ಲೇಖಕ: admin

ಕುಶಾಲನಗರ, ಜ.14 NEWS DESK : ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ “ಸಚೇತನ” ಕಾರ್ಯಕ್ರಮದಡಿ ಶಾಲೆಯಲ್ಲಿ  ಸಂಕ್ರಾಂತಿ ಸಂಭ್ರಮಾಚರಣೆ ಮೂಲಕ “ಸುಗ್ಗಿ” ಹಬ್ಬದ ಆಚರಣೆ ಮತ್ತು ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಶಿಕ್ಷಕರು ಮಕ್ಕಳಿಗೆ ಸಂಕ್ರಾಂತಿ  ಹಬ್ಬದ ಮಹತ್ವ ತಿಳಿದುಕೊಟ್ಟರು. ಮಕ್ಕಳು “ಸಂಕ್ರಾಂತಿ” ಹಬ್ಬವನ್ನು ಸಂಭ್ರಮ ಮತ್ತು ಸಡಗರದಿಂದ ಆಚರಿಸಿ ಪರಸ್ಪರ ಎಳ್ಳು ಬೆಲ್ಲವನ್ನು ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು. ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕವಾಗಿ ಸುಗ್ಗಿ ಹಬ್ಬದ ಸಲಕರಣೆಗಳನ್ನು ಇಟ್ಟು ಅಭಿನಯ ಗೀತೆಯೊಂದಿಗೆ ಸಂಭ್ರಮಿಸಿದರು. ನಂತರ ಎಲ್ಲರೂ ಸೇರಿ ಶಾಲಾ ಅವರಣದ ಹೊರಾಂಗಣದಲ್ಲಿ ಸಹ ಪಂಕ್ತಿ ಭೋಜನ ಮಾಡಿದರು. ಶಾಲಾ ಮುಖ್ಯ ಶಿಕ್ಷಕ ಹೆಚ್ ಎಂ ವೆಂಕಟೇಶ್ ರವರ ಉಸ್ತುವಾರಿಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಸಿ.ಎಸ್. ಜಾನಕಿ, ಸಿ.ಎಂ. ಬಬಿತ. ಪುಷ್ಪಾವತಿ, ಕೆ.ಎಸ್.ರಮ್ಯ, ಶಿಕ್ಷಕರಾದ ಎಸ್.ಕೆ.ಶಿವಾನಂದ, ಪ್ರಶಿಕ್ಷಣಾರ್ಥಿ ಕೀರ್ತನ, ಆಂಗ್ಲ ಭಾಷೆ ಶಿಕ್ಷಕಿ ರಂಜನ ಅಡುಗೆ ಸಿಬ್ಬಂದಿಗಳಾದ ವಿನುತಾ, ಮಂಜುಳಾ, ಸೇರಿದಂತೆ ಶಾಲಾ ಮಕ್ಕಳು…

Read More

ಸೋಮವಾರಪೇಟೆ ಜ.14 NEWS DESK : ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ವತಿಯಿಂದ ಪಟ್ಟಣದ ವಿವೇಕಾನಂದ ವೃತ್ತದಲ್ಲಿ ವಿವೇಕಾನಂದರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ವಿವೇಕಾನಂದ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ ಜೀವನಾದರ್ಶಗಳು ಎಲ್ಲರಿಗೂ ಬದುಕಿನ ಮಾರ್ಗವಾಗಬೇಕು. ಸ್ವಾತಂತ್ರ್ಯ ಪೂರ್ವದಲ್ಲಿಯೇ ಯುವಕರಿಗೆ ಸ್ಫೂರ್ತಿ ತುಂಬಿದ ವಿವೇಕಾನಂದರು, ಭಾರತದ ಸಂಸ್ಕøತಿ, ಆಚಾರ-ವಿಚಾರವನ್ನು ಹೊರ ದೇಶದಲ್ಲೂ ಪಸರಿಸಿದ ಮಹಾನ್ ಸಂತ ಎಂದು ಬಣ್ಣಿಸಿದರು. ತಾನು ಸಚಿವನಾಗಿದ್ದ ಸಂದರ್ಭ ವಿವೇಕಾನಂದರ 150ನೇ ಜಯಂತಿಯಂದು ರಾಜ್ಯಾದ್ಯಂತ ಪ್ರತಿ ತಾಲ್ಲೂಕು ಮಟ್ಟದಲ್ಲಿ ಯುವ ದಿನವನ್ನಾಗಿ ಆಚರಣೆ ಮಾಡಲು ನಿರ್ದೇಶನ ನೀಡಲಾಗಿತ್ತು. ಆ ಮೂಲಕ ವಿವೇಕಾನಂದರ ಬಗ್ಗೆ ಎಲ್ಲರಿಗೂ ಪ್ರೇರಣೆ ನೀಡುವ ಕೆಲಸ ಮಾಡಲಾಗಿತ್ತು ಎಂದು ಸ್ಮರಿಸಿದ ಅವರು, ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳು ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಂಡು, ಭಾರತದ ಆಚಾರ, ವಿಚಾರ ಸಂಸ್ಕøತಿಯನ್ನು ಉಳಿಸುವ ಕೆಲಸ ಮಾಡಬೇಕು. ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ…

Read More

ಸೋಮವಾರಪೇಟೆ ಜ.14 NEWS DESK : ಕಾಫಿ ಗುಣಮಟ್ಟದ ಆಧಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾಫಿಯ ಬೇಡಿಕೆ ಮತ್ತು ಬೆಲೆ ನಿರ್ಧಾರವಾಗುತ್ತದೆ ಎಂದು ಭಾರತ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜೆ.ದಿನೇಶ್ ಅಭಿಪ್ರಾಯಿಸಿದರು. ಕಾಫಿ ಮಂಡಳಿ ಮತ್ತು ಹೆಚ್‍ಐಎಲ್ ಇಂಡಿಯಾ ಸಹಯೋಗದಲ್ಲಿ ಸೋಮವಾರಪೇಟೆಯ ಸಾಕ್ಷಿ ಕನ್ವೆನ್‍ಷನ್ ಸಭಾಂಗಣದಲ್ಲಿ ನಡೆದ ಸಮಗ್ರ ಕೀಟ ನಿರ್ವಹಣೆ ಕುರಿತು ಬೆಳೆಗಾರರಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾಫಿಯ ಗುಣಮಟ್ಟವನ್ನು ಬೆಳೆಗಾರರು ನಿರಂತರವಾಗಿ ಕಾಪಾಡಿಕೊಂಡು ಬಂದರೆ ಉತ್ತಮ ಬೆಲೆ ಮತ್ತು ಬೇಡಿಕೆ ಇದ್ದೇ ಇರುತ್ತದೆ. ಭಾರತದ ಕಾಫಿ ಇಂದಿಗೂ ಬೇಡಿಕೆ ಇದೆ. ಇದೀಗ ರೋಬಸ್ಟಾ ಕಾಫಿಗೆ ಬೆಲೆ ಹೆಚ್ಚಿದ ಹಿನ್ನೆಲೆಯಲ್ಲಿ ಬೆಳೆಗಾರರು ಬೆಳೆಯ ಉತ್ಪನ್ನ ಮತ್ತು ಗುಣಮಟ್ಟವನ್ನು ಕಾಯ್ದುಕೊಳ್ಳುವುದು ಅತ್ಯಗತ್ಯ ಎಂದರು.ಆಧುನಿಕ ತಂತ್ರಜ್ಞಾನದ ವೇಗದಿಂದಾಗಿ ಬೆಳೆ ನಿರ್ವಹಣೆಯೂ ಕೂಡ ಸುಲಭ.ಅಗತ್ಯ ಸಂದರ್ಭಗಳಲ್ಲಿ ರೈತರು ಕಾಫಿ ಮಂಡಳಿ ಮತ್ತು ವಿಜ್ಞಾನಿಗಳಿಂದ ಸೂಕ್ತ ಮಾರ್ಗದರ್ಶನ ಪಡೆಯುವುದು ಕೂಡ ಅಗತ್ಯ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕೇಂದ್ರ ಸರಕಾರದ ರಾಸಾಯನಿಕಗಳು ಮತ್ತು…

Read More

ಮಡಿಕೇರಿ ಜ.14 NEWS DESK : ಕೃಷಿಕ್ ಸರ್ವೋದಯ ಫೌಂಡೇಶನ್ ವತಿಯಿಂದ 2025 ನೇ ಸಾಲಿನ ಯುಪಿಎಸ್‍ಸಿ ಪ್ರಿಲಿಮ್ಸ್ ಬರೆಯುತ್ತಿರುವ ಸ್ಪರ್ಧಾರ್ಥಿಗಳಿಗೆ ಉಚಿತ ಯುಪಿಎಸ್‍ಸಿ ಪ್ರಿಲಿಮ್ಸ್ ಕ್ರ್ಯಾಶ್ ಕೋರ್ಸ್ ಅನ್ನು ಜನವರಿ 16 ರಿಂದ ಏಪ್ರಿಲ್ 30 ರವರೆಗೆ ಆಯೋಜಿಸಲಾಗುತ್ತಿದೆ. ಉತ್ತಮ ಫಲಿತಾಂಶ ನೀಡುವ ದೃಷ್ಟಿಯಿಂದ ನುರಿತ ಪ್ರಾಧ್ಯಾಪಕರಿಂದ ಗುಣಮಟ್ಟದ ಬೋಧನೆ ನೀಡಲಾಗುವುದು ಹಾಗೂ ಅನುಮಾನ ನಿವಾರಣಾ ಅವಕಾಶಗಳು, ಹದಿನೈದು ದಿನಗಳಿಗೊಮ್ಮೆ ವಿಷಯವಾರು ಪರೀಕ್ಷೆಗಳು ಮತ್ತು ಮೇ 2025 ರಲ್ಲಿ ಯುಪಿಎಸ್‍ಸಿ ಪ್ರಿಲಿಮ್ಸ್ ಜಿಎಸ್‍ಐ ಮತ್ತು ಜಿಎಸ್2 ಅಣುಕು ಪರೀಕ್ಷೆಗಳನ್ನು ನಡೆಸಲಾಗುವುದು. ಈ ತರಗತಿಗಳು ಆನ್‍ಲೈನ್ ಹಾಗೂ ಆಫ್ ಲೈನ್ ನಲ್ಲಿ ಲಭ್ಯವಿದ್ದು, ಆನ್‌ಲೈನ್ ತರಗತಿಗಳು ಕೆಎಸ್‍ಎಫ್ ಅಕಾಡೆಮಿ, ಚಂದ್ರ ಲೇಔಟ್, ವಿಜಯನಗರ, ಬೆಂಗಳೂರು-40 ಇಲ್ಲಿ ನಡೆಯಲಿವೆ. ಈ ತರಗತಿಗಳಿಗೆ ಹಾಜರಾಗಲು ನೋಂದಣಿ ಕಡ್ಡಾಯ. ಹೆಚ್ಚಿನ ವಿವರಗಳಿಗೆ ದೂ.ಸಂ. 9845318599, 9845319299, ಇಮೈಲ್: ksfchandralayout@gmail.com ಅಥವಾ ವೆಬ್‍ಸೈಟ್: www.ksfkarnataka.com  ನ್ನು ಸಂಪರ್ಕಿಸಬಹುದು ಎಂದು ಕೃಷಿಕ್ ಸರ್ವೋದಯ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ಜ.13 : ಅಂಚೆ ಇಲಾಖೆಯಲ್ಲಿ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆ ಪಡೆಯಲು ನಕಲಿ ಅಂಕ ಪಟ್ಟಿ ಸಲ್ಲಿಸಿ ಕೆಲಸ ಗಿಟ್ಟಿಸಿಕೊಂಡ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ವ್ಯಕ್ತಿಯೊಬ್ಬನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿದೆ. ಮಡಿಕೇರಿ ತಾಲೂಕಿನ ಕಾರೆಕಾಡು ಗ್ರಾಮದ ನಿವಾಸಿ ಸಂದೇಶ ಎಂ.ಬಿ ಎಂಬಾತನೇ ಶಿಕ್ಷೆಗೆ ಗುರಿಯಾದ ವ್ಯಕ್ತಿ. 2019ನೇ ಸಾಲಿನಲ್ಲಿ ಅಂಚೆ ಇಲಾಖೆಯ ನೇಮಕಾತಿಯಲ್ಲಿ ಆನ್‌ಲೈನ್ ಮೂಲಕ ಸಂದೇಶ ಎಂ.ಬಿ ಎಂಬಾತನು ಅರ್ಜಿ ಸಲ್ಲಿಸಿದ್ದ. ದಾಖಲೆ ಪರಿಶೀಲನೆ ವೇಳೆ ನಕಲಿ ಅಂಕ ಪಟ್ಟಿ ಸಲ್ಲಿಸಿ ಅಂಚೆ ಇಲಾಖೆಯಲ್ಲಿ ನೌಕರಿ ಪಡೆದು ಸರಕಾರಕ್ಕೆ ಮೋಸ ಮಾಡಿರುವುದು ಪತ್ತೆಯಾಗಿತ್ತು. ಈ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. 2022 ಫೆ.25 ರಂದು ಸಂದೇಶನನ್ನು ಬಂಧಿಸಲಾಗಿತ್ತು. :: ತೀರ್ಪು ಪ್ರಕಟ :: ಪ್ರಕರಣದ ತನಿಖಾಧಿಕಾರಿ ಶ್ರೀನಿವಾಸ, ತನಿಖಾ ಸಹಾಯಕಿ ದಿವ್ಯಾ, ಹೆಚ್.ಸಿ ಅವರುಗಳು…

Read More

  ಮಡಿಕೇರಿ ಜ.13 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002 ನವೆಂಬರ್, 4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 5306 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5316 ಪ್ರಕರಣಗಳು ಇತ್ಯರ್ಥಗೊಂಡಿದೆ. 2024-25 ನೇ ಆರ್ಥಿಕ ಸಾಲಿನಲ್ಲಿ 198 ಪ್ರಕರಣಗಳು ದಾಖಲಾಗಿ 188 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ 10 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 10,5,000 ರೂ. ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2024-25 ನೇ ಸಾಲಿನಲ್ಲಿ ಕೊಡಿಸಲಾಗಿದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ…

Read More

ಮಡಿಕೇರಿ ಜ.13 NEWS DESK : ಇದೇ ಜ.26 ರಂದು ನಡೆಯುವ ಗಣರಾಜ್ಯೋತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಹಬ್ಬವಾದ ಗಣರಾಜ್ಯೋತ್ಸವವನ್ನು ಜವಾಬ್ದಾರಿಯುತವಾಗಿ ಆಚರಿಸಬೇಕು. ಕಳೆದ ಬಾರಿಯಂತೆ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಸೂಚಿಸಿದರು. ಸಾಂಸ್ಕøತಿಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು. ಹೊಸ ಹೊಸ ತಂಡಗಳಿಗೆ ಅವಕಾಶ ಮಾಡುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು. ಸರ್ಕಾರಿ ಹಾಗೂ ಬಾಲಕ ಮತ್ತು ಬಾಲಕಿಯರ ಬಾಲಮಂದಿರದ ವಿದ್ಯಾರ್ಥಿಗಳಿಗೆ ಅವಕಾಶ ಮಾಡಬೇಕು. ತಮ್ಮ ತಮ್ಮ ಕಚೇರಿಗಳಲ್ಲಿ ಅಂದು(ಜ.26) ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ ಮಾಡಿ 8.45 ಗಂಟೆಗೆ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣಕ್ಕೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪಡೆದ ಹಾಗೂ ವಿಶಿಷ್ಟ ಸಾಧನೆ ಮಾಡಿರುವವರನ್ನು ಗುರುತಿಸಿ ಜ.18 ರೊಳಗೆ ಮಾಹಿತಿ…

Read More

ಮಡಿಕೇರಿ ಜ.13 NEWS DESK : ಸುಂಟಿಕೊಪ್ಪದ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಜ.19 ರಂದು ‘ಗುರು ಶಿಷ್ಯರ ಸಮ್ಮಿಲನ ಮತ್ತು ಸ್ನೇಹ ಸಂಗಮ’ ಕಾರ್ಯಕ್ರಮ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಳೆಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಆರ್.ಹೆಚ್.ಶರೀಫ್ ಸುಂಟಿಕೊಪ್ಪ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ 1200 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸಂಘದ ಸದಸ್ಯರಾಗಿದ್ದು, ಇದೀಗ ಹಳೇ ವಿದ್ಯಾರ್ಥಿಗಳು ಒಗ್ಗೂಡಿ ತಮಗೆ ಶಿಕ್ಷಣವನ್ನು ಧಾರೆ ಎರೆದ ಶಿಕ್ಷಕ ವರ್ಗವನ್ನು ಗೌರವಿಸುವ ವಿನೂತನ ಕಾರ್ಯಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದರು. ಅಂದು ಬೆಳಗ್ಗೆ 10.30 ಗಂಟೆಗೆ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಿಂದ ಹಳೇ ವಿದ್ಯಾರ್ಥಿಗಳು, ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ನೂರಕ್ಕೂ ಹೆಚ್ಚಿನ ಶಿಕ್ಷಕರನ್ನು ಒಳಗೊಂಡ ಮೆರವಣಿಗೆ ನಡೆಯಲಿದೆ. ಮೆರವಣಿಗೆ ಅಯ್ಯಪ್ಪ ದೇವಸ್ಥಾನದ ಮೂಲಕ ಕೆಇಬಿವರೆಗೆ ತೆರಳಿ ಅದೇ ಮಾರ್ಗವಾಗಿ ಮೈದಾನಕ್ಕೆ ಹಿಂದಿರುಗಲಿದೆ. ಮೆರವಣಿಗೆಯಲ್ಲಿ ದಕ್ಷಿಣ ಕನ್ನಡದ ಗೊಂಬೆ ಕುಣಿತ,…

Read More

ಮಡಿಕೇರಿ ಜ.13 NEWS DESK : ಸ್ವಂತ ನೆಲೆ ಇಲ್ಲದೆ ಸಂಕಷ್ಟದ ಬದುಕು ನಡೆಸುತ್ತಿರುವ ಶೋಷಿತ ಸಮಾಜವನ್ನು ಕಡೆಗಣಿಸಿ, ಉಳ್ಳವರಿಗೆ ಅನುಕೂಲ ಕಲ್ಪಿಸಲು ಜಾರಿಗೆ ತಂದಿರುವ ‘ಭೂ ಗುತ್ತಿಗೆ ಆದೇಶ’ವನ್ನು ರಾಜ್ಯ ಸರಕಾರ ಹಿಂತೆಗೆದುಕೊಳ್ಳಬೇಕೆಂದು ಭೂ ಗುತ್ತಿಗೆ ವಿರೋಧಿ ಹೋರಾಟ ಸಮಿತಿ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಡಿ.ಎಸ್.ನಿರ್ವಾಣಪ್ಪ  ಸರಕಾರದ ಆದೇಶವನ್ನು ವಿರೋಧಿಸಿ ಜ.17ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಅಂದು ಬೆಳಗ್ಗೆ 11 ಗಂಟೆಗೆ ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ನಂತರ ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು. ಭೂ ಗುತ್ತಿಗೆ ಆದೇಶವನ್ನು ಸರಕಾರ ಹಿಂತೆಗೆದುಕೊಳ್ಳದಿದ್ದಲ್ಲಿ ಮುಖ್ಯಮಂತ್ರಿಗಳ ಮನೆಗೆ ಕಾಲ್ನಡಿಗೆ ಜಾಥಾ ನಡೆಸಲಾಗುವುದು. ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಸರಕಾರ ಅಗತ್ಯ ಕ್ರಮ ಕೈಗೊಳ್ಳುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದರು. ಕಳೆದ ಹಲವು ದಶಕಗಳಿಂದ ನಿವೇಶನ ರಹಿತರು ತಮಗೆ ಭೂಮಿ ನೀಡುವಂತೆ ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸದ ಸರಕಾರ, ಭೂ ಗುತ್ತಿಗೆ…

Read More

ಮಡಿಕೇರಿ ಜ.13 NEWS DESK : ಸ್ವಾಮಿ ವಿವೇಕಾನಂದ ಅವರಂತೆ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳುವತ್ತ ಯುವ ಸಮೂಹ ಗಮನಹರಿಸಬೇಕು ಎಂದು ಜಾನಪದ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ.ಅನಂತಶಯನ ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಸೋಮವಾರ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ನಡೆದ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರಂತೆ ಜೀವನದಲ್ಲಿ ಉದ್ದೇಶ ಮತ್ತು ಗುರಿ ಹೊಂದಿರಬೇಕು. ಭಾರತವು ಇಡೀ ವಿಶ್ವದಲ್ಲಿ ತಾಯಿ ಇದ್ದಂತೆ. ಆಧ್ಯಾತ್ಮಿಕತೆಯಲ್ಲಿ ಸ್ವಾಮಿ ವಿವೇಕಾನಂದರು ವಿಶ್ವ ಪರ್ಯಟನೆ ಮಾಡಿ ಅಮೇರಿಕಾದ ಚಿಕಾಗೋದಲ್ಲಿ ನಡೆದ ಸಮ್ಮೇಳನದಲ್ಲಿ ಸಹೋದರ, ಸಹೋದರಿಯರೆ ಎಂದು…

Read More