ಲೇಖಕ: admin

ವಿರಾಜಪೇಟೆ ಜ.13 NEWS DESK : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಕೌಟುಂಬಿಕ ವಾಲಿಬಾಲ್ ಪಂದ್ಯಾವಳಿಗಾಗಿ ಪ್ರಾಯೋಜಿಸಿರುವ ಕೆ.ಎಂ.ಎ.ವಿನ್ನರ್ಸ್ ರೋಲಿಂಗ್ ಟ್ರೋಫಿಯನ್ನು ಅನಾವರಣಗೊಳಿಸಲಾಯಿತು. ವಿರಾಜಪೇಟೆಯ ಕೆ.ಎಂ.ಎ. ಪ್ರಧಾನ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ.ಎಂ.ಎ. ಅಧ್ಯಕ್ಷ ದುದ್ದಿಯಂಡ ಹೆಚ್.ಸೂಫಿ ಹಾಜಿ ಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಗಳ ಸಮ್ಮುಖದಲ್ಲಿ  ಟ್ರೋಫಿಯನ್ನು ಅನಾವರಣಗೊಳಿಸಿದರು. ಟ್ರೋಫಿಯನ್ನು ಜ. 17 ರಿಂದ 19 ರವರೆಗೆ ಚಿಟ್ಟಡೆಯಲ್ಲಿ ನಡೆಯಲಿರುವ ಪ್ರಥಮ ವರ್ಷದ ಕೊಡವ ಮುಸ್ಲಿಂ ಕುಟುಂಬಗಳ ನಡುವಿನ ಕೌಟುಂಬಿಕ ವಾಲಿಬಾಲ್ ಪಂದ್ಯಾವಳಿ ಕೂವಲೆರ ಚಿಟ್ಟಡೆ ಕಪ್-2025ರ ಆತಿಥ್ಯ ವಹಿಸಿರುವ ಚಿಟ್ಟಡೆಯ ಕೂವಲೆರ ಕುಟುಂಬದ ಆಯೋಜಕರಿಗೆ ಹಸ್ತಾಂತರಿಸಲಾಯಿತು. ಪಂದ್ಯಾವಳಿ ಆಯೋಜನಾ ಸಮಿತಿಯ ಪ್ರಮುಖರಾದ ಉಮ್ಮರ್, ಫಕ್ರುದ್ದೀನ್, ಸಜೀರ್ ಅವರು ಟ್ರೋಫಿಯನ್ನು ಕೂವಲೆರ ಕುಟುಂಬದ ಪರವಾಗಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೂಫಿ ಹಾಜಿ, ಕೊಡಗು ಜಿಲ್ಲೆಯ ಕ್ರೀಡಾ ಕ್ಷೇತ್ರದಲ್ಲಿ ಇತ್ತೀಚಿನ ಕ್ರೀಡಾಕೂಟಗಳ ಯಶಸ್ಸು ಪ್ರತಿ ಯುವ ಕ್ರೀಡಾಪಟುವಿಗೆ ದೊಡ್ಡ ಸ್ಫೂರ್ತಿಯಾಗುತ್ತಿದೆ. ಪಂದ್ಯಾವಳಿಯನ್ನು ಯೋಜನಾ ಬದ್ಧ ಮತ್ತು…

Read More

ವಿರಾಜಪೇಟೆ ಜ.13 NEWS DESK : ಸರಕಾರಿ ಶಿಕ್ಷಣ ಸಂಸ್ಥೆಗಳಾದರು, ಖಾಸಗಿ ಶಿಕ್ಷಣ ಕೇಂದ್ರಗಳಾದರೂ ಸದಾ ಸಮಾಜದ ಒಳಿತನ್ನೇ ಬಯಸುತ್ತದೆ. ಈ ತಳಹದಿಯಿಂದಲೇ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳನ್ನು ರೂಪುಗೊಳಿಸುತ್ತದೆ ಎಂದು ವಿರಾಜಪೇಟೆ ಅರಮೇರಿಯ ಕಳಂಚೇರಿ ಮಠದ ಪೀಠಾಧಿಪತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ಕಲ್ಲುಬಾಣೆಯ ಬದ್ರಿಯಾ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿಗಳ ಬದುಕಿನ ಮಹತ್ತರವಾದ ಘಟ್ಟದಲ್ಲಿ ಆಂತರಿಕ, ಬಾಹ್ಯ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಆಕಾರ ನೀಡುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಬಹುಮುಖ್ಯವಾದದ್ದು. ಆದ್ದರಿಂದ ಯಾವುದೇ ಸವಾಲುಗಳಿದ್ದರೂ ವಿದ್ಯಾರ್ಥಿಗಳಲ್ಲಿನ ಆಂತರಿಕ ಅಂದತ್ವ ತೊಡೆದುಹಾಕಿ ಅಕ್ಷರ ಶ್ರೀಮಂತಿಕೆಯ ಮೂಲಕ ಬದುಕಿನ ಮೌಲ್ಯ ಹೆಚ್ಚಿಸುವ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುವಲ್ಲಿ ಕಿಂಚಿತ್ತೂ ವಂಚನೆಯಾಗದಂತೆ ನೋಡಿಕೊಳ್ಳುವ ಹೊಣೆಗಾರಿಕೆ ಎಲ್ಲಾ ಶಿಕ್ಷಣ ಸಂಸ್ಥೆಗಳ ಮೇಲಿದೆ ಎಂದು ಎಚ್ಚರಿಸಿದರು. ಇಂದಿನ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿಗಳಿಗೆ ಅತಿ ಸುಲಭದಲ್ಲಿ ದೊರೆಯುತ್ತಿದೆ. ಬಡತನದ ಮಧ್ಯೆ ಶಿಕ್ಷಣ ಪಡೆಯುತ್ತಿದ್ದ ಹಿಂದಿನ ಕಾಲದಲ್ಲಿ ನಮ್ಮ ಕಲಿಕಾ ಸಾಮರ್ಥ್ಯವನ್ನು…

Read More

ಮಡಿಕೇರಿ ಜ.13 NEWS DESK : ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿಯ ಉಪಾಧ್ಯಕ್ಷರನ್ನಾಗಿ ಓ.ಎಮ್ ಅಬ್ದುಲ್ ಸಲಾಂ ನೇಮಕಗೊಂಡಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪಿ.ಶಶಿಧರ್ ಶಿಫಾರಸ್ಸಿನ ಮೇರೆಗೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪಿ.ಎ ಹನೀಫ್ ಅವರ ನಿರ್ದೇಶನದಂತೆ ತಕ್ಷಣದಿಂದ ಜಾರಿಗೆ ಬರುವಂತೆ ನಲ್ವತೇಕರೆ ನಿವಾಸಿ ಓ.ಎಮ್ ಅಬ್ದುಲ್ ಸಲಾಂ ಅವರನ್ನು ನೇಮಕ ಮಾಡಲಾಗಿದೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ರಜಾಕ್ ಆದೇಶ ನೀಡಿದ್ದಾರೆ.

Read More

ಕುಶಾಲನಗರ ಜ.13 NEWS DESK : ವಿದ್ಯಾರ್ಥಿಗಳು ಶೈಕ್ಷಣಿಕ ಅವಧಿಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಕೊಳ್ಳುವ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕಾಗಿದೆ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನದ ರಾಜ್ಯ ಸಂಚಾಲಕ ಎಂ.ಎನ್.ಚಂದ್ರಮೋಹನ್ ಕರೆ ನೀಡಿದ್ದಾರೆ. ಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ನಡೆದ ಕೊಪ್ಪ ಭಾರತ ಮಾತಾ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ರಾಷ್ಟ್ರೀಯ ಸೇವಾ ಯೋಜನೆಗಳ ಶಿಬಿರಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಯುವ ಪೀಳಿಗೆಯಲ್ಲಿ ಸೇವಾ ಮನೋಭಾವನೆ ಮೂಡಿಸಲು ಸಾಧ್ಯ ಎಂದ ಅವರು, ಶಿಬಿರಾರ್ಥಿಗಳು ಕಳೆದ ಒಂದು ವಾರಗಳ ಅವಧಿಯಲ್ಲಿ ಮಾಡಿದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಸಮಯ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಫಾ.ಎಬಿನ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ಒಂದು ವಾರಗಳ ಕಾಲ 50ಕ್ಕೂ ಅಧಿಕ ಶಿಬಿರಾರ್ಥಿಗಳು ವಿವಿಧ ಚಟುವಟಿಕೆಗಳಲ್ಲಿ…

Read More

ಮಡಿಕೇರಿ ಜ.13 : ಇನ್ನರ್ ವೀಲ್ ಸಂಸ್ಥೆಯ ಜಿಲ್ಲಾಧ್ಯಕ್ಷೆ ವೈಶಾಲಿ ಕುಡುವ ಅವರು ಮಡಿಕೇರಿ ಇನ್ನರ್ ವೀಲ್ ಸಂಸ್ಥೆಗೆ ಭೇಟಿ ನೀಡಿದರು.ಈ ಸಂದಭ೯ ಇನ್ನರ್ ವೀಲ್ ಸದಸ್ಯೆಯರೊಂದಿಗೆ ನಗರದ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಲ್ಲಿನ ಆಶ್ರಿತರಿಗೆ ಎರಡು ಮಂಚ, ಗಾಲಿಕುಚಿ೯ ಸೇರಿದಂತೆ ಅಗತ್ಯವಿರುವ ವಿವಿಧ ವಸ್ತುಗಳನ್ನು ವಿತರಿಸಿದರು. ನಂತರ ಮಡಿಕೇರಿ ರೋಟರಿ ಸಭಾಂಗಣದಲ್ಲಿ ಆಯೋಜಿತ ಸಮಾರಂಭದಲ್ಲಿ ಇನ್ನರ್ ವೀಲ್ ಸಂಸ್ಥೆಯಲ್ಲಿ 50 ವಷ೯ಗಳಿಂದ ಸದಸ್ಯೆಯಾಗಿರುವ ಡಾ.ಜಯಲಕ್ಷ್ಮಿ ಪಾಟ್ಕರ್ ಅವರನ್ನು ಸನ್ಮಾನಿಸಿದರು. ಮಡಿಕೇರಿ ಇನ್ನರ್ ವೀಲ್ ಸಂಸ್ಥೆಯ ಅಧ್ಯಕ್ಷೆ ಆ್ಯಗ್ನೇಸ್ ಮುತ್ತಣ್ಣ, ಕಾಯ೯ದಶಿ೯ ರಶ್ಮಿ ಪ್ರವೀಣ್, ರೋಟರಿ ಅಧ್ಯಕ್ಷ ಸುದಯ್ ನಾಣಯ್ಯ, ಕಾಯ೯ದಶಿ೯ ಪ್ರಿನ್ಸ್ ಪೊನ್ನಣ್ಣ, ಹಾಜರಿದ್ದ ಕಾಯ೯ಕ್ರಮದಲ್ಲಿ ಇನ್ನರ್ ವೀಲ್ ಸಂಸ್ಥೆಯಲ್ಲಿ ಲಲಿತಾರಾಘವನ್ ಸಂಪಾದಕತ್ವದಲ್ಲಿ ಪ್ರಕಟಿತ ವಾತಾ೯ಸಂಚಿಕೆಯನ್ನು ವೈಶಾಲಿ ಕುಡುವ ಬಿಡುಗಡೆಗೊಳಿಸಿದರು.

Read More

ಮಡಿಕೇರಿ ಜ.13 NEWS DESK : ಪ್ರವಾಸೋದ್ಯಮ, ಸೇನಾ ನೇಮಕಾತಿ, ಕೃಷಿ ಸಂಬಂಧಿತ ಉದ್ಯೋಗಗಳೂ ಸೇರಿದಂತೆ ವಿದ್ಯಾವಂತರಿಗೆ ಸಾಕಷ್ಟು ಉದ್ಯೋಗವಕಾಶಗಳು ಸಮಾಜದಲ್ಲಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ನಿವೃತ್ತ ಡೀನ್ ಡಾ. ಸಿ.ಜಿ.ಕುಶಾಲಪ್ಪ ಕರೆ ನೀಡಿದ್ದಾರೆ. ಮಾದಾಪುರ ಬಳಿಯ ಗರಗಂದೂರಿನ ಶ್ರೀಮತಿ ಡಿ. ಚೆನ್ನಮ್ಮ ಎಜುಕೇಷನ್ ಸೊಸೈಟಿಯ ವಜ್ರಮಹೋತ್ಸವ ಕಾಯ೯ಕ್ರಮ ಉದ್ಘಾಟಿಸಿ ಮಾತನಾಡಿದ ಡಾ.ಸಿ. ಜಿ. ಕುಶಾಲಪ್ಪ, ವಿದ್ಯಾವಂತರಿಗೆ ಕೊಡಗಿನಲ್ಲಿಯೇ ಸಾಕಷ್ಟು ಉದ್ಯೋಗ ದೊರಕುತ್ತದೆ, ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ವೖತ್ತಿಯ ಅವಕಾಶಗಳನ್ನು ಕೊಡಗಿನ ಯುವಪೀಳಿಗೆ ಸಮಥ೯ವಾಗಿ ಬಳಸಿಕೊಳ್ಳಬೇಕು, ಕೊಡಗಿನಲ್ಲಿನ ಪ್ರವಾಸೋದ್ಯಮ ಕ್ಷೇತ್ರದ ಉದ್ಯೋಗಗಳನ್ನು ಕೊಡಗಿನವರಿಗೆ ನೀಡುವಂತಾಗಬೇಕು, ಅಂತೆಯೇ ಭಾರತೀಯ ಸೇನೆಯಲ್ಲಿ ಅಗ್ನವೀರ್ ನಂಥ ನೇಮಕಾತಿಯ ಯೋಜನೆಯನ್ನೂ ಯುವೀಳಿಗೆ ಬಳಸಿಕೊಳ್ಳಬೇಕು. ಕೖಷಿ ರಂಗದಲ್ಲಿಯೂ ವಿಪುಲ ಅವಕಾಶಗಳಿದ್ದು, ಕೖಷಿ ವಿಷಯದಲ್ಲಿ ಸಿಇಟಿ ಬರೆದ ವಿದ್ಯಾಥಿ೯ಗಳಿಗೆ ಉದ್ಯೋಗ ಸುಲಭಸಾಧ್ಯವಾಗಿದೆ ಎಂದು ಮಾಹಿತಿ ನೀಡಿದರು. ಜೀವನದಲ್ಲಿ ಉದ್ದೇಶಿತ ಗುರಿಯತ್ತ ಸಾಗುವ ಕನಸಿದ್ದರೆ ಸಾಕು, ಇಂಥ ಕನಸೇ ಯುವಪೀಳಿಗೆಯನ್ನು ಸಾಧನೆಯ ಹಾದಿಯಲ್ಲಿ ಮುನ್ನಡೆಸುತ್ತದೆ…

Read More

ಮಡಿಕೇರಿ ಜ.13 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುದರ್ಶನ ಬಳಿ ಇರುವ ಪರಿಷತ್ತಿನ ನಿವೇಶನದಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣದ ಸಲುವಾಗಿ ಕರ್ನಾಟಕ ಸರಕಾರದ ಲೋಕೋಪಯೋಗಿ ಸದ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು ಜಿಲ್ಲಾಧ್ಯಕ್ಷ ಎಂ.ಪಿ ಕೇಶವ ಕಾಮತ್ ಅವರ ನೇತೃತ್ವದಲ್ಲಿ ಭೇಟಿಯಾಗಿ ಭವನ ನಿರ್ಮಾಣ ಕಾರ್ಯದಲ್ಲಿ ತಮ್ಮ ಇಲಾಖೆ ವತಿಯಿಂದ ಅನುದಾನ ನೀಡಿ ಭವನ ನಿರ್ಮಾಣದ ಕಾರ್ಯದಲ್ಲಿ ಸಹಕರಿಸುವಂತೆ ಕೋರಿಕೊಂಡರು. ಪ್ರತಿಕ್ರಿಯಿಸಿದ ಸಚಿವರು ಸಾಹಿತ್ಯ ಪರಿಷತ್ತಿನ ಭವನಕ್ಕೆ ಸಂಪೂರ್ಣ ಸಹಕಾರ ನೀಡುವುದರೊಂದಿಗೆ ಇಲಾಖೆಯಿಂದ ನೀಡಬಹುದಾದ ಅನುದಾನದ ವ್ಯವಸ್ಥೆ ಮಾಡುವುದಾಗಿ ನುಡಿದರು. ಈ ಸಂದರ್ಭ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಧರ್ಮಜಾ ಉತ್ತಪ್ಪ ಉಪಸ್ಥಿತರಿದ್ದರು. ಅವರನ್ನು ಭೇಟಿಯಾದ ನಿಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿ ನಿರ್ದೇಶಕರಾದ ವಿ.ಟಿ.ಮಂಜುನಾಥ್ ಉಪಸ್ಥಿತರಿದ್ದರು.

Read More

ಮಡಿಕೇರಿ NEWS DESK ಜ.12 : 1965ರಲ್ಲಿ ಭಾರತ-ಪಾಕ್ ನಡುವೆ ನಡೆದ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಬಲಿದಾನಗೈದ ಕೊಡಗಿನ ವೀರ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆಯ “ಸ್ಕೈ ಫೋರ್ಸ್” ಬಾಲಿವುಡ್ ಸಿನಿಮಾ ಜ.24 ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದ ಪ್ರಮುಖ ಪಾತ್ರಧಾರಿ ವೀರ್ ಪಹಾಡಿಯಾ ಅವರು ಇಂದು ಅಜ್ಜಮಾಡ ದೇವಯ್ಯ ಅವರ ಪತ್ನಿ ಸುಂದರಿ ದೇವಯ್ಯ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬೊಳ್ಳಜಿರ ಬಿ.ಅಯ್ಯಪ್ಪ ನೇತೃತ್ವದ ಕೊಡವ ಮಕ್ಕಡ ಕೂಟ ಹೊರತಂದಿರುವ ಪತ್ರಕರ್ತ ಹಾಗೂ ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅವರು ಬರೆದಿರುವ “1965ರ ಯುದ್ಧ ಹಾಗೂ ಮಹಾವೀರ ಚಕ್ರ ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ ಜೀವನಾಧರಿತ ಪುಸ್ತಕವನ್ನು ಆಧರಿಸಿ “ಸ್ಕೈ ಫೋರ್ಸ್” ಚಿತ್ರವನ್ನು ತಯಾರಿಸಲಾಗಿದೆ.

Read More

ಮಡಿಕೇರಿ NEWS DESK ಜ.12 : ಮಕ್ಕಳ ಸಂತೆಯಂತಹ ಕಾರ್ಯಕ್ರಮಗಳು ವೃತ್ತಿ ಗೌರವವನ್ನು ಹೆಚ್ಚಿಸಲು ಸಹಕಾರಿಯಾಗಿದೆ ಎಂದು ಮಾಯಮುಡಿ ಗ್ರಾ.ಪಂ ಅಧ್ಯಕ್ಷ ಆಪಟ್ಟೀರ ಟಾಟು ಮೊಣ್ಣಪ್ಪ ಅಭಿಪ್ರಾಯಪಟ್ಟಿದ್ದಾರೆ. ಮಾಯಮುಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ಅಗತ್ಯತೆಯನ್ನು ವಿವರಿಸಿದರು. ಈ ರೀತಿಯ ಕಾರ್ಯಕ್ರಮಗಳು ಮಕ್ಕಳಲ್ಲಿ ವ್ಯವಹಾರಿಕ ಜ್ಞಾನವನ್ನು ಹೆಚ್ಚಿಸುತ್ತದೆ, ಅಲ್ಲದೆ ವೃತ್ತಿಯ ಕುರಿತು ಅರಿವು ಮೂಡಿಸುತ್ತದೆ. ಸರಕಾರಿ ಶಾಲೆಗಳ ಹಲವು ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಬೆಳೆಸುತ್ತದೆ, ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುತ್ತದೆ. ಇಂದು ಮಕ್ಕಳ ಸಂತೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡ ರೀತಿ ಮತ್ತು ಆಸಕ್ತಿ ಶ್ಲಾಘನೀಯವೆಂದರು. ಮುಖ್ಯ ಶಿಕ್ಷಕಿ ಹೆಚ್.ಸಿ.ಜಯಮ್ಮ, ಶಿಕ್ಷಕರುಗಳಾದ ರಾಗಿಣಿ, ಸತ್ಯ, ಲೀಲಾ, ಸುಮ, ಪುಷ್ಪ, ಸಹನಾ, ಲಾಯ್ಡ್, ಪೌಢ ಶಾಲೆಯ ಮುಖ್ಯ ಶಿಕ್ಷಕಿ ವಾಣಿ ಹಾಗೂ ಪೊಷಕರು ಉಪಸ್ಥಿತರಿದ್ದರು. ಮನೆಯಲ್ಲಿಯೇ ಬೆಳೆದ ತಾಜಾ ತರಕಾರಿ, ಹಣ್ಣು, ಸೊಪ್ಪು ಮತ್ತು ರುಚಿ ರುಚಿಯಾದ ಖಾದ್ಯಗಳನ್ನು…

Read More

ಮಡಿಕೇರಿ NEWS DESK ಜ.12 : ಮಡಿಕೇರಿ ನಗರದ ಹೃದಯ ಭಾಗದಲ್ಲಿ ಹಾಡಹಗಲೇ ಕಾರು ಕಳ್ಳತನ ಮಾಡಿದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾರಿನಲ್ಲಿದ್ದ ಜಿಪಿಎಸ್ ಆಧಾರದಲ್ಲಿ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಮಡಿಕೇರಿ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದರು. ನಾಪೋಕ್ಲು ನಿವಾಸಿ ರಫೀಕ್(30) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಕಾರನ್ನು ವಶಕ್ಕೆ ಪಡೆಯಲಾಗಿದೆ. ನಗರದ ಉದ್ಯಮಿ ಅಂಬೆಕಲ್ ನವೀನ್ ಕುಶಾಲಪ್ಪ ಅವರು ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗಳೂರು ರಸ್ತೆ ಕಡೆಗೆ ತೆರಳುವ ಮಾರ್ಗದ ಪಾರ್ಕಿಂಗ್ ಸ್ಥಳದಲ್ಲಿ ಕಾರನ್ನು ನಿಲ್ಲಿಸಿ ಚರ್ಚ್ ಕಾಂಪ್ಲೆಕ್ಸ್ ನಲ್ಲಿರುವ ತಮ್ಮ ಫೋಟೋ ಸ್ಟುಡಿಯೋಗೆ ತೆರಳಿದ್ದರು. ಮರಳಿ ಬಂದ ಸಂದರ್ಭ ಪಾರ್ಕಿಂಗ್ ಮಾಡಿದ ಸ್ಥಳದಲ್ಲಿ ಕಾರು ಇರಲಿಲ್ಲ. ಇದರಿಂದ ಆತಂಕಗೊಂಡ ಅಂಬೆಕಲ್ ನವೀನ್ ಕುಶಾಲಪ್ಪ ಅವರು ಅಲ್ಲಿದ್ದ ಸಿ.ಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ವ್ಯಕ್ತಿಯೊಬ್ಬ ನೇರವಾಗಿ ಕಾರು ಬಳಿ ಬಂದು ತನ್ನದೇ ಕಾರು ಎಂಬಂತೆ ಬಾಗಿಲು ತೆರೆದು ಕಾರನ್ನು ಚಲಾಯಿಸಿಕೊಂಡು ಹೋಗುತ್ತಿರುವ…

Read More