ಮಡಿಕೇರಿ ಜ.6 NEWS DESK : ನಿವೃತ್ತ ಡೆಪ್ಯುಟಿ ರೇಂಜ್ ಫಾರೆಸ್ಟರ್, ಕೊಡವ ಜಾನಪದ ಪದ್ಧತಿ ಪರಂಪರೆಗಳ ಕುರಿತು ಮೂರು ಪುಸ್ತಕ ಬರೆದಿರುವ, ಕೊಡವ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಮಡಿಕೇರಿಯ ಪುಟಾಣಿ ನಗರ ನಿವಾಸಿ ಪಂಜೇರಿರ ಬೆಳ್ಯಪ್ಪ ಜ.5 ರಂದು ಸಂಜೆ ಮೈಸೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಇಂದು (ಜ.6) ಮಡಿಕೇರಿಯ ಕೊಡವ ಸಮಾಜದ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಮೃತರು ಪತ್ನಿ ಕಾಮವ್ವ, ಪುತ್ರರಾದ ಟಿವಿ9ನ ಜಗದೀಶ್ ಬೆಳ್ಯಪ್ಪ, ರಾಜೇಶ್, ಪುತ್ರಿ ಜರಿತಾ ಅವರನ್ನು ಅಗಲಿದ್ದಾರೆ.
ಲೇಖಕ: admin
ಮಡಿಕೇರಿ ಜ.6 NEWS DESK : ಗುಹ್ಯ ಅಗಸ್ತ್ಯೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ನೂತನ ಕಟ್ಟಡದ ವಿನ್ಯಾಸದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಾಸಕರು, ಸಹಕಾರಿ ಸಂಘವು ಮತ್ತಷ್ಟು ಯಶಸ್ಸನ್ನು ಕಾಣುವಂತಾಗಲಿ ಎಂದು ಶುಭ ಹಾರೈಸಿದರು. ಗುಹ್ಯ ಅಗಸ್ತ್ಯೇಶ್ವರ ಸಹಕಾರಿ ಸಂಘದ ಬೆಳವಣಿಗೆ ಹಾಗೂ ಏಳಿಗೆಗೆ ಶ್ರಮಿಸುತ್ತಿರುವ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರುಗಳನ್ನು ಶ್ಲಾಘಿಸಿ, ಸಂಘದ ಸದಸ್ಯರ ಏಳಿಗೆಗೆ ಮತ್ತಷ್ಟು ಕಾರ್ಯಕ್ರಮಗಳನ್ನು ರೂಪಿಸಿ, ಕಾಳಜಿ ವಹಿಸುವಂತೆ ಕರೆ ನೀಡಿದರು. ಈ ಸಂದರ್ಭ ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರತೀಶ್, ಸಹಕಾರಿ ಸಂಘದ ಸಿಬ್ಬಂದಿ ವರ್ಗ, ಸಹಕಾರಿ ಸಂಘದ ಸದಸ್ಯರುಗಳು, ಗ್ರಾಮದ ಪ್ರಮುಖರು ಮತ್ತಿತರರು ಹಾಜರಿದ್ದರು.
ಬೆಂಗಳೂರು NEWS DESK ಜ.6 : ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಚೈನಾ ದೇಶದಲ್ಲಿ ಹೆಚ್ ಎಂ ಪಿ ವಿ ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು, ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು. ಸೋಂಕು ತಡೆಯ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಪುನ: ಪ್ರಾರಂಭಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಆರೋಗ್ಯ ಸಚಿವರು ಸಭೆ ನಡೆಸುತ್ತಿದ್ದು, ರಾಜ್ಯದಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದರು. ::: ನಕ್ಸಲರು ಶರಣಾಗುವ ಸಾಧ್ಯತೆಯಿದೆ…
ಬೆಂಗಳೂರು ಜ.6 NEWS DESK : ನಮ್ಮ ಸಾರಿಗೆ ನೌಕರರು ಮತ್ತು ಕುಟುಂಬದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ಕಾಣಬಾರದು. ಚಿಕಿತ್ಸೆ ನೀಡುವಲ್ಲಿ ಉದಾಸೀನ ಮಾಡಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾಸಗಿ ಆಸ್ಪತ್ರೆಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮತ್ತು ಸಿಬ್ಬಂದಿಗೆ ನಗದು ರಹಿತ ಆರೋಗ್ಯ ಸವಲತ್ತು ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು. ಸಾರಿಗೆ ನೌಕರರು ತಮ್ಮ ದುಡಿಮೆಯ ಮೂಲಕ ಸಂಸ್ಥೆಯ ಮತ್ತು ನಿಗಮದ ಆದಾಯ ಹೆಚ್ಚಿಸುತ್ತಿದ್ದಾರೆ. ಇವರ ಆರೋಗ್ಯ ಸರ್ಕಾರದ ಮತ್ತು ಸಂಸ್ಥೆ ಹಾಗೂ ನಿಗಮದ ಜವಾಬ್ದಾರಿ ಆಗಿದೆ. ಈ ಕಾರಣಕ್ಕೇ ಖಾಸಗಿ ಆಸ್ಪತ್ರೆಗಳ ಜೊತೆಗೂ ಒಡಂಬಡಿಕೆ ಮಾಡಿಕೊಂಡಿದ್ದೇವೆ ಎಂದರು. 275 ಖಾಸಗಿ ಆಸ್ಪತ್ರೆಗಳ ಜೊತೆಗೆ ಒಡಂಬಡಿಕೆ ಆಗಿದೆ. ಈ ಪ್ರಮಾಣ ಇನ್ನೂ ಹೆಚ್ಚಲಿದೆ. ಸಿಬ್ಬಂದಿ ಕರ್ತವ್ಯನಿರತ ಊರಿನಲ್ಲೇ ಚಿಕಿತ್ಸೆ ಪಡೆಯಬಹುದು. ನೌಕರರ ಕುಟುಂಬದವರು ಅವರು ನೆಲೆಸಿರುವ ಊರಿನಲ್ಲೇ ನಗದು ರಹಿತವಾಗಿ ಚಿಕಿತ್ಸೆ ಪಡೆಯಬಹುದಾದ ಅತ್ಯಂತ ಸುಲಲಿತ ಯೋಜನೆ ಇದಾಗಿದೆ. ನಮ್ಮ ನೌಕರರು ಮತ್ತು ಕುಟುಂಬದವರು ಇದರ…
ಮಡಿಕೇರಿ NEWS DESK ಜ.6 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಮತ್ತು ಆಡಳಿತ ಮಂಡಳಿಯ ಸದಸ್ಯರುಗಳು ಇಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ವಿರಾಜಪೇಟೆ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಿದರು. ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದಲ್ಲಿ ಈ ಹಿಂದೆ ನಡೆದ ಘಟನೆ ಮತ್ತು ಭಾನುವಾರ ಆಡಳಿತ ಮಂಡಳಿ ನಡೆಸಿದ ತುರ್ತು ಸಭೆಯ ಕುರಿತು ಪ್ರಮುಖರು ವಿವರಿಸಿದರು. ಎಲ್ಲಾ ಗೊಂದಲಗಳಿಗೆ ಅತಿ ಶೀಘ್ರದಲ್ಲಿ ಪರಿಹಾರ ಸಿಗಬಹುದು ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.
ನಾಪೋಕ್ಲು ಜ.6 NEWS DESK : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ನಾವು ಪ್ರತಿಷ್ಠಾನ ಸಂಸ್ಥೆ ಸಹಯೋಗದಲ್ಲಿ “ಮಕ್ಕಳ ಸಂವಿಧಾನ ಕ್ಲಬ್” ಕುರಿತಂತೆ ಕೊಡಗು ಮತ್ತು ಮೈಸೂರು ಜಿಲ್ಲೆಯ ವಸತಿ ಶಾಲಾ ಸಮಾಜ ವಿಜ್ಞಾನ ಶಿಕ್ಷಕರಿಗೆ ಕಾರ್ಯಾಗಾರವನ್ನು ನೆಡೆಸಲಾಗಿದ್ದು,ಇದರ ಭಾಗವಾಗಿ ನಾಪೋಕ್ಲು ಡಾ|| ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಗೆ ನಾವು ಪ್ರತಿಷ್ಠಾನ ಭೇಟಿ ನೀಡಿ ತರಗತಿಗಳ ಪರಿವೀಕ್ಷಣೆ ಮಾಡಿದರು. ಆರು ಮತ್ತು ಏಳನೇ ತರಗತಿ ಮಕ್ಕಳಿಗೆ ಮಕ್ಕಳ ಹಕ್ಕುಗಳ ಕುರಿತು ಮಕ್ಕಳಿಗೆ ಚಟುವಟಿಕೆಗಳ ಮೂಲಕ ಪ್ರಜಾಪ್ರಭುತ್ವತ್ಮಾಕ ತರಗತಿಗಳನ್ನು ಸಮಾಜ ವಿಜ್ಞಾನ ಶಿಕ್ಷಕ ಪಿ.ಎಲ್.ಗುಲ್ಶನ್ ನಡೆಸಿ ಮಾರ್ಗದರ್ಶನ ನೀಡಿದರು. ನಂತರ ನಾವು ಪ್ರತಿಷ್ಠಾನದ ಸುಮನ್ ಮ್ಯಾಥ್ಯೂ ಮಕ್ಕಳಿಗಿರುವ ಬದುಕುವ, ಅಭಿವೃದ್ಧಿ ಹೊಂದುವ, ರಕ್ಷಣೆಯ ಮತ್ತು ಭಾಗವಹಿಸುವ ಹಕ್ಕುಗಳ ಬಗ್ಗೆ ಹಾಗೂ ಮಕ್ಕಳಲ್ಲಿ ಆಲೋಚನೆ ಮೂಡುವಂತೆ ಮಾಡುಲು ಸಂವಾದ ನಡೆಯಸಿದರು. ಮಕ್ಕಳಿಗೆ ಮೂಲಭೂತ ಹಾಗೂ ವಿಶ್ವಸಂಸ್ಥೆಯ ಬಗ್ಗೆ ಜಾಗೃತಿಯನ್ನು ಮೂಡಿಸಲಾಯಿತು. ನಾವು ಸಂಸ್ಥೆಯ ಗೌತಮ್ ಕಿರಗಂದೂರು ಮತ್ತು ಕಾರ್ಯಕ್ರಮ ಸಂಯೋಜಕಿ ಬಿ.ಕೆ.ಕುಮಾರಿ…
ನಾಪೋಕ್ಲು ಜ.6 NEWS DESK : ನಾಪೋಕ್ಲು ಶೌರ್ಯ ವಿಪತ್ತು ನಿರ್ವಹಣ ಘಟಕದ ವತಿಯಿಂದ ನಾಪೋಕ್ಲು ಹಳೆ ತಾಲ್ಲೂಕು ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಅಂಗನವಾಡಿ ಕೇಂದ್ರದ ಆವರಣದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಕಡಿದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಈ ಸಂದರ್ಭ ಸೇವೆಯಲ್ಲಿ ಘಟಕದ ಪ್ರಮುಖರಾದ ಬಾಳೆಯಡ ದಿವ್ಯ, ಶಂಕರ್, ಶರವಣ, ರವಿ, ಉಮಾಲಕ್ಷ್ಮಿ, ಚಂದ್ರಕಲಾ, ಶ್ಯಾಮಲಾ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆ ಜ್ಯೋತಿ, ಸಹಾಯಕಿ ಸರೋಜ ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಸಿದ್ದಾಪುರ ಜ.6 NEWS DESK : ಸಿದ್ದಾಪುರ ಇಕ್ರಾ ಶಾಲಾ ವಾರ್ಷಿಕೋತ್ಸವ ಅಂಗವಾಗಿ ನಡೆದ ಸಾಂಸ್ಕೃತಿಕ ನೃತ್ಯೋತ್ಸವ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಇಕ್ರಾ ಪಬ್ಲಿಕ್ ಸ್ಕೂಲ್ ಮತ್ತು ಪ್ರಿ-ಯೂನಿವರ್ಸಿಟಿ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮದಲ್ಲಿ ಗಾಯನ, ಸಂಗೀತ, ನೃತ್ಯ, ಕರಾಟೆ ಪ್ರದರ್ಶನ ಸೇರಿದಂತೆ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳು ನೆರೆದಿದ್ದ ನೂರಾರು ಪೋಷಕರ ಗಮನ ಸೆಳೆದವು. ಪುಟಾಣಿಗಳ ನೃತ್ಯೋತ್ಸವಕ್ಕೆ ನೆರೆದಿದ್ದವರು ಚಪ್ಪಾಳೆ ತಟ್ಟಿ ಪ್ರೋತ್ಸಹಿಸಿದರು. ನೃತ್ಯ ಹಾಡುಗಳಿಗೆ ವಿದ್ಯಾರ್ಥಿಗಳು ಪೋಷಕರು ಕುಣಿದು ಕುಪ್ಪಳಿಸಿದರು. ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಕೊಡಗು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅಶೋಕ್ ಸಂಗಪ್ಪ ಆಲೂರು ಉದ್ಘಾಟಿಸಿ ಮಾತನಾಡಿ, ಶಿಕ್ಷಣದಿಂದ ವಂಚಿತರಾಗದೆ ಮಕ್ಕಳ ಕಲಿಕೆಗೆ ಹೆಚ್ಚು ಪ್ರೋತ್ಸಾಹ ನೀಡುವ ಮೂಲಕ ವಿದ್ಯಾರ್ಥಿಗಳ ಮುಂದಿನ ಭವಿಷ್ಯವನ್ನು ರೂಪಿಸಲು ಪೋಷಕರು ಹೆಚ್ಚಿನ ಪ್ರೋತ್ಸಾಹ ನೀಡಬೇಕಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ಶಿಕ್ಷಣದ ಮೂಲಕ ಪ್ರತಿಭಾನ್ವಿತರಾಗಿ ಉನ್ನತ ಹುದ್ದೆಯನ್ನು ಅಲಂಕರಿಸುವುದರೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು. ಇಕ್ರಾ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಕೆ.ಯು.ಅಬ್ದುಲ್ ರಜಾಕ್ ಪ್ರಸ್ತಾವಿಕ ಮಾತನಾಡಿ,…
ಹೆಬ್ಬಾಲೆ ಜ.6 NEWS DESK : ಹೆಬ್ಬಾಲೆ ಗ್ರಾ.ಪಂ ವ್ಯಾಪ್ತಿಯ ಹುಲುಸೆ ಫ್ರೆಂಡ್ಸ್ ವತಿಯಿಂದ ಹೆಚ್.ವಿ.ಎಲ್ 2024-25ನೇ ಸಾಲಿನ ಲೀಗ್ ಮಾದರಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ನಡೆಯಿತು. ಹುಲುಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಪಂದ್ಯಾವಳಿಯನ್ನು ಹೆಬ್ಬಾಲೆ ಗ್ರಾ.ಪಂ ಮಾಜಿ ಸದಸ್ಯ, ಗುತ್ತಿಗೆದಾರ ವೆಂಕಟೇಶ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ಇಂತಹ ಕ್ರೀಡಾಕೂಟಗಳು ನಡೆಯುವುದರಿಂದಾಗಿ ಯುವಕರು ಒಂದೆಡೆ ಸೇರುವ ಮೂಲಕ ಗ್ರಾಮದ ಅಭಿವೃದ್ಧಿಗೆ ಪೂರಕವಾದ ಅಂಶಗಳ ಬಗ್ಗೆ ಚರ್ಚಿಸಲು ಹಾಗೂ ಯುವಕರಿಗೆ ಕ್ರೀಡೆಯ ಬಗ್ಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಸಹಕಾರಿಯಾಗುತ್ತದೆ. ಇದರ ಮುಖೇನ ಯುವಕರು ಸಂಘಟನೆಯ ಮನೋಭಾವದಿಂದ ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆಯ ಮೂಲಕ ತಮ್ಮ ಬದುಕನ್ನು ಕಟ್ಟಿಕೊಳ್ಳಲು ಸಹಕಾರವಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭ ಕೂಡಿಗೆ ಕ್ರೀಡಾಪಟು ಚಂದ್ರಶೇಖರ್, ಹರೀಶ್,ಹುಲುಸೆ ಫ್ರೆಂಡ್ಸ್ ನ ಪದಾಧಿಕಾರಿಗಳಾದ ದಿಲೀಪ್, ದರ್ಶನ್, ಗೌತಮ್, ಚಂದ್ರು,ಶಂಕರ್, ಅಭಿ ಸೇರಿದಂತೆ ಸಮಿತಿಯ ಸದಸ್ಯರು ಲೀಗ್ ನ ಎಲ್ಲಾ ಕೀಡಾಪಟುಗಳು ಭಾಗವಹಿಸಿದರು.…
ಬೆಂಗಳೂರು NEWS DESK ಜ.6 : ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿವಿಧ ವಿಚಾರಗಳ ಕುರಿತು ಚರ್ಚಿಸಿದರು. ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಉಪಸ್ಥಿತರಿದ್ದರು.






