ಸೋಮವಾರಪೇಟೆ ಜ.8 NEWS DESK : ತೋಳೂರುಶೆಟ್ಟಳ್ಳಿ ನಡ್ಲಕೊಪ್ಪ ಗುಂಪು ಸಮಿತಿಯ ವಾರ್ಷಿಕ ಮಹಾಸಭೆ ಇಬ್ಬನಿ ಹೋಂಸ್ಟೇಯಲ್ಲಿ ನಡೆಯಿತು. ಸಮಿತಿ ಅಧ್ಯಕ್ಷ ಟಿ.ಕೆ.ಮಾಚಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿ.ಪಂ ಸಹಾಯಕ ಕಾರ್ಯಪಾಲಕ ಅಭಿಯಂತರ ಎಂ.ಪಿ.ವೀರೇಂದ್ರ, ನಿವೃತ್ತ ಮುಖ್ಯ ಶಿಕ್ಷಕ ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಸಿ.ಕೆ.ಶಿವಕುಮಾರ್ ಅವರುಗಳನ್ನು ಸನ್ಮಾನಿಸಲಾಯಿತು. ಈ ಸಂರ್ಭ ಸಮಿತಿ ಕಾರ್ಯದರ್ಶಿ ವಿ.ವಿ.ಸೋಮಯ್ಯ, ಖಜಾಂಚಿ ಎಂ.ಕೆ.ಧರ್ಮಪ್ಪ, ಗ್ರಾಮದ ಮುಖಂಡರಾದ ಹೆಚ್.ಬಿ.ರಮೇಶ, ಸುಬ್ಬಯ್ಯ, ಶಾಂತಪ್ಪ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ. ಮಲ್ಲಪ್ಪ ಮತ್ತಿತರರು ಇದ್ದರು.
ಲೇಖಕ: admin
ಸೋಮವಾರಪೇಟೆ ಜ.7 NEWS DESK : ಯಡೂರು ಗ್ರಾಮದ ಬಿ.ಟಿ.ಚೆನ್ನಯ್ಯ ಗೌರಮ್ಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿ ಸಮಿತಿ ಸಭೆ ನಡೆಯಿತು. ಸಮಿತಿ ಅಧ್ಯಕ್ಷ ಶಾಸಕ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಲೇಜಿನ ಶೈಕ್ಷಣಿಕ ಮತ್ತು ಆಡಳಿತಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲಾಯಿತು. ಕಾಲೇಜು ತರಗತಿಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳ ಪ್ರವೇಶಾತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವುದು, ಶೈಕ್ಷಣಿಕ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳನ್ನು ಕಾಲೇಜಿನಲ್ಲಿ ನಿರಂತರವಾಗಿ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದೇ ಸಂದರ್ಭ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆಸಲು ಶಾಸಕರಿಗೆ ಮನವಿ ಮಾಡಿದರು. ಶಾಸಕರು ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಮಗ್ರ ವಿಕಾಸಕ್ಕೆ ಪೂರಕವಾಗಿ ಚಟುವಟಿಕೆಗಳನ್ನು ಕೈಗೊಳ್ಳಬೇಕು. ವಿದ್ಯಾರ್ಥಿಗಳು ಡ್ರಗ್ಸ್, ಧೂಮಪಾನ ಮದ್ಯಪಾನಗಳಂತಹ ವ್ಯಸನಗಳ ಕಡೆ ವಾಲುವುದಕ್ಕೆ ಅವಕಾಶ ಮಾಡಿಕೊಡಬಾರದು. ವಿದ್ಯಾರ್ಥಿ ಹಾಜರಾತಿ ಕಡೆ ಸೂಕ್ತ ಗಮನ ನೀಡಬೇಕು. ಆಗಾಗ್ಗೆ ಪೋಷಕರ ಸಭೆ ಕರೆದು ವಿದ್ಯಾರ್ಥಿಗಳ ಪ್ರಗತಿ, ಕಲಿಕೆಯ…
ಮಡಿಕೇರಿ NEWS DESK ಡಿ.8 : ಮಡಿಕೇರಿ ನಗರಸಭಾ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಚಾಲನೆ ನೀಡಿದರು.
ಮಡಿಕೇರಿ ಜ.8 NEWS DESK : ಗಂಗೂಬಾಯಿ ಹಾನಗಲ್ ವಿಶ್ವ ವಿದ್ಯಾಲಯ ಮೈಸೂರು ನಡೆಸುವ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಮಡಿಕೇರಿಯ ಕಲಾ ಕಾವ್ಯ ನಾಟ್ಯ ಶಾಲೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದು ಉತ್ತೀರ್ಣರಾಗುವ ಮೂಲಕ ಶಾಲೆಗೆ ಶೇ.100 ರಷ್ಟು ಫಲಿತಾಂಶ ನೀಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ನೃತ್ಯಗುರು ವಿದುಷಿ ಕಾವ್ಯಶ್ರೀ ಕಪಿಲ್ ದುಗ್ಗಳ ಸಾಧನೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಜ.8 NEWS DESK : ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ಕೊಡವ ಕುಟುಂಬಗಳ ನಡುವಿನ ಹಾಕಿ ಉತ್ಸವದ 25ನೇ ವರ್ಷದ ಪಂದ್ಯಾವಳಿಯ ಜವಾಬ್ದಾರಿ ವಹಿಸಿರುವ ಮುದ್ದಂಡ ಕುಟುಂಬಸ್ಥರು ಹಾಗೂ ಪ್ರಮುಖರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿಯಾಗಿ ಜ.11ರಂದು ಮಡಿಕೇರಿಯಲ್ಲಿ ನಡೆಯಲಿರುವ ಮುದ್ದಂಡ ಕಪ್ ತಯಾರಿಗೆ ಲೋಗೋ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಲು ಆಮಂತ್ರಣ ನೀಡಿˌ ಹಾಕಿ ಉತ್ಸವ ಯಶಸ್ವಿಯಾಗಿ ಜರುಗಲು ಅಗತ್ಯ ಸಹಕಾರ ಹಾಗೂ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
ವಿರಾಜಪೇಟೆ ಜ.8 NEWS DESK : ಟಿ.ಶೆಟ್ಟಿಗೇರಿಯ ರೂಟ್ಸ್ ವಿದ್ಯಾಸಂಸ್ಥೆಯಲ್ಲಿ ಕೊಡವ ಕೂಟಾಳಿಯಡ ಕೂಟದ ಸಂಘಟನೆಯಿಂದ ಕೊಡವ ಆಟ್ ಪಾಟ್ ಪಡಿಪು ಶಿಬಿರದ ಸಮಾರೋಪ ಸಮಾರಂಭವು ಕೂಟದ ಅಧ್ಯಕ್ಷ ಚೆಟ್ಟೋಳಿರ ಶರತ್ ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರೂಟ್ಸ್ ವಿದ್ಯಾ ಸಂಸ್ಥೆಯ ಮುಖ್ಯಸ್ಥರಾದ ಮಲ್ಲಂಗಡ ನಿರನ್ ಉತ್ತಪ್ಪ ಮಾತನಾಡಿ, ಕೊಡವ ಕೂಟಾಳಿಯಡ ಕೂಟದ ಸಂಘಟನೆಯು ಸುಮಾರು ಐದು ವರ್ಷಗಳಿಂದ ಕೊಡವಾಮೆಯನ್ನು ಉಳಿಸುವ ಸಲುವಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುವುದು ಶ್ಲಾಘನೀಯ. ಕಳೆದ ವರ್ಷ ಇದೇ ಸಂಘಟನೆಯು ನಮ್ಮ ಶಾಲೆಯ ಮಕ್ಕಳಿಗೆ ಕೊಡವ ಪದ್ದತಿಯಲ್ಲಿ ಸಮ್ಮಂಧ ಅಡಕುವ ಶಿಬಿರವನ್ನು ನಡೆಸಿ ಮಕ್ಕಳಿಗೆ ತರಬೇತಿ ನೀಡಿ ಯಶಸ್ವಿಯಾಗಿದ್ದಾರೆ. ಇವರ ತರಬೇತಿಯಲ್ಲಿ ಪಳಗಿದ ಮಕ್ಕಳು ಮದುವೆ ಸಮಾರಂಭದಲ್ಲಿ ಭಾಗಿಯಾಗಿ ಯಶಸ್ವಿಯಾಗಿ ಸಮ್ಮಂಧ ಅಡಕಿರುವುದು ಹಾಗೂ ಈ ವರ್ಷದಲ್ಲಿ ಇದೇ ಸಂಘಟನೆಯವರು ನಡೆಸಿದ ಆಟ್ ಪಾಟ್ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳು ಕೋಲಾಟ್, ಬೊಳಕಾಟನ್ನು ಕಲಿತು ಮಂದ್, ಕೊಡವ ಸಮಾಜಗಳಲ್ಲಿ ಪ್ರದರ್ಶನ ನೀಡಿ…
ಮಡಿಕೇರಿ ಜ.7 NEWS DESK : ಕಾನೂನು ಸುವ್ಯವಸ್ಥೆ ಮತ್ತು ಆಂತರಿಕಾ ಭದ್ರತೆ ದೃಷ್ಟಿಯಿಂದ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಮಡಿಕೇರಿ ಹೋಬಳಿಯ, ಎಸ್.ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ಜ.7 ರ ಬೆಳಗ್ಗೆ 6 ಗಂಟೆಯಿಂದ ಜ.14 ರ ಬೆಳಗ್ಗೆ 10 ಗಂಟೆಯವರೆಗೆ ವಿಸ್ತರಿಸಿ 5 ಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ ಪ್ರತಿಭಟನೆ, ಮೆರವಣಿಗೆ, ರ್ಯಾಲಿ, ಜಾಥ ಪ್ರಚೋದನಾತ್ಮಕ ಘೋಷಣೆ ಕೂಗದಂತೆ ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಮಡಿಕೇರಿ ಉಪವಿಭಾಗದ ಹಿರಿಯ ಉಪ ವಿಭಾಗಾಧಿಕಾರಿ ಹಾಗೂ ಉಪ ವಿಭಾಗೀಯ ದಂಡಾಧಿಕಾರಿ ವಿನಾಯಕ್ ನರ್ವಡೆ ಆದೇಶಿಸಿದ್ದಾರೆ.
ಮಡಿಕೇರಿ ಜ.7 NEWS DESK : ನಗರದ ಶ್ರೀ ಓಂಕಾರೇಶ್ವರ ದೇವಾಲಯವು ‘ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಗೆ ಸೇರಿದ ಗ್ರೂಪ್ ‘ಎ’ ದೇವಾಲಯವಾಗಿದ್ದು, ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಈ ದೇವಾಲಯಕ್ಕೆ ಒಳಪಡುವ ಶ್ರೀ ಆಂಜನೇಯ ಮತ್ತು ಕೋಟೆ ಗಣಪತಿ ದೇವಾಲಯದ ಕಾರ್ಯಗಳಿಗೆ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸಲು 3 ‘ಡಿ’ ಗ್ರೂಪ್ ಹುದ್ದೆಗಳು ಖಾಲಿ ಇದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗೆ ಸಂಬಂಧಿಸಿದ ವಿವರ: ಅರ್ಜಿ ಸಲ್ಲಿಸುವವರ ವಯೋಮಿತಿ 18 ವರ್ಷದಿಂದ 33 ವರ್ಷ ದೊಳಗಿರಬೇಕು. (ವಯಸ್ಸಿನ ಬಗ್ಗೆ ಶಾಲಾ ದಾಖಲೆ ನೀಡಬೇಕು).ದೇವಾಲಯದ ಹೊರಾಂಗಣದ ನೌಕರರು ‘ಡಿ’ ಗ್ರೂಪ್ ಹುದ್ದೆ-3(ಸ್ವಚ್ಛತಗಾರ, ಕಾವಲುಗಾರರು) ವೇತನ ರೂ.9,600 ಮತ್ತು ಇತರೆ. ದೇವಾಲಯದ ಕರ್ತವ್ಯದ ಅವಧಿ ಬೆಳಗ್ಗೆ 7.30 ರಿಂದ ಮಧ್ಯಾಹ್ನ 1 ಗಂಟೆ, ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆವರೆಗೆ. ದೇವಾಲಯದ ಕೆಲಸ ಕಾರ್ಯಗಳು ಮುಜರಾಯಿ ಇಲಾಖೆ ಸೂಚಿಸಿದ ನಿಯಮಗಳು ಹಾಗೂ ಶಿಸ್ತು ಪಾಲನೆಗೆ ಒಳಪಟ್ಟಿರುತ್ತದೆ. ಸರ್ಕಾರಿ…
ಸಿದ್ದಾಪುರ ಜ.7 NEWS DESK : ಗುಹ್ಯ ಅಗಸ್ತ್ಯೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು. ನೂತನ ಕಟ್ಟಡದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದಾಪುರ ವ್ಯಾಪ್ತಿಯ ಸಹಕಾರ ಸಂಘದ ಸದಸ್ಯರುಗಳಿಗೆ ಆರ್ಥಿಕ ಬಲ ನೀಡುವ ಮೂಲಕ ಜಿಲ್ಲೆಯ ಪ್ರಗತಿ ಪಥದತ್ತ ಸಾಗುವ ಸಹಕಾರ ಸಂಘಗಳಲ್ಲಿ ಒಂದಾಗಿದೆ. ಹಲವಾರು ವರ್ಷಗಳಿಂದಲೂ ಉತ್ತಮ ಸೇವೆ ಸಲ್ಲಿಸುವುದರ ಮೂಲಕ ಮಾದರಿ ಸಹಕಾರ ಸಂಘವಾಗಿ ಮೆಚ್ಚುಗೆಗಳಿಸಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಕೊಡಗಿನಲ್ಲಿ ಸಹಕಾರ ಸಂಸ್ಥೆ ಗಳು ನಾಗರಿಕರ ಸೇವೆಗೆ ಆರ್ಥಿಕ ಸಹಕಾರವನ್ನು ನೀಡುವ ಮೂಲಕ ಆಯಾ ಪ್ರದೇಶದಲ್ಲಿ ಪ್ರಾಮಾಣಿಕ ವಾಗಿ ಸೇವೆಯನ್ನು ಒದಗಿಸುತ್ತಿರು ವುದು ಕಂಡುಬರುತ್ತಿದೆ. ಮುಂದಿನ ದಿನಗಳಲ್ಲಿ ಸಹಕಾರ ಸಂಘಗಳ ಕಟ್ಟಡಗಳು ಗ್ರಾಹಕರ ಸೇವಾ ಕೇಂದ್ರವಾಗಿ ಮುಂದುವರಿಯು ವಂತಾಗಲಿ ಸಹಕಾರ ಸಂಘದ ಬೆಳವಣಿಗೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಗುಹ್ಯ ಅಗಸ್ತ್ಯೇಶ್ವರ…
ಮಡಿಕೇರಿ ಜ.7 NEWS DESK : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ಮಾಹೆಯಲ್ಲಿ ಕೈಗೊಳ್ಳಲಾಗಿದ್ದು, ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ, ಉಪ ವಿಭಾಗಾಧಿಕಾರಿಗಳ ಕಚೇರಿ, ತಹಶೀಲ್ದಾರರ ಕಚೇರಿ ಮತ್ತು ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಮತದಾರರು ಪರಿಶೀಲಿಸಿಕೊಂಡು, ಹೆಸರು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ಖಚಿತ ಪಡಿಸಿಕೊಳ್ಳಲು ಕೋರಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ನಮೂನೆ-6 ರಲ್ಲಿ 1549 ಸ್ವೀಕೃತವಾಗಿದ್ದು, 1460 ಅರ್ಜಿಗಳು ಅಂಗೀಕಾರವಾಗಿದೆ. 89 ಅರ್ಜಿಗಳು ತಿರಸ್ಕøತವಾಗಿವೆ. ನಮೂನೆ-7ರಡಿ 1631 ಅರ್ಜಿಗಳು ಸ್ವೀಕೃತವಾಗಿದ್ದು, 1549 ಅರ್ಜಿಗಳು ಅಂಗೀಕೃತವಾಗಿದೆ. 82 ಅರ್ಜಿಗಳು ತಿರಸ್ಕøತಗೊಂಡಿವೆ. ಹಾಗೆಯೇ ನಮೂನೆ-8 ರಲ್ಲಿ 3123 ಅರ್ಜಿಗಳು ಸ್ವೀಕೃತವಾಗಿದ್ದು, 2,871 ಅರ್ಜಿಗಳು ಅಂಗೀಕೃತವಾಗಿದೆ. 252…






