ಲೇಖಕ: admin

ಕುಶಾಲನಗರ, NEWS DESK ಸೆ.30: ನೆಲ್ಯಾಹುದಕೇರಿ ಅಂಗನವಾಡಿ ಕೇಂದ್ರದಲ್ಲಿ ಬಾಣಂತಿಯರಿಗೆ ಅವಧಿ ಮುಗಿದ ಆಹಾರ ವಿತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೇಲ್ವಿಚಾರಕಿ ಹಾಗೂ ಸಂಬಂಧಿಸಿದ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಲು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ತೀರ್ಮಾನಿಸಲಾಯಿತು. ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಿತು. ಅಂಗನವಾಡಿಯಲ್ಲಿ ಅವಧಿ ಮುಗಿದ ಆಹಾರ ವಿತರಿಸಿರುವುದು ಮೇಲ್ವಿಚಾರಕಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂಭವಿಸಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಇಂತಹ ಘಟನೆಗಳು ಸಾರ್ವಜನಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ತೀರ್ಮಾನಿಸಲಾಯಿತು. ಇದೇ ವೇಳೆ ಹೆಬ್ಬಾಲೆ, ತೊರೆನೂರು ಹಾಗೂ ಶಿರಂಗಾಲ ಗ್ರಾಮಗಳ ಮಧ್ಯಭಾಗದಲ್ಲಿ ನೂತನ ವಿದ್ಯುತ್ ಉಪಶಾಖೆ ಸ್ಥಾಪಿಸುವಂತೆ ಸಭೆಯಲ್ಲಿ ಒತ್ತಾಯಿಸಲಾಯಿತು. ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆಯೂ ತೀರ್ಮಾನಿಸಲಾಯಿತು. ಅಲ್ಲದೆ, ಸಭೆಯಲ್ಲಿ…

Read More

ನಾಪೋಕ್ಲು, NEWS DESK ಸೆ.30: ಗೋವಾದ ವಾಸ್ಕೊ ರವೀಂದ್ರ ಭವನದಲ್ಲಿ ನಡೆದ ‘ಕನ್ನಡ ಸಾಂಸ್ಕೃತಿಕ ಸಮ್ಮೇಳನ ಗೋವಾ 2026’ ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೊಡಗಿನ ಬಹುಮುಖ ಪ್ರತಿಭೆ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಅವರಿಗೆ ರಾಷ್ಟ್ರೀಯ ಸಮಾಜ ಸೇವಾ ಕಲಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀನಿಧಿ ಫೌಂಡೇಶನ್ (ರಿ.) ಕರ್ನಾಟಕ ಹಾಗೂ ಪ್ರತಿಫಲ ಫೌಂಡೇಶನ್ (ರಿ.) ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾಜ ಸೇವೆ, ಕಲೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿನ ಅವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ದುಗ್ಗಳ ಸದಾನಂದ

Read More

ಸುಂಟಿಕೊಪ್ಪ, NEWS DESK ಸೆ.30: ಮೈಸೂರು ದಸರಾ ಉತ್ಸವದಲ್ಲಿ ಅಂಬಾರಿ ಹೊರುತ್ತಿದ್ದ ನೆಚ್ಚಿನ ಆನೆ **‘ಅರ್ಜುನ’**ನ ಸ್ಮರಣಾರ್ಥ ಸುಂಟಿಕೊಪ್ಪದ 22 ಉತ್ಸಾಹಿ ಯುವಕರು ಸೇರಿ ರಚಿಸಿರುವ ‘ಟೀಂ ಅರ್ಜುನ’ ವತಿಯಿಂದ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಅ.16ರಿಂದ 18ರವರೆಗೆ ಸುಂಟಿಕೊಪ್ಪದ ಸರ್ಕಾರಿ ಶಾಲಾ ಮೈದಾನದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಟೀಂ ಅರ್ಜುನದ ಅಧ್ಯಕ್ಷ ಮಹಮ್ಮದ್ ಆಲಿ ಕೆ.ಎ., ಅರ್ಜುನನ ನೆನಪನ್ನು ಶಾಶ್ವತವಾಗಿಸುವ ಉದ್ದೇಶದಿಂದ ತಂಡವನ್ನು ರಚಿಸಲಾಗಿದ್ದು, ಕ್ರೀಡೆ ಹಾಗೂ ಸಮಾಜ ಸೇವಾ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವುದು ತಂಡದ ಉದ್ದೇಶವಾಗಿದೆ ಎಂದು ತಿಳಿಸಿದರು. ಪಂದ್ಯಾವಳಿಯಲ್ಲಿ ಜಿಲ್ಲೆಯ ಮೊದಲು ನೋಂದಾಯಿಸಿಕೊಳ್ಳುವ 16 ತಂಡಗಳಿಗೆ ಮಾತ್ರ ಅವಕಾಶವಿದ್ದು, ಪಂದ್ಯಗಳು ಲೀಗ್ ಮಾದರಿಯಲ್ಲಿ ತಲಾ 4 ಓವರ್‌ಗಳಿಗೆ ಸೀಮಿತವಾಗಿರಲಿವೆ. ಆಸಕ್ತ ತಂಡಗಳು ನೋಂದಣಿಗಾಗಿ ಟೀಂ ಅರ್ಜುನದ ಕ್ರೀಡಾ ಕಾರ್ಯದರ್ಶಿ ಸಂಶಾದ್ ಪಿ.ಎಸ್. (ಮೊ. 8123302760) ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು. ಪಂದ್ಯಾವಳಿಯ ಪ್ರಥಮ ಬಹುಮಾನವಾಗಿ ₹33,333 ನಗದು ಹಾಗೂ ಆಕರ್ಷಕ…

Read More

ಮಡಿಕೇರಿ, NEWS DESK ಸೆ.30: ಜೀರ್ಣಾಂಗದ ಕಾಯಿಲೆಗಳು, ಜಠರ-ಕರುಳಿನ ಕ್ಯಾನ್ಸರ್ ಹಾಗೂ ಲಿವರ್ ಸಂಬಂಧಿತ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಅತ್ಯಾಧುನಿಕ ವೈದ್ಯಕೀಯ ತಪಾಸಣಾ ವ್ಯವಸ್ಥೆಗಳು ಲಭ್ಯವಿದ್ದು, ಜನರು ಇದರ ಸದುಪಯೋಗ ಪಡೆದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಯ ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋ ಸೈನ್ಸಸ್‌ನ ತಜ್ಞ ವೈದ್ಯರು ಸಲಹೆ ನೀಡಿದರು. ಮಡಿಕೇರಿ ಪ್ರೆಸ್ ಕ್ಲಬ್‌ನಲ್ಲಿ ಮಣಿಪಾಲ್ ಆಸ್ಪತ್ರೆ ಮೈಸೂರು ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿಯ ಸೀನಿಯರ್ ಕನ್ಸಲ್ಟೆಂಟ್ ಡಾ. ಸತೀಶ್ ರಾವ್ ಎ.ಕೆ., ಆರಂಭಿಕ ಹಂತದ ಜಠರ-ಕರುಳಿನ ಕ್ಯಾನ್ಸರ್‌ಗಳನ್ನು ಎಂಡೋಸ್ಕೋಪಿಕ್ ಸಬ್‌ಮ್ಯೂಕೋಸಲ್ ಡಿಸೆಕ್ಷನ್‌ನಂತಹ ಆಧುನಿಕ ವಿಧಾನಗಳ ಮೂಲಕ ತೆರೆದ ಶಸ್ತ್ರಚಿಕಿತ್ಸೆಯಿಲ್ಲದೆ ಚಿಕಿತ್ಸೆ ನೀಡಲು ಸಾಧ್ಯವಿದೆ ಎಂದು ತಿಳಿಸಿದರು. ಹಿಂದೆ ರೋಗಿಗಳು ಆಸ್ಪತ್ರೆಗೆ ಬರುವ ವೇಳೆಗೆ ಕಾಯಿಲೆ ಎರಡನೇ ಹಂತ ಅಥವಾ ಅದಕ್ಕಿಂತ ಮುಂದುವರಿದಿರುತ್ತಿತ್ತು. ಆದರೆ ಪ್ರಸ್ತುತ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳ ಮೂಲಕ ರೋಗವನ್ನು ಸಾಕಷ್ಟು ಮುಂಚಿತವಾಗಿಯೇ ಪತ್ತೆಹಚ್ಚಿ ಅಗತ್ಯ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿದೆ. ಈ ಎಲ್ಲಾ…

Read More

ಮಡಿಕೇರಿ NEWS DESK ಸೆ.30 : ಕೊಡಗು ಜಿಲ್ಲಾ ಪಂಚಾಯಿತಿ, ಪಶು ಪಾಲನಾ ಹಾಗೂ ಪಶು ವೈದ್ಯಕೀಯ ಇಲಾಖೆ ಮತ್ತು ಮಡಿಕೇರಿ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉಚಿತ ರೇಬಿಸ್ ಲಸಿಕಾ ಶಿಬಿರವು ತಾಳತ್ತಮನೆಯಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಮಡಿಕೇರಿ ತಾಲೂಕು ಯುವ ಒಕ್ಕೂಟ, ತಾಳತ್ತಮನೆಯ ನೇತಾಜಿ ಯುವತಿ ಮಂಡಳಿ ಹಾಗೂ ನೇತಾಜಿ ಯುವಕ ಮಂಡಲದ ಸಂಯುಕ್ತಾಶ್ರಯದಲ್ಲಿ ಇಂದು ತಾಳತ್ತಮನೆಯ ಆಟದ ಮೈದಾನದಲ್ಲಿ ಶಿಬಿರ ನಡೆಯಿತು. ಮಡಿಕೇರಿ ಪಶು ವೈದ್ಯಕೀಯ ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ.ಚೇತನ್ ಸಿ.ಪಿ., ಡಾ.ಶಿಲ್ಪಾ ಶ್ರೀ ಸಿ.ಎಸ್., ಡಾ.ಚೆಟ್ಟಿಚ್ಚ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ಶಿಬಿರವನ್ನು ನಡೆಸಲಾಯಿತು. ನೇತಾಜಿ ಯುವಕ ಮಂಡಲದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು. ಶಿಬಿರದಲ್ಲಿ ತಾಳತ್ತಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಅನೇಕ ಪಶುಪ್ರೇಮಿಗಳು ತಮ್ಮ ಸಾಕುಪ್ರಾಣಿಗಳೊಂದಿಗೆ ಭಾಗವಹಿಸಿ ಉಚಿತ ಲಸಿಕಾ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡರು. ಒಟ್ಟು 99 ಶ್ವಾನಗಳು ಹಾಗೂ 11 ಬೆಕ್ಕುಗಳಿಗೆ ರೇಬಿಸ್ ಲಸಿಕೆ ನೀಡಲಾಯಿತು.

Read More

ಮಡಿಕೇರಿ NEWS DESK ಸೆ.30 : ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಚಾಂಪಿಯನ್ ಪಟ್ಟಕ್ಕೇರಿದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯರನ್ನು ಶಾಲಾ ಆಡಳಿತ ಮಂಡಳಿ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಸೆಪ್ಟೆಂಬರ್ 10ರಿಂದ 12ರವರೆಗೆ ಜಾರ್ಖಂಡ್‌ನ ರಾಂಚಿಯಲ್ಲಿ ನಡೆದ ಸಿ.ಐ.ಎಸ್.ಸಿ.ಇ. ರಾಷ್ಟ್ರೀಯ ಹಾಕಿ ಪಂದ್ಯಾವಳಿ-2026ರ ಅಂಡರ್-17 ಬಾಲಕಿಯರ ವಿಭಾಗದಲ್ಲಿ ಕರ್ನಾಟಕ-ಗೋವಾ ವಲಯದ ಹಾಕಿ ತಂಡವನ್ನು ಪ್ರತಿನಿಧಿಸಿದ್ದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯರಾದ ಮುಕ್ಕಾಟಿರ ಆದ್ಯ ದೇಚ್ಚಮ್ಮ ಹಾಗೂ ಮೇವಡ ಜಾನ್ಹವಿ ಅವರು ತಂಡದೊಂದಿಗೆ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾರೆ. ವಿದ್ಯಾರ್ಥಿನಿಯರ ಸಾಧನೆಯನ್ನು ಅಭಿನಂದಿಸಿದ ಶಾಲಾ ಆಡಳಿತ ಮಂಡಳಿ ಸದಸ್ಯರು ಶಾಲು ಹೊದಿಸಿ ಗೌರವಪೂರ್ವಕವಾಗಿ ಸನ್ಮಾನಿಸಿದರು. ವಿದ್ಯಾರ್ಥಿನಿಯರ ಕ್ರೀಡಾ ಸಾಧನೆ ಹಾಗೂ ಪರಿಶ್ರಮವನ್ನು ಪ್ರಶಂಸಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಪ್ರಾಂಶುಪಾಲರಾದ ಬಾಳೆಯಡ ಸವಿತ ಎಂ.ಜಿ. ಅವರು, ರಾಷ್ಟ್ರಮಟ್ಟದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಹೆಸರು ಗುರುತಿಸುವಂತೆ ಮಾಡಿದ ವಿದ್ಯಾರ್ಥಿನಿಯರಿಗೆ ಅಭಿನಂದನೆ ಸಲ್ಲಿಸಿ, ಮುಂದೆಯೂ ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳುವಂತೆ ಪ್ರೋತ್ಸಾಹಿಸಿದರು. ಶಾಲಾ ಕಾರ್ಯಾಧ್ಯಕ್ಷರಾದ ಕೇಕಡ…

Read More

ಮಡಿಕೇರಿ NEWS DESK ಸೆ.30 : ಕುಶಾಲನಗರ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರ್.ಸಿ. ನಿಯಮಗಳನ್ನು ಉಲ್ಲಂಘಿಸಿ ಸಾರ್ವಜನಿಕ ರಸ್ತೆಯಲ್ಲಿ ನಿರ್ಲಕ್ಷ್ಯದಿಂದ ಚಾಲನೆ ಮಾಡಿ ನಿಗದಿತ ಎತ್ತರ ಮತ್ತು ಉದ್ದಳತೆಯನ್ನು ಮೀರಿ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಐದು ಲಾರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಲಾರಿಗಳ ವಿರುದ್ಧ ನಿಯಮಾನುಸಾರ ಪ್ರಾದೇಶಿಕ ಸಾರಿಗೆ ಕಚೇರಿ ಮೂಲಕ ಕ್ರಮ ಕೈಗೊಳ್ಳಲಾಗಿದ್ದು, ಒಟ್ಟು ರೂ.2,97,000 ದಂಡ ವಿಧಿಸಲಾಗಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ತಿಳಿಸಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನಗಳನ್ನು ಚಾಲನೆ ಮಾಡುವ ಹಾಗೂ ನಿಗದಿತ ಮಿತಿಯನ್ನು ಮೀರಿ ಸರಕು ಸಾಗಣೆ ಮಾಡುವ ವಾಹನಗಳ ವಿರುದ್ಧ ನಿಯಮಾನುಸಾರ ಕ್ರಮ ಮುಂದುವರಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Read More

ಮಡಿಕೇರಿ NEWS DESK ಸೆ.30 : ಕೊಡಗು ಜಿಲ್ಲಾ ಪಂಚಾಯಿತಿ, ಪಶು ಪಾಲನಾ ಹಾಗೂ ಪಶು ವೈದ್ಯಕೀಯ ಇಲಾಖೆ ಮತ್ತು ಮಡಿಕೇರಿ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉಚಿತ ರೇಬಿಸ್ ಲಸಿಕಾ ಶಿಬಿರವು ತಾಳತ್ತಮನೆಯಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಮಡಿಕೇರಿ ತಾಲೂಕು ಯುವ ಒಕ್ಕೂಟ, ತಾಳತ್ತಮನೆಯ ನೇತಾಜಿ ಯುವತಿ ಮಂಡಳಿ ಹಾಗೂ ನೇತಾಜಿ ಯುವಕ ಮಂಡಲದ ಸಂಯುಕ್ತಾಶ್ರಯದಲ್ಲಿ ಇಂದು ತಾಳತ್ತಮನೆಯ ಆಟದ ಮೈದಾನದಲ್ಲಿ ಶಿಬಿರ ನಡೆಯಿತು. ಮಡಿಕೇರಿ ಪಶು ವೈದ್ಯಕೀಯ ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ.ಚೇತನ್ ಸಿ.ಪಿ., ಡಾ.ಶಿಲ್ಪಾ ಶ್ರೀ ಸಿ.ಎಸ್., ಡಾ.ಚೆಟ್ಟಿಚ್ಚ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ಶಿಬಿರವನ್ನು ನಡೆಸಲಾಯಿತು. ನೇತಾಜಿ ಯುವಕ ಮಂಡಲದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು. ಶಿಬಿರದಲ್ಲಿ ತಾಳತ್ತಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಅನೇಕ ಪಶುಪ್ರೇಮಿಗಳು ತಮ್ಮ ಸಾಕುಪ್ರಾಣಿಗಳೊಂದಿಗೆ ಭಾಗವಹಿಸಿ ಉಚಿತ ಲಸಿಕಾ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡರು. ಒಟ್ಟು 99 ಶ್ವಾನಗಳು ಹಾಗೂ 11 ಬೆಕ್ಕುಗಳಿಗೆ ರೇಬಿಸ್ ಲಸಿಕೆ ನೀಡಲಾಯಿತು.

Read More

ಮಡಿಕೇರಿ NEWS DESK ಸೆ.30 : ಯುವಜನತೆ ಹಾಗೂ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸುವ ಉದ್ದೇಶದಿಂದ ಮಡಿಕೇರಿ ತಾಲ್ಲೂಕಿನ ತಾಳತ್ತಮನೆಯಲ್ಲಿ ‘ಸ್ವಾವಲಂಬಿ ಬದುಕಿಗೆ ಅಣಬೆ ಕೃಷಿ’ ವಿಷಯದ ಕುರಿತು ವಿಶೇಷ ತರಬೇತಿ ಕಾರ್ಯಾಗಾರ ನಡೆಯಿತು. ನೆಹರು ಯುವ ಕೇಂದ್ರ ಮಡಿಕೇರಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಡಿಕೇರಿ, ತಾಲ್ಲೂಕು ಯುವ ಒಕ್ಕೂಟ ಮಡಿಕೇರಿ, ತಾಳತ್ತಮನೆಯ ನೇತಾಜಿ ಯುವಕ ಮಂಡಲ ಹಾಗೂ ನೇತಾಜಿ ಯುವತಿ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ತಾಳತ್ತಮನೆಯ ನೇತಾಜಿ ಯುವಕ ಮಂಡಲ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ತಾಳತ್ತಮನೆ ಶ್ರೀ ದುರ್ಗಾಭಗವತಿ ದೇವಸ್ಥಾನದ ಅಧ್ಯಕ್ಷರು ಹಾಗೂ ಪ್ರಗತಿಪರ ಕೃಷಿಕ ಚಟ್ಟೋಳೀರ ಗಿರೀಶ್ ಅಪ್ಪಯ್ಯ ಅವರು ಯುವಜನತೆ ಹಾಗೂ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಬದುಕು ಸಾಗಿಸಬೇಕು ಎಂದು ಕರೆ ನೀಡಿದರು. ಕೃಷಿಯಲ್ಲಿನ ಆಧುನಿಕ ಸಾಧ್ಯತೆಗಳ ಕುರಿತು ವಿವರಿಸಿದರು. ಮಡಿಕೇರಿ ಕೃಷಿ ವಿಸ್ತರಣಾ ಘಟಕದ ವಿಜ್ಞಾನಿ ಡಾ.ಲತಾ ಅವರು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿ ಅಣಬೆ ಕೃಷಿಯ…

Read More

ಮಂಗಳೂರು, NEWS DESK ಸೆ.30 : ಮಂಗಳೂರಿನ ಹೊರವಲಯದ ಕಳವಾರ್ ಸಮೀಪದ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನ ಮೂರನೇ ಹಂತದ ಘಟಕದಲ್ಲಿ ಬುಧವಾರ ಮಧ್ಯಾಹ್ನ ಭಾರೀ ಸ್ಫೋಟ ಸಂಭವಿಸಿದ್ದು, ಸ್ಥಳದಿಂದ ದಟ್ಟ ಕಪ್ಪು ಹೊಗೆ ಆವರಿಸಿಕೊಂಡಿದೆ. ಸ್ಫೋಟದ ಸದ್ದು ಹಲವು ಕಿಲೋಮೀಟರ್ ದೂರದವರೆಗೂ ಕೇಳಿಬಂದಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಧ್ಯಾಹ್ನ ಸುಮಾರು 12.25ರ ವೇಳೆಗೆ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಮಂಗಳೂರಿನಿಂದ ಸುಮಾರು 15 ಕಿ.ಮೀ. ದೂರದಲ್ಲಿರುವ ಕಳವಾರ್ ಪ್ರದೇಶದಲ್ಲಿರುವ MRPL ಘಟಕದಲ್ಲಿ ಘಟನೆ ನಡೆದಿದ್ದು, MRPLನ ತುರ್ತು ನಿರ್ವಹಣಾ ತಂಡ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾಗಿದೆ. ಸ್ಫೋಟದ ಬಳಿಕ ಸ್ಥಳದಿಂದ ಬೆಂಕಿ ಹಾಗೂ ದಟ್ಟ ಕಪ್ಪು ಹೊಗೆ ಏಳುತ್ತಿರುವುದು ಕಂಡುಬಂದಿದೆ. ಸ್ಫೋಟದ ಸದ್ದು ಅಂಗರಗುಂಡಿ, ಬೈಕಂಪಾಡಿ ಕೈಗಾರಿಕಾ ಪ್ರದೇಶ, ಕುಳಾಯಿ, ಕಾವೂರು ಸೇರಿದಂತೆ ಮಂಗಳೂರು ನಗರದ ಕೆಲ ಭಾಗಗಳಲ್ಲಿಯೂ ಕೇಳಿಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಫೋಟದ ಪರಿಣಾಮ ಸಮೀಪದ ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದ್ದು, ಜೋಕಟ್ಟೆ ಗ್ರಾಮ ಪಂಚಾಯಿತಿ…

Read More