ಲೇಖಕ: admin

ಮಡಿಕೇರಿ ಜ.10 NEWS DESK : ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಏರ್ ಮಾಷ೯ಲ್ ನಾಗೇಶ್ ಕಪೂರ್ ಭೇಟಿ ನೀಡಿ ವ್ಯವಸ್ಥೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಮಡಿಕೇರಿಯಲ್ಲಿರುವ ಜನರಲ್ ತಿಮ್ಮಯ್ಯ ಜನ್ಮನಿವಾಸ ಸನ್ನಿಸೈಡ್ ಗೆ ಭೇಟಿ ನೀಡಿದ್ದ ವಾಯುಪಡೆಯ ತರಬೇತಿ ವಿಭಾಗದ ಬೆಂಗಳೂರಿನ ಮುಖ್ಯಸ್ಥರಾದ ಏರ್ ಮಾಷ೯ಲ್ ನಾಗೇಶ್ ಕಪೂರ್ ಸ್ಮಾರಕ ಭವನದ ಬಗ್ಗೆ ಮತ್ತು ವೀರಸೇನಾಧಿಕಾರಿ ಜನರಲ್ ತಿಮ್ಮಯ್ಯ ಅವರ ಸೇನಾ ಜೀವನ ಸಂಬಂಧಿತ ಸಮಗ್ರ ಮಾಹಿತಿ ಪಡೆದರು. ಈ ಸಂದಭ೯ ಪ್ರತಿಕ್ರಿಯಿಸಿದ ಏರ್ ಮಾಷ೯ಲ್ ನಾಗೇಶ್ ಕಪೂರ್, ಭಾರತದ ವೀರಸೇನಾನಿಯ ಬಗ್ಗೆ ಸಂಪೂಣ೯ ಮಾಹಿತಿಯುಳ್ಳ ಸ್ಮಾರಕ ಭವನಕ್ಕೆ ಭೇಟಿ ನೀಡಿದ್ದು, ಅಪೂವ೯ ಕ್ಷಣಗಳಾಗಿದೆ, ಈ ವೀರಸೇನಾನಿಯ ಜೀವನ ಯುವಪೀಳಿಗೆಗೆ ಆದಶ೯ಪ್ರಾಯವಾಗಬೇಕೆಂದು ಅಭಿಪ್ರಾಯಪಟ್ಟರು. ಈ ಸಂದಭ೯ ಸ್ಮಾರಕ ಭವನದ ವ್ಯವಸ್ಥಾಪಕರಾದ ಸುಬೇದಾರ್ ಮೇಜರ್ ಗೌಡಂಡ ತಿಮ್ಮಯ್ಯ ಅವರು ಭವನದ ಮಾಹಿತಿ ನೀಡಿದರು. ಕನ್ಡಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿದೇ೯ಶಕ ಕುಮಾರ್, ಸೈನಿಕ ಕಲ್ಯಾಣಾಧಿಕಾರಿ ಬಿ.ಆರ್. ಶೆಟ್ಟಿ , ಜನರಲ್…

Read More

ಮಡಿಕೇರಿ NEWS DESK ಜ.10 : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದಲ್ಲಿ ಉಂಟಾಗಿರುವ ಭಿನ್ನಾಭಿಪ್ರಾಯಗಳನ್ನು ಶಮನ ಮಾಡಲು ಎಲ್ಲರೂ ಒಗ್ಗಟ್ಟಾಗಿ ಪ್ರಯತ್ನಿಸಬೇಕೆ ಹೊರತು ಮತ್ತೆ ಅಶಾಂತಿಗೆ ಪ್ರಚೋದನೆ ನೀಡಬಾರದು ಎಂದು ಕೊಡಗು ಜಿಲ್ಲಾ ಒಕ್ಕಲಿಗರ ಸಂಘ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ.ಚಂಗಪ್ಪ ಅವರು ಕೆಲವರು ಒಂದು ಗ್ರಾಮದ ದೇವಾಲಯದಲ್ಲಿ ಎದುರಾದ ಭಿನ್ನಾಭಿಪ್ರಾಯವನ್ನೇ ಬಂಡವಾಳ ಮಾಡಿಕೊಂಡು ಜಾತಿ ನಿಂದನೆ ಮತ್ತು ಪ್ರಚೋದನೆಯಲ್ಲಿ ತೊಡಗಿರುವುದನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ. ವಿನಾಕಾರಣ ಇಲ್ಲಸಲ್ಲದ ಗೊಂದಲಗಳನ್ನು ಸೃಷ್ಟಿಸಿ ಸಮಾಜದಲ್ಲಿ ಯಾರೂ ಅಶಾಂತಿ ಮೂಡಿಸಬಾರದು. ದೇವರು ಅಥವಾ ದೇವಾಲಯದ ಹೆಸರಿನಲ್ಲಿ ಹೇಳಿಕೆ ಪ್ರತಿ ಹೇಳಿಕೆಗಳನ್ನು ನೀಡಿ ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸುತ್ತಿರುವ ಬೆಳವಣಿಗೆ ಪ್ರಜ್ಞಾವಂತರ ಜಿಲ್ಲೆ ಕೊಡಗು ತಲೆತಗ್ಗಿಸುವಂತ್ತಾಗಿದೆ. ಜಿಲ್ಲಾಧಿಕಾರಿಗಳು ಈಗಾಗಲೇ ಶ್ರೀ ಮಹಾಮೃತ್ಯುಂಜಯ ದೇವಾಲಯ ಸಮಿತಿಗೆ ಗೊಂದಲ ನಿವಾರಣೆಗೆ ಫೆ.10 ರವರೆಗೆ ಕಾಲಾವಕಾಶವನ್ನು ನೀಡಿದ್ದು, ಜಿಲ್ಲಾಡಳಿತದ ಆದೇಶವೇ ಅಂತಿಮ ಪರಿಹಾರ ಎನ್ನಿಸಿಕೊಳ್ಳುತ್ತದೆ. ಇದನ್ನು ತಾಳ್ಮೆಯಿಂದ ನಿರೀಕ್ಷಿಸುವ ಬದಲು ಜಾತಿಯ ಹೆಸರಿನಲ್ಲಿ…

Read More

ಬೆಂಗಳೂರು ಜ.10 NEWS DESK : ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಇಂದು ಬಿಜೆಪಿ ಮಾಜಿ ಸಚಿವರು, ಮಾಜಿ ಶಾಸಕರು, ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯರ ವಿಶೇಷ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಸಚಿವರು, ಮಾಜಿ ಶಾಸಕರು, ಪರಿಷತ್‌ ಸದಸ್ಯರು, ರಾಜ್ಯ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ಜ.10 NEWS DESK : ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಜ.12 ರಿಂದ 18ರ ವರೆಗೆ ಜಿಲ್ಲೆಯ ಯುವಕ ಸಂಘ, ಯುವತಿ ಮಂಡಳಿ, ಮಹಿಳಾ ಸಮಾಜ ಹಾಗೂ ಶಾಲಾ ಕಾಲೇಜುಗಳ ಆಶ್ರಯದಲ್ಲಿ ಮಡಿಕೇರಿಯಲ್ಲಿ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ನಡೆಯಲಿದ್ದು, ಜ.13 ರಂದು ಜಿಲ್ಲಾ ಮಟ್ಟದ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾಡಳಿತ, ಜಿ.ಪಂ ಕೊಡಗು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಮಡಿಕೇರಿ, ಜಿಲ್ಲಾ ಯುವ ಒಕ್ಕೂಟ ಕೊಡಗು, ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಜಿಲ್ಲೆಯ ಯುವಕ ಸಂಘ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು. ಜ.13 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿರುವ ಜಿಲ್ಲಾ…

Read More

ವಿರಾಜಪೇಟೆ ಜ.16 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿರಾಜಪೇಟೆ ಬಿ.ಸಿ ಟ್ರಸ್, ಸ್ವಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಭತ್ತದ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮವು ಅಮ್ಮತ್ತಿ ವಲಯದ ಹಾಲ್ಗುಂದ ಕಾರ್ಯಕ್ಷೇತ್ರದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪ್ರಗತಿಪರ ಕೃಷಿಕ ನಾಣಯ್ಯ ಮಾತನಾಡಿ, ಯಂತ್ರಶ್ರೀ ಭತ್ತದ ಬೇಸಾಯದಿಂದ ಕಡಿಮೆ ಖರ್ಚು ಅಧಿಕ ಇಳುವರಿ ಪಡೆಯಬಹುದು. ಮುಂದಿನ ದಿನಗಳಲ್ಲಿ ಯಂತ್ರಶ್ರೀ ಭತ್ತದ ಬೇಸಾಯ ಮಾಡಿ ಎಂದು ಮಾಹಿತಿ ನೀಡಿದರು. ಕೃಷಿ ಮೇಲ್ವಿಚಾರಕ ವಸಂತ್ ಭತ್ತದ ಸಸಿ ಮಡಿ ಟ್ರೇಗಳ ಬಳಕೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಹಾಲ್ಗುಂದ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸ್ಮಿತಾ, ಒಕ್ಕೂಟದ ಅಧ್ಯಕ್ಷರಾದ ನೇತ್ರಾವತಿ, ಕಾರ್ಯದರ್ಶಿ ರತ್ನ, ಗದ್ದೆಯ ಮಾಲೀಕರಾದ ತಾಯಮ್ಮ, ಊರಿನ ಗ್ರಾಮಸ್ಥರು, ಸಂಘದ ಸದಸ್ಯರು, ಹಾಲ್ಗುಂದ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಮೀನಾಕ್ಷಿ, ಚೆಂಬೆಬೆಳ್ಳೂರು ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ದೇವಕ್ಕಿ ಹಾಜರಿದ್ದರು.

Read More

ಮಡಿಕೇರಿ ಜ.10 NEWS DESK : ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಲೋಕೋಪಯೋಗಿ ಸಚಿವರಾದ  ಸತೀಶ್ ಜಾರಕಿಹೊಳಿ ಅವರನ್ನು ಆನೆ ಚೌಕೂರ್ ಗೇಟ್ ಬಳಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ  ಧರ್ಮಜ ಉತ್ತಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಸ್ವಾಗತಿಸಿದರು.  ಸಚಿವರೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹಾಗೂ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್. ಮೆಹರೋಜ್ ಖಾನ್ ಮತ್ತಿತರ ಪ್ರಮುಖರು ಆಗಮಿಸಿದರು. ಈ ಸಂದರ್ಭ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಹಿರಿಯ-ಕಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Read More

ಮಡಿಕೇರಿ ಜ.10 NEWS DESK : ಶ್ರೀ ಕಾವೇರಮ್ಮೆ ಕೊಡವ ಮತ್ತು ಅಮ್ಮಕೊಡವ ಹಿತರಕ್ಷಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಲೋಕ ಕಲ್ಯಾಣಕ್ಕಾಗಿ ಜ.15 ರಂದು ಕಾವೇರಿ ಕ್ಷೇತ್ರವಾದ ಭಾಗಮಂಡಲದ ಟ್ರಸ್ಟ್‍ನ ಜಾಗದಲ್ಲಿ 12ನೇ ವರ್ಷದ ‘ಚಂಡಿಕಾ ಹೋಮ’ವನ್ನು ಒಳಗೊಂಡಂತೆ ವಿವಿಧ ಪೂಜಾ ಕಾರ್ಯಗಳು ನಡೆಯಲಿದೆ ಎಂದು ಟ್ರಸ್ಟ್‍ನ ಅಧ್ಯಕ್ಷ ಮುದ್ದಂಡ ಬಿ.ದೇವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ಬೆಳಗ್ಗೆ 7 ಗಂಟೆಯಿಂದ ಶ್ರೀ ಗಣಪತಿ ಹೋಮ, ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ, ಶತರುದ್ರ ಪಠಣ ಹಾಗೂ ಚಂಡಿಕಾ ಹೋಮ ನಡೆಯಲಿದೆ. ಜಿಲ್ಲೆಯ ಕೊಡವ ಮತ್ತು ಅಮ್ಮಕೊಡವ ಜನಾಂಗ ಬಾಂಧವರು ಒಂದಾಗಿ ಸೇರಿ ಟ್ರಸ್ಟ್‍ನ ಸಹಯೋಗದಲ್ಲಿ ಚಂಡಿಕಾ ಹೋಮವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು. ಈ ಹಿಂದೆ ಅಷ್ಟಮಂಗಲ ಪ್ರಶ್ನೆಯ ಸಂದರ್ಭ ಕಂಡು ಬಂದ ದೋಷಗಳ ನಿವಾರಣೆಗಾಗಿ ನಿರಂತರವಾಗಿ ಚಂಡಿಕಾ ಯಾಗವನ್ನು ನಡೆಸಿಕೊಂಡು ಬರಲಾಗುತ್ತಿದೆ. ಧಾರ್ಮಿಕ ಕಾರ್ಯ ಮುಂದೆಯೂ ನಡೆಸಿಕೊಂಡು ಹೊಗಬೇಕೆಂದು ಇದ್ದಲ್ಲಿ ಅದಕ್ಕೂ ಟ್ರಸ್ಟ್ ಸಿದ್ಧವಿರುವುದಾಗಿ…

Read More

ಮಡಿಕೇರಿ ಜ.10 NEWS DESK : ಕಟ್ಟೆಮಾಡು ಗ್ರಾಮದ ಶ್ರೀಮಹಾಮೃತ್ಯುಂಜಯ ದೇವಾಲಯದ ವಸ್ತ್ರ ಸಂಹಿತೆ ಕುರಿತು ಉಂಟಾಗಿರುವ ಗೊಂದಲ ನಿವಾರಣೆಗೆ ಫೆ.10 ರವರೆಗೆ ಜಿಲ್ಲಾಧಿಕಾರಿಗಳು ಕಾಲಾವಕಾಶ ನೀಡಿದ್ದು, ಅಷ್ಟರೊಳಗೆ ಕಟ್ಟೆಮಾಡು ಗ್ರಾಮಸ್ಥರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಶ್ರೀಮಹಾಮೃತ್ಯುಂಜಯ ದೇವಾಲಯ ಸಮಿತಿಯ ಅಧ್ಯಕ್ಷ ಶಶಿ ಜನಾರ್ಧನ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಧ್ಯದಲ್ಲೇ ಗ್ರಾಮಸ್ಥರ ಸಭೆಯ ದಿನಾಂಕವನ್ನು ತಿಳಿಸಲಾಗುವುದು, ಈ ಸಭೆಯ ಮೂಲಕ ಭಿನ್ನಾಭಿಪ್ರಾಯಗಳು ಸುಖಾಂತ್ಯಗೊಳ್ಳಲಿದೆ ಎನ್ನುವ ವಿಶ್ವಾಸವಿದೆ. ಸಭೆಯಲ್ಲಿ ಸಂಗ್ರಹಿಸಲಾಗುವ ಅಭಿಪ್ರಾಯದ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಫೆ.10 ರಂದು ನೀಡಲಾಗುವುದು ಎಂದರು. ಈ ಹಿಂದೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರನ್ನು ಸಮಿತಿ ಭೇಟಿ ಮಾಡಿದ ಸಂದರ್ಭ ಜಿಲ್ಲಾಡಳಿತದ ಬಳಿ ಕಾಲಾವಕಾಶ ಕೋರುವಂತೆ ಅವರು ಸಲಹೆ ನೀಡಿದ್ದರು. ಅದರಂತೆ ನಾವು ಕಾಲಾವಕಾಶ ಕೋರಿಕೊಂಡೆವು ಎಂದು ತಿಳಿಸಿದರು. ನೋಂದಣಿಯಾಗಿರುವ ದೇವಾಲಯ ಸಮಿತಿಯ ಬೈಲಾದಲ್ಲಿ ಯಾವುದೇ ಸಾಂಪ್ರದಾಯಿಕ ಉಡುಗೆ ತೊಡುಗೆ ತೊಡಲು ಮತ್ತು ಕಟ್ಟುಪಾಡು ಆಚರಿಸಲು…

Read More

ಮಡಿಕೇರಿ ಜ.10 NEWS DESK : ಕೊಡಗಿನಲ್ಲಿರುವ ಗೌಡರು ತಲೆತಲಾಂತರಗಳಿಂದ ಇಲ್ಲೇ ಹುಟ್ಟಿ ಬೆಳೆದವರಾಗಿದ್ದು, ಎಲ್ಲಾ ಜಾತಿ ಜನಾಂಗಗಳೊಂದಿಗೆ ಅನ್ಯೋನ್ಯತೆಯಿಂದ ಬದುಕು ಸಾಗಿಸುತ್ತಿದ್ದಾರೆ. ಆದರೆ ಸಂಘಟನೆಯೊಂದು ಕೊಡಗಿನ ಗೌಡರನ್ನು ಆಂಧ್ರದಿಂದ ಬಂದವರು ಎಂದು ನಿಂದನೆ ಮಾಡುವ ಮೂಲಕ ಸಮಾಜದಲ್ಲಿ ವಿಷಬೀಜ ಬಿತ್ತುವ ಕಾರ್ಯವನ್ನು ಮಾಡುತ್ತಿದೆ ಎಂದು ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷ ಕೊಡಪಾಲು ಗಣಪತಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಾತಿ ಜಾತಿಗಳ ಮಧ್ಯೆ ವಿಷಬೀಜ ಬಿತ್ತುವ ಕಾರ್ಯ ಮುಂದುವರೆದರೆ ಮುಂದಿನ ದಿನಗಳಲ್ಲಿ ಕೊಡಗು ಕೊಡಗಾಗಿ ಉಳಿಯುವುದಿಲ್ಲ. ತಲೆತಲಾಂತರಗಳಿಂದ ಕೊಡಗಿನಲ್ಲೇ ಹುಟ್ಟಿ ಬೆಳೆದ ಗೌಡರು ಎಲ್ಲರೊಂದಿಗೆ ಸಾಮರಸ್ಯದಿಂದ ಜೀವನ ನಡೆಸುತ್ತಿದ್ದಾರೆ. ಕೊಡವರು ಹಾಗೂ ಗೌಡರು ಒಗ್ಗಟ್ಟಿನಿಂದ ಇದ್ದಾರೆ, ಆದರೆ ಸಂಘನೆಯೊಂದು ಒಡಕು ಮೂಡಿಸುವ ಕಾರ್ಯವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇತ್ತೀಚೆಗೆ ಚೇರಂಬಾಣೆಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳನ್ನು ಒಂದು ಸಮುದಾಯಕ್ಕೆ ಸೀಮಿತ ಮಾಡಿ ಘೋಷಣೆ ಕೂಗಿದ್ದಾರೆ. ಇಡೀ…

Read More

ಮಡಿಕೇರಿ ಜ.10 NEWS DESK : ಕುಂದಚೇರಿ ಗ್ರಾಮ ಪಂಚಾಯಿತಿಗೆ ಒಳಪಡುವ ಕೋಪಟ್ಟಿ ದೇವಸ್ಥಾನ, ಕೋಪಟ್ಟಿ ಶಾಲೆ, ಚೆರಂಡೇಟಿ, ಚಿಟ್ಟಿಮಾನಿ ಪದಕಲ್ಲು, ಕೋಡಿ ಮೊಟ್ಟೆ, ತಾಪ್ರಿಕಾಡು, ಪೂವಲೆ ಮಾನಿ, ಸಿಂಗತ್ತೂರು ಸೇರಿದಂತೆ ಒಟ್ಟು 9 ಅಂಗನವಾಡಿ ಕೇಂದ್ರಗಳಿಗೆ ಕೊಡುಗೆ ನೀಡಲಾಯಿತು. ಮೇಲ್ವಿಚಾರಕಿಯವರ ಮಾರ್ಗದರ್ಶನದಂತೆ ಅಂಗನವಾಡಿ ಕಾರ್ಯಕರ್ತೆಯರಾದ ಸುಶಿ, ಯೋಗ್ಯತಾ, ಈಶ್ವರಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ ಹಾಗೂ ಸದಸ್ಯರೊಂದಿಗೆ ಚೇರುಗಳ ಬೇಡಿಕೆಯನ್ನು ಸಲ್ಲಿಸಿದ್ದರು. ಅವರ ಕೋರಿಕೆಯಂತೆ ಚೆಟ್ಟಿಮಾನಿ ಅಂಗನವಾಡಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಚೇರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭ ಮಾತನಾಡಿದ ಗ್ರಾ.ಪಂ ಅಧ್ಯಕ್ಷ ದಿನೇಶ್ ಅಂಗನವಾಡಿ ಕೇಂದ್ರವನ್ನು ಮಾದರಿ ಅಂಗನವಾಡಿ ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ತಿಳಿಸಿದರು. ಸದಸ್ಯರಾದ ಹ್ಯಾರಿಸ್ ಮಾತನಾಡಿ ಕುಂದಾಚೇರಿ ಗ್ರಾ.ಪಂ ಗೆ ಒಳಪಟ್ಟ 9 ಅಂಗನವಾಡಿ ಕಾರ್ಯಕರ್ತೆಯರು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಗ್ರಾಮ ಪಂಚಾಯತಿಯಿಂದ ದೊರಕುವಂತ ಎಲ್ಲ ಸೌಲಭ್ಯಗಳನ್ನು ಅಂಗನವಾಡಿ ಕೇಂದ್ರಗಳಿಗೆ ನೀಡಲಾಗುವುದು ಎಂದು ತಿಳಿಸಿದರು. ಪ್ರಭಾರ ಸಹಾಯಕ ಶಿಶು…

Read More