ಲೇಖಕ: admin

ಚೆಟ್ಟಳ್ಳಿ ಜ.28 NEWS DESK : ಚೆಟ್ಟಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಭೇಟಿ ನೀಡಿದರು. ಸಿಬ್ಬಂದಿ ಕೊರತೆ, ಭದ್ರತೆ ಕೊರತೆ, ಖಾಯಂ ವೈದ್ಯರಿಲ್ಲ ದಿರುವುದು, ನೂತನ ಕಟ್ಟಡ ನಿರ್ಮಾಣ ಹೀಗೆ ಹತ್ತು ಹಲವು ಸಮಸ್ಯೆಗಳ ದೂರಿನ ಮೇರೆಗೆ ಭೇಟಿ ನೀಡಿದ ಶಾಸಕರು, ವೈದ್ಯರಾದ ರಮ್‍ಸನ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಇಂದೂಧರ್, ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರೊಂದಿಗೆ ಮಾತನಾಡಿ ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು. ಆಸ್ಪತ್ರೆಯ ಜಾಗದ ದಾಖಲಾಯಿತಿಯ ಸಮಸ್ಯೆಯಿಂದ ಆರೋಗ್ಯ ಇಲಾಖೆ ನೂತನ ಕಟ್ಟಡ ನಿರ್ಮಿಸಲು ಮುಂದಾಗದಿರುವ ಬಗ್ಗೆ ಅಧಿಕಾರಿಗಳು ಶಾಸಕರ ಗಮನಕ್ಕೆ ತಂದಾಗ ಈ ಕುರಿತು ಸಂಬಂಧಪಟ್ಟ ಅಧಿಕಾರಿಯೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಚೆಟ್ಟಳ್ಳಿ ಆರೋಗ್ಯ ಕೇಂದ್ರವನ್ನು ಅಭಿವೃದ್ಧಿ ಪಡಿಸಲಾಗುವುದೆಂದು ಭರವಸೆ ನೀಡಿದರು.

Read More

ಚೆಟ್ಟಳ್ಳಿ ಜ.28 NEWS DESK : ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗೆ ಮಡಿಕೇರಿ ವಿಧಾನಸಭಾಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ಪುತ್ತರಿರ ಕುಟುಂಬದ ಐನ್‍ಮನೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ವಿವಿಧ ಕಾಮಗಾರಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು, ಮುಖ್ಯಮಂತ್ರಿಗಳ ವಿಶೇಷ ಮಂಜುರಾತಿ ಕಾರ್ಯಕ್ರಮದಡಿ 19 ಕೋಟಿ ಬಿಡುಗಡೆಗೊಳಿಸಲಾಗಿದ್ದು, ಕೂಡ್ಲೂರು ಚೆಟ್ಟಳ್ಳಿ ಪೈಸಾರಿ ರಸ್ತೆ, ಕಂಡಕರೆ ಪೈಸಾರಿ ರಸ್ತೆ, ಪೊನ್ನತಮೊಟ್ಟೆ ಪೈಸಾರಿ ರಸ್ತೆ, ಶ್ರೀಮಂಗಲ ಭಗವತಿ ದೇವಾಲಯದ ರಸ್ತೆ ಹಾಗೂ ಪುತ್ತರಿರ ಐನ್ ಮನೆ ರಸ್ತೆ, ಚೆಟ್ಟಳ್ಳಿ ಕಾಫಿ ಬೋರ್ಡ್ ಸಿದ್ದಿಕಲ್ ರಸ್ತೆ ಕಾಮಗಾರಿ, ಸಣ್ಣ ನೀರಾವರಿ ಹಾಗೂ ಕೆರೆಗಳ ವಾರ್ಷಿಕ ನಿರ್ವಹಣೆ, ದುರಸ್ಥಿಯೋಜನೆಯಡಿ ಚೇರಳ ಶ್ರೀಭಗವತಿ ದೇವಾಲಯದ ಬದಿಯ ಕೆರೆಯ ಅಭಿವೃದ್ಧಿ (ತಡೆಗೋಡೆ ನಿರ್ಮಾಣ) ಮಾಡಲಾಗುವುದೆಂದರು. ಜಿಲ್ಲಾ ಪಂಚಾಯತ್ ರಾಜ್ಯ ಹಣಕಾಸು ಆಯೋಗದ ಅನಿರ್ಬಂಧಿತ ಅನುದಾನದಡಿ ಚೆಟ್ಟಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ತರಗತಿ ಕೊಠಡಿ ದುರಸ್ಥಿ, ಪ್ರಾಥಮಿಕ ಆರೋಗ್ಯಕೇಂದ್ರ ಚೆಟ್ಟಳ್ಳಿ,…

Read More

ಮಡಿಕೇರಿ ಜ.28 NEWS DESK : ಕಟ್ಟೆಮಾಡು ಗ್ರಾಮದ ಶ್ರೀ ಮೃತ್ಯಂಜಯ ದೇವಾಲಯದ ಅಚ೯ಕರ ಮೇಲಿನ ಹಲ್ಲೆಯನ್ನು ತೀವ್ರವಾಗಿ ಖಂಡಿಸಿರುವ ಕೊಡಗು ಬ್ರಾಹ್ಮಣ ಸಮಾಜ, ಹಲ್ಲೆ ಆರೋಪಿಗಳ ಬಂಧನಕ್ಕೆ ಎರಡು ದಿನಗಳ ಗಡುವನ್ನು ನೀಡಿದೆ. ತಪ್ಪಿದ್ದಲ್ಲಿ ಜ.31 ರಂದು ಜಿಲ್ಲೆಯಾದ್ಯಂತ ದೇವಾಲಯಗಳಲ್ಲಿ ಬೆಳಗ್ಗಿನ ಪೂಜೆ ಪೂರೈಸಿ ಅನಂತರ ಭಕ್ತರಿಗೆ ದೇವಾಲಯವನ್ನು ಬಂದ್ ಮಾಡಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ನಗರದ ಪೊಲೀಸ್ ವರಿಷ್ಟಾಧಿಕಾರಿ ಕಚೇರಿ ಮುಂದೆ ಬ್ರಾಹ್ಣಣ ಸಮಾಜದ ನೂರಾರು ಮಂದಿ ಕೆಲ ಕಾಲ ಭಜನೆ, ದೇವರ ಕೀತ೯ನೆಗಳನ್ನು ಹೇಳುವ ಮೂಲಕ ಮನದ ನೋವನ್ನು ಹೊರಹಾಕಿದರು.  ಪೊಲೀಸ್ ವರಿಷ್ಟಾಧಿಕಾರಿ ಕೆ. ರಾಮರಾಜನ್ ಅವರನ್ನು ಭೇಟಿಯಾದ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಕೊಡಗು ಅಧ್ಯಕ್ಷ ರಾಮಚಂದ್ರ ಮೂಗೂರು, ಪ್ರಮುಖರಾದ ಶ್ರೀಧರ್ ನೆಲ್ಲಿತ್ತಾಯ, ಜಿ.ಟಿ. ರಾಘವೇಂದ್ರ ಬಿ.ಜಿ ಅನಂತಶಯನ, ಎಸ್.ಎಸ್.ಸಂಪತ್ ಕುಮಾರ್, ವಕೀಲ ಕೃಷ್ಣಮೂತಿ೯, ಪ್ರಭಾಕರ್ ನೆಲ್ಲಿತ್ತಾಯ, ಡಾ. ರಾಜಾರಾಮ್, ರಾಜಶೇಖರ್, ನಿದೇ೯ಶಕ ಮಂಜುನಾಥ್, ಕೆ.ಕೆ.ವಿಶ್ವನಾಥ್, ಎ.ಗೋಪಾಲಕೃಷ್ಣ, ಅಚ೯ಕರ…

Read More

ಮಡಿಕೇರಿ ಜ.28 NEWS DESK : ಅರ್ಚಕ ವಿಘ್ನೇಶ್ ಭಟ್ ಮೇಲೆ ನಡೆದ ಹಲ್ಲೆ ಮತ್ತು ಕಳೆದ ವರ್ಷ ಡಿ.27 ರಂದು ಕಟ್ಟೆಮಾಡು ದೇವಾಲಯದಲ್ಲಿ ಕೊಡವ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಪ್ರಕರಣವನ್ನು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ತೀವ್ರವಾಗಿ ಖಂಡಿಸುವುದಾಗಿ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅಸಹಾಯಕ ಅರ್ಚಕರ ಮೇಲೆ ಹಲ್ಲೆ ನಡೆಸಿರುವುದು ಮತ್ತು ಕೊಡವ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವುದು ಹೇಡಿತನದ ಕೃತ್ಯಗಳಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತ ಅತಿದೊಡ್ಡ ಜನಾಂಗೀಯ ವೈವಿಧ್ಯತೆ ಮತ್ತು ಶ್ರೇಷ್ಠ ಪ್ರಜಾಪ್ರಭುತ್ವವನ್ನು ಹೊಂದಿರುವ ರಾಷ್ಟ್ರವಾಗಿದೆ. ನಾವು ಸಹಿಷ್ಣುತೆ, ಒಗ್ಗೂಡುವಿಕೆ ಮತ್ತು ಅಹಿಂಸೆಯ ಮೌಲ್ಯಗಳನ್ನು ಎತ್ತಿಹಿಡಿಯಬೇಕು. ದೇಶದ ಸಂವಿಧಾನವು ನಮ್ಮ ಅಭಿಪ್ರಾಯಗಳನ್ನು ಅಭಿವ್ಯಕ್ತಪಡಿಸಲು, ಸಾಂಪ್ರದಾಯಿಕ ಉಡುಪುಗಳನ್ನು ಧರಿಸಲು, ಸಾಂಸ್ಕೃತಿಕ ಮತ್ತು ಧಾರ್ಮಿಕ ಆಚಾರ, ವಿಚಾರಗಳನ್ನು ನಿರ್ಭಯವಾಗಿ ಆಚರಿಸಲು ಸ್ವಾತಂತ್ರ್ಯ ನೀಡಿದೆ. ಕೊಡವರ ಭೌಗೋಳಿಕ, ರಾಜಕೀಯ ಸ್ವಾಯತ್ತತೆ, ಸಾಂಸ್ಕೃತಿಕ ಪರಂಪರೆಯನ್ನು ಗುರುತಿಸುವುದು ಮತ್ತು ಸಾಂಪ್ರದಾಯಿಕ ಭೂಮಿಯನ್ನು ರಕ್ಷಿಸುವುದು ಸೇರಿದಂತೆ ಕೊಡವ…

Read More

ಮಡಿಕೇರಿ ಜ.28 NEWS DESK : ಸಿಟಿಜನ್ಸ್ ಫಾರ್ ಸೋಶಿಯಲ್ ಜಸ್ಟೀಸ್ ಸಂಘಟನೆ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಸಂವಿಧಾನ ಸಮ್ಮಾನ್ ಅಭಿಯಾನ ಮತ್ತು ಸಂವಿಧಾನ ಬದಲಿಸಿದ್ದು ಯಾರು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಎನ್.ಮಹೇಶ್, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಇಡೀ ಪ್ರಪಂಚ ಕೊಂಡಾಡಿದರೂ ಕಾಂಗ್ರೆಸ್ ಮಾತ್ರ ಅವರನ್ನು ನಿರಂತರವಾಗಿ ಅವಮಾನಿಸಿ ಸಿಗಬೇಕಾದ ಗೌರವವನ್ನು ನೀಡದೆ, ಇದೀಗ ಅವರ ಹೆಸರನ್ನು ಚುನಾವಣಾ ಪ್ರಚಾರದ ಸರಕನ್ನಾಗಿ ಮಾಡಿಕೊಂಡಿದೆ ಎಂದು ಆರೋಪಿಸಿದರು. ಅಂಬೇಡ್ಕರ್ ಅವರಿಗೆ ಅವಮಾನ ಹಾಗೂ ಸನ್ಮಾನ ಮಾಡಿದವರು ಯಾರು, ಸಂವಿಧಾನವನ್ನು ದುರ್ಬಲ ಹಾಗೂ ಸಬಲ ಮಾಡಿದವರು ಯಾರು ಎಂಬ ಪ್ರಶ್ನೆಗೆ ಉತ್ತರ ಹುಡುಕಲು ಈ ಅಭಿಯಾನ ಕೈಗೊಳ್ಳಲಾಗಿದೆ ಎಂದರು. ಅಂಬೇಡ್ಕರ್ ಅವರ ಜೀವನದ ಅಂತ್ಯದ ತನಕವೂ ಕಾಂಗ್ರೆಸ್ ನಾಯಕರು ನೋವನ್ನು ಮಾತ್ರ ನೀಡಿದ್ದಾರೆ. ಪ್ರಪಂಚಕ್ಕೆ ಮಾದರಿ ಸಂವಿಧಾನ ನೀಡಿದ ಅಂಬೇಡ್ಕರ್ ನೋವುಂಡರು ದೇಶದ ಉನ್ನತಿ ಹಾಗೂ ಅಭ್ಯುಧಯಕ್ಕಾಗಿ ಅದನ್ನು ಸಹಿಸಿಕೊಂಡು ಕೆಲಸ…

Read More

ಸುಂಟಿಕೊಪ್ಪ ಜ.28 NEWS DESK : ಪ್ರತಿಯೊಬ್ಬರೂ ಪುಸ್ತಕವನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಇದರಿಂದ ವ್ಯಕ್ತಿಯ ವ್ಯಕ್ತಿತ್ವ ವಿಕಾಸನಗೊಳಿಸುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಮಾಲಿನಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಮಂಜಿಕೆರೆ ಸಮುದಾಯ ಭವನದಲ್ಲಿ ನಡೆದ ಪುಸ್ತಕ ವಾಚನ ಓದಿ ವಿಮರ್ಶೆ ಮಾಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಇಂದಿನ ದಿನಗಳಲ್ಲಿ ನಾವುಗಳು ಪುಸ್ತಕಗಳನ್ನು ಓದುವ ಹವ್ಯಾಸದಿಂದ ದೂರ ಉಳಿದುಕೊಳ್ಳುತ್ತಿದ್ದೇವೆ ಇದರಿಂದ ನಮ್ಮ ಜ್ಞಾನವು ಕುಂಠಿತಗೊಳ್ಳುತ್ತಿದೆ. ನಾವು ನಿತ್ಯ ಪುಸ್ತಕಗಳನ್ನು ಓದುವುದರಿಂದ ವೈಯಕ್ತಿಕ ಜ್ಞಾನವನ್ನು ಬೆಳೆಸಿಕೊಳ್ಳಬಹುದಾಗಿದೆ. ಆದ್ದರಿಂದ ಪ್ರತಿಯೊಬ್ಬರು ವಿಶ್ರಾಂತಿ ಸಮಯದಲ್ಲಿ ಪುಸ್ತಕಗಳನ್ನು ಓದುವ ಹವ್ಯಸವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಜನನಿ ತಂಡದ ಸದಸ್ಯೆ ರತ್ನ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾನ್‍ಬೈಲ್ ವ್ಯಾಪ್ತಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘಗಳಾದ ಜನನಿ, ಭೂಮಿಕ, ಕನ್ನಿಕ,…

Read More

ಸುಂಟಿಕೊಪ್ಪ ಜ.28 NEWS DESK : ಮಾದಾಪರ ಹೋಬಳಿಯಲ್ಲಿ ಸರಕಾರದ ವಿಶೇಷದ ಅನುದಾನ 44 ಲಕ್ಷ ರೂಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದೆಂದು ಶಾಸಕ ಡಾ.ಮಂತರ್‍ಗೌಡ ಹೇಳಿದರು. ಮಾದಾಪುರ ಜಂಬೂರು ಬಾಣೆ, ಇಗೋಡ್ಲು, ಆಶ್ರಯ ಕಾಲೋನಿ ಸಂಪರ್ಕ ರಸ್ತೆಗೆ ಶಾಸಕರ ನಿಧಿಯಿಂದ 10 ಲಕ್ಷ ರೂ ಯೋಜನೆಗೆ ಭೂಮಿಪೂಜೆ ನೇರವೇರಿಸಿ ಮಾತನಾಡಿದ ಅವರು, ಮಾದಾಪುರ ವಿಭಾಗದ ಜನರ ಬೇಡಿಕೆಯಂತೆ ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿ ನಡೆಸಲಾಗುವುದು. ಮುಖ್ಯ ಮಂತ್ರಿಗಳು ನನ್ನ ಕ್ಷೇತ್ರಕ್ಕೆ ರೂ.19 ಕೋಟಿ ಅಭಿವೃದ್ಧಿ ಕೆಲಸ ಕಾರ್ಯಕ್ಕೆ ಬಿಡುಗಡೆಗೊಳಿಸಿದ್ದಾರೆ. ಜನರ ಆಶೋತ್ತರಗಳನ್ನು ಈಡೇರಿಸುವುದೇ ನಮ್ಮ ಸರಕಾರದ ಗುರಿಯಾಗಿದೆ ಎಂದು ಶಾಸಕರು ಹೇಳಿದರು. ಈ ಸಂದರ್ಭ ಸೋಮವಾರಪೇಟೆ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ, ಮಾದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಮೇದೂರು ಹರೀಶ ಸುಬ್ಬಯ್ಯ, ಮಾದಾಪುರ ಬೂತ್ ಕಾಂಗ್ರೆಸ್ ಅಧ್ಯಕ್ಷ ಉಮ್ಮರ್, ಜಂಬೂರು ಕಾಂಗ್ರೆಸ್ ಅಧ್ಯಕ್ಷ ಅಜೀಜ್, ರಿಯಾಜ್ ಮಾದಾಪುರ ಗ್ರಾ.ಪಂ ಉಪಾಧ್ಯಕ್ಷ ಸುರೇಶ್ ಬಾವೆ, ಜಂಬೂರು ವಿಭಾಗದ ಗ್ರಾ.ಪಂ ಸದಸ್ಯ ಪಿ.ಡಿ.ಅಂತೋಣಿ(ತಂಗಚ್ಚ)…

Read More

ಮಡಿಕೇರಿ ಜ.28 NEWS DESK : ಕಟ್ಟೆಮಾಡು ಗ್ರಾಮದ ಶ್ರೀಮಹಾ ಮೃತ್ಯುಂಜಯ ದೇವಾಲಯದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಅವರ ಮೇಲೆ ನಡೆದಿರುವ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಾಲಯ ಸಮಿತಿ ಹಲ್ಲೆ ಮಾಡಿದವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವಾಲಯ ಸಮಿತಿಯ ಅಧ್ಯಕ್ಷ ಕೆ.ಕೆ.ಶಶಿ ಜನಾರ್ಧನ ಅವರು ದೇವಾಲಯದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯ ಶಮನಕ್ಕೆ ಜಿಲ್ಲಾಡಳಿತ ಫೆ.10 ರವರೆಗೆ ಕಾಲಾವಕಾಶ ನೀಡಿದೆ. ಸಮಿತಿ ಶಾಂತಿಯುತ ಪರಿಹಾರ ದೊರೆಯುವ ವಿಶ್ವಾಸದಲ್ಲಿರುವಾಗಲೇ ಅರ್ಚಕರ ಮೇಲೆ ಹಲ್ಲೆ ನಡೆದಿದೆ. ಮೂಗು ಮುರಿದಿದ್ದು, ಐಸಿಯುನಲ್ಲಿ ದಾಖಲಾಗಿದ್ದಾರೆ. ಶಸ್ತ್ರ ಚಿಕಿತ್ಸೆಯಾಗಬೇಕೆಂದು ವೈದ್ಯರು ತಿಳಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ದೇವಾಲಯ ನಿರ್ಮಾಣದ ಮೂಲ ಉದ್ದೇಶ ಶಾಂತಿ ಮತ್ತು ಪ್ರಾರ್ಥನೆಯೇ ಆಗಿದೆ. ಆದರೆ ಶ್ರೀಮಹಾ ಮೃತ್ಯುಂಜಯ ದೇವಾಲಯದ ವಿಚಾರದಲ್ಲಿ ದ್ವೇಷಪೂರಿತವಾಗಿ ನಡೆಯುತ್ತಿರುವ ಅಹಿತಕರ ಘಟನೆ ಸಮಾಜ ಮತ್ತು ದೇವಾಲಯಕ್ಕೆ ಒಳ್ಳೆಯದಲ್ಲ. ಅರ್ಚಕರ ಮನೆಗೆ ಹೋಗಿ ಹಲ್ಲೆ ಮಾಡಿರುವುದು ದೊಡ್ಡ ಅಪರಾಧವಾಗಿದ್ದು, ತಪ್ಪಿತಸ್ಥರನ್ನು ತಕ್ಷಣ…

Read More

ಮಡಿಕೇರಿ ಜ.28 NEWS DESK : ಮಡಿಕೇರಿ ನಗರದ ನೂತನ ಖಾಸಗಿ ಬಸ್ ನಿಲ್ದಾಣದ ಉದ್ಯಾನವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡುವಂತೆ ಕೊಡಗು ಜಿಲ್ಲಾ ಅಹಿಂದ ಸಂಘಟನೆ ಮನವಿ ಮಾಡಿದೆ. ಮಡಿಕೇರಿ ನಗರಸಭಾ ಪೌರಯುಕ್ತ ರಮೇಶ್ ಅವರಿಗೆ ಮನವಿ ಸಲ್ಲಿಸಿದ ಸಂಘಟನೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ನಗರದ ನೂತನ ಖಾಸಗಿ ಬಸ್ ನಿಲ್ದಾಣದ ಉದ್ಯಾನವನದಲ್ಲಿ (ಇಂದಿರಾ ಕ್ಯಾಂಟೀನ್ ಬಳಿಯಲ್ಲಿ) ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡುವಂತೆ ಹಾಗೂ ಇಂದಿರಾ ಕ್ಯಾಂಟೀನ್ ಬಳಿ ಹೆಚ್ಚು ಸ್ಥಳಾವಕಾಶ ಇರುವುದರಿಂದ ಭಾರತದ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಪುತ್ತಳಿ ನಿರ್ಮಾಣ ಮಾಡುವಂತೆ ಮನವಿ ಮಾಡಿದರು. ಈ ಸ್ಥಳದಲ್ಲಿ ಪಕ್ಷೇಪಣೆಗಳಿದ್ದಲ್ಲಿ ನಗರದ ಹೃದಯ ಭಾಗವಾದ ಹಳೆಯ ಖಾಸಗಿ ಬಸ್ ನಿಲ್ದಾಣದ ತಡೆಗೋಡೆ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರಿನ ಗ್ರಂಥಾಲಯವನ್ನು ನಿರ್ಮಿಸುವಂತೆ ಆಗ್ರಹಿಸಿದರು. ಈ ಸಂದರ್ಭ ಸಮಿತಿಯ ಅಧ್ಯಕ್ಷ ರವಿಗೌಡ, ನಗರಸಭಾ ಸದಸ್ಯ ಬಶೀರ್ ಅಹಮದ್, ಪ್ರಮುಖರಾದ ವಿನೋದ್ ಕುಮಾರ್, ಮುನೀರ್…

Read More

ಬೆಂಗಳೂರು ಜ.28 NEWS DESK : ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್‌ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು. ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು.  ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ,  ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ,…

Read More