ಬೆಂಗಳೂರು NEWS DESK ಜ.7 : ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಸಮಾಲೋಚನೆ ನಡೆಸಿದರು. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಸಂಸದರು ಭೇಟಿ ಮಾಡಿದರು. ಮೈಸೂರಿನಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಯೋಜನೆಗಳು ಹಾಗೂ ಮುಂಬರುವ ಯೋಜನೆಗಳ ಕುರಿತು ಮುಖ್ಯ ಕಾರ್ಯದರ್ಶಿಗಳಿಗೆ ಮನವರಿಕೆ ಮಾಡಿಕೊಟ್ಟರು. ಮೈಸೂರಿನ ಎಲ್ಲಾ ಯೋಜನೆಗಳಿಗೂ ಸೂಕ್ತ ನೆರವು, ಬೆಂಬಲ ಒದಗಿಸಲಾಗುವುದು ಎಂದು ಮುಖ್ಯಕಾರ್ಯದರ್ಶಿಗಳು ಇದೇ ಸಂದರ್ಭ ಭರವಸೆ ನೀಡಿದ್ದಾರೆ ಎಂದು ಸಂಸದರು ತಿಳಿಸಿದರು.
ಲೇಖಕ: admin
ಮಡಿಕೇರಿ ಜ.7 NEWS DESK : ಇತ್ತೀಚಿಗೆ ನಿಧನರಾದ ಸಿದ್ದಾಪುರ ಭಾಗದ ಡಿಸಿಸಿ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ದಿವಂಗತ ಮೂಸ ಅವರ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಂತ್ವಾನ ಹೇಳಿದರು. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ಸಹಾಯದ ಅಗತ್ಯವಿದ್ದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷವು ಸದಾ ನಿಮ್ಮೊಂದಿಗಿದೆ ಎಂಬ ಭರವಸೆ ನೀಡಿದರು. ಇದೇ ಸಂದರ್ಭ ಕುಟುಂಬಸ್ಥರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಚೆಕ್ ಹಸ್ತಾಂತರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣ್ಣಚ್ಚ, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಹನೀಫ್, ಕೆಡಿಪಿ ವಿರಾಜಪೇಟೆ ಸದಸ್ಯ ಕೋಲುಮಂಡ ರಫೀಕ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಹಾಜರಿದ್ದರು.
ಮಡಿಕೇರಿ NEWS DESK ಜ.7 : ಶ್ರೀ ಮಹಾಮೃತ್ಯುಂಜಯ ದೇವಸ್ಥಾನ ಎಂದು ಮರು ನಾಮಕರಣಗೊಂಡಿರುವ ಕಟ್ಟೆಮಾಡು ಗ್ರಾಮದ ಪುರಾತನ ಮಹಾದೇವ ದೇವಸ್ಥಾನವನ್ನು ಸರಕಾರ ತನ್ನ ಅಧೀನಕ್ಕೆ ಒಳಪಡಿಸಿಕೊಳ್ಳಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೆಲವರು ದೇವಾಲಯದ ಮೇಲೆ ಹಿಡಿತ ಸಾಧಿಸಿದ್ದು, ಆದಿಮಸಂಜಾತ ಕೊಡವರನ್ನು ಕಡೆಗಣಿಸಿದ್ದಾರೆ. ಕುಪ್ಯಚೇಲೆ ಧರಿಸಿ ದೇವಾಲಯಕ್ಕೆ ಹೋದವರನ್ನು ತಡೆದು ಅವಮಾನಿಸಲಾಗಿದೆ. ಇದು ಸಂವಿಧಾನ ವಿರೋಧಿ ಧೋರಣೆಯಾಗಿದೆ ಎಂದು ಆರೋಪಿಸಿದ್ದಾರೆ. ಬೈಲಾ ತಿದ್ದುಪಡಿ ಮಾಡುವಂತೆ ಸೂಚನೆ ಇದ್ದರೂ ಡ್ರೆಸ್ ಕೋಡ್ ಹೇರಲಾಗುತ್ತಿದೆ. ಸಮಿತಿ ಸಂವಿಧಾನ ವಿರೋಧಿ ಧೋರಣೆಗಳನ್ನು ಅನುಸರಿಸುತ್ತಿರುವುದರಿಂದ ಸರಕಾರ ದೇವಾಲಯದ ಮೇಲೆ ಹಿಡಿತ ಸಾಧಿಸಬೇಕು ಮತ್ತು ಆರೋಪಗಳ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಮುಜರಾಯಿ ಸಚಿವರಿಗೂ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಕೊಡವ ಸಾಂಸ್ಕೃತಿಕ ಪರಂಪರೆಯ ರಕ್ಷಣೆಗಾಗಿ ಮತ್ತು ಆದಿಮಸಂಜಾತ ಕೊಡವ ಜನಾಂಗದ ಹಕ್ಕುಗಳಿಗಾಗಿ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ, ಸ್ವಯಂ ನಿರ್ಣಯದ ಬೇಡಿಕೆಯನ್ನು ಮುಂದಿಟ್ಟುಕೊoಡು…
ಪೊನ್ನಂಪೇಟೆ ಜ.7 NEWS DESK : ಮಸೀದಿ ಕೇವಲ ಆರಾಧನೆಗೆ ಮಾತ್ರ ಸೀಮಿತವಾಗಿರುವುದಿಲ್ಲ. ಬದಲಾಗಿ ಸಮುದಾಯದ ಉನ್ನತಿಗೆ ಮಾರ್ಗದರ್ಶನ ನೀಡುವ ಸ್ಥಳವೂ ಆಗಿದೆ. ಮಸೀದಿಗಳು ಸಮಾಜದ ಪ್ರತೀ ವ್ಯಕ್ತಿಯ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸುವ ಕೇಂದ್ರವಾಗಿರಬೇಕು ಎಂಬುವುದು ಇಸ್ಲಾಂ ಧರ್ಮದ ಮೂಲ ಆಶಯವಾಗಿದೆ ಎಂದು ಸಮಸ್ತ ಕೇಂದ್ರ ಮುಶಾವರ ಅಧ್ಯಕ್ಷರು, ಪ್ರಸಿದ್ಧ ವಿದ್ವಾಂಸರಾದ ಸೈಯದ್ ಜಿಫ್ರಿ ಮುತ್ತುಕೋಯ ತಂಗಳ್ ಹೇಳಿದರು. ಪೊನ್ನಂಪೇಟೆ ತ್ಯಾಗರಾಜ ರಸ್ತೆಯಲ್ಲಿ ಆಧುನಿಕ ಇಸ್ಲಾಮಿಕ್ ವಾಸ್ತುಶಿಲ್ಪ ಶೈಲಿಯ ಮಸೀದಿಯಾಗಿ ಪುನರ್ ನಿರ್ಮಾಣಗೊಂಡಿರುವ ಪೊನ್ನಂಪೇಟೆ ಶಾಫಿ ಜುಮಾ ಮಸೀದಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಸೀದಿ ಎಂಬುದು ಜಾತಿ, ಧರ್ಮ, ಪಂಥವನ್ನು ಮೀರಿ ಮನುಷ್ಯ ಪ್ರೀತಿಯ ಸೌಹಾರ್ದಯುತ ಜೀವನ ನಡೆಸುತ್ತಾ ಆ ಮೂಲಕ ಶಾಂತಿ, ಸಹೋದರತೆಯ ಸಮಾಜ ನಿರ್ಮಾಣದ ಕುರಿತು ಕಲಿಸುವ ಪಾಠ ಶಾಲೆಯಾಗಬೇಕು ಎಂದು ಕಳೆದ 1400 ವರ್ಷಗಳ ಹಿಂದೆಯೇ ವಿಶ್ವ ಪ್ರವಾದಿ ಮೊಹಮ್ಮದ್ ಪೈಗಂಬರ್ ಬೋಧಿಸಿದ್ದಾರೆ ಎಂದು ಒತ್ತಿ ಹೇಳಿದರು. ಸೌಹಾರ್ದತೆ, ದಯೆ, ಒಗ್ಗಟ್ಟು, ಪ್ರೀತಿ, ಬದ್ಧತೆ ಇಸ್ಲಾಂ ಧರ್ಮದ…
ಸಿದ್ದಾಪುರ ಜ.7 NEWS DESK : ಮಾಲ್ದಾರೆ ಗ್ರಾಮ ಪಂಚಾಯತ್‌ಯಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆಯು ಗ್ರಾಪಂ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷೆ ಮಾಲತಿ, ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಅಂಗವಿಕಲರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಸರ್ಕಾರದಿಂದ ಅಂಗವಿಕಲರಿಗೆ ಸ್ವಾವಲಂಬಿಗಳಾಗಿ ಬದುಕಲು ಸಾಕಷ್ಟು ಯೋಜನೆಗಳಿವೆ. ಎಲ್ಲರೂ ಸೌಲಭ್ಯಗಳ ಬಗ್ಗೆ ತಿಳಿದುಕೊಂಡು, ಅವುಗಳ ಪ್ರಯೋಜನ ಪಡೆದು ಆರ್ಥಿಕವಾಗಿ ಸದೃಢರಾಗಬೇಕು ಎಂದು ಹೇಳಿದರು. ಗ್ರಾಮ ಪಂ. ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್ ಮಾತನಾಡಿ, ವಿಶೇಷ ಚೇತನರಿಗೆ ಇಲಾಖೆಯಿಂದ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷ ಕುಞಂಣ್ಣ, ಮಾಜಿ ಅಧ್ಯಕ್ಷ ಸಮೀರ್, ಸದಸ್ಯರಾದ ಮಹಮ್ಮದ್ ಅಲಿ, ವಿದ್ಯಾ ಮತ್ತು ಗ್ರಾ.ಪಂ ಸಿಬ್ಬಂದಿಗಳು ಹಾಜರಿದ್ದರು.
ಮಡಿಕೇರಿ ಜ.7 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಬೆಂಗಳೂರು ಕೊಡವ ಸಮಾಜ ಸಹಯೋಗದಲ್ಲಿ ಜ.26 ರಂದು ರಾಜ್ಯ ಮಟ್ಟದ ಕೊಡವ ವಿಚಾರ ಸಂಕಿರಣ ನಡೆಯಲಿದೆ. ಬೆಂಗಳೂರು ಕೊಡವ ಸಮಾಜದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಲಿರುವ ವಿಚಾರ ಸಂಕಿರಣವನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಕೇಂದ್ರ ಸಾಹಿತ್ಯ ಅಕಾಡೆಮಿಯ ನಿಕಟ ಪೂರ್ವ ಅಧ್ಯಕ್ಷ ಚಂದ್ರಶೇಖರ ಬಿ. ಕಂಬಾರ ಉದ್ಘಾಟಿಸಲಿದ್ದಾರೆ. ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ. ಮಾನಸ, ಕೇಂದ್ರ ವರಮಾನ ತೆರಿಗೆ ಇಲಾಖೆಯ ಜಂಟಿ ಆಯುಕ್ತರಾದ ದೇವಣಿರ ಪ್ರೀತ್ ಗಣಪತಿ, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರಾದ ಕರೋಟಿರ ಟಿ. ಪೆಮ್ಮಯ್ಯ, ನಿವೃತ್ತ ಎಸಿಪಿ ಬಿದ್ದಂಡ ಬಿ. ಅಶೋಕ್ ಕುಮಾರ್, ರಾಜ್ಯ ಉಚ್ಛ ನ್ಯಾಯಾಲಯದ ವಕೀಲೆ ಪುಲಿಯಂಡ ಅನು ಚಂಗಪ್ಪ, ಡ್ಯಾಫೋಡಿಲ್ಸ್ ವಿದ್ಯಾಸಂಸ್ಥೆಯ ಮುಖ್ಯಸ್ಥೆ ನೆರವಂಡ ಮಾಧುರಿ…
ಸೋಮವಾರಪೇಟೆ ಜ.7 NEWS DESK : ಗೌಡಳ್ಳಿ ಗ್ರಾಮ ಪಂಚಾಯಿತಿ, ಸಿ.ಎಂ.ಸಿ.ಎ ಹಾಗೂ ನಾವು ಪ್ರತಿಷ್ಠಾನ ಸಂಸ್ಥೆಯ ಸಹಯೋಗದಲ್ಲಿ ಗೌಡಳ್ಳಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಮಕ್ಕಳು ಮತ್ತು ಮಹಿಳೆಯರ ಗ್ರಾಮಸಭೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಸಮಸ್ಯೆಗಳ ಸರಮಾಲೆಯನ್ನು ಬಿಚ್ಚಿಟ್ಟರು. ಶುಂಠಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪ್ರೇಮ್ ಕುಮಾರ್ ಮಾತನಾಡಿ, ಮೇಲ್ಚಾಚವಣಿಯ ಮರಗಳು ಗೆದ್ದಲು ಹಿಡಿದಿದ್ದು, ತರಗತಿಯಲ್ಲಿ ಕುಳಿತುಕೊಳ್ಳುವುದಕ್ಕೆ ಭಯವಾಗುತ್ತದೆ. ಮೈದಾನದಲ್ಲಿ ಕಾಡು ಬೆಳೆದಿರುವುದರಿಂದ ಕೆಲವೊಮ್ಮೆ ಹಾವುಗಳ ಬರುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ. ನಂದಿಗುಂದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಜಿ.ಎಸ್.ಧ್ರುವ, ಕಾರ್ತಿಕ್, ಮೋಕ್ಷ ತಮ್ಮ ಶಾಲೆಯ ಸಮಸ್ಯೆಗಳನ್ನು ಬಿಚ್ಚಿಟ್ಟರು. ಶೌಚಾಗೃಹಕ್ಕೆ ಬಾಗಿಲು ಇಲ್ಲ. ಹೊಸ ಶೌಚಗೃಹ ಬೇಕು. ಕ್ರೀಡಾಸಾಮಾಗ್ರಿಗಳು ಬೇಕು. ಕೊಠಡಿಗೆ ಗಾರೆ ಹಾಕಿಸಿಕೊಡಿ ಎಂದು ಮನವಿ ಮಾಡಿದರು. ಗೌಡಳ್ಳಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಲೋಕೇಶ್, ಮನ್ವಿತ್, ವಿದ್ಯಾ, ಪ್ರಿಯಾಂಕ, ಪ್ರಜ್ವಲ್, ಶ್ರಾಧ್ಯ ಮಾತನಾಡಿ, ಶಾಲಾ ಮೈದಾನ ಒತ್ತುವರಿಯಾಗುತ್ತಿದೆ. ಟ್ರಂಚ್ ನಿರ್ಮಿಸಿ ಹದ್ದು ಬಸ್ತು ಗುರುತಿಸಿ ಮೈದಾನವನ್ನು ಉಳಿಸಿಕೊಳ್ಳಬೇಕು.…
ವಿರಾಜಪೇಟೆ ಜ.7 NEWS DESK : ಕೇರಳದ ಕಣ್ಣನೂರಿನ ಪೆರಿಂತಟ್ಟ ಊರಿನ ಕಾಲಕಟ್ಟಿಲಂ ದೇವಾಲಯದಲ್ಲಿ ಜ.10 ರಿಂದ 12ರ ವರೆಗೆಕಾಳೇಘಾಟ್ ಕಳಿಯಾಟ್ ಮಹೋತ್ಸವ ಜರುಗಲಿದೆ. ಜ.10 ರಂದು ಬೆಳಿಗ್ಗೆ ಗಣಹೋಮ, ಉಷಾಪೂಜೆ, ಉಚ್ಚಪೂಜೆ, ದೀಪಾರಾಧನೆ, ಅತ್ತಾಳಪೂಜೆ ನಡೆಯಲಿದ್ದು, ಮಧ್ಯರಾತ್ರಿ 12 ಗಂಟೆಗೆ ಮಹಾಗುರುತಿ ಪೂಜೆ ನಡೆಯಲಿದೆ. ಜ.11 ರಂದು ಕರಿಕುಟ್ಟಿಚಾತನ್ ತೆರೆ ಹಾಗೂ ಜ.12 ರಂದು ಸಮಾರೋಪ ಪೂಜೆಯೊಂದಿಗೆ ಉತ್ಸವ ತೆರೆಕಾಣಲಿದೆ. ಈ ಉತ್ಸವವು ಒಟ್ಟು ಹದಿನೈದು ವಿಧದ ತೆರೆಗಳಿಂದ ಕೂಡಿರುತ್ತದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಮೊ. ಸಂ. 9947213899 ನ್ನು ಸಂಪರ್ಕಿಸಬಹುದಾಗಿದೆ.
ಮಡಿಕೇರಿ NEWS DESK ಜ.6 : ಮಸೀದಿಗಳಲ್ಲಿ ಕಳ್ಳತನ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ನಗರದ ಸುಣ್ಣದ ಬೀದಿಯ ನಿವಾಸಿ ಮಹಮ್ಮದ್ ಶೋಯಲ್ (32) ಬಂಧಿತ ಆರೋಪಿಯಾಗಿದ್ದು, ಈತನ ಬಳಿಯಿಂದ ಧ್ವನಿವರ್ಧಕಕ್ಕೆ ಅಳವಡಿಸುವ ಸಾಧನ, ಅದರ ಸಲಕಲರಣೆಗಳು ಮತ್ತು ರೂ.3 ಸಾವಿರ ನಗದನ್ನು ವಶಪಡಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಕುಶಾಲನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 19-12-2024 ರಂದು ಇಂದಿರಾ ಬಡಾವಣೆಯ ಮಸೀದಿಯಲ್ಲಿಟ್ಟಿದ್ದ ಕಾಣಿಕೆ ಹುಂಡಿಯನ್ನು ಮತ್ತು ಮಸೀದಿಯ ಧ್ವನಿ ವರ್ಧಕಕ್ಕೆ ಅಳವಡಿಸುವ ಸಾಧನ ಮತ್ತು ಉಪಕರಣವನ್ನು ಕಳ್ಳತನ ಮಾಡಿರುವ ಕುರಿತು ಕುಶಾಲನಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ಪೊಲೀಸ್ ಠಾಣೆಯ ಪಿಐ ಪ್ರಕಾಶ್.ಬಿ.ಜಿ, ಪಿಎಸ್‌ಐ ಗೀತಾ, ಅಪರಾಧ ಪತ್ತೆ ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದರು. ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಬಂಧಿತ ಆರೋಪಿ ಮಡಿಕೇರಿ ಮತ್ತು ಪಿರಿಯಾಪಟ್ಟಣದ ಮಸೀದಿಗಳಲ್ಲಿ…






