ಮಡಿಕೇರಿ ಜ.3 NEWS DESK : ವೃತ್ತಿಪರ ಶಿಕ್ಷಣ ಮೊದಲನೇ ವರ್ಷದಲ್ಲಿ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳಿಗೆ (ಸೈನ್ಯಾಧಿಕಾರಿಗಳ ಮಕ್ಕಳನ್ನು ಹೊರತುಪಡಿಸಿ) ಕೇಂದ್ರಿಯ ಸೈನಿಕ ಮಂಡಳಿಯಿಂದ ನೀಡುವ 2024-25 ನೇ ಸಾಲಿನ ಪ್ರಧಾನಮಂತ್ರಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ.3 ರವರೆಗೆ ಕೇಂದ್ರೀಯ ಸೈನಿಕ ಮಂಡಳಿಯು ಮತ್ತೂಮ್ಮೆ ಅವಕಾಶ ಕಲ್ಪಿಸಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು (online.ksb.gov.in) ನಲ್ಲಿ ಸಲ್ಲಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಜ.3 NEWS DESK : ಹಿರಿಯ ನಾಗರಿಕರ ವೇದಿಕೆ ಹಾಗೂ ಮಡಿಕೇರಿ ಲಯನ್ಸ್ ಸಂಸ್ಥೆಯ ಸಹಯೋಗದಲ್ಲಿ ಜ.10 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 1.30 ರ ತನಕ ಮಡಿಕೇರಿಯ ಲಯನ್ಸ ಕ್ಲಬ್ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ‘ಕಿವಿ ತಪಾಸಣಾ ಶಿಬಿರ’ ನಡೆಯಲಿದೆ ಎಂದು ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷರು ತಿಳಿಸಿದ್ದಾರೆ.
ಮಡಿಕೇರಿ NEWS DESK ಜ.2 : ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತುಂಜಯ ದೇವಾಲಯದಲ್ಲಿ ವಸ್ತç ಸಂಹಿತೆ ವಿಚಾರದಲ್ಲಿ ಉಂಟಾದ ಗೊಂದಲದ ಬಳಿಕ ಎರಡು ಸಮುದಾಯಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಅವಹೇಳನ ಮಾಡುತ್ತಿರುವುದು ಕಂಡು ಬಂದಿದ್ದು, ತಪ್ಪಿತಸ್ಥರ ವಿರುದ್ಧ ಪೊಲೀಸ್ ಇಲಾಖೆ ಸುಮೋಟೋ ಕೇಸ್ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‌ಪಿ ಯಾವುದೇ ಸಮುದಾಯಗಳನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡುವುದು ಕಂಡು ಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಎರಡು ಪ್ರತ್ಯೇಕ ದೂರುಗಳನ್ನು ಆಧರಿಸಿ ಅನುದೀಪು ಹಾಗೂ ಅಯ್ಯಪ್ಪ ಎಂಬಿಬ್ಬರ ವಿರುದ್ಧ ದೂರು ದಾಖಲಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಹೇಳಿದರು. ದೇವಾಲಯದ ವಿಚಾರದ ಕುರಿತು ಎರಡೂ ಸಮುದಾಯಗಳ ಮುಖಂಡರ ಜೊತೆಯಲ್ಲಿ ಶಾಂತಿಸಭೆ ನಡೆಸಿ ಪರಸ್ಪರ ಸಮಸ್ಯೆ ಪರಿಹರಿಸಿಕೊಳ್ಳುವಂತೆ ಈಗಾಗಲೇ ಸೂಚಿಸಲಾಗಿದೆ. ಎರಡೂ ಸಮುದಾಯದ ಮುಖಂಡರು…
ಮಡಿಕೇರಿ ಜ.2 NEWS DESK : ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕಾರ್ಯಾಗಾರವು ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಮೈಸೂರು ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ಬೋಧಕರಾದ ಡಾ. ಜೆ.ಆರ್.ಪರಮೇಶ್ ಮಾಹಿತಿ ನೀಡಿ ಹವಾಮಾನ ಇಲಾಖೆಯು ಕಾಲ ಕಾಲಕ್ಕೆ ಹೊರಡಿಸುವ ಮುನ್ಸೂಚನೆಯ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಿದ್ದಲ್ಲಿ ಪ್ರಾಕೃತಿಕ ವಿಕೋಪವನ್ನು ತಡೆಯಬಹುದಾಗಿದೆ ಎಂದರು. ಸ್ಥಳೀಯ ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನಿಯೋಜನೆ, ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಜೊತೆ ಸಮನ್ವಯತೆ ಸಾಧಿಸುವುದು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಿ, ಮಾಹಿತಿ ಹಂಚಿಕೊಳ್ಳುವುದು, ಹಾಗೆಯೇ ಸಾಮಾಜಿಕ ಮಾಧ್ಯಮಗಳ ಮೂಲಕ ಹೆಚ್ಚು ಹೆಚ್ಚು ಮಾಹಿತಿ ವಿನಿಮಯ ಮಾಡಿಕೊಳ್ಳುವುದು. ಹೀಗೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು. ಕಂದಾಯ, ಪೊಲೀಸ್, ಗೃಹರಕ್ಷಕ ದಳ, ಅಗ್ನಿಶಾಮಕ ದಳ ಹಾಗೆಯೇ ಸೆಸ್ಕ್, ಅರಣ್ಯ, ಪಂಚಾಯತ್ ರಾಜ್,…
ಮಡಿಕೇರಿ ಜ.2 NEWS DESK : ಕುಶಾಲನಗರದಿಂದ ಸೋಮವಾರಪೇಟೆಗೆ ಹಾದು ಹೋಗುವ 33ಕೆವಿ ಮಾರ್ಗದ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿದ್ದು ಜ.3 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಯಡವನಾಡು, ಸೋಮವಾರಪೇಟೆ, ಶಾಂತಳ್ಳಿ, ಐಗೂರು, ದೊಡ್ಡಮಳ್ತೆ, ಅಬ್ಬೂರುಕಟ್ಟೆ, ಮಸಗೋಡು, ಕರ್ಕಳ್ಳಿ, ಹಾನಗಲ್ಲು, ಬೆಳೂರು, ಯಡವಾರೆ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ವಿರಾಜಪೇಟೆ ಜ.2 NEWS DESK : ವಿರಾಜಪೇಟೆಯ ತ್ರಿವೇಣಿ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಎನ್.ಆರ್.ಹನ್ಸಿನಿಗೆ ಕರುನಾಡ ಭೂಷಣ ಪ್ರಶಸ್ತಿ ಲಭಿಸಿದೆ. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ನೃತ್ಯೋತ್ಸವ ಕಾರ್ಯಕ್ರಮದಲ್ಲಿ ಹನ್ಸಿನಿಗೆ ಕರುನಾಡ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭ ಶಶಿಧರ್ ಕೋಟೆ, ಡಾ.ಕೆಂಚನೂರು ಶಂಕರ್, ಡಾ.ಶ್ರೀಧರ್, ಕಾಂತಿ ಶೆಟ್ಟಿ, ತೋತಾಪುರಿ ಸೋಮಶೇಖರ ಗುರೂಜಿ, ಮಲ್ಲಿಕಾ ಕೇಶವ್, ವೆಂಕಟರಾಜು, ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್‌ನ ಪ್ರೇಮಾಂಜಲಿ ಇದ್ದರು. ಇವಳು ವಿರಾಜಪೇಟೆಯ ಚಿತ್ರ ಹಾಗೂ ರಾಜೇಶ್ ದಂಪತಿಯ ಪುತ್ರಿ.
ಮಡಿಕೇರಿ ಜ.2 NEWS DESK : ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಡಿ.31 ರಂದು ನಿವೃತ್ತಿ ಹೊಂದಿದ ಎಎಸ್ಐ ಕೆ.ಎಂ.ತಮ್ಮಯ್ಯ ಹಾಗೂ ಪೊಲೀಸ್ ನಿರೀಕ್ಷಕ ಉಮೇಶ್ ಉಪ್ಪಳಿಕೆ ಅವರನ್ನು ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.
ಮಡಿಕೇರಿ ಜ.2 NEWS DESK : ಕಳೆದ 72 ವರ್ಷಗಳಿಂದ ರೋಟರಿ ಮಡಿಕೇರಿ ಸಮಾಜಕ್ಕೆ ಹಲವು ಕೊಡುಗೆ ಹಾಗೂ ಸೇವೆಗಳನ್ನು ನೀಡುತ್ತಾ ಬಂದಿದ್ದು, ಈ ಬಾರಿಯೂ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನೀಡಿದೆ ಎಂದು ರೋಟರಿ 3181 ಜಿಲ್ಲಾ ಗವರ್ನರ್ ವಿಕ್ರಂದತ್ತ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಯೋ ನಿರ್ಮೂಲನೆ ಕಾರ್ಯಕ್ರಮದಲ್ಲಿ ಪ್ರಮುಖ ಪಾತ್ರವಾಹಿಸಿರುವ ರೋಟರಿ ಕ್ಲಬ್ ಉತ್ತಮ ಸೇವೆಗಳನ್ನು ಸಲ್ಲಿಸುವ ಮೂಲಕ ಸಮಾಜದಲ್ಲಿ ತನ್ನದೇ ಛಾಪನ್ನು ಮೂಡಿಸುತ್ತಾ ಬಂದಿದೆ ಎಂದರು. ಕೊಡಗಿನಲ್ಲಿ 14 ಕ್ಲಬ್‍ಗಳನ್ನು ಹೊಂದಿದ್ದು, 700 ಸದಸ್ಯರಿದ್ದಾರೆ. ರೋಟರಿಯ ನಾಲ್ಕು ಜಿಲ್ಲೆಗಳಲ್ಲಿ ರೂ.15 ಕೋಟಿ ವೆಚ್ಚದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಳೆದ 6 ತಿಂಗಳಿನಲ್ಲಿ 3 ರಕ್ತದಾನ ಶಿಬಿರಗಳನ್ನು ಆಯೋಜಲಾಗಿದೆ. ಮಡಿಕೇರಿಯ ಅಶ್ವಿನಿ ಆಸ್ಪತ್ರೆಗೆ ಕೆಲವು ಸಲಕರಣೆಗಳನ್ನು ನೀಡಲಾಗಿದೆ. ಪ್ರಾಕೃತಿಕ ವಿಕೋಪದ ಸಂದರ್ಭ ಸೋಮವಾರಪೇಟೆಯಲ್ಲಿ ಸಂತ್ರಸ್ತರಿಗೆ ಮನೆಗಳನ್ನು ನೀಡಿದೆ ಎಂದು ಹೇಳಿದರು. ಹಿರಿಯ ನಾಗರೀಕರಿಗೆ ಸಂಧ್ಯಾ ಸುರಕ್ಷಯೋಜನೆಯ ಮೂಲಕ ಉಪಕರಣಗಳನ್ನು ನೀಡಿದೆ, ಹಲವು ಅಂಗನವಾಡಿ ಕೇಂದ್ರ ಹಾಗೂ ಸರಕಾರಿ ಶಾಲೆಗಳಿಗೆ…
ವಿರಾಜಪೇಟೆ ಜ.2 NEWS DESK : ವಿರಾಜಪೇಟೆ ಮಲೆತಿರಿಕೆ ಶ್ರೀ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಮಲೆತಿರಿಕೆ ಶ್ರೀ ಅಯ್ಯಪ್ಪ ಸ್ವಾಮಿಯ ವಾರ್ಷಿಕ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ರಾತ್ರಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಆಚರಿಸಲಾಯಿತು. ಡಿ.25 ರಂದು ಕ್ಷೇತ್ರ ಪಾಲಕ ಗುಳಿಗನ ಪೂಜೆಯೊಂದಿಗೆ ಆರಂಭವಾಯಿತು. ಡಿ.26 ರಂದು ಧ್ವಜಾರೋಹಣ ಮತ್ತು ಮಂಡಲ ಪೂಜೆ ನಡೆಯಿತು. ಡಿ.30, 31 ರಂದು ಸಂಜೆ ವಿಶೇಷ ಪೂಜೆಗಳು ನಡೆಯಿತು. ಜ.1 ರಂದು ಮುಂಜಾನೆ ಗಣಪತಿ ಹೋಮ, ಲಕ್ಷ್ಮೀ ಪೂಜೆ, ಸರಸ್ವತಿ ಪೂಜೆ ಸೇರಿದಂತೆ ವಿವಿಧ ವಿಶೇಷ ಪೂಜೆಗಳು ನಡೆಯಿತು. ನಂತರ ತುಲಾಭಾರ ಸೇವೆ, ಶ್ರೀ ಅಯ್ಯಪ್ಪ ನ ಮಾಲಧಾರಿಗಳಿಂದ ಲಕ್ಷಾರ್ಚನೆ ಸೇವೆ ಜರುಗಿತು. ಪಡಿಹಾಡು ನಂತರ ಶ್ರೀ ಅಯ್ಯಪ್ಪ ಸ್ವಾಮಿಗೆ ಮಾಹಾಪೂಜೆ, ಮಹಾಮಂಗಳಾರತಿ ಸೇವೆ ನಡೆಯಿತು. ಬಳಿಕ ನೆರೆದಿದ್ದ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ರಾತ್ರಿ ಬಾಲ ಅಯ್ಯಪ್ಪನ ಚಲನವಲನ ಉಳ್ಳ ಉತ್ಸವ ಮೂರ್ತಿಯ ಶೋಭಾಯತ್ರೆ ನಡೆಯಿತು. ಶೋಭಾಯಾತ್ರೆಗೆ ಮತ್ಸ್ಯ ಅವತಾರದ ಸ್ತಬ್ಧಚಿತ್ರವು, ಕೇರಳದ ಚಂಡೆಮದ್ದಳೆ,…
ಮಡಿಕೇರಿ ಜ.2 NEWS DESK : ಕಳೆದ 72 ವರ್ಷಗಳಿಂದ ರೋಟರಿ ಮಡಿಕೇರಿ ಸಮಾಜಕ್ಕೆ ಹಲವು ಕೊಡುಗೆ ಹಾಗೂ ಸೇವೆಗಳನ್ನು ನೀಡುತ್ತಾ ಬಂದಿದ್ದು, ಈ ಬಾರಿಯೂ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನೀಡಿದೆ ಎಂದು ರೋಟರಿ 3181 ಜಿಲ್ಲಾ ಗವರ್ನರ್ ವಿಕ್ರಂದತ್ತ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಯೋ ನಿರ್ಮೂಲನೆ ಕಾರ್ಯಕ್ರಮದಲ್ಲಿ ಪ್ರಮುಖ ಪಾತ್ರವಾಹಿಸಿರುವ ರೋಟರಿ ಕ್ಲಬ್ ಉತ್ತಮ ಸೇವೆಗಳನ್ನು ಸಲ್ಲಿಸುವ ಮೂಲಕ ಸಮಾಜದಲ್ಲಿ ತನ್ನದೇ ಛಾಪನ್ನು ಮೂಡಿಸುತ್ತಾ ಬಂದಿದೆ ಎಂದರು. ಕೊಡಗಿನಲ್ಲಿ 14 ಕ್ಲಬ್‍ಗಳನ್ನು ಹೊಂದಿದ್ದು, 700 ಸದಸ್ಯರಿದ್ದಾರೆ. ರೋಟರಿಯ ನಾಲ್ಕು ಜಿಲ್ಲೆಗಳಲ್ಲಿ ರೂ.15 ಕೋಟಿ ವೆಚ್ಚದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಳೆದ 6 ತಿಂಗಳಿನಲ್ಲಿ 3 ರಕ್ತದಾನ ಶಿಬಿರಗಳನ್ನು ಆಯೋಜಲಾಗಿದೆ. ಮಡಿಕೇರಿಯ ಅಶ್ವಿನಿ ಆಸ್ಪತ್ರೆಗೆ ಕೆಲವು ಸಲಕರಣೆಗಳನ್ನು ನೀಡಲಾಗಿದೆ. ಪ್ರಾಕೃತಿಕ ವಿಕೋಪದ ಸಂದರ್ಭ ಸೋಮವಾರಪೇಟೆಯಲ್ಲಿ ಸಂತ್ರಸ್ತರಿಗೆ ಮನೆಗಳನ್ನು ನೀಡಿದೆ ಎಂದು ಹೇಳಿದರು. ಹಿರಿಯ ನಾಗರೀಕರಿಗೆ ಸಂಧ್ಯಾ ಸುರಕ್ಷಯೋಜನೆಯ ಮೂಲಕ ಉಪಕರಣಗಳನ್ನು ನೀಡಿದೆ, ಹಲವು ಅಂಗನವಾಡಿ ಕೇಂದ್ರ ಹಾಗೂ ಸರಕಾರಿ ಶಾಲೆಗಳಿಗೆ…






