ಲೇಖಕ: admin

ಮಡಿಕೇರಿ ಜ.15 NEWS DESK : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್‍ಬಿಐ ಮತ್ತು ಇತರ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ. ಆಸಕ್ತರು ಜ.18 ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು 0821-2515944/ 9964760090 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಾದೇಶಿಕ ಕೇಂದ್ರ ಮಡಿಕೇರಿ ಪ್ರಾದೇಶಿಕ ನಿರ್ದೇಶಕಿಯಾದ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.

Read More

ಮಡಿಕೇರಿ ಜ.15 NEWS DESK : ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡ ಹಿನ್ನಲೆಯಲ್ಲಿ ರಾಜ್ಯ ಸರಕಾರ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಸುವರ್ಣ ಸಂಭ್ರಮ-50 ಆಚರಣೆ ಪ್ರಯುಕ್ತ ಕೊಡಗು ಜಿಲ್ಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಮೂರ್ನಾಡು ಸರ್ಕಾರಿ ಪ್ರೌಢಶಾಲೆಯ ತಶ್ಮಿಕಾ ಕೆ.ಎಂ (ಪ್ರಥಮ), ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢಶಾಲೆಯ ಅಮೃತ ಟಿ.ಜೆ (ದ್ವಿತೀಯ) ಮತ್ತು ಕುಶಾಲನಗರ ಸರ್ಕಾರಿ ಪ್ರೌಢಶಾಲೆಯ ಪ್ರಗತಿ ಬಡಿಗೇರ್ (ತೃತೀಯ ಸ್ಥಾನ) ಪಡೆದಿದ್ದಾರೆ. ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಗೋಣಿಕೊಪ್ಪ ಲಯನ್ಸ್ ಪಿ.ಯು ಕಾಲೇಜಿನ ಆದ್ವಿಕ (ಪ್ರ), ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಜ್ವಲ್ ಬಿ.ಹೆಚ್ (ದ್ವಿ), ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಸ್ಪಂದನ ಆರ್.ಎಸ್ (ತೃ) ಸ್ಥಾನ…

Read More

ಮಡಿಕೇರಿ ಜ.15 NEWS DESK : ಮೈಸೂರು ಜಿಲ್ಲಾ ಕಿವುಡರ ಸಂಘದ 10ನೇ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಮೈಸೂರಿನ ರಾಹುಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಉಮಾ ಶಂಕರ, ಮೈಸೂರು ಜಿಲ್ಲಾ ಕಿವುಡರ ಸಂಘದ ಅಧ್ಯಕ್ಷ ಮೂರ್ತಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕಿವುಡರ ಸಂಘದ ಅಧ್ಯಕ್ಷೆ ಗೌರು ಎಂ.ಸೋಮಣ್ಣ, ಉಪಾಧ್ಯಕ್ಷ ಶಂಕರ ನಾರಾಯಣ, ಕಾರ್ಯದರ್ಶಿ ರಂಜಿತ್, ಸಹಕಾರ್ಯದರ್ಶಿ ನಾಗೇಶ್, ಖಜಾಂಚಿ ಸುರೇಶ್ ಸೇರಿದಂತೆ ವಿವಿಧ ಜಿಲ್ಲೆಯ 25 ಕಿವುಡರ ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಸಭಾ ಕಾರ್ಯಕ್ರಮದ ನಂತರ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಪಾಲ್ಗೊಂಡಿದ್ದ ವಿವಿಧ ಸಂಸ್ಥೆಗೆ ನೆನಪಿನ ಕಾಣಿಕೆ ನೀಡಲಾಯಿತು.

Read More

ಮಡಿಕೇರಿ ಜ.15 NEWS  DESK : ಮಡಿಕೇರಿ ನಗರದ ಶಕ್ತಿ ಪೀಠಗಳಲ್ಲಿ ಒಂದಾದ ಮಂಗಳಾದೇವಿ ನಗರದ ಶ್ರೀ ರಾಜರಾಜೇಶ್ವರಿ ಕ್ಷೇತ್ರದ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಜ.14ರ ಸಂಜೆಯಿಂದಲೇ ಪ್ರಾರ್ಥನೆ, ಪುಣ್ಯ, ಸಪ್ತಶುಧ್ಧಿ, ಪ್ರಸಾದ ಶುಧ್ಧಿ, ರಾಕ್ಷೋಘ್ನ ಹೋಮ, ವಾಸ್ತು ಪೂಜೆ, ವಾಸ್ತು ಹೋಮ, ದಿಶಾ ಬಲಿ ಸೇರಿದಂತೆ ವಿವಿಧ ಧಾರ್ಮಿಕ ಪೂಜಾವಿಧಿವಿಧಾನಗಳು ನೆರವೇರಿತು. ನಂತರ ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಯಿತು. ಇಂದು ಮುಂಜಾನೆ ಪುಣ್ಯಾಹ, ಗಣಪತಿ ಹೋಮ, ಚಂಡಿಕಾ ಹೋಮ, ನವಕಲಶ ಪೂಜೆ, ಪ್ರಧಾನ ಹೋಮ, ನಾಗದೇವರಿಗೆ ತಂಬಿಲ, ಆಶ್ಲೇಷ ಬಳಿ, ಕಲಶಾಭಿಶೇಕ ಜರುಗಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಸಂಜೆ 5.30ಕ್ಕೆ ಸಾಯಂಪೂಜೆ, 6.30ಕ್ಕೆ ರಂಜಪೂಜೆ, 7 ಗಂಟೆಗೆ ದೇವಾಲಯದ ಆವರಣದಲ್ಲಿ ಬಲಿ ಉತ್ಸವ, ರಾಜಾಂಗಣ ಪ್ರಸಾದ, ಪೀಠ ಪೂಜೆ, ಶುದ್ಧಿ ಕಲಶಾಭಿಶೇಕ, ಮಂತ್ರಾಕ್ಷತೆ ನಂತರ ಅನ್ನಸಂತರ್ಪಣೆ ನೆರವೇರಲಿದ್ದು,…

Read More

ಬೆಂಗಳೂರು ಜ.15 NEWS DESK : ನಗರದ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ಘಟನೆಗೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಜಾನುವಾರುಗಳ ಮಾಲೀಕರಿಗೆ ಮೂರು ಹಸುಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದರೊಂದಿಗೆ ಕುಟುಂಬಕ್ಕೆ ಮೂರು ಲಕ್ಷ ರೂ.ಗಳ ಪರಿಹಾರವನ್ನು ನೀಡಿದ್ದಾರೆ. ಈ ವೇಳೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಷ್, ಗೌಸಿ, ವಿನಾಯಕ್, ಪ್ರಸಾದ್ ಇದ್ದರು.  ಗಾಯಗೊಂಡ ಹಸುಗಳನ್ನು ಚಿಕಿತ್ಸೆಗಾಗಿ ಚಾಮರಾಜಪೇಟೆಯ ಪಶು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Read More

ಮಡಿಕೇರಿ ಜ.15 NEWS DESK : ವಿರಾಜಪೇಟೆ ತಾಲ್ಲೂಕು ಅರ್ಜಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತೆರ್ಮೆಕಾಡು ಕಾಲೋನಿಯ ರಸ್ತೆ ಅಭಿವೃದ್ಧಿ ಕಾಮಗಾರಿಯು SCPTSP ಅನುದಾನದಲ್ಲಿ ಕಾರ್ಯಗತಗೊಂಡಿದೆ. ಈ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ರೂ.5.5 ಲಕ್ಷ ಅನುದಾನವನ್ನು ಒದಗಿಸಿದ್ದು, ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಬೆಂಗಳೂರು, ಜ.15 NEWS DESK : ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ವಿಶಿಷ್ಟವಾಗಿ ಹೊರತಂದಿರುವ 2025ರ ಕ್ಯಾಲೆಂಡರ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕ್ರಾಂತಿ ಹಬ್ಬದ ದಿನದಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಗೃಹ ಕಚೇರಿ ಕಾವೇರಿಯಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಘಕ್ಕೆ 75 ವರ್ಷ ಪೂರೈಸಿದ್ದೀರಿ ಎಂಬುದೇ ಹೆಗ್ಗಳಿಕೆ. ಪತ್ರಕರ್ತರ ಸಹಕಾರ ಸಂಘಕ್ಕೆ ಒಳ್ಳೆಯದಾಗಲಿ, ಎಲ್ಲ ನಿರ್ದೇಶಕರಿಗೆ ಸಕ್ರಾಂತಿ ಶುಭಾಶಯಗಳು ಎಂದು ಹಾರೈಸಿದರು. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 75ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ನಾನು ತುಂಬಾ ಸಂತೋಷದಿಂದ ಬರುತ್ತೇನೆ. ಆದರೆ ನನಗೆ ತುಸು ಸಮಯ ಕೊಡಿ ಎಂದು ಹೇಳಿದರು. ಬಜೆಟ್ ಹಿನ್ನಲೆಯಲ್ಲಿ ಸ್ವಲ್ಪ ಬ್ಯೂಸಿಯಾಗಿದ್ದೇನೆ ಎಂದರು. ಇದೇ ವೇಳೆ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್, ಶಾಸಕ ರಘುಮೂರ್ತಿ ಅವರೂ ಪತ್ರಕರ್ತರ ಸಹಕಾರ ಸಂಘಕ್ಕೆ ಶುಭ ಹಾರೈಸಿದರು. ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಎಂ.ರಮೇಶ್ ಪಾಳ್ಯ, ಉಪಾಧ್ಯಕ್ಷ…

Read More

ಮಡಿಕೇರಿ ಜ.15 NEWS DESK : ಲೇಖಕ ವಿನೋದ್ ಯೋಧನ ಬಗ್ಗೆ ಬರೆದ ಪುಣ್ಯಭೂಮಿ ಕಾದಂಬರಿ ಪುಸ್ತಕ ಬಿಡುಗಡೆಗೊಂಡಿತು. ಪೊನ್ನಂಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಪುಸ್ತಕ ಅನಾವರಣ ಮಾಡಿದರು. ಕಾಳಿಮಾಡ ಮೋಟಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ.ಅನಂತಶಯನ, ಕನ್ನಡ ಸಾಹಿತ್ಯ ಪರಿಷತ್‍ನ ಜಿಲ್ಲಾಧ್ಯಕ್ಷ ಕೇಶವ ಕಾಮತ್ ಸೇರಿದಂತೆ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.

Read More

ಮಡಿಕೇರಿ ಜ.15 NEWS DESK : ಕೊಡವರ ಹಕ್ಕುಗಳಿಗಾಗಿ ನಿರಂತರ ಹೋರಾಟ ನಡೆಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ನಂದಿನೆರವಂಡ ಯು.ನಾಚಪ್ಪ ಅವರ ವಿರುದ್ಧ ಹೂಡಲಾಗಿರುವ ಮೊಕದ್ದಮೆ ಹಿಂಪಡೆಯಬೇಕು ಎಂದು ನಾಪೋಕ್ಲು ಕೊಡವ ಸಮಾಜ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊಡವ ಸಮಾಜದ ಅಧ್ಯಕ್ಷ ಎಂ.ಸಿ.ನಾಣಯ್ಯ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರುಗಳು ಎನ್.ಯು.ನಾಚಪ್ಪ ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಇದು ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಕೊಡಗಿನ ಅಸ್ತಿತ್ವಕ್ಕಾಗಿ ಮತ್ತು ಮೂಲ ನಿವಾಸಿ ಕೊಡವರ ಹಕ್ಕುಗಳಿಗಾಗಿ ಒತ್ತಾಯಿಸುತ್ತಾ ಬಂದಿರುವ ಎನ್.ಯು.ನಾಚಪ್ಪ ಅವರು ನಿರಂತರ ಶಾಂತಿಯುತ ಹೋರಾಟ ನಡೆಸುತ್ತಾ ಬಂದಿದ್ದಾರೆ. ಕೊಡವರ ಹಕ್ಕುಗಳ ಹಕ್ಕುಗಳ ರಕ್ಷಣೆಗಾಗಿ ಇರುವ ಸಂವಿಧಾನಾತ್ಮಕ ವಿಚಾರಧಾರೆಗಳನ್ನು ಪ್ರತಿಪಾದಿಸುತ್ತಾ ಬಂದಿದ್ದಾರೆ. ಆದರೆ ಇದೀಗ ಕೆಲವರು ವಿನಾಕಾರಣ ಇವರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದು, ಇದನ್ನು ನಾಪೋಕ್ಲು ಕೊಡವ ಸಮಾಜ ತೀವ್ರವಾಗಿ ಖಂಡಿಸುತ್ತದೆ ಮತ್ತು ಪ್ರಕರಣವನ್ನು ತಕ್ಷಣ ರದ್ದುಗೊಳಿಸಬೇಕೆಂದು ಒತ್ತಾಯಿಸುವುದಾಗಿ ತಿಳಿಸಿದ್ದಾರೆ. ಕೊಡಗಿನ ಮೂಲನಿವಾಸಿಗಳಾದ ಕೊಡವರಿಗೆ…

Read More

ಬೆಂಗಳೂರು ಜ.15 NEWS DESK : ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ (76) ನಿಧನ ಹೊಂದಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಿ ಅವರ ಅವರನ್ನು ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು  (ಜ.15) ಬೆಳಿಗ್ಗೆ ನಿಧನರಾಗಿದ್ದಾರೆ. ನಾಟಕಗಳಲ್ಲಿ ನಟಿಸುತ್ತಿದ್ದ ವಿಜಿ ಅವರ ‘ಸಂಸಾರದಲ್ಲಿ ಸರಿಗಮ’ ನಾಟಕ ಬಹಳ ಹೆಸರು ಕೊಟ್ಟಿತ್ತು. ಇದೇ ಕಾರಣಕ್ಕೆ ಅವರಿಗೆ ಸರಿಗಮ ವಿಜಿ ಹೆಸರು ಬಂದಿತ್ತು. ನಾಟಕದಿಂದ ಸಿನಿಮಾಕ್ಕೆ ಪದಾರ್ಪಣೆ ಮಾಡಿದ ವಿಜಿ ಅವರು ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರ ಕೆಲವೆಡೆ ವಿಲನ್ ಪಾತ್ರಗಳಲ್ಲಿಯೂ ನಟಿಸಿದ್ದಾರೆ. ಮೃತರು ಪತ್ನಿ ಇಬ್ಬರು ಮಕ್ಕಳ ಸಹಿತ ಅಪಾರ ಅಭಿಮಾನಿ, ಬಂಧುಗಳನ್ನು ಅಗಲಿದ್ದಾರೆ. ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚಿತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Read More