ಲೇಖಕ: admin

ಮಡಿಕೇರಿ ಜು.31 NEWS DESK  : ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,395 ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಆಗಸ್ಟ್ 2 ರಂದು ಲಿಖಿತ ಪರೀಕ್ಞೆ ನಡೆಯಲಿದೆ. ಜಿಲ್ಲೆಯಲ್ಲಿ ಆಗಸ್ಟ್, 02 ರಂದು ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ವಿಭಾಗ, ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಸಂತ ಜೋಸೇಫರ ಕಾನ್ವೆಂಟ್ ಸಂಯುಕ್ತ ಪದವಿ ಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಲಿಖಿತ ಪರೀಕ್ಷೆಯನ್ನು ಸುಗಮವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‍ಎಸ್‍ಎಸ್)–2023ರ ಕಲಂ 163 ರಡಿ ಪ್ರದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಭಂದಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ…

Read More

ಮಡಿಕೇರಿ ಜು.31 NEWS DESK : ಪೊನ್ನಂಪೇಟೆ ತಾಲ್ಲೂಕಿನ ಪೊನ್ನಂಪೇಟೆ–ಪೊನ್ನಪ್ಪಸಂತೆ ರಸ್ತೆಯ 6.25 ಕಿ.ಮೀ. ರಿಂದ 6.65 ರವರೆಗೆ ಸಿ.ಸಿ. ರಸ್ತೆ ಕಾಮಗಾರಿ ಕೈಗೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ಮತ್ತು ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989 ರ (ತಿದ್ದುಪಡಿ ನಿಯಮಗಳು 1990) ನಿಯಮ 221ಎ(5) ರಲ್ಲಿ ದತ್ತವಾದ ಅಧಿಕಾರದಂತೆ ಜುಲೈ, 29 ರಿಂದ ಆಗಸ್ಟ್, 28 ರವರೆಗೆ ಪೊನ್ನಂಪೇಟೆ ತಾಲ್ಲೂಕಿನ ಪೊನ್ನಂಪೇಟೆ-ಪೊನ್ನಪ್ಪಸಂತೆ ರಸ್ತೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಭಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ಪೊನ್ನಂಪೇಟೆಯಿಂದ-ನಲ್ಲೂರಿಗೆ(ಪೊನ್ನಂಪೇಟೆ–ಬೆಕ್ಕೆಸೊಡ್ಲೂರು ಮಾರ್ಗ), ಪೊನ್ನಂಪೇಟೆಯಿಂದ-ಪೊನ್ನಪ್ಪಸಂತೆಗೆ(ಕೋಣನಕಟ್ಟೆ ಮಾಯಾಮುಡಿ ಬಾಳಾಜಿ–ಜೋಡುಬೆಟ್ಟಿ ಮಾರ್ಗ) ಈ ಮಾರ್ಗಗಳನ್ನು ಬಳಸುವುದು. ಈ ಬಗ್ಗೆ ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 116 ಹಾಗೂ ಕರ್ನಾಟಕ ಮೋಟಾರು…

Read More

ಮಡಿಕೇರಿ ಜು.31 NEWS DESK : ಮಕ್ಕಳು ತಮ್ಮ ವಿದ್ಯಾಭ್ಯಾಸದ ಅವಧಿಯಲ್ಲಿ ಪಾಠ ಪುಸ್ತಕಕ್ಕೆ ಒತ್ತುಕೊಡುವುದರ ಜೊತೆಯಲ್ಲಿ ಕಥೆ-ಸಾಹಿತ್ಯದ ವಿಚಾರವಾಗಿ ಒಲವು ತೋರುವುದರಿಂದ ಮುಂದಿನ ದಿನಗಳಲ್ಲಿ ಸಾಹಿತ್ಯಪರ ಚಿಂತನೆಗೆ ಅನುಕೂಲವಾಗುವುದು. ಇದರಿಂದ ತಮ್ಮ ವೃತ್ತಿ ಹಾಗೂ ಸೇವಾನುಭವದ ಮೇಲೆ ಬರೆಯುವ ಲೇಖನಗಳಿಗೆ ನಿಖರವಾದ ಮೌಲ್ಯವಿರುತ್ತದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅಭಿಪ್ರಾಯಪಟ್ಟರು. ಕೊಡವ ಸಾಹಿತ್ಯ ಅಕಾಡೆಮಿಯ 15 ನೆ ಕೊಡವ ಪುಸ್ತಕ ಪತ್ತಾಯವನ್ನು ಪೊನ್ನಂಪೇಟೆ ಎಂಜಿನಿಯರಿಂಗ್ ಕಾಲೇಜಿನ ಪದವಿ ಪೂರ್ವ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಸ್ಥಾಪಿಸಿ ಮಾತನಾಡಿದ ಅವರು, ಪ್ರತಿಯೊಂದು ಪ್ರದೇಶಕ್ಕೆ ಅದರದೇ ಆದ ಸಾಂಸ್ಕøತಿಕ ಹಿನ್ನಲೆ ಹಾಗೂ ಪ್ರಾದೇಶಿಕ ಭಿನ್ನತೆ ಇದೆ. ಬಹು ಸಂಸ್ಕøತಿಯ ನಮ್ಮ ಭಾರತ ದೇಶದಲ್ಲಿ ಹಲವು ಜಾತಿ-ಜನಾಂಗಗಳು, ಭಾಷೆ-ಸಂಸ್ಕøತಿ ಇದ್ದು ಶಾಂತಿ-ಸೌಹಾರ್ದತೆ, ಸಹೋದರತೆಯಿಂದ ಬಾಳಿ ಬದುಕುತ್ತಿರುವುದು ಈ ಮಣ್ಣಿನ ಸುಸಂಸ್ಕøತಿ ಆಗಿದೆ. ಮಕ್ಕಳು ಚಿಕ್ಕಂದಿನಿಂದಲೇ ಆಯಾಯ ಪ್ರದೇಶಗಳ ಸಾಂಸ್ಕøತಿಕ ಹಿನ್ನಲೆ, ಭಾಷೆಯ ವೈಶಿಷ್ಟ್ಯತೆಗಳನ್ನು ಅರಿತುಕೊಳ್ಳಬೇಕು. ಇದಕ್ಕೆ ಅನುಕೂಲವಾಗುವಂತೆ ಕೊಡವ…

Read More

ಮಡಿಕೇರಿ ಜು.31 NEWS DESK : ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾದಲ್ಲಿ ಪೋಕ್ಸೋ ಕಾಯ್ದೆಯಡಿ ದಂಡ ಹಾಗೂ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಮಕ್ಕಳ ವಿಶೇಷ ಪೋಲಿಸ್ ಘಟಕದ ಎಸ್.ಐ.ಸುಮತಿ ಅವರು ಹೇಳಿದರು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಪೊಲೀಸ್ ಇಲಾಖೆ, ಅಕ್ಕಪಡೆ ಸಹಯೋಗದಲ್ಲಿ ಕೊಡಗರಹಳ್ಳಿ ಶಾಂತಿನಿಕೇತನ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ನಡೆದ ಮಾನವ ಕಳ್ಳ ಸಾಗಣಿಕೆ ತಡೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಗೆ ಹಲವಾರು ತಿಂಡಿ ತಿನಿಸುಗಳ ಆಮಿಷವನ್ನು ಒಡ್ಡಿ ಮಾನವ ಕಳ್ಳ ಸಾಗಾಣಿಕೆಯನ್ನು ನಡೆಸುತ್ತಿದ್ದು, ಅಂತಹ ಪ್ರಕರಣಗಳು ಕಂಡುಬಂದಲ್ಲಿ 1098 ಗೆ ಅಥವಾ ಪೊಷಕರು ಮತ್ತು ಶಿಕ್ಷಕರಿಗೆ ಮಾಹಿತಿಯನ್ನು ತಿಳಿಸಬೇಕು ಎಂದರು. ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮ, ಸೈಬರ್ ಕ್ರೈಂ, ಅತಿಯಾದ ಮೊಬೈಲ್ ಬಳಕೆಯ ದುಷ್ಪರಿಣಾಮ, ಕಡ್ಡಾಯ ಶಿಕ್ಷಣ ಮತ್ತು ಶಿಕ್ಷಣದ ಮಹತ್ವ, ಬೇಟಿ ಬಚಾವೋ…

Read More

ಮಡಿಕೇರಿ ಜು.31 NEWS DESK : ನಗರದ ಜಲಾಶಯ ಬಡಾವಣೆಯ ನಾಗರಿಕರ ಬಹುಕಾಲದ ಕೋರಿಕೆಯಾಗಿದ್ದ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ತಡೆಗೋಡೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ನಿರ್ಮಿಸಿದ ಕಾಮಗಾರಿಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಲೋಕಾರ್ಪಣೆ ಮಾಡಿದರು. ಗೌಳಿಬೀದಿ ನೂತನ ಕಾಂಕ್ರಿಟ್ ರಸ್ತೆ, ಭಗವತಿ ನಗರದ ಮೂಲಕ ಅಬ್ಬಿಫಾಲ್ಸ್‍ಗೆ ಹೋಗುವ ಕಾಂಕ್ರೀಟ್ ರಸ್ತೆ ಕಾಮಗಾರಿ ನಾಗರಿಕರ ಸಮ್ಮುಖದಲ್ಲಿ ಉದ್ಘಾಟಿಸಿದರು. ಮುಖ್ಯಮಂತ್ರಿ ಅವರ ವಿಶೇಷ ಅನುದಾನದಲ್ಲಿ 3.5 ಕೋಟಿ ರೂಗಳನ್ನು ಮಡಿಕೇರಿ ನಗರದ ಬಡಾವಣೆಗಳ ಅಭಿವೃದ್ಧಿಗೆ ನೀಡಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ಒದಗಿಸಿ ಮಡಿಕೇರಿಯನ್ನು ರಾಜ್ಯದಲ್ಲಿಯೇ ಮಾದರಿ ನಗರವನ್ನಾಗಿಸಲು ಪ್ರಯತ್ನ ಪಡುವುದಾಗಿ ಈ ಸಂದರ್ಭದಲ್ಲಿ ಡಾ.ಮಂತರ್ ಗೌಡ ಭರವಸೆ ನೀಡಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ಅವರು ಮಾತನಾಡಿ 2018 ರ ಪ್ರಕೃತಿ ವಿಕೋಪ ಆದಲ್ಲಿಂದ ಜಲಾಶಯ ಬಡಾವಣೆಯ ನಿವಾಸಿಗಳು ಭೂ ಕುಸಿತದ ಆತಂಕದಿಂದಲೇ ಇದ್ದು ತಮ್ಮ ಬಡಾವಣೆ ರಕ್ಷಣೆಗೆ…

Read More

ಮಡಿಕೇರಿ ಜು.31 NEWS DESK : ಇದೇ ಆಗಸ್ಟ್, 15 ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಇಲಾಖೆಗಳು ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸ್ವಾತಂತ್ರ್ಯ ದಿನಾಚರಣೆ ಆಚರಿಸುವ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಮಳೆಗಾಲ ಆಗಿರುವುದರಿಂದ ನಗರದ ಕೋಟೆ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಪ್ರತೀ ವರ್ಷದಂತೆ ಈ ಬಾರಿಯೂ ಸಹ ಅದೇ ಮಾದರಿಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ವಾಟರ್ ಪ್ರೂಪ್ ವೇದಿಕೆ ನಿರ್ಮಾಣ ಹಾಗೂ ಶಾಮಿಯಾನ, ಮೈಕ್ ಮತ್ತಿತರ ವ್ಯವಸ್ಥೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಧ್ವಜಾರೋಹಣ ಸಮಿತಿಯವರು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು, ರಿಹರ್ಸಲ್ ಸಂದರ್ಭದಲ್ಲಿ ವಿವಿಧ ತಂಡಗಳ ಜೊತೆಗೆ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಲಹೆ ಮಾಡಿದರು. ಸಾಂಸ್ಕøತಿಕ ಕಾರ್ಯಕ್ರಮ ಸಮಿತಿಯವರು ರಾಷ್ಟ್ರಗೀತೆ, ನಾಡಗೀತೆ, ರೈತಗೀತೆ ಹಾಡಲು ಸಿದ್ಧತೆ ಮಾಡಿಕೊಳ್ಳಬೇಕು. ರಾಷ್ಟ್ರದ ಐಕ್ಯತೆ, ಸಮಗ್ರತೆ ಬಿಂಬಿಸುವ ಹಾಡುಗಳನ್ನು…

Read More

ಮಡಿಕೇರಿ ಜು.31 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಇವರ ಸಹಕಾರದಲ್ಲಿ ಆಗಸ್ಟ್, 01 ರಂದು ಬೆಳಗ್ಗೆ 10.30 ಗಂಟೆಗೆ ಡಾ.ಮಹಾಂತ ಶಿವಯೋಗಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯು ನಗರದ ಎಫ್‍ಎಂಸಿ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.

Read More

ವಿರಾಜಪೇಟೆ ಜು.31 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರಾಜಪೇಟೆ ತಾಲೂಕಿನ ವಿರಾಜಪೇಟೆ ವಲಯದ ಗಾಂಧಿನಗರ ಕಾರ್ಯಕ್ಷೇತ್ರದ ಶಿವಾನಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ವಿರಾಜಪೇಟೆಯ ಶಿಕ್ಷಕರ ಸಭಾಂಗಣದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಗೋವಿಂದ್ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಶಿಕ್ಷಣವೆಂದರೆ ಕೇವಲ ಪುಸ್ತಕದ ಓದು ಮತ್ತು ಅಂಕ ಗಳಿಸುವುದು ಮಾತ್ರವಲ್ಲ. ಅಂಕಗಳಿಗಿಂತ ಮಿಗಿಲಾಗಿ ಅವರಿಗೆ ಬಾಲ್ಯದಲ್ಲೇ ಸಂಸ್ಕಾರ, ನೈತಿಕ ಮೌಲ್ಯ ಹಾಗೂ ನಮ್ಮ ನಾಡಿನ ಸಂಸ್ಕೃತಿಯನ್ನು ಧಾರೆ ಎರೆಯುವುದು ಅತ್ಯಂತ ಅಗತ್ಯ. ಸುಸಂಸ್ಕೃತ ಹಾಗೂ ಶಿಸ್ತಿನ ಜೀವನವನ್ನು ನಡೆಸಲು ಸಹಕಾರಿಯಾಗುವಂತಹ ನೈಜ ಶಿಕ್ಷಣವನ್ನು ಪ್ರತಿಯೊಬ್ಬ ಮಗುವಿಗೂ ನೀಡಬೇಕಿದೆ ಎಂದು ಅಭಿಪ್ರಾಯಪಟ್ಟರು. ಮಹಿಳೆಯರು, ದೈಹಿಕವಾಗಿ ಮಾನಸಿಕವಾಗಿ ಸದೃಢರಾಗುವುದರೊಂದಿಗೆ ಆರ್ಥಿಕವಾಗಿ ಸಬಲರಾಗಬೇಕು. ಜ್ಞಾನದ ವಿಕಾಸವಾಗಬೇಕು ಎನ್ನುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದ ವತಿಯಿಂದ ಈ ರೀತಿಯ ವಿಕಾಸ ಕೇಂದ್ರಗಳ ಸ್ಥಾಪನೆ ಮಾಡಿ ಮಹಿಳೆಯರನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುನ್ನೆಲೆಗೆ ತರುವ ಪ್ರಯತ್ನ…

Read More

ವಿರಾಜಪೇಟೆ ಜು.31 NEWS DESK : ವಿರಾಜಪೇಟೆ ರೋಟರಿ ಪ್ರಾಥಮಿಕ ಶಾಲೆಯಲ್ಲಿ ಕೆ.ಜಿ.ವಿಭಾಗದ ನೂತನ ಬಾಲ ನಾಯಕರ ‘ಪದಗ್ರಹಣ ಸಮಾರಂಭ’ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ, ಬಾಲ ನಾಯಕರಿಗೆ ಬ್ಯಾಡ್ಜ್ ನೀಡಿ ಮಾತನಾಡಿದ ಲೇಖಕಿ ರಜಿತಾ ಕಾರ್ಯಪ್ಪ, ನಾಯಕತ್ವ ಬಾಲ್ಯದಲ್ಲೇ ಮೊಳಕೆಯೊಡೆಯಬೇಕು, ನಾಯಕತ್ವ ಎಂಬುದು ಕೇವಲ ದೊಡ್ಡವರ ಆಸ್ತಿಯಲ್ಲ; ಚಿಕ್ಕ ವಯಸ್ಸಿನಲ್ಲೇ ಮಕ್ಕಳಲ್ಲಿ ಜವಾಬ್ದಾರಿ, ಶಿಸ್ತು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿದಾಗ ಅವರು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುತ್ತಾರೆ. ರೋಟರಿ ಶಾಲೆಯ ಈ ಪ್ರಯತ್ನ ಶ್ಲಾಘನೀಯ ಎಂದರು. ಚಿಕ್ಕ ವಯಸ್ಸಿನಲ್ಲೇ ಮಕ್ಕಳಲ್ಲಿ ನಾಯಕತ್ವ, ಶಿಸ್ತು ಮತ್ತು ಜವಾಬ್ದಾರಿಯ ಗುಣಗಳನ್ನು ಬೆಳೆಸುವುದು ಅವರ ಭವಿಷ್ಯಕ್ಕೆ ಬಲವಾದ ಬುನಾದಿ ಹಾಕುತ್ತದೆ. ಪ್ರತಿಯೊಬ್ಬ ಮಗುವಿನಲ್ಲೂ ಅಪಾರ ಶಕ್ತಿಯಿದ್ದು, ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಪೋಷಕರು ಮತ್ತು ಶಿಕ್ಷಕರಿಂದಾಗಬೇಕು”. ಮಕ್ಕಳಲ್ಲಿ ನಾಯಕತ್ವದ ಗುಣಗಳನ್ನು ಬಾಲ್ಯದಲ್ಲೇ ಬಿತ್ತಿ, ಅವರನ್ನು ವೇದಿಕೆಯ ಮೇಲೆ ಆತ್ಮವಿಶ್ವಾಸದಿಂದ ನಿಲ್ಲುವಂತೆ ರೂಪಿಸಿದ ಕೆ.ಜಿ. ವಿಭಾಗದ ಶಿಕ್ಷಕಿಯರ ಶ್ರಮವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ರೋಟರಿ ಸಂಸ್ಥೆಯ ಕಾರ್ಯದರ್ಶಿ…

Read More

ವಿರಾಜಪೇಟೆ ಜು.31 NEWS DESK : ಅವರ್ಸ್ ಕ್ಲಬ್ ವತಿಯಿಂದ ಆ.5 ರಂದು ಚೆಟ್ಟಳ್ಳಿಯ ಮಂಗಳ ಸಭಾಂಗಣದಲ್ಲಿ ಕಕ್ಕಡ ನಮ್ಮೆ ಆಚರಣೆ, ಸಂತೋಷ ಕೂಟ ಏರ್ಪಡಿಸಲಾಗಿದೆ ಎಂದು ಕ್ಲಬ್ ಅಧ್ಯಕ್ಷೆ ಮುಳ್ಳಂಡ ಶೋಭಾ ಚಂಗಪ್ಪ ತಿಳಿಸಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕ್ಷರಾದ ಶೋಭಾ ಚಂಗಪ್ಪ ವಹಿಸಲಿದ್ದಾರೆ. ಕಕ್ಕಡ ಹಬ್ಬದ ಪ್ರಯುಕ್ತ ಕಕ್ಕಡ ತಿಂಗಳಿನ ವಿಶೇಷ ಆಹಾರ ಪದಾರ್ಥಗಳಿಂದ ಮದ್ದು ಪಾಯಸ, ಮದ್ದ್ ಪುಟ್ಟ್, ಹಲಸಿನ ಬೀಜದ ಚಟ್ನಿ, ಬೈಮಬಳೆ ಕರಿ, ಪಲ್ಯ, ಮದ್ದು ನೀರ್ ಜೆಲ್ಲಿ, ಕುವಾಲೆ ಪುಟ್ಟ್, ಪತ್ರೋಡೆ, ಏಡಿ ಕರಿ, ನಾಟಿ ಕೋಳಿ ಕರಿ, ಪ್ರೈ, ಹಂದಿಮಾಂಸ ಕರಿ, ಪ್ರೈ, ತಯಾರಿಕ ಸ್ಪರ್ಧೆ ಮತ್ತು ನಡೆಯಲಿದೆ. ಅಲ್ಲದೆ ಮನರಂಜನಾತ್ಮಕ ಆಟೋಟಗಳನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವು ಕ್ಲಬ್‍ನ ಎಲ್ಲಾ ಸದಸ್ಯರ ಸಹಭಾಗಿತ್ವದಲ್ಲಿ ನಡೆಯಲಿದೆ ಎಂದು ಕ್ಲಬ್‍ನ ಆಡಳಿತ ಮಂಡಳಿ ಹಾಗೂ ಸದಸ್ಯರ ಪರವಾಗಿ ಅದ್ಯಕ್ಷರಾದ ಶೋಭಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More