ಲೇಖಕ: admin

ಮಡಿಕೇರಿ NEWS DESK ಡಿ.1: ಬುಡಕಟ್ಟು ಸಮುದಾಯದ ಮಕ್ಕಳಲ್ಲಿ ಉತ್ತಮ  ಶಿಕ್ಷಣ ಹಾಗೂ ಆರೋಗ್ಯ ರಕ್ಷಣೆಯೊಂದಿಗೆ ಅವರಲ್ಲಿ ಸುಪ್ತವಾಗಿ ಅಡಗಿರುವ ಸಾಂಸ್ಕೃತಿಕ ಪ್ರತಿಭೆಯನ್ನು ಗುರುತಿಸಿ ಅವರನ್ನು ಶೈಕ್ಷಣಿಕವಾಗಿ  ಉತ್ತೇಜಿಸುವ ಮೂಲಕ ಅವರನ್ನು ಸಮಾಜದ‌ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ಸಂಸ್ಥೆ, ಕರ್ನಾಟಕದ ವತಿಯಿಂದ ಡಿಸೆಂಬರ್ ಅಂತ್ಯದ ವೇಳೆಗೆ  ಕೊಡಗು ಜಿಲ್ಲೆಯಲ್ಲಿ ರಾಜ್ಯಮಟ್ಟದ ಬುಡಕಟ್ಟು ಮಕ್ಕಳ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸಮಾವೇಶವನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ಸಂಸ್ಥೆ, ಕರ್ನಾಟಕ ರಾಜ್ಯದ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಮಡಿಕೇರಿಯಲ್ಲಿ ತಿಳಿಸಿದರು.  ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್  ಸಂಸ್ಥೆಯ ಕೊಡಗು ಜಿಲ್ಲಾ ಸಂಸ್ಥೆಯ  ಮಡಿಕೇರಿ ನಗರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಕುರಿತು ಪದಾಧಿಕಾರಿಗಳೊಂದಿಗೆ ಪರಾಮರ್ಶೆ ನಡೆಸಿದ ನಂತರ ಮಾತನಾಡಿದ ಅವರು ಸಂಸ್ಥೆಯ ವಜ್ರ‌ಮಹೋತ್ಸವದ ಅಂಗವಾಗಿ ಪ್ರಸಕ್ತ ಸಾಲಿನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಸಂಘಟಿಸಲಾಗುತ್ತಿದೆ ಎಂದರು.      ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಶಾಲಾ ಮಕ್ಕಳಿಂದ ಕುಶಾಲನಗರದಲ್ಲಿ ಜಿಲ್ಲಾಮಟ್ಟದ‌ Rally ನಡೆಸುವ ಮೂಲಕ ಸ್ಕೌಟ್ಸ್, ಗೈಡ್ಸ್…

Read More

ಮಡಿಕೇರಿ NEWS DESK ಡಿ.1 : ಕರ್ನಾಟಕ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡ ಹಿನ್ನಲೆಯಲ್ಲಿ ರಾಜ್ಯ ಸರಕಾರ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಸುವರ್ಣ ಸಂಭ್ರಮ -50 ಆಚರಣೆ  ಪ್ರಯುಕ್ತ ಕೊಡಗು ಜಿಲ್ಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಮೂರ್ನಾಡು ಸರ್ಕಾರಿ ಪ್ರೌಢ ಶಾಲೆಯ ತಶ್ಮಿಕಾ ಕೆ.ಎಂ ಪ್ರಥಮ, ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢಶಾಲೆಯ ಅಮೃತ ಟಿ.ಜೆ ದ್ವಿತೀಯ ಮತ್ತು ಕುಶಾಲನಗರ ಸರ್ಕಾರಿ ಪದವಿ ಪ್ರೌಢಶಾಲೆಯ ಪ್ರಗತಿ ಬಡಿಗೇರ್ ತೃತೀಯ ಸ್ಥಾನ ಪಡೆದಿದ್ದಾರೆ. ಪದವಿಪೂರ್ವ ವಿದ್ಯಾರ್ಥಿಗಳಿಗೆ ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಗೋಣಿಕೊಪ್ಪ ಲಯನ್ಸ್ ಪಿ.ಯು ಕಾಲೇಜಿನ ಆದ್ವಿಕ (ಪ್ರ), ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಜ್ವಲ್ ಬಿ.ಹೆಚ್ (ದ್ವಿ), ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಸ್ಪಂದನ…

Read More

ಮಡಿಕೇರಿ NEWS DESK ನ.30 : ಸುಂಟಿಕೊಪ್ಪ ಪೊಲೀಸ್ ಠಾಣೆ ಸಮೀಪ ನೂತನ ಪೊಲೀಸ್ ವಸತಿ ಗೃಹ ಕಟ್ಟಡದ ಕಾಮಗಾರಿಗೆ ಚಾಲನೆ ನೀಡಲಾಯಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಭೂಮಿಪೂಜೆ ನೆರವೇರಿಸಿದರು. ಸುಮಾರು 3.64 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣಗೊಳ್ಳಲಿದೆ. ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ವಿರಾಜಪೇಟೆ NEWS DESK ನ.30 : ವಿರಾಜಪೇಟೆಯ ಅರ್ಜಿ ಗ್ರಾಮದ  ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಮಮತ ಅವರನ್ನು ಕರ್ತವ್ಯಲೋಪದ ಆರೋಪದಡಿ ಅಮಾನತು ಮಾಡಲಾಗಿದೆ. ಮಮತ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿ ಅಲ್ಪಸಂಖ್ಯಾತ ನಿರ್ದೇಶನಾಲಯದ ನಿರ್ದೇಶಕರು ಮತ್ತು ಶಿಸ್ತು ಪ್ರಾಧಿಕಾರದ ಅಧಿಕಾರಿ ಜೀಲಾನಿ ಹೆಚ್.ಮೊಕಾಶಿ ಆದೇಶ ಹೊರಡಿಸಿದ್ದಾರೆ. ವಸತಿ ಶಾಲೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್ .ಪೊನ್ನಣ್ಣ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿದ ಸಂದರ್ಭ ಕೆಲವು ನ್ಯೂನತೆಗಳು ಕಂಡು ಬಂದಿತ್ತು.  ಶಾಲೆಯ ಅಡುಗೆ ಕೋಣೆ ನೊಣಗಳಿಂದ ಕೂಡಿರುವುದು, ಶಾಲೆಯ ಕಿಟಕಿಗಳು ಪಾಳು ಬಿದ್ದಿರುವುದು, ಶೌಚಾಲಯದಲ್ಲಿ ಶುಚಿತ್ವ ಕಾಪಾಡದೇ ಇರುವುದು, ವಿದ್ಯಾರ್ಥಿಗಳು ಬಳಸುವ ಹಾಸಿಗೆಗಳು ಯೋಗ್ಯವಾಗಿಲ್ಲದಿದ್ದರೂ ಶಾಲೆಯಲ್ಲಿರುವ ಹೊಸ ಹಾಸಿಗೆಯನ್ನು ವಿತರಣೆ ಮಾಡದೇ ಇರುವುದು, ದಾಸ್ತಾನು/ವಿತರಣೆ ನಿರ್ವಹಣೆ ಮಾಡದೇ ಇರುವುದು, ಸಹದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದದೆ ಇರುವುದು ಗೋಚರಿಸಿತ್ತು. ಕಳೆದ 6 ವರ್ಷಗಳಿಂದ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಾಂಶುಪಾಲರು ಶಾಲೆಯ ನ್ಯೂನ್ಯತೆಗಳ ಬಗ್ಗೆ ಮೇಲಾಧಿಕಾರಿಗಳ…

Read More

ಮಡಿಕೇರಿ NEWS DESK ನ.30 : ಕರ್ನಾಟಕ ಸರಕಾರ, ಶಿಕ್ಷಣ ಇಲಾಖೆ ಹಾಗೂ ಅಕ್ಷರ ಫೌಂಡೇಶನ್ ಸಹಯೋಗದೊಂದಿಗೆ ಗಣಿತ ಕಲಿಕಾ ಆಂದೋಲನ ಯೋಜನೆಯು ಸುಮಾರು ವರ್ಷಗಳಿಂದ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳ ಗುಣಾತ್ಮಕ ಕಲಿಕೆಗಾಗಿ ಹಾಗೂ ಮಕ್ಕಳು ಗಣಿತ ವಿಷಯವನ್ನು ಸರಳವಾಗಿ, ಅನುಭವಾತ್ಮಕವಾಗಿ ಕಲಿಯಲು ಜಿಲ್ಲೆಯ ಪ್ರತಿ ಶಾಲೆಗಳಿಗೆ ಗಣಿತ ಕಿಟ್ ನೀಡುವುದರ ಮೂಲಕ ಅನುಷ್ಠಾನಗೊಂಡಿರುತ್ತದೆ. ಈ ಯೋಜನೆ ಅಡಿಯಲ್ಲಿ ಕೊಡಗು ಜಿಲ್ಲೆಯ ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಇಲಾಖೆ, ಸಮುದಾಯ, ಶೈಕ್ಷಣಿಕ ಸ್ವಯಂ ಸೇವಕರು, ಗ್ರಾಮ ಪಂಚಾಯತ್ ಮಟ್ಟದ ಶೈಕ್ಷಣಿಕ ತಂಡದ ನಾಯಕರು ಹಾಗೂ ಅಕ್ಷರ ಫೌಂಡೇಶನ್ ಸಹಭಾಗಿತ್ವದಲ್ಲಿ “ಗ್ರಾಮ ಪಂಚಾಯಿತಿ ಮಟ್ಟದ ಗಣಿತ ಸ್ಪರ್ಧೆಗಳನ್ನು 4ನೇ ತರಗತಿ ಯಿಂದ 6ನೇ ತರಗತಿಯ ಮಕ್ಕಳಿಗೆ ಒಟ್ಟು 102 ಗ್ರಾಮ ಪಂಚಾಯತಿಗಳಲ್ಲಿ ಮಾಡಲಾಯಿತು. ಸುಮಾರು 7600 ಮಕ್ಕಳು ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಂಡಿರುತ್ತಾರೆ. ಗ್ರಾಮ ಪಂಚಾಯತಿ ಮಟ್ಟದ ಗಣಿತ ಸ್ಪರ್ಧೆಗಳು ಎಲ್ಲರ ಸಹಕಾರದೊಂದಿಗೆ ಉತ್ತಮ ರೀತಿಯಲ್ಲಿ ಯಶಸ್ಸು ಸಾಧಿಸಿದೆ.…

Read More

ಮಡಿಕೇರಿ NEWS DESK ನ.30 : ಮಳೆಗಾಲ ಮುಗಿದಿರುವ ಹಿನ್ನೆಲೆ ಜಿಲ್ಲೆಯ ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆ ಕಾಮಗಾರಿಯನ್ನು ಕೂಡಲೇ ಕೈಗೊಳ್ಳುವಂತೆ ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಸಕ್ತ (2024-25) ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಸಂಬಂಧ ಶನಿವಾರ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಕೊಡಗು ಜಿಲ್ಲೆಯಲ್ಲಿ ಸಿವಿಲ್ ಕಾಮಗಾರಿಗಳನ್ನು ಕೈಗೊಳ್ಳಲು ನವೆಂಬರ್ ಡಿಸೆಂಬರ್, ಜನವರಿ, ಫೆಬ್ರವರಿ, ಮಾರ್ಚ್ ಈ ಐದು ತಿಂಗಳು ಸೂಕ್ತವಾಗಿದ್ದು, ಈ ಹಿನ್ನೆಲೆ ಮಳೆಹಾನಿ ಕಾಮಗಾರಿಗಳು ಸೇರಿದಂತೆ ರಸ್ತೆ ಕಾಮಗಾರಿಗಳನ್ನು ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಾಕೀತು ಮಾಡಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ವಿರಾಜಪೇಟೆ-ಮಡಿಕೇರಿ ಮಾರ್ಗದ…

Read More

ಮಡಿಕೇರಿ ನ.30 NEWS DESK : “ಇಂಗ್ಲೀಷ್”ನ್ನು ಒಂದು ಭಾಷೆಯಾಗಿ ಪ್ರಾಥಮಿಕ ಹಂತದಿಂದಲೆ ಮಕ್ಕಳಿಗೆ ಕಲಿಸುವುದರ ಜೊತೆ ಜೊತೆಯಲ್ಲೆ, ಅತ್ಯಂತ ಸಂಪದ್ಭರಿತವಾದ ಕನ್ನಡ ಭಾಷೆಯತ್ತ ಅವರಲ್ಲಿ ಆಸಕ್ತಿಯನ್ನು ಮೂಡಿಸುವ ಮೂಲಕ ಕನ್ನಡ ಭಾಷಾ ಸಂಸ್ಕೃತಿಯನ್ನು ಸಂರಕ್ಷಿಸುವ ಕಾರ್ಯ ನಡೆಯಬೇಕಾಗಿದೆಯೆಂದು ಮಡಿಕೇರಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ದೊಡ್ಡೇಗೌಡ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ನಗರದ ಲಯನ್ಸ್ ಸಭಾಂಗಣದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿತ “ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಸ್ಪರ್ಧೆ”ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಲ್ಲಿ ಒಂದು ಭಾಷೆಯಾಗಿ ಇಂಗ್ಲೀಷ್ ಕಲಿಸುವ ಹಂತದಲ್ಲೆ, ಕನ್ನಡ ಭಾಷೆಯ ಆಳವಾದ ಜ್ಞಾನವನ್ನು ಹೊಂದಿರುವ ಶಿಕ್ಷಕ ವರ್ಗದ ಮೂಲಕ, ಮಕ್ಕಳಲ್ಲಿ ಕನ್ನಡ ಭಾಷಾ ಸಂಸ್ಕೃತಿಯತ್ತ ಒಲವು ಮೂಡಿಸುವ ಪ್ರಯತ್ನ ಅತ್ಯವಶ್ಯವಾಗಿ ನಡೆಯಬೇಕು. ಕನ್ನಡದ ಮೌಲ್ಯ ಮತ್ತು ಬದುಕು ಅತ್ಯಂತ ದೊಡ್ಡದಾಗಿದ್ದು, ಇದನ್ನರಿತು ಕನ್ನಡಿಗರಾದ ನಾವೆಲ್ಲ ಒಂದೆನ್ನುವ ಭಾವವನ್ನು ಮನದಲ್ಲಿ ತುಂಬಿಕೊಂಡು ಒಟ್ಟಾಗಿ…

Read More

ಮಡಿಕೇರಿ ನ.30 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲ್ಲೂಕು, ಮೂರ್ನಾಡು ಹೋಬಳಿ ಘಟಕ, ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ, ಮೂರ್ನಾಡು ಹೋಬಳಿ ಘಟಕದ ವಿವಿಧ ಶಾಲಾ ಕಾಲೇಜು, ವಿದ್ಯಾ ಸಂಸ್ಥೆಗಳು ಹಾಗೂ ವಿವಿಧ ಸಾರ್ವಜನಿಕ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಮೂರ್ನಾಡುವಿನ ಪಿ.ಎಂ ಶ್ರೀ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮೂರ್ನಾಡು ವಿದ್ಯಾ ಸಂಸ್ಥೆಯ ಕಾಲೇಜು ಮೈದಾನದಲ್ಲಿ ಕೊಡಗಿನ ಹಿರಿಯ ಸಾಹಿತಿಗಳಾದ ನಾಗೇಶ್ ಕಾಲೂರು, ಮಡಿಕೇರಿ ಪೊಲೀಸ್ ಉಪ ಅಧೀಕ್ಷಕ ರವಿ ಹಾಗೂ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಡೊಳ್ಳು ಬಾರಿಸುವ ಮೂಲಕ ವರ್ಣರಂಜಿತ ಬೃಹತ್ ಕನ್ನಡ ಮೆರವಣಿಗೆಯನ್ನು ಉದ್ಘಾಟಿಸಿದರು. ಮೂರ್ನಾಡುವಿನ ಶಾಲಾ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಅಂಗನವಾಡಿ ಕಾರ್ಯಕರ್ತರು, ವಿವಿಧ ಸ್ತ್ರೀ ಶಕ್ತಿ ಸಂಘಗಳು, ಟೈಲರ್ ಅಸೋಸಿಯೇಷನ್, ಗಜಾನನ, ಆಪ್ತಮಿತ್ರ, ಸ್ವಸ್ತಿಕ್, ರಾಮ ಮಂದಿರ, ಮೂರ್ನಾಡು, ಗಾಂಧಿನಗರ, ಜೈಭೀಮ್…

Read More

ಡಿ.2 ರಿಂದ 8ರ ವರೆಗಿನ ಹನ್ನೆರಡು ರಾಶಿಗಳ ವಾರ ಭವಿಷ್ಯ (ಡಾ.ಮಹಾಬಲೇಶ್ವರ ಭಟ್, ಮೂರ್ನಾಡು  81056 34429) ಮೇಷ ರಾಶಿ :: ಈ ವಾರದಲ್ಲಿ ನಿಮಗೆ ಹೊಸ ಸುದ್ದಿ ಕೇಳಿ ಬರಲಿದೆ. ಸಂತೋಷವು ಆಗಲಿದೆ. ಆರ್ಥಿಕ ಪ್ರಗತಿಯನ್ನು ಹೊಂದುವಿರಿ, ಸ್ನೇಹಿತರಿಗೆ ಸಹಾಯ ಮಾಡುವಿರಿ, ದೂರ ಪ್ರಯಾಣ ಯೋಗವಿದೆ. :: ಶುಭ ಸಂಖ್ಯೆ :; 1, 2, 3, 9 :: ಶುಭ ಬಣ್ಣ :: ಕೆಂಪು, ಹಳದಿ, ಕೇಸರಿ ವೃಷಭ ರಾಶಿ :: ದೂರದ ಪ್ರವಾಸಕ್ಕೆ ಹೋಗಲಿದ್ದು, ಸ್ನೇಹಿತರಿಂದ ಉಡುಗೊರೆ ಪಡೆಯಲಿದ್ದೀರಿ. ವ್ಯಾಪಾರಸ್ಥರಿಗೆ ಹಣದ ಅಡಚಣೆ ಆಗಲಿದೆ. ಹೊಸ ಸಂಬಂಧ ಕೂಡಿ ಬರಲಿದೆ. ಚರ್ಮಕ್ಕೆ ಸಂಬಂಧಪಟ್ಟ ವ್ಯಾದಿ ಕಾಡಲಿದೆ. :: ಶುಭ ಸಂಖ್ಯೆ :: 5, 6, 8 :: ಶುಭ ಬಣ್ಣ :: ಬಿಳಿ, ಹಸಿರು, ಕಪ್ಪು ಮಿಥುನ ರಾಶಿ :: ಈ ರಾಶಿಯವರಿಗೆ ತುಂಬಾ ಸುತ್ತಾಟ, ಶುಭ ಕಾರ್ಯದಲ್ಲಿ ಭಾಗವಹಿಸುವಿಕೆ, ವಿಪರಿಮಿತ ಹಣದ ಖರ್ಚು, ಗಂಟಲು ನೋವು, ನೆಗಡಿ,…

Read More

ಮಡಿಕೇರಿ ನ.30 NEWS DESK : ಸುಂಟ್ಟಿಕೊಪ್ಪದಲ್ಲಿ ನಡೆದ ಕುಶಾಲನಗರ ವಲಯ ಮಟ್ಟದ ಎಸ್.ಕೆ.ಎಸ್.ಎಸ್‌.ಎಫ್ ಇಸ್ಲಾಮಿಕ್ ಕಲೋತ್ಸವದಲ್ಲಿ ಕೊಡ್ಲಿಪೇಟೆ ಯೂನಿಟ್ (286) ಅಂಕಗಳೊಂದಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. 284 ಅಂಕಗಳೊಂದಿಗೆ ಕುಶಾಲನಗರ ದ್ವಿತೀಯ ಹಾಗೂ 251 ಅಂಕಗಳನ್ನುಗಳಿಸಿ ಮಡಿಕೇರಿ ಯೂನಿಟ್ ತೃತೀಯ ಸ್ಥಾನ ಪಡೆದುಕೊಂಡಿತ್ತು. ಸಬ್ ಜೂನಿಯರ್ ಮತ್ತು ಸೂಪರ್ ಸೀನಿಯರ್ ವಿಭಾಗದಲ್ಲಿ ಕೊಡ್ಲಿಪೇಟೆ, ಜೂನಿಯರ್,ಜನರಲ್ ಗ್ರೂಪ್,ಮತ್ತು ಸೀನಿಯರ್ ವಿಭಾಗದಲ್ಲಿ ಕುಶಾಲನಗರ ಯೂನಿಟ್ ಪ್ರಥಮ ಸ್ಥಾನ ಪಡೆಯಿತು. ಸಬ್ ಜೂನಿಯರ್ ವಿಭಾಗದ ಫೆಸ್ಟ್ ಐಕಾನ್ ಆಗಿ ಮೊಹಮ್ಮದ್ ಆಶಿಮ್ ಕೊಡ್ಲಿಪೇಟೆ, ಜೂನಿಯರ್ ವಿಭಾಗದಲ್ಲಿ ತಬೀಶ್ ಶನಿವಾರಸಂತೆ,ಸೀನಿಯರ್ ವಿಭಾಗದಲ್ಲಿ ಮೊಹಮ್ಮದ್ ಸಿನಾನ್ ಕುಶಾಲನಗರ, ಹಾಗೂ ಸೂಪರ್ ಸೀನಿಯರ್ ವಿಭಾಗದಲ್ಲಿ ಮೊಹಮ್ಮದ್ ರಾಜಿಕ್ ಕುಶಾಲನಗರ ಫೆಸ್ಟ್ ಐಕಾನ್ ಪ್ರಶಸ್ತಿ ಪಡೆದುಕೊಂಡರು. ಏಳು ಯೂನಿಟ್ ಭಾಗವಹಿಸಿದ್ದ ಕುಶಾಲನಗರ ವಲಯ ಎಸ್.ಕೆ.ಎಸ್.ಎಸ್‌.ಎಫ್. ಇಸ್ಲಾಮಿಕ್ ಕಲೋತ್ಸವದಲ್ಲಿ ತೀರ್ಪುಗಾರರಾಗಿ ಸಮದ್ ಬಾಖವಿ ಚಿಕ್ಕಮಗಳೂರು, ಅಬ್ಬಾಸ್ ಅಝ್ಹರಿ ಸಕಲೇಶಪುರ, ರಝಾಕ್ ಫೈಝಿ ಸಕಲೇಶಪುರ, ಕಮರುದ್ದೀನ್ ಫೈಝಿ ಕುಂಜಿಲ,ಮನಾಫ್ ಅಝ್ಹರಿ ಸುಂಟ್ಟಿಕೊಪ್ಪ, ಹಾಗೂ…

Read More