ಲೇಖಕ: admin

ಮಡಿಕೇರಿ ಜು.30 NEWS DESK : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಗ್ಯಾರಂಟಿ ಸಮಿತಿ ಸಭೆ ನಡೆಯಿತು. ಗೃಹಲಕ್ಷ್ಮಿ ಯೋಜನೆ: ಶಿಶುಅಭಿವೃದ್ದಿ ಇಲಾಖೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಮೇ ಮಾಹೆಯಲ್ಲಿ 1,05,392 ಫಲಾನುಭವಿಗಳಿಗೆ ಒಟ್ಟುರೂ. 2,10,78,400 ಹಣ ಬಿಡುಗಡೆಯಾಗಿದ್ದು ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿದ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಧನಸಹಾಯದ ಮೊತ್ತವನ್ನು ಬ್ಯಾಂಕ್ ಖಾತೆಯಿಂದ ಸರ್ಕಾರದ ಖಾತೆಗೆ ಜಮೆ ಮಾಡುವ ಕುರಿತು ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ ದಿನಾಂಕ 10.07.2026 ರಂದು ಬಿಎಲ್‍ಬಿಸಿ ಸಭೆ ಏರ್ಪಡಿಸಲಾಯಿತು. ಸಭೆಯಲ್ಲಿ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 711 ಗೃಹಲಕ್ಷ್ಮಿ ಫಲಾನುಭವಿಗಳು ಮರಣ ಹೊಂದಿರುವ ಮಾಹಿತಿ ಲಭ್ಯವಾಗಿದ್ದು, ಲೀಡ್ ಬ್ಯಾಂಕ್ ಮ್ಯಾನೇಜರ್ ಅವರು ಪ್ರತಿ ಮರಣ ಫಲಾನುಭವಿಯ ಬ್ಯಾಂಕ್ ಖಾತೆಯ ಐಎಫ್‍ಎಸ್‍ಸಿ ಕೋಡ್ ನೀಡುವಂತೆ ತಿಳಿಸಿದರು. ಅದರಂತೆ ಆಹಾರ ಶಾಖೆಯವರಿಗೆ ಪತ್ರ ಮುಖೇನ ಗ್ರಾಮವಾರು ಮಾಹಿತಿ ಕೇಳಿದ್ದು,ಮಾಹಿತಿ ಪಡೆದ ನಂತರ ಐಎಫ್‍ಎಸ್‍ಸಿ ಕೋಡ್ ಮಹಿತಿಯನ್ನು ಕಲೆ…

Read More

ಮಡಿಕೇರಿ ಜು.30 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್‍ಐಆರ್) ಡಿಜಿಟಲೀಕರಣವು ಜಿಲ್ಲೆಯಲ್ಲಿ ಶೇ.86 ರಷ್ಟು ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಎಸ್‍ಐಆರ್ ಪ್ರಕ್ರಿಯೆ ಸಂಬಂಧ ಶಾಶ್ವತವಾಗಿ ಸ್ಥಳಾಂತರ, ಎರಡು ಕಡೆ ಹೆಸರು ಹೊಂದಿರುವ ಹಾಗೂ ಇತರೆ ಕಾರಣಗಳಿಂದ ಗಣತಿ ನಮೂನೆ ಸಲ್ಲಿಸದೆ(ಎಎಸ್‍ಡಿಡಿಒ) ಇರುವ ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳ ಪ್ರಮುಖರಿಗೆ ಹಸ್ತಾಂತರಿಸಿ ಜಿಲ್ಲಾಧಿಕಾರಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 4,68,657 ಮತದಾರರಲ್ಲಿ 4,68,657 ಮತದಾರರಿಗೂ ಎಸ್‍ಐಆರ್ ನಮೂನೆ ವಿತರಿಸಿ, 4,03,576 ಡಿಜಿಟಲೀಕರಣ ಮಾಡಿ ಶೇ.86 ಕ್ಕೂ ಹೆಚ್ಚು ಪ್ರಗತಿ ಸಾಧಿಸಲಾಗಿದ್ದು, ಈ ಬಗ್ಗೆ ವಿವಿಧ ರಾಜಕೀಯ ಪಕ್ಷಗಳು ತಮ್ಮ ಹಂತದಲ್ಲಿ ಪರಿಶೀಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಜಿಲ್ಲೆಯಲ್ಲಿ ಮರಣ, ಸ್ಥಳಾಂತರ, ಗೈರು ಅಥವಾ ಎರಡು ಕಡೆ ಹೆಸರು ಹೊಂದಿರುವ, ಇತರೆ ಕಾರಣದಿಂದ ಗಣತಿ ನಮೂನೆ ಸಲ್ಲಿಸದೇ ಇರುವ 65,018 ಮತದಾರರಿದ್ದು, ಈ ಬಗ್ಗೆಯೂ ಸಹ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು…

Read More

ವಿರಾಜಪೇಟೆ ಜು.30 NEWS DESK : ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಪರಿಪಾಠವು ಪ್ರತಿಯೊಂದು ಮನೆಗಳಿಂದಲೇ ಆರಂಭವಾಗಬೇಕು. ಮನೆಯಲ್ಲೇ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿದರೆ ಸಮಾಜದಲ್ಲೂ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ ಎಂದು ವಿರಾಜಪೇಟೆ ತಹಶೀಲ್ದಾರ್ ಪ್ರವೀಣ್ ಕುಮಾರ್ ಹೇಳಿದರು. ವಿರಾಜಪೇಟೆ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಆಡಳಿತ, ವಿರಾಜಪೇಟೆ ಪತ್ರಕರ್ತರ ವೇದಿಕೆ, ನ್ಯೂಸ್ 3 ಡಿಜಿಟಲ್ ಮೀಡಿಯಾ ಹಾಗೂ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕಗಳ ಸಹಯೋಗದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಗಿಡಗಳನ್ನು ನೆಡುವ ಮಹತ್ವದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಗಿಡಗಳನ್ನು ನೆಡುವುದಷ್ಟೇ ಅಲ್ಲ, ಅವುಗಳ ಪಾಲನೆ-ಪೋಷಣೆ ಮಾಡುವುದೂ ಅಷ್ಟೇ ಮುಖ್ಯ ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿರಾಜಪೇಟೆ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಮಹೇಶ್ ಕುಮಾರ್ ಮಾತನಾಡಿ,…

Read More

ಮಡಿಕೇರಿ, ಜು.30 NEWS DESK : ಬ್ರಹ್ಮಗಿರಿ ಸಹೋದಯ ಕೊಡಗು ವತಿಯಿಂದ ಸಿಬಿಎಸ್‌ಇ ಅಂತರಶಾಲಾ ಪೋಸ್ಟರ್ ರಚನಾ ಸ್ಪರ್ಧೆಯು ಮಡಿಕೇರಿಯ ಎಎಲ್‌ಜಿ ಕ್ರೆಸೆಂಟ್ ಶಾಲೆಯಲ್ಲಿ ನಡೆಯಿತು. ಕೊಡಗು ಸೇರಿದಂತೆ ವಿವಿಧ ಭಾಗಗಳ ಸಿಬಿಎಸ್‌ಇ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕಲಾತ್ಮಕ ಪ್ರತಿಭೆ, ಸೃಜನಶೀಲತೆ ಹಾಗೂ ಸಾಮಾಜಿಕ ಅರಿವನ್ನು ಪ್ರತಿಬಿಂಬಿಸುವ ಪೋಸ್ಟರ್‌ಗಳನ್ನು ರಚಿಸುವ ಮೂಲಕ ಗಮನ ಸೆಳೆದರು. ಸ್ಪರ್ಧೆಯನ್ನು ಕಿರಿಯ (ಜೂನಿಯರ್) ಹಾಗೂ ಹಿರಿಯ (ಸೀನಿಯರ್) ವಿಭಾಗಗಳಲ್ಲಿ ಆಯೋಜಿಸಲಾಗಿತ್ತು. ಕಿರಿಯ ವಿಭಾಗದಲ್ಲಿ ಎಎಲ್‌ಜಿ ಕ್ರೆಸೆಂಟ್ ಶಾಲೆಯ ಅರ್ಹಾನ್ ಅಹ್ಮದ್ ಪ್ರಥಮ, ಕೆವಿಜಿ ಐಪಿಎಸ್, ಸುಳ್ಯದ ಲಿಕೇಶ್ ಪಿ.ಜೆ. ದ್ವಿತೀಯ ಹಾಗೂ ಅಂಕುರ್ ಪಬ್ಲಿಕ್ ಶಾಲೆಯ ಹೇಶ್ವಿ ಪೊನ್ನಮ್ಮ ತೃತೀಯ ಸ್ಥಾನ ಪಡೆದರು. ಹಿರಿಯ ವಿಭಾಗದಲ್ಲಿ ಕೆವಿಜಿ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್, ಸುಳ್ಯದ ಪ್ರತೀಕ್ಷಾ ಪ್ರಥಮ, ಎಎಲ್‌ಜಿ ಕ್ರೆಸೆಂಟ್ ಶಾಲೆಯ ರಿಷಾ ಫಾತಿಮಾ ದ್ವಿತೀಯ ಹಾಗೂ ಅಂಕುರ್ ಪಬ್ಲಿಕ್ ಶಾಲೆಯ ಲಿಪಿ ಮಾದಪ್ಪ ತೃತೀಯ ಬಹುಮಾನಕ್ಕೆ ಭಾಜನರಾದರು. ಸ್ಪರ್ಧೆಗೆ ಜನರಲ್ ತಿಮ್ಮಯ್ಯ ಶಾಲೆಯ…

Read More

ಸೋಮವಾರಪೇಟೆ ಜು.30 NEWS DESK : ಕೂತಿ ಗ್ರಾಮದ ತಮ್ಮೇಗೌಡ ಗೌರಮ್ಮ ಸೌಹಾರ್ದ ಟ್ರಸ್ಟ್‍ನ ಎರಡನೇ ವರ್ಷದ ವಾರ್ಷಿಕ ಸಭೆ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಿತು. ಸಭಯನ್ನು ಈರಮ್ಮ ನಿಂಗೇಗೌಡ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷ ಕಾಮನಹಳ್ಳಿ ಕೆ.ಟಿ. ವೀರೇಶ್ ಗೌಡ ವಹಿಸಿದ್ದರು. ಸಭೆಯಲ್ಲಿ ಕುಟುಂಬದ ಹಿರಿಯ ಸದಸ್ಯರಾದ ಕೂತಿ ಗ್ರಾಮದ ಜಯಮ್ಮ ಜೋಯಪ್ಪ, ಕರಡಿಕೊಪ್ಪ ಗ್ರಾಮದ ಅಕ್ಕಮ್ಮ ಪುಟ್ಟಪ್ಪ ಅವರುಗಳನ್ನು ಸನ್ಮಾನಿಸಲಾಯಿತು. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಪ್ರಮುಖರಾದ ಕೆ.ಟಿ.ಜೋಯಪ್ಪ ಪಟ್ಟೆದಾರ್, ಗೌರವ ಅಧ್ಯಕ್ಷ ಕಾಮನಹಳ್ಳಿ ಬೆಳ್ಳಿಗೌಡ, ಉಪಾಧ್ಯಕ್ಷ ಸಿ.ಕೆ.ಮಲ್ಲಪ್ಪ, ಕಾರ್ಯದರ್ಶಿ ಟಿ.ಕೆ. ರಾಜಶೇಖರ್, ಖಜಾಂಚಿ ಎಸ್.ಡಿ. ಪರಮೇಶ್, ಮಂಜೂರು ವಸಂತ ಇದ್ದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Read More

ಸೋಮವಾರಪೇಟೆ ಜು.30 NEWS DESK : ನೇರುಗಳಲೆ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ, ಶಾಲಾ ಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಎನ್. ಪಾಪಯ್ಯ ಅವರು ಟ್ರ್ಯಾಕ್ ಸೂಟ್‌ಗಳನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಎಚ್.ಎಸ್. ರಾಜೇಶ್ವರಿ, ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಕೆ.ಆರ್. ರತ್ನಕುಮಾರ್, ಶಿಕ್ಷಕರಾದ ಎ.ಬಿ. ತೇಜಾಕ್ಷಿ, ಎಚ್.ಕೆ. ಉಮೇಶ್, ಎಚ್.ಎನ್. ರತೀಶ್, ಸಿ.ಜೆ. ಆಶಾ, ಬಿ.ಆರ್. ಲಿಖಿತ ಹಾಗೂ ಎ.ಎಸ್. ಭಾನುಮತಿ ಇದ್ದರು.

Read More

ಸೋಮವಾರಪೇಟೆ ಜು.30 NEWS DESK : ಇತಿಹಾಸದಲ್ಲಿ ಮೊದಲ ಬಾರಿಗೆ ಬಹುಜನರಿಗೆ ಮೀಸಲಾತಿ ನೀಡಿದ ಕೀರ್ತಿ ಕೊಲ್ಲಾಪುರ ಸಂಸ್ಥಾನದ ಛತ್ರಪತಿ ಶಾಹು ಮಹಾರಾಜರಿಗೆ ಸಲ್ಲುತ್ತದೆ ಎಂದು ನಿವೃತ್ತ ಪ್ರಾಂಶುಪಾಲ ಮತ್ತು ಸಾಹಿತಿಗಳಾದ ಡಾ. ಜೆ.ಸೋಮಣ್ಣ ಅಭಿಪ್ರಾಯಿಸಿದರು. ಜಿಲ್ಲಾ ಮಹಾಬೋದಿ ಪತ್ತಿನ ಸಹಕಾರ ಸಂಘದ ವತಿಯಿಂದ ಪಟ್ಟಣದ ಡಾ.ಅಂಬೇಡ್ಕರ್ ಭವನದಲ್ಲಿ  ನಡೆದ ಛತ್ರಪತಿ ಶಾಹುಮಹಾರಾಜರ 152ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅಸ್ಪೃಶ್ಯತೆಯ ನಿಷೇಧ, ದೇವದಾಸಿ ಪದ್ಧತಿ ನಿಷೇಧ, ವಿಧವ ವಿವಾಹ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ ಮತ್ತು ಶಾಲೆಗಳನ್ನು ಪ್ರಾರಂಭಿಸಿದರು. ಹಲವಾರು ಜನಪರ ಕಾಳಜಿಯುಳ್ಳ ಕಾನೂನುಗಳನ್ನು ಜಾರಿಗೊಳಿಸಿ ಇತಿಹಾಸದ ಪುಟದಲ್ಲಿ ದಾಖಲಾಗಿದ್ದಾರೆ ಎಂದು ಹೇಳಿದರು. ತಹಸೀಲ್ದಾರ್ ಕೃಷ್ಣಮೂರ್ತಿ ಮಾತನಾಡಿ, ಶಾಹುಮಹಾರಾಜರ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಕಾಲದ ಶೈಕ್ಷಣಿಕ ಸಾಧನೆ ಅಮೂಲ್ಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಹಕಾರ ಸಂಘದ ಅಧ್ಯಕ್ಷ ಎಸ್.ಸಿ.ಸತೀಶ್, ಉಪಾಧ್ಯಕ್ಷ ಗಣಪತಿ, ದಲಿತ ಹಿತರಕ್ಷಣ ಒಕ್ಕೂಟದ ಅಧ್ಯಕ್ಷ ಡಿ.ಎಸ್‌.ನಿರ್ವಾಣಪ್ಪ, ಪರಿಶಿಷ್ಟಜಾತಿ-ಪಂಗಡ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿದ್ದಪ್ಪ, ಉಪಾಧ್ಯಕ್ಷರಾದ…

Read More

ಕುಶಾಲನಗರ ಜು.30 NEWS DESK : ರಾಜ್ಯದ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾಯರ ಪ್ರತಿಮೆಯನ್ನು ನಗರದಲ್ಲಿ ಸ್ಥಾಪಿಸುವ ಸಂಬಂಧ ಆ.22ರಂದು ಶಿಲಾವಿನ್ಯಾಸ ಕಾರ್ಯಕ್ರಮ ನಡೆಯಲಿದೆ. ನಗರದ ಪುರಸಭೆ ಸಭಾಂಗಣದಲ್ಲಿ ನಡೆದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ವಿಷಯದ ಕುರಿತು ಚರ್ಚೆ ನಡೆಯಿತು. ಆ.22ರಂದು ಗುಂಡೂರಾಯರ ಪುಣ್ಯಸ್ಮರಣೆಯ ದಿನವಾಗಿದ್ದು, ಅಂದು ಕುಶಾಲನಗರ ಪುರಸಭೆ ಆವರಣದಲ್ಲಿ ಸ್ಥಾಪಿಸಲು ಉದ್ದೇಶ ಹೊಂದಿರುವ ಪ್ರತಿಮೆಯ ಬಗ್ಗೆ ಎಂಜಿನಿಯರ್ ಅರ್ಬಸ್ ಅಹಮದ್ ಅವರು ಸಮಗ್ರ ಮಾಹಿತಿ ಒದಗಿಸಿದರು. ಪ್ರತಿಮೆ ನಿರ್ಮಾಣಕ್ಕೆ ಅಗತ್ಯವಿರುವ ವೆಚ್ಚದ ಬಗ್ಗೆ ಚರ್ಚಿಸಲಾಗಿ ಗುಂಡೂರಾಯರ ಪುತ್ರ ಹಾಗೂ ಮಾಜಿ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ಕ್ಷೇತ್ರ ಶಾಸಕರಾದ ಡಾ.ಮಂತರ್ ಗೌಡ ಸಹಕಾರ ನೀಡುವ ಬಗ್ಗೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್ ಹೇಳಿದರು. ಉಳಿದಂತೆ ಸ್ಥಳೀಯ ಸಂಘ ಸಂಸ್ಥೆಗಳ ಮತ್ತು ಗುಂಡೂರಾಯರ ಅಭಿಮಾನಿಗಳ ಮೂಲಕ ದೇಣಿಗೆ ಸಂಗ್ರಹದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಪ್ರತಿಮೆ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷರಾಗಿ ಕ್ಷೇತ್ರದ ಶಾಸಕರು ಮತ್ತು ಸಂಚಾಲಕರಾಗಿ ಪುರಸಭೆ…

Read More

ಮಡಿಕೇರಿ ಜು.30 NEWS DESK : ಗುರುಪೂರ್ಣಿಮೆ ಅಂಗವಾಗಿ ಕುಶಾಲನಗರ ಶಿರಡಿ ಸಾಯಿಬಾಬಾ ಮಂದಿರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಶ್ರೀ ಶಿರಡಿ ಸಾಯಿ ಟ್ರಸ್ಟ್ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಕಡ ಆರತಿ, ಗಣಪತಿ ಹೋಮ, ಬಾಬಾ ಮೂರ್ತಿಗೆ ಪಂಚಾಮೃತ ಅಭಿಷೇಕ ನೆರವೇರಿತು. ನಂತರ ಮೂಲ ವಿಗ್ರಹಕ್ಕೆ ಭಕ್ತಾದಿಗಳು  ಕ್ಷೀರಾಭಿಷೇಕ ಜರುಗಿತು. ಬಳಿಕ ಸತ್ಯನಾರಾಯಣ ಪೂಜೆ ನಡೆಯಿತು.  ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಫಲ ತಾಂಬೂಲ ಸಹಿತ ದೇವಾಲಯಕ್ಕೆ ಆಗಮಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ದೇವರಿಗೆ ಅಭಿಷೇಕ ಮಾಡಿದರು. ಮಧ್ಯಾಹ್ನ ಕನಕ ದುರ್ಗಮ್ಮ ಹಾಗೂ ಸುಬ್ರಹ್ಮಣ್ಯ ಸ್ವಾಮಿಗೆ ಪೂಜೆ ಸಲ್ಲಿಸಲಾಯಿತು.  ಮಹಾಮಂಗಳಾರತಿ ನಂತರ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ನೆರವೇರಿತು. ಶ್ರೀ ಶಿರಡಿ ಸಾಯಿ ಟ್ರಸ್ಟ್ ಅಧ್ಯಕ್ಷರಾದ ಧರೇಶ್ ಬಾಬು ಮತ್ತು ಕಾರ್ಯಕಾರಿ ಮಂಡಳಿ ಸದಸ್ಯರು ಇದ್ದರು. ಪಟ್ಟಣ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.

Read More

ಕುಶಾಲನಗರ ಜು.30 NEWS DESK : ದುಶ್ಚಟಗಳಿಂದ ದೂರವಿದ್ದರೆ ಸಮಾಜದಲ್ಲಿ ಗೌರವಯುತವಾಗಿ ಜೀವಿಸಲು ಸಾಧ್ಯ ಎಂಬುದನ್ನು ಇಂದಿನ ಯುವ ಪೀಳಿಗೆ ಅರಿತುಕೊಳ್ಳಬೇಕು ಎಂದು ಕನ್ನಡ ಉಪನ್ಯಾಸಕರಾದ ಡಾ.ಜ಼ಮೀರ್ ಅಹಮದ್ ಅವರು ಅಭಿಪ್ರಾಯಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸೋಮವಾರ ಪೇಟೆ ತಾಲೂಕಿನ ಕೂಡಿಗೆ ವಲಯ ಮತ್ತು ಸರ್ಕಾರಿ ಪ್ರೌಢ ಶಾಲೆ, ತೊರೆನೂರು ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ಭಾರತೀಯ ಪರಂಪರೆ, ಸಂಸ್ಕೃತಿಯ ತನ್ನದೇ ಆದ ವೈಶಿಷ್ಟ್ಯತೆಯನ್ನು ಹೊಂದಿದ್ದು, ಉತ್ತಮ ಆರೋಗ್ಯ, ಉತ್ತಮ ಪರಿಸರ, ಮಾನವೀಯ ಮೌಲ್ಯಗಳನ್ನು ಹೊಂದುವುದು ಸ್ವಸ್ಥ ಸಮಾಜದ ಬಹುಮುಖ್ಯ ಭಾಗವಾಗಿದೆ. ನಮ್ಮ ಕುಟುಂಬ ಮತ್ತು ಸಮಾಜಕ್ಕೆ ಹಾನಿ ಮಾಡುವ ಅಭ್ಯಾಸಗಳ ಬಗ್ಗೆ ಅರಿವು ಇರಬೇಕು. ಮಾದಕ ವಸ್ತುಗಳ ವ್ಯಸನ ನಮ್ಮನ್ನು ದಾಸ್ಯರನ್ನಾಗಿ ಮಾಡುವುದಷ್ಟೇ ಅಲ್ಲದೇ ನಮ್ಮ ಅಮೂಲ್ಯವಾದ ಬದುಕನ್ನು ಕಸಿದುಕೊಳ್ಳುತ್ತದೆ. ದುಶ್ಚಟಗಳಿಂದ ಮುಕ್ತರಾಗಿ ಸಮಾಜದಲ್ಲಿ ಗೌರವಯುತ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…

Read More