ನಾಪೋಕ್ಲು ಜ.8 NEWS DESK : ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರಿಗೂ ಶಿಕ್ಷಕರಷ್ಟೇ ಜವಾಬ್ದಾರಿ ಇರುತ್ತದೆ. ಪೋಷಕರು ತಮ್ಮ ಮಕ್ಕಳ ಮೇಲೆ ಸದಾ ಕಾಳಜಿಯ ಕಣ್ಣಿಟ್ಟಿರಬೇಕು ಎಂದು ಮಡಿಕೇರಿಯ ಜಿಲ್ಲಾ ನ್ಯಾಯಾಲಯದ ವಕೀಲರು ಹಾಗೂ ಬಾರ್ ಕೌನ್ಸಿಲ್ ಅಧ್ಯಕ್ಷ ಎಂ.ಎ.ನಿರಂಜನ್ ಹೇಳಿದರು. ಮೂರ್ನಾಡಿನ ಮಾರುತಿ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡೋತ್ಸವದ ಅಂಗವಾಗಿ ವಿದ್ಯಾರ್ಥಿ ನಾಯಕರಿಂದ ಗೌರವ ವಂದನೆ ಹಾಗೂ ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಮೊಬೈಲ್, ಸಾಮಾಜಿಕ ಜಾಲತಾಣಗಳಿಂದ ಸಂಪೂರ್ಣ ದೂರವಿರಬೇಕು. ದುಶ್ಚಟಗಳಿಗೆ ಬಲಿಯಾಗದಂತೆ ಉತ್ತಮ ಗೆಳೆಯರ ಒಡನಾಟವನ್ನು ಹೊಂದಿರಬೇಕು. ಶೈಕ್ಷಣಿಕವಾಗಿ ದೊರೆಯುವ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಮಾನವೀಯತೆಯೊಂದಿಗೆ ಬದುಕು ಮತ್ತು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಮಾರುತಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಮುಂಡಂಡ ಕೆ.ಅಪ್ಪಚ್ಚು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ, ಪೋಷಕರ ನಿರಂತರ ಸಹಕಾರದಿಂದ ಶಾಲೆ ಪ್ರಗತಿಯನ್ನು ಹೊಂದುತ್ತಿದೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಅವಧಿಯಲ್ಲಿ ಉತ್ತಮ ಹವ್ಯಾಸದ ಜೊತೆಗೆ ತಮ್ಮಲ್ಲಿರುವ ಪ್ರತಿಭೆಯನ್ನು…
ಲೇಖಕ: admin
ನಾಪೋಕ್ಲು ಜ.8 NEWS DESK : ಪಾಡಿ ಶ್ರೀ ಇಗ್ಗುತ್ತಪ್ಪ ದೇವರ ಆದಿಸ್ಥಾನ ಮಲ್ಮದಲ್ಲಿ ಸಂಪ್ರದಾಯದಂತೆ ಪುದಿಯಕ್ಕಿ ನೈವೇದ್ಯ (ಹೊಸ ಅಕ್ಕಿ ನೈವೇದ್ಯ)ವನ್ನು ಶ್ರದ್ಧಾಭಕ್ತಿಯಿಂದ ದೇವರಿಗೆ ಅರ್ಪಿಸಲಾಯಿತು. ಈ ಸಂದರ್ಭ ಪಾಡಿ, ನೆಲಜಿ, ಪೇರೂರು ಗ್ರಾಮಗಳಿಂದ ತಕ್ಕ ಮುಖ್ಯಸ್ಥರು ಪಾಲ್ ಬೈವಾಡ್ ಸಮೇತ ಆಗಮಿಸಿದ್ದರು. ದೇವತಕ್ಕ ಪರದಂಡ ಪ್ರಿನ್ಸ್ ತಮ್ಮಪ್ಪ ಹೊಸ ಅಕ್ಕಿಯ ನೈವೇದ್ಯ ಅರ್ಪಣೆ ಮಾಡಿ ಸರ್ವ ಜನಾಂಗದ ಶ್ರೇಯೋಭಿವೃದ್ಧಿಗೆ, ನಾಡಿನ ಸುಭಿಕ್ಷೆಗೆ ಪ್ರಾರ್ಥನೆ ಸಲ್ಲಿಸಿದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜ.8 NEWS DESK : ದೊಡ್ಡಬಳ್ಳಾಪುರದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕಬಡ್ಡಿ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲೆಯ ನೈಜ ಪ್ರತಿಭಾನ್ವಿತ ಕಬಡ್ಡಿ ಆಟಗಾರರಿಗೆ ಆಟವಾಡಲು ಅವಕಾಶ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಕುಶಾಲನಗರ ಫ್ರೆಂಡ್ಸ್ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಎಸ್.ಆದಂ ಹಾಗೂ ಕಬಡ್ಡಿ ಆಟಗಾರರು ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಆದಂ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ಜನವರಿ 6ರಿಂದ 8 ರವರೆಗೆ ದೊಡ್ಡಬಳ್ಳಾಪುರದಲ್ಲಿ ರಾಜ್ಯ ಮಟ್ಟದ ಕಬಡ್ಡಿ ಚಾಂಪಿಯನ್ ಶಿಪ್ ಪಂದ್ಯಾವಳಿ ನಡೆದಿದೆ. ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಕೊಡಗಿನ ಪ್ರತಿಭಾವಂತ ಕಬಡ್ಡಿ ಆಟಗಾರರು ಉತ್ಸುಕರಾಗಿದ್ದರು. ಆದರೆ ಆಟಗಾರರ ಆಯ್ಕೆಯು ನಿಯಮಬಾಹಿರವಾಗಿ ನಡೆದಿರುವುದರಿಂದ ಸ್ಥಳೀಯ ಆಟಗಾರರಿಗೆ ಅನ್ಯಾಯವಾಗಿದೆ. ಕೊಡಗಿನ ಆಸಕ್ತ ಆಟಗಾರರು ಕುಶಾಲನಗರದ ಜ್ಞಾನ ಭಾರತಿ ಶಾಲಾ ಮೈದಾನಕ್ಕೆ ತೆರಳಿ ಕೊಡಗು ಜಿಲ್ಲೆಯ ಕಬಡ್ಡಿ ಅಸೋಸಿಯೇಷನ್ ನಡೆಸಿದ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಉತ್ತಮವಾಗಿ ಆಟವಾಡುವ ಆಟಗಾರರನ್ನು ಆಯ್ಕೆ ಮಾಡದೆ ಮತ್ತು ಆಯ್ಕೆ ಪ್ರಕ್ರಿಯೆಯಲ್ಲಿ…
ಸೋಮವಾರಪೇಟೆ ಜ.8 NEWS DESK : ಸಮಾಜಸೇವೆಯಿಂದ ಸಿಗುವ ಸಂತೃಪ್ತಿ ಬೇರೆ ಯಾವುದೇ ವೃತ್ತಿಯಲ್ಲಿ ಸಿಗುವುದಿಲ್ಲ ಎಂದು ಇನ್ನರ್ ವ್ಹೀಲ್ ಕ್ಲಬ್‍ನ ಜಿಲ್ಲಾಧ್ಯಕ್ಷೆ ವೈಶಾಲಿ ಕುಡ್ವಾ ಹೇಳಿದರು. ಇನ್ನರ್ ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ಗೆ ಭೇಟಿ ನೀಡಿ ನಂತರ ಒಕ್ಕಲಿಗರ ಸಂಘದ ಶ್ರೀಗಂಧಹಾಲ್‍ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವು ಸಂಪಾದಿಸಿದ ಹಣದಲ್ಲಿ ಒಂದಷ್ಟು ಭಾಗವನ್ನು ಸಮಾಜಸೇವೆಗೆ ಬಳಸಬೇಕು. ತಾಯಿಯಂದಿರು ಗಂಡು ಮಕ್ಕಳಿಗೆ ಸಭ್ಯತೆ ಹಾಗೂ ಮೌಲ್ಯಧಾರಿತ ಬದುಕು ಕಟ್ಟಿಕೊಳ್ಳುವ ಪಾಠವನ್ನು ಹೇಳಿಕೊಡಬೇಕು ಎಂದು ಮನವಿ ಮಾಡಿದ ಅವರು, ಹೆಣ್ಣು ಮಕ್ಕಳು ತಮ್ಮ ರಕ್ಷಣೆಗೆಬೇಕಾದ ವಿದ್ಯೆಯನ್ನು ಕಲಿತುಕೊಳ್ಳಬೇಕು. ಪೋಷಕರು ಅಂತಹ ವಿದ್ಯೆ ಕಲಿಯಲು ಪ್ರೋತ್ಸಾಹ ನೀಡಬೇಕು. ಅತ್ಯಾಚಾರದಂತಹ ಘಟನೆಗಳು ನಡೆದಾಗ ಪ್ರತಿಭಟನೆ ಮಾಡಿ ಪ್ರಯೋಜನವಿಲ್ಲ. ಬಲಿಷ್ಠ ಕಾನೂನು ಅವಶ್ಯಕವಾಗಿದೆ ಎಂದು ಹೇಳಿದರು. ಸೋಮವಾರಪೇಟೆ ಕ್ಲಬ್ ಉತ್ತಮ ಜನಪರ ಕಾರ್ಯಕ್ರಮಗಳನ್ನು ನಿರ್ವಹಿಸಿದೆ ಎಂದು ಶ್ಲಾಘೀಸಿದರು. ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಅಳವಡಿಸಲಾಗಿದ್ದ ಡಿಜಿಟಲ್…
ಸೋಮವಾರಪೇಟೆ ಜ.8 NEWS DESK : ತೋಳೂರುಶೆಟ್ಟಳ್ಳಿ ನಡ್ಲಕೊಪ್ಪ ಗುಂಪು ಸಮಿತಿಯ ವಾರ್ಷಿಕ ಮಹಾಸಭೆ ಇಬ್ಬನಿ ಹೋಂಸ್ಟೇಯಲ್ಲಿ ನಡೆಯಿತು. ಸಮಿತಿ ಅಧ್ಯಕ್ಷ ಟಿ.ಕೆ.ಮಾಚಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿ.ಪಂ ಸಹಾಯಕ ಕಾರ್ಯಪಾಲಕ ಅಭಿಯಂತರ ಎಂ.ಪಿ.ವೀರೇಂದ್ರ, ನಿವೃತ್ತ ಮುಖ್ಯ ಶಿಕ್ಷಕ ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಸಿ.ಕೆ.ಶಿವಕುಮಾರ್ ಅವರುಗಳನ್ನು ಸನ್ಮಾನಿಸಲಾಯಿತು. ಈ ಸಂರ್ಭ ಸಮಿತಿ ಕಾರ್ಯದರ್ಶಿ ವಿ.ವಿ.ಸೋಮಯ್ಯ, ಖಜಾಂಚಿ ಎಂ.ಕೆ.ಧರ್ಮಪ್ಪ, ಗ್ರಾಮದ ಮುಖಂಡರಾದ ಹೆಚ್.ಬಿ.ರಮೇಶ, ಸುಬ್ಬಯ್ಯ, ಶಾಂತಪ್ಪ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ. ಮಲ್ಲಪ್ಪ ಮತ್ತಿತರರು ಇದ್ದರು.
ಸೋಮವಾರಪೇಟೆ ಜ.7 NEWS DESK : ಯಡೂರು ಗ್ರಾಮದ ಬಿ.ಟಿ.ಚೆನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿ ಸಭೆ ನಡೆಯಿತು. ಸಮಿತಿ ಅಧ್ಯಕ್ಷ ಶಾಸಕ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಲೇಜಿನ ಶೈಕ್ಷಣಿಕ ಮತ್ತು ಆಡಳಿತಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲಾಯಿತು. ಕಾಲೇಜು ತರಗತಿಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳ ಪ್ರವೇಶಾತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವುದು, ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳನ್ನು ಕಾಲೇಜಿನಲ್ಲಿ ನಿರಂತರವಾಗಿ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದೇ ಸಂದರ್ಭ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆಸಲು ಶಾಸಕರಿಗೆ ಮನವಿ ಮಾಡಿದರು. ಶಾಸಕರು ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಮಗ್ರ ವಿಕಾಸಕ್ಕೆ ಪೂರಕವಾಗಿ ಚಟುವಟಿಕೆಗಳನ್ನು ಕೈಗೊಳ್ಳಬೇಕು. ವಿದ್ಯಾರ್ಥಿಗಳು ಡ್ರಗ್ಸ್, ಧೂಮಪಾನ ಮದ್ಯಪಾನಗಳಂತಹ ವ್ಯಸನಗಳ ಕಡೆ ವಾಲುವುದಕ್ಕೆ ಅವಕಾಶ ಮಾಡಿಕೊಡಬಾರದು. ವಿದ್ಯಾರ್ಥಿ ಹಾಜರಾತಿ ಕಡೆ ಸೂಕ್ತ ಗಮನ ನೀಡಬೇಕು. ಆಗಾಗ್ಗೆ ಪೋಷಕರ ಸಭೆ ಕರೆದು ವಿದ್ಯಾರ್ಥಿಗಳ ಪ್ರಗತಿ, ಕಲಿಕೆಯ…
ಮಡಿಕೇರಿ NEWS DESK ಡಿ.8 : ಮಡಿಕೇರಿ ನಗರಸಭಾ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಚಾಲನೆ ನೀಡಿದರು.
ಮಡಿಕೇರಿ ಜ.8 NEWS DESK : ಗಂಗೂಬಾಯಿ ಹಾನಗಲ್ ವಿಶ್ವ ವಿದ್ಯಾಲಯ ಮೈಸೂರು ನಡೆಸುವ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಮಡಿಕೇರಿಯ ಕಲಾ ಕಾವ್ಯ ನಾಟ್ಯ ಶಾಲೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದು ಉತ್ತೀರ್ಣರಾಗುವ ಮೂಲಕ ಶಾಲೆಗೆ ಶೇ.100 ರಷ್ಟು ಫಲಿತಾಂಶ ನೀಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ನೃತ್ಯಗುರು ವಿದುಷಿ ಕಾವ್ಯಶ್ರೀ ಕಪಿಲ್ ದುಗ್ಗಳ ಸಾಧನೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಜ.8 NEWS DESK : ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ಕೊಡವ ಕುಟುಂಬಗಳ ನಡುವಿನ ಹಾಕಿ ಉತ್ಸವದ 25ನೇ ವರ್ಷದ ಪಂದ್ಯಾವಳಿಯ ಜವಾಬ್ದಾರಿ ವಹಿಸಿರುವ ಮುದ್ದಂಡ ಕುಟುಂಬಸ್ಥರು ಹಾಗೂ ಪ್ರಮುಖರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿಯಾಗಿ ಜ.11ರಂದು ಮಡಿಕೇರಿಯಲ್ಲಿ ನಡೆಯಲಿರುವ ಮುದ್ದಂಡ ಕಪ್ ತಯಾರಿಗೆ ಲೋಗೋ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಲು ಆಮಂತ್ರಣ ನೀಡಿˌ ಹಾಕಿ ಉತ್ಸವ ಯಶಸ್ವಿಯಾಗಿ ಜರುಗಲು ಅಗತ್ಯ ಸಹಕಾರ ಹಾಗೂ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
ವಿರಾಜಪೇಟೆ ಜ.8 NEWS DESK : ಟಿ.ಶೆಟ್ಟಿಗೇರಿಯ ರೂಟ್ಸ್ ವಿದ್ಯಾಸಂಸ್ಥೆಯಲ್ಲಿ ಕೊಡವ ಕೂಟಾಳಿಯಡ ಕೂಟದ ಸಂಘಟನೆಯಿಂದ ಕೊಡವ ಆಟ್ ಪಾಟ್ ಪಡಿಪು ಶಿಬಿರದ ಸಮಾರೋಪ ಸಮಾರಂಭವು ಕೂಟದ ಅಧ್ಯಕ್ಷ ಚೆಟ್ಟೋಳಿರ ಶರತ್ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರೂಟ್ಸ್ ವಿದ್ಯಾ ಸಂಸ್ಥೆಯ ಮುಖ್ಯಸ್ಥರಾದ ಮಲ್ಲಂಗಡ ನಿರನ್ ಉತ್ತಪ್ಪ ಮಾತನಾಡಿ, ಕೊಡವ ಕೂಟಾಳಿಯಡ ಕೂಟದ ಸಂಘಟನೆಯು ಸುಮಾರು ಐದು ವರ್ಷಗಳಿಂದ ಕೊಡವಾಮೆಯನ್ನು ಉಳಿಸುವ ಸಲುವಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುವುದು ಶ್ಲಾಘನೀಯ. ಕಳೆದ ವರ್ಷ ಇದೇ ಸಂಘಟನೆಯು ನಮ್ಮ ಶಾಲೆಯ ಮಕ್ಕಳಿಗೆ ಕೊಡವ ಪದ್ದತಿಯಲ್ಲಿ ಸಮ್ಮಂಧ ಅಡಕುವ ಶಿಬಿರವನ್ನು ನಡೆಸಿ ಮಕ್ಕಳಿಗೆ ತರಬೇತಿ ನೀಡಿ ಯಶಸ್ವಿಯಾಗಿದ್ದಾರೆ. ಇವರ ತರಬೇತಿಯಲ್ಲಿ ಪಳಗಿದ ಮಕ್ಕಳು ಮದುವೆ ಸಮಾರಂಭದಲ್ಲಿ ಭಾಗಿಯಾಗಿ ಯಶಸ್ವಿಯಾಗಿ ಸಮ್ಮಂಧ ಅಡಕಿರುವುದು ಹಾಗೂ ಈ ವರ್ಷದಲ್ಲಿ ಇದೇ ಸಂಘಟನೆಯವರು ನಡೆಸಿದ ಆಟ್ ಪಾಟ್ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳು ಕೋಲಾಟ್, ಬೊಳಕಾಟನ್ನು ಕಲಿತು ಮಂದ್, ಕೊಡವ ಸಮಾಜಗಳಲ್ಲಿ ಪ್ರದರ್ಶನ ನೀಡಿ…






