ಲೇಖಕ: admin

ಮಡಿಕೇರಿ ಡಿ.7 NEWS DESK : ನಗರದ ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಷಷ್ಠಿ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಎರಡು ದಿನಗಳ ಕಾಲ ಮುಂಜಾನೆಯಿಂದ ಗಣಪತಿ ಹೋಮ, ಕಳಸ ಪೂಜೆ, ಮಹಾ ಸುದರ್ಶನ ಹೋಮ, ಶ್ರೀಸುಬ್ರಹ್ಮಣ್ಯ ದೇವರಿಗೆ ವಿಶೇಷವಾಗಿ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂ ಸೇವೆ, ಪಂಚಕಜ್ಜಾಯ ಸೇವೆ, ಹಣ್ಣುಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಸೇವೆಗಳು ಹಾಗೂ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ ನಡೆಯಿತು. ಮಧ್ಯಾಹ್ನ ಶ್ರೀ ಸುಬ್ರಮಣ್ಯ ದೇವರ ಕ್ಷೇತ್ರ ಪ್ರದಕ್ಷಿಣೆ, ಮಹಾಮಂಗಳಾರತಿ ನಂತರ ನೆರೆದಿದ್ದವರಿಗೆ ಅನ್ನಸಂತರ್ಪಣೆ ನಡೆಯಿತು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಸಂಜೆ 6 ಗಂಟೆಗೆ ಭಜನಾ ಕಾರ್ಯಕ್ರಮ, 7 ಗಂಟೆಗೆ ರಂಗಪೂಜೆ, 8 ಗಂಟೆಗೆ ಮಹಾಪೂಜೆಯ ನಂತರ ಪ್ರಸಾದ ವಿತರಣೆಯಾಗಲಿದೆ.

Read More

ಮಡಿಕೇರಿ ಡಿ.7 NEWS DESK : ಕೇಂದ್ರ ಸರಕಾರದಿಂದ ಕೊಡಮಾಡುವ ಪ್ರತಿಷ್ಠಿತ ದೀನ್ ದಯಾಳ್ ಪಂಚಾಯತ್ ವಿಕಾಸ್ ಪುರಸ್ಕಾರಕ್ಕೆ ರಾಜ್ಯದಿಂದ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮ ಪಂಚಾಯಿತಿ ಆಯ್ಕೆಯಾಗುವ ಮೂಲಕ ಪ್ರಶಸ್ತಿ ಪಟ್ಟಿಯಲ್ಲಿ ಸ್ಥಾನ ಪಡೆದ ರಾಜ್ಯದ ಏಕೈಕ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬಡತನ ನಿರ್ಮೂಲನೆ, ಜಿವನೋಪಾಯ ಅಭಿವೃದ್ಧಿ ಅಂಶದಡಿ ಈ ಪುರಸ್ಕಾರವನ್ನು ಗಾಳಿಬೀಡು ಗ್ರಾ.ಪಂ ಪಡೆದುಕೊಂಡಿದ್ದು, ಡಿ.11 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪಂಚಾಯತ್ ರಾಜ್ ಸಚಿವಾಲಯ ಅಧಿಕೃತವಾಗಿ ತಿಳಿಸಿದೆ. ಗಾಳಿಬೀಡು ಗ್ರಾ.ಪಂ ಗ್ರಾಮಸ್ಥರ ಜೀವನಮಟ್ಟ ಸುಧಾರಣೆಗೆ ಅನೇಕ ಕಾರ್ಯಕ್ರಮ ಕೈಗೊಂಡಿದೆ. ಮೂಲಭೂತ ಸೌಕರ್ಯವನ್ನು ಸಮರ್ಪಕವಾಗಿ ಒದಗಿಸಿ ಜೀವನೋಪಾಯ ಅಭಿವೃದ್ಧಿಗೊಳಿಸಿದೆ. ಶಾಲೆಯಲ್ಲಿ ಉದ್ಯಾನ, ಶೌಚಾಲಯ ವ್ಯವಸ್ಥೆ, ಸರೋವರ ನಿರ್ಮಾಣದ ಮೂಲಕ ಪ್ರವಾಸೋದ್ಯಮದ ಅಭಿವೃದ್ದಿ, ಜನರಿಗೆ ಅಗತ್ಯ ದಾಖಲೆ, ಫಲಾನುಭವಿಗಳಿಗೆ ಪಿಂಚಣಿ ವ್ಯವಸ್ಥೆ, ಅಂಗನವಾಡಿ ಮಕ್ಕಳಿಗೆ ಪೌಷ್ಠಿಕಾಂಶ ಆಹಾರ ವಿತರಣೆ, ಸ್ವಸಹಾಯ ಸಂಘಕ್ಕೆ ಆರ್ಥಿಕ ನೆರವು…

Read More

ಮಡಿಕೇರಿ ಡಿ.7 NEWS DESK : ನಗರದ  ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ  “ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದ ನಾಗಬನದಲ್ಲಿ ವಿಶೇಷ ಪೂಜೆ, ಎಳನೀರು ಅಭಿಷೇಕ ಹಾಗೂ ಹಾಲಿನ ಅಭಿಷೇಕ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

Read More

ಸುಂಟಿಕೊಪ್ಪ ಡಿ.7 : ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಶ್ರೀ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ಗಣಪತಿ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

Read More

ಮಡಿಕೇರಿ NEWS DESK ಡಿ.7 : ಕಾರ್ಮಿಕ ಮುಖಂಡ ಕೆ.ಗುಣಶೇಖರ್ ಅವರ ನಿಧನಕ್ಕೆ ಎಐಟಿಯುಸಿ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ಹಾಗೂ ಸಿಪಿಐನ ಜಿಲ್ಲಾ ಸಹ ಕಾರ್ಯದರ್ಶಿ ಹೆಚ್.ಎಂ.ಸೋಮಪ್ಪ ಸಂತಾಪ ಸೂಚಿಸಿದ್ದಾರೆ. ಕೆ.ಗುಣಶೇಖರ್ ಅವರ ಅಗಲಿಕೆ ಇಡೀ ಕಾರ್ಮಿಕ ಸಮುದಾಯಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆ, ಅಲ್ಲದೆ ಅತೀವ ದು:ಖವನ್ನು ತಂದಿದೆ. ಶ್ರಮಿಕ ಜೀವಿಗಳ ಪರವಾಗಿ ಹೋರಾಟ ನಡೆಸಿ ಸಾಮಾಜಿಕ ನ್ಯಾಯವನ್ನು ದೊರಕಿಸಿಕೊಡುತ್ತಿದ್ದ ಗುಣಶೇಖರ್ ಅವರಿಗೆ ಕೊಡಗು ಜಿಲ್ಲೆಯ ಎಲ್ಲಾ ಕಾರ್ಮಿಕರ ಪರವಾಗಿ ಸಂತಾಪ ಸೂಚಿಸುವುದಾಗಿ ಅವರು ತಿಳಿಸಿದ್ದಾರೆ.

Read More

ವಿರಾಜಪೇಟೆ ಡಿ.7 NEWS DESK :  ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ವತಿಯಿಂದ ಚೆನ್ನಂಗಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಒಂದು ದಿನದ ಶೈಕ್ಷಣಿಕ ಕಾರ್ಯಕ್ರಮ ನಡೆಯಿತು. ಚೆನ್ನಂಗಿ ಶಾಲೆಗೆ ಭೇಟಿ ನೀಡಿದ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ವಿದ್ಯಾರ್ಥಿಗಳು ಆ ಶಾಲೆಯ ಮಕ್ಕಳೊಂದಿಗೆ ಶೈಕ್ಷಣಿಕ ಕಾರ್ಯಕ್ರಮ ಹಾಗೂ ಪಠ್ಯಕ್ಕೆ ಸಂಬಂಧಿಸಿದಂತೆ ಪರಸ್ಪರ ವಿಚಾರ ವಿನಿಮಯವನ್ನು ನಡೆಸಿ ಮಾಹಿತಿಯನ್ನು ಪಡೆದರು. ಎರಡು ಶಾಲೆಯ ಮಕ್ಕಳು ಮನೋರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಂತರ ಸಮೀಪದ ಹಾಡಿಗೆ ಭೇಟಿ ನೀಡಿ ಅಲ್ಲಿನ ನಿವಾಸಿಗಳಿಗೆ ಶಿಕ್ಷಣದ ಮಹತ್ವ, ಬಾಲ್ಯ ವಿವಾಹದ ಪರಿಣಾಮ ಮತ್ತು ದುಶ್ಚಟಗಳ ಪರಿಣಾಮದ ಬಗ್ಗೆ ಕಿರುನಾಟಕದ ಮೂಲಕ ಅರಿವು ಮೂಡಿಸಿದರು. ಶಾಲೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಪೂಜಾ ರವೀಂದ್ರ ಶಾಲೆಗೆ ಬೇಕಾದ ಅಗತ್ಯ ವಸ್ತುಗಳನ್ನು ಒದಗಿಸಿ ಕೊಡಲಾಗುವುದು ಮತ್ತು ಮುಂದಿನ ದಿನಗಳಲ್ಲಿ ಈ ಶಾಲೆಗೆ ಎಲ್ಲಾ ರೀತಿಯಲ್ಲಿಯೂ ಸಹಕರಿಸುತ್ತೇನೆ ಎಂದು ಭರವಸೆ ನೀಡಿದರು.  ಈ ಸಂದರ್ಭ ಅಮ್ಮತ್ತಿ ಒಂಟಿಯಂಗಡಿ ಕ್ಲಸ್ಟರ್ ನ…

Read More

ಸಿದ್ದಾಪುರ ಡಿ.7 NEWS DESK : ನೆಲ್ಲಿಹುದಿಕೇರಿ ಕೆಪಿಎಸ್ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸತೀಶ್‌ನಾರಾಯಣ್ ಆಯ್ಕೆಯಾಗಿದ್ದಾರೆ. ಕೆಪಿಎಸ್ ಶಾಲಾ‌ ಸಭಾಂಗಣದಲ್ಲಿ ಕೆಪಿಎಸ್ ಶಾಲಾ ಉಪಾಧ್ಯಕ್ಷ ಪಿ.ಕೆ.ಮುಸ್ತಫಾ ನೇತೃತ್ವದಲ್ಲಿ  ನಡೆದ ಸಭೆಯಲ್ಲಿ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ನ್ನು ಆಯ್ಕೆ ಮಾಡಲಾಯಿತು. ಸಂಘದ ಉಪಾಧ್ಯಕ್ಷರಾಗಿ ಅಫ್ಸಲ್, ಕೋಶಾಧಿಕಾರಿಯಾಗಿ ಸಂಯುಕ್ತ, ಸಂಘಟನಾ ಕಾರ್ಯದರ್ಶಿಗಳಾಗಿ ಸುಜಾತ, ಬೆಳ್ಳಿಯಪ್ಪ ಹಾಗೂ ಆಡಳಿತ ಮಂಡಳಿ ಸದಸ್ಯರಾಗಿ ಶುಭ,ವಿನೋದ್, ನಿಶಾ, ಜಿಶಾ ಆಯ್ಕೆಯಾದರು. ಕೆಪಿಎಸ್ ಶಾಲೆಯ ಪ್ರಾಂಶುಪಾಲರಾದ ಆಲ್ವರೀಸ್, ಉಪಪ್ರಾಂಶುಪಾಲರಾದ ಅನಿಲ್, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಭಾರತಿ ಹಾಜರಿದ್ದರು.

Read More

ಮಡಿಕೇರಿ ಡಿ.7 NEWS DESK : ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ 2 ವರ್ಷಗಳ (ANM) ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಕೊನೆಯ ದಿನಾಂಕ 18-12-2024 ಆಗಿರುತ್ತದೆ. ವಿಧ್ಯಾರ್ಹತೆ ದ್ವಿತೀಯ ಪಿ.ಯು.ಸಿ ಪಾಸ್ ಆಗಿರಬೇಕು ಮತ್ತು 17 ವರ್ಷದಿಂದ 30 ವರ್ಷದೊಳಗಿನವರಾಗಿರಬೇಕು 1200 ರೂ.ಗಳ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಬೆಳಿಗೆ 10 ಗಂಟೆಯಿಂದ 5 ಗಂಟೆಯೊಳಗೆ ಸಂಪರ್ಕಿಸಬಹದು.

Read More

ಪೊನ್ನಂಪೇಟೆ, ಡಿ.7 NEWS DESK : ಕ್ರೀಡೆ ಎಂಬುದು ಸಂಘಟಿತ, ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದೆ. ಈ ಕಾರಣದಿಂದ ಕ್ರೀಡೆ ಪರಸ್ಪರ ಮನಸ್ಸುಗಳನ್ನು ಬೆಸೆಯುತ್ತದೆ. ಅದರಿಂದ ಕ್ರೀಡೆಗಳಲ್ಲಿ ಸೋಲು ಗೆಲುವಿನ ಲೆಕ್ಕಾಚಾರಗಳಿಗಿಂತ ಭಾಗವಹಿಸುವಿಕೆ ಅತಿ ಮುಖ್ಯ ಎಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಅಜ್ಜಿಕುಟ್ಟೀರ ಎಸ್. ನರೇನ್ ಕಾರ್ಯಪ್ಪ ಅಭಿಪ್ರಾಯಪಟ್ಟಿದ್ದಾರೆ. ಬಿಟ್ಟಂಗಾಲ ಸಮೀಪದ ವಿ.ಬಾಡಗದ ಹೈ ಪ್ಲೈಯರ್ಸ್ ಸಂಸ್ಥೆಯ ವತಿಯಿಂದ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಬಿಟ್ಟಂಗಾಲ, ಬಿ. ಶೆಟ್ಟಿಗೇರಿ ಮತ್ತು ಹಾತೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಮನೆತನಗಳ ನಡುವಿನ 3ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ‘ಹೈ ಪ್ಲೈಯರ್ಸ್ ಕಪ್-2024’ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿಗೆ ಕೊಡಗಿನ ಗ್ರಾಮೀಣ ಮಟ್ಟದಲ್ಲಿ ಕ್ರೀಡಾಕೂಟಗಳು ಹೆಚ್ಚು ಆಯೋಜನೆಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದರಿಂದಾಗಿ ಸೂಕ್ತ ಅವಕಾಶಗಳ ಕೊರತೆ ಎದುರಿಸುತ್ತಿದ್ದ ಗ್ರಾಮೀಣ ಕ್ರೀಡಾಪಟುಗಳಿಗೆ ಹೆಚ್ಚು ಅನುಕೂಲವಾಗುತ್ತಿದೆ ಎಂದು ಹೇಳಿದರು.…

Read More

ಸೋಮವಾರಪೇಟೆ ಡಿ.7 NEWS DESK : ಸೋಮವಾರಪೇಟೆ ತಾಲ್ಲೂಕು ಆಡಳಿತದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಾಣವಾರ ರಸ್ತೆಯಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್, ಪ.ಪಂ ಮುಖ್ಯಾಧಿಕಾರಿ ಕಾರ್ಯನಿರ್ವಾಹಣ ಸತೀಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ಆರೋಗ್ಯ ನಿರೀಕ್ಷಕ ಜಾಸಿಂಖಾನ್, ದಲಿತಪರ ಸಂಘಟನೆಗಳ ಮುಖಂಡರುಗಳಾದ ಜನಾರ್ಧನ್. ಟಿ.ಈ.ಸುರೇಶ್. ಬಿ.ಈ.ಜಯೇಂದ್ರ, ಪ್ರತಾಪ್. ಈರಪ್ಪ. ಡಿ.ಎಸ್.ನಿರ್ವಾಣಪ್ಪ. ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ಪಿ.ಕೆ.ಚಂದ್ರು, ಮೋಹಿನಿ ಇದ್ದರು.

Read More