃತ್ತಿ ತರಬೇತಿ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ಈಗಿನಿಂದಲೇ ತಯಾರಿಯನ್ನು ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಸೂಕ್ತ ತರಬೇತಿಯನ್ನು ಪಡೆದುಕೊಂಡು ನಿರ್ದಿಷ್ಟ ಗುರಿಯನ್ನು ತಲುಪಬೇಕು. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ನಿರ್ಧರಿಸಬೇಕು ಎಂದು…
ಮಡಿಕೇರಿ ಡಿ.24 NEWS DESK : ಬೆಂಗಳೂರು ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಧಿರಾಜ್ ಮುನಿರಾಜ್ ಬ್ರಿಗ್ರೆಡ್ ಸ0ಯುಕ್ತ ಆಶ್ರಯದಲ್ಲಿ ಜ.6 ರಿಂದ ಜ.8ರ ವರೆಗೆ ದೊಡ್ಡಬಳ್ಳಾಪುರ ಖಾಸ್ ಬಾಗ್ ದುರ್ಗಾಪುರ್ ಆಂಜನೇಯ ದೇವಸ್ಥಾನ ಹತ್ತಿರ ನಡೆಯಲಿರುವ ಪುರುಷರ ಸೀನಿಯರ್ ನ್ಯಾಷನಲ್ ಸ್ಟೇಟ್ ಕಬ್ಬಡಿ ಚಾಂಪಿಯನ್ ಶಿಪ್ ಪಂದ್ಯಾವಳಿಗೆ ಡಿ.29 ರಂದು ಕೊಡಗು ತಂಡದ ಆಟಗಾರರ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಂದು ಬೆಳಗ್ಗೆ 10 ಗಂಟೆ ಗೆ ಕುಶಾಲನಗರದ ಜ್ಞಾನ ಭಾರತಿ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಟಗಾರರು 85 ಕೆಜಿ ಒಳಗಿರಬೇಕು. ಆಸಕ್ತ ಆಟಗಾರರು ಆಧಾರ್ ಕಾರ್ಡ್ ಹಾಗೂ ಸೂಕ್ತ ದಾಖಲೆಯೊಂದಿಗೆ ಹಾಜರಿರುವಂತೆ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಕಪಿಲ್ ಕುಮಾರ್ ದುಗ್ಗಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಪಿಲ್ ದುಗ್ಗಳ 9731009841, ಮಣಿಕಂಠ 9482863707, ಅವಿನಾಶ್ 9036000141 ಸಂಪರ್ಕಿಸಬಹುದಾಗಿದೆ.
ಮಡಿಕೇರಿ ಡಿ.24 NEWS DESK : ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಸಂಸತ್‍ನಲ್ಲಿ ಪ್ರಸ್ತಾಪಿಸಿ ಅಪಹಾಸ್ಯ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ನಿಲುವನ್ನು ಖಂಡಿಸಿ ಕೊಡಗು ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಒಕ್ಕೂಟದ ಪ್ರಮುಖರು ಹಾಗೂ ಪದಾಧಿಕಾರಿಗಳು, ಮಾನವ ಸರಪಳಿ ರಚಿಸಿ, ಕೇಂದ್ರ ಗೃಹ ಸಚಿವ ಅಮಿತಾ ಶಾ ವಿರದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಪಮಾನಿಸುವ ಮೂಲಕ ಅಮಿತ್ ಷಾ ಅವರು ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ. ತಕ್ಷಣವೆ ಗೃಹ ಸಚಿವರು ರಾಷ್ಟ್ರದ ಜನತೆಯ ಮುಂದೆ ಕ್ಷಮೆ ಯಾಚನೆ ಮಾಡಬೇಕು ಮತ್ತು ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿದರು. ಜಿಲ್ಲಾ ದಸಂಸ ಸಂಚಾಲಕರಾದ ದಿವಾಕರ್, ಒಕ್ಕೂಟದ ಸಂಚಾಲಕ ಮೋಹನ್ ಮೌರ್ಯ, ಕಾರ್ಯದರ್ಶಿ ಗಣೇಶ್, ಪ್ರಮುಖರಾದ ಟಿ.ಪಿ.ರಮೇಶ್, ಚಂದ್ರಶೇಖರ್, ಇಸಾಖಾನ್, ಕೆ.ಜಿ.ಪೀಟರ್, ಮುಸ್ತಪಾ…
ಹೆಬ್ಬಾಲೆ NEWS DESK ಡಿ.24 : ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆಯಲ್ಲಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿದರು. ಬನಶಂಕರಿ ಕಲ್ಯಾಣಮಂಟಪದಲ್ಲಿ ನಡೆದ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದರು ಕೊಡಗು ಜಿಲ್ಲೆಯ ವಿವಿಧೆಡೆ ಟವರ್ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಈ ಕುರಿತು ಕೇಂದ್ರ ಸಚಿವರ ಬಳಿ ಚರ್ಚಿಸಿ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲೆಯ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ತಿಳಿಸಿದರು. ಇದೇ ಸಂದರ್ಭ ಗ್ರಾಮಸ್ಥರು ಸಂಸದರನ್ನು ಭೇಟಿಯಾಗಿ ಸಮಸ್ಯೆಗಳ ಕುರಿತು ವಿವರಿಸಿ ಮನವಿ ಸಲ್ಲಿಸಿದರು. ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಪಟಾಕಿ ಸಿಡಿಸಿ ಸಂಭ್ರಮದಿ0ದ ಯದುವೀರ್ ಅವರನ್ನು ಸ್ವಾಗತಿಸಿದರು.
ಮಡಿಕೇರಿ ಡಿ.24 NEWS DESK : ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮೈಸೂರು ಪ್ರಾಂತೀಯ ಕಛೇರಿಯ ವತಿಯಿಂದ ಕೊಡಗು ಜಿಲ್ಲಾ ಸಹಕಾರಿಗಳ ಮುಖ್ಯ ಕಾರ್ಯ ನಿರ್ವಾಹಕರ ವಾರ್ಷಿಕ ಸಭೆಯು ಕೊಡವ ಎಂಟರ್ಪ್ರೆನರ್ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಕೊಡವ ಸಮಾಜ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ ಅಧ್ಯಕ್ಷ ಎಂ.ಪಿ.ಮುತ್ತಪ್ಪ ಕೊಡಗಿನ ಸಹಕಾರಿ ಮತ್ತು ಅದರ ಕಾರ್ಯವೈಖರಿಯ ಕುರಿತು ವಿಮರ್ಶಿಸಿದರು. ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಿಲ್ಲಾ ವ್ಯವಸ್ಥಾಪಕ ಮನೋಜ್ ಕುಮಾರ್ ಸಾಮಾನ್ಯ ಸೇವಾ ಕೇಂದ್ರದ ಕುರಿತು (ಸಿಎಸ್ ಸಿ) ಮಾಹಿತಿಯನ್ನು ನೀಡಿದರು. ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ ಮುಖ್ಯ ಕಾರ್ಯನಿರ್ವಾಹಕರ ಶಾಸನಬದ್ಧ ಜವಾಬ್ದಾರಿ ಮತ್ತು ಕರ್ತವ್ಯಗಳ ಕುರಿತು ಉಪನ್ಯಾಸ ನೀಡಿದರು. ಸಹಕಾರಿ ಅಭಿವೃದ್ಧಿ ಅಧಿಕಾರಿ ಆರ್.ಎಸ್.ಸುರೇಶ ಆರ್ಥಿಕ ಸಬಲತೆಯ ಮಾನದಂಡಗಳ ಸುತ್ತೋಲೆ & ಲೆಕ್ಕಪರಿಶೋಧನ ವರದಿಯಲ್ಲಿ ಕಂಡುಬಂದಿರುವ ನ್ಯೂನ್ಯತೆಗಳ ಕುರಿತು …
ಮೂರ್ನಾಡು ಡಿ.24 NEWS DESK : ರಾಜ್ಯಮಟ್ಟದ 16ನೇ ಈಶ ಗ್ರಾಮೋತ್ಸವದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾಂತೂರು-ಮೂರ್ನಾಡು ಮಹಿಳಾ ತಂಡವು ಪ್ರಥಮ ಸ್ಥಾನ ಪಡೆದು ರಾಷ್ಟಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ ಆಯೋಜಿಸಲಾಗಿದ್ದ ಈಶ ಗ್ರಾಮೋತ್ಸವದ ಥ್ರೋಬಾಲ್ ಪಂದ್ಯಾವಳಿಗೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 14 ತಂಡಗಳ ನಡುವೆ ರೋಮಾಂಚಕ ಪ್ರದರ್ಶನಗಳು ನಡೆದು, ಕೊಡಗು ಜಿಲ್ಲೆಯ ಕಾಂತೂರು-ಮೂರ್ನಾಡು ಮಹಿಳಾ ತಂಡ ಮತ್ತು ಮರಗೋಡು ಬ್ಯಾಕ್ ಪ್ಯಾಂಥರ್ರ್ಸ್ ಪ್ರವೇಶಿಸಿತು. ಈ ಎರಡು ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಕಾಂತೂರು-ಮೂರ್ನಾಡು ಮಹಿಳಾ ತಂಡ ವಿಜಯ ಸಾಧಿಸಿತು. ಈ ತಂಡವು ಇದೆ ತಿಂಗಳು 28 ರಂದು ಕೊಯಂಬುತ್ತೂರಿನ ಈಶ ಯೋಗಕೇಂದ್ರದಲ್ಲಿ ನಡೆಯುವ ರಾಷ್ಟಮಟ್ಟದ ಗ್ರಾಮ ನಾಲೆಯಲ್ಲಿ ಭಾಗವಹಿಸಲಿದ್ದಾರೆ. ವರದಿ : ಟಿ.ಸಿ.ನಾಗರಾಜ್, ಮೂರ್ನಾಡು.






