ಲೇಖಕ: admin

ವಿರಾಜಪೇಟೆ ನ.26 NEWS DESK : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನ.27 ರಂದು ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಕಾವೇರಿ ಕಾರ್ನಿವಾಲ್ ಜಿಲ್ಲಾಮಟ್ಟದ ಫೆಸ್ಟ್ ನಡೆಸಲಾಗುವುದು ಎಂದು ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್.ಎಂ.ನಾಣಯ್ಯ ತಿಳಿಸಿದರು. ಕಾಲೇಜಿನ ಕೌಸ್ತುಬ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳನ್ನು ನಡೆಸಿ ತರಗತಿ, ಪರೀಕ್ಷೆ, ಪಾಠದ ವಿಚಾರದಲ್ಲಿ ಹುದುಗಿ ಹೋಗಿರುವ ವಿದ್ಯಾರ್ಥಿಗಳಿಗೆ ನವೊಲ್ಲಾಸ ನೀಡುವುದರೊಂದಿಗೆ ಜಿಲ್ಲಾದ್ಯಂತ ಪ್ರೌಢಶಾಲಾ ವಿಭಾಗದಲ್ಲಿರುವ ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸಲು ವೇದಿಕೆಯನ್ನು ಸೃಷ್ಟಿಸುವ ಉದ್ದೇಶವನ್ನು ಹೊಂದಿದ್ದು. ಫ್ರೌಡ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲಿ ಈ ರೀತಿಯ ಫೆಸ್ಟ್ ಗಳು ನಡೆಯುವುದು ತೀರ ಅಪರೂಪಗಿದೆ. ಜಿಲ್ಲಾ ಮಟ್ಟದಲ್ಲಿರುವ ಹೆಚ್ಚಿನ ಪ್ರತಿಭೆಗಳನ್ನು ಒಂದಡೆ ಸೇರಿಸುವ ಹಾಗೂ ವಿದ್ಯಾರ್ಥಿಗಳು ಒತ್ತಡದಿಂದ ಹೊರಬಂದು ಸಂಭ್ರಮದಿಂದ ಪಾಲ್ಗೊಳ್ಳುವಂತೆ ಮಾಡಲು ವಿರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜು ಕಳೆದ 5 ವರ್ಷಗಳಿಂದ ಸತತವಾಗಿ ‘ಕಾವೇರಿ ಕಾರ್ನಿವಾಲ್ ಫೆಸ್ಟ್ ನಡೆಸಿಕೊಂಡು ಬರುತ್ತಿದೆ. ಅದರಂತೆ ಈ ವರ್ಷವೂ…

Read More

ಚೆಟ್ಟಳ್ಳಿ ನ.26 NEWS DESK : ಚೆಟ್ಟಳ್ಳಿ ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ಮಹಿಳಾ ಮೀಸಲಾತಿ ಸ್ಥಾನಕ್ಕೆ ಬಿಜೆಪಿಯ ಬೆಂಬಲಿತ ಅಭ್ಯರ್ಥಿ ಅಯ್ಯಂಡ್ರ ಭಾಗೀರಥಿ ಹೆಚ್ಚಿನ ಮತ ಪಡೆಯುವ ಮೂಲಕ ಗೆಲುವನ್ನು ಸಾಧಿಸಿದ್ದಾರೆ. ಚೆಟ್ಟಳ್ಳಿ ಗ್ರಾ.ಪಂ ಚೇರಳ ಶ್ರೀಮಂಗಲ ವಾರ್ಡಿನ ಸಾಮಾನ್ಯ ಮಹಿಳಾ ಮೀಸಲಾತಿ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಭಾಗೀರಥಿ ಅಯ್ಯಂಡ್ರ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸುಲೋಚನ ಸ್ಪರ್ಧಿಸಿದರು.  ಚುನಾವಣೆಯಲ್ಲಿ 440 ಮತಚಲಾವಣೆ ಗೊಳ್ಳುವ ಮೂಲಕ ಶೇ.43 ಮತದಾನವಾಗಿತ್ತು.  ಕುಶಾಲನಗರದ ತಾಲೂಕು ಕಚೇರಿಯಲ್ಲಿ ನಡೆದ ಮತ ಎಣಿಕಾ ಕಾರ್ಯದಲ್ಲಿ ಸುಲೋಚನಾ 179 ಮತ ಪಡೆದರೆ, ಭಾಗೀರಥಿ ಅಯ್ಯಂಡ್ರ 246 ಮತಪಡೆಯುವ ಮೂಲಕ 67  ಮತಗಳ ಅಂತರದಿಂದ  ಗೆಲುವನ್ನು ಸಾಧಿಸಿದ್ದಾರೆ. ಈ ಸಂದರ್ಭ  ಬಿಜೆಪಿ ತಾಲ್ಲೂಕು ವಕ್ತಾರ ಹಾಗೂ ವಕೀಲ ಬಲ್ಲಾರಂಡ ಕಂಠಿಕಾರ್ಯಪ್ಪ, ಶಕ್ತಿ ಕೇಂದ್ರದ ಅಧ್ಯಕ್ಷ ಎನ್.ಎಸ್.ರವಿ, ಬಿಜೆಪಿಯ ಚೆಟ್ಟಳ್ಳಿ ವಾರ್ಡ್ ಅಧ್ಯಕ್ಷ ಪುತ್ತರಿರ ಶಿವು ನಂಜಪ್ಪ, ಅಯ್ಯಂಡ್ರ ಲೋಹಿತಾಶ್ವ, ಶುಭಾಂಗಿನಿ, ಅಶಾ ಬಾಬು ಹಾಗು ಕಾರ್ಯಕರ್ತರು ಹಾಜರಿದ್ದರು.

Read More

ಮಡಿಕೇರಿ ನ.26 NEWS DESK : ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್(ಡಿಸಿಎಂ ತರಬೇತಿ) ಸಂಸ್ಥೆಯಲ್ಲಿ 6 ತಿಂಗಳ (ಡಿಸಿಎಂ) ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಯು ಇದೇ ಜ.1 ರಿಂದ ಪ್ರಾರಂಭವಾಗಲಿದೆ. ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕುಗಳು ಡಿಸಿಎಂ ತರಬೇತಿ ಸಂಸ್ಥೆಯ ವ್ಯಾಪ್ತಿಯಲ್ಲಿ ಬರಲಿದ್ದು, ಅರ್ಹರಿಂದ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಮಾಸಿಕ ರೂ.600 ಹಾಗೂ ಇತರೆ ಅಭ್ಯರ್ಥಿಗಳಿಗೆ ರೂ.500 ಶಿಷ್ಯವೇತನ ನೀಡಲಾಗುತ್ತದೆ. ಉಚಿತ ವಸತಿ ಗೃಹ ಸೌಲಭ್ಯವಿದೆ. ಸಹಕಾರ ಸಂಘ/ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವವರಿಗೆ ಆದ್ಯತೆ ನೀಡಲಾಗುವುದು ಹಾಗೂ ಖಾಸಗಿ ಅಭ್ಯರ್ಥಿಗಳಿಗೂ ಅವಕಾಶವಿದೆ. ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲಕರ. ರಿಯಾಯಿತಿ ದರದಲ್ಲಿ ಡಿಸಿಎಂ ಪಠ್ಯ ಪುಸ್ತಕಗಳನ್ನು ನೀಡಲಾಗುವುದು. ದೂರಶಿಕ್ಷಣ (ಡಿಸಿಎಂ)(ಸಹಕಾರ ಸಂಘ/ಸಂಸ್ಥೆ/ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಮಾತ್ರ) ಇತ್ತೀಚಿನ ಕಾಯಿದೆ ತಿದ್ದುಪಡಿ ಅನ್ವಯ ಕೆ.ಸಿ.ಎಸ್ ನಿಯಮ 17(ಎ)(ಬಿ) ಪ್ರಕಾರ ಪದೋನ್ನತಿ ಹೊಂದಬೇಕಾದರೆ ಕಡ್ಡಾಯವಾಗಿ ಡಿಸಿಎಂ ಕೋರ್ಸ್ ಪಡೆಯಬೇಕಾಗುತ್ತದೆ. ಪ್ರತಿ ವರ್ಷ ಜನವರಿ-ಜೂನ್…

Read More

ಮಡಿಕೇರಿ ನ.26 NEWS DESK : ನಗರದ ತ್ಯಾಗರಾಜ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಕಾರ್ಯಕ್ರಮ ನಡೆಯಿತು. ವಿವಿಧ ರೀತಿಯ ಛದ್ಮವೇಷ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಕ್ಕಳು ಉತ್ತಮ ರೀತಿಯಲ್ಲಿ ಕಾರ್ಯಕರ್ತೆ ಅಂಬಿಕಾ, ಸಹಾಯಕಿ ಲೀಲಾವತಿಯವರ ಸಹಕಾರದಿಂದ ತಮ್ಮನ್ನು ತೊಡಗಿಸಿಕೊಂಡರು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಮೇಪಾಡಂಡ ಸವಿತಾ ಕೀರ್ತನ್ ಅವರ ಕೋರಿಕೆ ಮೇರೆಗೆ ಸಮಾಜ ಸೇವಕರು ಯೋಗಾ ಶಿಕ್ಷಕರಾದ ಗೀತ ಗಿರೀಶ್ ಅಂಗನವಾಡಿ ಮಕ್ಕಳಿಗೆ 20 ತಟ್ಟೆ 20 ಲೋಟಗಳನ್ನು ಉಡುಗೊರೆಯಾಗಿ ನೀಡಿದರು. ನಂತರ ಮಾತನಾಡಿದ ಗೀತಾ ಗಿರೀಶ್ ಪೋಷಕರು, ಶಿಕ್ಷಕರು ಹಾಗೂ ಇಲಾಖಾಧಿಕಾರಿಗಳ ಒಟ್ಟು ಸೇರುವಿಕೆಯು ಅರ್ಥಪೂರ್ಣ ಕಾರ್ಯಕ್ರಮವಾಗಿದೆ ಎಂದರು. ಮಕ್ಕಳ ಆರೋಗ್ಯವೇ ಇಂದಿನ ಶ್ರೀಮಂತಿಕೆ, ಆರೋಗ್ಯಯುತ ಆಹಾರ ನೀಡಿ, ಜಂಕ್ ಫುಡ್ ಗಳ ದಾಸರಾಗಬೇಡಿ, ಕಡಿಮೆ ಖರ್ಚಿನಲ್ಲಿ ಉತ್ತಮ ತರಕಾರಿಗಳು ಹಣ್ಣುಗಳ ಸೇವನೆ ಆರೋಗ್ಯಕ್ಕೆ ಪೂರಕ ಎಂಬ ಕಿವಿಮಾತು ಹೇಳಿದರು. ಪರಿಸರರೊಂದಿಗೆ ಮಕ್ಕಳು ಬೆಳೆಯಬೇಕು. ಮಕ್ಕಳ ಪ್ರಶ್ನೆಗೆ ಪೋಷಕರು, ಶಿಕ್ಷಕರು ಸರಿಯಾದ ಉತ್ತರ ನೀಡಬೇಕು.…

Read More

ಮಡಿಕೇರಿ ನ.26 NEWS DESK : ವಿಶ್ವದ ಬೃಹತ್ ಲಿಖಿತ ಸಂವಿಧಾನವನ್ನು ಹೊಂದಿರುವ ಭಾರತವು ಪ್ರಗತಿ ಪಥದತ್ತ ಸಾಗುವಲ್ಲಿ ಅಂಬೇಡ್ಕರ್ ಅವರ ಕೊಡುಗೆ ಹೆಚ್ಚಿನದ್ದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ `ಸಂವಿಧಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವೈವಿಧ್ಯತೆಯಿಂದ ಕೂಡಿರುವ ರಾಷ್ಟ್ರಕ್ಕೆ ಹಲವು ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ರಾಷ್ಟ್ರಕ್ಕೆ ಉತ್ತಮ ಸಂವಿಧಾನ ನೀಡುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಶ್ರಮಿಸಿದ್ದಾರೆ. ಆ ನಿಟ್ಟಿನಲ್ಲಿ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಆರ್. ಐಶ್ವರ್ಯ ಹೇಳಿದರು. 1949 ನವೆಂಬರ್, 26 ರಂದು ಸಂವಿಧಾನವನ್ನು ಸಮರ್ಪಿಸಿಕೊಂಡ ದಿನವಾಗಿದ್ದು, ಈ ದಿನವನ್ನು ಸಂವಿಧಾನ ದಿನಾಚರಣೆ ಎಂದು ಸಮರ್ಪಣಾ ಭಾವದಿಂದ ಆಚರಿಸಲಾಗುತ್ತಿದೆ ಎಂದರು. ಭಾರತ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳು, ಕರ್ತವ್ಯಗಳು ಹಾಗೂ ರಾಜ್ಯ ನಿರ್ದೇಶಕ ತತ್ವಗಳು ರಾಷ್ಟ್ರದ ಅಭಿವೃದ್ಧಿಗೆ ಪ್ರಮುಖ ಪಾತ್ರವಾಗಿವೆ. ಸಂವಿಧಾನದಲ್ಲಿ ಮಹಿಳೆಯರು…

Read More

ಪುತ್ತೂರು ನ.26 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಪಂದ್ಯಾಟವು ನ.28 ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9.30ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಪುತ್ತೂರು ತಾಲೂಕು ವಾಲಿಬಾಲ್ ಅಸೋಸಿಯೇಶನ್‍ನ ಅಧ್ಯಕ್ಷ ಸತೀಶ ರೈ ಕಟ್ಟಾವು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಸಂತೋಷ್ ಕುತ್ತಮೊಟ್ಟೆ ಗೌರವ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ. ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಎರಡು ವಾಲಿಬಾಲ್ ಅಂಕಣದಲ್ಲಿ ಈ ಸ್ಪರ್ಧೆಗಳು ನಡೆಯಲಿದ್ದು, ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳ 18 ತಂಡಗಳು ಇದರಲ್ಲಿ ಭಾಗವಹಿಸುತ್ತವೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

Read More

ಮಡಿಕೇರಿ ನ.26 NEWS DESK : ಹೆಬ್ಬೆಟ್ಟಗೇರಿ ಗ್ರಾಮದ ಇದ್ರಪ್ರಸ್ಥ ನಗರದ ಸ್ವಾಮಿ ಕೊರಗಜ್ಜ ದೈವಸ್ಥಾನದ 7ನೇ ವರ್ಷದ ಕೋಲೋತ್ಸವವು ಡಿ.1 ರಂದು ಶ್ರದ್ಧಾಭಕ್ತಿಯಿಂದ ನಡೆಯಲಿದೆ ಎಂದು ಸ್ವಾಮಿ ಕೊರಗಜ್ಜ ದೈವಸ್ಥಾನ ಸಮಿತಿ ಆಡಳಿತ ಮಂಡಳಿ ಅಧ್ಯಕ್ಷ ಅಜಿತ್ ಚಿಣ್ಣಪ್ಪ ಸಬ್ಬುಡ ತಿಳಿಸಿದ್ದಾರೆ. ನಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 8 ಗಂಟೆಗೆ ಗಣಪತಿ ಹೋಮ, 10 ಗಂಟೆಗೆ ಶ್ರೀ ಕೊರಗಜ್ಜ ದೈವಕ್ಕೆ ಮಹಾ ಮಂಗಳಾರತಿ, 11 ಗಂಟೆಗೆ ಸ್ವಾಮಿ ಕೊರಗಜ್ಜ ದೈವದ ಕೋಲೋತ್ಸವ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಮಧ್ಯಾಹ್ನ 1 ಗಂಟೆಗೆ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಹಾಗೂ ಕರಿಗಂಧ ಪ್ರಸಾದ ವಿತರಣೆ ನಡೆಯಲಿದೆ ಎಂದರು. ಡಿ.8 ರಂದು ಬೆಳಿಗ್ಗೆ 8 ಗಂಟೆಗೆ ಸ್ವಾಮಿ ಕೊರಗಜ್ಜ ದೈವಕ್ಕೆ ಕೋಳಿ ಬೇಟೆ ನಡೆಯಲಿದ್ದು, ಮಧ್ಯಾಹ್ನ 1 ಗಂಟೆಗೆ ಅಗೇಲು ಪ್ರಸಾದ ನೆರವೇರಲಿದೆ ಎಂದು ಅಜಿತ್ ತಿಳಿಸಿದರು.ಹೆಚ್ಚಿನ ವಿವರಗಳಿಗೆ 9480169956, 9449272350, 8762730354 ಸಂಪರ್ಕಿಸಬಹುದಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ದೈವಸ್ಥಾನ…

Read More

ವಿರಾಜಪೇಟೆ ನ.26 NEWS DESK : ಪ್ರಧಾನ ಮಂತ್ರಿ ಉಚ್ಛತ ಶಿಕ್ಷಣ ಅಭಿಯಾನದಡಿಯಲ್ಲಿ ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ   ಎಂಪ್ಲಯೇಬಿಲೀಟಿ ಸ್ಕೀಲ್ಸ್ (Employability Skills) ಎಂಬ ವಿಷಯದ ಕುರಿತು ಕಾಲೇಜು ಪ್ರಾಧ್ಯಾಪಕರು ಮತ್ತು ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ಕಾರ್ಯಾಗಾರ ನಡೆಯಿತು. ಕರ್ನಾಟಕ ಸರಕಾರ, ಕಾಲೇಜು ಶಿಕ್ಷಣ ಇಲಾಖೆ, ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು  ಸಹಯೋಗದಲ್ಲಿ ನಡೆದ ಕಾರ್ಯಗಾರವನ್ನು ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾಕುಶಾಲಪ್ಪ ಉದ್ಘಾಟಿಸಿ ಮಾತನಾಡಿ, ಉದ್ಯೋಗ ಪಡೆಯಲು ಅಂಕದ ಜೊತೆಗೆ ಮೌಲ್ಯಾಧಾರಿತ ಕೌಶಲ್ಯ ಕೂಡ ಅಗತ್ಯ. ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲ್ಯವನ್ನು ವಿಕಸನಗೊಳಿಸಲು ಈ ರೀತಿಯ ಕಾರ್ಯಾಗಾರ ಮಹತ್ವವಾಗಿದೆ.ಈ ಮೂಲಕ ಕಲಿಯುವ ಮನೋಭಾವನೆಯನ್ನು ವಿದ್ಯಾರ್ಥಿಗಳು ಬೆಳಸಿಕೊಳ್ಳಬೇಕು ಎಂದು ಹೇಳಿದರು. ಕೊಡಗು ಜಿಲ್ಲಾ ಉದ್ಯೋಗಾಧಿಕಾರಿ ಮತ್ತು ಕೌಶಲ್ಯ ಅಧಿಕಾರಿ ರೇಖಾಗಣಪತಿ ಮಾತನಾಡಿ, ಕೇಂದ್ರ ಸರಕಾರದಂತೆ ರಾಜ್ಯ ಸರಕಾರ ಕೂಡ ಕೌಶಲ್ಯ ಅಭಿವೃದ್ಧಿ ಇಲಾಖೆಯನ್ನು ಆರಂಭಿಸಿ ಅನೇಕ ವೃತ್ತಿಪರ ಶಿಕ್ಷಣವನ್ನು ನೀಡುತ್ತಿದೆ. ವಿದ್ಯಾರ್ಥಿಗಳು ಕೌಶಲ್ಯ ವೃತ್ತಿಪರ ತರಬೇತಿಗೆ…

Read More

ಮಡಿಕೇರಿ NEWS DESK ನ.26 : ಗ್ರಾ.ಪಂ ಉಪ ಚುನಾವಣೆಯಲ್ಲಿ ದಕ್ಷಿಣ ಕೊಡಗಿನ ಮಂಚಳ್ಳಿ ಮತ್ತು ಟಿ.ಶೆಟ್ಟಿಗೇರಿ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತರು ಜಯ ಗಳಿಸಿದ್ದಾರೆ. ಕುಟ್ಟ ಗ್ರಾ.ಪಂ ವ್ಯಾಪ್ತಿಯ ಮಂಚಳ್ಳಿ ಕ್ಷೇತ್ರದಲ್ಲಿ ರಾಜ ಅವರು 63 ಮತಗಳ ಅಂತರದಿAದ ಗೆಲುವು ಸಾಧಿಸಿದರು. ಶೆಟ್ಟಿಗೇರಿ ಗ್ರಾ.ಪಂ ವ್ಯಾಪ್ತಿಯ ಟಿ.ಶೆಟ್ಟಿಗೇರಿ ಕ್ಷೇತ್ರದಲ್ಲಿ ಗೌರಿ 54 ಮತಗಳ ಅಂತರದಿAದ ಜಯಶಾಲಿಯಾದರು. ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಸಿಹಿ ಹಂಚಿ ಸಂಭ್ರಮಿಸಿದರು.

Read More

ಮಡಿಕೇರಿ ನ.26 NEWS DESK : ವಿರಾಜಪೇಟೆ ತಾಲ್ಲೂಕಿನ ಚೆಂಬೆಳ್ಳೂರು ಗ್ರಾಮ ಪಂಚಾಯತಿಯ ಗ್ರಾಮ ಸಭೆಯು ನ.27 ರಂದು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಚಂದ್ರಕಲಾ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ದೇವಣಗೇರಿ ವಿ‌ಎಸ್ಎಸ್ಎನ್ ಸಭಾಂಗಣದಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಯಲಿರುವ ಸಭೆಯ  ನೋಡಲ್ ಅಧಿಕಾರಿಯಾಗಿ ತಾಲ್ಲೂಕು ಯೋಜನಾಧಿಕಾರಿ ಮೋಹನ್  ಪಾಲ್ಗೊಳ್ಳಲಿದ್ದಾರೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More