ಮಡಿಕೇರಿ ಡಿ.31 NEWS DESK : ರಾಷ್ಟ್ರಕವಿ ಕುವೆಂಪು ರಚಿತಜಯ ಭಾರತ ಜನನಿಯ ತನುಜಾತೆ ಜಯ ಹೇ ಕರ್ನಾಟಕ ಮಾತೆ ನಾಡಗೀತೆಯ ಆಶಯಕ್ಕೆ ನೂರು ವರ್ಷ ತುಂಬಿದೆ. ಅದರ ನೆನಪಿಗಾಗಿ ಸಹಸ್ರಕಂಠದಲ್ಲಿ ನಾಡಗೀತೆ ಹಾಡುವ ಕಾರ್ಯಕ್ರಮವನ್ನು ಮತ್ತು ರಾಷ್ಟ್ರಕವಿ ಕುವೆಂಪು 120ನೆಯ ಜನ್ಮ ದಿನಾಚರಣೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು , ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜು ಇಲಾಖೆ, ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಸರಕಾರಿ ಹಿರಿಯ ದರ್ಜೆ ಪದವಿ ಕಾಲೇಜು, ಪದವಿಪೂರ್ವ ಕಾಲೇಜು, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಜ.4 ರಂದು ಆಯೋಜಿಸಲಾಗಿದೆ. ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಬೆಳಿಗ್ಗೆ 9.45 ಗಂಟೆಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಮಂಜುಳಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಂಗಧಾಮಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ…
ಲೇಖಕ: admin
ಮಡಿಕೇರಿ ಡಿ.31 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಮಕ್ಕಳಿಗೆ ಹಾಗೂ ಆಸಕ್ತ ಪುರುಷ-ಮಹಿಳೆಯರಿಗೆ ಕೊಡವ ಆಟ್-ಪಾಟ್ ಪಡಿಪು ಶಿಬಿರ ನಡೆಸಲು ನಿರ್ಧರಿಸಿದೆ. ಇದರನ್ವಯ ಉಮ್ಮತಾಟ್, ಉರ್‍ಟಿಕೊಟ್ಟ್ ಆಟ್, ಬೊಳಕಾಟ್, ಕೋಲಾಟ್, ಕತ್ತಿಯಾಟ್, ಚೌರಿಯಾಟ್ ಹಾಗೂ ಬಾಳೊಪಾಟ್, ದುಡಿಕೊಟ್ಟ್ ನಂತಹ ಕೊಡವ ಸಂಸ್ಕೃತಿಯ ಆಟ್-ಪಾಟ್ ತರಬೇತಿಯನ್ನು ಕನಿಷ್ಟ 15 ದಿನಗಳವರೆಗೆ ಸಾಮೂಹಿಕವಾಗಿ ನೀಡಲಾಗುವುದು. ಅಂತೆಯೇ, ಕೊಡವರ ಕುಪ್ಯ-ಚೇಲೆ, ಮಂಡೆ ವಸ್ತ್ರ, ಕೊಡವತಿ ಪೊಡಿಯ ಉಡುವ ಕ್ರಮವನ್ನು ಕಲಿಸಲಾಗುವುದು. ಕೊಡವರ ಕೋರೆಕೆಟ್ಟ್, ಪಾನಿಕೆಟ್ಟ್‍ಗಳ ತರಬೇತಿ ನೀಡಲಾಗುವುದು. ಇದರೊಂದಿಗೆ ‘ದುಡಿ ಪೊಲ್‍ಪ’ ತರಬೇತಿಯನ್ನು ನೀಡಲು ಉದ್ದೇಶಿಸಲಾಗಿದೆ. ತರಬೇತಿ ಬಯಸುವ ವಿದ್ಯಾಸಂಸ್ಥೆಗಳು, ಸಂಘ-ಸಂಸ್ಥೆಗಳ ಹೆಸರು, ವಿಳಾಸದೊಂದಿಗೆ ಅಕಾಡೆಮಿ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ಮೊಬೈಲ್ ಸಂಖ್ಯೆ-8762942976 ನ್ನು ಸಂಪರ್ಕಿಸಬಹುದು. ಆದ್ದರಿಂದ ಈ ಎಲ್ಲಾ ಕಲೆಗಳಲ್ಲಿ ಅರಿವು-ಅನುಭವ ಇರುವ ತಜ್ಞರು, ತರಬೇತುದಾರರು ತಮ್ಮ ಸ್ವ ವಿವರಗಳೊಂದಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್‍ಗೆ ಬರೆಯುವುದು. ತರಬೇತುದಾರರಿಗೆ ಅಕಾಡೆಮಿ ವತಿಯಿಂದ ಸೂಕ್ತ ಸಂಭಾವನೆ…
ಮಡಿಕೇರಿ ಡಿ.31 NEWS DESK : ವಿರಾಜಪೇಟೆಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಹಲಸಿನ ಮರವೇರಿದ ಕಾರ್ಮಿಕ ಪಣಿಎರವರ ಪೊನ್ನು ಅವರನ್ನು ಗುಂಡು ಹೊಡೆದು ಕೊಲೆಗೈದಿರುವುದು ಖಂಡನೀಯ. ಪ್ರಕರಣದ ಕುರಿತು ಶಾಸಕರು ಹಾಗೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಖಂಡನೀಯವೆಂದು ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ. ಮಡಿಕೇರಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಮೈಸೂರು ಜಿಲ್ಲಾ ಪ್ರಮುಖ ಶೈಲೇಂದ್ರ ಕುಮಾರ್ ಕಾರ್ಮಿಕ ಪೊನ್ನು ಅವರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣವನ್ನು ಶಾಸಕರು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಸರಕಾರ ತಕ್ಷಣ ಮೃತ ಕಾರ್ಮಿಕನ ಕುಟುಂಬಕ್ಕೆ ಪರಿಹಾರ ಮತ್ತು ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಕೊಡಗು ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದವರಿಗೆ ಯಾವುದೇ ರಕ್ಷಣೆ ಇಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಕಾಫಿ ತೋಟದ ಲೈನ್‍ಮನೆಗಳಲ್ಲಿ ಜೀತದಾಳುಗಳಾಗಿ ದುಡಿಯುತ್ತಿರುವ ಬುಡಕಟ್ಟು ಕುಟುಂಬಗಳ ಸಂಕಷ್ಟಕ್ಕೆ ಯಾರೂ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು. ಆರೋಪಿಯ…
ಮಡಿಕೇರಿ ಡಿ.31 NEWS DESK : ಸಿದ್ದಾಪುರದ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ಜ.3 ರಿಂದ 6ರ ವರೆಗೆ ತಿರು ಮಹೋತ್ಸವ ನಡೆಯಲಿದೆ. ಬ್ರಹ್ಮಶ್ರೀ ಈಡವಲತ್ ಪುಡಯೂರ್‍ಮನ ಕುಬೇರನ್ ನಂಬೂದಿರಿಪಾಡ್ ತಂತ್ರಿಗಳು ರಾಜರಾಜೇಶ್ವರ ದೇವಸ್ಥಾನದ ತಲೋರ ತಳಿಪರಂಬ್ ನೇತೃತ್ವದಲ್ಲಿ ನಾಲ್ಕು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಜ.3 ರಂದು ಸಂಜೆ 5.30 ಗಂಟೆಯಿಂದ ಪುಣ್ಯಾಹ ಪ್ರಾಸಶುದ್ಧಿ, ವಾಸ್ತುಬಲಿ, ದೀಪಾರಾಧನೆ, ತ್ರಿಕೊಡಿಯೆಟಂ, ಅತ್ತಾಯ ಪೂಜಾ, ಮಹಾಪೂಜೆ, ಅನ್ನಸಂತರ್ಪಣೆ ಜರುಗಲಿದೆ. ಜ.4 ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಉಷಾಪೂಜೆ, ಮಹಾಸುದರ್ಶನ ಹೋಮ, ಮಹಾಮೃತ್ಯುಂಜಯ ಹೋಮ, ನವಕಂ ಪಂಚಗವ್ಯಂ, ಕಲಶಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ ನೆರವೇರಲಿದೆ. ಸಂಜೆ ಭಗವತಿಸೇವೆ, ದೀಪಾರಾಧನೆ, ಸಹಸ್ರದೀಪಾ, ಮಹಾಪೂಜೆ, ಅನ್ನಸಂರ್ಪಣೆ ನಡೆಯಲಿದೆ. ಜ.5 ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಉಷಾಪೂಜೆ, ಗುಳಿಗ, ನಾಗದೇವರಿಗೆ ಪೂಜೆ, ನವಗಂ, ಪಂಚಗವ್ಯಂ, ಕಲಶಭಿಷೇಕ (ಬೆಳಿಗ್ಗೆ 9 ಗಂಟೆಗೆ ದೇವಿಗೆ ಪೊಂಗಾಲ) ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದ್ದು, ಸಂಜೆ ದೀಪಾರಾಧನೆ, ತ್‍ಡಂಬ್‍ನೃತ್ಯ, ಅನ್ನದಾನ ನೆರವೇರಲಿದೆ. ಜ.6…
ಮಡಿಕೇರಿ ಡಿ.31 NEWS DESK : ವಿರಾಜಪೇಟೆ ವಿಧಾನಸಭಾ ವ್ಯಾಪ್ತಿಗೆ ಒಳಪಟ್ಟ ಕುಂಜಿಲ ಗ್ರಾಮದಲ್ಲಿ ರಸ್ತೆಯ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಪ್ರಗತಿಯಲ್ಲಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಈ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಂದರ್ಭ ಮಾತನಾಡಿದ ಅಧಿಕಾರಿಗಳು, ಗುಣಮಟ್ಟವನ್ನು ಕಾಯ್ದುಕೊಳ್ಳುವ ಮೂಲಕ ಶೀಘ್ರದಲ್ಲಿ ಕಾಮಗಾರಿಯನ್ನು ಮುಗಿಸಿಕೊಡುವುದಾಗಿ ಭರವಸೆ ನೀಡಿದರು. ಶಾಸಕರ ಕಾಳಜಿಗೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸೋಮವಾರಪೇಟೆ ಡಿ.31 NEWS DESK : ಕಸ್ತೂರಿ ರಂಗನ್ ವರದಿ ಅನುಷ್ಠಾನವಾದರೆ ಕೊಡಗಿನ ರೈತರಿಗೆ ಉಳಿಗಾಲವಿಲ್ಲ ಎಂದು ರೈತ ಹೋರಾಟ ಸಮಿತಿ ಅಧ್ಯಕ್ಷ ಚಕ್ರವರ್ತಿ ಸುರೇಶ್ ಆತಂಕ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಠಾನವನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ರಾಜ್ಯದ ನಿರ್ಧಾರವನ್ನು ಕೇಂದ್ರ ಸರ್ಕಾರ ಪುರಸ್ಕರಿಸಬೇಕು ಎಂದು ಮನವಿ ಮಾಡಿದರು. ಕಸ್ತೂರಿ ರಂಗನ್ ವರದಿಯಂತೆ ಕೊಡಗಿನಲ್ಲಿರುವ ಪಶ್ಚಿಮಘಟ್ಟ ಸುತ್ತಮುತ್ತಲ ಪ್ರದೇಶವನ್ನು ಸೂಕ್ಷ್ಮ ಪರಿಸರ ವಲಯ ಎಂದು ಗುರುತಿಸಿದರೆ, ಕೊಡಗಿನ ಬಹುತೇಕ ಗ್ರಾಮಗಳು ವಲಯಕ್ಕೆ ಸೇರ್ಪಡೆಗೊಂಡು ಗ್ರಾಮೀಣ ಜನರು ಬೀದಿಪಾಲಾಗಬೇಕಾಗುತ್ತದೆ. ಪುಷ್ಪಗಿರಿ ತಪ್ಪಲಿನ ಸನಿಹವೆ ಗ್ರಾಮಗಳಿದ್ದು, ಸಿ ಆ್ಯಂಡ್ ಡಿ ಕೃಷಿ ಭೂಮಿಯಲ್ಲೆ ಬದುಕು ಕಟ್ಟಿಕೊಂಡಿದ್ದಾರೆ. ಕಸ್ತೂರಿ ರಂಗನ್ ವರದಿ ಅನುಷ್ಠಾನಗೊಂಡರೆ ಸಿ ಆ್ಯಂಡ್ ಡಿ ಭೂಮಿ ಸೂಕ್ಷ್ಮ ಪರಿಸರ ವಲಯಕ್ಕೆ ಸೇರ್ಪಡೆಯಾಗುತ್ತದೆ. ನಂತರ ರೈತರು ಗುಳೆ ಹೋಗಬೇಕಾದ ಅನಿವಾರ್ಯ ಒದಗುತ್ತದೆ ಎಂದು ಹೇಳಿದರು. ಈಗಾಗಲೇ ಸಿ ಆ್ಯಂಡ್ ಡಿ ಭೂಮಿಯನ್ನು ಅರಣ್ಯಕ್ಕೆ ಸೇರಿಸಲು ಪ್ರಕ್ರಿಯೆಗಳು…
ಕುಶಾಲನಗರ ಡಿ.31 NEWS DESK : ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸುವ ಮೂಲಕ ನಾಡಿನಲ್ಲಿ ವೈಚಾರಿಕತೆಯನ್ನು ಭಿತ್ತಿದ ಸಾಹಿತ್ಯದ ಮೇರು ಪರ್ವತ ಕುವೆಂಪು ಎಂದು ಕೊಡಗಿನ ಹಿರಿಯ ಸಾಹಿತಿ ಕಣಿವೆ ಭಾರಧ್ವಜ್ ಆನಂದ ತೀರ್ಥ ಪ್ರತಿಪಾದಿಸಿದರು. ಕುಶಾಲನಗರದ ಸಾಹಿತ್ಯಾಸಕ್ತರ ವೇದಿಕೆ ವತಿಯಿಂದ ಸ್ಥಳೀಯ ಕನ್ನಡ ಭಾರತಿ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕುವೆಂಪು ಸಂಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾತಿ, ಮತ, ಪಂಥಗಳನ್ನು ಮೆಟ್ಟಿನಿಂತು ಸಂಘರ್ಷಗಳನ್ನು ಎದುರಿಸಿ ಮಾನವತೆಯ ಮೇರು ಗಿರಿಯಾದ ಕುವೆಂಪು ಪರಿಸರವನ್ನೇ ದೇವರೆಂದರು. ಪರಿಸರವನ್ನು ಆಹ್ಲಾದಿಸಿ ಆಸ್ವಾದಿಸಿದ ರಸ ಕವಿ ತಮ್ಮ ಬಹುಪಾಲು ಕಥೆ, ಕವನ, ಕಾದಂಬರಿ, ನಾಟಕ ಮೊದಲಾದ ಮಹಾಗ್ರಂಥಗಳನ್ನು ಬರೆದು ನಾಡಿನ ಸಾಹಿತ್ಯವನ್ನು ಶ್ರೀಮಂತ ಗೊಳಿಸಿದರು. ಆದ್ದರಿಂದ ಇಂದಿನ ವಿದ್ಯಾರ್ಥಿ ಸಮೂಹ ಕನ್ನಡ ನಾಡಿಗೆ ರಸ ಋಷಿ ಕುವೆಂಪು ಕೊಟ್ಟಿರುವ ಸಾಹಿತ್ಯವನ್ನು ಉಳಿಸಿಕೊಂಡು ಹೋದರೆ ಅದು ಆ ವಿಶ್ವಮಾನವನಿಗೆ ಕೊಡುವ ಗೌರವವಾಗಲಿದೆ ಎಂದರು. ಕುವೆಂಪು ವಿಚಾರಧಾರೆಗಳ ಕುರಿತು ಮಾತನಾಡಿದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ನಾಗೇಂದ್ರಸ್ವಾಮಿ,…
ನಾಪೋಕ್ಲು ಡಿ.31 NEWS DESK : ಕ್ರೈಸ್ತ ಧರ್ಮ ಹಾಗೂ ಏಸು ಕ್ರಿಸ್ತರ ಕುರಿತು ಅವಹೇಳನ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಾಪೋಕ್ಲುವಿನಲ್ಲಿ ಕ್ರೈಸ್ತ ಭಕ್ತಾಧಿಗಳು ಪ್ರತಿಭಟನೆ ನಡೆಸಿದರು. ಪಟ್ಟಣದ ಸಂತ ಮೇರಿಮಾತೆಯ ದೇವಾಲಯದಲ್ಲಿ ದಿವ್ಯ ಬಲಿ ಪೂಜೆ ನಂತರ ಸಾಮೂಹಿಕವಾಗಿ ಮೌನ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಧರ್ಮ ಗುರುಗಳಾದ ಜ್ಞಾನ ಪ್ರಕಾಶ್, ಇಂತಹ ಘಟನೆಗಳು ಮತ್ತೊಮ್ಮೆ ಮರುಕಳಿಸಬಾರದು. ತಪ್ಪಿತಸ್ಥರನ್ನು ಕಾನೂನು ಪ್ರಕಾರ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು. ವರದಿ : ದುಗ್ಗಳ ಸದಾನಂದ.
ಸೋಮವಾರಪೇಟೆ ಡಿ.31 NEWS DESK : ಸರ್ಕಾರದ ಆದೇಶದಂತೆ ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಷನ್ ಬೆಳೆಗಳನ್ನು ಬೆಳೆಯುತ್ತಿರುವವರಿಗೆ ಜಮೀನುಗಳನ್ನು ಗುತ್ತಿಗೆ ನೀಡುವ ಸಂಬಂಧ ಅರ್ಜಿಗಳನ್ನು ನೀಡಲು ಕಾಲಾವಕಾಶವನ್ನು ವಿಸ್ತರಿಸಬೇಕು ಎಂದು ಸೋಮವಾರಪೇಟೆ ತಾಲ್ಲೂಕು ರೈತ ಹೋರಾಟ ಸಮಿತಿ ಹಾಗೂ ರೈತಸಂಘದ ಒತ್ತಾಯಿಸಿದೆ. ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಅರ್ಜಿ ಸ್ವೀಕರಿಸುವ ಕಾಲಾವಕಾಶ 31.12.2024ರಂದು ಮುಕ್ತಾಯಗೊಳ್ಳಲಿದ್ದು, ಮುಂದಿನ 3 ತಿಂಗಳ ವರಗೆ ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಈ ಸಂದರ್ಭ ತಾಲ್ಲೂಕು ರೈತ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ.ಸುರೇಶ್, ತಾಲ್ಲೂಕು ರೈತ ಸಂಘದ ಅಧ್ಯಕ್ಷ ದಿನೇಶ್, ಪ್ರಮುಖರಾದ ಅಶೋಕ್, ಆದಿತ್ಯ ಹರಗ, ಎಸ್.ಬಿ.ಭರತ್ ಕುಮಾರ್, ಯಡೂರು ಜಗದೀಶ್, ಲಿಂಗೇರಿ ರಾಜೇಶ್ ಇದ್ದರು.
ವಿರಾಜಪೇಟೆ ಡಿ.31 NEWS DESK : ಹೆಗ್ಗಳ ಗ್ರಾಮದ ಎಡಮಕ್ಕಿಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ವಾರ್ಷಿಕ ಮಹೋತ್ಸವವು ಎರಡು ದಿನಗಳು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು.ಮುಂಜಾನೆಯಿಂದಲೇ ಶ್ರೀ ಗಣಪತಿ ಹೋಮ, ಧ್ವಜಾರೋಹಣ ಹಾಗೂ ದೀಪಾರಾಧನೆ ನಡೆಯಿತು. ಸಂಜೆ ಸಭಾ ಕಾರ್ಯಕ್ರಮ ನಡೆದು ಮಹಾಪೂಜೆಯ ಬಳಿಕ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಉತ್ಸವದ ಎರಡನೆಯ ದಿವಸವು ಕೂಡ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಮುಂಜಾನೆಯಿಂದಲೇ ನಡೆದವು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ನಂತರ ಸಂಜೆ ದೀಪಾರಾಧನೆಯು ನಡೆದು ಬೇಟೋಳಿ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪೂಜೆಯನ್ನು ಸಲ್ಲಿಸಿ ಬೇಟೋಳಿ ಯಿಂದ ತಲಿಪೋಲಿ ಮೆರವಣಿಗೆಯು ಎಡಮಕ್ಕಿ ಸಾರ್ವಜನಿಕ ಮೈದಾನವರೆಗೆ ಸಾಗಿ ದೇವಸ್ಥಾನವನ್ನು ಪ್ರವೇಸಿಸಿತು. ಮಹಿಳೆಯರು ಹಾಗೂ ಮಕ್ಕಳು ದೀಪವನ್ನು ಹಿಡಿದು ಮೆರವಣಿಗೆಯಲ್ಲಿ ಸಾಗಿದರು. ನಂತರ ಮಹಾಪೂಜೆ ನಡೆದು ತಾಯಂಭಗಂ ಸೇವೆಯು ನಡೆಯಿತು. ಭಕ್ತಾದಿಗಳಿಗೆ ಅನ್ನ ಸಂತರ್ಪಣಾ ಸೇವೆ ಜರುಗಿತು. ಅಯ್ಯಪ್ಪ ಮಾಲಾ ವೃತಾಧಾರಿಗಳಿಂದ ಭಜನೆ ನಡೆಯಿತು.…






