ಮಡಿಕೇರಿ ಜ.11 NEWS DESK : ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸಮಿತಿ ವತಿಯಿಂದ ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿ 36ನೇ ವರ್ಷದ ಮಕರ ಸಂಕ್ರಾಂತಿ ಮಹೋತ್ಸವ ಜ.14 ರಂದು ನಡೆಯಲಿದೆ ಎಂದು ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.14ರಂದು ನಡೆಯುವ ಮಕರ ಸಂಕ್ರಾಂತಿ ಮಹೋತ್ಸವಕ್ಕೆ ಜಿಲ್ಲೆಯ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು. ಜ.13ರಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಪಂಚಾಮೃತ ಅಭಿಷೇಕ, ತುಪ್ಪಾಭಿಶೇಕ ಇತ್ಯಾದಿ ಸೇವೆ ನಡೆಯಲಿದೆ. ಜ.14ರ ಬೆಳಗ್ಗೆ 6.30 ಗಂಟೆಗೆ ನಿರ್ಮಾಲ್ಯ ವಿಸರ್ಜನೆ, ಉಷಾಪೂಜೆ, 7 ಗಂಟೆಗೆ ಮುತ್ತಪ್ಪ ಮತ್ತು ಸುಬ್ರಹ್ಮಣ್ಯ ದೇವರ ಪೂಜೆ, 7.30ರಿಂದ ಪಂಚಾಮೃತಾಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಸ್ಮಾಭಿಷೇಕ, ಎಳನೀರಭಿಷೇಕ, ಪುಷ್ಪಾರ್ಚನೆ ನಡೆಯಲಿದೆ. ಬೆಳಿಗ್ಗೆ 8.30ಕ್ಕೆ ಶ್ರೀ ಕುಟ್ಟಿಚಾತನ್ ವೆಳ್ಳಾಟಂ, 9 ಗಂಟೆಗೆ ಮುತ್ತಪ್ಪ ವೆಳ್ಳಾಟಂ, 10 ಗಂಟೆಗೆ ಶ್ರೀ ಪೋದಿ ದೇವರ ವೆಳ್ಳಾಟಂ ನಡೆಯಲಿದೆ ಎಂದು…
ಲೇಖಕ: admin
ಮಡಿಕೇರಿ ಜ.11 NEWS DESK : ತಾಳತ್ತಮನೆ ನೇತಾಜಿ ಯುವಕ ಹಾಗೂ ಯುವತಿ ಮಂಡಲದ 33ನೇ ವಾರ್ಷಿಕೋತ್ಸವ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮದಿನಾಚರಣೆಯ ಅಂಗವಾಗಿ ಜ.22 ಮತ್ತು 23 ರಂದು ಅಂತರರಾಜ್ಯ ಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ, ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ಹಗ್ಗಜಗ್ಗಾಟ ಹಾಗೂ ಜಿಲ್ಲಾಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಾಳತ್ತಮನೆ ನೇತಾಜಿ ಯುವಕ ಮಂಡಲದ ಅಧ್ಯಕ್ಷ ಕೊಂಡಿರ ಪಿ.ಕಾರ್ಯಪ್ಪ, ನೆಹರು ಯುವ ಕೇಂದ್ರ ಮಡಿಕೇರಿ, ಯುವ ಸಮಬಲೀರಣ ಮತ್ತು ಕ್ರೀಡಾ ಇಲಾಖೆ ಕೊಡಗು, ತಾಲ್ಲೂಕು ಯುವ ಒಕ್ಕೂಟ ಮಡಿಕೇರಿಯ ಸಂಯುಕ್ತಾಶ್ರಯದಲ್ಲಿ ತಾಳತ್ತಮನೆ ಆಟದ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಜ.22 ರಂದು ಅಪರಾಹ್ನ 3.30 ಗಂಟೆಗೆ ತನ್ನ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ತಾಳತ್ತಮನೆ ಹೋಟೆಲ್ ಆಕ್ಸಿರಿಚ್ ಮಾಲೀಕ ಪಿ.ಟಿ.ಉಣ್ಣಿಕೃಷ್ಣ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ರಾಜೀವ್ ಲೋಚನ,…
ಮಡಿಕೇರಿ ಜ.11 NEWS DESK : ಜಿಲ್ಲಾ ಕೇಂದ್ರ ಮಡಿಕೇರಿಯ ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆ ಕಾಮಗಾರಿಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶನಿವಾರ ವೀಕ್ಷಿಸಿದರು. ಸಂಬಂಧಪಟ್ಟ ಎಂಜಿನಿಯರ್ ಅವರಿಂದ ಮಾಹಿತಿ ಪಡೆದು ಮಾತನಾಡಿದ ಸಚಿವರು ತಡೆಗೋಡೆಯ ದುರಸ್ತಿ ಕಾರ್ಯವನ್ನು ಪ್ರಸಕ್ತ ಸಾಲಿನ ಏಪ್ರಿಲ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗಳೂರು ಕಡೆಗೆ ತೆರಳುವ ರಸ್ತೆಯ ಬಲಭಾಗದಲ್ಲಿ ಕೆಲ ವರ್ಷಗಳ ಹಿಂದೆ, ಜಿಲ್ಲಾಡಳಿತ ಭವನದ ಸುರಕ್ಷತೆಗಾಗಿ ತಡೆಗೋಡೆಯನ್ನು ನಿರ್ಮಿಸಲಾಗಿತ್ತು. ಇದು ನಂತರದ ವರ್ಷದ ಭಾರೀ ಮಳೆಯ ಸಂದರ್ಭ ಕುಸಿತಕ್ಕೆ ಒಳಗಾಗುವ ಅಪಾಯವನ್ನು ಎದುರಿಸಿದ ಹಿನ್ನೆಲೆ, ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದರು. ತಡೆಗೋಡೆಯನ್ನು ಎರಡು ಹಂತಗಳಲ್ಲಿ ಮೆಟ್ಟಿಲಿನ ಮಾದರಿಯಲ್ಲಿ ದುರಸ್ತಿ ಪಡಿಸಲಾಗುತ್ತದೆ. ಈ ಹಿಂದಿನ ತಡೆಗೋಡೆಯ ಅರ್ಧ ಭಾಗವನ್ನು ಅದು ಇರುವ ಯಥಾಸ್ಥಿತಿಯಲ್ಲಿ ಗಟ್ಟಿಗೊಳಿಸಿ, ಅದರ ಮೇಲೆ ಕಾಂಕ್ರೀಟ್ ಹಾಕಲಾಗುತ್ತದೆ. ಬಳಿಕ ಮತ್ತೊಂದು ಹಂತವನ್ನು 45 ಡಿಗ್ರಿ ಕೋನದಲ್ಲಿ ತಡೆಗೋಡೆ ನಿರ್ಮಿಸಿ ಬಲ ಪಡಿಸಲಾಗುತ್ತದೆ ಎಂದು…
ಮಡಿಕೇರಿ ಜ.11 NEWS DESK : ಕೊಡಗಿನ ಸೈನಿಕ ಶಾಲೆಗೆ ಭಾರತೀಯ ವಾಯು ಸೇನೆಯ ತರಬೇತಿ ಕಮಾಂಡ್ ಏರ್ ಮಾರ್ಷಲ್ ನಾಗೇಶ್ ಕಪೂರ್ (ಎ.ವಿ.ಎಸ್.ಎಂ, ವಿ.ಎಂ, ಎಒಸಿ-ಇನ್-ಸಿ) ಪತ್ನಿ ಏ.ಎಫ್.ಎಫ್.ಡಬ್ಲೂ ಏ (ಪ್ರಾದೇಶಿಕ) ಅಧ್ಯಕ್ಷರಾದ ವಂದನಾ ಕಪೂರ್ ಅವರೊಂದಿಗೆ ಭೇಟಿ ನೀಡಿದರು. ಶಾಲೆಯಲ್ಲಿರುವ ಯುದ್ಧವೀರರ ಸ್ಮಾರಕಕ್ಕೆ ಪುಷ್ಪಗುಚ್ಛವನ್ನು ಅರ್ಪಿಸುವುದರ ಮೂಲಕ ವೀರ ಯೋಧರಿಗೆ ಗೌರವ ಸಲ್ಲಿಸಿದರು. ನಂತರ ಶಾಲೆಯ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ ನಡೆದ ವಿಶೇಷ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ತಮ್ಮ ವೃತ್ತಿಪರ ಸಾಧನೆಗಳು ಮತ್ತು ತರಬೇತಿಯ ಆರಂಭಿಕ ದಿನಗಳಿಂದ ಏಒಸಿ-ಇನ್-ಸಿ ತರಬೇತಿ ಕಮಾಂಡ್, ಭಾರತೀಯ ವಾಯುಸೇನೆಯ ಅಧಿಕಾರಿಯಾಗುವವರೆಗಿನ ಗಮನಾರ್ಹ ಹಾಗೂ ಸುದೀರ್ಘ ಪ್ರಯಾಣದ ಮೇಲೆ ಬೆಳಕು ಚೆಲ್ಲಿದರು. ವಿದ್ಯಾರ್ಥಿಗಳು ತಮ್ಮ ಜೀವನದ ಮಹಾತ್ವಾಕಾಂಕ್ಷೆಗಳನ್ನು ನೆರವೇರಿಸಿಕೊಳ್ಳಲು ಉತ್ಸಾಹದಿಂದ ಕಾರ್ಯಪ್ರವೃತರಾಗಬೇಕೆಂದು ಸಲಹೆ ನೀಡಿದರು. ಯುಪಿಎಸ್‍ಸಿ, ಎನ್‍ಡಿಎ ಮತ್ತು ವಿವಿಧ ರಕ್ಷಣಾ ತರಬೇತಿ ಅಕಾಡೆಮಿಗಳಿಗೆ ಹಾಗೂ ಇತರೆ ಸೇನಾ ಇಲಾಖೆಯ ಪ್ರವೇಶಾತಿಗಳಿಗೆ ತಯಾರಿ ಮಾಡುವ ಕುರಿತು ಮಾರ್ಗದರ್ಶನ ನೀಡಿದರು. ಭಾರತೀಯ ಸಶಸ್ತ್ರ ಪಡೆಗಳಲ್ಲಿ ಬದ್ಧತೆ…
ಮಡಿಕೇರಿ ಜ.11 NEWS DESK : ಕೊಡಗು ಜಿಲ್ಲೆಯಲ್ಲಿ ಆದಿವಾಸಿಗಳ ಮೇಲೆ ನಡೆದಿರುವ ಎಲ್ಲಾ ದೌರ್ಜನ್ಯದ ಪ್ರಕರಣಗಳನ್ನು ಕೂಲಂಕುಶವಾಗಿ ಪರಿಶೀಲಿಸಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳ ಸಮಕ್ಷಮದಲ್ಲಿ ವಿಶೇಷ ಅದಾಲತ್ ನಡೆಸಬೇಕೆಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹ ಸಂಚಾಲಕ ಡಾ.ಎಸ್.ವೈ.ಗುರುಶಾಂತ್, ಜಿಲ್ಲೆಯಲ್ಲಿ ಆದಿವಾಸಿಗಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಬಲಿಷ್ಠರ ಒತ್ತಡಗಳಿಗೆ ಮಣಿಯದೆ ನಿಷ್ಠುರ, ನಿಷ್ಪಕ್ಷಪಾತದಿಂದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಆದಿವಾಸಿಗಳು ಹಾಗೂ ದುರ್ಬಲ ವರ್ಗಗಳ ಕೆಲಸಗಾರರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಕೋವಿ ತೋರಿಸಿ ಬೆದರಿಸುವ, ನಾಯಿ ಬಿಟ್ಟು ಕಚ್ಚಿಸುವ, ಸಾಲದ ನೆಪಹೇಳಿ ಜೀತದಾಳುಗಳನ್ನಾಗಿ ದಂಡಿಸಿ ದುಡಿಸುವ ಪ್ರಕರಣಗಳು ನಡೆಯುತ್ತಲೇ ಇದೆ. ಈ ರೀತಿಯ ದೌರ್ಜನ್ಯ ಪ್ರಕರಣಗಳನ್ನು ತಡೆಯುವಲ್ಲಿ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ಅನೇಕ ಪ್ರಕರಣಗಳಲ್ಲಿ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ನಿಲ್ಲದೆ ಬಲಾಢ್ಯ ಆರೋಪಿಗಳನ್ನು ರಕ್ಷಿಸುವ…
ಮಡಿಕೇರಿ ಜ.11 NEWS DESK : ಮಡಿಕೇರಿಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ನಗರದ ತಮ್ಮ ಕಚೇರಿಗೆ ಆಗಮಿಸಿದ್ದ ಸಂಸದರು ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿ ಅವರ ಅಹವಾಲುಗಳನ್ನು ಸ್ವೀಕರಿಸಿˌ ಶೀಘ್ರದಲ್ಲೇ ಪರಿಹಾರ ಕಲ್ಪಿಸುವ ಭರವಸೆ ನೀಡಿದರು. ಅಲ್ಲದೇ ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.
ಮಡಿಕೇರಿ ಜ.11 NEWS DESK : ಕೊಡಗು ಜಿಲ್ಲೆಯನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಕೇಂದ್ರ ಸರಕಾರದ ಮೂಲಕ ಶಾಶ್ವತ ಪರಿಹಾರ ಕೋರಿ ಮಾನವ ಹಕ್ಕುಗಳ ಅಂತರಾಷ್ಟ್ರೀಯ ಒಕ್ಕೂಟದ ರಾಜ್ಯ ಸಮಿತಿ ಮೈಸೂರು- ಕೊಡಗು ಕ್ಷೇತ್ರದ ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಅವರಿಗೆ ಮನವಿ ಸಲ್ಲಿಸಿದೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾಗೂ ಮಾನವ ಸಂಘರ್ಷದಿಂದ ಅನೇಕ ಜೀವಗಳು ಬಲಿಯಾಗುತ್ತಿದ್ದು, ಕೃಷಿ ಫಸಲು ನಾಶವಾಗುತ್ತಿದೆ. ತಕ್ಷಣ ಕೇಂದ್ರ ಸರಕಾರದ ಮೂಲಕ ಕಾಡಾನೆ ಹಾವಳಿ ತಡೆಗೆ ಶಾಶ್ವತ ಯೋಜನೆ ರೂಪಿಸಬೇಕು. ಕೃಷಿ ಫಸಲು ನಷ್ಟಕ್ಕೆ ಕೇಂದ್ರದಿಂದಲೂ ಪರಿಹಾರ ನೀಡಬೇಕು. ಹುಲಿ, ಚಿರತೆ, ಕಾಡೆಮ್ಮೆ, ಕಾಡುಹಂದಿ, ಮಂಗಗಳು ಸೇರಿದಂತೆ ವನ್ಯಜೀವಿಗಳ ಉಪಟಳ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳಿಗೆ ಆಹಾರ ಮತ್ತು ನೀರು ಕೊರತೆಯಾಗದಂತೆ ನೋಡಿಕೊಳ್ಳಲು ಯೋಜನೆ ಜಾರಿಗೆ ತರಬೇಕು. ಕಾವೇರಿಯ ಉಗಮ ಸ್ಥಾನ ತಲಕಾವೇರಿಗೆ ತೆರಳುವ ಭಾಗಮಂಡಲ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಭಕ್ತರ ಪ್ರಯಾಣ ಕಷ್ಟಕರವಾಗಿದೆ. ಇದು ಹೆದ್ದಾರಿಯಾಗಿದ್ದು, ತಕ್ಷಣ ರಸ್ತೆ ವಿಸ್ತರಣೆ…
ಮಡಿಕೇರಿ NEWS DESK ಜ.11 : ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ “ಮುದ್ದಂಡ ಕಪ್ ಹಾಕಿ ಉತ್ಸವ”ದ ಲೋಗೋವನ್ನು ಇಂದು ಮಡಿಕೇರಿಯ ಕಾವೇರಿ ಹಾಲ್‌ನಲ್ಲಿ ಬಿಡುಗಡೆ ಮಾಡಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ, ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮಾಜಿ ವಿಧಾನಸಭಾ ಅಧ್ಯಕ್ಷ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯAಡ ವೀಣಾ ಅಚ್ಚಯ್ಯ, ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಬೋಪಣ್ಣ ಮತ್ತಿತರರು ಲೋಗೋವನ್ನು ಬಿಡುಗಡೆ ಮಾಡಿದರು. ಮುದ್ದಂಡ ಕಪ್ ಹಾಕಿ ಹಬ್ಬದ ಅಧ್ಯಕ್ಷ ರಶಿನ್ ಸುಬ್ಬಯ್ಯ, ಉಪಾಧ್ಯಕ್ಷ ಮುದ್ದಂಡ ಡೀನ್ ಬೋಪಣ್ಣ, ಕಾರ್ಯದರ್ಶಿ ಮುದ್ದಂಡ ರಂಜಿತ್ ಪೊನ್ನಪ್ಪ, ಗೌರವಾಧ್ಯಕ್ಷ ಮುದ್ದಂಡ ಬಿ.ದೇವಯ್ಯ, ಮುದ್ದಂಡ ಒಕ್ಕದ ಪಟ್ಟೆದಾರ ಮುದ್ದಂಡ ಡಾಲಿ ತಿಮ್ಮಯ್ಯ ಉಪಸ್ಥಿತರಿದ್ದರು.
ನಾಪೋಕ್ಲು ಜ.11 NEWS DESK : ಬೆಟ್ಟಗೇರಿ ಗ್ರಾ.ಪಂ ವ್ಯಾಪ್ತಿಯ ಪಾಲೂರು ಗ್ರಾಮದಲ್ಲಿ ವಿದ್ಯುತ್ ದೀಪಗಳಿಲ್ಲದೆ ಕಗ್ಗತ್ತಲು. ಹತ್ತು ದಿನದ ಗಡುವು ತಪ್ಪಿದಲ್ಲಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥ ಎನ್.ಎಂ.ಪೊನ್ನಣ್ಣ ಎಚ್ಚರಿಸಿದರು. ನಾಪೋಕ್ಲುವಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲೂರು – ಕೇಮಾಟ್ ರಸ್ತೆಯಲ್ಲಿ ಹಲವು ವರ್ಷಗಳಿಂದ ಯಾವುದೇ ವಿದ್ಯುತ್ ದೀಪದ ಸೌಲಭ್ಯಗಳಿಲ್ಲದೆ ಪರದಾಡುವಂತಾಗಿದೆ. ಈ ಬಗ್ಗೆ ಪಂಚಾಯಿತಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ಲಭಿಸಿಲ್ಲ. ಪಂಚಾಯಿತಿ ಬೇಜವಾಬ್ದಾರಿತನದಿಂದಾಗಿ ಗ್ರಾಮಸ್ಥರು ಕತ್ತಲೆಯಲ್ಲಿ ಕಾಲ ಕಳೆಯುವಂತಾಗಿದೆ ಎಂದರು. ಗ್ರಾಮದಲ್ಲಿ ವಿದ್ಯುತ್ ದೀಪಗಳು ಇಲ್ಲದೆ ರಸ್ತೆಗಳು, ಬಸ್ ತಂಗುದಾಣ, ಶಾಲೆ, ಅಂಗನವಾಡಿ ಕೇಂದ್ರ, ಪುರಾತನ ಇತಿಹಾಸವಿರುವ ವಿಷ್ಣು ದೇವಾಲಯ, ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯಾಪ್ತಿಯಲ್ಲಿ ಕಗ್ಗತ್ತಲು ಆವರಿಸಿದ್ದು, ಅಪರಾಧ ಕೃತ್ಯಗಳು ನಡೆಯುವ ವಾತಾವರಣ ನಿರ್ಮಾಣವಾಗಿದೆ ಎಂದರು. ಗ್ರಾಮದ ಕೇಮಾಟ್-ಬಕ್ಕ ಸಂಪರ್ಕ ರಸ್ತೆ ತೀವ್ರ ಹದಗೆಟ್ಟಿದ್ದು ಸಾರ್ವಜನಿಕರು, ಶಾಲಾ ಮಕ್ಕಳಿಗೆ ನಡೆದಾಡಲು ಹಾಗೂ ವಾಹನ ಸಂಚಾರಕ್ಕೆ ತೊಡಕಾಗಿದೆ. ರಸ್ತೆ…
ಮಡಿಕೇರಿ ಜ.11 NEWS DESK : ನಗರದ ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವೀಕ್ಷಿಸಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆಹರೋಜ್ ಖಾನ್, ಕೊಡಗು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್‍ರಾಜಾ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.






