ನಾಪೋಕ್ಲು ಡಿ.23 NEWS DESK : ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ನೆರವಂಡ ಸುನಿಲ್ ದೇವಯ್ಯ ಹೇಳಿದರು. ನಾಪೋಕ್ಲುವಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ಆಯೋಜಿಸಲಾಗಿದ್ದ ವಾರ್ಷಿಕ ಕ್ರೀಡೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆಗೂ ಆದ್ಯತೆ ನೀಡಬೇಕು. ಆಗ ಮಾತ್ರ ಕ್ರೀಡೆಯಲ್ಲಿ ಉನ್ನತ ಸ್ಥಾನಕ್ಕೆ ಏರಲು ಸಾಧ್ಯ ಎಂದರು. ಕ್ರೀಡಾಕೂಟದಲ್ಲಿ ಸಿಂಧು ತಂಡ ಸಮಗ್ರ ಪಾರಿತೋಷಕವನ್ನು ಪಡೆದುಕೊಂಡರೆ, ದ್ವಿತೀಯ ಸ್ಥಾನವನ್ನು ಕೃಷ್ಣ ತಂಡದವರು ಪಡೆದುಕೊಂಡರು. ವಿದ್ಯಾ ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕರಾದ ಪ್ರೊ.ಕಲ್ಯಾಟಂಡ ಪೂಣಚ್ಚ, ಅಪ್ಪಾರಂಡ ಅಪ್ಪಯ್ಯ, ಬಿದ್ದಾಟಂಡ ಮುದ್ದಯ್ಯ, ಕೊಂಬಂಡ ಗಣೇಶ, ನಾಯಕಂಡ ದೀಪಕ್ ಚಂಗಪ್ಪ, ಕಲಿಯಂಡ ಕೌಶಿಕ್ ಕುಶಾಲಪ್ಪ, ಪ್ರಾಂಶುಪಾಲರಾದ ಬಿ.ಎಂ.ಶಾರದಾ ಅಪ್ಪಣ್ಣ ಉಪಸ್ಥಿತರಿದ್ದರು. ಪರಿಧಿ ಪೊನ್ನಮ್ಮ ಪ್ರಾರ್ಥಿಸಿದರು. ಬಿ.ಎಂ.ಶಾರದ ಸ್ವಾಗತಿಸಿದರು, ಶಿಕ್ಷಕರಾದ ಎಂ.ಡಿ.ಕಾಳಯ್ಯ ಮತ್ತು ಎ.ಟಿ.ಭಗವತಿ ಪ್ರಸಾದ್ ನಿರೂಪಿಸಿದರು. ಬಿ.ಪಿ.ಸೌಮ್ಯ ಅತಿಥಿಗಳ ಪರಿಚಯಿಸಿದರು. ಕೆ.ಕೆ.ಸರಿತಾ ಕ್ರೀಡಾ ವರದಿ ವಾಚಿಸಿದರು. ವಿ.ಎನ್.ರೇಷ್ಮಾ…
ಲೇಖಕ: admin
ಕುಶಾಲನಗರ ಡಿ.23 NEWS DESK : ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿರೂಪಾಕ್ಷಪುರ ಗ್ರಾಮ ಅರಣ್ಯ ಸಮಿತಿಗೆ ನೂತನವಾಗಿ ಪದಾಧಿಕಾರಗಳನ್ನು ನೇಮಕ ಮಾಡಲಾಗಿದ್ದು, ಈ ಸಂಬಂಧ ಗ್ರಾಮದ ಹೆಬ್ಬಾಗಿಲಿನಲ್ಲಿ ಅರಣ್ಯ ಸಮಿತಿ ನಾಮಫಲಕವನ್ನು ಗಿರಿಜನ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ಕೆ.ಚಂದ್ರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಗಿರಿಜನ ನಿವಾಸಿಗಳೂ ಸೇರಿದಂತೆ ಇತರೇ ನಿವಾಸಿಗಳಿಗೆ ಸರ್ಕಾರದ ಸವಲತ್ತುಗಳು ಸಮರ್ಪಕವಾಗಿ ದೊರಕುವಂತಾಗಬೇಕು. ಈ ನಿಟ್ಟಿನಲ್ಲಿ ಗ್ರಾಮದ ನಿವಾಸಿಗಳು ಸಂಘಟಿತರಾಗಿ ಹೋರಾಟ ನಡೆಸುವ ಮೂಲಕ ಸೌಲಭ್ಯಗಳನ್ನು ಪಡೆದುಕೊಳ್ಳಲು ಗ್ರಾಮ ಅರಣ್ಯ ಸಮಿತಿ ರಚಿಸಲಾಗಿದೆ ಎಂದರು. ಈ ಸಂದರ್ಭ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷ ಹೆಚ್.ಕೆ.ಗಿರೀಶ, ಉಪಾಧ್ಯಕ್ಷೆ ಹೆಚ್.ಕೆ.ಗಿರಿಜ, ಕಾರ್ಯದರ್ಶಿ ಕೆ.ಟಿ.ಕೇಶವ, ಗ್ರಾಮದ ಯಜಮಾನ ಪಿ.ಹೆಚ್.ದೇವರಾಜು, ಸದಸ್ಯರುಗಳಾದ ಬಿ.ಟಿ.ಪೊನ್ನಪ್ಪ, ಸಿ.ಆರ್.ಪದ್ಮಾವತಿ, ಎನ್.ಶೀಬಾ, ಹೆಚ್.ಟಿ.ಜಯ, ಎಂ.ಎ.ಬಶೀರ್, ಕೆ.ಎಸ್.ಮಣಿ, ಕೆ.ಎಂ.ಅಬ್ಬಾಸ್, ಹೆಚ್.ಎಸ್.ಶಾರದಾ, ಕೆ.ಜಿ.ಮಂಜುನಾಥ ಸೇರಿದಂತೆ ಮತ್ತಿತರ ಪ್ರಮುಖರು ಹಾಜರಿದ್ದರು.
ಕಣಿವೆ ಡಿ.23 NEWS DESK : ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನದ ಬೇಸಾಯ ಪದ್ದತಿಯನ್ನು ಅಳವಡಿಸುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು. ಜೊತೆಗೆ ಯುವಜನತೆಯನ್ನು ಕೃಷಿಯತ್ತ ಆಕರ್ಷಿಸಬೇಕೆಂದು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ.ಜಿ.ಎಂ.ದೇವಗಿರಿ ಕರೆ ನೀಡಿದರು. ಕುಶಾಲನಗರ ತಾಲ್ಲೂಕಿನ ಚಿಕ್ಕನಾಯಕನ ಹೊಸಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆಯ ವತಿಯಿಂದ ಮಾಜಿ ಪ್ರಧಾನಿ ಚರಣ್ ಸಿಂಗ್ ಚೌಧರಿ ಹುಟ್ಟು ಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ರೈತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತರು ಕೇವಲ ಭತ್ತ, ಜೋಳದಂತಹ ಬೆಳೆಗಳಿಗೆ ಸೀಮಿತವಾಗದೇ ಸಮಗ್ರ ಬೆಳೆಗಳತ್ತ ಮುಂದಾಗಬೇಕು. ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ರೈತರಿಗೆ ಅರಣ್ಯ ಇಲಾಖೆಯಿಂದ ಸಾಕಷ್ಟು ಪ್ರಯೋಜನಗಳಿದ್ದು, ಈ ಯೋಜನೆಗಳ ಬಗ್ಗೆ ರೈತರಿಗೆ ಅರಿವಿಲ್ಲ. ಅತ್ತ ಅರಣ್ಯ ಇಲಾಖೆಯೂ ರೈತರ ಮನೆ ಬಾಗಿಲತ್ತ ತೆರಳಿ ಯೋಜನೆಗಳ ಮಾಹಿತಿಗಳಾಗಲೀ, ಅನುಕೂಲಗಳನ್ನಾಗಲೀ ಒದಗಿಸುತ್ತಿಲ್ಲ ಎಂದು ಡಾ.ದೇವಗಿರಿ ವಿಷಾದಿಸಿದರು. ಕೃಷಿ ಅರಣ್ಯದಲ್ಲಿ ರೈತರಿಗೆ ಸಾಕಷ್ಟು ಪ್ರಯೋಜನಗಳಿದ್ದು, ಹೆಚ್ಚು ಲಾಭದಾಯಕವಾದ ಕೃಷಿಯಾಗಿದೆ. ಜೊತೆಗೆ ಭೂಮಿಯ ಫಲವತ್ತತೆಯೂ ಹೆಚ್ಚುತ್ತದೆ ಎಂದು ಅವರು ಮಾಹಿತಿ…
ಮಡಿಕೇರಿ ಡಿ.23 NEWS DESK : ಕೊಡವ ಮಕ್ಕಡ ಕೂಟದ 106ನೇ ಮತ್ತು ನಟ, ನಿರ್ದೇಶಕ, ನಿರ್ಮಾಪಕ, ಸಾಹಿತಿ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ರಚಿತ 11ನೇ ಪುಸ್ತಕ “ಗಮ್ಯ” ಇಂದು ಬಿಡುಗಡೆಗೊಂಡಿತು. ನಗರದ ಪತ್ರಿಕಾ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಮಂಡೇಪಂಡ ಸುನಿಲ್ ಸುಬ್ರಮಣಿ ಅವರು ಸಮಾಜದ ಸುಧಾರಣೆಯಲ್ಲಿ ಪುಸ್ತಕಗಳು ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಪುಸ್ತಕಗಳು ಸಾಮಾಜಿಕ ಕಾಳಜಿಯೊಂದಿಗೆ ಉತ್ತಮ ಸಂದೇಶವನ್ನು ನೀಡಬೇಕು, ಬಿಡುಗಡೆಗೊಳ್ಳುವ ಪುಸ್ತಕಗಳಿಗೆ ಹೆಚ್ಚಿನ ಪ್ರಚಾರ ನೀಡುವ ಮೂಲಕ ಓದುಗರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದರು. ಅರ್ಜಿ ಹಾಕಿ ಯಾವುದೇ ಜಾತಿಯಲ್ಲಿ ಹುಟ್ಟಲು ಸಾಧ್ಯವಿಲ್ಲ, ಹುಟ್ಟಿದ ಮೇಲೆ ಜಾತಿಯ ಬಗ್ಗೆ ಸ್ವಾಭಿಮಾನ, ಅಭಿಮಾನವಿರಬೇಕು. ಹುಟ್ಟಿದ ಮಣ್ಣಿನ ಮೇಲೆ ಪ್ರೀತಿ ಇರಬೇಕು. ಕೊಡವರಾಗಿ ಹುಟ್ಟಿರುವ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಅವರು ಕೊಡಗಿನ ನೆಲ, ಜಲ, ಸಂಸ್ಕೃತಿಯನ್ನು ಹೆಚ್ಚು ಪ್ರೀತಿಸುತ್ತಾರೆ. ಇವರ ಸಿನಿಮಾಗಳಲ್ಲಿ ಇದನ್ನು ಕಾಣಬಹುದಾಗಿದೆ. ಸಿನಿಮಾ ಕ್ಷೇತ್ರದೊಂದಿಗೆ ಸಾಹಿತ್ಯ ಕ್ಷೇತ್ರಕ್ಕೂ…
ನಾಪೋಕ್ಲು ಡಿ.23 NEWS DESK : ವಿದ್ಯಾರ್ಥಿ ಜೀವನದಲ್ಲಿ ಎಸ್‍ಎಸ್‍ಎಲ್‍ಸಿ ಪ್ರಮುಖ ಘಟ್ಟವಾಗಿದ್ದು, ಯಶಸ್ಸಿನ ಮೆಟ್ಟಿಲನ್ನು ಏರಲು ವಿದ್ಯಾರ್ಥಿಗಳು ಸತತವಾಗಿ ಶ್ರಮವಹಿಸಬೇಕು ಎಂದು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ ಅನಂತಶಯನ ಹೇಳಿದರು. ಕೆಪಿಎಸ್ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಪರೀಕ್ಷಾ ಸಿದ್ಧತೆ ಪ್ರೇರಣಾ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಜೀವನದಲ್ಲಿ ಅಸಾಧ್ಯವಾದದ್ದು, ಏನೂ ಇಲ್ಲ. ಗುರು ನಿಮ್ಮ ಭವಿಷ್ಯವನ್ನು ರೂಪಿಸುತ್ತಾರೆ. ಅದಕ್ಕೆ ಗುರುವಿಗೆ ದೇವರ ಸ್ಥಾನವನ್ನು ಕಲ್ಪಿಸಲಾಗಿದೆ ಎಂದರು. ಭವಿಷ್ಯವನ್ನು ರೂಪಿಸಲು ಅಧಿಕ ತಯಾರಿ ನಡೆಸಬೇಕಾಗುತ್ತದೆ. ಉತ್ತಮ ಶಿಕ್ಷಣ ಪಡೆಯುವುದರ ಮೂಲಕ ಸಮಾಜವನ್ನು ಬೆಳೆಸುವ, ಕಟ್ಟುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಬೆಳೆಯಬೇಕು ಎಂದ ಅವರು ತಯಾರಿಗೆ ಸಮಯ ವ್ಯರ್ಥ ಮಾಡದೆ ವಿದ್ಯಾರ್ಥಿಗಳು ಕಲಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಕೂಡಿಗೆ ಡಯಟ್ ಪ್ರಾಂಶುಪಾಲರಾದ ಎಂ.ಚಂದ್ರಕಾಂತ್ ಮಾತನಾಡಿ, ಬದಲಾದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳನ್ನು ಸ್ನೇಹಿತರನ್ನಾಗಿ ಶಿಕ್ಷಣ ಇಲಾಖೆ ನೋಡುತ್ತಿದೆ. ಈಗಿನ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಮತ್ತು ಸೌಲಭ್ಯವಿದೆ. ಪರೀಕ್ಷೆ ಎಂದರೆ ಭಯ ಬೇಡ…
ಸುಂಟಿಕೊಪ್ಪ ಡಿ.23 NEWS DESK : ಪೋಷಕರು ತಮ್ಮ ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡಬೇಕೆಂದು ಸೋಮವಾರಪೇಟೆ ತಾಲೂಕು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕರೆ ನೀಡಿದರು. ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಸಂಯಕ್ತ ಕಾಲೇಜಿನಲ್ಲಿ ನಡೆದ ಕ್ರೀಡಾ ದಿನಚಾರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಸೋಮವಾರಪೇಟೆ, ಕುಶಾಲನಗರ ತಾಲ್ಲೂಕುಗಳಲ್ಲಿ ಮಡಿಕೇರಿ ಜನಪ್ರಿಯ ಶಾಸಕ ಡಾ.ಮಂತರ್‍ಗೌಡ ಅವರ ನಿರ್ದೇಶನ ಮತ್ತು ಉತ್ತೇಜನದ ಮೇರೆಗೆ ಆರು ಶ್ರೇಷ್ಠಗುಣ ಮಟ್ಟದ ವಾಲಿಬಾಲ್ ಮೈದಾನಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಸೋಮವಾರಪೇಟೆ ಜಯವೀರ ಮಾತೆ ದೇವಾಲಯದ ಧರ್ಮಗುರುಗಳಾದ ರೆ.ಪಾ.ಅವಿನಾಶ್ ಮಾತನಾಡಿ, ಸಂತೋಷವನ್ನು ಅಂಗಡಿಯಲ್ಲಿ ಖರೀದಿಸಲು ಸಾಧ್ಯವಿಲ್ಲ. ನಮ್ಮೊಳಗೆ ಉಳಿಸಿಕೊಳ್ಳಬೇಕಾದರೆ ನಾವು ದೈಹಿಕವಾಗಿ ಸಧೃಢರಾಗಿರಬೇಕು. ದೈಹಿಕವಾಗಿಸದೃಢರಾಗಿಬೇಕಾದರೆ ಕ್ರೀಡೆ ಅತ್ಯವಶ್ಯಕ ಎಂದರು. ಸಂತ ಆಂಗ್ಲ ಮಾಧ್ಯಮ ಶಾಲೆಯ ವ್ಯವಸ್ಥಾಪಕ ರೇ.ಪಾ.ವಿಜಯಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪೋಷಕರು ತಮ್ಮಿಂದ ಸಾಧಿಸಲಾಗದನ್ನು ಮಕ್ಕಳ ಹೇರÀಬೇಡಿ, ಮಕ್ಕಳು ಅವರ ಇಷ್ಟದ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೋತ್ಸಾಹಿಸಿ ಎಂದು ಕರೆ…
ಮಡಿಕೇರಿ ಡಿ.23 NEWS DESK : ಹಾತೂರು ಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹಹಾಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ನೂತನ ಕಟ್ಟಡದಲ್ಲಿ ಹಾತೂರು ಪಂಚಾಯಿತಿ ಯಶಸ್ಸು ಕಂಡು ಜನಸಾಮಾನ್ಯರ ಕುಂದು ಕೊರತೆಗಳಿಗೆ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುವಂತಾಗಲಿ ಎಂದು ಶುಭಹಾರೈಸಿದರು.
ಸುಂಟಿಕೊಪ್ಪ ಡಿ.23 NEWS DESK : ಸಂಘದ ಕಾರ್ಯಚಟುವಟಿಕೆಗಳು ನಿರಂತರವಾಗಿ ನಡೆಯಬೇಕೆಂದರೆ ಸಂಘಕ್ಕೆ ಕಟ್ಟಡ ಮುಖ್ಯವಾಗಿದೆ. ಆದ್ದರಿಂದ ಸದಸ್ಯರುಗಳು ಸಂಘಕ್ಕೆ ಕಟ್ಟಡ ನಿರ್ಮಿಸುವ ದಿಸೆಯಲ್ಲಿ ಸಹಕರಿಸಬೇಕು ಎಂದು ಗೌಡ ಸಂಘ ಸುಂಟಿಕೊಪ್ಪ ನಾಡುಸಂಘದ ಅಧ್ಯಕ್ಷ ಯಂಕನ ಉಲ್ಲಾಸ್ ಹೇಳಿದರು. ಗೌಡ ಸಂಘ ಸುಂಟಿಕೊಪ್ಪ ನಾಡು ಸಂಘದ 9ನೇ ವರ್ಷದ ವಾರ್ಷಿಕ ಮಹಾಸಭೆಯನ್ನು ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಯಂಕನ ಉಲ್ಲಾಸ್ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಂಘದಲ್ಲಿ 800 ಕ್ಕೂ ಮಿಕ್ಕಿ ಮಂದಿ ಸದಸ್ಯತ್ವನ್ನು ಹೊಂದಿಕೊಂಡಿದ್ದಾರೆ. ಸಂಘದ ಪದಾಧಿಕಾರಿಗಳು ಕಳೆದ 8 ವರ್ಷಗಳಿಂದಲ್ಲೂ ಸಮಾಜ ಕಟ್ಟಡ ನಿರ್ಮಿಸುವ ಇರಾದೆಯನ್ನು ಇರಿಸಿಕೊಂಡಿದ್ದಾರೆ ಅದನ್ನು ಸಾಕಾರಗೊಳಿಸುವಲ್ಲಿ ಇಮ್ಮಡಿಗೊಳ್ಳುತ್ತಿದ್ದು, ಸಂಘದ ಸರ್ವ ಸದಸ್ಯರು ಮತ್ತುಷ್ಟು ಸಹಕಾರವನ್ನು ನೀಡಿದಲ್ಲಿ ಮುಂದಿನ ದಿನಗಳಲ್ಲಿ ಕಟ್ಟಡಕ್ಕೆ ಭೂ ಖರೀದಿಗೊಳಿಸುವ ಮೂಲಕ ಅಲ್ಲಿಯೇ ಉತ್ತಮ ಕಾರ್ಯಕ್ರಮಗಳನ್ನು ನಿಯೋಜಿಸಲಾಗುವುದೆಂದು ಅಧ್ಯಕ್ಷ ಯಂಕನ ಉಲ್ಲಾಸ್ ಹೇಳಿದರು. ಸಂಘದ ನೂತನ ಅಧ್ಯಕ್ಷ ಕುಂಜಿಲನ. ಎಸ್.ಮಂಜುನಾಥ್ ಮಾತನಾಡಿ ಸಂಘವು ಯಾವುದೇ…
ಸುಂಟಿಕೊಪ್ಪ ಡಿ.23 NEWS DESK : ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ವ್ಯಾಯಾಮ, ಕ್ರೀಡೆ ಮುಖ್ಯ ಎಂದು ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲೆ ವಾರ್ಷಿಕ ಕ್ರೀಡಾಕೂಟ ಸಮಾರಂಭದಲ್ಲಿ ಬೆಂಗಳೂರಿನ ಬಿ.ಬಿ.ಎಂ.ಪಿ.ಹಿರಿಯ ಆರೋಗ್ಯ ಪರಿವೀಕ್ಷಕರಾದ ಕೆ.ಬಿ.ಸಂಧ್ಯಾ ಹೇಳಿದರು. ಸುಂಟಿಕೊಪ್ಪನಾಡು ಪ್ರೌಢಶಾಲೆಯ ಶಾಲಾ ವಾರ್ಷಿಕ ಕ್ರೀಡಾಕೂಟ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಶಾಲೆಯು ನನ್ನ ವೈಯಕ್ತಿಕ ಬೆಳೆವಣಿಗೆಗೆ ತನ್ನದೆಯಾದ ಕೊಡುಗೆಯನ್ನು ನೀಡಿದೆ ಎಂದಿಗೂ ಈ ಶಾಲೆಯ ಋಣವನ್ನು ಮರೆಯಲು ಸಾಧ್ಯವಿಲ್ಲ, ನಾನು ಹಿರಿಯ ಸರಕಾರಿ ಅಧಿಕಾರಿಯಾಗಿದ್ದರೂ ಕೂಡ ಅಲ್ಲಿ ನನ್ನ ವೃತ್ತಿಪರತೆಯನ್ನು ಸಾಭಿತುಪಡಿಸಲು ಆತ್ಮಸ್ಥೈರ್ಯ, ಜ್ಞಾನ, ಸಾಮಥ್ರ್ಯ ಮುಖ್ಯ. ಅದಕ್ಕೆ ಈ ಶಾಲೆಯ ಶಿಕ್ಷಕರುಗಳು ಕಾರಣಿಭೂತರೆಂದು ಭಾವುಕರಾಗಿ ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಕೊಡಗರಹಳ್ಳಿ ಎಜುಕೇಷನ್ ಸೊಸೈಟಿ ಗೌರವ ಕಾರ್ಯದರ್ಶಿ ಕುಂಜಿಲನ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕ.ರಾ.ಪ್ರಾ.ಶಾ.ಶಿ.ಸಂಘದ ಉಪಾಧ್ಯಕ್ಷ ಹಂಚೆಟ್ಟಿರ ಕರುಂಬಯ್ಯ, ಶಾಲೆಯ ಹಳೆಯ ವಿದ್ಯಾರ್ಥಿ, ನಿವೃತ್ತ ಉಪ ಅರಣ್ಯಾ…
ಸುಂಟಿಕೊಪ್ಪ ಡಿ.23 NEWS DESK : ವಿದ್ಯಾರ್ಥಿಗಳಿಗೆ ಮುಂದಿನ ಗುರಿ, ಏಕಾಗ್ರತೆ ಸಾಧಿಸುವ ಛಲ, ವಿದ್ಯಾರ್ಜನೆಯಲ್ಲಿ ಪರಿಶ್ರಮ ಮುಖ್ಯವಾಗಿದೆ. ಪೋಷಕರು ಮಕ್ಕಳ ವಿದ್ಯಾರ್ಜನೆಗೆ ಒತ್ತು ನೀಡಬೇಕು ಎಂದು ದಾನಿಗಳೂ ಹಾಗೂ ಬೆಂಗಳೂರಿನ ಪುರವಂಕರ ಕಾರ್ಯನಿರ್ವಾಹಕ ಉಪಾಧ್ಯಕ್ಷ ಹರಪಳ್ಳಿ ರವೀಂದ್ರ ಕರೆ ನೀಡಿದರು. ಸುಂಟಿಕೊಪ್ಪ ನಾಡು ಪ್ರೌಢಶಾಲೆ ಕೊಡಗರಹಳ್ಳಿ ಶಾಲೆಯ 59ನೇ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಒಳ್ಳೆಯ ಭವಿಷ್ಯವಿದೆ. ಪಠ್ಯೇತರ ಚಟುವಟಿಕೆಗಳಲ್ಲೂ ಮಕ್ಕಳೂ ಮುಂದಿದ್ದಾರೆ. ಆದರೆ ಶಾಲಾ ಮಕ್ಕಳು ಚಲನಚಿತ್ರ ನಟ, ನಟಿಯರನ್ನು ವೈಭವಿಕರೀಸುವ ಮನೋಭಾವ ತ್ಯಜಿಸಬೇಕು. ಸಮಾಜ ಪರಿವರ್ತಕರಾದ ಸ್ವಾಮಿವಿ ವೇಕಾನಂದ, ಗಾಂಧೀಜಿ, ಲಾಲ್ ಬಹುದ್ದೂರ್ ಶಾಸ್ತ್ರಿ, ಸುಭಾಷ್ ಚಂದ್ರಭೋಸ್, ಮಾಜಿ ರಾಷ್ಟ್ರಪತಿ ಅಬ್ಧುಲ್ ಕಲಾಂ ಅವರನ್ನು ಆದರ್ಶವಾಗಿ ತೆಗೆದುಕೊಂಡರೆ ಮುಂದಿನ ಭವಿಷ್ಯದಲ್ಲಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬಲ್ಲರು ಎಂದು ಅಭಿಮತ ವ್ಯಕ್ತಪಡಿಸಿದರು. ಅಭಿವೃದ್ಧಿ ಪಥದತ್ತ ಸಾಗಿದ ರಷ್ಯಾ, ಚೀನಾ, ಜಪಾನ್ ರಾಷ್ಟ್ರದ ಅಧಿಕಾರ ಚುಕ್ಕಾಣಿ ಹಿಡಿದ ನಾಯಕರುಗಳಿಗೆ ಇಂಗ್ಲೀಷ್ ಬರದಿದ್ದರೂ ಅವರು ದೇಶವನ್ನು ಅಭಿವೃದ್ಧಿ ಮುಂಚೂಣಿಗೆ ತಂದಿದ್ದನ್ನು…






