ಮಡಿಕೇರಿ NEWS DESK ಡಿ.3 : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್ ರಾಜ್ ಅವರ ನೇತೃತ್ವದಲ್ಲಿ ಜಿಲ್ಲೆಯ ಲಾರಿ, ಟ್ಯಾಕ್ಸಿ, ಸರಕು ವಾಹನದ ಮಾಲೀಕ, ಚಾಲಕರ ಸಭೆ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನಡೆಯಿತು. ಯಾವುದೇ ರೀತಿಯ ಅಪಘಾತಗಳಿಗೆ ಅವಕಾಶ ನೀಡಬಾರದು, ಸುರಕ್ಷಿತವಾಗಿ ವಾಹನ ಚಾಲನೆ ಮಾಡಬೇಕು, ಸಾರಿಗೆ ನಿಯಮ ಪಾಲಿಸಬೇಕು ಮತ್ತು ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡಬೇಕೆಂದು ಪೊಲೀಸ್ ಅಧಿಕಾರಿಗಳು ಮಾಲೀಕ ಹಾಗೂ ಚಾಲಕರಲ್ಲಿ ಮನವಿ ಮಾಡಿದರು. ನಂತರ ಎಲ್ಲಾ ಸಂಚಾರಿ ನಿಯಮ ಪಾಲನೆ ಮಾಡುವ ಕುರಿತು ಸೂಕ್ತ ಸೂಚನೆಗಳನ್ನು ನೀಡಲಾಯಿತು. ಲಾರಿ ಮತ್ತು ಪಿಕ್ ಅಪ್‌ಗಳಲ್ಲಿ ಮರಳು, ಜಲ್ಲಿ-ಕಲ್ಲು ಅನ್ನು ತೆಗೆದುಕೊಂಡು ಹೋಗುವಾಗ ಕಡ್ಡಯವಾಗಿ ಟಾರ್ಪಲನ್ನು ಮುಚ್ಚಿರಬೇಕು. ಟಾರ್ಪಲನ್ನು ಮುಚ್ಚದೇ ತೆಗೆದುಕೊಂಡು ಹೋಗುವುದು ಕಂಡುಬಂದಲ್ಲಿ ಅಥವಾ ಸಾರ್ವಜನಿಕರು ಭಾವಚಿತ್ರವನ್ನು ಕಳುಹಿಸಿ ದೂರು ನೀಡಿದಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಟಿಂಬರ್ ಸಾಗಾಟ ಮಾಡುವ ವಾಹನಗಳಲ್ಲಿ ನಿಗಧಿಪಡಿಸಿದ ಭಾರಕ್ಕಿಂತ ಹೆಚ್ಚಿನ…
ಲೇಖಕ: admin
ಮಡಿಕೇರಿ NEWS DESK ಡಿ.3 : ಫೆಂಜಲ್ ಚಂಡಮಾರುತದ ಪರಿಣಾಮ ಕೊಡಗು ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಕಳೆದ 24 ಗಂಟೆಗಳಲ್ಲಿ ಗುಡುಗು ಸಹಿತ 3 ಇಂಚು ಮಳೆ ಸುರಿದಿದೆ. ಮಡಿಕೇರಿಯಲ್ಲಿ ರಾತ್ರಿ ವೇಳೆ ಸುರಿದ ಗಾಳಿ, ಭಾರೀ ಗುಡುಗು ಸಹಿತ ನಿರಂತರ ಮಳೆ ಜನರಲ್ಲಿ ಆತಂಕ ಸೃಷ್ಟಿಸಿತು. ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 44.93 ಮಿ.ಮೀ. ಮಳೆಯಾಗಿದೆ. ಅತಿಹೆಚ್ಚು ಮಳೆ ಸಂಪಾಜೆ 94 ಮಿ.ಮೀ ಮತ್ತು ಭಾಗಮಂಡಲ 90 ಮಿ.ಮೀ ದಾಖಲಾಗಿದೆ. ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸುರಿದ ಮಳೆ 3093.22 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1789.35 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ 74.30 ಮಿ.ಮೀ, ವಿರಾಜಪೇಟೆ ತಾಲ್ಲೂಕಿನಲ್ಲಿ 48.20 ಮಿ.ಮೀ, ಪೊನ್ನಂಪೇಟೆ ತಾಲ್ಲೂಕಿನಲ್ಲಿ 36.94 ಮಿ.ಮೀ, ಸೋಮವಾರಪೇಟೆ ತಾಲ್ಲೂಕಿನಲ್ಲಿ 28.70 ಮಿ.ಮೀ, ಕುಶಾಲನಗರ ತಾಲ್ಲೂಕಿನಲ್ಲಿ 36.50 ಮಿ.ಮೀ ಮಳೆಯಾಗಿದೆ. ::: ಹಾರಂಗಿ ಜಲಾಶಯದ ನೀರಿನ ಮಟ್ಟ ::: ಹಾರಂಗಿ ಜಲಾಶಯದ ಗರಿಷ್ಠ…
ಮಡಿಕೇರಿ ಡಿ.3 NEWS DESK : ವಿಶೇಷಚೇತನರು ವಿಕಲತೆ ಇದೆ ಎಂದು ಕೊರಗದೆ ಸಾಧನೆಯತ್ತ ಮುನ್ನಡೆಯಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಸಲಹೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಜನ ಸೇವಾ ಕ್ರೀಡಾ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಯುವ ಸಂಘ, ಕೊಡಗು ಶಾಖೆ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ವಿಶೇಷ ಮಕ್ಕಳ ಶಾಲೆಗಳು ಇವರ ಸಂಯುಕ್ತ ಆಶ್ರಯದಲ್ಲಿ ‘ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವಕ್ಕೆ ಉತ್ತೇಜನ’ ಎಂಬ ಘೋಷವಾಕ್ಯದೊಂದಿಗೆ ನಗರದ ಓಂಕಾರ ಸದನದಲ್ಲಿ ಮಂಗಳವಾರದ ನಡೆದ ವಿಶ್ವ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೆಲವರು ಹುಟ್ಟಿನಿಂದಲೇ ವಿಶೇಷಚೇತನರಾಗುತ್ತಾರೆ. ಆದ್ದರಿಂದ ಧೃತಿಗೆಡದೆ ಆರೋಗ್ಯ, ಶಿಕ್ಷಣದತ್ತ ಗಮನಹರಿಸಿ ಹೆಚ್ಚಿನ ಸಾಧನೆ ಮಾಡಲು ಪ್ರಯತ್ನಿಸಬೇಕು ಎಂದು…
ಮಡಿಕೇರಿ ಡಿ.3 NEWS DESK : ಹವಾಮಾನ ವೈಪರೀತ್ಯ ಸಂಬಂಧ ಮುನ್ನೆಚ್ಚರ ವಹಿಸಿದಲ್ಲಿ ಹಲವು ಅವಘಡಗಳನ್ನು ತಪ್ಪಿಸಬಹುದಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರವು ಕಾಲ ಕಾಲಕ್ಕೆ ಹೊರಡಿಸುವ ಮಾಹಿತಿಯನ್ನು ಹಂಚಿಕೊಳ್ಳುವಂತೆ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ ನಿರ್ದೇಶಕರಾದ ಹರ್ಷಲ್ ಗೋಯಲ್ ತಿಳಿಸಿದ್ದಾರೆ. ನಗರದ ಜಿಲ್ಲಾಡಳಿತ ಭವನದ ರಾಷ್ಟ್ರೀಯ ಮಾಹಿತಿ ಕೇಂದ್ರ(ಎನ್‍ಐಸಿ)ದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಅವರು ಮಾತನಾಡಿದರು. ಪ್ರಾಕೃತಿಕ ವಿಕೋಪ ಯಾವುದೇ ಸಂದರ್ಭದಲ್ಲಿಯೂ ಎದುರಾಗಬಹುದಾಗಿದ್ದು, ಆದ್ದರಿಂದ ಸದಾ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ ಎಂದು ಕೆಎಸ್‍ಎನ್‍ಡಿಎಂಸಿ ನಿರ್ದೇಶಕರಾದ ಹರ್ಷಲ್ ಗೋಯಲ್ ಹೇಳಿದರು. ‘ಹವಾಮಾನ ಮುನ್ಸೂಚನೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಕೃಷಿಕರು, ಸ್ಥಳೀಯರಿಗೆ, ವ್ಯಾಪಾರಿಗಳು, ವಾಣಿಜ್ಯೋದ್ಯಮಿಗಳು, ಪ್ರವಾಸಿಗರು ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹವಾಮಾನ ಮುನ್ಸೂಚನೆಯನ್ನು ನೀಡುವುದು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ ಹೊರಡಿಸುವ ಮಾಹಿತಿಯನ್ನು ಎಲ್ಲರಿಗೂ ತಲುಪಿಸುವಂತಾಗಲು ಮುಂದಾಗಬೇಕು ಎಂದು ಹರ್ಷಲ್ ಗೋಯಲ್ ನಿರ್ದೇಶನ ನೀಡಿದರು.’ ಕೊಡಗು ಜಿಲ್ಲೆಗೆ ಮುಂಗಾರು ಸಂದರ್ಭದಲ್ಲಿ ಹೆಚ್ಚಿನ…
ಮಡಿಕೇರಿ ಡಿ.3 NEWS DESK : ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷತ್ ನ ಧರ್ಮಪ್ರಸಾರ ವಿಭಾಗದ ವತಿಯಿಂದ ಸಂತರ ಪಾದಯಾತ್ರೆ ಹಾಡಿಯ ಕಡೆಗೆ ಕಾರ್ಯಕ್ರಮ ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿಯಲ್ಲಿ ನಡೆಯಿತು. ಸಿದ್ದಲಿಂಗಪುರ ಅರಶಿನ ಕುಪ್ಪೆ ಶ್ರೀಮಂಜುನಾಥ ಸ್ವಾಮಿ ಕ್ಷೇತ್ರದ ಶ್ರೀ ರಾಜೇಶ್ ನಾಥ್ ಯೋಗಿ ಗುರುಗಳು ತಿತಿಮತಿ ಸಮೀಪದ ಬುಡಕಟ್ಟು ಜನಾಂಗದ ಹಾಡಿಗಳಿಗೆ ಭೇಟಿ ನೀಡಿ ಹಿಂದೂ ಧರ್ಮದ ಮಹತ್ವದ ಕುರಿತು ವಿವರಿಸಿದರು. ಹಾಡಿವಾಸಿಗಳು ಗುರುಗಳನ್ನು ಶ್ರದ್ಧಾಭಕ್ತಿಯಿಂದ ಬರ ಮಾಡಿಕೊಂಡರು. ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಪ್ರಮುಖರು ಹಾಗೂ ಪೊನ್ನಂಪೇಟೆ ಪ್ರಖಂಡದ ಪದಾಧಿಕಾರಿಗಳು ಈ ಸಂದರ್ಭ ಹಾಜರಿದ್ದರು.
ಮಡಿಕೇರಿ ಡಿ.3 NEWS DESK : ವಕೀಲ ವೃತ್ತಿಯ ಘನತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಯುವಪೀಳಿಗೆಯ ವಕೀಲರಿಗೆ ಹಿರಿಯ ವಕೀಲರು ಪ್ರೋತ್ಸಾಹ ನೀಡುವ ಮಾಗ೯ದಶಿ೯ಗಳಾಗಬೇಕೆಂದು ಮುಖ್ಯ ಮಂತ್ರಿಗಳ ಕಾನೂನು ಸಹೆಗಾರ ಮತ್ತು ವೀರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್.ಪೊನ್ನಣ್ಣ ಕರೆ ನೀಡಿದ್ದಾರೆ. ನಗರದ ಹೊರವಲಯದಲ್ಲಿನ ಕ್ಯಾಪಿಟಲ್ ವಿಲೇಜ್ ರೆಸಾಟ್೯ನಲ್ಲಿ ಮಡಿಕೇರಿ ವಕೀಲರ ಸಂಘದ ವತಿಯಿಂದ ಆಯೋಜಿತ ವಕೀಲರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಇತಿಹಾಸದಲ್ಲಿ ವಕೀಲರ ಸೇವೆ ಸದಾ ಸ್ಮರಣೀಯವಾಗಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿಯೂ ವಕೀಲರು ಮುಂಚೂಣಿಯಲ್ಲಿದ್ದದ್ದು ಗಮನಾಹ೯, ಇಂಥ ಪವಿತ್ರ ವೃತ್ತಿಯಾದ ವಕೀಲ ವೃತ್ತಿಯ ಘನತೆಯನ್ನು ಸದಾ ಎತ್ತರದಲ್ಲಿರುವಂತೆ ಪ್ರತೀಯೋವ೯ ವಕೀಲರೂ ಗಮನಹರಿಸುವಂತೆ ಹೇಳಿದರು. ಗ್ರಾಮೀಣ ನ್ಯಾಯಾಲಯಗಳಿಂದ ಮೊದಲ್ಗೊಂಡು ಸವೋ೯ಚ್ಚ ನ್ಯಾಯಾಲಯದವರೆಗೂ ವಕೀಲರ ಪಾಂಡಿತ್ಯ ಸಮಾನವಾಗಿರುತ್ತದೆ. ಇದರಿಂದಾಗಿಯೇ ಇಂದಿಗೂ ವಕೀಲ ವೃತ್ತಿ ತನ್ನ ನಂಬಿಕೆಯನ್ನು ದೇಶದಲ್ಲಿ ಉಳಿಸಿಕೊಂಡಿದೆ ಎಂದು ಅಭಿಪ್ರಾಯಪಟ್ಟ ಪೊನ್ನಣ್ಣ, ವಕೀಲರು ಸದಾ ಹೊಸವಿಚಾರಗಳನ್ನು, ನವ ಕಾನೂನುಗಳನ್ನು ಅಧ್ಯಯನ ಮಾಡುತ್ತಲೇ ಇರಬೇಕು. ಈ ಮೂಲಕ ವೃತ್ತಿಯಲ್ಲಿ ಜ್ಞಾನ ಸಂಪಾದನೆಗೆ ಸಕ್ರಿಯರಾಗಿರಬೇಕೆಂದರು. ಜ್ಞಾನದ…
ಮಡಿಕೇರಿ NEWS DESK ಡಿ.3 : ಕೊಡಗಿನ ಪರಿಸರಕ್ಕೆ ಮಾರಕವಾಗಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ತಕ್ಷಣ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಡಿ.4 ರಂದು ಕಡಂಗದಲ್ಲಿ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯ ಹುಳುಕುಗಳ ಮೂಲಕ ನೆಲ ಕಬಳಿಸಲು ಹದ್ದಿನ ಕಣ್ಣಿಟ್ಟಿರುವ ಹೊರಗಿನ ಬಂಡವಾಳಶಾಹಿ, ರೆಸಾರ್ಟ್ ಮಾಫಿಯಾ, ಟೌನ್‌ಶಿಪ್ ಧಣಿಗಳು ಹಾಗೂ ಹವಾಲ ದಂಧೆಕೋರರು ತಮ್ಮ ಕರಾಳ ವಿಷ ವರ್ತುಲಗಳ ಮೂಲಕ ಇಡೀ ಪ್ರದೇಶದ ಕೃಷಿ ಭೂಮಿಯನ್ನು ಕಬ್ಜ ಮಾಡಲು ಹೊರಟಿದ್ದಾರೆ. ಆದ್ದರಿಂದ ಬುಧವಾರ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಕೊಡವರೆಲ್ಲರು ಪಾಲ್ಗೊಂಡು ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆಯ ದುರುಪಯೋಗದ ವಿರುದ್ಧ ಧ್ವನಿ ಎತ್ತಬೇಕೆಂದು ಮನವಿ ಮಾಡಿದ್ದಾರೆ. ಆದಿಮಸಂಜಾತ ಕೊಡವರ ಹಕ್ಕುಗಳನ್ನು ರಕ್ಷಿಸಲು “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ…
ಮಡಿಕೇರಿ ಡಿ.3 NEWS DESK : ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆಯು ಸಂಘದ ಅಧ್ಯಕ್ಷೆ ಗೌರು ಎಂ.ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆಯಿತು. ವಿರಾಜಪೇಟೆಯ ರೋಟರಿ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿವಿಧ ವಿಷಯ ಕುರಿತು ಚರ್ಚಿಸಲಾಯಿತು. ಉಪಾಧ್ಯಕ್ಷ ಶಂಕರ ನಾರಾಯಣ ಹೆಬ್ಬಾರ್ ಸಂಘದ ನಿಧಿ ರಶೀದಿ 35,000 ಸಂಗ್ರಹಿಸಿರುವ ಬಗ್ಗೆ ಮಾಹಿತಿ ನೀಡಿದರು. ಕಾರ್ಯದರ್ಶಿ ರಂಜಿತ್ ಮಾತನಾಡಿದರು. ಸಂಘದ ಪ್ರಮುಖ ಜೋಸೆಫ್‍ಸೆರಿ ಸ್ವಾಗತಿಸಿದರು. ಖಜಾಂಚಿ ಸುರೇಶ್ ವಂದಿಸಿದರು. ಸಭೆಯಲ್ಲಿ 50ಕ್ಕಿಂತ ಹೆಚ್ಚು ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಉಡುಪಿ, ಬಾಗಲಕೋಟೆಯಲ್ಲಿ ನಡೆದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಂಚಿನ ಪದಕ ಗೆದ್ದ ತಂಡಕ್ಕೆ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು.
ಮಡಿಕೇರಿ ಡಿ.3 NEWS DESK : ಬೊಟ್ಟಿಯತ್ ಮೂಂದ್ ನಾಡ್ ಪುತ್ತರಿ ಕೈಮುಡಿಕೆ ಕೋಲ್ ಮಂದ್ ಡಿ.17 ರಂದು ನಡೆಯಲಿದೆ ಎಂದು ಮೂರು ನಾಡಿನ ತಕ್ಕಮುಖ್ಯಸ್ಥ ಅಡ್ಡಂಡ ಪ್ರಕಾಶ್ ಕುಶಾಲಪ್ಪ ತಿಳಿಸಿದ್ದಾರೆ. ಈಚೂರುವಿನ ದವಸ ಭಂಡಾರದ ಸಭಾಂಗಣದಲ್ಲಿ ಬೊಟ್ಟಿಯತ್ ನಾಡ್, ಕುತ್ತ್ ನಾಡ್ ಹಾಗೂ ಬೇರಳಿ ನಾಡ್ ಈ ಮೂರು ನಾಡುಗಳಿಗೆ ಸೇರಿದ ಇತಿಹಾಸ ಪ್ರಸಿದ್ಧದ ಕೈಮುಡಿಕೆ ಪುತ್ತರಿ ಕೋಲ್ ಮಂದ್ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದು ಡಿ.17 ರಂದು ಕೈಮುಡಿಕೆ ಕೋಲ್ ಮಂದ್ ನಡೆಸಲು ಒಮ್ಮತದ ತೀರ್ಮಾನ ಕೈಕೊಳ್ಳಲಾಯಿತು. ನಂತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ವರ್ಷದಂತೆ ಈ ಬಾರಿಯೂ ಕೈಮುಡಿಕೆ ಪುತ್ತರಿ ಕೋಲ್ ಮಂದನ್ನು ವಿಜ್ರಂಭಣೆಯಿಂದ ಸಾರ್ವಜನಿಕವಾಗಿ ಆಚರಿಸುವಂತೆ ಹಾಗೂ ವಿವಿಧ ಕಾರ್ಯಕ್ರಮ ನಡೆಸುವಂತೆ ತಿರ್ಮಾನಿಸಲು ಸಭೆ ನಡೆಸುತ್ತಿರುವುದಾಗಿ ಹೇಳಿದರು. ಅಂದು ಬೆಳಿಗ್ಗೆ 10 ಗಂಟೆಗೆ ಮೂರು ನಾಡಿನವರು ಮೂರು ಕಡೆಯಿಂದ ಓಡಿಬಂದು ಮಂದ್ ಮಧ್ಯದಲ್ಲಿರುವ ಅರಳಿ ಮರಕ್ಕೆ ಕೋಲು ಹೊಡೆಯುವ…
ಮಡಿಕೇರಿ ಡಿ.3 NEWS DESK : ಹೊಸ್ಕೇರಿ ಗ್ರಾಮದ ಬೇರೆಂಗಿ ಬೆಟ್ಟದ ಪ್ರಕೃತಿಯ ಸುಂದರ ತಾಣದಲ್ಲಿರುವ ಶ್ರೀ ಈಶ್ವರನ ಬಯಲ ದೇವಾಲಯದ 6ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಶ್ರದ್ಧಾ ಭಕ್ತಿಗಳಿಂದ ನೆರವೇರಿತು. ಮುಂಜಾನೆಯಿಂದಲೇ ವಿವಿಧ ಪೂಜಾ ಕಾರ್ಯಕ್ರಮಗಳು ದೇವಸ್ಥಾನದ ಪ್ರಮುಖರಾದ ರಾಮಣ್ಣ, ದಿನೇಶ, ಮಣಿ, ಶಿವ ಕುಮಾರ, ಶೇಷಪ್ಪ, ಕೃಷ್ಣಪ್ಪ ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ನಡೆಯಿತು. ವಾರ್ಷಿಕೋತ್ಸವದ ಪ್ರಯುಕ್ತ ಭಕ್ತಾದಿಗಳಿಗೆ ಅನ್ನದಾನ ನೆರವೇರಿತು. ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.






