ಮಡಿಕೇರಿ NEWS DESK ಜ.27 : ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಕಾಂಗ್ರೆಸ್ ಕಾರ್ಯಕರ್ತನನ್ನು ಅಮಾನತುಗೊಳಿಸಿದೆ.
ಲೇಖಕ: admin
ಮಡಿಕೇರಿ NEWS DESK ಜ.27 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಅವರ ಮೇಲೆ ಸೋಮವಾರ ಸಂಜೆ ಹಲ್ಲೆ ನಡೆದಿದೆ. ಮೂರ್ನಾಡಿನಲ್ಲಿರುವ ಅರ್ಚಕರ ಮನೆಗೆ ಸಂಜೆಯ ವೇಳೆ ಬಂದ ಇಬ್ಬರು ವ್ಯಕ್ತಿಗಳು ವಿಘ್ನೇಶ್ ಭಟ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಅರ್ಚಕರನ್ನು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅರ್ಚಕ ವಿಘ್ನೇಶ್ ಭಟ್ ಇಬ್ಬರು ವ್ಯಕ್ತಿಗಳು ನನ್ನ ಮನೆಯ ಬಳಿ ಬಂದು ಹಲ್ಲೆ ಮಾಡಿದ್ದಾರೆ. ತಡೆಯಲು ಬಂದ ನನ್ನ ತಾಯಿಗೂ ನೋವಾಗಿದೆ ಎಂದು ಆರೋಪಿಸಿದರು. ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿರುವ ವಿಘ್ನೇಶ್ ಭಟ್ ರನ್ನು ಭೇಟಿ ಮಾಡಿ, ಸಾಂತ್ವನ ಹೇಳಿದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ NEWS DESK ಜ.27 : ದೇವಟ್ ಪರಂಬುವಿನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಅಂತರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ದಿನವನ್ನು ಆಚರಿಸಲಾಯಿತು. ಕೊಡವರ ಹತ್ಯಾಕಾಂಡದ ಸ್ಮಾರಕ ಸ್ಥಳದಲ್ಲಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಹಿರಿಯರಿಗೆ ಪುಷ್ಪ ನಮನ ಸಲ್ಲಿಸಿದ ಸ್ವಯಂ ಸೇವಕರು, ಕೊಡವರ ಹಕ್ಕುಗಳ ಸಂರಕ್ಷಣೆಗಾಗಿ ನಡೆಸುತ್ತಿರುವ ಹೋರಾಟದ ಗುರಿ ಸಾಧನೆಗೆ ಶಕ್ತಿ ನೀಡುವಂತೆ ಕೋರಿದರು. ಆದಿಮಸಂಜಾತ ಕೊಡವರಿಗೆ ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ನೀಡಬೇಕು, ಸಾಂವಿಧಾನಿಕ ಶೆಡ್ಯೂಲ್ ಪಟ್ಟಿಯಲ್ಲಿ ಸ್ಥಾನಮಾನ ಕಲ್ಪಿಸಬೇಕು, ಪ್ರತ್ಯೇಕ ಜನಾಂಗವಾಗಿ ಕೊಡವರ ಹಕ್ಕುಗಳನ್ನು ರಕ್ಷಿಸಬೇಕು, ಅಂತರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಆದಿಮಸಂಜಾತ ಕೊಡವ ಬುಡಕಟ್ಟಿಗೆ ವಿಶ್ವರಾಷ್ಟ್ರ ಸಂಸ್ಥೆಯ ಮಾನ್ಯತೆ ದೊರಕಬೇಕು. ಕೊಡವ ಲ್ಯಾಂಡ್‌ನ ಆದಿವಾಸಿ ಮೂಲನಿವಾಸಿ ಕೊಡವ ಜನಾಂಗವನ್ನು ಸಂವಿಧಾನದ ಶೆಡ್ಯೂಲ್ ಪಟ್ಟಿಯಲ್ಲಿ ಸೇರಿಸಬೇಕು. ಕರ್ನಾಟಕದ ಗೌರವಾನ್ವಿತ ಶ್ರೇಷ್ಠ ನ್ಯಾಯಾಲಯದ ಆದೇಶದಂತೆ, ಕೊಡವ ಜನಾಂಗದ ನ್ಯಾಯಯುತ, ಸೂಕ್ಷ್ಮ, ಸಮಗ್ರ ಜನಾಂಗೀಯ ಅಧ್ಯಯನವನ್ನು ಆರಂಭಿಸಬೇಕು, ಕೊಡವ ಸಾಂಪ್ರದಾಯಿಕ ಜನಾಂಗೀಯ “ಸಂಸ್ಕಾರ ಗನ್” ಹಕ್ಕುಗಳನ್ನು ಸಿಖ್ಖರ…
ಮಡಿಕೇರಿ ಜ.27 NEWS DESK : ವಿಶ್ವ ಹಿಂದೂ ಪರಿಷತ್ತಿನ ಕೇಂದ್ರೀಯ ಉಪಾಧ್ಯಕ್ಷರು ಹಾಗೂ ಕರ್ನಾಟಕ ದಕ್ಷಿಣ ಪ್ರಾಂತ ಅಧ್ಯಕ್ಷರಾದ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಗೌರವ ಪದ್ಮಶ್ರೀ ಪುರಸ್ಕಾರ ದೊರೆತ್ತಿರುವುದು ಹೆಮ್ಮೆಯ ವಿಚಾರವೆಂದು ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಸಂಘಟನೆಗಳು ಹರ್ಷ ವ್ಯಕ್ತಪಡಿಸಿವೆ. ಪತ್ರಿಕಾ ಪ್ರಕಟಣೆ ಮೂಲಕ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಅಭಿನಂದನೆ ಸಲ್ಲಿಸಿರುವ ಸಂಘಟನೆಗಳು ದೇಶದ ಪ್ರತಿಷ್ಠಿತ ಪದ್ಮಶ್ರೀ ಪುರಸ್ಕಾರ ಸಾಧನೆಗೆ ಸಂದ ಗೌರವ ಎಂದು ಬಣ್ಣಿಸಿವೆ. ಕಲಬುರಗಿ ಮೂಲದ ಖ್ಯಾತ ಕ್ಯಾನ್ಸರ್ ತಜ್ಞೆ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರು ಮೂಲತಃ ಕಲಬುರಗಿಯವರಾಗಿದ್ದು, ಬೆಂಗಳೂರಿನ ಕಿದ್ವಾಯಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಬಡತನದಲ್ಲಿ ಬೆಳೆದ ಅವರು ವೈದ್ಯ ಲೋಕದ ಮಹಾನ್ ಸಾಧಕರ ಅಗ್ರಗಣ್ಯರ ಸಾಲಿನಲ್ಲಿದ್ದಾರೆ. 1980ರಲ್ಲಿ ಹುಬ್ಬಳ್ಳಿಯ ಕಿಮ್ಸ್‍ನಲ್ಲಿ ವೈದ್ಯಕೀಯ ಪದವಿ ಪಡೆದ ಅವರು, 1985ರಲ್ಲಿ ಬಳ್ಳಾರಿಯ ವೈದ್ಯಕೀಯ ಕಾಲೇಜಿನಲ್ಲಿ ಶಸಚಿಕಿತ್ಸೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1985ರಲ್ಲಿ ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆಗೆ ಸೇರ್ಪಡೆಯಾದರು. ಮೂರು ದಶಕಗಳಿಗೂ…
ಮಡಿಕೇರಿ ಜ.27 NEWS DESK : ಅಂಗವಿಕಲತೆಯಿಂದ ಸಮಾಜದ ಮುಖ್ಯ ವಾಹಿನಿಯಿಂದ ದೂರ ಸರಿದವರಿಗೆ ‘ಕೃತಕ ಅಂಗಾಂಗ’ಗಳನ್ನು ಉಚಿತವಾಗಿ ನೀಡಿ, ನೊಂದವರಲ್ಲಿ ಜೀವನೋತ್ಸಾಹವನ್ನು ತುಂಬುವ ಮಹತ್ವದ ಶಿಬಿರ ನಗರದಲ್ಲಿ ನಡೆಯಿತು. ಕೊಡಗು ಜಿಲ್ಲೆಯ ನ್ಯಾಷನಲ್ ಮೆಡಿಕೋಸ್ ಸಂಸ್ಥೆ, ಸಂಸ್ಕೃತಿ ಸಿರಿ ಬಳಗ ಮತ್ತು ಟ್ರಸ್ಟ್, ಸ್ವಸ್ಥ ಕೂರ್ಗ್ ಫೌಂಡೇಶನ್ ಸಹಯೋಗದಲ್ಲಿ ನಗರದ ಮೈತ್ರಿ ಸಭಾಂಗಣದಲ್ಲಿ ಆಯೋಜಿತ ‘ಕೃತಕ ಅಂಗಾಂಗಗಳ ಉಚಿತ ಜೋಡಣೆ, ವಿತರಣೆ ಮತ್ತು ಆರೋಗ್ಯ ತಪಾಸಣೆ’ ಶಿಬಿರದಲ್ಲಿ 58 ಮಂದಿ ಕೃತಕ ಅಂಗಾಂಗಗಳಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದು, ಇವರಿಗೆ ನೆರವನ್ನು ಒದಗಿಸುವ ಕಾರ್ಯ ನಡೆಯಿತು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು ಅವರು ಬೃಹತ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಅಂಗವೈಕಲ್ಯತೆಯಿಂದ ಬಳಲುತ್ತಿರುವವರಿಗೆ, ಕೃತಕ ಅಂಗಾಂಗಳನ್ನು ಒದಗಿಸಿ ಅವರಲ್ಲಿ ಆತ್ಮವಿಶ್ವಾಸ ತುಂಬುವ ಈ ಶಿಬಿರ ಶ್ಲಾಘನೀಯ. ರಾಜ್ಯ ಸರ್ಕಾರವು ಆರೋಗ್ಯ ಇಲಾಖೆಯ ಮೂಲಕ ಬಡ ಮಂದಿಗೆ ಅಗತ್ಯವಾದ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಒತ್ತನ್ನು ನೀಡಿರುವುದಾಗಿ ತಿಳಿಸಿದರು. ಮಡಿಕೇರಿ…
ಮಡಿಕೇರಿ ಜ.27 NEWS DESK : ಸಾರ್ವಜನಿಕ ಶಾಂತಿ ಸುವ್ಯವಸ್ಥೆಗಳ ಕಾರ್ಯದಲ್ಲಿ ಸದಾ ನಿರತರಾಗಿರುವ ಪೊಲೀಸ್ ಸಿಬ್ಬಂದಿಗಳಲ್ಲಿ ಸುಪ್ತವಾಗಿ ಅಡಗಿರುವ ಕಲಾ ಪ್ರತಿಭೆಯನ್ನು ಹೊರ ತರುವ ನಿಟ್ಟಿನಲ್ಲಿ ರಾಜ್ಯದಲ್ಲೆ ಪ್ರಥಮ ಪ್ರಯೋಗವೆಂಬಂತೆ ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ವಿನೂತನವಾಗಿ ಆರಂಭಿಸಿರುವ ‘ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ’ಯನ್ನು ವರ್ಣರಂಜಿತ ಸಮಾರಂಭದಲ್ಲಿ ಉದ್ಘಾಟಿಸಲಾಯಿತು. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಭಾನುವಾರ ರಾತ್ರಿ ಆಯೋಜಿತ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಪೊಲೀಸ್ ಸಾಂಸ್ಕೃತಿಕ ವೇದಿಕೆಯ ಮಹಾ ಪೋಷಕರಾದ ಕೆ.ರಾಮರಾಜನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪೊಲೀಸ್ ಇಲಾಖೆಯಲ್ಲಿ ಇರುವ ಪ್ರತಿಯೊಬ್ಬರು ಸದಾ ಒತ್ತಡದ ನಡುವೆ ಕಾರ್ಯನಿರ್ವಹಣೆ ಮಾಡುವುದು ಅನಿವಾರ್ಯ. ಪ್ರತಿಯೊಬ್ಬರ ಒತ್ತಡಗಳನ್ನು ಕಳೆದು, ಅವರಲ್ಲಿ ಸುಪ್ತವಾಗಿರುವ ಕಲಾ ಪ್ರತಿಭೆಯನ್ನು ಹೊರ ತರುವ ನಿಟ್ಟಿನಲ್ಲಿ ಪೊಲೀಸ್ ಸಾಂಸ್ಕೃತಿಕ ವೇದಿಕೆಯನ್ನು ಆರಂಭಿಸಲಾಗಿದ್ದು, ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವಂತಾಗಬೇಕು ಎಂದರು. ಪ್ರತಿಯೊಬ್ಬರಲ್ಲೂ ವಿಶಿಷ್ಟವಾದ ಕಲಾ ಪ್ರತಿಭೆ ಅಡಗಿರುತ್ತದೆ ಮತ್ತು ಎಲ್ಲರಿಗೂ ಅವರದೇ ಆದ ವೈಯಕ್ತಿಕ ಬದುಕು ಎಂಬುದಿರುತ್ತದೆ. ಇದನ್ನು…
ಮಡಿಕೇರಿ ನ.27 NEWS DESK : ಗರಗಂದೂರು ಗ್ರಾಮದ ಕೆ.ಎಸ್.ದರ್ಶನ್ ಅವರಿಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಲಭಿಸಿದೆ. ಸಾಮಾಜಿಕ ಕಾಳಜಿ ಹಾಗೂ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲಾ ಘಟಕ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ಜಿಲ್ಲೆಯ ಮೂಡಲಗಿ ಇಟ್ಟಪ್ಪ ದೇವರ ರಂಗವೇದಿಕೆಯಲ್ಲಿ ನಡೆದ ರಾಜ್ಯಮಟ್ಟದ ಜಾನಪದ ಯುವ ಕಲಾ ಸಮ್ಮೇಳನ ಹಾಗೂ 2024-25 ಸಾಲಿನ ಪ್ರತಿಷ್ಠಿತ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕೆ.ಎಸ್.ದರ್ಶನ್ ಅವರಿಗೆ ಒಕ್ಕೂಟದ ಪ್ರಮುಖರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಮಡಿಕೇರಿ ಜ.27 NEWS DESK : ವಿರಾಜಪೇಟೆಯ ಕೊಡವ ಸಮಾಜದ ಆಶ್ರಯದಲ್ಲಿ ಅಮ್ಮತ್ತಿ ನೇತಾಜಿ ವಿದ್ಯಾಸಂಸ್ಥೆಯಲ್ಲಿ ನಡೆದ ಹೀರೋ ಕಪ್ ಕಾಲ್ಚೆಂಡು ಪಂದ್ಯಾವಳಿಯಲ್ಲಿ ತ್ರಿವೇಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್ ಆಗಿ ಹೊರಹೊಮ್ಮಿದರು. ಮೊದಲ ಪಂದ್ಯದಲ್ಲಿ ಸರ್ಕಾರಿ ಶಾಲೆ ಅಮ್ಮತ್ತಿಯೊಂದಿಗೆ 1-0 ಅಂತರದಲ್ಲಿ, ಎರಡನೇ ಪಂದ್ಯದಲ್ಲಿ ಪೊನ್ನಂಪೇಟೆಯ ಸಂತ ಆಂತೋಣಿ ಸಂಸ್ಥೆಯೊಂದಿಗೆ 4-2 ಅಂತರದಲ್ಲಿ ಜಯಗಳಿಸಿ ಸೆಮಿಫೈನಲ್ ಪ್ರವೇಶಿಸಿತು. ಸೆಮಿಫೈನಲ್ ಪಂದ್ಯದಲ್ಲಿ ಗೋಣಿಕೊಪ್ಪ ಸಂತ ಥೋಮಸ್ ತಂಡದೊಂದಿಗೆ 4-3 ಅಂತರದಲ್ಲಿ ಜಯಗಳಿಸಿ, ಅಂತಿಮ ಪಂದ್ಯದಲ್ಲಿ ಮಡಿಕೇರಿಯ ಭಾರತೀಯ ವಿದ್ಯಾಭ ತಂಡದೊಂದಿಗೆ 5-4 ಗೋಲುಗಳ ಅಂತರದಲ್ಲಿ ಜಯಗಳಿಸಿತು. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ತರಬೇತುದಾರರಾದ ಮುಕ್ಕಾಟಿರ ಅರುಣ್, ಮುಖ್ಯಶಿಕ್ಷಕರು, ಶಿಕ್ಷಕ ವೃಂದ ಸಂತಸ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದೆ.
ವಿರಾಜಪೇಟೆ ಜ.27 NEWS DESK : ವಿಶ್ವದಾದ್ಯಂತ ಅನೇಕ ದೇಶಗಳಿದ್ದರು ಇಂದು ಭಾರತ ದೇಶದ ಸಂವಿಧಾನವು ಉತ್ಕೃಷ್ಟವಾದ ಸಂವಿಧಾನ, ಪ್ರಜಾಪ್ರಭುತ್ವ ಹೊಂದಿರುವ ಗಣತಂತ್ರ ದೇಶವಾಗಿದೆ ಎಂದು ವಕೀಲರಾದ ಪುಷ್ಪರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಜೈ ಭಾರತ್ ಆಟೋ ಚಾಲಕರು ಮತ್ತು ಮಾಲೀಕರ ಸಂಘ ವತಿಯಿಂದ ಸಂಘದ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ಆಚರಿಸಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಂಘದ ಕಾನೂನು ಸಲಹೆಗಾರರಾದ ವಕೀಲ ಪುಷ್ಪರಾಜ್, 1950ರಲ್ಲಿ ಸಂವಿಧಾನ ರಚನೆಗೊಂಡು ಅಂಗೀಕಾರವಾದ ದಿನವನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸುಲಾಗುತ್ತಿದೆ. ಸಮಾನತೆ, ಪ್ರಜಾಪ್ರಭುತ್ವ, ಸರ್ವರಿಗೂ ಸಮಪಾಲು ಸಮಬಾಳು ಎಂಬ ತಳಹದಿಯೊಂದಿಗೆ ರಚನೆಗೊಂಡ ಸಂವಿಧಾನವನ್ನು ಎಲ್ಲಾ ವರ್ಗದವರು ಗೌರವಿಸುವಂತಾಗಬೇಕು. ಸಂವಿಧಾನದ ಮೌಲ್ಯಗಳಾದ, ಸಮಾನತೆ, ಪ್ರಜಾಪ್ರಭುತ್ವ, ಏಕತೆ ಮತ್ತು ಜಾತ್ಯಾತೀತವಾದಗಳನ್ನು ಒಳಗೊಂಡಂತೆ ರಚನೆಗೊಂಡ ಸಂವಿಧಾನವು ಇಂದು ವಿಶ್ವದಲ್ಲೇ ಅತ್ಯಂತ ಜನಪ್ರಿಯ ಹೊಂದಿರುವ ಗಣತಂತ್ರ ರಾಷ್ಟ್ರವಾಗಿ ಹೊರಹೊಮ್ಮಿದೆ. ಜನನಾಯಕವಾದ ರಾಷ್ಟ್ರದಲ್ಲಿ ನಮಗೆ ಜಾತಿ ಧರ್ಮ ಆಧರಿತವಾಗಿ ಯಾವುದೇ ರೀತಿಯ ಸಂವಿಧಾನ ರಚನೆಗೊಂಡಿಲ್ಲಾ ಬದಲಿಗೆ ಸರ್ವರು ಸಮಾನರು ಎಂಬ…
ಮಡಿಕೇರಿ ಜ.27 NEWS DESK : ಸೋಮವಾರಪೇಟೆ ತಾಲ್ಲೂಕು ಅಗ್ನಿಶಾಮಕ ಠಾಣೆಯ ನೂತನ ಕಟ್ಟಡವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಸೋಮವಾರಪೇಟೆ ಪ.ಪಂ ಅಧ್ಯಕ್ಷರಾದ ಜಯಂತಿ ಶಿವಕುಮಾರ್, ಚೌಡ್ಲು ಗ್ರಾಮ ಗ್ರಾ.ಪಂ ಅಧ್ಯಕ್ಷರಾದ ಸಿ.ಎಸ್.ಗೀತಾ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಇತರರು ಪಾಲ್ಗೊಂಡಿದ್ದರು.






