ಲೇಖಕ: admin

ವಿರಾಜಪೇಟೆ ಜ.9 NEWS DESK : ಸಿದ್ದಾಪುರದ ಶ್ರೀ ದುರ್ಗಾ ಭಗವತಿ ದೇವಾಲಯದಲ್ಲಿ ತಿರು ಮಹೋತ್ಸವ ಪೂಜಾ ಕಾರ್ಯಕ್ರಮದ ಅಂಗವಾಗಿ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ವಿರಾಜಪೇಟೆಯ ನಾಟ್ಯಾಂಜಲಿ ನೃತ್ಯ ಶಾಲೆಯ ವಿದ್ಯಾರ್ಥಿಗಳು ಭಜನೆ ನೃತ್ಯ ಪ್ರದರ್ಶನ ನೀಡಿದರು. ನಂತರ ದೇವರ ಉತ್ಸವ ಮೂರ್ತಿಯ ಮೆರವಣಿಗೆಯಲ್ಲಿ ಭಜನೆ ನೃತ್ಯ ಪ್ರದರ್ಶನ ನೀಡಿ ಜನಮನ್ನಣೆ ಗಳಿಸಿ ಪ್ರಶಂಸೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ನೃತ್ಯ ಶಾಲೆಯ ಸಂಸ್ಥಾಪಕರಾದ ಹೇಮಾವತಿ ಕಾಂತರಾಜ್, ನೃತ್ಯ ಗುರುಗಳಾದ ಕಾವ್ಯಶ್ರೀ ಪಾಲ್ಗೊಂಡಿದ್ದರು.

Read More

ಬೆಂಗಳೂರು NEWS DESK ಜ.8 : ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.  ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಇವರ ವಿರುದ್ದದ ಪ್ರಕರಣಗಳ ಶೀಘ್ರ ಇತ್ಯರ್ಥ್ಕಕ್ಕೆ ಅಗತ್ಯವಾದ ಕ್ರಮಗಳನ್ನೂ ನಮ್ಮ ಸರ್ಕಾರ ಕೈಗೊಳ್ಳಲಿದೆ. ಅನ್ಯಾಯ-ಶೋಷಣೆ ವಿರುದ್ದದ ಪ್ರಜಾಸತ್ತಾತ್ಮಕವಾಗಿ ನಡೆಸುವ ಹೋರಾಟವನ್ನು ನಾನು ಸದಾ ಗೌರವಿಸುತ್ತಾ ಬಂದವನು.ನಮ್ಮ ಸಂವಿಧಾನದಲ್ಲಿಯೂ ಇದಕ್ಕೆ ಅವಕಾಶ ಇದೆ.ಕಾಡಿನಲ್ಲಿದ್ದುಕೊಂಡು ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಸುತ್ತಿದ್ದ ನಕ್ಸಲರು ಮನವೊಲಿಸಿ ಅವರನ್ನು ನಾಡಿಗೆ ಕರೆದು ತರುವ ಪ್ರಯತ್ನವನ್ನು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿಯೇ ನಮ್ಮ ಸರ್ಕಾರ  ಪ್ರಾರಂಭಿಸಿತ್ತು. ಕಳೆದ ಅವಧಿಯಲ್ಲಿ ಹನ್ನೆರಡು ಮಂದಿ ನಕ್ಸಲರು ಶರಣಾಗಿ ಬಂದು ಮುಖ್ಯವಾಹಿನಿ ಸೇರಿಕೊಂಡಿದ್ದರು. ಇದೀಗ ಆರು ಮಂದಿ ನಕ್ಸಲರು ಬಂದಿದ್ದಾರೆ. ಶರಣಾಗಿರುವ ನಕ್ಸಲರು. ಮುಂದಿನ ದಿನಗಳಲ್ಲಿ ಇವರೆಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ತಮ್ಮ ಬದುಕನ್ನು ಕಳೆಯಲಿದ್ದಾರೆ ಎಂಬ ನಂಬಿಕೆ ನನಗಿದೆ. ಈ ಆರು ಮಂದಿ ನಕ್ಸಲೀಯರ ಶರಣಾಗತಿಯ ನಂತರ…

Read More

ಮಡಿಕೇರಿ NEWS DESK ಜ.8 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಜಿಲ್ಲಾ ಪ್ರತಿನಿಧಿಗಳ ಸಭೆಯಲ್ಲಿ 5 ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಕುಶಾಲನಗರ ಸಮೀಪ ಕೊಪ್ಪದಲ್ಲಿ ನಡೆದ ಎಸ್‌ಡಿಪಿಐ ಸಭೆಯಲ್ಲಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಕಾರ್ಯದರ್ಶಿಗಳಾದ ಅಕ್ರಮ್ ಮೌಲಾನ, ಅಪ್ಸರ್ ಕೆ.ಆರ್ ನಗರ ಹಾಗೂ ಖಜಾಂಚಿ ಅಕ್ರಂ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚಿಸಲಾಯಿತು. ನಂತರ ಸರ್ವಾನುಮತದಿಂದ 5 ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಕೊಡಗಿನಲ್ಲಿ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಆನೆ ಮಾನವ ಸಂಘರ್ಷ ನಡೆಯುತ್ತಿದ್ದು, ಅನೇಕ ಕಾರ್ಮಿಕರು ಹಾಗೂ ಬೆಳೆಗಾರರು ಜೀವ ಕಳೆದುಕೊಂಡಿದ್ದಾರೆ. ಅರಣ್ಯ ಇಲಾಖೆ ಸಣ್ಣ ಪರಿಹಾರದ ಮೊತ್ತ ನೀಡಿ ಕೈ ತೊಳೆದುಕೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಜೀವಗಳು ಬಲಿಯಾಗುವ ಸಾಧ್ಯತೆ ಇದೆ. ಅರಣ್ಯ ಇಲಾಖೆ ಹಾಗೂ ಸರಕಾರ ತಕ್ಷಣ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಮಾತ್ರವಲ್ಲ ಜಿಲ್ಲೆಯ ಶಾಸಕರು ಈ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ಸರಕಾರದ ಗಮನ…

Read More

ಮಡಿಕೇರಿ NEWS DESK ಜ.8 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ನೂತನ ಜಿಲ್ಲಾಧ್ಯಕ್ಷರಾಗಿ ವಕೀಲ ಅಮೀನ್ ಮೊಹಿಸಿನ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಉಸ್ಮಾನ್ ಸುಂಟಿಕೊಪ್ಪ ಆಯ್ಕೆಯಾಗಿದ್ದಾರೆ. ಕುಶಾಲನಗರ ಸಮೀಪ ಕೊಪ್ಪದಲ್ಲಿ ನಡೆದ ಎಸ್‌ಡಿಪಿಐ ಕೊಡಗು ಜಿಲ್ಲಾ ಪ್ರತಿನಿಧಿಗಳ ಸಭೆಯಲ್ಲಿ ನೂತನ ಜಿಲ್ಲಾ ಸಮಿತಿಯನ್ನು ರಚಿಸಲಾಯಿತು. ಕಾರ್ಯದರ್ಶಿಯಾಗಿ ಬಶೀರ್ ಅಹ್ಮದ್, ಉಪಾಧ್ಯಕ್ಷರುಗಳಾಗಿ ಮನ್ಸೂರ್ ಆಲಿ ಮಡಿಕೇರಿ, ನಫೀಸಾ ಅಕ್ಬರ್, ಕೋಶಾಧಿಕಾರಿಯಾಗಿ ಅಕ್ಮಲ್ ಪಾಷಾ, ಸಮಿತಿ ಸದಸ್ಯರುಗಳಾಗಿ ಸ್ವಾಲಿಹ್ ಸೋಮವಾರಪೇಟೆ, ಬಶೀರ್ ಕೆ.ಸಿ, ಮೇರಿ ವೆಗಸ್ ಹಾಗೂ ಅಬ್ದುಲ್ ಅಡ್ಕಾರ್ ಆಯ್ಕೆಯಾದರು. ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಕಾರ್ಯದರ್ಶಿಗಳಾದ ಅಕ್ರಮ್ ಮೌಲಾನ, ಅಪ್ಸರ್ ಕೆ.ಆರ್ ನಗರ ಹಾಗೂ ಖಜಾಂಚಿ ಅಕ್ರಂ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚಿಸಲಾಯಿತು. ನಂತರ ಸರ್ವಾನುಮತದಿಂದ 5 ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

Read More

ಮಡಿಕೇರಿ ಜ.8 NEWS DESK : ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ, ಜಿ.ಟಿ.ರಸ್ತೆ ಫೀಡರ್‍ನಲ್ಲಿ ವಿದ್ಯುತ್ ವಾಹಕ ಬದಲಾವಣೆ ಕಾಮಗಾರಿಯನ್ನು ಜ.9 ರಂದು ಬೆಳಗ್ಗೆ 10 ರಿಂದ ಸಂಜೆ 5  ಗಂಟೆವರೆಗೆ ನಿರ್ವಹಿಸಲಾಗುವುದು. ಆದ್ದರಿಂದ ಮಡಿಕೇರಿ, ಜಲಾಶ್ರಯ ಬಡಾವಣೆ, ಜಯನಗರ, ಅಶೋಕಪುರ, ಜಿ.ಟಿ ರಸ್ತೆ, ಮಂಗಳಾದೇವಿ ನಗರ,  ಅರಣ್ಯ ಭವನ, ಚೈನ್‍ಗೇಟ್ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More

ಮಡಿಕೇರಿ ಜ.8 NEWS DESK : ಸಾರ್ವಜನಿಕರ ಸಮಸ್ಯೆಗಳನ್ನು ಸಕಾಲದಲ್ಲಿ ಇತ್ಯರ್ಥಪಡಿಸಲು ಅಧಿಕಾರಿಗಳು ಶ್ರಮಿಸುವಂತೆ ಲೋಕಾಯುಕ್ತ ಪೊಲೀಸ್ ಉಪ ಅಧೀಕ್ಷಕರಾದ ಕೆ.ಸಿ.ಪ್ರಕಾಶ್ ಅವರು ಸೂಚಿಸಿದ್ದಾರೆ. ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿ ಸ್ವೀಕರಿಸಿ ಅವರು ಮಾತನಾಡಿದರು. ಎಲ್ಲಾ ಕಚೇರಿಗಳಲ್ಲಿ ಲೋಕಾಯುಕ್ತ ಕಾಯ್ದೆಯ ಮಾಹಿತಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಸೂಚಿಸಿದರು. ಸರ್ಕಾರಿ ಅಧಿಕಾರಿಗಳು ಸಾರ್ವಜನಿಕ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಉತ್ತರಾದಾಯಿತ್ವ ಹೊಂದಿರಬೇಕು ಎಂದು ಕಿವಿಮಾತು ಹೇಳಿದರು. ಕಂದಾಯ, ಪಂಚಾಯತ್ ರಾಜ್, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ತಮ್ಮ ಕೆಲಸಕ್ಕಾಗಿ ಭೇಟಿ ನೀಡುತ್ತಾರೆ. ಆದ್ದರಿಂದ ಸಾರ್ವಜನಿಕರಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸುವುದು ಅಧಿಕಾರಿ ಮತ್ತು ಸಿಬ್ಬಂದಿಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಸಾರ್ವಜನಿಕವಾಗಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದಾಗ ಹಲವು ಸಮಸ್ಯೆಗಳನ್ನು ಇತ್ಯರ್ಥಪಡಿಸಬಹುದು ಎಂದು ಹೇಳಿದರು. ವಿದ್ಯಾರ್ಥಿ ನಿಲಯಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು. ಗುಣಮಟ್ಟದ ಆಹಾರ…

Read More

ಮಡಿಕೇರಿ ಜ.8 NEWS DESK : ನಗರಸಭೆ ವ್ಯಾಪ್ತಿಯ ಕರ್ಣಂಗೇರಿ ಗ್ರಾಮ ಬಳಿಯ ಉಕ್ಕುಡದಲ್ಲಿ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಬುಧವಾರ ಚಾಲನೆ ನೀಡಿದರು. ಗೃಹಭಾಗ್ಯ ಯೋಜನೆಯಡಿ ತಲಾ 7.50 ಲಕ್ಷ ರೂ. ವೆಚ್ಚದಲ್ಲಿ 12 ಮನೆಗಳಿಗೆ ಸುಮಾರು 90 ಲಕ್ಷ ರೂ. ವೆಚ್ಚದಲ್ಲಿ ನೆಲಮಹಡಿ ಸೇರಿ ಮೂರು ಅಂತಸ್ತಿನ ಹನ್ನೆರಡು ಮನೆಗಳನ್ನು ಒಳಗೊಂಡ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಗೆ ಶಾಸಕರಾದ ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಮಂತರ್ ಗೌಡ ಅವರು ಸರ್ಕಾರ ಪೌರಕಾರ್ಮಿಕರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿ ವಹಿಸಿದೆ. ಪೌರಕಾರ್ಮಿಕರು ಪ್ರತಿ ನಿತ್ಯ ನಗರ ಪಟ್ಟಣ ಪ್ರದೇಶದಲ್ಲಿ ಸ್ವಚ್ಛತೆಗೆ ದುಡಿಯುತ್ತಾರೆ. ಇವರಿಗೆ ಮೂಲಸೌಲಭ್ಯ ಕಲ್ಪಿಸುವುದು ಹೆಚ್ಚಿನ ಆದ್ಯತೆಯಾಗಿದೆ. ಆ ನಿಟ್ಟಿನಲ್ಲಿ ಶೀಘ್ರ ಮನೆ ನಿರ್ಮಾಣದ ಕಾಮಗಾರಿ ಆರಂಭಿಸಿ, ಪೂರ್ಣಗೊಳಿ¸ಬೇಕು ಎಂದು ಡಾ.ಮಂತರ್ ಗೌಡ ಅವರು ತಾಕೀತು ಮಾಡಿದರು. ಸರ್ಕಾರ ಎಲ್ಲಾ ವರ್ಗದ…

Read More

ಕುಶಾಲನಗರ ಜ.8 NEWS DESK : ಅನುಗ್ರಹ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವವು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕೂಡಿಗೆಯ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಎನ್.ಪುಷ್ಪ ಮಾತನಾಡಿ, ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಸಂಸ್ಕಾರ ಮತ್ತು ವಿನಯತೆಯನ್ನು ಬೆಳೆಸಿಕೊಂಡಾಗ ಮಾತ್ರ ಕಲಿತ ವಿದ್ಯೆ ಸಾರ್ಥಕವಾಗಿ ಸಮಾಜದಲ್ಲಿ ಅತ್ಯುತ್ತಮ ಪ್ರಜೆಯಾಗುವುದಕ್ಕೆ ಸಾಧ್ಯ.ಶಿಕ್ಷಣವು ಅಂಕ ಆಧಾರಿತವಾಗುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಾಡಿದ ಸಾಧನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅನುಗ್ರಹ ಎಜುಕೇಷನ್ ಟ್ರಸ್ಟ್ ನ ಅಧ್ಯಕ್ಷ ಎಸ್.ಕೆ.ಸತೀಶ್, ವಿದ್ಯಾರ್ಥಿಗಳು ಕೀಳರಿಮೆಯಿಂದ ಹೊರ‌ಬಂದು ಆತ್ಮವಿಶ್ವಾಸವನ್ನು ಬೆಳೆಸಿಕೊಂಡಾಗ ಮಾತ್ರ ಮುಂದೆ ಸಮಾಜದಲ್ಲಿ ಅತ್ತ್ಯುನ್ನತ ಹುದ್ದೆಯನ್ನು ಅಲಂಕರಿಸುವುದಕ್ಕೆ ಸಾಧ್ಯ. ವಿದ್ಯಾರ್ಥಿಗಳು ಕೇವಲ ಅಂಕ ಪಡೆಯುವ ಯಂತ್ರಗಳಾಗದೆ, ವ್ಯಕ್ತಿತ್ವವನ್ನು ವಿಕಸನ ಮಾಡಿಕೊಳ್ಳಬೇಕಾಸ ಅಗತ್ಯವನ್ನು ನೀತಿ ಕಥೆಯ ಮೂಲಕ ಸಾದರ ಪಡಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಹೆಚ್ ಬಿ.ಲಿಂಗಮೂರ್ತಿ ಅಧ್ಯಕ್ಷತೆಯಲ್ಲಿ ನಡೆದ…

Read More

ಸೋಮವಾರಪೇಟೆ ಜ.8 NEWS DESK : ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಎಸ್.ಬಿ.ಭರತ್ ಕುಮಾರ್ ಮತ್ತು ಉಪಾಧ್ಯಕ್ಷರಾಗಿ ಹೆಚ್.ಎಸ್.ನೇತ್ರಾವತಿ ಆಯ್ಕೆಯಾಗಿದ್ದಾರೆ. ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಭರತ್ ಕುಮಾರ್ ಮತ್ತು ಕಾಂಗ್ರೆಸ್ ಬೆಂಬಲಿತ ಹೆಚ್.ಆರ್.ಸುರೇಶ್ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ನೇತ್ರಾವತಿ ಮತ್ತು ಪಕ್ಷೇತರವಾಗಿ ಸ್ಪರ್ಧಿಸಿ ಗೆಲವು ಸಾಧಿಸಿದ್ದ ಬಿ.ಪಿ.ಮೊಗಪ್ಪ ನಾಮಪತ್ರ ಸಲ್ಲಿಸಿದ್ದರು. ಆಕಾಂಕ್ಷಿಗಳು ನಾಮಪತ್ರ ವಾಪಾಸ್ಸು ಪಡೆಯದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಬಿ.ಜೆ.ಸಂದೀಪ್ ಮತದಾನಕ್ಕೆ ಅವಕಾಶ ಮಾಡಿಕೊಟ್ಟರು. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 8-5 ಮತಗಳ ಅಂತರದಿಂದ ಗೆಲವು ಸಾಧಿಸಿದರು. ಕಳೆದ ಸಾಲಿನ ಅಧ್ಯಕ್ಷರಾಗಿದ್ದ ಹೆಚ್.ಆರ್.ಸುರೇಶ್ ಕೂಡ 5 ಮತಗಳನ್ನು ಪಡೆದರು. 13 ಸದಸ್ಯರನ್ನು ಹೊಂದಿರುವ ಆಡಳಿತ ಮಂಡಳಿಗೆ 8 ಬಿಜೆಪಿ, 4 ಕಾಂಗ್ರೆಸ್ ಬೆಂಬಲಿತರು ಹಾಗೂ ಓರ್ವ ಪಕ್ಷೇತರರು ಆಯ್ಕೆಯಾಗಿದ್ದರು. ಚುನಾವಣೆಯ ಸಂದರ್ಭ ಆಡಳಿತ ಮಂಡಳಿ ನಿರ್ದೇಶಕರುಗಳಾದ ಕೆ.ಕೆ.ಶಿವಪ್ರಕಾಶ್, ಜಿ.ಎಂ.ಹೂವಯ್ಯ, ಎ.ಎಸ್.ನವೀನ್ ಕುಮಾರ್, ಜಿ.ಎಸ್.ಪ್ರಸನ್ನ, ಎಸ್.ಸಿ.ಸುನಿತಾ, ಕೆ.ಜಿ.ದಿನೇಶ್,…

Read More

ಮಡಿಕೇರಿ ಜ.8 NEWS DESK : ರಾಜ್ಯ ಮತ್ತು ಬಹುಸಂಖ್ಯಾತ ಸಮುದಾಯಗಳು ಕೊಡವರಂತಹ ಆದಿಮಸಂಜಾತ ಸಮುದಾಯಗಳ ಅನನ್ಯ ಅಸ್ಮಿತೆ ಸಾಂಸ್ಕೃತಿಕ, ಭಾಷಿಕ, ಸಾಂಪ್ರದಾಯಿಕ ಹಕ್ಕುಗಳನ್ನು ಗುರುತಿಸಬೇಕು ಮತ್ತು ರಕ್ಷಿಸಬೇಕು. ಸಂವಿಧಾನೇತರ ಶಕ್ತಿಗಳಾದ ದರ್ಶಕರು ಹಾಗೂ ಮಠಾಧೀಶರು ಸರಕಾರಿ ವ್ಯವಹಾರಗಳಲ್ಲಿ ಅಥವಾ ಕೊಡವರ ಹಕ್ಕುಗಳಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಾಂವಿಧಾನಿಕ ಆಡಳಿತವನ್ನು ಎತ್ತಿಹಿಡಿಯುವ ಮತ್ತು ಆದಿಮಸಂಜಾತ ಕೊಡವ ಸಮುದಾಯದ ಹಕ್ಕುಗಳನ್ನು ರಕ್ಷಿಸುವ ಮಹತ್ವವನ್ನು ಸಿಎನ್‍ಸಿ ಒತ್ತಿ ಹೇಳುತ್ತದೆ ಎಂದು ಹೇಳಿದ್ದಾರೆ. ಸಾಂವಿಧಾನಿಕ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸಂವಿಧಾನೇತರ ಶಕ್ತಿಗಳಾದ ದರ್ಶಕರು ಹಾಗೂ ಮಠಾಧೀಶರು ಸರಕಾರಿ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಬಾರದು. ಕೊಡವರಂತಹ ಆದಿಮಸಂಜಾತ ಸಮುದಾಯಗಳು ಸೇರಿದಂತೆ ಎಲ್ಲಾ ನಾಗರೀಕರ ಸುರಕ್ಷತೆ, ರಕ್ಷಣೆ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವುದು ರಾಜ್ಯದ ಕರ್ತವ್ಯವಾಗಿದೆ. ಬಹುಸಂಖ್ಯಾತ ಸಮುದಾಯಗಳು ಅಲ್ಪಸಂಖ್ಯಾತ ಸಮುದಾಯಗಳ ಹಕ್ಕುಗಳು, ಸ್ವಾಭಿಮಾನ ಮತ್ತು ಗುರುತನ್ನು ಗೌರವಿಸಬೇಕು ಮತ್ತು ರಕ್ಷಿಸಬೇಕು. ಬಹುಸಂಖ್ಯಾತರ ಜನಸಂಖ್ಯಾ ತೂಕದ ಮೂಲಕ…

Read More