ಮಡಿಕೇರಿ ಜ.11 NEWS DESK : ಕೊಡಗು ಜಿಲ್ಲೆಯಲ್ಲಿ ಆದಿವಾಸಿಗಳ ಮೇಲೆ ನಡೆದಿರುವ ಎಲ್ಲಾ ದೌರ್ಜನ್ಯದ ಪ್ರಕರಣಗಳನ್ನು ಕೂಲಂಕುಶವಾಗಿ ಪರಿಶೀಲಿಸಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳ ಸಮಕ್ಷಮದಲ್ಲಿ ವಿಶೇಷ ಅದಾಲತ್ ನಡೆಸಬೇಕೆಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹ ಸಂಚಾಲಕ ಡಾ.ಎಸ್.ವೈ.ಗುರುಶಾಂತ್, ಜಿಲ್ಲೆಯಲ್ಲಿ ಆದಿವಾಸಿಗಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಬಲಿಷ್ಠರ ಒತ್ತಡಗಳಿಗೆ ಮಣಿಯದೆ ನಿಷ್ಠುರ, ನಿಷ್ಪಕ್ಷಪಾತದಿಂದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಆದಿವಾಸಿಗಳು ಹಾಗೂ ದುರ್ಬಲ ವರ್ಗಗಳ ಕೆಲಸಗಾರರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಕೋವಿ ತೋರಿಸಿ ಬೆದರಿಸುವ, ನಾಯಿ ಬಿಟ್ಟು ಕಚ್ಚಿಸುವ, ಸಾಲದ ನೆಪಹೇಳಿ ಜೀತದಾಳುಗಳನ್ನಾಗಿ ದಂಡಿಸಿ ದುಡಿಸುವ ಪ್ರಕರಣಗಳು ನಡೆಯುತ್ತಲೇ ಇದೆ. ಈ ರೀತಿಯ ದೌರ್ಜನ್ಯ ಪ್ರಕರಣಗಳನ್ನು ತಡೆಯುವಲ್ಲಿ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ಅನೇಕ ಪ್ರಕರಣಗಳಲ್ಲಿ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ನಿಲ್ಲದೆ ಬಲಾಢ್ಯ ಆರೋಪಿಗಳನ್ನು ರಕ್ಷಿಸುವ…
ಲೇಖಕ: admin
ಮಡಿಕೇರಿ ಜ.11 NEWS DESK : ಮಡಿಕೇರಿಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ನಗರದ ತಮ್ಮ ಕಚೇರಿಗೆ ಆಗಮಿಸಿದ್ದ ಸಂಸದರು ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿ ಅವರ ಅಹವಾಲುಗಳನ್ನು ಸ್ವೀಕರಿಸಿˌ ಶೀಘ್ರದಲ್ಲೇ ಪರಿಹಾರ ಕಲ್ಪಿಸುವ ಭರವಸೆ ನೀಡಿದರು. ಅಲ್ಲದೇ ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.
ಮಡಿಕೇರಿ ಜ.11 NEWS DESK : ಕೊಡಗು ಜಿಲ್ಲೆಯನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಕೇಂದ್ರ ಸರಕಾರದ ಮೂಲಕ ಶಾಶ್ವತ ಪರಿಹಾರ ಕೋರಿ ಮಾನವ ಹಕ್ಕುಗಳ ಅಂತರಾಷ್ಟ್ರೀಯ ಒಕ್ಕೂಟದ ರಾಜ್ಯ ಸಮಿತಿ ಮೈಸೂರು- ಕೊಡಗು ಕ್ಷೇತ್ರದ ಲೋಕಸಭಾ ಸದಸ್ಯ ಯದುವೀರ್ ಒಡೆಯರ್ ಅವರಿಗೆ ಮನವಿ ಸಲ್ಲಿಸಿದೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ಹಾಗೂ ಮಾನವ ಸಂಘರ್ಷದಿಂದ ಅನೇಕ ಜೀವಗಳು ಬಲಿಯಾಗುತ್ತಿದ್ದು, ಕೃಷಿ ಫಸಲು ನಾಶವಾಗುತ್ತಿದೆ. ತಕ್ಷಣ ಕೇಂದ್ರ ಸರಕಾರದ ಮೂಲಕ ಕಾಡಾನೆ ಹಾವಳಿ ತಡೆಗೆ ಶಾಶ್ವತ ಯೋಜನೆ ರೂಪಿಸಬೇಕು. ಕೃಷಿ ಫಸಲು ನಷ್ಟಕ್ಕೆ ಕೇಂದ್ರದಿಂದಲೂ ಪರಿಹಾರ ನೀಡಬೇಕು. ಹುಲಿ, ಚಿರತೆ, ಕಾಡೆಮ್ಮೆ, ಕಾಡುಹಂದಿ, ಮಂಗಗಳು ಸೇರಿದಂತೆ ವನ್ಯಜೀವಿಗಳ ಉಪಟಳ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳಿಗೆ ಆಹಾರ ಮತ್ತು ನೀರು ಕೊರತೆಯಾಗದಂತೆ ನೋಡಿಕೊಳ್ಳಲು ಯೋಜನೆ ಜಾರಿಗೆ ತರಬೇಕು. ಕಾವೇರಿಯ ಉಗಮ ಸ್ಥಾನ ತಲಕಾವೇರಿಗೆ ತೆರಳುವ ಭಾಗಮಂಡಲ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಭಕ್ತರ ಪ್ರಯಾಣ ಕಷ್ಟಕರವಾಗಿದೆ. ಇದು ಹೆದ್ದಾರಿಯಾಗಿದ್ದು, ತಕ್ಷಣ ರಸ್ತೆ ವಿಸ್ತರಣೆ…
ಮಡಿಕೇರಿ NEWS DESK ಜ.11 : ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ “ಮುದ್ದಂಡ ಕಪ್ ಹಾಕಿ ಉತ್ಸವ”ದ ಲೋಗೋವನ್ನು ಇಂದು ಮಡಿಕೇರಿಯ ಕಾವೇರಿ ಹಾಲ್‌ನಲ್ಲಿ ಬಿಡುಗಡೆ ಮಾಡಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ, ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮಾಜಿ ವಿಧಾನಸಭಾ ಅಧ್ಯಕ್ಷ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯAಡ ವೀಣಾ ಅಚ್ಚಯ್ಯ, ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಬೋಪಣ್ಣ ಮತ್ತಿತರರು ಲೋಗೋವನ್ನು ಬಿಡುಗಡೆ ಮಾಡಿದರು. ಮುದ್ದಂಡ ಕಪ್ ಹಾಕಿ ಹಬ್ಬದ ಅಧ್ಯಕ್ಷ ರಶಿನ್ ಸುಬ್ಬಯ್ಯ, ಉಪಾಧ್ಯಕ್ಷ ಮುದ್ದಂಡ ಡೀನ್ ಬೋಪಣ್ಣ, ಕಾರ್ಯದರ್ಶಿ ಮುದ್ದಂಡ ರಂಜಿತ್ ಪೊನ್ನಪ್ಪ, ಗೌರವಾಧ್ಯಕ್ಷ ಮುದ್ದಂಡ ಬಿ.ದೇವಯ್ಯ, ಮುದ್ದಂಡ ಒಕ್ಕದ ಪಟ್ಟೆದಾರ ಮುದ್ದಂಡ ಡಾಲಿ ತಿಮ್ಮಯ್ಯ ಉಪಸ್ಥಿತರಿದ್ದರು.
ನಾಪೋಕ್ಲು ಜ.11 NEWS DESK : ಬೆಟ್ಟಗೇರಿ ಗ್ರಾ.ಪಂ ವ್ಯಾಪ್ತಿಯ ಪಾಲೂರು ಗ್ರಾಮದಲ್ಲಿ ವಿದ್ಯುತ್ ದೀಪಗಳಿಲ್ಲದೆ ಕಗ್ಗತ್ತಲು. ಹತ್ತು ದಿನದ ಗಡುವು ತಪ್ಪಿದಲ್ಲಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥ ಎನ್.ಎಂ.ಪೊನ್ನಣ್ಣ ಎಚ್ಚರಿಸಿದರು. ನಾಪೋಕ್ಲುವಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲೂರು – ಕೇಮಾಟ್ ರಸ್ತೆಯಲ್ಲಿ ಹಲವು ವರ್ಷಗಳಿಂದ ಯಾವುದೇ ವಿದ್ಯುತ್ ದೀಪದ ಸೌಲಭ್ಯಗಳಿಲ್ಲದೆ ಪರದಾಡುವಂತಾಗಿದೆ. ಈ ಬಗ್ಗೆ ಪಂಚಾಯಿತಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ಲಭಿಸಿಲ್ಲ. ಪಂಚಾಯಿತಿ ಬೇಜವಾಬ್ದಾರಿತನದಿಂದಾಗಿ ಗ್ರಾಮಸ್ಥರು ಕತ್ತಲೆಯಲ್ಲಿ ಕಾಲ ಕಳೆಯುವಂತಾಗಿದೆ ಎಂದರು. ಗ್ರಾಮದಲ್ಲಿ ವಿದ್ಯುತ್ ದೀಪಗಳು ಇಲ್ಲದೆ ರಸ್ತೆಗಳು, ಬಸ್ ತಂಗುದಾಣ, ಶಾಲೆ, ಅಂಗನವಾಡಿ ಕೇಂದ್ರ, ಪುರಾತನ ಇತಿಹಾಸವಿರುವ ವಿಷ್ಣು ದೇವಾಲಯ, ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯಾಪ್ತಿಯಲ್ಲಿ ಕಗ್ಗತ್ತಲು ಆವರಿಸಿದ್ದು, ಅಪರಾಧ ಕೃತ್ಯಗಳು ನಡೆಯುವ ವಾತಾವರಣ ನಿರ್ಮಾಣವಾಗಿದೆ ಎಂದರು. ಗ್ರಾಮದ ಕೇಮಾಟ್-ಬಕ್ಕ ಸಂಪರ್ಕ ರಸ್ತೆ ತೀವ್ರ ಹದಗೆಟ್ಟಿದ್ದು ಸಾರ್ವಜನಿಕರು, ಶಾಲಾ ಮಕ್ಕಳಿಗೆ ನಡೆದಾಡಲು ಹಾಗೂ ವಾಹನ ಸಂಚಾರಕ್ಕೆ ತೊಡಕಾಗಿದೆ. ರಸ್ತೆ…
ಮಡಿಕೇರಿ ಜ.11 NEWS DESK : ನಗರದ ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವೀಕ್ಷಿಸಿದರು. ಈ ಸಂದರ್ಭ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆಹರೋಜ್ ಖಾನ್, ಕೊಡಗು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್‍ರಾಜಾ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.
ನಾಪೋಕ್ಲು ಜ.11 : ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ವೈಕುಂಠ ಏಕಾದಶಿ ವಿಶೇಷ ಪೂಜೆಯೂ ಶ್ರದ್ಧಾಭಕ್ತಿಯಿಂದ ಜರುಗಿತು. ವೈಕುಂಠ ಏಕಾದಶಿ ಅಂಗವಾಗಿ ಮುಂಜಾನೆಯಿಂದಲೇ ಶ್ರೀ ವೆಂಕಟೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ, ಹೂವಿನ ಅಲಂಕಾರ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು. ಮಧ್ಯಾಹ್ನ ಶ್ರೀ ವೆಂಕಟೇಶ್ವರನಿಗೆ ವಿಶೇಷ ಮಹಾ ಪೂಜೆ ಹಾಗೂ ಮಹಾ ಮಂಗಳಾರತಿ ನಡೆಯಿತು. ಬಳಿಕ ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನದಾನ ನೆರವೇರಿತು. ಈ ಸಂದರ್ಭ ದೇವಾಲಯ ಆಡಳಿತ ಮಂಡಳಿ ಸೇರಿದಂತೆ ಭಕ್ತಾದಿಗಳು ಹಾಜರಿದ್ದರು. ದೇವಾಲಯದ ಮುಖ್ಯ ಆರ್ಚಕ ಸುದೀರ ಅವರು ಪೂಜಾ ಕೈಂಕರ್ಯಗಳು ನೆರವೇರಿದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜ.11 NEWS DESK : ಕೆದಮುಳ್ಳೂರು ವಿವಿಧೋದ್ದೇಶ ಸಹಕಾರ ದವಸ ಭಂಡಾರದ ನೂತನ ಅಧ್ಯಕ್ಷರಾಗಿ ಮಾಳೇಟಿರ ಪ್ರಶಾಂತ್ ಉತ್ತಪ್ಪ ಹಾಗೂ ಉಪಾಧ್ಯಕ್ಷರಾಗಿ ಮಾಳೇಟಿರ ಜೀವನ್ ಮುದ್ದಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಮಾಳೇಟಿರ ಪ್ರಶಾಂತ್ ಉತ್ತಪ್ಪ, ಮಾಳೇಟಿರ ಜೀವನ್ ಮುದ್ದಯ್ಯ, ಮಾಳೇಟಿರ ಬೃಂದ ತಿಮ್ಮಯ್ಯ, ಪುದಿಯನೆರವನ ಡಾಲು ಪೂಣಚ್ಚ, ಬಿ.ಕೆ.ಸಹದೇವ, ತಂಬಂಡ ಇಮ್ಮಿ ಪೊನ್ನಪ್ಪ, ಪ್ರವೀಣ್ ಕ್ರಾಸ್ತ, ಮಾಳೇಟಿರ ಡಾಟಿ ಗಣಪತಿ, ತುಳಸಿ ಹಾಗೂ ಬಿ.ಜೆ.ಅನಿತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಕೆದಮುಳ್ಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಣಿ ಕಾರ್ಯನಿರ್ವಹಿಸಿದರು.
ಮಡಿಕೇರಿ ಜ.11 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸಂಸ್ಕೃತ ಸಿರಿಬಳಗ ಟ್ರಸ್ಟ್ ಹಾಗೂ ಬೆಟ್ಟದಳ್ಳಿ ಯಶೋದೆ ರಂಗ ಟ್ರಸ್ಟ್, ಸಂಯುಕ್ತ ಆಶ್ರಯದಲ್ಲಿ ಜ.13 ರಂದು ನಿರ್ದಿಗಂತ ಪ್ರಸ್ತುತಪಡಿಸುವ “ತಿಂಡಿಗೆ ಬಂದ ತುಂಡೇರಾಯ” ಉಚಿತ ನಾಟಕ ಪ್ರದರ್ಶನ ನಡೆಯಲಿದೆ.ಮಡಿಕೇರಿಯ ಪೊಲೀಸ್ ಮೈತ್ರಿ ಭವನದಲ್ಲಿ ಸಂಜೆ 6.30ಕ್ಕೆ ನಡೆಯಲಿದ್ದು, ಕೊಡಗು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಜರಾಮನ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ವಹಿಸಲಿದ್ದಾರೆ. ನಾಟಕಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ದೊರೆಯಲಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ, ಎಸ್.ಐ ಮುನಿರ್ ಅಹಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಲ ಬರ್ಟೋಲ್ಟ್ ಬ್ರೆಕ್ಟ್ ಅವರ ಆಂಗ್ಲ ನಾಟಕ “The Resistable Rise of Arture Ui”ನ ಅನುವಾದಿತ ನಾಟಕ ಇದಾಗಿದ್ದು, ದೇಶ ಕಂಡ ಅತ್ಯುತ್ತಮ ನಟ ಪ್ರಕಾಶ್ ರಾಜ್ ರೈ ಅವರ ನಿರ್ದಿಗಂತ ತಂಡದಿಂದ…
ಮಡಿಕೇರಿ ಜ.11 NEWS DESK : ಕೊಡಗು ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ ಹಾಗೂ ಕಟ್ಟಡ ಕಾಮಗಾರಿ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ವಿರಾಜಪೇಟೆ ತಾಲ್ಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ವಿವಿಧ ಕಾಮಗಾರಿ ಬಗ್ಗೆ ಮಾಹಿತಿ ಪಡೆದರು. ಸಭೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಾತನಾಡಿ ರಸ್ತೆ ಸೇರಿದಂತೆ ನಗರದಲ್ಲಿ ಇನ್ನೂ ಪೂರ್ಣಗೊಳ್ಳಬೇಕಿರುವ ಕೊಡವ ಹೆರಿಟೇಜ್ ಸೆಂಟರ್, ಕನ್ನಡ ಸುವರ್ಣ ಸಮುಚ್ಚಯ ಭವನ ನಿರ್ಮಾಣ ಕಾಮಗಾರಿ ಹಾಗೂ ಮಂಗಳೂರು ರಸ್ತೆಯ ತಡೆಗೋಡೆ ಬಗ್ಗೆ ಬೆಳಕು ಚೆಲ್ಲಿದರು. ಮಡಿಕೇರಿ ನಗರದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಪಾಸ್ ನಿರ್ಮಾಣ ಮಾಡಬೇಕಿತ್ತು ಆದರೆ ಇದನ್ನು ಕೈಗೊಳ್ಳಲಿಲ್ಲ, ಜೊತೆಗೆ ತಡೆಗೋಡೆ ಕಾಮಗಾರಿಯನ್ನು ಡಿಸೆಂಬರ್ 31ರೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಅವರು ನಿರ್ದೇಶನ ನೀಡಿದ್ದರೂ ಕೆಲಸ ಆಗಿಲ್ಲ ಎಂದು ಶಾಸಕರು ಸಚಿವರ ಗಮನಕ್ಕೆ ತಂದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ರಸ್ತೆ ಹಾಗೂ…






