ಲೇಖಕ: admin

ಮಡಿಕೇರಿ ಜ.14 NEWS DESK : ಇತಿಹಾಸ ಪ್ರಸಿದ್ಧ ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ದೇವರ 66ನೇ ವಾರ್ಷಿಕ ಜಾತ್ರೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತ್ತಿದ್ದು, ಜ.16 ರಂದು ಮಹಾರಥೋತ್ಸವ ಜರುಗಲಿದೆ. ಬೆಳ್ಳಿ ಬಂಗಾರ ದಿನ ಆಚರಣೆಯೊಂದಿಗೆ ಜಾತ್ರೆಗೆ ಚಾಲನೆ ನೀಡಲಾಗಿದೆ. ದೇವಾಲಯ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮದ ಹಿರಿಯರು ಪ್ರಾರ್ಥನಾ ಪೂಜೆ ಮಾಡುವ ಮೂಲಕ ದೇವರ ಕೈಂಕರ್ಯಗಳಿಗೆ ಚಾಲನೆ ನೀಡಿದರು. ಮಕರ ಸಂಕ್ರಮಣ ಕರುವಿನ ಹಬ್ಬದ ಅಂಗವಾಗಿ ದೇಗುಲದ ಗರುಡ ಕಂಬದ ಅಗ್ರಪೀಠದಲ್ಲಿ ತುಪ್ಪದ ನಂದಾದೀಪವನ್ನು ಬೆಳಗಿಸಲಾಗುತ್ತದೆ. ಇದರೊಂದಿಗೆ ಅಂಕುರಾರ್ಪಣ ಪೂಜೆ, ಮಹಾಮಂಗಳಾರತಿ, ಪ್ರಾರ್ಥನೆ, ಪ್ರಸಾದ ಸ್ವೀಕಾರ ನೆರವೇರಲಿದೆ. ಜ.15 ರಂದು ಅರಸು ಬಲ ಸೇವೆ, ಸಂಜೆ 7.30 ರಿಂದ ಗಣಹೋಮ, ರಂಗಪೂಜೆ, ಬೀದಿ ಉತ್ಸವ, ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗಲಿದೆ. ಶ್ರೀ ಕುಮಾರಲಿಂಗೇಶ್ವರ ಯುವಕ ಸಂಘದ ವತಿಯಿಂದ ಜ.15 ಹಾಗೂ 16 ರಂದು ಪುರುಷರ ಹಾಗೂ ಮಹಿಳೆಯರ ಅಂತರ್ ಜಿಲ್ಲಾ ಮಟ್ಟದ ಥ್ರೋಬಾಲ್, ಕಬ್ಬಡ್ಡಿ, ಹಗ್ಗಜಗ್ಗಾಟ ಮತ್ತು ವಾಲಿಬಾಲ್ ಪಂದ್ಯಾವಳಿ ನಡೆಯಲಿದೆ.…

Read More

ನಾಪೋಕ್ಲು  ಜ.14 NEWS DESK : ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಆಟೋಗಳಿಗೆ ನೂತನ ಎನ್.ಪಿ.ಕೆ ನಂಬರ್ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಹೇಳಿದರು. ಪೊಲೀಸ್ ಮೈದಾನದಲ್ಲಿ ನಡೆದ ಎನ್.ಪಿ.ಕೆ ವಿತರಣಾ ಕಾರ್ಯಕ್ರಮದಲ್ಲಿ ಆಟೋಗೆ ನೂತನ ಎಂ ಪಿ ಕೆ ಸ್ಟಿಕ್ಕರ್ ಅನ್ನು ಅಳವಡಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು ಅವರು, ಆಟೋ ಗಳಿಗೆ ಈ ಹಿಂದೆ ಎನ್.ಪಿ.ಕೆ ನಂಬರ್ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದ್ದು, ಅದು ದುರುಪಯೋಗ ವಾಗುತ್ತಿರುವುದನ್ನು ಮನಗಂಡು ನೂತನವಾಗಿ ಎನ್.ಪಿ.ಕೆ ನಂಬರ್ ಅಳವಡಿಸಲಾಗುತ್ತಿದೆ ಎಂದರು. ಇದರಲ್ಲಿ ಕೊಡಗು ಜಿಲ್ಲಾ ಪೊಲೀಸ್ ಎಂದು ನಮೂದಿಸಲಾಗಿದ್ದು, ಸಮಸ್ಯೆಗಳಾದಲ್ಲಿ ಪತ್ತೆಗೆ ನೆರವಾಗಲಿದೆ ಎಂದು ಹೇಳಿದರು. ನಾಪೋಕ್ಲು ಪಟ್ಟಣದಲ್ಲಿ ರಸ್ತೆ ಕಿರಿದಾಗಿದ್ದು, ಆಟೋ ನಿಲ್ದಾಣಕ್ಕೆ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಶೀಘ್ರದಲ್ಲಿ ಸ್ಥಳಾವಕಾಶ ಕಲ್ಪಿಸಲಾಗುವುದು. ಪ್ರತಿದಿನ ಆಗುತ್ತಿರುವ ವಾಹನದಟ್ಟಣೆ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುಗುತ್ತಿದೆ ಎಂದರು. ಅಂಗಡಿ ಮಾಲೀಕರು ತಮ್ಮ ಅಂಗಡಿಗಳ ಎದುರು ವಾಹನಗಳನ್ನು ನಿಲುಗಡೆ ಮಾಡುತ್ತಿದ್ದು ಸಮಸ್ಯೆ…

Read More

ನಾಪೋಕ್ಲು ಜ.14 NEWS DESK : ಆಕಸ್ಮಿಕವಾಗಿ ಬೆಂಕಿ ತಗುಲಿ ಭತ್ತ ಹಾಗೂ ಹುಲ್ಲು ಉರಿದು ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ನಾಪೋಕ್ಲು ಸಮೀಪದ ಕೈಕಾಡು ಗ್ರಾಮದಲ್ಲಿ ನಡೆದಿದೆ. ಯಂತ್ರದ ಸಹಾಯದಿಂದ ಗ್ರಾಮದ ಮಾಜಿ ಸೈನಿಕ ಕುಲ್ಲಚೆಟ್ಟಿ ನಾಣಯ್ಯ (ತಮ್ಮಣಿ) ಎಂಬವರ ಮನೆಯಂಗಳದಲ್ಲಿ ಕಾರ್ಮಿಕರು ಭತ್ತ ಒಕ್ಕಲು ಮಾಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಬೆಂಕಿ ತಗಲಿದ್ದು ಅಪಾರ ಪ್ರಮಾಣದ ಭತ್ತ ಮತ್ತು ಹುಲ್ಲು ನಷ್ಟ ಸಂಭವಿಸಿದೆ. ಜೊತೆಗೆ ಶೆಡ್‍ನಲ್ಲಿದ್ದ ಕಾರು ಸಹ ಬೆಂಕಿಯಿಂದ ಹಾನಿಗೊಳಗಾಗಿದೆ. ತಕ್ಷಣ ಮಾಹಿತಿ ತಿಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಂದಿಸಿ ಇನ್ನೂ ಹೆಚ್ಚಿನ ಸಂಭವಿಸಬಹುದಾದ ಅಪಾಯವನ್ನು ತಪ್ಪಿಸಿದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ ಜ.14 NEWS DESK : ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ರಾಜ್ಯದ 12ಗ್ರಾ.ಪಂ ಅಧ್ಯಕ್ಷರಿಗೆ ಭಾಗವಹಿಸಲು ಅವಕಾಶ ನೀಡಿ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಆದೇಶ ಹೊರಡಿಸಿದ್ದು, ಕೊಡಗು ಜಿಲ್ಲೆಯಿಂದ ಏಕೈಕ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಭಾಗವಹಿಸಲು ಅವಕಾಶ ದೊರೆತಿದೆ. ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಹೆಚ್.ಎ ಹಂಸ ಕೊಟ್ಟಮುಡಿ ಅವರನ್ನು ಭಾರತ, ಸರ್ಕಾರದ ಪಂಚಾಯತ್ ರಾಜ್ಯ ಸಚಿವಾಲಯದ ನಿರ್ದೇಶನದ ಮೇರೆಗೆ ಕರ್ನಾಟಕ ರಾಜ್ಯ ಸರ್ಕಾರ ಹಂಸ ಕೊಟ್ಟಮುಡಿ ಅವರನ್ನು ದೆಹಲಿಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಯ್ಕೆ ಮಾಡಿದ್ದು, ಹಂಸ ಅವರ ಪತ್ನಿ ಹೆಚ್.ಹೆಚ್ ಸಹೀರ ಅವರಿಗೆ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಇನ್ನುಳಿದಂತೆ ಕರ್ನಾಟಕದ ಹಾವೇರಿ,ಮೈಸೂರು, ಹಾಸನ,ಮಂಡ್ಯ,ಚಿತ್ರದುರ್ಗ, ಕೊಪ್ಪಳ,ಗದಗ,ಬೀದರ್, ಹಾಗೂ ಉಡುಪಿ ಜಿಲ್ಲೆಯಿಂದ ಇಬ್ಬರು ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.

Read More

ಕುಶಾಲನಗರ, ಜ.14 NEWS DESK : ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ “ಸಚೇತನ” ಕಾರ್ಯಕ್ರಮದಡಿ ಶಾಲೆಯಲ್ಲಿ  ಸಂಕ್ರಾಂತಿ ಸಂಭ್ರಮಾಚರಣೆ ಮೂಲಕ “ಸುಗ್ಗಿ” ಹಬ್ಬದ ಆಚರಣೆ ಮತ್ತು ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಶಿಕ್ಷಕರು ಮಕ್ಕಳಿಗೆ ಸಂಕ್ರಾಂತಿ  ಹಬ್ಬದ ಮಹತ್ವ ತಿಳಿದುಕೊಟ್ಟರು. ಮಕ್ಕಳು “ಸಂಕ್ರಾಂತಿ” ಹಬ್ಬವನ್ನು ಸಂಭ್ರಮ ಮತ್ತು ಸಡಗರದಿಂದ ಆಚರಿಸಿ ಪರಸ್ಪರ ಎಳ್ಳು ಬೆಲ್ಲವನ್ನು ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು. ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕವಾಗಿ ಸುಗ್ಗಿ ಹಬ್ಬದ ಸಲಕರಣೆಗಳನ್ನು ಇಟ್ಟು ಅಭಿನಯ ಗೀತೆಯೊಂದಿಗೆ ಸಂಭ್ರಮಿಸಿದರು. ನಂತರ ಎಲ್ಲರೂ ಸೇರಿ ಶಾಲಾ ಅವರಣದ ಹೊರಾಂಗಣದಲ್ಲಿ ಸಹ ಪಂಕ್ತಿ ಭೋಜನ ಮಾಡಿದರು. ಶಾಲಾ ಮುಖ್ಯ ಶಿಕ್ಷಕ ಹೆಚ್ ಎಂ ವೆಂಕಟೇಶ್ ರವರ ಉಸ್ತುವಾರಿಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಸಿ.ಎಸ್. ಜಾನಕಿ, ಸಿ.ಎಂ. ಬಬಿತ. ಪುಷ್ಪಾವತಿ, ಕೆ.ಎಸ್.ರಮ್ಯ, ಶಿಕ್ಷಕರಾದ ಎಸ್.ಕೆ.ಶಿವಾನಂದ, ಪ್ರಶಿಕ್ಷಣಾರ್ಥಿ ಕೀರ್ತನ, ಆಂಗ್ಲ ಭಾಷೆ ಶಿಕ್ಷಕಿ ರಂಜನ ಅಡುಗೆ ಸಿಬ್ಬಂದಿಗಳಾದ ವಿನುತಾ, ಮಂಜುಳಾ, ಸೇರಿದಂತೆ ಶಾಲಾ ಮಕ್ಕಳು…

Read More

ಸೋಮವಾರಪೇಟೆ ಜ.14 NEWS DESK : ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ವತಿಯಿಂದ ಪಟ್ಟಣದ ವಿವೇಕಾನಂದ ವೃತ್ತದಲ್ಲಿ ವಿವೇಕಾನಂದರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ವಿವೇಕಾನಂದ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ ಜೀವನಾದರ್ಶಗಳು ಎಲ್ಲರಿಗೂ ಬದುಕಿನ ಮಾರ್ಗವಾಗಬೇಕು. ಸ್ವಾತಂತ್ರ್ಯ ಪೂರ್ವದಲ್ಲಿಯೇ ಯುವಕರಿಗೆ ಸ್ಫೂರ್ತಿ ತುಂಬಿದ ವಿವೇಕಾನಂದರು, ಭಾರತದ ಸಂಸ್ಕøತಿ, ಆಚಾರ-ವಿಚಾರವನ್ನು ಹೊರ ದೇಶದಲ್ಲೂ ಪಸರಿಸಿದ ಮಹಾನ್ ಸಂತ ಎಂದು ಬಣ್ಣಿಸಿದರು. ತಾನು ಸಚಿವನಾಗಿದ್ದ ಸಂದರ್ಭ ವಿವೇಕಾನಂದರ 150ನೇ ಜಯಂತಿಯಂದು ರಾಜ್ಯಾದ್ಯಂತ ಪ್ರತಿ ತಾಲ್ಲೂಕು ಮಟ್ಟದಲ್ಲಿ ಯುವ ದಿನವನ್ನಾಗಿ ಆಚರಣೆ ಮಾಡಲು ನಿರ್ದೇಶನ ನೀಡಲಾಗಿತ್ತು. ಆ ಮೂಲಕ ವಿವೇಕಾನಂದರ ಬಗ್ಗೆ ಎಲ್ಲರಿಗೂ ಪ್ರೇರಣೆ ನೀಡುವ ಕೆಲಸ ಮಾಡಲಾಗಿತ್ತು ಎಂದು ಸ್ಮರಿಸಿದ ಅವರು, ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳು ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಂಡು, ಭಾರತದ ಆಚಾರ, ವಿಚಾರ ಸಂಸ್ಕøತಿಯನ್ನು ಉಳಿಸುವ ಕೆಲಸ ಮಾಡಬೇಕು. ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ…

Read More

ಸೋಮವಾರಪೇಟೆ ಜ.14 NEWS DESK : ಕಾಫಿ ಗುಣಮಟ್ಟದ ಆಧಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾಫಿಯ ಬೇಡಿಕೆ ಮತ್ತು ಬೆಲೆ ನಿರ್ಧಾರವಾಗುತ್ತದೆ ಎಂದು ಭಾರತ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜೆ.ದಿನೇಶ್ ಅಭಿಪ್ರಾಯಿಸಿದರು. ಕಾಫಿ ಮಂಡಳಿ ಮತ್ತು ಹೆಚ್‍ಐಎಲ್ ಇಂಡಿಯಾ ಸಹಯೋಗದಲ್ಲಿ ಸೋಮವಾರಪೇಟೆಯ ಸಾಕ್ಷಿ ಕನ್ವೆನ್‍ಷನ್ ಸಭಾಂಗಣದಲ್ಲಿ ನಡೆದ ಸಮಗ್ರ ಕೀಟ ನಿರ್ವಹಣೆ ಕುರಿತು ಬೆಳೆಗಾರರಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾಫಿಯ ಗುಣಮಟ್ಟವನ್ನು ಬೆಳೆಗಾರರು ನಿರಂತರವಾಗಿ ಕಾಪಾಡಿಕೊಂಡು ಬಂದರೆ ಉತ್ತಮ ಬೆಲೆ ಮತ್ತು ಬೇಡಿಕೆ ಇದ್ದೇ ಇರುತ್ತದೆ. ಭಾರತದ ಕಾಫಿ ಇಂದಿಗೂ ಬೇಡಿಕೆ ಇದೆ. ಇದೀಗ ರೋಬಸ್ಟಾ ಕಾಫಿಗೆ ಬೆಲೆ ಹೆಚ್ಚಿದ ಹಿನ್ನೆಲೆಯಲ್ಲಿ ಬೆಳೆಗಾರರು ಬೆಳೆಯ ಉತ್ಪನ್ನ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳುವುದು ಅತ್ಯಗತ್ಯ ಎಂದರು.ಆಧುನಿಕ ತಂತ್ರಜ್ಞಾನದ ವೇಗದಿಂದಾಗಿ ಬೆಳೆ ನಿರ್ವಹಣೆಯೂ ಕೂಡ ಸುಲಭ.ಅಗತ್ಯ ಸಂದರ್ಭಗಳಲ್ಲಿ ರೈತರು ಕಾಫಿ ಮಂಡಳಿ ಮತ್ತು ವಿಜ್ಞಾನಿಗಳಿಂದ ಸೂಕ್ತ ಮಾರ್ಗದರ್ಶನ ಪಡೆಯುವುದು ಕೂಡ ಅಗತ್ಯ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕೇಂದ್ರ ಸರಕಾರದ ರಾಸಾಯನಿಕಗಳು ಮತ್ತು…

Read More

ಮಡಿಕೇರಿ ಜ.14 NEWS DESK : ಕೃಷಿಕ್ ಸರ್ವೋದಯ ಫೌಂಡೇಶನ್ ವತಿಯಿಂದ 2025 ನೇ ಸಾಲಿನ ಯುಪಿಎಸ್‍ಸಿ ಪ್ರಿಲಿಮ್ಸ್ ಬರೆಯುತ್ತಿರುವ ಸ್ಪರ್ಧಾರ್ಥಿಗಳಿಗೆ ಉಚಿತ ಯುಪಿಎಸ್‍ಸಿ ಪ್ರಿಲಿಮ್ಸ್ ಕ್ರ್ಯಾಶ್ ಕೋರ್ಸ್ ಅನ್ನು ಜನವರಿ 16 ರಿಂದ ಏಪ್ರಿಲ್ 30 ರವರೆಗೆ ಆಯೋಜಿಸಲಾಗುತ್ತಿದೆ. ಉತ್ತಮ ಫಲಿತಾಂಶ ನೀಡುವ ದೃಷ್ಟಿಯಿಂದ ನುರಿತ ಪ್ರಾಧ್ಯಾಪಕರಿಂದ ಗುಣಮಟ್ಟದ ಬೋಧನೆ ನೀಡಲಾಗುವುದು ಹಾಗೂ ಅನುಮಾನ ನಿವಾರಣಾ ಅವಕಾಶಗಳು, ಹದಿನೈದು ದಿನಗಳಿಗೊಮ್ಮೆ ವಿಷಯವಾರು ಪರೀಕ್ಷೆಗಳು ಮತ್ತು ಮೇ 2025 ರಲ್ಲಿ ಯುಪಿಎಸ್‍ಸಿ ಪ್ರಿಲಿಮ್ಸ್ ಜಿಎಸ್‍ಐ ಮತ್ತು ಜಿಎಸ್2 ಅಣುಕು ಪರೀಕ್ಷೆಗಳನ್ನು ನಡೆಸಲಾಗುವುದು. ಈ ತರಗತಿಗಳು ಆನ್‍ಲೈನ್ ಹಾಗೂ ಆಫ್ ಲೈನ್ ನಲ್ಲಿ ಲಭ್ಯವಿದ್ದು, ಆನ್‌ಲೈನ್ ತರಗತಿಗಳು ಕೆಎಸ್‍ಎಫ್ ಅಕಾಡೆಮಿ, ಚಂದ್ರ ಲೇಔಟ್, ವಿಜಯನಗರ, ಬೆಂಗಳೂರು-40 ಇಲ್ಲಿ ನಡೆಯಲಿವೆ. ಈ ತರಗತಿಗಳಿಗೆ ಹಾಜರಾಗಲು ನೋಂದಣಿ ಕಡ್ಡಾಯ. ಹೆಚ್ಚಿನ ವಿವರಗಳಿಗೆ ದೂ.ಸಂ. 9845318599, 9845319299, ಇಮೈಲ್: ksfchandralayout@gmail.com ಅಥವಾ ವೆಬ್‍ಸೈಟ್: www.ksfkarnataka.com  ನ್ನು ಸಂಪರ್ಕಿಸಬಹುದು ಎಂದು ಕೃಷಿಕ್ ಸರ್ವೋದಯ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಜ.13 : ಅಂಚೆ ಇಲಾಖೆಯಲ್ಲಿ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆ ಪಡೆಯಲು ನಕಲಿ ಅಂಕ ಪಟ್ಟಿ ಸಲ್ಲಿಸಿ ಕೆಲಸ ಗಿಟ್ಟಿಸಿಕೊಂಡ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ವ್ಯಕ್ತಿಯೊಬ್ಬನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿದೆ. ಮಡಿಕೇರಿ ತಾಲೂಕಿನ ಕಾರೆಕಾಡು ಗ್ರಾಮದ ನಿವಾಸಿ ಸಂದೇಶ ಎಂ.ಬಿ ಎಂಬಾತನೇ ಶಿಕ್ಷೆಗೆ ಗುರಿಯಾದ ವ್ಯಕ್ತಿ. 2019ನೇ ಸಾಲಿನಲ್ಲಿ ಅಂಚೆ ಇಲಾಖೆಯ ನೇಮಕಾತಿಯಲ್ಲಿ ಆನ್‌ಲೈನ್ ಮೂಲಕ ಸಂದೇಶ ಎಂ.ಬಿ ಎಂಬಾತನು ಅರ್ಜಿ ಸಲ್ಲಿಸಿದ್ದ. ದಾಖಲೆ ಪರಿಶೀಲನೆ ವೇಳೆ ನಕಲಿ ಅಂಕ ಪಟ್ಟಿ ಸಲ್ಲಿಸಿ ಅಂಚೆ ಇಲಾಖೆಯಲ್ಲಿ ನೌಕರಿ ಪಡೆದು ಸರಕಾರಕ್ಕೆ ಮೋಸ ಮಾಡಿರುವುದು ಪತ್ತೆಯಾಗಿತ್ತು. ಈ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. 2022 ಫೆ.25 ರಂದು ಸಂದೇಶನನ್ನು ಬಂಧಿಸಲಾಗಿತ್ತು. :: ತೀರ್ಪು ಪ್ರಕಟ :: ಪ್ರಕರಣದ ತನಿಖಾಧಿಕಾರಿ ಶ್ರೀನಿವಾಸ, ತನಿಖಾ ಸಹಾಯಕಿ ದಿವ್ಯಾ, ಹೆಚ್.ಸಿ ಅವರುಗಳು…

Read More

  ಮಡಿಕೇರಿ ಜ.13 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002 ನವೆಂಬರ್, 4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 5306 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5316 ಪ್ರಕರಣಗಳು ಇತ್ಯರ್ಥಗೊಂಡಿದೆ. 2024-25 ನೇ ಆರ್ಥಿಕ ಸಾಲಿನಲ್ಲಿ 198 ಪ್ರಕರಣಗಳು ದಾಖಲಾಗಿ 188 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ 10 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 10,5,000 ರೂ. ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2024-25 ನೇ ಸಾಲಿನಲ್ಲಿ ಕೊಡಿಸಲಾಗಿದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ…

Read More