ಲೇಖಕ: admin

ಮಡಿಕೇರಿ ನ.29 NEWS DESK : ಭಾರತೀಯರೆಲ್ಲರಿಗೂ ಧರ್ಮಗ್ರಂಥ ಸಂವಿಧಾನವಾಗಿದ್ದು, ಸಂವಿಧಾನ ಮತ್ತು ಕಾನೂನನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ತಿಳಿಸಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾನೂನುಗಳಿಗೆ ಮೂಲ ಸಂವಿಧಾನ. ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷಣ ಸಹ ಸಂವಿಧಾನದ ಕೊಡುಗೆ. ಸಂವಿಧಾನದಲ್ಲಿ ಕೇವಲ ಹಕ್ಕುಗಳನ್ನು ಮಾತ್ರ ನೀಡದೆ, ಕರ್ತವ್ಯಗಳನ್ನು ನೀಡಿದ್ದು ಅದನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದರು. ಪ್ರತಿಯೊಬ್ಬರಿಗೂ ವಿಶೇಷ ಪ್ರತಿಭೆ ಇದ್ದು, ಅದನ್ನು ಪ್ರದರ್ಶಿಸಲು ಸಹ ಸಂವಿಧಾನ ಮೂಲ ಕಾರಣ ಎಂದರು. ಶಿಕ್ಷಣವೆಂದರೆ ಕೇವಲ ಕಲಿಕೆಯಾಗದೆ ಮೌಲ್ಯಾಧಾರಿತ ಶಿಕ್ಷಣದ ಅವಶ್ಯಕತೆ ಇದೆ ಎಂದರು. ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸಚಿನ್ ವಾಸುದೇವ್ ಮಾತನಾಡಿ, ಸಂವಿಧಾನ ದಿನವನ್ನು ಪ್ರತಿಯೊಬ್ಬರೂ ಹಬ್ಬದಂತೆ…

Read More

ಮಡಿಕೇರಿ ನ.29 NEWS DESK : ಸಮಾಜದಲ್ಲಿನ ಎಲ್ಲಾ ಬಡವರು ಮತ್ತು ಅಸಹಾಯಕರಿಗೆ ಕಾನೂನಿನ ಅರಿವು ಮತ್ತು ನೆರವನ್ನು ಕಲ್ಪಿಸುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಹೊಸಮನಿ ಪುಂಡಲೀಕ ಸಲಹೆ ನೀಡಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘ ಇವರ ಜಂಟಿ ಆಶ್ರಯದಲ್ಲಿ ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಕಾನೂನು ಅರಿವು ಮತ್ತು ತರಬೇತಿ ಕಾರ್ಯಕ್ರಮ ಹಾಗೆಯೇ ಗುರುತಿನ ಚೀಟಿಯನ್ನು ಶುಕ್ರವಾರ ವಿತರಿಸಿ ಅವರು ಮಾತನಾಡಿದರು. ರಾಷ್ಟ್ರದ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ. ಆ ನಿಟ್ಟಿನಲ್ಲಿ ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯ ತಿಳಿಸಲಾಗಿದೆ. ಆದ್ದರಿಂದ ಮೂಲಭೂತ ಹಕ್ಕು ಪಡೆಯುವುದರ ಜೊತೆಗೆ ಕರ್ತವ್ಯಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆ ದಿಸೆಯಲ್ಲಿ ಕಾನೂನು ಸೇವಾ ಪ್ರಾಧಿಕಾರವು ಕಾನೂನಿನ ಅರಿವು ಮತ್ತು ನೆರವು ನೀಡುತ್ತಿದೆ ಎಂದರು. ಕಾನೂನು ಮಹತ್ವವನ್ನು ಪ್ರತಿಯೊಬ್ಬರೂ ತಿಳಿದುಕೊಂಡು ಕಟ್ಟಕಡೆಯ ವ್ಯಕ್ತಿಗೂ ಸಹ ಕಾನೂನಿನ ಬಗ್ಗೆ ಅರಿವಿನ ಮಾಹಿತಿ ನೀಡುವಂತಾಗಬೇಕು ಎಂದು ಪ್ರಧಾನ ಜಿಲ್ಲಾ…

Read More

ಮಡಿಕೇರಿ ನ.29 NEWS DESK : ಬೆಂಗಳೂರು ಕರ್ನಾಟಕ ನಾಟಕ ಅಕಾಡೆಮಿ ವತಿಯಿಂದ ಬಸವನಹಳ್ಳಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ 15 ದಿನಗಳ ನಾಟಕ ಶಿಬಿರ  ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ನಾಟಕ ಮಂಡಳಿಯ ನಿರ್ದೇಶಕರಾದ ಡಾಕ್ಟರ್ ಜಾಹಿದಾ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ವಿಶೇಷ ಕಲೆಗಳು ಅಡಕವಾಗಿದ್ದು, ಅವುಗಳನ್ನು ಸೂಕ್ತ ತರಬೇತಿ ಮೂಲಕ ಹೊರ ತೆಗೆದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದಾಗಿದೆ ಹಾಗೂ ಕಲಿಕೆಯ ಕಡೆಗೆ ಮಕ್ಕಳನ್ನು ಆಕರ್ಷಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಮಿತ್ರ  ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಟಕ ನಿರ್ದೇಶಕರಾದ ರಾಜೇಂದ್ರ ಪ್ರಸಾದ್, ಶಾಲಾ ಮುಖ್ಯೋಪಾಧ್ಯಾಯರಾದ ರವಿ, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳು ತಾವು ಕಲಿತ ನಾಟಕವನ್ನು ಪ್ರದರ್ಶಿಸಿದರು.  

Read More

ಮಡಿಕೇರಿ ನ.29 NEWS DESK : ವಿರಾಜಪೇಟೆ ತಾಲ್ಲೂಕಿನ ಕಾರ್ಮಾಡು ಗ್ರಾಮದ ಮನೆಯೊಂದರ ಆವರಣದಲ್ಲಿ ನಿಷೇಧಿತ ಗಾಂಜಾ ಗಿಡಗಳನ್ನು ಅಕ್ರಮವಾಗಿ ಬೆಳೆದಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾರ್ಮಾಡು ಗ್ರಾಮದ ಮುಕ್ಕಾಟಿಕೊಪ್ಪಲು ನಿವಾಸಿ ವಿ.ಬಿ.ಮುತ್ತಣ್ಣ(68) ಬಂಧಿತ ಆರೋಪಿಯಾಗಿದ್ದು, 5 ಕೆ.ಜಿ 500ಗ್ರಾಂ ತೂಕದ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಮನೆಯ ಕಾಂಪೌಂಡ್ ಒಳಗೆ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆದಿರುವ ಕುರಿತು ದೊರೆತ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದರು. ವಿರಾಜಪೇಟೆ ಉಪವಿಭಾಗದ ಡಿವೈಎಸ್‍ಪಿ ಆರ್.ಮೋಹನ್ ಕುಮಾರ್, ವೀರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ವಿರಾಜಪೇಟೆ ಗ್ರಾಮಾಂತರ ಠಾಣಾ ಎಸ್‍ಐ ವಾಣಿಶ್ರೀ ಬಿ.ಎಸ್ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು.

Read More

ಮಡಿಕೇರಿ ನ.29 NEWS DESK : ಕರಿಕೆ ಗ್ರಾ.ಪಂ ವ್ಯಾಪ್ತಿಯ ಪಚ್ಚೆ ಪಿಲಾವು, ದೊಡ್ಡಚೇರಿ, ಪಳ್ಳಿ ಕಳ, ಚೆತ್ತುಕಯ ಭಾಗದಲ್ಲಿ ಉಪಟಳ ನೀಡುತ್ತಿರುವ ಚಿರತೆಯನ್ನು ಸೆರೆ ಹಿಡಿಯುವಂತೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯ ಹೆದ್ದಾರಿ ಕಾಮಗಾರಿಗೆ ಚಾಲನೆ ನೀಡಲು ಕರಿಕೆ ಗ್ರಾಮಕ್ಕೆ ಭೇಟಿ ನೀಡಿದ್ದ ಅವರು ಚಿರತೆ ದಾಳಿ ಕುರಿತು ಅರಣ್ಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಹೆಚ್ಚುವರಿ ಬೋನ್ ಅಳವಡಿಸಿ ಚಿರತೆ ಸೆರೆಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಕರಿಕೆ ಗ್ರಾ.ಪಂ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಚಿರತೆ ಭೀತಿಯ ಕುರಿತು ವಿವರಿಸಿದರು.  

Read More

ಮಡಿಕೇರಿ ನ.29 NEWS DESK : ಸುಮಾರು 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕರಿಕೆ- ಭಾಗಮಂಡಲ ರಾಜ್ಯ ಹೆದ್ದಾರಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಚಾಲನೆ ನೀಡಿದರು. ಕರಿಕೆಯಲ್ಲಿ ಭೂಮಿಪೂಜೆ ನೆರವೇರಿಸಿದ ಶಾಸಕರು ಗುಣಮಟ್ಟದ ಕಾಮಗಾರಿ ನಡೆಯುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಕರಿಕೆ ಗಡಿ ಭಾಗದಲ್ಲಿರುವ ಪಂಚಾಯಿತಿಯ ಬಸ್ ನಿಲ್ದಾಣದ ಜಾಗವನ್ನು ಪರಿಶೀಲಿಸಿದ ಅವರು ಬಸ್ ನಿಲ್ದಾಣ ಮತ್ತು ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಲಾಗುವುದು, ಗಡಿಭಾಗ ಚೆಂಬೇರಿಯಲ್ಲಿ ಕರ್ನಾಟಕಕ್ಕೆ ಸ್ವಾಗತ ದ್ವಾರವನ್ನು ನಿರ್ಮಿಸಲಾಗುವುದು ಮತ್ತು ಸಾರ್ವಜನಿಕರ ಅನುಕೂಲಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು. ಕರಿಕೆ ಗ್ರಾ.ಪಂ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್, ಉಪಾಧ್ಯಕ್ಷರಾದ ಕಲ್ಪನಾ ಜಗದೀಶ್, ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ಡಿ.ದೇವರಾಜ್, ಜಿಲ್ಲಾ ಸರಕಾರಿ ವಕೀಲ ಎನ್.ಶ್ರೀಧರನ್ ನಾಯರ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಪಿ.ಪಿ.ಗಣಪತಿ, ಸದಸ್ಯರುಗಳಾದ ಆಯಿಷಾ ಎಂ.ಹೆಚ್, ಪಿ.ಪಿ.ರಾಜಕುಮಾರ,…

Read More

ಮಡಿಕೇರಿ ನ.29 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು, ಮೂರ್ನಾಡು ಹೋಬಳಿ ಘಟಕ, ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ, ಮೂರ್ನಾಡು ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಮೂರ್ನಾಡು ಹೋಬಳಿ ಘಟಕದ ವಿವಿಧ ಶಾಲಾ ಕಾಲೇಜು ಸಂಸ್ಥೆಗಳ ಸಹಯೋಗದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮದಿಂದ ನಡೆಯಿತು.  ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ ಅವರ ಅಧ್ಯಕ್ಷತೆಯಲ್ಲಿ ಕಾಂತೂರು-ಮೂರ್ನಾಡು ಗ್ರಾ.ಪಂ, ಪಿ.ಎಂ ಶ್ರೀ ಸರಕಾರಿ ಮಾದರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮವನ್ನು ಕ.ಸಾ.ಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ  ಕ.ಸಾ.ಪ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಖ್ಯಾತ ಇ.ಎನ್.ಟಿ ವೈದ್ಯ ಡಾ.ಮೋಹನ್ ಅಪ್ಪಾಜಿ,  ಕ.ಸಾ.ಪ ಮಡಿಕೇರಿ ತಾಲ್ಲೂಕು ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಬಿ.ಎಸ್.ಕುಶನ್ ರೈ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ, ಆಡಳಿತಾಧಿಕಾರಿ ಅಕ್ಷತಾ…

Read More

ದೆಹಲಿ ನ.29 NEWS DESK : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿಯಾಗಿ ವಿವಿಧ ವಿಷಯಗಳು ಕುರಿತು ಮಾತುಕತೆ ನಡೆಸಿದರು. ಅಲ್ಪಾವಧಿ ಬೆಳೆ ಸಾಲ ವಿತರಣೆಗೆ ಸಾಧ್ಯವಾಗುವಂತೆ ಪ್ರಸಕ್ತ ಸಾಲಿನಲ್ಲಿ ರಾಜ್ಯಕ್ಕೆ  ಒದಗಿಸಿರುವ ನಬಾರ್ಡ್ ನೆರವು ಕಡಿತಗೊಳಿಸಿರುವುದರಿಂದ ರಾಜ್ಯದ ರೈತಾಪಿ ವರ್ಗ ಸಂಕಷ್ಟಕ್ಕೆ ಈಡಾಗಿದೆ.  2023-24ರ ಸಾಲಿನಲ್ಲಿ ರೂ.5600 ಕೋಟಿಗಳನ್ನು ಮಂಜೂರು ಮಾಡಲಾಗಿತ್ತು. 2024 -25ರ ಸಾಲಿನಲ್ಲಿ ರೂ. 2,340 ಕೋಟಿಗಳನ್ನು ಮಂಜೂರು ಮಾಡಲಾಗಿದೆ. ಇದರಿಂದಾಗಿ ನಬಾರ್ಡ್ ನೆರವು ಪ್ರಸಕ್ತ ಸಾಲಿನಲ್ಲಿ ಶೇ.58 ರಷ್ಟು ಕಡಿತವಾಗಿದೆ ಎಂದರು. ರಾಜ್ಯವು ಹೆಚ್ಚುವರಿ ಬಡ್ಡಿ ಸಹಾಯಧನವನ್ನು ನೀಡದ ಹೊರತು, ಇದು ರಾಜ್ಯದ ರೈತಾಪಿ ವರ್ಗದ ಆರ್ಥಿಕ ವೆಚ್ಚದ ಮೇಲೆ ಗಂಭೀರ ಪರಿಣಾಮ ಬೀರುವುದಲ್ಲದೆ, ರಾಜ್ಯದ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರಲಿದೆ. ಆದ್ದರಿಂದ ಈ ಕೂಡಲೇ ಇದನ್ನು ಪರಾಮರ್ಶಿಸಿ ನಬಾರ್ಡ್ ನೆರವು ಹೆಚ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ…

Read More

ಮಡಿಕೇರಿ ನ.29 NEWS DESK : ಯಾವುದೇ ಕಾರಣಕ್ಕೂ ಮತ್ತು ಯಾವುದೇ ಪರಿಸ್ಥಿತಿಯಲ್ಲಿ ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಮ್ಮ ಸ್ಪಷ್ಟ ನಿಲುವು ವ್ಯಕ್ತಪಡಿಸಿದ್ದಾರೆ. ಅವಂದೂರು ಗ್ರಾಮದ ಗೋಪಾಲ ಕೃಷ್ಣ ದೇವಾಲಯದ ಕಾಮಗಾರಿಯನ್ನು ವೀಕ್ಷಿಸಿ ಗ್ರಾಮದ ಜನತೆಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತಾವು ನನಗೆ ಯಾವ ಗ್ರಾಮದಲ್ಲಿ ಮತ ಎಷ್ಟು ಬಂದಿದೆ ಎನ್ನುವುದಕ್ಕೆ ಆದ್ಯತೆ ನೀಡದೆ ಯಾವ ಗ್ರಾಮದಲ್ಲಿ ಏನು ಅಭಿವೃದ್ಧಿ ಆಗಬೇಕು ಎಂಬ ವಿಚಾರಕ್ಕೆ ಆದ್ಯತೆ ನೀಡುತ್ತೇನೆ ಎಂದು ತಿಳಿಸಿದರು. ತಮ್ಮ ವೈಯುಕ್ತಿಕ ಬದುಕು ಮತ್ತು ಸಾರ್ವಜನಿಕ ಬದುಕು ಎರಡರಲ್ಲೂ ಜಾತಿ,ಮತ,ಪಕ್ಷ ಭೇದವನ್ನು ಹೊರತಾದ ಜೀವನವನ್ನು ನಡೆಸಿಕೊಂಡು ಮುಂದಕ್ಕೂ ಅದೇ ರೀತಿಯಲ್ಲಿ ನಡೆಯುತ್ತೇನೆ ಎಂದು ಹೇಳಿದರು. ದೇವಸ್ಥಾನದ ಅಭಿವೃದ್ಧಿ ಗೆ ವೈಯುಕ್ತಿಕ ನೆರವು ನೀಡುವುದಾಗಿ ಭರವಸೆ ನೀಡಿದ ಪೊನ್ನಣ್ಣ ಅವರು ದೇವಾಲಯದ ಜಮೀನನ್ನು ದೇವಾಲಯದ ಸಮಿತಿ ಹೆಸರಿಗೆ ವರ್ಗಾಯಿಸಿದ ಮೇಲೆ ಸರ್ಕಾರದಿಂದ ದೊಡ್ಡ…

Read More

ಮಡಿಕೇರಿ ನ.29 NEWS DESK : ಪ್ರಸಕ್ತ (2024-25) ಸಾಲಿಗೆ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಪರಿಶಿಷ್ಟ ಪಂಗಡದ ಯುವಕ/ ಯುವತಿಯರಿಗೆ ತರಬೇತಿ ನೀಡುವ ಸಂಬಂಧ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಡಿ.13 ರ ಸಂಜೆ 5.30 ರೊಳಗೆ ಸಲ್ಲಿಸಬಹುದು. ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಪಡೆಯಲು ಪುರುಷರಿಗೆ 35 ವರ್ಷ ಹಾಗೂ ಮಹಿಳೆಯರಿಗೆ 40 ವರ್ಷದೊಳಗಿರಬೇಕು. ಅಭ್ಯರ್ಥಿಯ ಕುಟುಂಬದ ಆದಾಯ ರೂ.2.50 ಲಕ್ಷಗಳನ್ನು ಮೀರಿರಬಾರದು. ಅಭ್ಯರ್ಥಿಯು ಪರಿಶಿಷ್ಟ ಪಂಗಡಕ್ಕೆ ಸೇರಿರಬೇಕು. ಮೂಲನಿವಾಸಿ ಮತ್ತು ಅಲೆಮಾರಿ/ ಅರೆ ಅಲೆಮಾರಿ ಮತ್ತು ಸೂಕ್ಷ್ಮ/ ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದ ಯುವಕ/ ಯುವತಿಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಅಭ್ಯರ್ಥಿಯು ತರಬೇತಿಯ ನೋಂದಣಿ ಸಮಯದಲ್ಲಿ ಕಡ್ಡಾಯವಾಗಿ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಅಂಕಪಟ್ಟಿ ಹಾಗೂ ಆಧಾರ್ ಕಾರ್ಡ್‍ನ್ನು ಸಲ್ಲಿಸತಕ್ಕದ್ದು. ಅಭ್ಯರ್ಥಿಯು ತರಬೇತಿ ನೀಡುವ ಸ್ಥಳಕ್ಕೆ ಬರುವ ಪ್ರಯಾಣ…

Read More