ಮಡಿಕೇರಿ ಡಿ.20 NEWS DESK : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ಮಹದೇಶ್ವರ ಕ್ಷೇತ್ರದ ಜಾತ್ರೋತ್ಸವವು ಡಿ.23 ರಿಂದ ಡಿ.28ರ ವರೆಗೆ ನಡೆಯಲಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಶಶಿ ಜನಾರ್ಧನ ಕಟ್ಟೆಮನೆ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಆರು ದಿನಗಳ ಕಾಲ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳೊಂದಿಗೆ ಜಾತ್ರೋತ್ಸವವು ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಡಿ.23 ರಂದು ಬೆಳಿಗ್ಗೆ 8 ಗಂಟೆಗೆ ಗಣಪತಿ ಹೋಮ, 10.30 ಗಂಟೆಗೆ ಹೊರಕಾಣಿಕೆ ಸಮರ್ಪಣೆ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ತೀರ್ಥಪ್ರಸಾದ ವಿತರಣೆ, 1 ಗಂಟೆಗೆ ಅನ್ನ ಸಂತರ್ಪಣೆಯಾಗಲಿದೆ. ಸಂಜೆ 7.30 ಗಂಟೆಗೆ ಧ್ವಜಾರೋಹಣ ನೆರವೇರಲಿದ್ದು, ರಾತ್ರಿ 8.30 ಗಂಟೆಗೆ ಮಹಾಪೂಜೆ, ತೀರ್ಥಪ್ರಸಾದ ವಿತರಣೆ, 9 ಗಂಟೆಗೆ ಅನ್ನಸಂತರ್ಪಣೆ ನೆರವೇರಲಿದೆ. ಅಂದು ಹೊರೆಕಾಣಿಕೆ ತರುವವರು ಬೆಳಿಗ್ಗೆ 11.30 ಗಂಟೆಯ ಒಳಗೆ ದೇವಾಲಯದ ಉಗ್ರಾಣಕ್ಕೆ ತಲುಪಿಸುವಂತೆ ಕೋರಿದ್ದಾರೆ. ಡಿ.24 ರಂದು ಬೆಳಿಗ್ಗೆ 5.30 ಗಂಟೆಗೆ ನೈರ್ಮಾಲ್ಯ…
ಲೇಖಕ: admin
ಮಂಡ್ಯ ಡಿ.20 NEWS DESK : ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು. ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಇದ್ದರು. ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಚೆಲುವನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ ಹೆ.ಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್…
ಸೋಮವಾರಪೇಟೆ ಡಿ.20 NEWS DESK : ಕೊಡಗು ಪತ್ರಕರ್ತರ ಸಂಘ ಹಾಗೂ ಸೋಮವಾರಪೇಟೆ ತಾಲೂಕು ಘಟಕದ ಆಶ್ರಯದಲ್ಲಿ ಡಿ.22 ರಂದು ಜಿಲ್ಲೆಯ ಪತ್ರಕರ್ತರಿಗೆ ಕೆ.ಪಿ.ಎಸ್ ಕ್ರಿಕೆಟ್ ಲೀಗ್ ಪಂದ್ಯಾಟ ಮತ್ತು ಪತ್ರಕರ್ತರ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಕೊಡಗು ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಸ್.ಎ.ಮುರಳೀಧರ್ ಮಾತನಾಡಿ, ಡಿ.22 ರಂದು ತಾಲೂಕಿನ ಬೇಳೂರು ಪಂಚಾಯಿತಿ ವ್ಯಾಪ್ತಿಯ ಬಳಗುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದೆ.ಮೈಸೂರಿನ ನಾರಾಯಣ ಹೆಲ್ತ್ ಸಿಟಿ ಸೆಂಟರ್‌ನ ಆಶ್ರಯದಲ್ಲಿ ನಡೆಯಲಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬಳಗುಂದ ಗ್ರಾಮಸ್ಥರು ಇದರ ಪ್ರಯೋಜನ ಪಡೆದುಕೊಳ್ಳಬಹುದು. ಅಖಿಲ ಭಾರತೀಯ ಸಂತ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್‌ನಾಥ್ ಗುರೂಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಶಾಸಕ ಡಾ.ಮಂಥರ್ ಗೌಡ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೆಶಕರಾದ…
ಮಡಿಕೇರಿ NEWS DESK ಡಿ.20 : ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿಯ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಬಂಧನವನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಡಿ.20 ರಂದು ಮಧ್ಯಾಹ್ನ 2.30 ಗಂಟೆಗೆ ಬಿಜೆಪಿ ವತಿಯಿಂದ ದಿಢೀರ್ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ಪ್ರತಿಭಟನೆ ಮಡಿಕೇರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯಲಿದೆ.
ಬೆಂಗಳೂರು NEWS DESK ಡಿ.20 : ಭಾರತೀಯ ಸೇನೆಯು ಅಗ್ನಿವೀರ್ ಜನರಲ್ ಡ್ಯೂಟಿ (ಮಹಿಳಾ ಮಿಲಿಟರಿ ಪೊಲೀಸ್) ನೇಮಕಾತಿ ರ‍್ಯಾಲಿಯನ್ನು 2025 ಜನವರಿ 6 ಮತ್ತು 7 ರಂದು ಬೆಂಗಳೂರಿನಲ್ಲಿ ನಡೆಸಲಿದೆ. ಬೆಂಗಳೂರಿನ ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ಅಗ್ನಿವೀರ್ ಜನರಲ್ ಡ್ಯೂಟಿ (ಮಹಿಳಾ ಮಿಲಿಟರಿ ಪೊಲೀಸ್) ನೇಮಕಾತಿ ರ‍್ಯಾಲಿ ನಡೆಯಲಿದೆ. ಕರ್ನಾಟಕ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಶಾರ್ಟ್‌ಲಿಸ್ಟ್ ಮಾಡಿದ ಮಹಿಳಾ ಅಭ್ಯರ್ಥಿಗಳಿಗಾಗಿ ಈ ರ‍್ಯಾಲಿಯನ್ನು ಆಯೋಜಿಸಲಾಗಿದೆ. ಲಕ್ಷದ್ವೀಪ ಮತ್ತು ಮಾಹೆ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಕಾರ್ಡ್‌ಗಳನ್ನು www.joinindianarmy.nic.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು 6 ಜನವರಿ 2025 ರಂದು ನಿಗದಿತ ಸಮಯದಲ್ಲಿ ಕ್ರೀಡಾಂಗಣದ ಗೇಟ್ ಸಂಖ್ಯೆ 2 ರಲ್ಲಿ ವರದಿ ಮಾಡಲು ಪ್ರಕಟಣೆ ತಿಳಿಸಿದೆ. ಆಯ್ಕೆಯು ಅರ್ಹತೆ-ಆಧಾರಿತವಾಗಿರುತ್ತದೆ, ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ (CEE) ಮತ್ತು ರ‍್ಯಾಲಿಯಲ್ಲಿನ ಪರೀಕ್ಷೆಗಳಲ್ಲಿನ ಕಾರ್ಯಕ್ಷಮತೆಯಿಂದ ನಿರ್ಧರಿಸಲಾಗುತ್ತದೆ.
ಹುಣುಸೂರು NEWS DESK ಡಿ.20 : ಜಾನುವಾರುಗಳು ಸೇರಿದಂತೆ ಸಾಕು ಪ್ರಾಣಿಗಳನ್ನು ಬೇಟೆಯಾಡಿ ತಿನ್ನುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಹುಣುಸೂರು ತಾಲ್ಲೂಕಿನ ಗಾವಡಗೆರೆ ಸುತ್ತಮುತ್ತ ಉಪಟಳ ನೀಡುತ್ತಿದ್ದ 9ವರ್ಷದ ಚಿರತೆ ಬೋನ್ ನಲ್ಲಿ ಸೆರೆಯಾಗಿದೆ. ಜಾನುವಾರುಗಳನ್ನು ಭಕ್ಷಿಸುತ್ತಿದ್ದ ಚಿರತೆಯನ್ನು ತಕ್ಷಣ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ ಹಿನ್ನೆಲೆ ಸಣ್ಣಸ್ವಾಮಿ ನಾಯಕರ ಜಮೀನಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನ್ ಇರಿಸಿದ್ದರು.
ವಿರಾಜಪೇಟೆ ಡಿ.20 NEWS DESK : ಬ್ಲೂ ಬ್ಯಾಂಡ್ ಎಫ್.ಎಂ.ಎಸ್.ಸಿ.ಐ. ಇಂಡಿಯನ್ ನ್ಯಾಷನಲ್ ರ‍್ಯಾಲಿ ಚಾಂಪಿಯನ್‍ಶಿಪ್-2024 ಆಯೋಜಿಸಿದ್ದ ಕೊನೆಯ ಹಂತದ ರ‍್ಯಾಲಿಯಲ್ಲಿ ಕೊಡಗಿನ ರ‍್ಯಾಲಿಪಟು ಉದ್ದಪಂಡ ತಿಮ್ಮು ಮತ್ತು ಜೈಸನ್ ಸಲ್ಡಾನಾ ಜೋಡಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬ್ಲೂ ಬ್ಯಾಂಡ್ ಎಫ್.ಎಂ.ಎಸ್.ಸಿ.ಐ. ಇಂಡಿಯನ್ ನ್ಯಾಷನಲ್ ರ‍್ಯಾಲಿ ಚಾಂಪಿಯನ್‍ಶಿಪ್-2024 ಮತ್ತು ಕರ್ನಾಟಕ ಮೋಟಾರ್ ಸ್ಪೋಟ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು (ತುಮಕೂರು) ನಲ್ಲಿ ನಡೆದ 2024ರ ರ‍್ಯಾಲಿಯ ಅಂತಿಮ 6ನೇ ಸುತ್ತಿನ ರ‍್ಯಾಲಿ ನಡೆಯಿತು. ಕೊಡಗು ಜಿಲ್ಲೆಯ ಅಮ್ಮತ್ತಿಯಲ್ಲಿ ನಡೆದ ರ್ಯಾಲಿಯಲ್ಲಿ ಗೌರವ್ ಗಿಲ್ ಮತ್ತು ಅನಿರುದ್ಧ್ ಜೋಡಿ ಪ್ರಥಮ, ಜೈಸನ್ ಸಲ್ಡಾನಾ ಮತ್ತು ಉದ್ದಪಂಡ ತಿಮ್ಮು ದ್ವಿತೀಯ ಹಾಗೂ ಅರ್ಜುನ್ ರಾವ್ ಮತ್ತು ಸತೀಶ್ ರಾಜ್ ಗೋಪಾಲ್ ತೃತೀಯ ಸ್ಥಾನ ಪಡೆದುಕೊಂಡರು. ಐ.ಎನ್.ಆರ್.ಸಿ 2 ವಿಭಾಗದಲ್ಲಿ :: ಜೈಸನ್ ಸಲ್ಡಾನಾ ಮತ್ತು ಉದ್ದಪಂಡ ತಿಮ್ಮು ಜೋಡಿ ಪ್ರಥಮ, ಠಾಕೂರ್ ಆದಿತ್ಯ ಸಿಂಗ್ ಮತ್ತು ವಿರೇಂದ್ರ ಕಶೈಪ್ ದ್ವಿತೀಯ ಹಾಗೂ ಡೀನ್…
ಮಡಿಕೇರಿ NEWS DESK ಡಿ.20 : ರೈತ ಹೋರಾಟ ಸಮಿತಿ, ರೈತ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳಿಂದ ಮಡಿಕೇರಿಯಲ್ಲಿ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಬೃಹತ್ ಪ್ರತಿಭಟನಾ ಜಾಥ ನಡೆಯಿತು. ::: ಬೇಡಿಕೆಗಳು ::: *ಅವೈಜ್ಞಾನಿಕವಾಗಿ ಮಾಡಿರುವ ಸಿ & ಡಿ ಸರ್ವೆಯನ್ನು ರದ್ದುಗೊಳಿಸಿ, ಮರು ಸರ್ವೆ ಮಾಡಿ ರೈತರ ವ್ಯವಸಾಯ ಮಾಡಿರುವ ಭೂಮಿಯನ್ನು ರೈತರ ಹೆಸರಿಗೆ ಮಂಜೂರು ಮಾಡಬೇಕು. *ಯಾವುದೇ ಮಾಹಿತಿ ಇಲ್ಲದೆ ಮಾಡಿರುವ ಮೀಸಲು ಅರಣ್ಯ, ಸೆಕ್ಷನ್ 4/5 ಅನ್ನು ಕೈಬಿಡಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಸಿರು ನ್ಯಾಯಾಲಯಕ್ಕೆ ಒತ್ತಡ ಹಾಕಿ ಸ್ಥಳೀಯ ಜನರನ್ನು ಒಕ್ಕಲೆಬ್ಬಿಸುವುದನ್ನು ತಪ್ಪಿಸಬೇಕು. *ಅರಣ್ಯ ಹಾಗೂ ಕಂದಾಯ ಇಲಾಖೆಯವರು ವಾಸ್ತವತೆ ಅರಿಯದೆ ಮಾಡಿರುವ ಡೀಮ್ಸ್ ಫಾರೆಸ್ಟ್ ಕಾಯ್ದೆಯನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕು. *ಕಸ್ತೂರಿರಂಗನ್ ವರದಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಿರಸ್ಕರಿಸಿ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗದ ಹಾಗೆ ಕೇರಳ ಮಾದರಿಯಂತೆ ಚಾರಿ ಮಾಡಬೇಕು. *ಊರುಉಡುವೆ, ದೇವರಕಾಡು, ಗೋಮಾಳ ಇವುಗಳನ್ನು ನಮ್ಮ ಪೂರ್ವಿಕರು ಊರಿನ ಹಿತದೃಷ್ಠಿಯಿಂದ ಮೀಸಲು ಮಾಡಿರುವ…
ಮಡಿಕೇರಿ ಡಿ.20 NEWS DESK : ವಿರಾಜಪೇಟೆ ತಾಲ್ಲೂಕು ಪೆರಂಬಾಡಿ ಬಡಾವಣೆಯ ರಸ್ತೆ ಕಾಮಗಾರಿಯು ರೂ.3.60 ಲಕ್ಷ ವೆಚ್ಚದಲ್ಲಿ ಇದೀಗ ಪೂರ್ಣಗೊಂಡಿದೆ. ಕಾಂಕ್ರೀಟ್ ಕಾಣದೆ ಸಾರ್ವಜನಿಕರಿಗೆ ಓಡಾಡಲು ತುಂಬಾ ದುಸ್ತರವಾಗಿದ್ದ ಈ ರಸ್ತೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿಶೇಷ ಕಾಳಜಿಯಲ್ಲಿ 73 ಮೀಟರ್ ಉದ್ದದ ಕಾಂಕ್ರೀಟ್ ರಸ್ತೆ ಪೂರ್ಣಗೊಂಡಿದ್ದು, ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕಾಮಗಾರಿಗೆ ಅನುದಾನ ಮಂಜೂರು ಮಾಡಿದ ಶಾಸಕ ಪೊನ್ನಣ್ಣ, ಸಹಕರಿಸಿದ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಗ್ರಾಮ ಪಂಚಾಯತಿ ಸದಸ್ಯರಾದ ಉಪೇಂದ್ರ ಮತ್ತು ವಲಯ ಅಧ್ಯಕ್ಷ ಅನೂಪ್, ಜಾಫರ್ ಗೆ ಪೆರಂಬಾಡಿ ಬಡಾವಣೆ ನಿವಾಸಿಗಳು ಧನ್ಯವಾದ ಅರ್ಪಿಸಿದ್ದಾರೆ.
ಮಡಿಕೇರಿ ಡಿ.20 NEWS DESK : ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ/ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಪ್ಟ್ ಇನ್ಸ್‍ಟ್ಯೂಟ್(ಎಪ್‍ಸಿಐ), ಮೈಸೂರು ಹಾಗೂ ಇನ್ಸ್‍ಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್(ಐಎಚ್‍ಎಂ) ಬೆಂಗಳೂರು ಅವರ ಮೂಲಕ ವಸತಿ ಸಹಿತ ಕಾರ್ಯಕ್ರಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಫುಡ್ ಮತ್ತು ಬೇವರೇಜ್ ಸರ್ವೀಸ್ ಸ್ಟೀವರ್ಡ್ ಕನಿಷ್ಠ ವಿದ್ಯಾರ್ಹತೆ 10ನೇ ತರಗತಿ ಪಾಸ್ ಆಗಿರಬೇಕು. ತರಬೇತಿ ಅವಧಿ 4 ತಿಂಗಳು, ಪ್ರತಿ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ 100 ಪ್ರತಿ ತರಬೇತಿಗೆ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಗುರಿ 49 ಆಗಿದೆ. ರೂಮ್ ಅಟೆಂಡೆಂಟ್ ವಿದ್ಯಾರ್ಹತೆ 5 ನೇ ತರಗತಿ ಪಾಸ್, ಅವಧಿ 4 ತಿಂಗಳು, ಪ್ರತಿ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ 30 ಪ್ರತಿ ತರಬೇತಿಗೆ ಪರಿಶಿಷ್ಟ…






