ಲೇಖಕ: admin

ನಾಪೋಕ್ಲು ಜ.4 NEWS DESK : ನಾಪೋಕ್ಲು ಗ್ರಾ.ಪಂ ಉಪಾಧ್ಯಕ್ಷರಾಗಿ ಕಂಗಂಡ ಶಶಿ ಮಂದಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಜೀನಾಮೆಯಿಂದ ತೆರವಾಗಿದ್ದ ಗ್ರಾ.ಪಂ ಉಪಾಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕಂಗಂಡ ಶಶಿ ಮಂದಣ್ಣ ಅವಿರೋಧವಾಗಿ ಆಯ್ಕೆಯಾದರು. ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾ ಅಧಿಕಾರಿಯಾಗಿ ಮಡಿಕೇರಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಎಂ.ಪ್ರವೀಣ್ ಕಾರ್ಯ ನಿರ್ವಹಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರಾದ ವನಜಾಕ್ಷಿ ರೇಣುಕೇಶ್, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಕಾಂಗ್ರೆಸ್ ವಲಯ ಅಧ್ಯಕ್ಷ ಮಾಚೆಟ್ಟಿರ ಕುಸು ಕುಶಾಲಪ್ಪ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ 

Read More

ಮಡಿಕೇರಿ ಜ.4 NEWS DESK : ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೋಮಶೇಖರ ಕೊಯಿಂಗಾಜೆ ಹಾಗೂ ಉಪಾಧ್ಯಕ್ಷರಾಗಿ ಬಿ.ಎಸ್.ಯಮುನಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Read More

ಸುಂಟಿಕೊಪ್ಪ ಜ.4 NEWS DESK : ಪದವಿ ಪೂರ್ವ ಶಿಕ್ಷಣದ ಅವಧಿಯು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಹೇಳಿದರು. ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾಲೇಜು ವಾರ್ಷಿಕೋತ್ಸವ ಸಮಾರಂಭ, ವಿದ್ಯಾರ್ಥಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಸಮಾರೋಪ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಏಕಾಗ್ರತೆಯಿಂದ ವಿದ್ಯಾರ್ಥಿಗಳು ಅಧ್ಯಯನ ಮಾಡಿ ಯಶಸ್ಸನ್ನುಗಳಿಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಸಾಧನಾ ಶಿಖರವನ್ನು ಏರಬೇಕು. ಪೋಷಕರು ನಿಮ್ಮಗಳ ಮೇಲೆ‌ ಇಟ್ಟಿರುವ ಭರವಸೆಯನ್ನು ಇಡೇರಿಸಬೇಕೆಂದು ಅವರು ಕರೆ ನೀಡದಿದರು‌. ಕಲ್ಲು ಶಿಲೆಯಾಗಿ ಶಿಲೆಯು ಮೂರ್ತಿಯಾದರೆ ಗರ್ಭಗುಡಿಯಲ್ಲಿ ಸ್ಥಾಪಿತವಾಗಿ ಪೂಜಿತವಾಗುತ್ತದೆ.ಅದೇ ಕಲ್ಲು ಮೆಟ್ಟಿಲಾದರೆ ತುಳಿತಕ್ಕೆ ಒಳಗಾಗಬೇಕಾಗುತ್ತದೆ.ಇದೇ ರೀತಿ ಸಾಧನೆ ಮಾಡಿದರೆ ಎಲ್ಲರ ಮೆಚ್ಚುಗೆಗೆ ಪಾತ್ರರಾಗುತ್ತಾರೆ. ಸಾಧನೆ ರಹಿತರಾದರೆ ಎಲ್ಲರ ತುಳಿತಕ್ಕೆ ಅಂದರೆ ಅವಹೇಳನಕ್ಕೆ ಒಳಗಾಗುತ್ತಾರೆ.ಆದ್ದರಿಂದ ವಿದ್ಯಾರ್ಥಿಗಳು ಸಾಧಕರಾಗಬೇಕೆಂದು ವಿ.ಜಿ.ಲೋಕೇಶ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ ಮಾತನಾಡಿ ಕಾರ್ಯಕ್ರಮದ ಯಶಸ್ವಿಗೆ ಕಾರಣರಾದವ ಸ್ಮರಿಸಿ…

Read More

ಮಡಿಕೇರಿ ಜ.4 NEWS DESK : ಪ್ರಸಕ್ತ (2024-25) ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‍ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ, 15 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://bcwd.karnataka.gov.in/ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಪ್ರವರ್ಗ-2ಎ, 3ಎ,3ಬಿ ರೂ.8 ಲಕ್ಷ. ಹೆಚ್ಚಿನ ಮಾಹಿತಿಗೆ ಹಾಗೂ ಷರತ್ತು ನಿಬಂಧನೆಗಾಗಿ ಸಹಾಯವಾಣಿ ಸಂಖ್ಯೆ 8050770004 ನ್ನು ಸಂಪರ್ಕಿಸಿ ಕಚೇರಿ ವೇಳೆಯಲ್ಲಿ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಜ.3 : ಕಟ್ಟೆಮಾಡುವಿನ ಎಲ್ಲಾ ಜನಾಂಗ ಬಾಂಧವರು ಒಟ್ಟಾಗಿ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರಮಿಸಿದ್ದು, ಮೃತ್ಯುಂಜಯನ ಸನ್ನಿಧಿಯಲ್ಲಿ ಭಕ್ತಿ ಇರಲಿ, ಶಕ್ತಿ ಪ್ರದರ್ಶನ ಬೇಡ ಎಂದು ಗ್ರಾಮದ ಬಿಲ್ಲವ ಸೇವಾ ಸಮಾಜ ಮನವಿ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಸದಸ್ಯ ರಘು ರಾಜಕುಮಾರ್ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಜಾತ್ರೋತ್ಸವದ ಸಂದರ್ಭ ನಡೆದ ಘಟನೆ ಅತೀವ ಬೇಸರವನ್ನುಂಟು ಮಾಡಿದೆ. ದೇವರು ಜಳಕಕ್ಕೆ ತೆರಳುವ ಪರಂಬು ಪೈಸಾರಿಯ ಉದ್ದಕ್ಕೂ ಅಲ್ಲಿನ ನಿವಾಸಿಗಳು ಹಾದಿಯನ್ನು ಸ್ವಚ್ಛಗೊಳಿಸಿ ಹೂವಿನ ರಂಗೋಲಿಯನ್ನಿಟ್ಟು, ಭಕ್ತಾದಿಗಳಿಗೆ ಆಹಾರ ವ್ಯವಸ್ಥೆಯನ್ನು ಮಾಡಿ ದೇವರ ಆಗಮನವನ್ನು ಎದುರು ನೋಡುತ್ತಿದ್ದರು. ಆದರೆ ಇದೇ ಅವಧಿಯಲ್ಲಿ ಭಿನ್ನಾಭಿಪ್ರಾಯ ಮೂಡಿತು ಎಂದರು. ಶ್ರೀ ಮಹಾ ಮೃತ್ಯಂಜಯ ದೇವಸ್ಥಾನ ಸಮಿತಿಯಲ್ಲಿ ಗ್ರಾಮದ ಎಲ್ಲಾ ಜನಾಂಗದ ಪ್ರತಿನಿಧಿಗಳು ಸೇರಿದಂತೆ ಒಟ್ಟು 43 ಸದಸ್ಯರುಗಳಿದ್ದಾರೆ. ಇವರೆಲ್ಲರ ಒಮ್ಮತದ ತೀರ್ಮಾನದಂತೆ ಅಧ್ಯಕ್ಷರನ್ನಾಗಿ ಗೌಡ ಸಮುದಾಯದ ಒಬ್ಬರನ್ನು ಆಯ್ಕೆ ಮಾಡಲಾಗಿದೆ. ದೇವಸ್ಥಾನದ ಪ್ರತಿಯೊಂದು ಕೆಲಸ ಕಾರ್ಯಗಳನ್ನು ಎಲ್ಲಾ…

Read More

ಮಡಿಕೇರಿ NEWS DESK ಜ.3 : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸ್ಥಾಪಿಸುವಂತೆ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸಮಿತಿ ನಗರಸಭಾ ಆಯುಕ್ತÀ ಹೆಚ್.ಆರ್.ರಮೇಶ್ ಅವರಿಗೆ ಮನವಿ ಸಲ್ಲಿಸಿದೆ. ಇಡೀ ರಾಜ್ಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಇಲ್ಲದ ಏಕೈಕ ಜಿಲ್ಲೆ ಕೊಡಗು. ಈ ಹಿಂದಿನಿoದಲು ಪ್ರತಿಮೆ ಸ್ಥಾಪನೆಗೆ ಮನವಿ ಮಾಡಿಕೊಂಡು ಬಂದಿದ್ದರು ಅದು ಫಲಪ್ರದವಾಗಿಲ್ಲವೆಂದು ಸಮಿತಿಯ ಪ್ರಮುಖರು ಬೇಸರ ವ್ಯಕ್ತಪಡಿಸಿದರು. ಸಮಿತಿ ಸದಸ್ಯ ಟಿ.ಈ.ಸುರೇಶ್ ಅವರು ಮಾತನಾಡಿ, ಮಡಿಕೇರಿಯ ಕಾವೇರಿ ಕಲಾಕ್ಷೇತ್ರದ ಪಕ್ಕದ ಉದ್ಯಾನವನ, ಜಿಲ್ಲಾಧಿಕಾರಿಗಳ ಕಛೇರಿ ಬಳಿಯ ಉದ್ಯಾನವನ, ಫೀ.ಮಾ.ಕಾರ್ಯಪ್ಪ ವೃತ್ತದ ಬಳಿಯ ಉದ್ಯಾನವನಗಳನ್ನು ಪ್ರತಿಮೆ ಸ್ಥಾಪನೆಗೆ ಪರಿಗಣಿಸಬಹುದಾಗಿದೆ. ಆದಷ್ಟು ಶೀಘ್ರ‍್ರ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡು ಪ್ರಸಕ್ತ ಸಾಲಿನ ಏ.14 ಡಾ.ಅಂಬೇಡ್ಕರ್ ಜಯಂತಿ ಒಳಗಾಗಿ ಪ್ರತಿಮೆ ನಿರ್ಮಾಣ ಮಾಡುವಂತೆ ಕೋರಿಕೊಂಡರು. ಮನವಿ ಸ್ವೀಕರಿಸಿದ ಪೌರಾಯುಕ್ತ ಹೆಚ್.ಆರ್.ರಮೇಶ್ ಅವರು, ನಗರಸಭೆಯ ಕಾವೇರಿ ಕಲಾಕ್ಷೇತ್ರದ ಉದ್ಯಾನವನವನ್ನು ಒಳಗೊಂಡoತೆ ಮೂರು ಹಂತದ ನಗರಸಭೆೆಯ ಕಟ್ಟಡ ನಿರ್ಮಾಣಕ್ಕೆ…

Read More

ಮಡಿಕೇರಿ NEWS DESK ಜ.3 : ಬೈಕ್‌ನಲ್ಲಿ ತೆರಳುತ್ತಿದ್ದ ಸಹೋದರರಿಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಪ್ರಕರಣ ದಕ್ಷಿಣ ಕೊಡಗಿನ ಪೊನ್ನಂಪೇಟೆ ಬಳಿಯ ಹಳ್ಳಿಗಟ್ಟು ಗ್ರಾಮದಲ್ಲಿ ನಡೆದಿದೆ. ಮೊಹಮ್ಮದ್ ಫೈಜನ್ ಹಾಗೂ ಅಬುರ್ ಉವೈಸ್ ಸಹೋದರರು ಕಾಡಾನೆ ದಾಳಿಯಿಂದ ಗಾಯಗೊಂಡಿದ್ದು, ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಗ್ಗಿನ ಜಾವ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಕಾಡಾನೆ ದಾಳಿ ಮಾಡಿದೆ. ಈ ಸಂದರ್ಭ ಸಹೋದರರು ಬಿದ್ದು ಗಂಭೀರ ಸ್ವರೂಪದ ಗಾಯಗಳಾಗಿದೆ. ಇಬ್ಬರಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ::: ಬಗೆಹರಿಯದ ಸಮಸ್ಯೆ ::: ಕಳೆೆದ ಎರಡು ದಶಕಗಳಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ನಿರಂತರವಾಗಿ ಹೆಚ್ಚುತ್ತಿದೆ. ಅದರಲ್ಲೂ ನಾಗರಹೊಳೆ ಅರಣ್ಯದ ಅಂಚಿನ ದಕ್ಷಿಣ ಕೊಡಗಿನ ಗ್ರಾಮೀಣ ಭಾಗಗಳು ಕಾಡಾನೆ ಹಾವಳಿಯಿಂದ ನಲುಗಿವೆ. ಇಲ್ಲಿನ ಗ್ರಾಮೀಣರು ಕಾಡಾನೆ ಹಾವಳಿಯಿಂದ ಜೀವ ಮತ್ತು ಕೃಷಿ ಫಸಲನ್ನು ಕಳೆದುಕೊಳ್ಳುತ್ತಿದ್ದಾರೆ. ನೂರಾರು ಕಾಡಾನೆಗಳು ದಕ್ಷಿಣ ಕೊಡಗಿನ ಕಾಫಿ ತೋಟಗಳನ್ನೇ…

Read More

ಮಡಿಕೇರಿ ಜ.3 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣ ಘಟಕದ ವತಿಯಿಂದ ಗೃಹ ಆರೋಗ್ಯ ಯೋಜನೆ ಕಾರ್ಯಕ್ರಮದ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಅವರು ‘ಗೃಹ ಆರೋಗ್ಯ ಕಾರ್ಯಕ್ರಮ’ದ ಬಗ್ಗೆ ಮಾಹಿತಿಯನ್ನು ನೀಡಿದರು. 30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯೋಮಾನದವರಿಗೆ ಮನೆ ಮನೆಗೆ ತೆರಳಿ ಸಾಂಕ್ರಾಮಿಕ ವಲ್ಲದ ರೋಗಗಳ ತಪಾಸಣೆ ಮತ್ತು ಪರೀಕ್ಷೆ ಮಾಡಲಾಗುತ್ತದೆ. ಯೋಜನೆಯಡಿಯಲ್ಲಿ ಎಲ್ಲಾ ಸಾರ್ವಜನಿಕರ ಆರೋಗ್ಯ ಮಟ್ಟ ಸುಧಾರಿಸುವ ಮತ್ತು ಸಾಂಕ್ರಾಮಿಕ ವಲ್ಲದ ರೋಗಗಳನ್ನು ನಿಯಂತ್ರಿಸುವ ಗುರಿ ಹೊಂದಿದೆ. ಕೊಡಗಿನಲ್ಲಿ ಜನವರಿ 6 ರಿಂದ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು. ಜನತೆಯ ಮನೆ ಮನೆ ಬಾಗಿಲಿಗೆ ಆರೋಗ್ಯ ಸೇವೆ ಸಲ್ಲಿಸುವುದು ರಾಜ್ಯ ಸರ್ಕಾರದ ಯೋಜನೆಯಾಗಿದೆ. ಸಮುದಾಯ ಆರೋಗ್ಯ ಅಧಿಕಾರಿಗಳು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆಶಾ…

Read More

ಮಡಿಕೇರಿ ಜ.3 NEWS DESK : ಅಪರಿಚಿತ ವಾಹನ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಕೆದಕಲ್ ನಲ್ಲಿ ನಡೆದಿದೆ. ಕೆದಕಲ್ ಗ್ರಾಮದ ತೋಟದಲ್ಲಿ ರೈಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚೆಟ್ಟಳ್ಳಿ ಅಬ್ಯಾಲ ಗ್ರಾಮದ ನಿವಾಸಿ ಬಲ್ಲಾರಂಡ ಹರೀಶ್ ತಮ್ಮಯ್ಯ (55) ಮೃತ ದುರ್ದೈವಿ. ಕೆದಕಲ್ ನಲ್ಲಿ ಬಸ್ ನಿಂದ ಇಳಿದ ಹರೀಶ್ ತಮ್ಮಯ್ಯ ಅವರು ರಸ್ತೆ ದಾಟುತ್ತಿದ್ದ ಸಂದರ್ಭ ಅತೀ ವೇಗವಾಗಿ ಬಂದ ಅಪರಿಚಿತ ಕಾರು ಡಿಕ್ಕಿಯಾಗಿ ಪರಾರಿಯಾಗಿದೆ ಎಂದು ಹೇಳಲಾಗಿದೆ. ಜ.1 ರಂದು ರಾತ್ರಿ ಘಟನೆ ನಡೆದಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಹರೀಶ್ ತಮ್ಮಯ್ಯ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಜ.2 ರಂದು ರಾತ್ರಿ ನಿಧನರಾದರು.

Read More

ಮಡಿಕೇರಿ ಜ.3 NEWS DESK : ನಿಯಂತ್ರಣ ತಪ್ಪಿದ ಲಾರಿಯಿಂದ ಹಾರಿದ ಚಾಲಕರೊಬ್ಬರು ಚಕ್ರದಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಶನಿವಾರಸಂತೆ ಸಮೀಪ ಗುಡುಗಳಲೆ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಸುಂಕಣ್ಣ ಎಂಬುವವರೇ ಮೃತ ದುರ್ದೈವಿಯಾಗಿದ್ದು, ನಿರ್ವಾಹಕ ನರೇಶ್ ಅಪಾಯದಿಂದ ಪಾರಾಗಿದ್ದಾರೆ. ಆಂಧ್ರಪ್ರದೇಶದಿಂದ ಸೋಮವಾರಪೇಟೆಗೆ ತೆರಳುತಿದ್ದ ಸಿಮೆಂಟ್ ತುಂಬಿದ ಲಾರಿ ಗುಡುಗಳಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚುವ ಹಂತದಲ್ಲಿತ್ತು. ಅಪಾಯದ ಮುನ್ಸೂಚನೆ ಅರಿತ ಇಬ್ಬರು ಲಾರಿಯಿಂದ ಹಾರಿದ್ದಾರೆ. ಈ ಸಂದರ್ಭ ಲಾರಿಯ ಹಿಂಬದಿಯ ಚಕ್ರ ಸುಂಕಣ್ಣ ಅವರ ಮೇಲೆ ಹರಿದು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಶನಿವಾರಸಂತೆ ಪೊಲೀಸ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More