ಶನಿವಾರಸಂತೆ ಜ.6 NEWS DESK : ಹನ್ನೆರಡನೇ ಶತಮಾನದ ಬಸವಾದಿ ಶರಣರ ಆದರ್ಶಗಳನ್ನು ತಮ್ಮಲ್ಲಿ ಮೈಗೂಡಿಸಿಕೊಂಡು ವಚನ ಸಾಹಿತ್ಯದ ಪ್ರೇರಕರಾಗಿ ನುಡಿದಂತೆ ನಡೆದಂತಹ ಸಂತ ಶ್ರೇಷ್ಠರು ಶ್ರೀ ಸಿದ್ದೇಶ್ವರ ಸ್ವಾಮೀಜಿ ಎಂದು ಕೊಡ್ಲಿಪೇಟೆ ಕಿರಿಕೊಡ್ಲಿಮಠದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು. ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಅಂಕನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಸ್ಮರಣೆ ಕಾರ್ಯಕ್ರಮದಲ್ಲಿ ಸಾನಿಧ್ಯ ವಜಿಸಿ ಮಾತನಾಡಿದ ಅವರು ಮನುಷ್ಯನ ಮೌಲ್ಯಯುತ ಬದುಕಿಗೆ ಬೇಕಾದ ನೀತಿಯನ್ನು ಸಾರಿದ ಮಹಾಚೈತನ್ಯ ಸಿದ್ದೇಶ್ವರ ಸ್ವಾಮೀಜಿ. ಅವರ ವಿಚಾರಧಾರೆಗಳು ಸಾರ್ವಕಾಲಿಕವಾಗಿದ್ದು, ಜೀವನವೇ ಒಂದು ಸಂದೇಶವಾಗಿದೆ ಎಂದು ಹೇಳಿದರು. ಜ್ಞಾನಯೋಗಿಗಳ ವಿಚಾರಧಾರೆಗಳು ಮನುಷ್ಯನ ಅಂತರಂಗವನ್ನು ಶ್ರೀಮಂತಗೊಳಿಸುತ್ತವೆ. ದಯೆಯೇ ಧರ್ಮದ ಮೂಲ, ಇವನಾರವ ಎನ್ನದೇ ಇವ ನಮ್ಮವ ಎಂಬ ಶರಣರ ಸರಳತೆ ಯನ್ನು ಯುವ ಜನಾಂಗ ಅರಿಯಬೇಕಿದೆ ಎಂದು ಸದಾಶಿವ ಸ್ವಾಮೀಜಿ ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿದ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಕೆ.ಪ್ರಕಾಶ್ ಮಾತನಾಡಿ, ಬಸವಾದಿ…
ಲೇಖಕ: admin
ಕಣಿವೆ ಜ.6 NEWS DESK : ಕಾವೇರಿ ಹಾಗೂ ಹಾರಂಗಿ ನದಿಗಳ ಸಂಗಮ ಕ್ಷೇತ್ರ ಕೂಡಿಗೆಯ ಉದ್ಭವ ಸುಬ್ರಮಣ್ಯ ದೇವಾಲಯದಲ್ಲಿ ಕಿರುಷಷ್ಠಿ ಹಾಗೂ ಸತ್ಯನಾರಾಯಣ ಪೂಜೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಸ್ಥಳೀಯ ಸತ್ಯನಾರಾಯಣ ವೃತಾಚರಣ ಸಮಿತಿ ಸಹಯೋಗದಲ್ಲಿ ನಡೆದ ಪೂಜೋತ್ಸವದಲ್ಲಿ ನೂರಾರು ಮಂದಿ ಸತ್ಯನಾರಾಯಣ ಪೂಜೆಯಲ್ಲಿ ಭಾಗಿಯಾದರು. ಹಾಗೆಯೇ ಕೂಡಿಗೆ ಸುತ್ತಮುತ್ತಲಿನ ಗ್ರಾಮಗಳ ಸಹಸ್ರಾರು ಮಂದಿ ಭಕ್ತಾಧಿಗಳು ದೇವಾಲಯಕ್ಕೆ ಬಂದು ಅಲಂಕೃತ ಉದ್ಭವ ಸುಬ್ರಮಣ್ಯ ಸ್ವಾಮಿಯ ದರ್ಶನ ಪಡೆದು ಪುನೀತರಾದರು. ದೇಗುಲದ ಪ್ರಧಾನ ಅರ್ಚಕ ನವೀನ್ ಭಟ್ ನೇತೃತ್ವದಲ್ಲಿ ಪೂಜಾವಿಧಿಗಳು ನೆರವೇರಿತು. ಇದೇ ಸಂದರ್ಭ ನೆರೆದ ಭಕ್ತಾಧಿಗಳಿಗೆ ದೇವಾಲಯದ ಆವರಣದಲ್ಲಿ ಅನ್ನಸಂತರ್ಪಣೆ ಹಾಗೂ ಸತ್ಯನಾರಾಯಣ ಪ್ರಸಾದ ನೀಡಲಾಯಿತು. ದೇವಾಲಯ ಸಮಿತಿ ಅಧ್ಯಕ್ಷ ಸೋಮಯ್ಯ, ಕಾರ್ಯದರ್ಶಿ ಶಮಂತ ರೈ, ಉಪಕಾರ್ಯದರ್ಶಿ ಮಂದಣ್ಣ, ಶ್ರೀಸತ್ಯನಾರಾಯಣ ವೃತಾಚರಣ ಸಮಿತಿ ಅಧ್ಯಕ್ಷ ಡಿ.ಕೆ.ಪೊನ್ನಪ್ಪ, ಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ಪದಾಧಿಕಾರಿಗಳಿದ್ದರು.
ಸಂಪಾಜೆ NEWS DESK ಜ.6 : ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಕಲೇರಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಶ್ರದ್ಧಾಭಕ್ತಿಯಿಂದ ಜರುಗಿತು. ಗುಳಿಗ ದೈವದ ಕೋಲ, ಅಗ್ನಿ ಪ್ರವೇಶ, ಮಾರಿಕ್ಕಳ ಪ್ರವೇಶ, ಶ್ರೀ ರಕ್ತೇಶ್ವರಿ ಅಮ್ಮ, ಪಂಜುರ್ಲಿ, ಪಾಷಾಣ ಮೂರ್ತಿ ದೈವಗಳ ತಂಬಿಲ, ಹರಿಕೆ ಪ್ರಸಾದ ವಿತರಣೆ ಮತ್ತು ಅನ್ನಸಂತರ್ಪಣೆ ನಡೆಯಿತು. ಹೆಚ್ಚಿನ ಸಂಖ್ಯೆಯ ಭಕ್ತರು ಒತ್ತೆಕೋಲಕ್ಕೆ ಸಾಕ್ಷಿಯಾದರು. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ನೃತ್ಯ ವೈಭವ ಪ್ರೇಕ್ಷಕರನ್ನು ಆಕರ್ಷಿಸಿತು. ಚಿತ್ರ ವರದಿ : ಶರತ್ ಕೀಲಾರು, ಸಂಪಾಜೆ
ಮಡಿಕೇರಿ ಜ.6 NEWS DESK : ಕೂರ್ಗ ಬೈ ರೇಸ್ ಮತ್ತು ಜಮ್ಮ ಹಿಡುವಳಿಯ ಆಧಾರದಲ್ಲಿ ಬಂದಿರುವ ಕೋವಿಯ ವಿಶೇಷ ಹಕ್ಕುದಾರಿಕೆಯನ್ನ ಕೊಡವರು ಶಾಶ್ವತವಾಗಿ ಉಳಿಸಿಕೊಳ್ಳುವತ್ತ ಸಂವಿದಾನ ಬದ್ಧತೆ ರೂಪಿಸಿಕೊಳ್ಳಬೇಕಾದದ್ದು ಇಂದಿನ ಜವಾಬ್ದಾರಿಯಾಗಿದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಪ್ರತಿಪಾದಿಸಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಜೆಸಿಐ ಪೊನ್ನಂಪೇಟೆ ಸಂಸ್ಥೆ ಸಹಯೋಗದಲ್ಲಿ ಮಾಯಮುಡಿ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ಅಕಾಡೆಮಿಯ ಪ್ರಥಮ ಬಾರಿಯ ತೋಕ್ ನಮ್ಮೆ ಉದ್ಘಾಟಿಸಿ ಮಾತನಾಡಿದ ಅವರು, ಕೋವಿಯ ಬಳಕೆ ಹಾಗೂ ಪಾವಿತ್ರ್ಯತೆಯ ಬಗ್ಗೆ ತಿಳಿದುಕೊಳ್ಳುವುದು ಮತ್ತು ಮುಂದಿನ ಪೀಳಿಗೆಗೆ ತಿಳಿ ಹೇಳುವುದು ನಮ್ಮ ಕರ್ತವ್ಯ ಎಂದರು. ಜಬ್ಬೂಮಿ ಚಾಎಇಟೇಬಲ್ ಟ್ರಸ್ಟ್ ಮುಖ್ಯಸ್ಥ ಚೊಟ್ಟೆಕಮಾಡ ರಾಜಿವ್ ಬೋಪಯ್ಯ ಮಾತನಾಡಿ, ಅನಾದಿಕಾಲದಿಂದ ಬಂದಿರುವ ಸಂಪ್ರದಾಯ ಹಾಗೂ ಜೀವನ ಕ್ರಮವನ್ನು ಬದ್ದತೆಯಿಂದ ಪರಿಪಾಲಿಸುತ್ತಿರುವ ಕೊಡವ ಭಾಷಿಕ ಜನಾಂಗಗಳು ಒಗ್ಗಟ್ಟಿನಿಂದ ಹಕ್ಕುದಾರಿಕೆಯನ್ನು ರಕ್ಷಣೆ ಮಾಡಿಕೊಳ್ಳಬೇಕು ಎಂದರು. ವಕೀಲ ಬಲ್ಯಮಡ ಬಿ.ಮಾದಪ್ಪ “ಕೊಡವಡ ತೋಕ್’ರ…
ಮಡಿಕೇರಿ NEWS DESK ಜ.6 : ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಮೂಲಕ ನೀಡುವ ರಾಜ್ಯ ಮಟ್ಟದ ಹೆಚ್.ಎನ್ ಪ್ರಶಸ್ತಿಗೆ ಭಾಜನರಾದ ‘ಶಕ್ತಿ’ ಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ.ರಾಜೇಂದ್ರ ಹಾಗೂ ಮಹಿಳಾ ಸಾಧಕರಿಗೆ ನೀಡಲಾಗುವ ರಾಜ್ಯ ಮಟ್ಟದ ಚೈತನ್ಯಶ್ರೀ ಪ್ರಶಸ್ತಿಯನ್ನು ಪದ್ಮಶ್ರೀ ಪುರಸ್ಕೃತ ರಾಣಿ ಮಾಚಯ್ಯ ಅವರಿಗೆ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಸಮೀಪದ ಬಾಗಲೂರು ವಿ ಜೆ ಇಂಟರ್ನ್ಯಾಷನಲ್ ಶಾಲಾ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಪರಿಷತ್ 4ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಶನಿವಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇಸ್ರೋ ಮಾಜಿ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಗೌರವ ಮಾರ್ಗದರ್ಶಕರಾದ ಡಾ ಎ ಎಸ್ ಕಿರಣ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಜಿಲ್ಲೆ ಯ ಇಬ್ಬರು ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಎಚ್ಎನ್ ಪ್ರಶಸ್ತಿ ಪುರಸ್ಕೃತರಿಗೆ ಮತ್ತು 35 ಮಹಿಳಾ ಸಾಧಕರಿಗೆ…
ಮಡಿಕೇರಿ ಜ.6 NEWS DESK : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆಸುತ್ತಿರುವ ರಾಜ್ಯ ವಲಯದ ಕ್ರೀಡಾ ಶಾಲೆ/ಕ್ರೀಡಾ ವಸತಿ ನಿಲಯಗಳಿಗೆ 2025-26ನೇ ಸಾಲಿಗೆ 8 ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ಜ.16 ರಂದು ಮಡಿಕೇರಿ ತಾಲ್ಲೂಕಿನವರಿಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ, ಜ.17 ರಂದು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನವರಿಗೆ ಕೂಡಿಗೆ ಸರ್ಕಾರಿ ಕ್ರೀಡಾ ಶಾಲೆಯಲ್ಲಿ, ಜನವರಿ, 18 ರಂದು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನವರಿಗೆ ಪೊನ್ನಂಪೇಟೆಯ ತಾಲ್ಲೂಕು ಮಿನಿ ಕ್ರೀಡಾಂಗಣದಲ್ಲಿ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಬಿ.ಜಿ.ಮಂಜುನಾಥ್, ಅಥ್ಲೇಟಿಕ್ ತರಬೇತುದಾರರು, ಕ್ರೀಡಾ ಶಾಲೆ ಕೂಡಿಗೆ ಸೋಮವಾರಪೇಟೆ ಮತ್ತು ಕುಶಾಲನಗರಕ್ಕೆ ದೂ.ಸಂ. 9342563014, ವೆಂಕಟೇಶ್ ಬಿ.ಎಸ್. ಹಾಕಿ ತರಬೇತುದಾರರು, ಕ್ರೀಡಾ ಶಾಲೆ, ಕೂಡಿಗೆ ಸೋಮವಾರಪೇಟೆ ಮತ್ತು ಕುಶಾಲನಗರಕ್ಕೆಕ ದೂ. 9844326007, ದಿನಾಮಣಿ, ಹಾಕಿ ತರಬೇತುದಾರರು, ಕ್ರೀಡಾ ಶಾಲೆ, ಕೂಡಿಗೆ ಸೋಮವಾರಪೇಟೆ ಮತ್ತು ಕುಶಾಲನಗರಕ್ಕೆ ದೂ. ಸಂ.9663241305, ಸೋಮವಾರಪೇಟೆ ಮತ್ತು ಕುಶಾಲನಗರಕ್ಕೆ ಸುರೇಶ್…
ಮಡಿಕೇರಿ ಜ.6 NEWS DESK : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜ.8 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರಸಭೆ ಕಾವೇರಿ ಕಲಾಕ್ಷೇತ್ರದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ವಿರಾಜಪೇಟೆ ಜ.6 NEWS DESK : ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಉಡುಪಿಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಡಾ.ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯಲ್ಲಿ ಎರಡನೇ ತರಗತಿ ವಿದ್ಯಾರ್ಥಿನಿ ಸಂಚಿತಾ ಆಚಾರ್ಯಗೆ ಲಭಿಸಿದೆ. ಕೋಟ ಶಿವರಾಮ ಕಾರಂತರ ಥೀಮ್ ಪಾರ್ಕನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಂಚಿತ ಆಚಾರ್ಯ ವಿರಾಜಪೇಟೆಯ ಚಂದ್ರ ಆಚಾರ್ಯ ಮತ್ತು ಪ್ರೇಮಾಂಜಲಿ ಆಚಾರ್ಯ ದಂಪತಿಯ ಪುತ್ರಿ.
ಮಡಿಕೇರಿ NEWS DESK ಜ.5 : ಸಾಂಪ್ರದಾಯಿಕ ವಸ್ತç ಧರಿಸುವ ವಿಚಾರದಲ್ಲಿ ವಿವಾದದ ಕೇಂದ್ರವಾಗಿ ಮಾರ್ಪಟ್ಟಿರುವ ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಾಲಯದ ಆಡಳಿತ ಮಂಡಳಿ ಇಂದು ನಡೆಸಿದ ಸಭೆ ಒಮ್ಮತ್ತದ ನಿರ್ಧಾರ ಕೈಗೊಳ್ಳುವಲ್ಲಿ ವಿಫಲವಾಯಿತು. ಶ್ರೀ ಮಹಾಮೃತ್ಯುಂಜಯ ದೇವಾಲಯಕ್ಕೆ ಸಾಂಪ್ರದಾಯಿಕ ಉಡುಪು ಧರಿಸಿ ಪ್ರವೇಶಿಸುವ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಇತ್ತೀಚೆಗೆ ಶಾಂತಿಸಭೆ ನಡೆಸಿದ್ದರು. ಆಡಳಿತ ಮಂಡಳಿ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮರಗೋಡು ಸಹಕಾರ ಸಂಘದ ಸಭಾಂಗಣದಲ್ಲಿ ದೇವಾಲಯ ಆಡಳಿತ ಮಂಡಳಿಯ ಅಧ್ಯಕ್ಷ ಕಟ್ಟೆಮನೆ ಶಶಿ ಜನಾರ್ಧನ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ದೇವಾಲಯದ ವಾರ್ಷಿಕೋತ್ಸವದ ಕೊನೆಯ ದಿನ ಗ್ರಾಮಸ್ಥರು ಮಾತ್ರ ಸಾಂಪ್ರದಾಯಿಕ ಉಡುಪು ಧರಿಸಿ ಬರಲು ಅವಕಾಶ ನೀಡುವ ಕುರಿತು ಪ್ರಸ್ತಾಪಿಸಲಾಯಿತು ಎಂದು ತಿಳಿದು ಬಂದಿದೆ. ಆದರೆ ಇದಕ್ಕೆ ಕೆಲವರು ಒಪ್ಪಿಗೆ ಸೂಚಿಸದೆ ಇದ್ದುದರಿಂದ ಸಭೆ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳದೆ ಪ್ರಸ್ತಾಪಿಸಲ್ಪಟ್ಟ ವಿಚಾರಗಳ ಬಗ್ಗೆ…
ಮಡಿಕೇರಿ NEWS DESK ಜ.5 : ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ್ಕೇರಿ ಬಸ್ ನಿಲ್ದಾಣ ಮತ್ತು ಮಾರುಕಟ್ಟೆ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸ್ಕೇರಿ ಗ್ರಾಮದಲ್ಲಿ ನೆಲೆಸಿರುವ ಅಸ್ಸಾಂ ರಾಜ್ಯ ಮೂಲದ ಸೋಫಿಕುಲ್ ಇಸ್ಲಾಂ (24) ವರ್ಷ, ಇಮ್ತಿಯಾಜ್ ಆಲಿ (20) ರೋಹಿಥಾನ್ (50) ಹಾಗೂ ಕೋಣನಕಟ್ಟೆ-ಸುಳುಗೋಡು ಗ್ರಾಮದ ನಿವಾಸಿ ಯೂಸೂಫ್ ಆಲಿ (32) ಬಂಧಿತ ಆರೋಪಿಗಳು. ಇವರ ಬಳಯಿಂದ 2 ಕೆ.ಜಿ 481 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಗಾಂಜಾ ಮಾರಾಟದ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆ ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಮಹೇಶ್‌ಕುಮಾರ್, ಮಡಿಕೇರಿ ನಗರ ಸಿಪಿಐ ರಾಜು.ಪಿ.ಕೆ, ಸಿದ್ದಾಪುರ ಪಿಎಸ್‌ಐ ರಾಘವೇಂದ್ರ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಶ್ಲಾಘಿಸಿದ್ದಾರೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಗಾಂಜಾ ಮತ್ತಿತರ ಮಾದಕ ವಸ್ತುಗಳ ಸಾಗಾಟ ಅಥವಾ ಮಾರಾಟದ…






