ಮಡಿಕೇರಿ ಜ.4 NEWS DESK : ಕಟ್ಟೆಮಾಡು ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಬೈಲಾದಲ್ಲಿ ಇರುವ ನಡಾವಳಿಗಳನ್ನೆ ಮುಂದುವರೆಸಿಕೊಂಡು ಹೋಗಬೇಕೆಂದು ಕಟ್ಟೆಮಾಡು ಗ್ರಾಮದ ಮರಾಠಿ ಜನಾಂಗ ಬಾಂಧವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಜಿ.ವನಿತಾ ಅವರು, ಶ್ರೀಮಹಾ ಮೃತ್ಯುಂಜಯ ದೇವಸ್ಥಾನದ ವಾರ್ಷಿಕ ಉತ್ಸವದ ಕೊನೆಯ ದಿನದಂದು ದೇವರು ಜಳಕಕ್ಕೆ ತೆರಳುವ ಹಂತದಲ್ಲಿ ಒಂದು ಜನಾಂಗದವರು, ತಮ್ಮ ಸಾಂಪ್ರದಾಯಿಕ ಉಡುಪು ತೊಟ್ಟುಕೊಂಡು ಬಂದಿದ್ದು, ಇದು ಬೈಲಾದಲ್ಲಿನ ನಿಯಮಗಳಿಗೆ ವಿರುದ್ಧವಾಗಿದೆ ಎಂದರು. ದೇವಸ್ಥಾನದ ಬೈಲಾವನ್ನು ಗ್ರಾಮದ ಎಲ್ಲಾ ಜನಾಂಗ ಬಾಂಧವರ ಸಮ್ಮುಖದಲ್ಲಿಯೆ ರಚಿಸಲಾಗಿದ್ದು, ದೇವಸ್ಥಾನಕ್ಕೆ ಬಿಳಿ ಪಂಚೆ ಮತ್ತು ಶರ್ಟ್ ಧರಿಸಿ ಬರುವಂತೆ ಹಾಗೂ ಮಹಿಳೆಯರು ಸೀರೆ ಮತ್ತು ಚೂಡಿದಾರ ಧರಿಸುವಂತೆ ತೀರ್ಮಾಸಲಾಗಿದೆ. ಹೀಗಿದ್ದೂ ದೇವಸ್ಥಾನದ ಉತ್ಸವದ ಸಂದರ್ಭ ‘ಕೊಡವ ಸಾಂಪ್ರದಾಯಿಕ ಉಡುಪು’ ಧರಿಸಿ ಬಂದವರಿಂದ ಉತ್ಸವಕ್ಕೆ ಅಡ್ಡಿಯುಂಟಾಗಿದೆ. ಇದು ದೇವಸ್ಥಾನವನ್ನು ತಮ್ಮ ಹತೋಟಿಗೆ ತೆಗೆದುಕೊಳ್ಳುವ ಪ್ರಯತ್ನವೆಂದು ಆರೋಪಿಸಿದರು. ಸರ್ವ ಗ್ರಾಮಸ್ಥರ ಭಾವನೆಗಳಿಗೆ ಸ್ಪಂದನೆ ನೀಡಿ ದೇವಸ್ಥಾನದ ಬೈಲಾ ನಿಯಮಾವಳಿಯನ್ನು ಮುಂದುವರೆಸಿಕೊಂಡು ಹೋಗಲು ಜಿಲ್ಲಾಡಳಿತ ಅವಕಾಶ…
ಲೇಖಕ: admin
ಜ.6 ರಿಂದ 12ರ ವರೆಗಿನ ವಾರ ಭವಿಷ್ಯ (ಡಾ.ಮಹಾಬಲೇಶ್ವರ ಭಟ್, ಮೂರ್ನಾಡು 8105634429) ಮೇಷ ರಾಶಿ :: ಈ ವಾರದಲ್ಲಿ ನಿಮಗೆ ಹೊಸ ಸುದ್ದಿ ಕೇಳಿ ಬರಲಿದೆ. ಸಂತೋಷವು ಆಗಲಿದೆ. ಆರ್ಥಿಕ ಪ್ರಗತಿಯನ್ನು ಹೊಂದುವಿರಿ, ಸ್ನೇಹಿತರಿಗೆ ಸಹಾಯ ಮಾಡುವಿರಿ. ದೂರ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ :: 1, 2, 3, 9 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ ವೃಷಭ ರಾಶಿ :: ದೂರ ಪ್ರವಾಸಕ್ಕೆ ಹೋಗಲಿದ್ದು, ಸ್ನೇಹಿತರಿಂದ ಉಡುಗೊರೆ ಪಡೆಯಲಿದ್ದೀರಿ. ವ್ಯಾಪಾರಸ್ಥರಿಗೆ ಹಣದ ಅಡಚಣೆ ಆಗಲಿದೆ. ಹೊಸ ಸಂಬಂಧ ಕೂಡಿ ಬರಲಿದೆ. ಚರ್ಮಕ್ಕೆ ಸಂಬಂಧಪಟ್ಟ ವ್ಯಾದಿ ಕಾಡಲಿದೆ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು, ಕಪ್ಪು ಮಿಥುನ ರಾಶಿ :: ಈ ರಾಶಿಯವರಿಗೆ ತುಂಬಾ ಸುತ್ತಾಟ, ಶುಭ ಕಾರ್ಯದಲ್ಲಿ ಭಾಗವಹಿಸುವಿಕೆ, ವಿಪರಿಮಿತ ಹಣದ ಖರ್ಚು, ಗಂಟಲು ನೋವು, ಶೀತ ಬರಲಿದೆ. ಮಿತ್ರರಿಂದ ಸಹಾಯ. ಶುಭಸಂಖ್ಯೆ…
ಮಡಿಕೇರಿ ಜ.4 NEWS DESK : ಯಾವುದೇ ಜಾತಿ, ಜನಾಂಗ ಅಥವಾ ಒಂದು ವರ್ಗಕ್ಕೆ ಸೀಮಿತವಾದ ಸಂಪ್ರದಾಯಗಳಿಗೆ ಆದ್ಯತೆ ನೀಡದೆ ದೇವರ ಸನ್ನಿಧಿಯಲ್ಲಿ ಎಲ್ಲರೂ ಒಂದೇ ಎನ್ನುವ ಭಾವನೆಯಿಂದ ಶ್ರೀಮಹಾಮೃತ್ಯುಂಜಯ ದೇವಾಲಯ ಸಮಿತಿ ರೂಪಿಸಿರುವ ಕಟ್ಟುಪಾಡುಗಳಿಗೆ ನಾವು ಬದ್ಧ ಎಂದು ಕಟ್ಟೆಮಾಡು ಗ್ರಾಮದ ಗೌಡ ಸಮುದಾಯ ಸ್ಪಷ್ಟಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಪ್ಪಯಂಡ್ರ ಮಣಿ ಮುತ್ತಪ್ಪ ಅವರು ಡಿ.27ರಂದು ದೇವಾಲಯದ ಜಾತ್ರಾ ಮಹೋತ್ಸವದ ಸಂದರ್ಭ ದೇವರು ಜಳಕಕ್ಕೆ ಹೊರಡುವಾಗ ದೇವಾಲಯ ಸಮಿತಿಯ ನಿಯಮವನ್ನು ಮೀರಿ ಕೆಲವರು ಉದ್ದೇಶಪೂರ್ವಕವಾಗಿ ಸಾಂಪ್ರದಾಯಿಕ ಉಡುಪಿನಲ್ಲಿ ಆಗಮಿಸಿದ್ದಾರೆ. ಇದು ದೇವಾಲಯದ ಅಧಿಕಾರ ಹಿಡಿಯುವ ಹುನ್ನಾರವಾಗಿದೆ ಎಂದು ಆರೋಪಿಸಿದರು. ಸಂಘರ್ಷ ನಡೆಯುವ ಸಂದರ್ಭ ಎರಡೂ ಕಡೆಯಿಂದ ಮಾತಿಗೆ ಮಾತು ಬೆಳೆದಿದೆ, ತಳ್ಳಾಟವಾಗಿದೆ. ಆದರೆ ಯಾರ ಮೇಲೂ ಹಲ್ಲೆಯಾಗಿಲ್ಲ, ಯಾರನ್ನೂ ದೇವಾಲಯದ ಒಳಗೆ ಬರಬೇಡಿ ಎಂದು ಹೇಳಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ವಿನಾಕಾರಣ ಸುಳ್ಳು ವದಂತಿ ಹಬ್ಬಿಸಲಾಗುತ್ತಿದೆ. ದೇವಾಲಯದ ಸಿಸಿ ಕ್ಯಾಮರಾದಲ್ಲಿ ಸತ್ಯಾಂಶ ಸೆರೆಯಾಗಿದ್ದು, ಯಾರು ಬೇಕಾದರೂ ಪರಿಶೀಲಿಸಬಹುದು ಎಂದು ಹೇಳಿದರು.…
ಮಡಿಕೇರಿ ಜ.4 NEWS DESK : ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಾಲಯದಲ್ಲಿ ಈಗ ಅಸ್ತಿತ್ವದಲ್ಲಿರುವ ಆಡಳಿತ ಮಂಡಳಿಯನ್ನು ಉಚ್ಚಾಟಿಸಿ ಸರಕಾರ ದೇವಾಲಯವನ್ನು ತನ್ನ ಅಧೀನಕ್ಕೆ ಪಡೆಯಬೇಕೆಂದು ಅಖಿಲ ಕೊಡವ ಸಮಾಜ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಅವರು, ಈಗ ಇರುವ ದೇವಾಲಯ ಆಡಳಿತ ಮಂಡಳಿ ಜಾತಿವಾದಿಯಾಗಿದ್ದು, ಸಂಘರ್ಷಕ್ಕೆ ನಾಂದಿ ಹಾಡಿದೆ. ಅತ್ಯಂತ ಪ್ರಾಚೀನವಾದ ಮಾದೇವ ದೇವಸ್ಥಾನದ ಹೆಸರನ್ನು ಬಾಡಗರಕೇರಿ ಮೃತ್ಯುಂಜಯ ದೇವಾಲಯಕ್ಕೆ ಪರ್ಯಾಯವಾಗಿ ಶ್ರೀಮಹಾಮೃತ್ಯುಂಜಯ ದೇವಾಲಯವೆಂದು ಬದಲಾಯಿಸಿ ಆಡಳಿತ ಮಂಡಳಿ ರಚಿಸಲಾಗಿದೆ ಎಂದು ಆರೋಪಿಸಿದರು. ಮಾದೇವ ದೇವರ ಹೆಸರಿನಡಿ ಸ್ಥಳೀಯ ಸಂಪ್ರದಾಯಕ್ಕೆ ಬದ್ಧವಾಗಿ ಆಡಳಿತ ನಡೆಸಲು ಅಖಿಲ ಕೊಡವ ಸಮಾಜ ಸರಕಾರಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ ಎಂದರು. ಕಟ್ಟೆಮಾಡು ಪಾಪಳಕೇರಿ ಮಾದೇವ ದೇವರ ಸ್ಥಾನಕ್ಕೆ ಸುಮಾರು ಸಾವಿರ ವರ್ಷಗಳ ಇತಿಹಾಸವಿದೆ. ಕೊಡಗಿನಲ್ಲಿ ಪಾಲೇರಿ ರಾಜವಂಶ ಸ್ಥಾಪನೆಯಾಗುವ ಮೊದಲೇ ಈ ದೇವಾಲಯವಿದ್ದು, ಕೆಲವು ಕೊಡವ ಭಾಷಿಕ ಕುಟುಂಬಗಳು ವರ್ಷಾವಧಿ ಪೂಜೆ ನಡೆಸುತ್ತಾ ಬಂದಿರುವುದು…
ಸೋಮವಾರಪೇಟೆ ಜ.4 NEWS DESK : ತಾಲೂಕಿನ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಕಟ್ಟಡ ದುರಸ್ತಿ ಹಾಗೂ ಬಿಸಿಯೂಟದ ಹಾಲ್ ನಿರ್ಮಾಣಕ್ಕೆ ಅನುದಾನ ಕೋರಿ ಶಾಸಕ ಡಾ.ಮಂತರ್‍ಗೌಡ ಅವರಿಗೆ ಮನವಿ ಸಲ್ಲಿಸಲಾಯಿತು. ನೂತನ ವರ್ಷಾಚರಣೆಯ ಪ್ರಯುಕ್ತ ಶಾಲಾ ಕಾಲೇಜು ಮಕ್ಕಳಿಗೆ ಶಾಸಕರು ಸಿಹಿ ವಿತರಿಸಿದರು. ಇದೇ ಸಂದರ್ಭ ಶಾಲಾ ಮಕ್ಕಳಿಗೆ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಆಲಿಸಿದ ಶಾಸಕರು, ಪಕ್ಕದ ಗ್ರಾಮಗಳಿಂದ ಶಾಲೆಗೆ ಬರುತ್ತಿರುವ ವಿದ್ಯಾರ್ಥಿಗಳಿಗೆ ಎದುರಾಗುತ್ತಿರುವ ಬಸ್ ಸಮಸ್ಯೆ, ಕಾಡಾನೆ ಹಾವಳಿ, ಶಾಲೆ ಸಮೀಪ ಇರುವ ಅರಣ್ಯ ಪ್ರದೇಶದಿಂದ ಚಿಕ್ಕ ಕೀಟಗಳ ಉಪಟಳ ಆಗುತ್ತಿರುವ ಕುರಿತು ಮಾಹಿತಿ ಪಡೆದುಕೊಂಡರು. ಸಮಸ್ಯೆಗಳ ಕುರಿತು ತಕ್ಷಣವೇ ಪರಿಹರಿಸಲಾಗುವುದೆಂದು ಶಾಸಕರು ಹೇಳಿದರು. ಶಾಸಕರು ಶಾಲೆಗೆ ಭೇಟಿ ನೀಡಿದ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಯೋಗೇಶ್, ಸದಸ್ಯರಾದ ಭರತ್, ಕಾಲೇಜು ಪ್ರಭಾರ ಪ್ರಾಂಶುಪಾಲ ಎಚ್.ಕೆ ಉಮೇಶ್ ಕುಮಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಎಂ.ಎಂ.ಯಶ್‍ವಂತ್ ಕುಮಾರ್ ಇದ್ದರು.
ಮಡಿಕೇರಿ ಜ.4 NEWS DESK : ಮಾನವ ಬಂಧುತ್ವ ವೇದಿಕೆ ಕೊಡಗು ಜಿಲ್ಲಾ ಶಾಖೆ ವತಿಯಿಂದ ಸೋಮವಾರಪೇಟೆ ತಾಲ್ಲೂಕು ಕೊಡ್ಲಿಪೇಟೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಸಾವಿತ್ರಿ ಬಾಯಿಫುಲೆ ಅವರ ಜನ್ಮದಿನದ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳು ಸಾವಿತ್ರಿ ಬಾಯಿ ಫುಲೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ದನ್, ಸಾಮಾಜಿಕ ಅನಿಷ್ಟ ಹಾಗೂ ಗೊಡ್ಡು ಸಂಪ್ರದಾಯಗಳ ನಡುವೆ, ಪುರುಷರಂತೆ ಮಹಿಳೆಯರಿಗೆ ಶಿಕ್ಷಣ, ಉದ್ಯೋಗ ಸಿಗಬೇಕು ಎಂದು ಹೋರಾಟ ಮಾಡಿದ್ದಾರೆ ಎಂದರು. ಮಾನವ ಬಂಧುತ್ವ ನಡೆದುಕೊಂಡ ಬಂದ ದಾರಿಯ ಬಗ್ಗೆ ವಿವರಿಸಿದರು. ವಿಜ್ಞಾನವೇ ನಮ್ಮ ನಡೆ ಮೌಡ್ಯದಿಂದ ಹೊರಬನ್ನಿ ಎಂದು ಹೇಳಿದರು. ಮಲ್ಲಿಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಚಂದ್ರಕಲಾ ಮಾತನಾಡಿ, ಸಾವಿತ್ರಿಬಾಯಿಫುಲೆ ಹೆಣ್ಣುಮಕ್ಕಳಿಗೆ ಹಾಗೂ ಮಹಿಳೆಯರಿಗೆ ಶಿಕ್ಷಣ ಸಿಗಬೇಕು, ಮುಖ್ಯವಾಹಿನಿಗೆ ಬರಬೇಕು. ಹೆಣ್ಣು ಅಬಲೆ ಅಲ್ಲ ಸಬಲೆ ಎಂದು ಪ್ರಾತಿಪಾದಿಸಿದ್ದಾರೆ ಎಂದ ಅವರು, ಮಹಿಳೆಯರಿಗೆ ಅವರು…
ಮಡಿಕೇರಿ ಜ.4 NEWS DESK : ಕೊಡ್ಲಿಪೇಟೆಯ ಬೆಸೂರು ಜೈ ಭೀಮ್ ವಿಪ್ಲವ ಯುವ ಬಳಗದ ವತಿಯಿಂದ ಬೆಸೂರಿನಲ್ಲಿ ಜ.5 ರಂದು ಭೀಮ ಕೊರೆಗಾಂವ್ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದೆ. ಬೆಸೂರು ನ್ಯಾಯದಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಕಾರ್ಯಕ್ರಮ ನಡೆಯಲಿದ್ದು, ಮೈಸೂರು ಉರಿಲಿಂಗಿ ಪೆದ್ದಿಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಜೈ ಭೀಮ್ ವಿಪ್ಲವ ಯುವ ಬಳಗದ ಅಧ್ಯಕ್ಷ ಎನ್.ಆರ್.ರಂಗಸ್ವಾಮಿ (ಪಾಂಡು) ವಹಿಸಲಿದ್ದಾರೆ. ಮುಖ್ಯತಿಥಿಗಳಾಗಿ ಅರಕಲಗೋಡು ಶಾಸಕ ಎ.ಮಂಜು, ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಸೀಮೆಂಟ್ ಮಂಜು, ಬೆಸೂರು ಗ್ರಾ.ಪಂ ಅಧ್ಯಕ್ಷರಾದ ಕಮಲಮ್ಮ, ಎಸ್‍ಸಿ-ಎಸ್ಟಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹೇಂದ್ರ ಪಾಲ್ಗೊಳ್ಳಲಿದ್ದು, ಖ್ಯಾತ ವಕೀಲ ಹಾಗೂ ಅಂಬೇಡ್ಕರ್ ವಿಚಾರವಾದಿ ಪ್ರೊ.ಹರಿರಾಮ್ ಮುಖ್ಯ ಭಾಷಣ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಕೊಡ್ಲಿಪೇಟೆ ವೃತ್ತದಿಂದ…
ಮಡಿಕೇರಿ ಜ.4 NEWS DESK : ಮಡಿಕೇರಿ ನಗರದಲ್ಲಿ ನಡೆದ ಮೂರು ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಕೊಳಗಿ ಗ್ರಾಮದ ನಿವಾಸಿ ನಾಗರಾಜು (37) ಬಂಧಿತ ಆರೋಪಿಯಾಗಿದ್ದು, ಈತನ ಬಳಿಯಿಂದ ರೂ.50 ಸಾವಿರ ನಗದು, 87 ಗ್ರಾಂ ಚಿನ್ನಾಭರಣ ಮತ್ತು 2 ಬೆಳ್ಳಿ ಚೈನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಮಡಿಕೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜನರಲ್ ತಿಮ್ಮಯ್ಯ ವೃತ್ತದ ಬಳಿಯ ನಿವಾಸಿ ರಜಿನಿ ಹರೀಶ್ ಎಂಬುವವರು 2024 ಡಿ.5 ರಂದು ಪುತ್ರಿಯ ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲೆಂದು ತೆರಳಿದ್ದು, ರಾತ್ರಿ ಮನೆಗೆ ಮರಳಿದಾಗ ಕಳ್ಳತನವಾಗಿರುವುದು ಕಂಡು ಬಂದಿದೆ. ಬೀರುವಿನಲ್ಲಿದ್ದ ಸುಮಾರು 87 ಗ್ರಾಂ ಚಿನ್ನಾಭರಣಗಳನ್ನು ಕಳ್ಳರು ದೋಚಿರುವ ಕುರಿತು ರಜಿನಿ ಹರೀಶ್ ಅವರು ನೀಡಿರುವ ದೂರನ್ನು ಆಧರಿಸಿ ಮಡಿಕೇರಿ ಪೊಲೀಸರು ತನಿಖೆ ಕೈಗೊಂಡಿದ್ದರು. ಆರೋಪಿ ನಾಗರಾಜುವನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಈತ ಇನ್ನೂ ಎರಡು ಕಳ್ಳತನ…
ನವದೆಹಲಿ ಜೂ.4 NEWS DESK :: ಹೆಚ್ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿದ್ದು, ಉಸಿರಾಟ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ನಿಗಾ ಇಡಲಾಗಿದೆ. ಸದ್ಯಕ್ಕೆ ಭಾರತದಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಕುರಿತು ಆರೋಗ್ಯ ಸೇವೆಗಳ ಮಹಾನಿರ್ದೇಶಕರಾದ ಡಾ.ಅತುಲ್ ಗೋಯಲ್ ಅವರು ಪ್ರತಿಕ್ರಿಯೆ ನೀಡಿದ್ದು, ಹೆಚ್ಎಂಪಿವಿ ವೈರಸ್ ಶೀತದಂತಹ ಲಕ್ಷಣಗಳನ್ನು ಹೊಂದಿದ್ದು, ಮಕ್ಕಳು ಹಾಗೂ ವೃದ್ಧರಲ್ಲಿ ಜ್ವರ ಕಾಣಿಸಿಕೊಳ್ಳಬಹುದು. ದೇಶದಲ್ಲಿ 2024ರ ಡಿಸೆಂಬರ್ ನಲ್ಲಿ ಉಸಿರಾಟ ಸಂಬಂಧಿ ಸಮಸಯೆಗಳು ಅಧಿಕ ಸಂಖ್ಯೆಯಲ್ಲಿ ವರದಿಯಾಗಿಲ್ಲ. ಪ್ರಸ್ತುತ ಪರಿಸ್ಥಿತಿ ಅಪಾಯಕಾರಿಯಾಗಿಲ್ಲ. ಒಂದೊಮ್ಮೆ ಸಮಸ್ಯೆ ಉಲ್ಬಣಿಸಿದರೂ ನಮ್ಮ ಆಸ್ಪತ್ರೆಗಳಲ್ಲಿ ಅದಕ್ಕೆ ಬೇಕಾದಷ್ಟು ವ್ಯವಸ್ಥೆಗಳು ಲಭ್ಯವಿದೆ ಎಂದು ಹೇಳಿದರು. ಇದೇ ವೇಳೆ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಿದರು. ಭಾರತದಲ್ಲಿ ಈ ವೈರಸ್ ಪ್ರಕರಣ ಪತ್ತೆಯಾಗಿಲ್ಲ. ಚಳಿಗಾಲದಲ್ಲಿ ಉಸಿರಾಟ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಭಾರತದ ಆರೋಗ್ಯ ವಿಭಾಗ ಯಾವುದೇ ಪರಿಸ್ಥಿತಿ ಎದುರಿಸಲು ಸನ್ನದ್ಧವಾಗಿದೆ. ಹೀಗಾಗಿ ಜನರು…
ಮಡಿಕೇರಿ ಜ.4 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಜೆ.ಸಿ.ಐ ಪೊನ್ನಂಪೇಟೆ ನಿಸರ್ಗ ಸಹಯೋಗದಲ್ಲಿ ಜ.5 ರಂದು ಮಾಯಮುಡಿಯಲ್ಲಿ ತೋಕ್ ನಮ್ಮೆ ನಡೆಯಲಿದೆ. ಮಾಯಮುಡಿ ಸರ್ಕಾರಿ ಶಾಲಾ ಮೈದಾನದಲ್ಲಿ ಬೆಳಿಗ್ಗೆ 9.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ ಉಪಸ್ಥಿತರಿರಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜೆ.ಸಿ.ಐ ಪೊನ್ನಂಪೇಟೆ ನಿಸರ್ಗ ಅಧ್ಯಕ್ಷ ಜೇಸಿ ಪೆಮ್ಮಂಡ ಮಂಜು ಬೋಪಣ್ಣ, ದಕ್ಷಿಣ ಭಾರತದ ಡಿ.ಹೆಚ್.ಎಲ್. ಇ.ಕಾಂ ಉಪಾಧ್ಯಕ್ಷ ಬಾಳೆಯಡ ಕರುಣ್ ಕಾಳಯ್ಯ, ಅಮ್ಮತ್ತಿ ಕೊಡವ ಸಮಾಜದ ಅಧ್ಯಕ್ಷ ಐನಂಡ ಪ್ರಕಾಶ್ ಗಣಪತಿ, ಕೊಡಗು ಜಬ್ಬೂಮಿ ಟ್ರಸ್ಟ್ ಅಧ್ಯಕ್ಷ ಚೊಟ್ಟೆಕ್‍ಮಾಡ ರಾಜೀವ್ ಬೋಪಯ್ಯ, ಕೋಲುಬಾಣೆ ಕಾವೇರಿ ಅಸೋಸಿಯೇಷನ್…






