ಮಡಿಕೇರಿ NEWS DESK ನ.28 : ದೇಶ ಕಂಡ ಅಪ್ರತಿಮ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿದ ಆರೋಪಿಯನ್ನು ಗಡಿಪಾರು ಮಾಡಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶ್ರೀ ವಿಶ್ವಕರ್ಮ ಸಮುದಾಯ ಜಾಗೃತ ಸೇವಾ ಟ್ರಸ್ಟ್ ನ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇಬ್ಬರು ವೀರ ಸೇನಾಧಿಕಾರಿಗಳನ್ನು ಅಪಮಾನಿಸಿರುವ ಪ್ರಕರಣ ದೇಶದ ಇಡೀ ಸೇನಾ ವ್ಯವಸ್ಥೆಗೆ ತೋರಿದ ಅಗೌರವವಾಗಿದೆ. ಆದ್ದರಿಂದ ಇದನ್ನು ದೇಶದ್ರೋಹದ ಪ್ರಕರಣವೆಂದು ಪರಿಗಣಿಸಬೇಕು ಮತ್ತು ಆರೋಪಿಯ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸಿದ್ದಾರೆ. ಭಾರತರತ್ನ ಗೌರವಕ್ಕೆ ಸಮಾನರಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಭಾರತೀಯ ಸೇನೆಗೆ ನೀಡಿದ ಮಹತ್ವದ ಕೊಡುಗೆಗಳ ಬಗ್ಗೆ ಅರಿವಿಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿರುವುದು ಖಂಡನೀಯ. ಭಾರತ ದೇಶದ ಭದ್ರತೆ ಮತ್ತು ಜನರ ರಕ್ಷಣೆಗಾಗಿ ಸೇನಾಪಡೆಯ ಶಕ್ತಿಯನ್ನು ಹೆಚ್ಚಿಸಿ ದೇಶಭಕ್ತಿ ಮೆರೆದ…
ಲೇಖಕ: admin
ಪುತ್ತೂರು ನ.28 NEWS DESK : ವಾಲಿಬಾಲ್ ಒಂದು ಪ್ರಾಚೀನ ಕ್ರೀಡೆ. ದೈಹಿಕ ಮತ್ತು ಮಾನಸಿಕ ಕ್ಷಮತೆಯನ್ನು ಬಯಸುವ ಈ ಕ್ರೀಡೆಗೆ ಇತ್ತಿಚಿನ ದಿನಗಳಲ್ಲಿ ಪ್ರೋತ್ಸಾಹ ಕಡಿಮೆಯಾಗುತ್ತಿರುವುದು ಖೇದಕರ ಎಂದು ಪುತ್ತೂರು ವಾಲಿಬಾಲ್ ಅಸೋಸಿಯೇಶನ್‍ನ ಅಧ್ಯಕ್ಷ ಸತೀಶ್ ರೈ ಕಟ್ಟಾವು ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆಯುತ್ತಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತಾಡಿದರು. ಅತಿ ಕಡಿಮೆ ಪರಿಕರ ಹಾಗೂ ಜಾಗದ ಅವಶ್ಯಕತೆ ಉಳ್ಳ ಈ ಕ್ರೀಡೆಯನ್ನು ಉಳಿಸಿ ಬೆಳೆಸುವ ಜವಾಬ್ಧಾರಿ ಇಂದಿನ ಯುವಜನತೆಗೆ ಇದೆ ಎಂದರು. ಗೌರವ ಅತಿಥಿಗಳಾಗಿ ಆಗಮಿಸಿದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಸಂತೋಷ್ ಕುತ್ತಮೊಟ್ಟೆ ಮಾತನಾಡಿ, ಮನಸ್ಸಿನ ಒತ್ತಡವನ್ನು ಕಡಿಮೆಗೊಳಿಸುವ ಕ್ರೀಡೆಗಳು ಶಾರೀರಿಕ ಉತ್ತೇಜನವನ್ನು ನೀಡುತ್ತವೆ. ಇಂಜಿನಿಯರಿಂಗ್ ನಂತಹ ವೃತ್ತಿಪರ ಕಲಿಕಾ ವಿಭಾಗಗಳಲ್ಲಿ ಕ್ರೀಡಾಕೂಟಗಳನ್ನು ಸಂಘಟಿಸುವುದು ಮತ್ತು ಅದರಲ್ಲಿ ಪಾಲ್ಗೊಳ್ಳುವುದು ಕಷ್ಟಕರ. ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲರೂ ಅಭಿನಂದನಾರ್ಹರು ಎಂದರು.…
ಮಡಿಕೇರಿ NEWS DESK ನ.28 : ಸಾಮಾಜಿಕ ಜಾಲತಾಣಗಳಲ್ಲಿ ದೇಶದ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳಿಗೆ ಅಗೌರವ ತೋರಿದ ಪ್ರಕರಣವನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಬೇಕೆಂದು ಮಡಿಕೇರಿಯ ಉದ್ಯಮಿ ಹಾಗೂ ಭಗವಾನ್ ಸಂಸ್ಥೆಯ ಮಾಲೀಕರಾದ ಬಿ.ಡಿ.ಮಂಜುನಾಥ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಭಾರತೀಯ ಸೇನಾ ಕ್ಷೇತ್ರದ ಮಹಾನ್ ಚೇತನಗಳ ಬಗ್ಗೆ ಸಮಾಜಕ್ಕೆ ತಪ್ಪು ಅಭಿಪ್ರಾಯ ಮೂಡಿಸಲಾಗಿದೆ. ಅಪ್ರತಿಮ ವೀರರಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳಿಗೆ ಮಾಡಿದ ಅಪಮಾನ ಇಡೀ ಕೊಡಗಿನ ಜನರಿಗೆ ತೋರಿದ ಅಗೌರವವಾಗಿದೆ. ದೇಶಭಕ್ತಿ ಮತ್ತು ಸೇನಾಶಕ್ತಿಯ ಮೇಲಿನ ಭಾವನೆಗೆ ಚ್ಯುತಿ ತರುವ ಕಿಡಿಗೇಡಿ ಕೃತ್ಯವಾಗಿದೆ ಎಂದು ಆರೋಪಿಸಿದ್ದಾರೆ. ಇದು ಅತ್ಯಂತ ಗಂಭೀರ ಪ್ರಕರಣವಾಗಿದ್ದು, ಗೃಹ ಇಲಾಖೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ದೇಶದ್ರೋಹ ಸೇರಿದಂತೆ ಸೂಕ್ತ ಪ್ರಕರಣಗಳನ್ನು ದಾಖಲಿಸಿ ಆರೋಪಿ ಶಿಕ್ಷೆಯಿಂದ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಬೇಕು ಮತ್ತು ಗಡಿಪಾರಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸೇನೆಗೆ ಸೇರುವ ಯುವ ಸಮೂಹಕ್ಕೆ ಪ್ರೇರಣೆಯಾಗಿರುವ ಇಬ್ಬರು ವೀರಸೇನಾನಿಗಳ…
ಮಡಿಕೇರಿ ನ.28 NEWS DESK : ಬಾಳುಗೋಡುವಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಾಂಸ್ಕೃತಿಕ ಕೇಂದ್ರದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ “ಕೊಡವ ನಮ್ಮೆ” ಕೊಡವ ಸಮಾಜಗಳ ನಡುವಿನ ಹಾಕಿ ಪಂದ್ಯಾವಳಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಚಾಮುಂಡಿ ದೇವಾಲಯ ಮತ್ತು ಮೈದಾನದಲ್ಲಿ ಪೂಜೆ ನೆರವೇರಿದ ಶಾಸಕರು, ನಂತರ ಆಟಗಾರರಿಗೆ ಶುಭಹಾರೈಸಿದರು. ಈ ಸಂದರ್ಭ ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಮತ್ತು ಕೊಡವ ಸಮಾಜಗಳ ಒಕ್ಕೂಟ ಸಮಿತಿ ಸದಸ್ಯರು, ಆಯೋಜಕರು ಮತ್ತು ಪ್ರಮುಖರು ಹಾಜರಿದ್ದರು.
ಸುಂಟಿಕೊಪ್ಪ ನ.28 NEWS DESK : ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಎನ್‍ಸಿಸಿ ದಿನಾಚರಣೆಯ ಅಂಗವಾಗಿ ಸ್ಥಳೀಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ವಿದ್ಯಾಸಂಸ್ಥೆಯ ವ್ಯವಸ್ಥಾಪಕರಾದ ಧರ್ಮಗುರು ರೆ.ಫಾ.ವಿಜಯ್ ಕುಮಾರ್ ಅವರ ನೇತೃತ್ವದಲ್ಲಿ ಎನ್‍ಸಿಸಿ ಕೆಡೆಟ್‍ಗಳು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್, ಕಸ ಕಡ್ಡಿಗಳು, ಇನ್ನಿತರ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ಸ್ವಚ್ಛಗೊಳಿಸಿದರು. ಅಲ್ಲದೇ ಸಾರ್ವಜನಿಕರಿಗೆ ಸ್ವಚ್ಛತೆಯ ಮಹತ್ವದ ಕುರಿತು ಅರಿವು ಮೂಡಿಸಿದರು. ಈ ಸಂದರ್ಭ ಪ್ರಾಚಾರ್ಯರಾದ ಸೆಲ್ವರಾಜ್, ಸಿಟಿ ಓ ಹಮೀದ್ ಹಾಗೂ ಶಿಕ್ಷಕರು ಇದ್ದರು.
ಬೆಂಗಳೂರು ನ.28 NEWS DESK : ನೂರಾರು ಚಲನಚಿತ್ರಗಳಿಗೆ ಪೋಸ್ಟರ್ ಡಿಸೈನ್ ಮೂಲಕವೆ ಜೀವಕಳೆ ತುಂಬಿ ಪ್ರೇಕ್ಷಕರನ್ನು ಸೆಳೆದು ಚಿತ್ರಗಳ ಯಶಸ್ಸಿಗೆ ಕಾರಣರಾಗುತ್ತಿರುವ ತೆರೆಮರೆಯ ಚಲನಚಿತ್ರ ಪ್ರಚಾರ ಕಲಾವಿದರಾದ ‘ದೇವು’ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮೂಲತಃ ಹಾಸನ ಜಿಲ್ಲೆಯವರಾದದೇವು ಚಲನಚಿತ್ರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಪರಿಗಣಿಸಿ ಬೆಂಗಳೂರಿನ ಕಲಾಭೂಮಿ ಪ್ರತಿಷ್ಠಾನ, ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಮಾಡಿದ್ದು, ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಭವನದಲ್ಲಿ ನ.29 ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನ ತಿಳಿಸಿದೆ. ಇದಕ್ಕಾಗಿ ದೇವು ಆಪ್ತರು, ಹಿತೈಸಿಗಳು, ಚಲನಚಿತ್ರ ಪತ್ರಕರ್ತರಾದ ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಿಗಿ ಮೊದಲಾದವರು ಅಭಿನಂದಿಸಿದ್ದಾರೆ.
ಮಡಿಕೇರಿ ನ.28 NEWS DESK : ಕೊಡಗು ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಯ ವಾರ್ಷಿಕ ಮಹಾಸಭೆಯು ನಗರದ ಮಯೂರ ವ್ಯಾಲಿ’ ಹೊಟೇಲು ಸಭಾಂಗಣದಲ್ಲಿ ನಡೆಯಿತು. ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಜರುಗಣಪತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಕೆಲವು ಸುತ್ತೋಲೆಗಳಿಂದ ಖಾಸಗಿ ಶಾಲೆಗಳಿಗೆ ಆಗುತ್ತಿರುವ ಅನಾನುಕೂಲದ ಬಗ್ಗೆ ಚರ್ಚಿಸಲಾಯಿತು. ಖಾಸಗಿ ಶಾಲೆಗಳ ನಿಯಮಾನುಸಾರ, ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಹಾಗೂ ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಒಕ್ಕೂಟದ ಜೊತೆ ನಿಕಟ ಸಂಪರ್ಕ ಇಟ್ಟುಕೊಂಡು ಸರ್ಕಾರದೊಂದಿಗೆ ರಾಜ್ಯಮಟ್ಟದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ತಿರ್ಮಾನಿಸಲಾಯಿತು. ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಕಲ್ಯಾಣ ನಿಧಿಗಳಿಂದ ನೀಡಲಾಗುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಸೂಚಿಸಲಾಯಿತು. ಶಾಲೆಗಳ ಕಟ್ಟಡ ಸುರಕ್ಷತೆ, ಅಗ್ನಿ ಸುರಕ್ಷತೆಯ ನಿಯಮಾವಳಿಗಳಲ್ಲಿ ಸಡಲಿಕೆ ಮಾಡಿರುವುದರಿಂದ ಶಾಲೆಗಳು ಮಕ್ಕಳ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ತಿಳಿಸಲಾಯಿತು. ಸದಸ್ಯರಾದ ಜಿ.ಹೆಚ್. ಮೊಹಮದ್ ಹನೀಫ್ ಸೂಚಿಸಿದ…
ಮಡಿಕೇರಿ ನ.28 NEWS DESK : ವಿರಾಜಪೇಟೆಯ ವಿದ್ಯಾನಗರ ಮತ್ತು ವಿಜಯ ನಗರ 3ನೇ ಹಂತ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ಇಲಾಖೆ ಅನುದಾನದಲ್ಲಿ ನೂತನ ರಸ್ತೆ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ರಂಜಿ ಪೂಣಚ್ಚ, ಮದಂಡ ತಿಮಯ್ಯ ಪುರಸಭೆ ಅಧ್ಯಕ್ಷರು ದೇಚಮ್ಮ ಕಾಳಪ್ಪ ಉಪಅಧ್ಯಕ್ಷರು, ಪುರಸಭೆ ಸದಸ್ಯರಾದ ಮೊಹಮ್ಮದ್ ರಾಫಿ,ಮತಿನ್ ಪ್ರಮುಖರು ಹಾಜರಿದ್ದರು.
ಮಡಿಕೇರಿ ನ.28 NEWS DESK : ಕಲ್ಲಿಕೋಟೆಯ ಐ.ಸಿ.ಎ.ಆರ್ ಭಾರತೀಯ ಸಂಬಾರ ಬೆಳೆಗಳ ಸಂಶೋಧನ ಸಂಸ್ಥೆ ಸುವರ್ಣ ಮಹೋತ್ಸವದ ಅಂಗವಾಗಿ ಅಪ್ಪಂಗಳದಲ್ಲಿ ಐ.ಸಿ.ಎ.ಆರ್ ಭಾರತೀಯ ಸಂಬಾರ ಬೆಳೆಗಳ ಸಂಶೋಧನ ಸಂಸ್ಥೆಯ ಪ್ರಾದೇಶಿಕ ಕೇಂದ್ರದಲ್ಲಿ “ಕರಿಮೆಣಸಿನ ಸುಧಾರಿತ ಮತ್ತು ಸುಸ್ಥಿರ ಕೃಷಿ ತಂತ್ರಜ್ಞಾನಗಳು” ಎಂಬ ವಿಷಯದ ಕುರಿತು ಬೆಳೆಗಾರರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಪ್ರಗತಿಪರ ರೈತ ಶ್ಶ್ಯಾಮ್ ಅಯ್ಯಪ್ಪ ಉದ್ಘಾಟಿಸಿ ತಮ್ಮ ಕೃಷಿ ಅನುಭವವನ್ನು ಹಂಚಿಕೊಂಡರು. ಅಪ್ಪಂಗಳ ಐ.ಸಿ.ಎ.ಆರ್.ಐ.ಐ. ಎಸ್.ಆರ್, ಪ್ರಾದೇಶಿಕ ಕೇಂದ್ರದ ಮುಖ್ಯಸ್ಥರಾದ ಡಾ. ಎಸ್.ಜೆ.ಅಂಕೆಗೌಡ ಮಾತಾನಾಡಿ ಐ. ಐ. ಎಸ್. ಆರ್. ಪ್ರಾದೇಶಿಕ ಕೇಂದ್ರದ ಕಾಳುಮೆಣಸಿನ ಸಂಶೋಧನ ಕಾರ್ಯಗಳ ಬಗ್ಗೆ ಮತ್ತು ಕರ್ನಾಟಕದಲ್ಲಿ ಕಾಳುಮೆಣಸಿನ ಉತ್ಪಾದನೆಯ ಬಗ್ಗೆ ಮಾಹಿತಿ ನೀಡಿದರು. ತರಬೇತಿ ಕಾರ್ಯಾಗಾರದಲ್ಲಿ ಕಾಳುಮೆಣಸಿನ ತಳಿ ವೈವಿಧ್ಯತೆ, ಗುಣಮಟ್ಟದ ಸಸ್ಯಾಭಿವೃದ್ದಿ ವಿಧಾನಗಳು, ವೈಜ್ಞಾನಿಕ ಕೃಷಿ ಪದ್ಧತಿಗಳು, ರೋಗ ಮತ್ತು ಕೀಟ ನಿರ್ವಹಣೆ ಬಗ್ಗೆ ಐ.ಸಿ.ಎ.ಆರ್.-ಐ.ಐ.ಎಸ್.ಆರ್, ಪ್ರಾದೇಶಿಕ ಕೇಂದ್ರದ ವಿಜ್ಞಾನಿಗಳು ಮಾಹಿತಿ ನೀಡಿದರು. ತರಬೇತಿ ಕಾರ್ಯಾಗಾರವನ್ನು ಐ.ಸಿ.ಎ.ಆರ್.…
ಮಡಿಕೇರಿ ನ.28 NEWS DESK : ಮಡಿಕೇರಿ ನಗರ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಆಟೋ ಚಾಲಕ-ಮಾಲೀಕರ ಸಂಘದ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಸಭೆ ನಡೆಯಿತು. ಸಂಚಾರಿ ಠಾಣಾಧಿಕಾರಿ ಶ್ರೀಧರ್, ಎಸ್.ಐ.ತಮ್ಮಯ್ಯ, ಎ.ಎಸ್.ಐ. ಐಪಿ ನಂದ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚಾಲಕರ ವಿವಿಧ ಸಮಸ್ಯೆಗಳನ್ನು ಆಲಿಸಲಾಯಿತು. ಅಲ್ಲದೆ ಇಲಾಖೆ ಮೂಲಕವೂ ಅಗತ್ಯ ಸೂಚನೆ ನೀಡಲಾಯಿತು. ಸಂಘದ ಅಧ್ಯಕ್ಷ ಮೇದಪ್ಪ ಅರುಣ, ಕಾರ್ಯದರ್ಶಿ ಬಾರನ ದಿನೇಶ್, ಸುಲೇಮಾನ್, ಮತ್ತಿತರರು ಹಾಜರಿದ್ದರು.






