ಮಡಿಕೇರಿ NEWS DESK ಆ.2 : ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ನ ನೂತನ ಕೊಡಗು ಜಿಲ್ಲಾ ಸಮಿತಿಯನ್ನು ರಚಿಸಲಾಗಿದ್ದು, ಜಿಲ್ಲಾಧ್ಯಕ್ಷರಾಗಿ ಬಿ.ಬಿ.ಐತ್ತಪ್ಪ ರೈ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ರಾಜೀವ ಲೋಚನ ಬಿ.ಪಿ., ಕೋಶಾಧಿಕಾರಿ ರತ್ನಾಕರ ರೈ, ಗೌರವ ಅಧ್ಯಕ್ಷರಾಗಿ ಶೇಖರ್ ಭಂಡಾರಿ, ಉಪಾಧ್ಯಕ್ಷರುಗಳಾಗಿ ಬಿ.ವೈ.ಆನಂದ ರಘು, ಬಿ.ಕೆ.ಮೋಹನ, ಬಿ.ಶಿವಪ್ಪ, ಜಿಲ್ಲಾ ಪ್ರಧಾನ ಸಂಚಾಲಕರಾಗಿ ಪಿ.ಎಂ.ರವಿ ಮೊಗೇರ, ಜಿಲ್ಲಾ ಸಲಹೆಗಾರರಾಗಿ ಅಶೋಕ್ ಆಚಾರ್ಯ ಬಿ.ಸಿ., ಮಡಿಕೇರಿ ತಾಲ್ಲೂಕು ಅಧ್ಯಕ್ಷ ಬಿ.ಆರ್.ಸದಾಶಿವ ರೈ, ತಾಲ್ಲೂಕು ಸಂಚಾಲಕರಾಗಿ ಮಡಿಕೇರಿಯ ಸುರೇಶ್ ಕುಲಾಲ್, ವಿರಾಜಪೇಟೆ ಶಬರೀಶ್ ಶೆಟ್ಟಿ, ಕುಶಾಲನಗರದ ಗೌತಮ ಶಿವಪ್ಪ, ಪೊನ್ನಂಪೇಟೆಯ ಶೇಖರ್ ಭಂಡಾರಿ ಹಾಗೂ ಸೋಮವಾರಪೇಟೆಯ ದಾಮೋದರ ಬಿ.ಎಂ. ಆಯ್ಕೆಯಾದರು. ಯುವ ಘಟಕದ ಅಧ್ಯಕ್ಷರಾಗಿ ಶರದ್ ಶೆಟ್ಟಿ, ಮಹಿಳಾ ವಿಭಾಗದ ಗೌರವ ಅಧ್ಯಕ್ಷರಾಗಿ ವಿಜಯಲಕ್ಷ್ಮಿ, ಅಧ್ಯಕ್ಷರಾಗಿ ಲೀಲಾ ಶೇಷಮ್ಮ, ಉಪಾಧ್ಯಕ್ಷರಾಗಿ ಶಶಿಕಲಾ ರೈ, ಪ್ರಧಾನ ಕಾರ್ಯದರ್ಶಿಯಾಗಿ ಶೋಭಾ ಮುತ್ತಪ್ಪ, ಕೋಶಾಧಿಕಾರಿಯಾಗಿ ಸಾವಿತ್ರಿ ಹಾಗೂ ಸಲಹೆಗಾರರಾಗಿ ಲೀಲಾವತಿ ಬಿ.ಎಸ್. ನೇಮಕಗೊಂಡರು. ಮಡಿಕೇರಿಯಲ್ಲಿ ನಡೆದ ತುಳುವ ಮಹಾಸಭೆ…
ಲೇಖಕ: admin
ಕಾರ್ಕಳ ಆ.1 NEWS DESK : ಕಾರ್ಕಳದ ಕ್ರಿಯೆಟಿವ್ ಗ್ಲೋಬಲ್ ಸ್ಕೂಲ್ ನ 2026 -27ನೇ ಸಾಲಿನ ನೂತನ ವಿದ್ಯಾರ್ಥಿ ಪರಿಷತ್ತು ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಪ್ತಸ್ವರ ವೇದಿಕೆಯಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಂಸ್ಥೆಯ ಸಂಸ್ಥಾಪಕರುಗಳಾದ ಅಶ್ವಥ್ ಎಸ್ ಎಲ್, ಆದರ್ಶ ಎಂಕೆ, ಡಾ. ಗಣನಾಥ್ ಶೆಟ್ಟಿ, ಗಣಪತಿ ಭಟ್ ಕೆ ಎಸ್, ವಿಮಲ್ ರಾಜ್, ಹಾಗೂ ಅಮೃತ ರೈ ಇವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ನಾಯಕರಿಗೆ ಗೌರವದ ಬ್ಯಾಡ್ಜ್ ಗಳನ್ನು ತೊಡಿಸಿದರು. ಸಂಸ್ಥಾಪಕರಾದ ವಿಮಲ್ ರಾಜ್ ಅವರು ಮಾತನಾಡಿ, ಶಿಕ್ಷಣದ ಜೊತೆಗೆ ನಾಯಕತ್ವ, ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಳ್ಳಬೇಕು. ನಾಯಕತ್ವ ಕೇವಲ ಅಧಿಕಾರವಲ್ಲ. ಅದು ಜವಾಬ್ದಾರಿ ಶಿಸ್ತು, ಶಾಲೆಯ ಗೌರವವನ್ನು ಹೆಚ್ಚಿಸುವಂತೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸಂಸ್ಥಾಪಕರಾದ ಎಸ್.ಎಲ್.ಅಶ್ವತ್ ಅವರು ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿಯೇ ದೊಡ್ಡ ಕನಸುಗಳನ್ನು ಕಾಣುವುದು, ಸಮಾಜದ ಒಳಿತಿಗಾಗಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದು…
ವಿರಾಜಪೇಟೆ ಆ.1 NEWS DESK : ಇಂದಿನ ಯುವ ಪೀಳಿಗೆ ದುಶ್ಚಟಗಳಿಗೆ ಬಲಿಯಾಗದಂತೆ ಶಾಲಾ ಹಂತದಲ್ಲೇ ಅರಿವು ಮೂಡಿಸುವುದು ಅತ್ಯಂತ ಅಗತ್ಯ ಎಂದು ದೇವರಪುರದ ಶ್ರೀ ರಾಜೇಶ್ವರಿ ವಿದ್ಯಾನಿಕೇತನ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶಶಿಧರ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವಿರಾಜಪೇಟೆ ತಾಲೂಕಿನ ಮಾಯಮುಡಿ ವಲಯದ ವತಿಯಿಂದ ಶ್ರೀರಾಜೇಶ್ವರಿ ವಿದ್ಯಾನಿಕೇತನ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ‘ಸ್ವಾಸ್ಥ್ಯ ಸಂಕಲ್ಪ’ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಾಲಾ ಹಂತದಲ್ಲೇ ಇಂತಹ ಸದ್ವಿಚಾರಗಳನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವುದರಿಂದ ಅವರು ದಾರಿ ತಪ್ಪುವುದನ್ನು ತಡೆಯಬಹುದು. ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ಶ್ಲಾಘನೀಯ ಎಂದರು. :: ಆರೋಗ್ಯ ಹಾಗೂ ಗೌರವ ಹಾಳು ಮಾಡುವ ಅಭ್ಯಾಸ :: ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಪ್ತ ಸಮಾಲೋಚಕಿ ರಮ್ಯಾ,”ನಮ್ಮ ಆರೋಗ್ಯ, ಕುಟುಂಬ ಹಾಗೂ ಸಮಾಜಕ್ಕೆ ಹಾನಿ ಉಂಟುಮಾಡುವ ಅಭ್ಯಾಸಗಳೇ ದುಶ್ಚಟಗಳು. ತಂಬಾಕು ಮತ್ತು ಸಿಗರೇಟ್ ಸೇವನೆಯಿಂದ…
ವಿರಾಜಪೇಟೆ ಆ.1 NEWS DESK : ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಶಿಕ್ಷಕಿಯರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿರಾಜಪೇಟೆ ತಾಲೂಕು ಘಟಕದ ವತಿಯಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು. ಕಂಡಂಗಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪವೀನಾ ಹಾಗೂ ಹೆಗ್ಗಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಹೇಮಲತಾ ಅವರನ್ನು ಸಂಘದ ಪದಾಧಿಕಾರಿಗಳು ಶಾಲಾ ಆವರಣದಲ್ಲಿ ಆತ್ಮೀಯವಾಗಿ ಸನ್ಮಾನಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ಇಬ್ಬರೂ ಶಿಕ್ಷಕಿಯರು ಸಲ್ಲಿಸಿದ ಸುದೀರ್ಘ ಹಾಗೂ ಶ್ಲಾಘನೀಯ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಹಾಗೂ ಶಾಲೆಯ ಅಭಿವೃದ್ಧಿಯಲ್ಲಿ ಅವರ ಪಾತ್ರ ದೊಡ್ಡದಾಗಿದ್ದು, ಅವರ ನಿವೃತ್ತ ಜೀವನ ಸುಖ-ಸಂತೋಷ ಮತ್ತು ಆರೋಗ್ಯದಿಂದ ಕೂಡಿರಲಿ ಎಂದು ಸಂಘದ ವತಿಯಿಂದ ಹಾರೈಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು, ಶಿಕ್ಷಕ ವೃಂದ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಮಡಿಕೇರಿ NEWS DESK ಆ.1 : ಕೊಡಗು ಜಿಲ್ಲೆಯಲ್ಲಿ ಮಳೆ ತೀವ್ರತೆಯನ್ನು ಪಡೆದುಕೊಂಡಿದ್ದು, ವಿವಿಧೆಡೆ ಪ್ರವಾಹದ ಪರಿಸ್ಥಿತಿ ಎದುರಾಗಿದೆ. ಬರೆ ಕುಸಿತ, ರಸ್ತೆ ಸಂಪರ್ಕ ಕಡಿತ, ಮನೆಗಳಿಗೆ ಹಾನಿ, ಗಾಳಿ, ಮೈಕೊರೆಯುವ ಚಳಿಯಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾವೇರಿ ಕ್ಷೇತ್ರ ತಲಕಾವೇರಿ ಮತ್ತು ಭಾಗಮಂಡಲ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆೆ. ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿ ಪ್ರವಾಹದ ನೀರು ರಸ್ತೆಗಳನ್ನು ಆವರಿಸಿದೆ. ಉದ್ಯಾನವನ, ಭಾಗಮಂಡಲ-ನಾಪೋಕ್ಲು ಹಳೇ ರಸ್ತೆಯ ಮೇಲೆ ನೀರು ಹರಿಯಲಾರಂಭಿಸಿದೆ. ಈ ಭಾಗದ ಜನರು ಸಂಚಾರಕ್ಕೆ ಮೇಲು ಸೇತುವೆಯನ್ನು ಅವಲಂಬಿಸಿದ್ದಾರೆ. ಮದೆ ಗ್ರಾಮದ ಕರ್ತೋಜೆ ಬಳಿ ಮಂಗಳೂರು – ಮಡಿಕೇರಿ ಮುಖ್ಯ ರಸ್ತೆಯ ಮೇಲೆ ಬಂಡೆ ಕಲ್ಲು ಉರುಳಿ ಬಿದ್ದು ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕಲ್ಲನ್ನು ತೆರವುಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಕಾವೇರಿ ಕ್ಷೇತ್ರದಲ್ಲಿ ಕಳೆದ ಒಂದು ದಿನದ ಅವಧಿಯಲ್ಲಿ 6 ಇಂಚಿಗೂ ಅಧಿಕ ಮಳೆ ದಾಖಲಾಗಿದೆ. ಭಾಗಮಂಡಲ ಮತ್ತು ತಲಕಾವೇರಿ ವ್ಯಾಪ್ತಿಯಲ್ಲಿ ಗಾಳಿ…
ಮಡಿಕೇರಿ ಆ.1 NEWS DESK : ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಆರಂಭವಾಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಕಳೆದ ಮೂರು-ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕೃಷಿಕರಲ್ಲಿ ಹಾಗೂ ಕಾವೇರಿ ಕಣಿವೆಯ ಎಲ್ಲಾ ನಾಗರಿಕರಲ್ಲಿ ಸಂತಸ ತಂದಿದೆ. ಈ ಬಾರಿ ಎಲ್ -ನಿನೋ ಪರಿಣಾಮದಿಂದ ವಾಡಿಕೆಗಿಂದ ಕಡಿಮೆ ಮಳೆ ಆಗಲಿದೆ ಎಂದು ಹೇಳಲಾಗಿತ್ತು. ಅದರಂತೆ ಜೂನ್ ಮತ್ತು ಜುಲೈ ಮೂರನೇ ವಾರದವರೆಗೂ ವಾಡಿಕೆಗಿಂತ ಕಡಿಮೆ ಮಳೆಯಾಗಿತ್ತು. ಸದ್ಯ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಎಲ್ಲರಲ್ಲಿ ಆಶಾಭಾವನೆ ಮೂಡಿಸಿದೆ. ಜಿಲ್ಲೆಯ ಪ್ರಮುಖ ಜಲಾಶಯಗಳಲ್ಲಿ ಒಂದಾದ ಹಾರಂಗಿ ಭರ್ತಿಯಾಗಿ ಒಳ ಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದು, ಅಷ್ಟೇ ಪ್ರಮಾಣದಲ್ಲಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಕಳೆದ 2019 ರಿಂದ 2026 ರವರೆಗೆ ತಿಂಗಳವಾರು ಸರಾಸರಿ ವಾಡಿಕೆ ಮಳೆ ಪ್ರಮಾಣವನ್ನು ಗಮನಿಸಿದಾಗ ಈ ಬಾರಿ ಕಡಿಮೆ ಮಳೆಯಾಗಿರುವುದು ಕಂಡು ಬರುತ್ತದೆ. ಜನವರಿಯಿಂದ ಜುಲೈ ಅಂತ್ಯದವರೆಗೆ ತಿಂಗಳುವಾರು ವಾಡಿಕೆ ಮಳೆ ಪ್ರಮಾಣ ಗಮನಿಸಿದಾಗ ಜುಲೈ ತಿಂಗಳಲ್ಲಿ ವಾಡಿಕೆ ಮಳೆ 859 ಮಿ.ಮೀ.ಗಳಾಗಿದ್ದು, ಈ ಬಾರಿ…
ಮಡಿಕೇರಿ ಆ.1 NEWS DESK : ಮಾದಕ ವ್ಯಸನವನ್ನು ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಯುವ ಪೀಳಿಗೆಯು ಜಾಗೃತರಾದರೆ ಮಾತ್ರ ಸಮಾಜದಿಂದ ಈ ಪಿಡುಗನ್ನು ನಿರ್ಮೂಲನೆ ಮಾಡಲು ಸಾಧ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಹೇಳಿದ್ದಾರೆ. ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಇವರ ಸಹಕಾರದಲ್ಲಿ ಎಫ್.ಎಂ.ಸಿ.ಕಾಲೇಜು ಸಭಾಂಗಣದಲ್ಲಿ ನಡೆದ ಡಾ.ಮಹಾಂತ ಶಿವಯೋಗಿ ಅವರ ಜನ್ಮದಿನಾಚರಣೆ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇವತ್ತಿನ ಯುವಪೀಳಿಗೆ ಡ್ರಗ್ಸ್, ಹೆರಾಯಿನ್, ಗಾಂಜಾ ಮತ್ತಿತರ ಮಾದಕ ವಸ್ತುಗಳಿಗೆ ಬಲಿಯಾಗದೆ ಉತ್ತಮ ಜೀವನ ಕಟ್ಟಿಕೊಳ್ಳಲು ಪ್ರಯತ್ನಿಸಬೇಕು. ಆ ನಿಟ್ಟಿನಲ್ಲಿ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಬಿಂದುಮಣಿ ಅವರು ಸಲಹೆ ಮಾಡಿದರು. ಯುವಜನರು ಮಾದಕ ವಸ್ತುಗಳಿಗೆ ಬಲಿಯಾಗಬಾರದು. ಯಾವುದೇ…
ಮಡಿಕೇರಿ NEWS DESK ಆ.1 : ನೇಪಾಳದ ಕಾಟ್ಮಂಡ್ ನಲ್ಲಿ ನಡೆದ 3ನೇ ವಿಶ್ವ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಪದಕ ಗೆದ್ದುಕೊಂಡಿದ್ದಾರೆ. ಕೌಶಿಕ್ ಕುಮಾರ್ ಯು.ಸಿ., ಮಹಮ್ಮದ್ ಯಾಸಿನ್, ಮಹಮ್ಮದ್ ಹಫೀಸ್ ಚಿನ್ನದ ಪದಕವನ್ನು, ಅಜಯ್ ಎನ್.ಎಸ್., ಮನ್ವಿತ್ ಮೋಹನ್ ಎಂ., ಶ್ರಿಯಾನ್ ಗೌಡ ಡಿ.ಹೆಚ್., ಮಿತೇಶ್ ಜೆ. ಹಾಗೂ ರಿತನ್ ಡಿ.ಎಸ್ ಬೆಳ್ಳಿ ಪದಕವನ್ನು ಹಾಗೂ ಸಾತ್ವಿಕ ಬಿ.ಎಸ್. ಕಂಚಿನ ಪದಕ ಗೆದ್ದುಕೊಂಡರು. ಭಾರತ ತಂಡದಲ್ಲಿ ಕರ್ನಾಟಕ ರಾಜ್ಯದ 21 ಕ್ರೀಡಾಪಟುಗಳು ಭಾಗವಹಿಸಿ, 10 ಚಿನ್ನದ ಪದಕ, 8 ಬೆಳ್ಳಿ ಪದಕ ಹಾಗೂ 3 ಕಂಚಿನ ಪದಕ ಪಡೆದುಕೊಂಡರು. ಕೊಡಗು ಜಿಲ್ಲೆಯ 9 ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಕರ್ನಾಟಕ ರಾಜ್ಯ ಮಿಕ್ಸ್ ಬಾಕ್ಸಿಂಗ್ ಅಸೋಸಿಯೇಷನ್ ನ ಪ್ರಧಾನ ಕಾರ್ಯದರ್ಶಿ ಹಾಗೂ ತರಬೇತುದಾರ ಎನ್.ಸಿ.ಸುದರ್ಶನ್ ಅವರು ತರಬೇತಿಯನ್ನು ನೀಡಿದರು.
ಮಡಿಕೇರಿ ಜು.31 NEWS DESK : 2026ನೇ ಸಾಲಿನ ಗಣಕಯಂತ್ರ ಶಿಕ್ಷಣ ಪರೀಕ್ಷೆಯು ಆಗಸ್ಟ್, 3 ರಿಂದ 5 ರವರೆಗೆ ಮಡಿಕೇರಿಯ ಶ್ರೀನಿಕೇತನದಲ್ಲಿರುವ ಶ್ರೀ ಸದ್ಗುರು ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರಡಿ ದತ್ತವಾದ ಅಧಿಕಾರಿದಂತೆ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಭಂದಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ. ಈ ವ್ಯಾಪ್ತಿಯಲ್ಲಿ ಎಲ್ಲಾ ಜೆರಾಕ್ಸ್ ಅಂಗಡಿ ಮತ್ತು ಸೈಬರ್ ಸೆಂಟರ್‍ಗಳನ್ನು ಮುಚ್ಚಿಸುವಂತೆ ಸಹ ತಿಳಿಸಿದೆ. ಈ ಆದೇಶವು ಪರೀಕ್ಷಾ ದಿನಗಳಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಮಾತ್ರ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.
ಮಡಿಕೇರಿ ಜು.31 NEWS DESK : ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,395 ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಆಗಸ್ಟ್ 2 ರಂದು ಲಿಖಿತ ಪರೀಕ್ಞೆ ನಡೆಯಲಿದೆ. ಜಿಲ್ಲೆಯಲ್ಲಿ ಆಗಸ್ಟ್, 02 ರಂದು ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ವಿಭಾಗ, ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಸಂತ ಜೋಸೇಫರ ಕಾನ್ವೆಂಟ್ ಸಂಯುಕ್ತ ಪದವಿ ಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಲಿಖಿತ ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‍ಎಸ್‍ಎಸ್)–2023ರ ಕಲಂ 163 ರಡಿ ಪ್ರದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಭಂದಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ…






