ಮಡಿಕೇರಿ ಡಿ.30 NEWS DESK : ಬೆಂಗಳೂರಿನ ಬನ್ನೇರುಘಟ್ಟದ ಪ್ರಖ್ಯಾತ ಫೋರ್ಟಿಸ್ ಆಸ್ಪತ್ರೆ ವತಿಯಿಂದ ಜ.5 ರಂದು ಮೊಣಕಾಲು ಮತ್ತು ಹಿಪ್ ಬದಲಿ ಉಚಿತ ಶಿಬಿರ ಮಡಿಕೇರಿಯಲ್ಲಿ ನಡೆಯಲಿದೆ. ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಹರ್ಷ ಹೆಲ್ತ್ ಕೇರ್ ಕ್ಲಿನಿಕ್‍ನಲ್ಲಿ ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಫೋರ್ಟಿಸ್ ಆಸ್ಪತ್ರೆಯ ಅರ್ಥೋಪೆಡಿಕ್ಸ್, ರೊಬೊಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ಸರ್ಜನ್ ಡಾ.ಕೆ.ಯೋಗೇಶ್, ಸೊಂಟ, ಮೊಣಕಾಲು ಮತ್ತು ಕೀಲು ನೋವುಗಳು, ನಡೆಯಲು ಕಷ್ಟವಾಗುವಿಕೆ, ವೃದ್ಧರಿಗಾಗಿ ಕೀಲು ಬದಲಿ ವ್ಯವಸ್ಥೆ, ಕೀಹೋಲ್ ಮೂಳೆ ಚಿಕಿತ್ಸೆಯ ಕಾರ್ಯಾಚರಣೆಗಳು, ರೊಬೊಟಿಕ್ ಜಾಯಿಂಟ್ ರಿಪ್ಲೇಸ್ಮೆಂಟ್ ಕುರಿತು ಉಚಿತ ಸಮಾಲೋಚನೆ ಹಾಗೂ ಚಿಕಿತ್ಸೆ ನೀಡಲಿದ್ದಾರೆ. ಶಿಬಿರದಲ್ಲಿ ಸಿ.ಜಿ.ಹೆಚ್.ಎಸ್., ಬಿಎಸ್‍ಎನ್‍ಎಲ್, ಕೆಇಬಿ, ರೈಲ್ವೆ ಸಿಬ್ಬಂದಿ ಮತ್ತು ಎಬಿವೈ (ಪೊಲೀಸ್), ಎಸ್‍ಬಿಐ, ಎಲ್ಲಾ ಖಾಸಗಿ ಬ್ಯಾಂಕಿಂಗ್ ಉಚಿತ ಸಮಾಲೋಚನೆ ನಡೆಯಲಿದೆ. ನಿಗಧಿತ ಭೇಟಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಅವಿನಾಶ್-7829128776 ಸಂಪರ್ಕಿಸಬಹುದಾಗಿದೆ.
ಲೇಖಕ: admin
ಮಡಿಕೇರಿ ಡಿ.30 NEWS DESK : ಓರೆ-ಕೋರೆಗಳನ್ನು ತಿದ್ದಿ ಸದೃಢ ಹಾಗೂ ಸುಭದ್ರ ಸಮಾಜ ನಿರ್ಮಾಣವಾಗಬೇಕಾದರೆ ಪತ್ರಕರ್ತರ ಪಾತ್ರ ಮಹತ್ತರವಾಗಿರುತ್ತದೆ ಎಂದು ಗಣ್ಯರು ಅಭಿಮತ ವ್ಯಕ್ತಪಡಿಸಿದರು. ನಗರದ ಪತ್ರಿಕಾ ಭವನದಲ್ಲಿ ಕೊಡಗು ಪ್ರೆಸ್ ಕ್ಲಬ್ 26ನೇ ವಾರ್ಷಿಕೋತ್ಸವ ಅಂಗವಾಗಿ ಪ್ರೆಸ್ ಕ್ಲಬ್ ಡೇ ಕಾರ್ಯಕ್ರಮದಲ್ಲಿ ಗಣ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ, ಒತ್ತಡದ ಬದುಕಿಗೆ ವಿರಾಮ ನೀಡಿ ಮನೋಲ್ಲಾಸ ಪಡೆಯವ ನಿಟ್ಟಿನಲ್ಲಿ ಈ ಕಾರ್ಯಕ್ರಮ ರೂಪಿಸಲಾಯಿತು. ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರೆಸ್ ಕ್ಲಬ್ ಒಂದಾಗಿ ನಡೆಯುತ್ತಿದೆ. ಇದರಿಂದ ಪತ್ರಕರ್ತರಲ್ಲಿ ಒಗ್ಗಟ್ಟು ಮತ್ತಷ್ಟು ಹೆಚ್ಚಾಗಿದೆ ಎಂದರು. ಯುವ ಕಾಂಗ್ರೆಸ್ ನಾಯಕ ಮೈಸಿ ಕತ್ತಣಿರ ಮಾತನಾಡಿ, ಜಿಲ್ಲೆಯ ಪತ್ರಕರ್ತರು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿದ್ದಾರೆ. ದೇಶದ ಆಧಾರಸ್ತಂಭಗಳ ಪೈಕಿ ಮಾಧ್ಯಮ ಪ್ರಮುಖವಾಗಿದ್ದು, ಸದೃಢ, ಸುಭದ್ರ ಸಮಾಜಕ್ಕೆ ಪತ್ರಕರ್ತರ ಪಾತ್ರ ಮಹತ್ತರವಾಗಿದೆ. ಸಮಾಜದ ಸಕಾರತ್ಮಕ ಬದಲಾವಣೆಯಾಗಬೇಕಾದರೆ ಮಾಧ್ಯಮ ಕ್ಷೇತ್ರದ ಅಗತ್ಯ ಹೆಚ್ಚಿದೆ…
ಮಡಿಕೇರಿ ಡಿ.30 NEWS DESK : ಕ್ರೈಸ್ತ ಧರ್ಮ ಹಾಗೂ ಏಸು ಕ್ರಿಸ್ತರ ಕುರಿತು ಅವಹೇಳನ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಸಂತ ಮೈಕಲರ ಚರ್ಚ್ ಎದುರು ಜಮಾಯಿಸಿದ ಅಸೋಸಿಯೇಷನ್ ಪ್ರಮುಖರು ಹಾಗೂ ಪದಾಧಿಕಾರಿಗಳು, ದಿವ್ಯ ಬಲಿ ಪೂಜೆ ಮೂಲಕ ಶಾಂತಿಯುತ ಪ್ರತಿಭಟನೆ ನಡೆಸಿದರು. ಈ ಸಂದರ್ಭ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಮಡಿಕೇರಿ ತಾಲ್ಲೂಕು ಘಟಕದ ಉಪಾಧ್ಯಕ್ಷ ಮೈಕಲ್ ವೇಗಸ್ ಮಾತನಾಡಿ, ಕ್ರೈಸ್ತರ ಪವಿತ್ರ ಹಬ್ಬವಾದ ಕ್ರಿಸ್‍ಮಸ್ ದಿನದಂದು ಸಾಮಾಜಿಕ ಜಾಲತಾಣದಲ್ಲಿ ಕೆಲ ಕಿಡಿಗೇಡಿಗಳು ಕ್ರೈಸ್ತ ಧರ್ಮ ಹಾಗೂ ಏಸು ಕ್ರಿಸ್ತರ ಕುರಿತು ಅವಹೇಳನ ಪದಗಳನ್ನು ಬಳಸಿ ನಿಂದನೆ ಮಾಡಿ ಸಂದೇಶ ಹರಿಬಿಟ್ಟಿದ್ದಾರೆ. ಸೌಹರ್ದತೆಯಲ್ಲಿರುವ ಕೊಡಗು ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸುವ ಕೆಲಸಕ್ಕೆ ಕೈಹಾಕುತ್ತಿರುವುದು ವಿಷಾದನೀಯ ಎಂದರು. ಈಗಾಗಲೇ ಐದು ತಾಲ್ಲೂಕುಗಳಲ್ಲಿಯೂ ಪೊಲೀಸ್ ದೂರು ನೀಡಿ ಬಂಧನಕ್ಕೆ ಆಗ್ರಹಿಸಲಾಗಿದ್ದು, ಶಾಂತಿಯನ್ನು ಸಾರುವ ಕ್ರೈಸ್ತ ಸಮುದಾಯಕ್ಕೆ ಕಾನೂನು ಮೇಲೆ ವಿಶ್ವಾಸವಿದೆ ಎಂದು…
ನಾಪೋಕ್ಲು ಡಿ.30 NEWS DESK : ನಾಪೋಕ್ಲು ಕೊಡವ ಸಮಾಜದ ಬೆಳ್ಳಿ ಹಬ್ಬದ ಆಚರಣೆ ಅಂಗವಾಗಿ ಮಾರುಕಟ್ಟೆ ಆವರಣದಿಂದ ಆರಂಭಗೊಂಡ ಮೆರವಣಿಗೆ ವೀಕ್ಷಕರ ಗಮನ ಸೆಳೆಯಿತು. ಸುಮಾರು ಒಂದು ಗಂಟೆಗಳ ಕಾಲ ಸಾಗಿದ ಮೆರವಣಿಗೆಯಲ್ಲಿ ಕೊಡವ ಸಂಸ್ಕೃತಿಯ ವೈವಿಧ್ಯಮಯ ಕಲೆಗಳು ಅನಾವರಣಗೊಂಡವು. ಕೊಡವ ವಾಲಗಕ್ಕೆ ಸಾಂಪ್ರದಾಯಿಕ ಉಡುಗೆತೊಡುಗೆಯೊಂದಿಗೆ ನರ್ತಿಸುತ್ತಾ ಮೆರವಣಿಗೆಯಲ್ಲಿ ಸಾಗಿ ಸಂಭ್ರಮಿಸಿದರು. ಸ್ಥಳೀಯ ಮಾರುಕಟ್ಟೆ ಆವರಣದ ಬಳಿ ಕೊಡವ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮೈಸೂರು ಕೊಡವ ಸಮಾಜದ ಅಧ್ಯಕ್ಷ ಪೊಂಜಾಂಡ ಎ. ಗಣಪತಿ ಗಾಳಿಗೆ ಗುಂಡು ಹೊಡೆಯುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸಭಾ ಕಾರ್ಯಕ್ರಮ :: ಕೊಡವ ಸಮಾಜದಲ್ಲಿ ಆಯೋಜಿಸಿದ ಸಭಾ ಕಾರ್ಯಕ್ರಮದಲ್ಲಿ ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ. ನಾಣಯ್ಯ ಅಧ್ಯಕ್ಷತೆಯಲ್ಲಿ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಮೈಸೂರು ಕೊಡವ ಸಮಾಜದ ಅಧ್ಯಕ್ಷ ಪೊಂಜಾಂಡ ಎ.ಗಣಪತಿ ಪಾಲ್ಗೊಂಡು ಮಾತನಾಡಿ ಕೊಡವ ಸಂಸ್ಕೃತಿಯ ಆಚಾರ, ವಿಚಾರ, ಸಂಸ್ಕೃತಿ ತುಂಬ ಪುರಾತನವಾಗಿದ್ದು, ಅದನ್ನು ಉಳಿಸಿ…
ವಿರಾಜಪೇಟೆ ಡಿ.30 NEWS DESK : ಮಲೆತಿರಿಕೆ ಶ್ರೀ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಶ್ರಿ ಅಯ್ಯಪ್ಪ ಸ್ವಾಮಿ ದೇವಾಲಯದ ವಾರ್ಷಿಕ ಪೂಜಾ ಮಹೋತವವು ಡಿ.30, 31 ಹಾಗೂ 1 ರಂದು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಜರುಗಲಿದೆ. ಇಂದು (ಡಿ.30) ರಂದು ಬೆಳಿಗ್ಗೆ ಮತ್ತು ರಾತ್ರಿ ವಿಶೇಷ ಪೂಜೆ, ಡಿ.31 ರಂದು ಬೆಳಿಗ್ಗೆ ಮತ್ತು ರಾತ್ರಿ ವಿಶೇಷ ಪೂಜೆಗಳು ನಡೆಯಲಿದೆ. ಜ.1 ರಂದು ಮುಂಜಾನೆ 5.30ಕ್ಕೆ ಗಣಪತಿ ಹೋಮ, ಲಕ್ಷ್ಮೀ ಪೂಜೆ, ಸರಸ್ವತಿ ಪೂಜೆ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ತುಲಭಾರ ಸೇವೆ ಆರಂಭವಾಗಲಿದೆ. 10 ಗಂಟೆಗೆ ಲಕ್ಷಾರ್ಚನೆ ಸೇವೆ ನಡೆಯಲಿದ್ದು, ಮಧ್ಯಾಹ್ನ 12.30 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಗೆ ಮಹಾಪೂಜೆ ನಡೆಯಲಿದೆ. ನಂತರ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಹಾಗೂ ಭಕ್ತರಿಗೆ ಅನ್ನಸಂತರ್ಪಣೆ ಜರುಗಲಿದೆ. ಸಂಜೆ 6.3ಕ್ಕೆ ಶ್ರೀ ಸ್ವಾಮಿಯ ಚಲನವಲನ, ಕಥಾ ಸಾರಂಶ ಒಳಗೊಂಡ ಶೋಭಾಯಾತ್ರೆಯು ನಗರದ ಮುಖ್ಯ ಬೀದಿಗಳಲ್ಲಿ ಸಂಚರಿಸಲಿದೆ. ಮೆರವಣಿಗೆಯ ಅಂಗವಾಗಿ ದೀಪಾರತಿ, ಶ್ರೀ ಮತ್ಸ್ಯ ಅವತಾರ…
ಮಡಿಕೇರಿ NEWS DESK ಡಿ.30 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದಲ್ಲಿ ಉಂಟಾಗಿರುವ ಎರಡು ಜನಾಂಗಗಳಲ್ಲಿನ ಭಿನ್ನಾಭಿಪ್ರಾಯ ಶಮನಕ್ಕೆ ಜಿಲ್ಲಾಡಳಿತ ಡಿ.30 ರಂದು ಉಭಯ ಕಡೆಯವರ ಶಾಂತಿ ಸಭೆ ಕರೆದಿದ್ದು, ಎಲ್ಲರೂ ಶಾಂತಿಯುತವಾಗಿ ಸಮಸ್ಯೆಯನ್ನು ಬಗೆಹರಿಸಲು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕೆಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮನವಿ ಮಾಡಿದ್ದಾರೆ. ಈಗಾಗಲೇ ದೇವಾಲಯದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಯಾರಾದರು ಶಾಂತಿಭಂಗ ಮಾಡಲು ಯತ್ನಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಪರಿಸ್ಥಿತಿಯನ್ನು ಶಾಂತಿಯುತವಾಗಿ ನಿಭಾಯಿಸಲು ಅವಕಾಶವಿದ್ದರೂ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಜನಾಂಗಗಳ ವಿರುದ್ಧ ಅವಹೇಳನ ಮಾಡುತ್ತಿರುವುದು ಕಂಡು ಬಂದಿದೆ. ಸಮಾಜದಲ್ಲಿ ಅಶಾಂತಿ ಮೂಡಿಸುವವರ ಪರ ಯಾರೂ ನಿಲ್ಲಬಾರದು. ಸಮಸ್ಯೆಯನ್ನು ಬಗೆಹರಿಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಇದೆ. ಯಾರ ಮೇಲೂ ನಂಬಿಕೆ ಇಲ್ಲದಿದ್ದರೆ ಕಾನೂನಿನ ಮೊರೆ ಹೋಗಬಹುದು. ಪ್ರಕರಣದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅನವಶ್ಯಕ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಎಲ್ಲರೂ ಶಾಂತಿಯನ್ನು ಕಾಪಾಡಬೇಕು, ಶಾಂತಿಭಂಗ ಮಾಡಿದರೆ…
ಮಡಿಕೇರಿ ಡಿ.30 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಕೊಮ್ಮೆತೋಡು ಹಾತೂರು ರಸ್ತೆಯ ದುರಸ್ತಿ ಕಾಮಗಾರಿಯು ಭರದಿಂದ ಸಾಗಿದೆ. ಈ ಭಾಗದಲ್ಲಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಯು ತೀವ್ರ ಹಾನಿಗೊಳಗಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ವಿಶೇಷ ಅನುದಾನವನ್ನು ತರಿಸುವಲ್ಲಿ ಯಶಸ್ವಿಯಾಗಿದ್ದು, ಗುಣಮಟ್ಟದ ರಸ್ತೆ ಕಾಮಗಾರಿಯನ್ನು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಕಾಮಗಾರಿ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿ ಜನ ಸಂಚಾರಕ್ಕೆ ಮುಕ್ತವಾಗಲಿದೆ. ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಶಾಸಕ ಎ.ಎಸ್.ಪೊನ್ನಣ್ಣ ಅವರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಡಿ.30 NEWS DESK : ಮಡಿಕೇರಿ ಕೊಡವ ಸಮಾಜದ ಪುತ್ತರಿ ನಮ್ಮೆರ ಊರೊರ್ಮೆ ಸಮಾರಂಭವು ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಾಜದ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಾಲಿಬೆಟ್ಟ ಟಾಟಾ ಕಾಫಿ ಸಂಸ್ಥೆಯ ಮೆನೆಜಿಂಗ್ ಡೈರೆಕ್ಟರ್ ಪೆಮ್ಮಂಡ ಎ.ಮಂದಣ್ಣ, ಕೊಡಗಿನ ಪುತ್ತರಿ ಹಾಗೂ ಕೈಲ್ ಪೊಳ್ದ್ ಹಬ್ಬದ ಆಚರಣೆಯ ಹಿಂದೆ ಸಾಂಪ್ರದಾಯಿಕ ಭತ್ತದ ಕೃಷಿ ಮರೆಯಾಗುತ್ತಿರುವುದು ವಿಷಾದನೀಯ. ಭತ್ತದ ಕೃಷಿ ಇಲ್ಲದೆ ಹಬ್ಬ ಆಚರಣೆ ಅರ್ಥಹೀನವಾಗುವುದರಿಂದ ಸಂಘ ಸಂಸ್ಥೆಗಳು, ಸಮಾಜಗಳು ಭತ್ತದ ಕೃಷಿಗೆ ಹೆಚ್ಚಿನ ಒತ್ತು ನೀಡುವಂತಾಗಬೇಕೆಂದರು. ಅಧ್ಯಕ್ಷರಾದ ಮಂಡುವಂಡ ಮುತ್ತಪ್ಪ ಮಾತನಾಡಿ ಒಗ್ಗಟ್ಟಿನಲ್ಲಿ ಬಲವಿದೆ ಎಂಬಂತೆ ಒಗ್ಗಟ್ಟು ಇದ್ದರೆ ಮಾತ್ರ ಕೊಡವ ಜನಾಂಗ ಉಳಿಯಲು ಸಾಧ್ಯ. ಮರಗೋಡುವಿನ ಕಟ್ಟೆಮಾಡುವಿನ ಮಹಾಮೃತ್ಯುಂಜಯ ದೇವಾಲಯದ ವಾರ್ಷಿಕ ಉತ್ಸವದಲ್ಲಿ ಕೊಡವರ ಉಡುಪನ್ನು ಅವಮಾನಿಸಿರುವುದು ಖಂಡನೀಯ. ಎಲ್ಲರ ಸಹಕಾರದಿಂದ ಮಡಿಕೇರಿ ಕೊಡವ ಸಮಾಜ ಅಭಿವೃದ್ಧಿಯ ಜೊತೆ ಹಲವು ಕಾರ್ಯಕ್ರಮಗಳನ್ನು ನಡೆಸುತ್ತ ಬರುತ್ತಿದೆ ಎಂದರು. ಸಭಾ ಕಾರ್ಯಕ್ರಮಕ್ಕೂ ಮುನ್ನ…
ಮಡಿಕೇರಿ NEWS DESK ಡಿ.30 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಐದು ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಜಾಥಾ ನಡೆಸುವ ಸಾಧ್ಯತೆಗಳಿರುವುದರಿಂದ ಮುಂಜಾಗೃತಾ ಕ್ರಮವಾಗಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಎರಡು ಜನಾಂಗಗಳ ನಡುವಿನ ಭಿನ್ನಾಭಿಪ್ರಾಯದಿಂದ ಗೊಂದಲ ಸೃಷ್ಟಿಯಾಗಿದ್ದು, ಉಭಯ ಗುಂಪು ಸೋಮವಾರ ಕಟ್ಟೆಮಾಡಿಗೆ ಜಾಥಾ ನಡೆಸುವ ಕುರಿತು ಹೇಳಿಕೆ ನೀಡಿರುವ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡಲು ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಶಾಂತಿಯನ್ನು ಕಾಪಾಡಲು ಜಿಲ್ಲಾಡಳಿತ ಮನವಿ ಮಾಡಿದೆ.
ಮಡಿಕೇರಿ ಡಿ.30 NEWS DESK : ಅಖಿಲ ಕೊಡಗು ಅಮ್ಮ ಕೊಡವ ಸಮಾಜದವರು ಆಯೋಜಿಸಿರುವ ಪುತ್ತರಿ ನಮ್ಮೆ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿ, ಮಾತನಾಡಿ ಅಮ್ಮ ಕೊಡವ ಸಮಾಜದ ಕೊಡುಗೆ ಈ ನಾಡಿಗೆ ಅಪಾರವಾದದ್ದು. ವಿಶಿಷ್ಟವಾದ ಸಂಸ್ಕೃತಿ ಹಾಗೂ ಆಚರಣೆಯನ್ನು ಹೊಂದಿರುವ ಅಮ್ಮ ಕೊಡವ ಸಮುದಾಯದವರು ಮತ್ತಷ್ಟು ಏಳಿಗೆಯನ್ನು ಕಾಣುವಂತಾಗಲಿ ಎಂದು ಶುಭ ಕೋರಿದರು. ಈ ಸಂದರ್ಭ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ಅಖಿಲ ಅಮ್ಮ ಕೊಡವ ಸಮಾಜದ ಅಧ್ಯಕ್ಷ ಬಾನಂಡ ಎನ್. ಪ್ರತ್ಯು, ಹಿರಿಯ ನ್ಯಾಯಾಧೀಶರು, ಜಿಲ್ಲಾ ಸತ್ರ ನ್ಯಾಯಾಲಯ ಮೈಸೂರು ಅಮೃತ್ತೀರ ಶಿಲ್ಪಾ ಗಣೇಶ್ ಹಾಗೂ ಆಡಳಿತ ಮಂಡಳಿ ಉಪಸ್ಥಿತರಿದ್ದರು.






