ಮಡಿಕೇರಿ ಜ.13 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುದರ್ಶನ ಬಳಿ ಇರುವ ಪರಿಷತ್ತಿನ ನಿವೇಶನದಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣದ ಸಲುವಾಗಿ ಕರ್ನಾಟಕ ಸರಕಾರದ ಲೋಕೋಪಯೋಗಿ ಸದ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು ಜಿಲ್ಲಾಧ್ಯಕ್ಷ ಎಂ.ಪಿ ಕೇಶವ ಕಾಮತ್ ಅವರ ನೇತೃತ್ವದಲ್ಲಿ ಭೇಟಿಯಾಗಿ ಭವನ ನಿರ್ಮಾಣ ಕಾರ್ಯದಲ್ಲಿ ತಮ್ಮ ಇಲಾಖೆ ವತಿಯಿಂದ ಅನುದಾನ ನೀಡಿ ಭವನ ನಿರ್ಮಾಣದ ಕಾರ್ಯದಲ್ಲಿ ಸಹಕರಿಸುವಂತೆ ಕೋರಿಕೊಂಡರು. ಪ್ರತಿಕ್ರಿಯಿಸಿದ ಸಚಿವರು ಸಾಹಿತ್ಯ ಪರಿಷತ್ತಿನ ಭವನಕ್ಕೆ ಸಂಪೂರ್ಣ ಸಹಕಾರ ನೀಡುವುದರೊಂದಿಗೆ ಇಲಾಖೆಯಿಂದ ನೀಡಬಹುದಾದ ಅನುದಾನದ ವ್ಯವಸ್ಥೆ ಮಾಡುವುದಾಗಿ ನುಡಿದರು. ಈ ಸಂದರ್ಭ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜಾ ಉತ್ತಪ್ಪ ಉಪಸ್ಥಿತರಿದ್ದರು. ಅವರನ್ನು ಭೇಟಿಯಾದ ನಿಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿ ನಿರ್ದೇಶಕರಾದ ವಿ.ಟಿ.ಮಂಜುನಾಥ್ ಉಪಸ್ಥಿತರಿದ್ದರು.
ಲೇಖಕ: admin
ಮಡಿಕೇರಿ NEWS DESK ಜ.12 : 1965ರಲ್ಲಿ ಭಾರತ-ಪಾಕ್ ನಡುವೆ ನಡೆದ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಬಲಿದಾನಗೈದ ಕೊಡಗಿನ ವೀರ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆಯ “ಸ್ಕೈ ಫೋರ್ಸ್” ಬಾಲಿವುಡ್ ಸಿನಿಮಾ ಜ.24 ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಪ್ರಮುಖ ಪಾತ್ರಧಾರಿ ವೀರ್ ಪಹಾಡಿಯಾ ಅವರು ಇಂದು ಅಜ್ಜಮಾಡ ದೇವಯ್ಯ ಅವರ ಪತ್ನಿ ಸುಂದರಿ ದೇವಯ್ಯ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬೊಳ್ಳಜಿರ ಬಿ.ಅಯ್ಯಪ್ಪ ನೇತೃತ್ವದ ಕೊಡವ ಮಕ್ಕಡ ಕೂಟ ಹೊರತಂದಿರುವ ಪತ್ರಕರ್ತ ಹಾಗೂ ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅವರು ಬರೆದಿರುವ “1965ರ ಯುದ್ಧ ಹಾಗೂ ಮಹಾವೀರ ಚಕ್ರ ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ ಜೀವನಾಧರಿತ ಪುಸ್ತಕವನ್ನು ಆಧರಿಸಿ “ಸ್ಕೈ ಫೋರ್ಸ್” ಚಿತ್ರವನ್ನು ತಯಾರಿಸಲಾಗಿದೆ.
ಮಡಿಕೇರಿ NEWS DESK ಜ.12 : ಮಕ್ಕಳ ಸಂತೆಯಂತಹ ಕಾರ್ಯಕ್ರಮಗಳು ವೃತ್ತಿ ಗೌರವವನ್ನು ಹೆಚ್ಚಿಸಲು ಸಹಕಾರಿಯಾಗಿದೆ ಎಂದು ಮಾಯಮುಡಿ ಗ್ರಾ.ಪಂ ಅಧ್ಯಕ್ಷ ಆಪಟ್ಟೀರ ಟಾಟು ಮೊಣ್ಣಪ್ಪ ಅಭಿಪ್ರಾಯಪಟ್ಟಿದ್ದಾರೆ. ಮಾಯಮುಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ಅಗತ್ಯತೆಯನ್ನು ವಿವರಿಸಿದರು. ಈ ರೀತಿಯ ಕಾರ್ಯಕ್ರಮಗಳು ಮಕ್ಕಳಲ್ಲಿ ವ್ಯವಹಾರಿಕ ಜ್ಞಾನವನ್ನು ಹೆಚ್ಚಿಸುತ್ತದೆ, ಅಲ್ಲದೆ ವೃತ್ತಿಯ ಕುರಿತು ಅರಿವು ಮೂಡಿಸುತ್ತದೆ. ಸರಕಾರಿ ಶಾಲೆಗಳ ಹಲವು ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಬೆಳೆಸುತ್ತದೆ, ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುತ್ತದೆ. ಇಂದು ಮಕ್ಕಳ ಸಂತೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡ ರೀತಿ ಮತ್ತು ಆಸಕ್ತಿ ಶ್ಲಾಘನೀಯವೆಂದರು. ಮುಖ್ಯ ಶಿಕ್ಷಕಿ ಹೆಚ್.ಸಿ.ಜಯಮ್ಮ, ಶಿಕ್ಷಕರುಗಳಾದ ರಾಗಿಣಿ, ಸತ್ಯ, ಲೀಲಾ, ಸುಮ, ಪುಷ್ಪ, ಸಹನಾ, ಲಾಯ್ಡ್, ಪೌಢ ಶಾಲೆಯ ಮುಖ್ಯ ಶಿಕ್ಷಕಿ ವಾಣಿ ಹಾಗೂ ಪೊಷಕರು ಉಪಸ್ಥಿತರಿದ್ದರು. ಮನೆಯಲ್ಲಿಯೇ ಬೆಳೆದ ತಾಜಾ ತರಕಾರಿ, ಹಣ್ಣು, ಸೊಪ್ಪು ಮತ್ತು ರುಚಿ ರುಚಿಯಾದ ಖಾದ್ಯಗಳನ್ನು…
ಮಡಿಕೇರಿ NEWS DESK ಜ.12 : ಮಡಿಕೇರಿ ನಗರದ ಹೃದಯ ಭಾಗದಲ್ಲಿ ಹಾಡಹಗಲೇ ಕಾರು ಕಳ್ಳತನ ಮಾಡಿದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾರಿನಲ್ಲಿದ್ದ ಜಿಪಿಎಸ್ ಆಧಾರದಲ್ಲಿ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಮಡಿಕೇರಿ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದರು. ನಾಪೋಕ್ಲು ನಿವಾಸಿ ರಫೀಕ್(30) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಕಾರನ್ನು ವಶಕ್ಕೆ ಪಡೆಯಲಾಗಿದೆ. ನಗರದ ಉದ್ಯಮಿ ಅಂಬೆಕಲ್ ನವೀನ್ ಕುಶಾಲಪ್ಪ ಅವರು ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗಳೂರು ರಸ್ತೆ ಕಡೆಗೆ ತೆರಳುವ ಮಾರ್ಗದ ಪಾರ್ಕಿಂಗ್ ಸ್ಥಳದಲ್ಲಿ ಕಾರನ್ನು ನಿಲ್ಲಿಸಿ ಚರ್ಚ್ ಕಾಂಪ್ಲೆಕ್ಸ್ ನಲ್ಲಿರುವ ತಮ್ಮ ಫೋಟೋ ಸ್ಟುಡಿಯೋಗೆ ತೆರಳಿದ್ದರು. ಮರಳಿ ಬಂದ ಸಂದರ್ಭ ಪಾರ್ಕಿಂಗ್ ಮಾಡಿದ ಸ್ಥಳದಲ್ಲಿ ಕಾರು ಇರಲಿಲ್ಲ. ಇದರಿಂದ ಆತಂಕಗೊಂಡ ಅಂಬೆಕಲ್ ನವೀನ್ ಕುಶಾಲಪ್ಪ ಅವರು ಅಲ್ಲಿದ್ದ ಸಿ.ಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ವ್ಯಕ್ತಿಯೊಬ್ಬ ನೇರವಾಗಿ ಕಾರು ಬಳಿ ಬಂದು ತನ್ನದೇ ಕಾರು ಎಂಬಂತೆ ಬಾಗಿಲು ತೆರೆದು ಕಾರನ್ನು ಚಲಾಯಿಸಿಕೊಂಡು ಹೋಗುತ್ತಿರುವ…
ಮಡಿಕೇರಿ NEWS DESK ಜ.12 : 1965ರಲ್ಲಿ ಭಾರತ-ಪಾಕ್ ನಡುವೆ ನಡೆದ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಬಲಿದಾನಗೈದ ಕೊಡಗಿನ ವೀರ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆಯ “ಸ್ಕೈ ಫೋರ್ಸ್” ಬಾಲಿವುಡ್ ಸಿನಿಮಾ ಜ.24 ರಂದು ಬಿಡುಗಡೆಯಾಗುತ್ತಿದೆ. ಬೊಳ್ಳಜಿರ ಬಿ.ಅಯ್ಯಪ್ಪ ನೇತೃತ್ವದ ಕೊಡವ ಮಕ್ಕಡ ಕೂಟ ಹೊರತಂದಿರುವ ಪತ್ರಕರ್ತ ಹಾಗೂ ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅವರು ಬರೆದಿರುವ “1965ರ ಯುದ್ಧ ಹಾಗೂ ಮಹಾವೀರ ಚಕ್ರ ಪುರಸ್ಕೃತ ಸ್ಕ್ವಾಡ್ರನ್ ಅಜ್ಜಮಾಡ ಬಿ.ದೇವಯ್ಯ ಅವರ ಜೀವನಾಧರಿತ ಪುಸ್ತಕವನ್ನು ಆಧರಿಸಿ “ಸ್ಕೈ ಫೋರ್ಸ್” ಚಿತ್ರವನ್ನು ತಯಾರಿಸಲಾಗಿದೆ. ಮ್ಯಾಡಾಕ್ ಫಿಲ್ಮ್ಸ್ ಮತ್ತು ಜಿಯೋ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ದಿನೇಶ್ ವಿಜನ್, ಅಮರ್ ಕೌಶಿಕ್ ಹಾಗೂ ಜ್ಯೋತಿ ದೇಶಪಾಂಡೆ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಸಂದೀಪ್ ಕೇವಾಲಾನಿ ಹಾಗೂ ಅಭಿಷೇಕ್ ಅನಿಲ್ ಕಪೂರ್ ಜಂಟಿಯಾಗಿ ಸಿನಿಮಾ ನಿರ್ದೇಶಿಸಿದ್ದಾರೆ. ಅಕ್ಷಯ್ ಕುಮಾರ್ ಹಾಗೂ ವೀರ್ ಪಹಾಡಿಯಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ಸಾರಾ ಅಲಿ ಖಾನ್, ನಿಮ್ರತ್ ಕೌರ್…
ಮಡಿಕೇರಿ NEWS DESK ಜ.12 : ಬರವಣಿಗೆಗೆ ಮನುಷ್ಯನ ಜೀವನವನ್ನು ಬದಲಾಯಿಸುವ ಅದ್ಭುತವಾದ ಶಕ್ತಿ ಇದೆ ಎಂದು ಬ್ಲೂ ಡಾರ್ಟ್ ಸಲಹೆಗಾರ ಹಾಗೂ ಹಿರಿಯ ಕ್ರೀಡಾಪಟು ಬಾಳೆಯಡ ಕಾಳಪ್ಪ ಅಭಿಪ್ರಾಯಪಟ್ಟಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಕೊಡವ ಮಕ್ಕಡ ಕೂಟದ 108ನೇ ಮತ್ತು ಲೇಖಕಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ರಚಿತ 10ನೇ ಪುಸ್ತಕ “ಜೇನು ಗೂಡು” ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಪುಸ್ತಕಗಳು ಮನುಷ್ಯನ ಜೀವನದಲ್ಲಿ ಬದಲಾವಣೆಯನ್ನು ತರಲು ಶಕ್ತವಾಗಿವೆ, ಬರಹಗಾರರು ತಮಗಾಗಿ ಅಥವಾ ಸಮಾಜದ ಕಲ್ಯಾಣಕ್ಕಾಗಿ ಪುಸ್ತಕಗಳನ್ನು ಬರೆಯಬಹುದು. ಆದರೆ ಬರವಣಿಗೆಯಲ್ಲಿರುವ ಶಕ್ತಿ ಸಾಮಾಜಿಕ ಪರಿವರ್ತನೆಗೆ ಸಹಕಾರಿಯಾಗಿದೆ ಎಂದರು. ಪುಸ್ತಕಗಳನ್ನು ಹೆಚ್ಚು ಓದುವ ಮೂಲಕ ಉತ್ತಮ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಬರೆಯುವುದರಿಂದ ಅಥವಾ ಓದುವ ಹವ್ಯಾಸದಿಂದ ಜೀವನದ ಕುಂದು ಕೊರತೆ ಮತ್ತು ವ್ಯತ್ಯಾಸಗಳು ದೂರವಾಗುತ್ತವೆ. ಮಕ್ಕಳ ಜೀವನದಲ್ಲಿ ತಂದೆ ತಾಯಿಗಳ ಪಾತ್ರ ದೊಡ್ಡದಾಗಿರುತ್ತದೆ. ತಂದೆ ನಂಬಿಕೆಯಾದರೆ, ತಾಯಿ ಸತ್ಯವಾಗುತ್ತಾಳೆ, ಇವರಿಬ್ಬರು ದೇವರಿಗೆ ಸಮಾನರು. ಇಂದಿನ ಮನುಕುಲ ವಸ್ತುಗಳ ಬಗ್ಗೆ ಹೆಚ್ಚು ಆಸಕ್ತಿ…
ಮಡಿಕೇರಿ ಜ.11 NEWS DESK : ಮಡಿಕೇರಿ ನಗರದ ಶಕ್ತಿ ಪೀಠಗಳಲ್ಲಿ ಒಂದಾದ ಮಂಗಳಾದೇವಿ ನಗರದ ಶ್ರೀ ರಾಜರಾಜೇಶ್ವರಿ ಕ್ಷೇತ್ರದ ಪುನರ್ ಪ್ರತಿಷ್ಠಾ ವಾರ್ಷಿಕ ಮಹೋತ್ಸವವು ಜ.14 ಮತ್ತು 15 ರಂದು ನಡೆಯಲಿದೆ. ಜ.14 ರಂದು ಸಂಜೆ 6 ಗಂಟೆಯಿಂದ ಪ್ರಾರ್ಥನೆ, ಪುಣ್ಯ, ಸಪ್ತಶುಧ್ಧಿ, ಪ್ರಸಾದ ಶುಧ್ಧಿ, ರಾಕ್ಷೋಘ್ನ ಹೋಮ, ವಾಸ್ತು ಪೂಜೆ, ವಾಸ್ತು ಹೋಮ, ದಿಶಾ ಬಳಿ ನಂತರ ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಜ.15 ರಂದು ಬೆಳಗ್ಗೆ 8 ಗಂಟೆಯಿಂದ ಪುಣ್ಯಾಹ, ಗಣಪತಿ ಹೋಮ, ಚಂಡಿಕಾ ಹೋಮ, ನವಕಲಶ ಪೂಜೆ, ಪ್ರಧಾನ ಹೋಮ, ನಾಗದೇವರಿಗೆ ತಂಬಿಲ, ಆಶ್ಲೇಷ ಬಳಿ, ಕಲಶಾಭಿಶೇಕ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಯಿಂದ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5.30ಕ್ಕೆ ಸಾಯಂಪೂಜೆ, 6.30ಕ್ಕೆ ರಂಜಪೂಜೆ, 7 ಗಂಟೆಗೆ ದೇವಾಲಯದ ಆವರಣದಲ್ಲಿ ಬಲಿ ಉತ್ಸವ, ರಾಜಾಂಗಣ ಪ್ರಸಾದ, ಪೀಠ ಪೂಜೆ, ಶುದ್ಧಿ ಕಲಶಾಭಿಶೇಕ, ಮಂತ್ರಾಕ್ಷತೆ ನಂತರ ಅನ್ನಸಂತರ್ಪಣೆ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ…
ಕುಶಾಲನಗರ ಜ.11 NEWS DESK : ಕೊಪ್ಪ ಭಾರತ್ ಮಾತಾ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾರ್ಥಿಗಳು ಕೊಡಗು ಮೈಸೂರು ಜಿಲ್ಲೆಯ ಗಡಿ ಭಾಗದ ಕಾವೇರಿ ನದಿಯ ಎರಡು ಸೇತುವೆಗಳನ್ನು ಸ್ವಚ್ಛ ಮಾಡಿ ಬಣ್ಣ ಬಳಿಯುವ ಕಾರ್ಯದಲ್ಲಿ ತೊಡಗಿಸಿಕೊಂಡರು. ಕಳೆದ ಒಂದು ವಾರದಿಂದ ವಿವಿಧ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುವ ಶಿಬಿರಾರ್ಥಿಗಳು 177 ವರ್ಷಗಳ ಹಿಂದೆ ಕಾವೇರಿ ನದಿಗೆ ನಿರ್ಮಾಣವಾದ ಹಳೆಯ ಸೇತುವೆಯ ಸ್ವಚ್ಛತೆ ಮತ್ತು ಎರಡು ಬದಿಗಳಲ್ಲಿ ಬೆಳೆದಿರುವ ಗಿಡ ಗಂಟೆಗಳನ್ನು ತೆರವುಗೊಳಿಸಿದರು. ಭಾರತ್ ಮಾತಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ಫಾ.ಎಬಿನ್ ಮತ್ತು ಶಿಬಿರಾಧಿಕಾರಿ ಹೆಚ್.ಆರ್.ದಿನೇಶ್ ನೇತೃತ್ವದಲ್ಲಿ ಹಗಲು ರಾತ್ರಿ ಕೆಲಸ ನಿರ್ವಹಿಸಿ ನೂತನ ಸೇತುವೆಗೆ ಬಣ್ಣ ಬಳಿದರು. ಹಗಲು ವೇಳೆ ಸೇತುವೆಯ ಮೇಲೆ ವಾಹನಗಳ ಸಂಚಾರದ ಒತ್ತಡ ಇದ್ದ ಹಿನ್ನೆಲೆಯಲ್ಲಿ ರಾತ್ರಿ 9 ಗಂಟೆ ಯಿಂದ ತಡರಾತ್ರಿ ಒಂದು ಗಂಟೆಯ ತನಕ ಪದವಿ ಕಾಲೇಜಿನ ವಿದ್ಯಾರ್ಥಿನಿಯರು ಸೇರಿದಂತೆ ಶಿಬಿರದ ಐವತ್ತಕ್ಕೂ ಅಧಿಕ ಶಿಬಿರಾರ್ಥಿಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಸ್ವಚ್ಛತಾ…
ಕುಶಾಲನಗರ ಜ.11 NEWS DESK : ವಿದ್ಯಾರ್ಥಿಗಳು ಸೃಜನಶೀಲತೆ ಮೈಗೂಡಿಸಿಕೊಳ್ಳುವ ಮೂಲಕ ಸದಾ ಅಧ್ಯಯನಶೀಲರಾದಲ್ಲಿ ಹೆಚ್ಚಿನ ಜ್ಞಾನವಂತರಾಗಲು ಸಾಧ್ಯ. ಜ್ಞಾನಕ್ಕೆ ಸರಿ ಸಮನಾದ ಗೌರವ ಸಮಾಜದಲ್ಲಿ ಮತ್ತೊಂದಿಲ್ಲ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಕರೆ ನೀಡಿದರು. ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ವವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಓದು ಉದ್ಯೋಗ ತಂದು ಕೊಟ್ಟರೆ, ಜ್ಞಾನ ಅವರನ್ನು ಅನ್ವೇಷಣೆಗೆ ಈಡು ಮಾಡುತ್ತದೆ ಎಂದು ಹೇಳಿದ ಶಶಿಧರ್, ಅಬ್ದುಲ್ ಕಲಾಂ, ಅಂಬೇಡ್ಕರ್, ಬುದ್ಧ, ಬಸವಣ್ಣನಂತಹ ಮೇರು ವ್ಯಕ್ತಿಗಳ ಆದರ್ಶಗಳನ್ನು ಮೈಗೂಡಿಸಿಕೊಳ್ಳಲು ಕರೆ ನೀಡಿದರು.ನೈತಿಕತೆ, ಸಚ್ಚಾರಿತ್ರ್ಯ, ಉತ್ತಮ ಸಂಸ್ಕಾರ ಇರುವವರಲ್ಲಿ ದೇಶದ ಭವಿಷ್ಯ ಅಡಗಿದೆ ಎಂದು ಹೇಳಿದರು. ಶಕ್ತಿ ಪತ್ರಿಕೆ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಮಾತನಾಡಿ, ವಿದ್ಯಾರ್ಥಿಗಳು ಗುರಿಯನ್ನು ಮುಂದಿಟ್ಟು ಅದನ್ನು ತಲುಪಲು ನಿರಂತರ ಶ್ರಮ, ಸತತ ಅಧ್ಯಯನ ಹಾಗೂ ಏಕಾಗ್ರತೆ ಅತಿ ಮುಖ್ಯ. ವಿದ್ಯಾರ್ಥಿಗಳಿಗೆ ಸಾಧಕರು ಮಾದರಿಯಾಗಬೇಕು. ಪರೀಕ್ಷೆಯನ್ನು ಹಬ್ಬದಂತೆ ಆಚರಿಸಿ.…
ಮಡಿಕೇರಿ ಜ.11 NEWS DESK : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಏ.3 ರಿಂದ ಕೊಡವ ಕ್ರಿಕೆಟ್ ಲೆದರ್‍ಬಾಲ್ ಪ್ರೀಮಿಯರ್ ಲೀಗ್ ಸೀಸನ್-2 ಕ್ರಿಕೆಟ್ ಪಂದ್ಯಾವಳಿಯು ಪಾಲಿಬೆಟ್ಟದ ಟಾಟಾ ಕಾಫಿ ಸಂಸ್ಥೆಯ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ ಎಂದು ಫೌಂಡೇಶನ್‍ನ ಅಧ್ಯಕ್ಷ ಪೊರುಕೊಂಡ ಸುನಿಲ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಬಿಡ್ಡಿಂಗ್ ಅರ್ಜಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಟಿ-20 ಮಾದರಿಯ ಪಂದ್ಯಾವಳಿ ನಡೆಯಲಿದ್ದು, ಸೀಸನ್-1 ರ ಪ್ರಾಂಚೈಸಿಗಳು ಮುಂದುವರೆಯಲಿದ್ದಾರೆ. ಇವರೊಂದಿಗೆ ಮತ್ತಷ್ಟು ಪ್ರಾಂಚೈಸಿಗಳು ಪಾಲ್ಗೊಳ್ಳವ ನಿರೀಕ್ಷೆ ಇದ್ದು, ಆಸಕ್ತ ಆಟಗಾರರ ಬಿಡ್ಡಿಂಗ್ ಅರ್ಜಿ ನಮೂನೆಯನ್ನು ಪಡೆದು ಫೆ.28ರೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಎಲ್ಲಾ ಜನಾಂಗದ ಪ್ರತಿಭೆಗಳನ್ನು ಮುಂದೆ ತರುವ ಗುರಿ ಹೊಂದಿದ್ದೇವೆ. ಸೀಸನ್-2ರ ವಿಜೇತರಿಗೆ ಪ್ರಥಮ ಬಹುಮಾನ 2 ಲಕ್ಷ, ದ್ವಿತೀಯ 1 ಲಕ್ಷ, ತೃತೀಯ 50 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು. ಫೌಂಡೇಶನ್‍ನ ಉಪಾಧ್ಯಕ್ಷ ಪಾಲಚಂಡ ಜಗನ್ ಮಾತನಾಡಿ, ಈಗಾಗಲೇ…






