ಲೇಖಕ: admin

ಮಡಿಕೇರಿ NEWS DESK ಜ.2 : ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ಪಳಂಗೋಟು ದಿವಿನ್ ಅವರಿಗೆ ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ  “ಯುನೈಟೆಡ್ ಕೊಡವ ಆರ್ಗನೈಜೇಷನ್ ‘ಯುಕೊ’ ” ವತಿಯಿಂದ ಗೌರವ ಅರ್ಪಿಸಲಾಯಿತು. ಯುನೈಟೆಡ್ ಕೊಡವ ಆರ್ಗನೈಜೇಶನ್ (ಯುಕೊ) ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ನೇತೃತ್ವದಲ್ಲಿ  ಮುಖಂಡರಾದ ಕಳ್ಳಿಚಂಡ ರಾಬಿನ್ ಸುಬ್ಬಯ್ಯ , ನೆಲ್ಲಮಕ್ಕಡ ಜಫ್ರಿ ಮಾದಯ್ಯ, ಬೊಳ್ಳಿಯಂಗಡ ಬೋಪಣ್ಣ ಮತ್ತಿತರ ಪ್ರಮುಖರು ದಿವಿನ್ ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ  ಹುತಾತ್ಮ ಯೋಧರ ತಾಯಿಗೆ ಸಾಂತ್ವನ ತಿಳಿಸಿದರು.

Read More

ಪೊನ್ನಂಪೇಟೆ, ಜ.2 NEWS DESK : ಕೃಷಿ ಸಂಸ್ಕೃತಿಯ ವಾರಸುದಾರರಾಗಿ ಅನ್ನದಾತರು ಮತ್ತು ಶ್ರಮದಾತರು ಎಂದು ಕರೆಸಿಕೊಂಡಿರುವ ಒಕ್ಕಲಿಗರು ತಮ್ಮ ಅನ್ನದಾತರ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಸರಿಯಾಗಿ ತಿಳಿಸಬೇಕು ಎಂದು ಕೋತೂರು ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಆರ್. ಸುರೇಶ್ ಕರೆ ನೀಡಿದ್ದಾರೆ. ದ. ಕೊಡಗಿನ ಕೋತೂರಿನ ಶ್ರೀ ಮಲೆ ಮಹದೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕೋತೂರು ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ 9ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಲಕಸುಬನ್ನು ಕಡೆಗಣಿಸಿದರೆ ಯಾವುದೇ ಜನಾಂಗಗಳ ಸರಿಯಾದ ಅಸ್ತಿತ್ವ ಉಳಿಯಲು ಸಾಧ್ಯವಿಲ್ಲ. ಅದ್ದರಿಂದ ತಮ್ಮ ಮೂಲ ಸಂಸ್ಕೃತಿಯನ್ನು ಮುಂದುವರಿಸಲು ಇಂದಿನ ಯುವ ಸಮುದಾಯಕ್ಕೆ ಈ ಕುರಿತು ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ಅಭಿಪ್ರಾಯಪಟ್ಟರು. ಶಿಕ್ಷಣವು ಜನಾಂಗಗಳ ಮತ್ತು ಜನಾಂಗೀಯ ಸಂಘಟನೆಗಳ ಸದಸ್ಯರ ಬೆಳವಣಿಗೆ, ಅಭಿವೃದ್ಧಿ ಮತ್ತು ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುವ ಅತ್ಯಗತ್ಯ ಅಂಶವಾಗಿದೆ. ಶಿಕ್ಷಣವು ವ್ಯಕ್ತಿಯ ಸಾಮಾಜಿಕ ಮತ್ತು ಆರ್ಥಿಕ ಬೆಳವಣಿಗೆಗೂ ಕೊಡುಗೆ ನೀಡುತ್ತದೆ. ವಿದ್ಯಾವಂತ ಸಮಾಜವು ಭವಿಷ್ಯದ…

Read More

ಮಡಿಕೇರಿ ಜ.2 NEWS DESK : ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಹಾಗೂ ನಂ.561ನೇ ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘ ಮಡಿಕೇರಿಯ ಸಂಯುಕ್ತಾಶ್ರಯದಲ್ಲಿ ಸೌಹಾರ್ದ ಸಹಕಾರಿ ದಿನಾಚರಣೆ ನಡೆಯಿತು. ನಗರದ ಸೌಹಾರ್ದ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ, ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘ ಹಾಗೂ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ, 1997 ಕರ್ನಾಟಕ ಸೌಹಾರ್ದ ಕಾಯಿದೆ 2001 ಜನವರಿ 1 ರಂದು ಜಾರಿಗೆ ಬಂದಿತು. ಇದರ ಜ್ಞಾಪಕಾರ್ಥವಾಗಿ ಸೌಹಾರ್ದ ಸಹಕಾರಿ ದಿನವನ್ನು ಆಚರಿಸಲಾಗುತ್ತದೆ ಎಂದರು. 2005ರಲ್ಲಿ 200 ಸದಸ್ಯರೊಂದಿಗೆ ಕೊಡಗಿನಲ್ಲಿ ಪ್ರಾರಂಭವಾದ ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘ ಕೊಡಗಿನಾದ್ಯಂತ ಸದಸ್ಯರನ್ನು ಹೊಂದಿದ್ದು, ಪ್ರಸ್ತುತ 2313 ಸದಸ್ಯರಿದ್ದಾರೆ. ಸದಸ್ಯರಿಗೆ ವಿವಿಧ ರೀತಿಯ ಸಾಲ, ಸದಸ್ಯರಿಂದ ಠೇವಣಿ ಸಂಗ್ರಹ, ವಿಮೆ ಸೇರಿದಂತೆ ಇ ಸ್ಟಾಂಪಿಂಗ್, ಆರ್.ಟಿ.ಸಿ ಸೇರಿದಂತೆ ಹತ್ತಾರು ಸೌಲಭ್ಯಗಳನ್ನು ನೀಡುತ್ತಿದ್ದು, ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಕ್ರಿಯಾಶೀಲವಾಗಿ…

Read More

ಮಡಿಕೇರಿ NEWS DESK ಜ.1 : ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ಪಳಂಗೋಟು ದಿವಿನ್ ಅವರಿಗೆ ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮತ್ತು ಕುಶಾಲನಗರ ಧರ್ಮಕೇಂದ್ರದ ವತಿಯಿಂದ ಗೌರವ ಅರ್ಪಿಸಲಾಯಿತು. ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಜಾನ್ಸನ್ ಪಿಂಟೋ, ಧರ್ಮಕೇಂದ್ರದ ಧರ್ಮಗುರು ಮಾರ್ಟಿನ್ ಮತ್ತಿತರ ಪ್ರಮುಖರು ದಿವಿನ್ ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು.

Read More

ಮಡಿಕೇರಿ NEWS DESK ಜ.1 : ಜನವರಿ 1ರಂದು ಬುಧವಾರ ಅಸ್ತಮಿಸಿದ ಗುರುವಾರ ರಾತ್ರಿ ರಜಬ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುವುದರಿಂದ  ಜನವರಿ 2 ಗುರುವಾರ ರಜಬ್ 1 ಹಾಗೂ ಜನವರಿ 28 ಮಂಗಳವಾರ  ಮಿಹ್ರಾಜ್ ದಿನ  ಆಗಿರುತ್ತದೆ ಎಂದು ಕೊಡಗು ಜಿಲ್ಲೆಯ ಸುನ್ನೀ ಸಂಯುಕ್ತ ಜಮಾಅತ್  ಖಾಝಿಗಳಾದ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ ಅಬೂಬಕರ್ ಮುಸ್ಲಿಯಾರ್  ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಜ.1 : ಎಲ್ಲಾ ಜಾತಿ ಜನಾಂಗಗಳು ಸರ್ವ ಸಮಾನತೆಯಿಂದ ದೇವತಾ ಕಾರ್ಯಗಳಲ್ಲಿ ಒಂದಾಗಿ ಬೆರೆಯಬೇಕೆನ್ನುವ ಚಿಂತನೆಗಳಡಿ ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದಲ್ಲಿ ಯಾವುದೇ ಜನಾಂಗದ ಸಾಂಪ್ರದಾಯಿಕ ಆಚರಣೆಗಳು ಬೇಡವೆನ್ನುವ ನಿಯಮವನ್ನು ಮಾಡಿಕೊಳ್ಳಲಾಗಿದೆ. ಇದನ್ನು ಜಿಲ್ಲಾಡಳಿತ ಗೌರವಿಸಲಿದೆ ಎನ್ನುವ ವಿಶ್ವಾಸವಿದೆ ಎಂದು ಗ್ರಾಮಸ್ಥರು ಹಾಗೂ ದೇವಸ್ಥಾನದ ಸ್ವಯಂ ಸೇವಕ ಕಟ್ಟೆಮನೆ ಸೋನಾ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಟ್ಟೆಮಾಡು ಗ್ರಾಮ ವ್ಯಾಪ್ತಿಯಲ್ಲಿ ಅಂದಾಜು ಶೇ.30 ರಷ್ಟು ಗೌಡರು, ಶೇ.15 ರಿಂದ 20 ರಷ್ಟು ಕೊಡವ ಸಮೂಹ ಬಾಂಧವರಿದ್ದಾರೆ. ಶೇ.50 ರಷ್ಟು ಮಂದಿ ವಿವಿಧ ಜನಾಂಗಗಳಿಗೆ ಸೇರಿದವರಾಗಿದ್ದಾರೆ. ಇವರೆಲ್ಲರು ದೇವಸ್ಥಾನದಲ್ಲಿ ಸರ್ವ ಸಮಾನವಾಗಿ ತೊಡಗಿಸಿಕೊಳ್ಳಬೇಕೆನ್ನುವ ಚಿಂತನೆಯಿoದ, ದೇವಸ್ಥಾನದಲ್ಲಿ ಯಾವುದೇ ಸಮೂಹದ ಸಾಂಪ್ರದಾಯಿಕ ಉಡುಪು, ಆಚರಣೆೆಗಳು ಬೇಡವೆನ್ನುವ ನಿಯಮವನ್ನು ಗ್ರಾಮಸ್ಥರೆಲ್ಲರ ಸಮ್ಮತಿಯೊಂದಿಗೆ ರಚಿಸಲಾಗಿದೆ. ಅದರಂತೆ ಕಳೆದ ಒಂದು ವರ್ಷದಿಂದ ಗ್ರಾಮದ ಎಲ್ಲಾ ಸಮೂಹದವರು ನಡೆದುಕೊಂಡು ಬಂದಿರುವುದಾಗಿ ಸ್ಪಷ್ಟಪಡಿಸಿದರು. ಕಟ್ಟೆಮಾಡು ಗ್ರಾಮದ ವಿವಿಧ ಜನಾಂಗಗಳ ಹಾಗೂ ಕುಟುಂಬಗಳ ಪ್ರತಿನಿಧಿಗಳಿಗೆ ಕಟ್ಟೆಮಾಡು ದೇವಸ್ಥಾನ…

Read More

ಮಡಿಕೇರಿ ಜ.1 NEWS DESK : ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಖಿಲ ಭಾರತ ಕಾಂಗ್ರೆಸ್ ಪಕ್ಷದ 139ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ಬಿ.ಕೆ.ಕೃಷ್ಣ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಮಡಿಕೇರಿ ನಗರ ಕಾಂಗ್ರೆಸ್ ಹಾಗೂ ಮೂಡ ಅಧ್ಯಕ್ಷ ಬಿ.ವೈ.ರಾಜೇಶ್, ಡಿಸಿಸಿ ಪದಾಧಿಕಾರಿಗಳಾದ ಮೋಹನ್‍ದಾಸ್, ವಿ.ಪಿ.ಸುರೇಶ್, ಕೆ.ಜಿ.ಪೀಟರ್, ಖಲೀಲ್ ಭಾಷಾ, ಪ್ರಕಾಶ್ ಆಚಾರ್ಯ, ಕೆ.ಅಬ್ದುಲ್ ರಜಾಕ್, ಕೆ.ಎ.ಮೊಣ್ಣಪ್ಪ, ಲೀಲಾ ಶೇಷಮ್ಮ, ಚುಮ್ಮಿ ದೇವಯ್ಯ, ಬೊಳ್ಯಂಡ ಗಣೇಶ್, ಸುನೀಲ್ ನಂಜಪ್ಪ, ಸುನೀಲ್ ಪತ್ರಾವೋ, ನಟೇಶ್ ಗೌಡ, ಆರ್‍ಟಿಸಿ ಸಲಹಾ ಸಮಿತಿ ಮಾಜಿ ನಿರ್ದೇಶಕರಾದ ಶೌಕತ್ ಆಲಿ, ಜನಾರ್ಧನ್, ಹೆಚ್.ಎಂ.ನಂದಕುಮಾರ್, ಸದಾಮುದ್ದಪ್ಪ, ಮುದ್ದುರಾಜ್, ಸದಾನಂದ ಬಂಗೇರ, ಜಾನ್ಸನ್ ಪಿಂಟೋ, ಬಿ.ಎಂ.ಪೂಣಚ್ಚ, ನಾಪಂಡ ಮುತ್ತಪ್ಪ, ಜಫ್ರುಲ್ಲ, ಬಿ.ಆರ್.ರಾಣಿ ಮತ್ತಿತರರು ಹಾಜರಿದ್ದರು.

Read More

ಮಡಿಕೇರಿ ಜ.1 NEWS DESK : ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ವಾಹನವು ಕಂದಕಕ್ಕೆ ಉರುಳಿ ತೀವ್ರ ಗಾಯಗೊಂಡು ಹುತಾತ್ಮರಾದ ಸೈನಿಕ ಪಿ.ಪಿ.ದಿವಿನ್ ಅವರ ಅಂತ್ಯಕ್ರಿಯೆಯು ಹುಟ್ಟೂರಾದ ಕೊಡಗು ಜಿಲ್ಲೆಯ ಆಲೂರು ಸಿದ್ದಾಪುರದ ಬಳಿಯ ಮಾಲಂಬಿ ಗ್ರಾಮದದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ  ನೆರವೇರಿತು. ಸಾಂಪ್ರದಾಯಿಕ ವಿಧಿ ವಿಧಾನಗಳ ನಂತರ ಮಾಲಂಬಿಯ ಜಮೀನಿನಲ್ಲಿ ಅಗ್ನಿಸ್ಪರ್ಶ ಮಾಡುವುದರೊಂದಿಗೆ ದಿವಿನ್ ಪಂಚಭೂತಗಳಲ್ಲಿ ಲೀನವಾದರು. ಇದಕ್ಕೂ ಮೊದಲು ಮೇಜರ್ ನಿಖಿಲ್ ಹಾಗೂ ಸುಬೇದಾರ್ ಮಹೇಶ್ ಜಾಧವ್ ಅವರ ನೇತೃತ್ವದಲ್ಲಿ ಆಗಮಿಸಿದ್ದ ಭಾರತೀಯ ಸೇನಾ ತಂಡ ಹಾಗೂ ಪೊಲೀಸರು ಕುಶಾಲತೋಪು ಸಿಡಿಸಿ ಅಂತಿಮ ಗೌರವ ಸಲ್ಲಿಸಿದರು. ಮಂಗಳವಾರ ರಾತ್ರಿ ಬೆಂಗಳೂರಿನಿಂದ ಪಾರ್ಥಿವ ಶರೀರವನ್ನು ಸೇನಾ ವಾಹನದ ಮೂಲಕ ಕುಶಾಲನಗರಕ್ಕೆ ತರಲಾಗಿತ್ತು, ಬುಧವಾರ ಬೆಳಗ್ಗೆ 8 ರಿಂದ 11 ಗಂಟೆ ವರೆಗೆ ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಜಿಲ್ಲಾ ಹಾಗೂ ತಾಲ್ಲೂಕು ಆಡಳಿತ ವ್ಯವಸ್ಥೆ ಮಾಡಿತ್ತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ್‌ರಾಜಾ,…

Read More

ಮಡಿಕೇರಿ ಜ.1 NEWS DESK : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಜಾತ್ರೋತ್ಸವದ ಸಂದರ್ಭ ಕುಪ್ಯಚೇಲೆ ಧರಿಸಿ ಹೋದ ಕೊಡವರನ್ನು ತಡೆಯಲಾಗಿದೆ ಎಂದು ಆರೋಪಿಸಿ ಬೇಂಗ್‍ನಾಡ್ ಕೊಡವ ಸಮಾಜದ ಪ್ರಮುಖರು ಹಾಗೂ ಸದಸ್ಯರು ಚೇರಂಬಾಣೆಯಲ್ಲಿ ಪ್ರತಿಭಟನೆ ನಡೆಸಿದರು. ಚೇರಂಬಾಣೆ ನಗರದಲ್ಲಿ ಒಂದು ಗಂಟೆಗಳ ಕಾಲ ಸ್ವಯಂ ಘೋಷಿತ ಬಂದ್ ಆಚರಿಸಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ನಂತರ ಮಾನವ ಸರಪಳಿ ರಚಿಸಿದ ಪ್ರತಿಭಟನಾಕಾರರು ಪ್ರಕಣದ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯ ನಾಪಂಡ ಗಣೇಶ್, ಕೊಡವ ಸಮಾಜದ ಅಧ್ಯಕ್ಷ ಬಾಚರಣಿಯಂಡ ಗಣಪತಿ, ಉಪಾಧ್ಯಕ್ಷ ಕೇಕಡ ಮೊಣ್ಣಪ್ಪ ಹಾಗೂ ಪ್ರಮುಖರಾದ ಮಂದಪಂಡ ಮನೋಜ್ ಕಟ್ಟೆಮಾಡು ದೇವಾಲಯದಲ್ಲಿ ನಡೆದ ಘಟನೆ ಖಂಡನೀಯವೆಂದರು. ಶ್ರೀಮಹಾಮೃತ್ಯುಂಜಯ ದೇವಾಲಯದಲ್ಲಿ ವಾರ್ಷಿಕ ಉತ್ಸವ ನಡೆಯುತ್ತಿರುವ ಸಂದರ್ಭ ಕೊಡವ ಜನಾಂಗದವರು ಕೊಡವ ಸಾಂಪ್ರದಾಯಿಕ ಉಡುಪು ಕುಪ್ಯಚೇಲೆ, ಪೀಚೆಕತ್ತಿ ತೊಟ್ಟು, ಕೊಡವ ಮಹಿಳೆಯರು ಕೊಡವ ಸೀರೆ ಧರಿಸಿ ದೇವಾಲಯ ಪ್ರವೇಶಿಸುವ ಸಂದರ್ಭ ಕೆಲವರು ತಡೆಯೊಡ್ಡಿ…

Read More

ಮಡಿಕೇರಿ ಜ.1 NEWS DESK : ಕನ್ನಡ ನಾಡಿನ ಹಿರಿಯ ಸಾಹಿತಿ ಶಿಶು ಸಾಹಿತ್ಯದ ಪಿತಾಮಹ “ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಭಿಮ್ಮನೆ ಬಂದಳೊ” ಕೊಡಗಿನ ನಾಡಗೀತೆಯ ರಚನಾಕಾರ ಮಡಿಕೇರಿ ಸೆಂಟ್ರಲ್ ಹೈ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಏಕೈಕ ಭಾರತೀಯ ಕನ್ನಡ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ ಬ್ರಿಟಿಷರ ಕಾಲದಲ್ಲಿ ಕೊಡಗಿನ ಶಾಲಾ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ ಅಪ್ರತಿಮಾ ಸಂಘಟಕ, ದಿ. ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಜ.6 ರಂದು ಪೂರ್ವಭಾವಿ ಸಭೆ ನಡೆಯಲಿದೆ. ಅಂದು ಬೆಳಿಗ್ಗೆ 10.30 ಗಂಟೆಗೆ ಮಡಿಕೇರಿಯ ಜೂನಿಯರ್ ಕಾಲೇಜು ಆವರಣದ ಸರಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರ ಶಾಸಕ ಡಾ. ಮಂಥರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಚರ್ಚಿಸಬೇಕಾಗಿದೆ‌. ಶ್ರೇಷ್ಠ ಶಿಕ್ಷಕರಾದ ಹಿರಿಯ ತಲೆಮಾರಿನ ಹಿರಿಯ ಸಾಹಿತಿಗಳಾದ ಪಂಜೆ ಮಂಗೇಶರಾಯರ 150ನೇ ವರ್ಷಾಚರಣಾ ಕಾರ್ಯಕ್ರಮವನ್ನು ಯಶಸ್ವಿ ಪೂರ್ಣವಾಗಿ ನಡೆಸಲು ತಮ್ಮ…

Read More