ಲೇಖಕ: admin

ಮಡಿಕೇರಿ ಜ.15 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನೀಡಲಾಗುವ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಗೆ  ಕೂಡಕಂಡಿ ಓಂಶ್ರೀ ದಯಾನಂದ ಭಜನರಾಗಿದ್ದಾರೆ. ಜಿಲ್ಲೆಯ ಹಿರಿಯ ಮೂರು ಸಾಹಿತಿಗಳನ್ನು ತೀರ್ಪುಗಾರರನ್ನಾಗಿಸಿ ಅವರು ಎಲ್ಲ ಪುಸ್ತಕಗಳನ್ನು ಪರಮಾರ್ಶಿಸಿ‌ ಕೂಡಕಂಡಿ ಓಂಶ್ರೀ ದಯಾನಂದ ಬರೆದ  “ಪುಟಾಣಿ ರೈಲು – ಅಂದದ ಕಥೆಗಳ ಲೋಕದಲ್ಲೊಂದು ಸುಂದರ ಪಯಣ” ಕಥಾ ಸಂಕಲನಕ್ಕೆ ಈ ಪ್ರಶಸ್ತಿ ಲಭ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿಪ್ರಶಸ್ತಿಗಳಲ್ಲಿ ಅತ್ಯಂತ ಪ್ರತಿಷ್ಟಿತವಾದ ದತ್ತಿ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ. ಈ ದತ್ತಿಯನ್ನು ಗೌರಮ್ಮ ಅವರ ಪುತ್ರ ಬಿ.ಜಿ.ವಸಂತ ಕೊಡಗಿನ ಮಹಿಳಾ ಲೇಖಕಿಯರು ಪ್ರಕಟ ಪಡಿಸಿದ ಉತ್ತಮ ‌ಕೃತಿಗೆ ಪ್ರಶಸ್ತಿ ನೀಡಿ ಗೌರವಿಸುವ ಸಲುವಾಗಿ ಸ್ಥಾಪಿಸಲಾಗಿದೆ. ಇಲ್ಲಿಯವರೆಗೆ 20 ಲೇಖಕಿಯರಿಗೆ ಈ ಪ್ರಶಸ್ತಿ ನೀಡಲಾಗಿದೆ. 2024-25ನೇ ಸಾಲಿನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದ್ದು 15…

Read More

ನಾಪೋಕ್ಲು ಜ.15 NEWS DESK : ಮಡಿಕೇರಿ ಶೌರ್ಯ ವಿಪತ್ತು ನಿರ್ವಹಣ ಘಟಕದ ವತಿಯಿಂದ ನಗರದ ಕನಕದಾಸ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಶಾಲಾ ಆವರಣದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಕಡಿದ ಘಟಕದ ಪ್ರಮುಖರು ಹಾಗೂ ಪದಾಧಿಕಾರಿಗಳು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಈ ಸಂದರ್ಭ ಶೌರ್ಯ ವಿಪತ್ತು ನಿರ್ವಹಣ ಘಟಕದ ಮೇಲ್ವಿಚಾರಕ ವಿನೋದ, ಜ್ಞಾನವಿಕಾಸದ ಮಾಲಿನಿ, ಸಂಯೋಜಕರಾದ ರೋಹಿಣಿ, ಲೀಲಾಶೇಷಮ್ಮ, ಮುನಿರ್ ಮಾಚರ್, ರವಿಕುಮಾರ್, ಹರಿಣಾಕ್ಷಿ, ಪ್ರೇಮಾ, ಯಶೋಧ, ಲತಾ ಹಾಜರಿದ್ದರು. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ಜ.15 NEWS DESK : ಬಲ್ಲಮಾವಟಿ ಗ್ರಾಮ ಪಂಚಾಯಿತಿಯ ಭಾರತ ನಿರ್ಮಾಣ ಸೇವಾ ಕೇಂದ್ರ, ಸಂಜೀವಿನಿ ಶೆಡ್ ಹಾಗೂ ಡಿಜಿಟಲ್ ಗ್ರಂಥಾಲಯ ಅರಿವು ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಜ.16 ರಂದು ನಡೆಯಲಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ಪಿ.ಶಾಂತಿ ಪೂವಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಟ್ಟಡಗಳ ಉದ್ಘಾಟನೆಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಮತ್ತು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟರಾಜಾ, ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಎಸ್.ಪಿ ರಾಮರಾಜನ್ ಕೆ., ಕೊಡಗು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಧನರಾಜ್ ಜಿ, ಮಡಿಕೇರಿ…

Read More

ನಾಪೋಕ್ಲು ಜ.15 NEWS DESK : ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ಸನ್ನಿಧಿಯಲ್ಲಿ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಶ್ರದ್ಧಾಭಕ್ತಿಯಿಂದ ಜರುಗಿತು. ಮಕರ ಸಂಕ್ರಾಂತಿ ಅಂಗವಾಗಿ ಶ್ರೀ ಶಾಸ್ತಾವು ದೇವರಿಗೆ ಅಭಿಷೇಕ, ಹೂವಿನ ಅಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಿತು. ಮಧ್ಯಾಹ್ನ ಶ್ರೀ ಶಾಸ್ತಾವು ದೇವರಿಗೆ ವಿಶೇಷ ಮಹಾಪೂಜೆ, ಮಹಾ ಮಂಗಳಾರತಿ ಜರುಗಿತು. ನಂತರ ಭಕ್ತಾಧಿಗಳಿಗೆ ತಿರ್ಥ ಪ್ರಸಾದ ವಿತರಿಸಲಾಯಿತು. ಈ ಸಂದರ್ಭ ದೇವಾಲಯದ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿಯ ಪ್ರಮುಖರು ಸೇರಿದಂತೆ ಭಕ್ತಾದಿಗಳು ಹಾಜರಿದ್ದರು. ದೇವಾಲಯದ ಮುಖ್ಯ ಅರ್ಚಕ ದಿವಾಕರ ಭಟ್ ಪೂಜಾ ಕೈಂಕರ್ಯಗಳನ್ನು ನೆರವೇರಿದರು. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಜ.15 NEWS DESK :  ಬೇಟೋಳಿ ರಾಮನಗರದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ  ಮಕರ ಸಂಕ್ರಾಂತಿಯ ಪ್ರಯುಕ್ತ ಶ್ರೀ ಅಯ್ಯಪ್ಪ ಮಹೋತ್ಸವ ಹಾಗೂ ಮಕರ ಜ್ಯೋತಿ ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದ ಅರ್ಚಕರಾದ ವಿಶ್ವನಾಥ್ ಭಟ್ ಹಾಗೂ ವಾಮನಮೂರ್ತಿ ಭಟ್ ನೇತೃತ್ವದಲ್ಲಿ ಮುಂಜಾನೆಯಿಂದಲೇ ದೇವತಾ ಪ್ರಾರ್ಥನೆ, ಶ್ರೀ ಗಣಪತಿ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ನೆರವೇರಿತು. ನಂತರ ಶ್ರೀ ಅಯ್ಯಪ್ಪ ಸ್ವಾಮಿಗೆ ಅಲಂಕಾರ ಪೂಜೆ, ಕ್ಷೀರಾಭಿಷೇಕ, ಸೀಯಾಳ ಅಭಿಷೇಕ, ತುಪ್ಪದ ಅಭಿಷೇಕ ಹಾಗೂ ಕುಂಕುಮಾರ್ಚನೆ, ಭಸ್ಮಾರ್ಚನೆ ಸೇವೆಗಳು ನಡೆದವು. ದೇವಾಲಯದ ಆವರಣದಲ್ಲಿ ಹದಿನೆಂಟು ಮೆಟ್ಟಿಲುಗಳಿರುವ ಮಂಟಪದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.  ಮಹಾಮಂಗಳಾರತಿ ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ಸಂಜೆ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾ ವೃತಾಧಾರಿಗಳಿಂದ ಭಜನೆ ನಡೆಯಿತು. ಸಂಜೆ ಮಕರಜ್ಯೋತಿ ಪೂಜೆಯನ್ನು ನೆರವೇರಿಸಿದರು. ನಂತರ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ರುದ್ರಮ್ ಚಂಡೆ ಬಳಗದಿಂದ ಚಂಡೆ…

Read More

ಮಡಿಕೇರಿ ಜ.15 NEWS DESK : ಚಾಮರಾಜಪೇಟೆಯಲ್ಲಿ ಗೋವುಗಳ ಕೆಚ್ಚಲುಗಳನ್ನು ಕತ್ತರಿಸಿ ಪೈಶಾಚಿಕ ಕೃತ್ಯವೆಸಗಿದ ಪ್ರಕರಣ ಅಮಾನವೀಯ ಮತ್ತು ಖಂಡನೀಯ. ಹಿಂದೂಗಳಿಗೆ ಮಾತೃ ಸಮಾನವಾದ ಗೋವುಗಳ ಮೇಲಿನ ದಾಳಿಯನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರಕಾರ ಕಠಿಣ ಕಾನೂನು ಜಾರಿಗೆ ತರಬೇಕೆಂದು ಮಾನವ ಹಕ್ಕುಗಳ ಅಂತರಾಷ್ಟ್ರೀಯ ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಸುಗಳ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವುದು ಅತ್ಯಂತ ಘೋರ ಕೃತ್ಯವಾಗಿದೆ. ಈ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ದುಷ್ಕೃತ್ಯಕ್ಕೆ ಪ್ರೇರಣೆ ನೀಡುತ್ತಿರುವ ಶಕ್ತಿಗಳನ್ನು ಬಯಲಿಗೆಳೆಯಬೇಕೆಂದು ಆಗ್ರಹಿಸಿದ್ದಾರೆ. ಭೂಮಿಯ ಮೇಲೆ ಮನುಷ್ಯರಿಗಿರುವಷ್ಟೇ ಜೀವಿಸುವ ಹಕ್ಕು ಮೂಕ ಪ್ರಾಣಿಗಳಿಗೂ ಇದೆ. ಗೋವುಗಳ ಜೀವಿಸುವ ಹಕ್ಕನ್ನು ಕಸಿದುಕೊಳ್ಳುತ್ತಿರುವ ಕಿಡಿಗೇಡಿಗಳ ಕುಕೃತ್ಯ ಹಿಂದೂ ಸಮಾಜದ ಭಾವನೆಗೆ ದಕ್ಕೆ ತರುತ್ತಿದೆ. ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಇತ್ತೀಚಿನ ದಿನಗಳಲ್ಲಿ ಗೋವುಗಳ ಮೇಲಿನ ದಾಳಿ ಮಿತಿ ಮೀರುತ್ತಿದೆ. ಗೋವುಗಳ ಮೇಲೆ ದಾಳಿ ನಡೆಸುತ್ತಿರುವವರಿಗೆ ಕಾನೂನಿನ ಮೇಲೆ…

Read More

ಕುಶಾಲನಗರ ಜ.15 NEWS DESK :  ನದಿ, ಪ್ರಕೃತಿ, ಸಂಸ್ಕೃತಿಯ ಪ್ರತೀಕವಾಗಿದ್ದು ಅವುಗಳು ನಾಶವಾಗದಂತೆ ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರದಲ್ಲಿ ಕಾವೇರಿ ಆರತಿ ಬಳಗದಿಂದ ನಡೆದ 168ನೆಯ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿಯೊಬ್ಬರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಬೇಕು. ಆ ಮೂಲಕ ಸ್ವಚ್ಛ ಗ್ರಾಮಗಳ ನಿರ್ಮಾಣ ಸಾಧ್ಯ ಎಂದರು. ಸ್ವಚ್ಛವಾಗಿ ಹರಿಯುವ ನದಿಯನ್ನು ನೇರವಾಗಿ ಕಲುಷಿತಗೊಳಿಸುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಜಾಗೃತರಾಗಬೇಕು. ಪ್ರಕೃತಿ ಹಾಗೂ ಜಲಮೂಲಗಳ ಆರಾಧನೆಯ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ಸಾಧ್ಯ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ರಾಜ್ಯದ ಎಲ್ಲೆಡೆ ಸ್ವಚ್ಛತಾ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಅರ್ಚಕರಾದ ಕೃಷ್ಣಮೂರ್ತಿ ಭಟ್ ಕುಂಕುಮಾರ್ಚನೆ ಅಷ್ಟೋತ್ತರ ನಂತರ ಸಾಮೂಹಿಕವಾಗಿ ನದಿಗೆ ಆರತಿ ಬೆಳಗಿ ಮಾತನಾಡಿ, ಪ್ರತಿ ಹುಣ್ಣಿಮೆಯಂದು ನಿರಂತರವಾಗಿ ಕಾವೇರಿಗೆ…

Read More

ಮಡಿಕೇರಿ ಜ.15 NEWS DESK : ಚಾಮರಾಜಪೇಟೆಯಲ್ಲಿ ದುರುಳರು ಹಾಲು ಕೊಡುವ ಹಸುಗಳ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿದ್ದು, ಈ ರಾಕ್ಷಸ ಕೃತ್ಯ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಿರಿಯ ಸಹಕಾರಿ, ಕೃಷಿಕ ಹಾಗೂ ಗೋವು ಪ್ರಿಯ ಸೂದನ ಎಸ್.ಈರಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬಂಧನಕ್ಕೊಳಗಾದ ಆರೋಪಿಯ ವಿರುದ್ಧ ಮತ್ತು ಒಟ್ಟು ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಮಗುವಿಗೆ ಹಾಲುಣಿಸುವ ತಾಯಿಯ ಸ್ಥಾನದಲ್ಲಿರುವ ಗೋಮಾತೆಯ ಮೇಲೆ ನಡೆದಿರುವ ಈ ದಾಳಿ ಇಡೀ ಮಾನವ ಸಮಾಜ ತಲೆ ತಗ್ಗಿಸುವಂತ್ತಾಗಿದೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯ ಸರಕಾರ ಮುಂದಿನ ದಿನಗಳಲ್ಲಿ ಜನ ಸಾಮಾನ್ಯರಿಂದ ಭಾರೀ ಪ್ರತಿರೋಧವನ್ನು ಎದುರಿಸಬೇಕಾಗುತ್ತದೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಹಿಂದೂಗಳು ಅಮೃತ ಸಮಾನವಾದ ಹಾಲನ್ನು ನೀಡುವ ಗೋವುಗಳನ್ನು ಪೂಜಿಸುವ ಮೂಲಕ ಅವುಗಳಿಗೆ ಸಮಾಜದಲ್ಲಿ ಅತ್ಯಂತ ಪವಿತ್ರ ಸ್ಥಾನವನ್ನು ನೀಡಿದ್ದಾರೆ. ಹಸುಗಳ ಮೇಲೆ ಈ…

Read More

ಚೆಟ್ಟಳ್ಳಿ ಜ.15 NEWS DESK : ಇತಿಹಾಸ ಪ್ರಸಿದ್ಧ ಚೆಟ್ಟಳ್ಳಿ ಗ್ರಾಮದ ಈರಳೆ ಶ್ರೀ ಭಗವತಿ( ಪೊವ್ವೊದಿ) ದೇವಾಲಯದ ಬಳಿ ನೂತನವಾಗಿ ನಿರ್ಮಿಸಿದ ಅರ್ಚಕರ ವಸತಿ ಗೃಹವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಮೊದಲಿಗೆ ಈರಳೆ ಶ್ರೀ ಭಗವತಿ ದೇವಿಗೆ ಸಂಕ್ರಾಂತಿ ಹಬ್ಬದ ವಿಶೇಷ ಪೂಜೆಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪೊರಿಮಂಡ ದಿನಮಣಿ ಪೂವಯ್ಯ ಸ್ವಾಗತಿಸಿ, ದೇವಾಲಯದ ಅಭಿವೃದ್ಧಿ ಕಾರ್ಯದ ಬಗ್ಗೆ ವಿವರಿಸಿದರು. ಇದೇ ಸಂದರ್ಭ ದೇವಾಲಯ ಸಮಿತಿ ವತಿಯಿಂದ ಗ್ರಾಮದ ಅಭಿವೃದ್ಧಿಗೆ ಸಹಕರಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಲಾಯಿತು. ಶಾಸಕ ಡಾ.ಮಂತರ್ ಗೌಡ ಮಾತನಾಡಿ ದೇವಾಲಯದ ಅಭಿವೃದ್ಧಿ ಕಾರ್ಯದ ಬಗ್ಗೆ ಶ್ಲಾಘಿಸಿದರು. ಗ್ರಾಮದ ರಸ್ತೆ, ಸೇತುವೆ, ವಿದ್ಯುತ್ ಹಾಗೂ ವಿವಿಧ ಕಾಮಗಾರಿ ಕೈಗೊಳ್ಳುವ ಬಗ್ಗೆ, ಜನರ ಸಮಸ್ಯೆ ಪರಿಹಾರಕ್ಕೆ ಸದಾ ಸಿದ್ಧನಿರುವುದಾಗಿ ಭರವಸೆ ನೀಡಿದರು. ಇದೇ ಸಂದರ್ಭ ದೇವಾಲಯ‌ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಪೊರಿಮಂಡ ದಿನಮಣಿ ಪೂವಯ್ಯ ಶಾಸಕ ಡಾ.ಮಂತರ್ ಗೌಡ , ದೇವಾಲಯದ ಅಭಿವೃದ್ಧಿಗೆ ಶ್ರಮಿಸಿದ ಪೊರಿಮಂಡ ದಿನಮಣಿ ಪೂವಯ್ಯ,…

Read More

  ಕುಶಾಲನಗರ ಜ.15 NEWS DESK : ಚಿಕ್ಕತ್ತೂರು  ಹಾಗೂ ದೊಡ್ಡತ್ತೂರು ಪ್ರೆಂಡ್ಸ್ ಬಳಗದ ವತಿಯಿಂದ ಸಂಕ್ರಾಂತಿ ಹಬ್ಬದ ಅಂಗವಾಗಿ ಎರಡನೇ ವರ್ಷದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯು ಚಿಕ್ಕತ್ತೂರಿನ ಆನೆಕೆರೆ ಕ್ರೀಡಾ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಿತು. ಪಂದ್ಯಾವಳಿಯಲ್ಲಿ  ಕೂಡಿಗೆ ಸುತ್ತಮುತ್ತಲಿನ ವಿವಿಧೆಡೆಗಳಿಂದ ಆಗಮಿಸಿದ್ದ  ಹತ್ತು ಕ್ರೀಡಾ ತಂಡಗಳು ಭಾಗವಹಿಸಿದ್ದವು. ಅಂತಿಮವಾಗಿ  ಸುಂದರನಗರದ  ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ ಬಹುಮಾನ ಹಾಗೂ ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಎರಡನೇ ಸ್ಥಾನಕ್ಕೆ ಚಿಕ್ಕತ್ತೂರಿನ ಆರ್.ಸಿ.ಬಿ ತಂಡ, ಮೂರನೇ ಸ್ಥಾನಕ್ಕೆ ಎಸ್.ವಿ.ಕೆ ತಂಡ, ನಾಲ್ಕನೇ ಬಹುಮಾನವನ್ನು  ವೀರಭದ್ರ ಕ್ರಿಕೆಟರ್ಸ್ ತಂಡ ಗಳಿಸಿತು. ಮೂರು  ದಿನಗಳ ಕಾಲ ನಡೆದ ಕ್ರೀಡಾಕೂಟವನ್ನು  ಚಿಕ್ಕತ್ತೂರು ಹಾಗೂ ದೊಡ್ಡತ್ತೂರು ಅವಳಿ  ಗ್ರಾಮಗಳ ಸಮಾನ ಮನಸ್ಕರಾದ  ಸಂತೋಷ್ ಗೌಡ, ಸುನಿಲ್ ಗೌಡ, ಕೃಷ್ಣೇಗೌಡ, ಪ್ರವೀಣ್, ಚೇತನ್ ಕುಮಾರ್, ಪುಟ್ಟೇಗೌಡ  ಆಯೋಜಿಸಿದ್ದರು. ಪಂದ್ಯಾವಳಿಯ ತೀರ್ಪುಗಾರರಾಗಿ  ಗುಮ್ಮನಕೊಲ್ಲಿ ಗ್ರಾಮದ ಮಣಿ,  ವಸಂತ ಹಾಗೂ ಖಾದರ್ ಕಾರ್ಯನಿರ್ವಹಿಸಿದರು. ಪಂದ್ಯ ವಿಜೇತರಿಗೆ ನಗದು ಬಹುಮಾನ…

Read More