ಮಡಿಕೇರಿ ಜ.3 NEWS DESK : ನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗಣ್ಯರು ಹಾಗೂ ವಿದ್ಯಾರ್ಥಿಗಳು ಸಾವಿತ್ರಿ ಬಾಯಿಫುಲೆ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಜಿಲ್ಲಾ ಉಪ ಯೋಜನಾ ಸಮನ್ವಯ ಅಧಿಕಾರಿ ಎಂ.ಕೃಷ್ಣಪ್ಪ ಮಾತನಾಡಿ, 1831 ರ ಜನವರಿ, 3 ರಂದು ಸಾವಿತ್ರಿ ಬಾಯಿಫುಲೆ ಅವರು ಜನಿಸಿದ್ದು, ಮಹಿಳೆಯರ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದಾರೆ ಎಂದು ಸ್ಮರಿಸಿದರು. ಸಾವಿತ್ರಿ ಬಾಯಿಫುಲೆ ಅವರು ರಾಷ್ಟ್ರದ ಸ್ತ್ರೀವಾದಿ ಚಳುವಳಿಯ ಹರಿಕಾರರಲ್ಲಿ ಒಬ್ಬರಾಗಿದ್ದಾರೆ. ಪತಿ ಜ್ಯೋತಿ ಬಾಫುಲೆ ಅವರ ಜೊತೆಗೂಡಿ ಮಹಾರಾಷ್ಟ್ರದ ಪುಣೆಯಲ್ಲಿ 1848ರಲ್ಲಿ ರಾಷ್ಟ್ರದ ಮೊದಲ ಬಾಲಕಿಯರ ಶಾಲೆ ತೆರೆದಿದ್ದು ವಿಶೇಷವೇ ಸರಿ ಎಂದು ಹೇಳಿದರು. ಜಾತಿಭೇದ, ಲಿಂಗಾಧಾರಿತ ಅಸಮಾನತೆ ಹೋಗಲಾಡಿಸಲು ಅವರು ತಮ್ಮ ಜೀವನ ಮುಡುಪಾಗಿಟ್ಟಿದ್ದರು. ಸಾವಿತ್ರಿಬಾಯಿ ಫುಲೆ ಅವರ ನಿಲುವುಗಳು ಮತ್ತು ಅವರ ಸುಧಾರಣಾ ಕಾರ್ಯಗಳು ಜನಮೆಚ್ಚುಗೆಗೆ ಪಾತ್ರವಾಗಿದ್ದವು ಎಂದು ಕೃಷ್ಣಪ್ಪ ವಿವರಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ಸುಶೀಲ ಮಾತನಾಡಿ, ಬಾಲಕಿಯರಿಗಾಗಿ ಮೊದಲ…
ಲೇಖಕ: admin
ಸೋಮವಾರಪೇಟೆ ಜ.3 NEWS DESK : ಸೋಮವಾರಪೇಟೆ ತಾಲ್ಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ನವಗ್ರಹ ಪೂಜಾ ಕಾರ್ಯಕ್ರಮ ನೆರವೇರಿತು. ಶಾಂತಳ್ಳಿ ವಲಯದ ಐಗೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಮುದಾಯ ಭವನದಲ್ಲಿ ಮುಂಜಾನೆಯಿಂದಲೇ ವಿವಿಧ ಪೂಜಾ ಕೈಂಕರ್ಯ ಹಾಗೂ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ ಪಾಲ್ಗೊಂಡು ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಐಗೂರು ಮುತ್ತಪ್ಪಸ್ವಾಮಿ ದೇವಸ್ಥಾನಕ್ಕೆ 2 ಲಕ್ಷ, ಹರಿಹರ ಯುವಕ ಮಂಡಲದ ಸಮುದಾಯ ಭವನಕ್ಕೆ 2 ಲಕ್ಷ ಹಾಗೂ ಗರಗಂದೂರು ಗ್ರಾ.ಪಂ ವ್ಯಾಪ್ತಿಯ ಹೊಸತೋಟ ಗ್ರಾಮಕ್ಕೆ ಸಿಲಿಕಾನ್ ಛೇಂಬರ್ ಮಂಜೂರಾತಿ ಪತ್ರ ವಿತರಣೆ ಮಾಡಿದರು. ಯಡೂರು ಸಮುದಾಯ ಭವನಕ್ಕೆ 1.50 ಲಕ್ಷ ಅನುದಾನದ ಮಂಜುರಾತಿ ಪತ್ರ ವಿತರಿಸಿದರು. ಗೋಪಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿ.ಎ.ಸಿ.ಎಸ್ ಅಧ್ಯಕ್ಷ ಶಿವಕುಮಾರ್, ಗ್ರಾ.ಪಂ ಅಧ್ಯಕ್ಷ ಜಿ.ಕೆ.ವಿನೋದ್, ತಾ.ಪಂ ಮಾಜಿ ಸದಸ್ಯ ಸಬಿತಾ ಚನ್ನಕೇಶವ,…
ಬೆಂಗಳೂರು ಜ.3 NEWS DESK : ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ ವಿವಿಧ ಪತ್ರಿಕಾ ಕಚೇರಿಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಮಾಸಿಕ 20,000 ರೂ. ಶಿಷ್ಯವೇತನ ನೀಡಲಾಗುವುದು. ಅಭ್ಯರ್ಥಿಗಳು ರಾಜ್ಯದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯಸ್ಸು 28 ವರ್ಷ ಮೀರಿರಬಾರದು. ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ಜನವರಿ 20 ರ ಒಳಗಾಗಿ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಮಾಹಿತಿಯನ್ನು ಸ್ಕ್ಯಾನ್ ಮಾಡಿ karnatakamediaacademy@gmail.com ಗೆ ಇ-ಮೇಲ್ ಮೂಲಕ ಕಳುಹಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.
ಉಂಚಳ್ಳಿ ಜಲಪಾತ ಅಥವಾ ಲುಷಿಂಗ್ಟನ್ ಜಲಪಾತ ಅಘನನಾಶಿನಿ ನದಿಯಿಂದ ಸೃಷ್ಟಿಯಾಗುವ ಜಲಪಾತ. ಇದರ ಎತ್ತರ ಸುಮಾರು 116ಮೀಟರ್. ಈ ಜಲಪಾತವು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಸಿರ್ಸಿಯಿಂದ 30 ಕಿಮಿ ದೂರದಲ್ಲಿದೆ. 1845ರಲ್ಲಿ ಈ ಜಲಪಾತವನ್ನು ಪತ್ತೆಹಚ್ಚಿದ ಬ್ರಿಟಿಷ್ ಅಧಿಕಾರಿ ಜೆ.ಡಿ. ಲುಷಿಂಗ್ಟನ್ ಅವರ ಹೆಸರನ್ನು ಇದಕ್ಕೆ ಇಡಲಾಗಿದೆ. ಈ ಜಲಪಾತವು ನೀರು ಬೀಳುವಾಗ ಮಾಡುವ ಶಬ್ದದಿಂದ, ಸ್ಥಳೀಯರು ಇದನ್ನು ಕೆಪ್ಪ ಜೋಗ ಎಂದೂ ಕೂಡ ಕರೆಯುತ್ತಾರೆ. ಉಂಚಳ್ಳಿ ಜಲಪಾತ- ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದ ವಾಯವ್ಯಕ್ಕೆ ಸು.19ಕಿಮೀ ದೂರದಲ್ಲಿ ಉಂಚಳ್ಳಿ ಗ್ರಾಮದ ಬಳಿ ಇರುವ ಒಂದು ಸುಂದರ ಜಲಪಾತ. ಅಘನಾಶಿನಿ ನದಿ ಇಲ್ಲಿ ಅಡಿ ಕೆಳಗೆ ದುಮುಕುತ್ತದೆ. ಕರಿಬಂಡೆಗಳ ಮೇಲೆ ಹಾಲುನೊರೆ ಯಂತೆ ಇಳಿದು ಬರುವ ನೀರಿನ ಧಾರೆಯ ಸೊಬಗು ಚೇತೋಹಾರಿಯಾದುದು. ಜಲಪಾತದ ಸುತ್ತಲಿನ ಕಂದರ, ಅಡಕೆ ತೋಟಗಳು, ಸಮೃದ್ಧ ಅಡವಿಗಳು, ಇಕ್ಕೆಲಗಳಲ್ಲಿಯೂ ಎದ್ದಿರುವ ಕರಿಕಲ್ಲಿನ ಅಖಂಡ ಗೋಡೆಗಳು, ಈ ಜಲಪಾತಕ್ಕೆ ವಿಶೇಷ ಶೋಭೆಯನ್ನು ಕೊಟ್ಟಿವೆ. ಧೈರ್ಯಶಾಲಿಗಳು ಮಾತ್ರ ಜಲಪಾತದ…
ಸಿದ್ದಾಪುರ ಜ.3 NEWS DESK : ಪೊನ್ನಂಪೇಟೆ ತಾಲ್ಲೂಕಿನ ಕೋಣನಕಟ್ಟೆ- ಮರಪಾಲ ಗ್ರಾಮದಲ್ಲಿರುವ ಸಂತ ಅಂತೋಣಿ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವು ಜ.5 ರಂದು ನಡೆಯಲಿದೆ. ಸರ್ವಧರ್ಮ ಸಮನ್ವಯತೆ ಹೊಂದಿರುವ ಗ್ರಾಮದ ಸಂತ ಅಂತೋಣಿಯವರ ದೇವಾಲಯದಲ್ಲಿ ಅಂದು ಸಂಜೆ 4 ಗಂಟೆಗೆ ಗಾಯನ ಬಲಿಪೂಜೆ ನಡೆಯಲಿದ್ದು, ಮೈಸೂರು ಪ್ರಾಂತ್ಯ ದ ಕೌನ್ಸಿಲರ್ ಫಾರ್ ಸೋಶಿಯಲ್ ಅಪೋಸಿಲೇಟ್, ಸೇಂಟ್ ಪಾಲ್ಸ್ ನ ಫಾದರ್ ಜೆ.ಬಿ.ಪನಚಿಕಲ್ ಸಿ.ಎಂ.ಐ . ಧಾರ್ಮಿಕ ವಿಧಿವಿಧಾನ ನೆರವೇರಿಸಲಿದ್ದಾರೆ. ವಾಜನ ಪ್ರಭೋಧನೆಯನ್ನು ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಫಾದರ್ ಮದಲೈ ಮುತ್ತು ನಡೆಸಿಕೊಡಲಿದ್ದಾರೆ. ನಂತರ ಭವ್ಯ ಮೆರವಣಿಗೆ, ಅನ್ನ ಸಂತರ್ಪಣೆ ನಡೆಯಲಿದೆ. ಜಿಲ್ಲೆಯ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಾಲಿಬೆಟ್ಟದಿಂದ ಬರುವ ಭಕ್ತಾದಿಗಳಿಗೆ ಮಧ್ಯಾಹ್ನ 3 ಗಂಟೆಗೆ ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ದೇವಾಲಯದ ಫಾದರ್ ಹರ್ಷಿತ್ ದೇವ್ ಸಿ.ಎಂ.ಐ ತಿಳಿಸಿದ್ದಾರೆ.
ಪೊನ್ನಂಪೇಟೆ: ಜ.3 NEWS DESK : ಸುಮಾರು ಎರಡು ಶತಮಾನಗಳಷ್ಟು ಹಳೆಯ ಪೊನ್ನಂಪೇಟೆ ಶಾಫಿ ಜುಮಾ ಮಸೀದಿ ಇದೀಗ ಆಧುನಿಕ ಇಸ್ಲಾಮಿಕ್ ವಾಸ್ತುಶಿಲ್ಪ ಶೈಲಿಯ ಮಸೀದಿಯಾಗಿ ಪುನರ್ ನಿರ್ಮಾಣಗೊಂಡಿದ್ದು, ಜ.4 ರಂದು ಲೋಕಾರ್ಪಣೆಗೊಳ್ಳಲಿದೆ. ನೂತನ ಮಸೀದಿಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಜ.4ರಿಂದ ಜ.6ರವರಿಗೆ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಲೋಕಾರ್ಪಣೆಗೆ ಮುನ್ನುಡಿಯಾಗಿ ನಡೆದ ನೂತನ ಮಸೀದಿಗೆ ಸಾರ್ವಜನಿಕ ಮಹಿಳೆಯರ ಸಂದರ್ಶನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಪೊನ್ನಂಪೇಟೆ ತಾಲ್ಲೂಕಿನಲ್ಲೆ ಸುವಿಶಾಲವಾದ ಮಸೀದಿ ಎಂಬ ಹೆಗ್ಗಳಿಕೆಗೆ ಪಾತ್ರವಾಗುವ ಪೊನ್ನಂಪೇಟೆಯ ತ್ಯಾಗರಾಜ ರಸ್ತೆಯಲ್ಲಿರುವ ನೂತನ ಶಾಫಿ ಜುಮಾ ಮಸೀದಿ ಆಧುನಿಕ ಇಸ್ಲಾಮಿಕ್ ವಾಸ್ತುಶಿಲ್ಪ ಶೈಲಿಯ ಮಿನಾರ್ ರಹಿತ ವಿಭಿನ್ನವಾದ ಆರಾಧನಾಲಯವಾಗಿ ಮೂಡಿಬಂದಿದೆ. ಇದು ನೆಲ ಮತ್ತು ಪ್ರಥಮ ಅಂತಸ್ತುಗಳನ್ನು ಹೊಂದಿದೆ. ನೂತನ ಮಸೀದಿಯ ನೆಲ ಮತ್ತು ಪ್ರಥಮ ಅಂತಸ್ತು ತಲಾ 4300 ಚ.ಅ. ವಿಸ್ತೀರ್ಣ ಹೊಂದಿದ್ದು, ಒಟ್ಟು 8,600 ಚ.ಅ. ಅಗಲದ ಈ ಮಸೀದಿಯನ್ನು 600 ಮಂದಿ ಏಕಕಾಲದಲ್ಲಿ ನಮಾಜು ಮಾಡಲು ಸಾಧ್ಯವಾಗುವಂತೆ…
ರು NEWS DESK ಜ.3 : ಬಸ್ ಪ್ರಯಾಣ ದರ ಏರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ನಿಲುವನ್ನು ಖಂಡಿಸಿ ಇಂದು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಜೆಪಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಪ್ರಯಾಣಿಕರಿಗೆ ಹೂವು ನೀಡುವುದರ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಕ್ಷದ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯ ಎನ್.ರವಿಕುಮಾರ್, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.
ಬೆಂಗಳೂರು ಜ.3 NEWS DESK : ನರರೋಗ ಚಿಕಿತ್ಸೆಯಲ್ಲಿ ಅತ್ಯುತ್ತಮ ಗುಣಮಟ್ಟವನ್ನು ಸಾಧಿಸುವ ಮೂಲಕ ಮಾನಸಿಕ ಸ್ವಾಸ್ಥ್ಯ ಕಾಪಾಡುವಲ್ಲಿ ನಿಮ್ಹಾನ್ಸ್ ಕೊಡುಗೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರು ಇವರ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ “ಸುವರ್ಣ ಮಹೋತ್ಸವ’’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನಮ್ಮ ದೇಶದ ಹೆಮ್ಮೆಯ ಮಾನಸಿಕ ಆರೋಗ್ಯ ಮತ್ತು ನರರೋಗಗಳ ರಾಷ್ಟ್ರೀಯ ಸಂಸ್ಥೆ ನಿಮ್ಹಾನ್ಸ್ ನ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳುವುದು ನನಗೆ ಅತ್ಯಂತ ಹೆಮ್ಮೆಯ ಸಂಗತಿ. ನಿಮ್ಹಾನ್ಸ್ ಕಳೆದ ಐದು ದಶಕಗಳ ಅವಧಿಯಲ್ಲಿ ದೇಶದ ಮಾನಸಿಕ ಆರೋಗ್ಯ ಹಾಗೂ ನರರೋಗಗಳ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆ ನೀಡುತ್ತಾ ಬಂದಿದ್ದು, ದೇಶದ ಪ್ರಮುಖ ಸಂಸ್ಥೆಯಾಗಿ ತನ್ನ ಛಾಪು ಮೂಡಿಸಿದೆ. ಮೈಸೂರು ಸರ್ಕಾರದ ಮಾನಸಿಕ ಆಸ್ಪತ್ರೆ ಮತ್ತು ಭಾರತೀಯ ಮಾನಸಿಕ ಆರೋಗ್ಯ ಸಂಸ್ಥೆಯನ್ನು ಒಗ್ಗೂಡಿಸುವ ಮೂಲಕ ಪ್ರಾರಂಭವಾದ ನಿಮ್ಹಾನ್ಸ್, ಮಾನಸಿಕ ಆರೋಗ್ಯ ಮತ್ತು ಶಿಕ್ಷಣಕ್ಕೆ ಮೀಸಲಾದ…
ಮಡಿಕೇರಿ ಜ.3 NEWS DESK : ದೆಹಲಿಯಲ್ಲಿ ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ಕರ್ನಾಟಕ19 ಬೆಟಾಲಿಯನ್ ಆರ್ಮಿ ವಿಂಗ್ ಗೆ ಕೊಡಗಿನ ಎಂ.ಆರ್.ಹೇಮಂತ್ ಆಯ್ಕೆಯಾಗಿದ್ದಾನೆ. ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ತೃತೀಯ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿರುವ ಹೇಮಂತ್ ಕಾಟಕೇರಿ ಗ್ರಾಮದ ಮಜ್ಜೇಗೌಡನ ರಾಜೇಶ್ ಮತ್ತು ಪ್ರಮೀಳಾ ದಂಪತಿಯ ಪುತ್ರ.
ಬೇಕಾಗುವ ಸಾಮಾಗ್ರಿಗಳು :: ಮೊಟ್ಟೆ- 5, ಬ್ರೆಡ್ ತುಂಡು- 5, ಟೊಮೆಟೊ- 1, ಈರುಳ್ಳಿ- 2, ಹಸಿ ಮೆಣಸಿನಕಾಯಿ- 3, ಕೊತ್ತಂಬರಿ ಸೊಪ್ಪು- ಸ್ವಲ್ಪ, ಹಾಲು- 3 ಚಮಚ, ಎಣ್ಣೆ- 3 ಚಮಚ, ಬೆಣ್ಣೆ- 2 ಚಮಚ, ಉಪ್ಪು- ರುಚಿಗೆ ತಕ್ಕಷ್ಟು. ಮಾಡುವ ವಿಧಾನ :: ಮೊಟ್ಟೆಯನ್ನು ಒಡೆದು ಒಂದು ಬಟ್ಟಲಿನಲ್ಲಿ ಹಾಕಿ ಚೆನ್ನಾಗಿ ಕಲಸಬೇಕು. ಅದಕ್ಕೆ ಹಾಲು ಹಾಕಿ ಚೆನ್ನಾಗಿ ಮಿಕ್ಸ್ ಮಾಡಬೇಕು. ನಂತರ ಸಣ್ಣದಾಗಿ ಕತ್ತರಿಸಿದ ಹಸಿ ಮಣಸಿನಕಾಯಿ, ಟೊಮೆಟೊ ಮತ್ತು ಕೊತ್ತಂಬರಿ ಸೊಪ್ಪು, ರುಚಿಗೆ ತಕ್ಕ ಉಪ್ಪು ಹಾಕಿ ಮತ್ತೊಮ್ಮೆ ಚೆನ್ನಾಗಿ ಕಲಸಬೇಕು. ಒಂದು ಪ್ಯಾನ್‌ನಲ್ಲಿ ಎಣ್ಣೆ ಹಾಕಿ ಬಿಸಿಯಾದಾಗ ಸಣ್ಣದಾಗಿ ಕತ್ತರಿಸಿದ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ನಂತರ ಅದಕ್ಕೆ ಮೊಟ್ಟೆಯ ಮಿಶ್ರಣವನ್ನು ಹಾಕಿ ಕಮ್ಮಿ ಉರಿಯಲ್ಲಿ ಫ್ರೈ ಮಾಡಬೇಕು. ಮೊಟ್ಟೆ ಫ್ರೈ ಆದ ನಂತರ ಉರಿಯಿಂದ ತೆಗೆದು ಬದಿಯಲ್ಲಿಡಿ. ಎರಡು ಬ್ರೆಡ್ ತುಂಡುಗಳ ಒಂದೊಂದು ಬದಿಯಲ್ಲಿ ಬೆಣ್ಣೆ ಸವರಿ ಅದರ ಮಧ್ಯದಲ್ಲಿ ಮೊಟ್ಟೆ…






